Breaking News

Yearly Archives: 2022

ಹುಬ್ಬಳ್ಳಿ: ಇದು ಎರಡು ನಾಯಿಗಳ ಕಥೆ; ರಕ್ತದಾನ ಮಾಡಿ ಮಾಯಾಳ ಜೀವ ಉಳಿಸಿದ ಚಾರ್ಲಿ!

ಹುಬ್ಬಳ್ಳಿ: ಸಮಯೋಚಿತ ಸಹಾಯವು ಜೀವಗಳನ್ನು ಉಳಿಸುತ್ತದೆ. ಅಂತಹ ಒಂದು ಘಟನೆ ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ವರದಿಯಾಗಿದ್ದು, ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಸೆಕ್ಯುರಿಟಿ ಡಾಗ್ ಆಗಿ ಕಾರ್ಯನಿರ್ವಹಿಸುತ್ತಿರುವ ಬೆಲ್ಜಿಯಂ ಶೆಫರ್ಡ್ ಅಸ್ವಸ್ಥ ನಾಯಿ ಮಾಯಾಳ ಜೀವ ಉಳಿಸಲು ಜರ್ಮನ್ ಶೆಫರ್ಡ್ ಚಾರ್ಲಿ ರಕ್ತದಾನ ಮಾಡಿದ್ದಾನೆ. ಈಗ ಮಾಯಾ ಚೇತರಿಸಿಕೊಂಡಿದ್ದು, ವಾರದೊಳಗೆ ಮತ್ತೆ ಏರ್‌ಪೋರ್ಟ್ ಡ್ಯೂಟಿಗೆ ಹಾಜರಾಗಲಿದ್ದಾಳೆ. ಇದು ಹುಬ್ಬಳ್ಳಿ ಮತ್ತು ಧಾರವಾಡ ಅವಳಿ ನಗರಗಳ ಎರಡು ನಾಯಿಗಳ ಕಥೆ. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ …

Read More »

ಕಾರು-ಬೈಕ್ ಭೀಕರ ಅಪಘಾತ: ಸವಾರರಿಬ್ಬರೂ ಸ್ಥಳದಲ್ಲೇ ಸಾವು, ಚಾಲಕ ಕಾರು ಬಿಟ್ಟು ಪರಾರಿ..

ವಿಜಯಪುರ: ಕಾರು ಬೈಕ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ವಿಜಯಪುರ ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ 52ರಲ್ಲಿ ಈ ಅಪಘಾತ ಸಂಭವಿಸಿದೆ. ವಿಜಯಪುರ ಜಿಲ್ಲೆ ದೇವರಹಿಪ್ಪರಗಿ ತಾಲೂಕಿನ ಪಡಗಾನೂರ ಕ್ರಾಸ್ ಬಳಿ ಈ ಅಪಘಾತವಾಗಿದೆ. ಕಾರು ಮತ್ತೆ ಬೈಕ್​ ಮಧ್ಯೆ ಡಿಕ್ಕಿ ಸಂಭವಿಸಿದ್ದು, ಅಪಘಾತದಲ್ಲಿ ಬೈಕಸ್ ಸವಾರರಿಬ್ಬರೂ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಪಡಗಾನೂರ ತಾಂಡಾದ ಬಾಬು ಚೌವ್ಹಾಣ, ಅಶೋಕ ನಾಯಕ್ ಸಾವಿಗೀಡಾದವರು. ಅಪಘಾತದ ತೀವ್ರತೆಗೆ ಇಬ್ಬರು ಮೃತಪಟ್ಟಿದ್ದು ತಿಳಿಯುತ್ತಿದ್ದಂತೆ ಚಾಲಕ …

Read More »

ವೈಯಕ್ತಿಕ ಸ್ವಾರ್ಥಕ್ಕಾಗಿ ಮೃತ್ಯುಂಜಯ ಸ್ವಾಮೀಜಿ ಹೋರಾಟ: ಪಂಚಮಸಾಲಿ ಮುಖಂಡರ ಆರೋಪ

ಕೊಪ್ಪಳ: ‘ಪಂಚಮಸಾಲಿ ಸಮುದಾಯಕ್ಕೆ ‘2ಎ’ ಮೀಸಲಾತಿ ಕಲ್ಪಿಸಬೇಕು ಎಂದು ಒತ್ತಾಯಿಸಿ ಕೂಡಲಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಶಿಗ್ಗಾವಿಯಲ್ಲಿ ತಮ್ಮ ಸ್ವಾರ್ಥ ಸಾಧನೆಗೆ ಹೋರಾಟ ಮಾಡುತ್ತಿದ್ದಾರೆ’ ಎಂದು ಕೊಪ್ಪಳ ಜಿಲ್ಲಾ ಲಿಂಗಾಯತ ಪಂಚಮಸಾಲಿ (ಪಂಚಸೈನ್ಯ) ಸಮಾಜದ ಸಂಘಟನೆ ಮುಖಂಡರು ಆರೋಪಿಸಿದ್ದಾರೆ.   ಮಂಗಳವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಸಂಗಮೇಶ ಬಾದವಾಡಗಿ ‘ಮುಖ್ಯಮಂತ್ರಿ ಮನೆ ಮುಂದೆ ಏಕಾಏಕಿ ಧರಣಿ ಸರಿಯಲ್ಲ. ಇದರಿಂದ ಏನೂ ಪ್ರಯೋಜನವಿಲ್ಲ. ರಾಜಕೀಯ ಉದ್ದೇಶವಿಟ್ಟುಕೊಂಡು ಹೋರಾಟ …

Read More »

ಯಡಿಯೂರಪ್ಪಗೆ ಕಂಡಲ್ಲಿ ಕಪ್ಪುಬಾವುಟ ತೋರಿಸಿ: ಕೂಡಲಸಂಗಮಶ್ರೀ ಸೂಚನೆ

ಶಿಗ್ಗಾವಿ (ಹಾವೇರಿ ಜಿಲ್ಲೆ): ‘ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವ ಮನಸ್ಸಿದೆ. ಆದರೆ ಮಾಜಿ ಮುಖ್ಯಮಂತ್ರಿ, ಶಾಸಕ ಬಿ.ಎಸ್.ಯಡಿಯೂರಪ್ಪ ಮೀಸಲಾತಿ ನೀಡದಂತೆ ಒತ್ತಡ ತರುತ್ತಿದ್ದಾರೆ’ ಎಂದು ಆರೋಪಿಸಿದ ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ, ‘ರಾಜ್ಯದ ಪಂಚಮಸಾಲಿ ಸಮಾಜ ಯಡಿಯೂರಪ್ಪನವರಿಗೆ ಕಪ್ಪು ಬಾವುಟ ತೋರಿಸಬೇಕು’ ಎಂದು ಸೂಚನೆ ನೀಡಿದರು.   2ಎ ಮೀಸಲಾತಿ ನೀಡುವಂತೆ ಆಗ್ರಹಿಸಿ ಮಂಗಳವಾರ ಶಿಗ್ಗಾವಿ ಪಟ್ಟಣದಲ್ಲಿ ಪಾದಯಾತ್ರೆ ನಡೆಸಿ, ಮುಖ್ಯಮಂತ್ರಿ …

Read More »

ಸರ್ಕಾರದ ಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಮೆಚ್ಚುಗೆ

ಬೆಂಗಳೂರು: ಪಿಎಸ್‌ಐ ನೇಮಕಾತಿ ಹಗರಣದ ಬಗ್ಗೆ ವಿಧಾನಸಭೆಯಲ್ಲಿ ಗಂಭೀರ ಚರ್ಚೆ ನಡೆದಿದ್ದು, ಸರ್ಕಾರಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಶಹಬ್ಬಾಸ್ ಗಿರಿ ನೀಡಿದ್ದಾರೆ. ಪಿಎಸ್‌ಐ ತನಿಖೆ ಗಂಭೀರತೆ ಪಡೆದುಕೊಂಡಿದೆ. ಈ ಹಿಂದೆ ಇಂತಹ ಪ್ರಕರಣದಲ್ಲಿ ಜಾಮೀನು ಪಡೆದು ಹೊರಗೆ ಬರುತ್ತಿದ್ದರು. ಈ ಕೇಸ್ ನಲ್ಲಿ ಆ ರೀತಿ ಆಗಿಲ್ಲ. ಸರ್ಕಾರ ಬಿಗುವಾಗಿ ತನಿಖೆ ಮಾಡಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಪಿಎಸ್‌ಐ ನೇಮಕಾತಿ ಹಗರಣದ ತನಿಖೆ ಮತ್ತೆ ದಾರಿ ತಪ್ಪುವುದು ಬೇಡ. ಈ …

Read More »

ದೇವೇಗೌಡರನ್ನು ಕಂಡೊಡನೆ ಕಾಲುಮುಟ್ಟಿ ನಮಸ್ಕರಿಸಲು ಮುಂದಾದ ಯಡಿಯೂರಪ್ಪ, ಕೂಡಲೇ ಕೈಹಿಡಿದುಕೊಂಡ ಗೌಡರು

ಬೆಂಗಳೂರು: ಜೆಡಿಎಸ್ ವರಿಷ್ಠರಾದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರನ್ನು ಭೇಟಿಯಾದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆರೋಗ್ಯ ವಿಚಾರಿಸಿದ್ದಾರೆ. ಬೆಂಗಳೂರಿನ ಪದ್ಮನಾಭನಗರದ ದೇವೇಗೌಡರ ನಿವಾಸದಲ್ಲಿ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ ದೇವೇಗೌಡರಿಗೆ ಅನಾರೋಗ್ಯ ಹಿನ್ನೆಲೆಯಲ್ಲಿ ನಿವಾಸಕ್ಕೆ ತೆರಳಿದ ಯಡಿಯೂರಪ್ಪ ಅವರು ದೇವೇಗೌಡರ ಕಾಲುಮಟ್ಟಿ ನಮಸ್ಕರಿಸಲು ಮುಂದಾಗಿದ್ದು, ಈ ವೇಳೆ ದೇವೇಗೌಡರು ತಕ್ಷಣ ಯಡಿಯೂರಪ್ಪನವರ ಕೈ ಹಿಡಿದುಕೊಂಡಿದ್ದಾರೆ.   ದೇವೇಗೌಡರಿಗೆ ಮಂಡಿ ನೋವು ಇದೆ. ನೆನಪಿನ ಶಕ್ತಿ ಚೆನ್ನಾಗಿದೆ. ಒಂದು ತಿಂಗಳ ಹಿಂದೆಯೇ ಅವರನ್ನು …

Read More »

ಬೆಂಗಳೂರು: ಕಾರಿಗೆ ಬೈಕ್ ವಿಮೆ- ಅಪಘಾತವಾದಾಗ ಸತ್ಯಾಂಶ ಬಯಲು!

ಬೆಂಗಳೂರು, ಸೆಪ್ಟೆಂಬರ್ 20: ವಾಹನಗಳಿಗೆ ಇನ್ಸುರೆನ್ಸ್ (ವಿಮೆ)ಯನ್ನು ಮಾಡಿಸುವುದು ಬಹಳ ಮುಖ್ಯವಾಗುತ್ತದೆ. ವಾಹನಗಳಿಗೆ ವಿಮೆಯನ್ನು ಮಾಡಿಸುವುದರಿಂದ ಅಪಘಾತವಾದ ಸಮಯದಲ್ಲಿ ಬಹಳಷ್ಟು ಅನುಕೂಲಗಳಿವೆ. ಆದರೆ ಖಾಸಗಿ ಕಂಪನಿ ವಿಮೆಯನ್ನು ಮಾಡಿಸುವ ಗ್ರಾಹಕರು ಎಚ್ಚರವಾಗಿರಬೇಕು. ನಾಲ್ಕು ಚಕ್ರದ ವಾಹನದ ವಿಮೆ ಎಂದು ದ್ವಿಚಕ್ರ ವಾಹನ ವಿಮೆ ನೀಡಿ ವಂಚಿಸುತ್ತಿದ್ದವನನ್ನು ಬೆಂಗಳೂರು ಸೈಬರ್ ಪೊಲೀಸರು ಬಂಧಿಸಿದ್ದಾರೆ. ವಾಹನಗಳಿಗೆ ಇನ್ಸುರೆನ್ಸ್ ಮಾಡಿಸುವುದು ಪೊಲೀಸರ ದಂಡ ಪ್ರಯೋಗಕ್ಕೆ ಹೆದರಿಯಲ್ಲ. ವಿಮೆ ಮಾಡಿಸುವುದು ಜೀವ ಜೀವನಕ್ಕಾಗಿ ಎಂಬುದನ್ನು ಮನಗಾಣಬೇಕಿದೆ. …

Read More »

ಡಿಸೆಂಬರ್ ಅಧಿವೇಶನದ ವೇಳೆ ಮಲ್ಟಿ ಸೂಪರ್ ಸ್ಪೇಷಾಲಟಿ ಆಸ್ಪತ್ರೆ ಉದ್ಘಾಟನೆ: ಶಾಸಕ ಅನಿಲ ಬೆನಕೆ

ಬೆಳಗಾವಿ: ಡಿಸೆಂಬರ್ ಚಳಿಗಾಲ ಅಧಿವೇಶನದ ವೇಳೆಯಲ್ಲಿ ಮಲ್ಟಿ ಸೂಪರ್ ಸ್ಪೇಷಾಲಟಿ ಆಸ್ಪತ್ರೆಯ ಎರಡು ಮಹಡಿಗಳನ್ನು ಉದ್ಘಾಟನಾ ಮಾಡಲಿದ್ದೇವೆ ಎಂದು ಶಾಸಕ ಅನಿಲ ಬೆನಕೆ ಅವರು ತಿಳಿಸಿದರು. ಶನಿವಾರ ಭಿಮ್ಸ್ ನಿರ್ದೇಶಕ ಡಾ. ಅಶೋಕ ಕುಮಾರ ಶೆಟ್ಟಿ ಅವರ ಜೊತೆ ಸಭೆ ನಡೆಸಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಡಿಸೆಂಬರ್ ನಲ್ಲಿ ಚಳಿಗಾಲ ಅಧಿವೇಶನ ಬೆಳಗಾವಿಯಲ್ಲಿ ನಡೆಯಲಿದ್ದು, ಆ ವೇಳೆ ಬೆಳಗಾವಿ ನಗರದಲ್ಲಿ ಪ್ರಗತಿ ಹಂತದಲ್ಲಿ ಇರುವ ಮಲ್ಟಿ ಸೂಪರ ಸ್ಪೆಷಾಲಟಿ …

Read More »

ಮೀಸಲಾತಿಗೆ ಯಡಿಯೂರಪ್ಪ ಅಡ್ಡಿ.. ಸಿಎಂ ಬೊಮ್ಮಾಯಿ ಮನೆ ಮುಂದೆ ಸತ್ಯಾಗ್ರಹಕ್ಕೆ ಕುಳಿತ ಬಸವಜಯ ಮೃತ್ಯುಂಜಯ ಸ್ವಾಮೀಜಿ

ಹಾವೇರಿ: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗೆ ಒತ್ತಾಯಿಸಿ ಆಯೋಜಿಸಿರುವ ಸತ್ಯಾಗ್ರಹಕ್ಕೆ ಬಸವಜಯ ಮೃತ್ಯುಂಜಯ ಸ್ವಾಮೀಜಿ ಚಾಲನೆ ನೀಡಿದರು. ಶಿಗ್ಗಾಂವಿ ಪಟ್ಟಣದ ಸವಣೂರು ರಸ್ತೆಯಲ್ಲಿರುವ ಸಿಎಂ ಬಸವರಾಜ ಬೊಮ್ಮಾಯಿ ನಿವಾಸದ ಎದುರು ಆಯೋಜಿಸಿರುವ ಸತ್ಯಾಗ್ರಹಕ್ಕೆ ಶಾಲಾ ವಿದ್ಯಾರ್ಥಿಗಳಿಗೆ ಮಾಲಾರ್ಪಣೆ ಮಾಡುವ ಮೂಲಕ ಸ್ವಾಮೀಜಿ ಚಾಲನೆ ನೀಡಿದರು. ಸಿಎಂ ಬಸವರಾಜ ಬೊಮ್ಮಾಯಿ ಅವರು ನಾಲ್ಕು ಬಾರಿ ಮಾತು ಕೊಟ್ಟು ತಪ್ಪಿದ್ದಾರೆ. ನಾಲ್ಕನೇ ಬಾರಿ ಮಾತು ತಪ್ಪಿದರೆ ಸಿಎಂ ಮನೆ ಮುಂದೆ ಸತ್ಯಾಗ್ರಹ ಮಾಡ್ತೇವೆ ಅಂತಾ …

Read More »

ಪಂಚಮಸಾಲಿ ಮೀಸಲಾತಿ ಬಗ್ಗೆ ಸದನದಲ್ಲಿ ಮತ್ತೆ ಪ್ರಸ್ತಾಪ ಮಾಡಿದ ಯತ್ನಾಳ್​​

ಬೆಂಗಳೂರು: ಪಂಚಮಸಾಲಿ ಸಮುದಾಯವನ್ನು 2ಎಗೆ ಸೇರ್ಪಡೆ ಮಾಡುವ ಕುರಿತು ಹಿಂದುಳಿದ ವರ್ಗಗಳ ಆಯೋಗ ವರದಿ ನೀಡಿದ ನಂತರ ಕಾನೂನು ಬದ್ದವಾಗಿ ಯಾರಿಗೂ ಅನ್ಯಾಯವಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಧಾನಸಭೆಯಲ್ಲಿ ತಿಳಿಸಿದ್ದಾರೆ. ಪಂಚಮಸಾಲಿ ಸಮುದಾಯ, ವಾಲ್ಮೀಕಿ ಸಮುದಾಯ, ಪರಿಶಿಷ್ಟ ಜಾತಿ/ಪಂಗಡ ಸೇರಿದಂತೆ ಅನೇಕ ಸಮುದಾಯಗಳು ಮೀಸಲಾತಿ ಹೆಚ್ಚಳದ ಬಗ್ಗೆ ಹೋರಾಟ ನಡೆಸುತ್ತಿದ್ದಾರೆ. ಸರ್ಕಾರ ಏನೇ ಕ್ರಮ ಕೈಗೊಂಡರೂ ಅದು ಕಾನೂನು ಬದ್ದವಾಗಿರಬೇಕು. ಹಾಗಾಗಿ ಯಾರಿಗೂ ಕೂಡ ಅನ್ಯಾಯವಾಗದಂತೆ ಕ್ರಮ …

Read More »