Breaking News

Yearly Archives: 2022

ಸಂಚಾರಿ ಪೊಲೀಸ್ ಎಂದು ಹೇಳಿಕೊಂಡು ದಂಡ ವಸೂಲಿ ಮಾಡುತ್ತಿದ್ದ ಅರಣ್ಯ ಅಧಿಕಾರಿಗೆ ಸಾರ್ವಜನಿಕರಿಂದ ಥಳಿತ

ಬಳ್ಳಾರಿ: ಬಳ್ಳಾರಿ ವಿಭಾಗದ ಅರಣ್ಯ ಅಧಿಕಾರಿಯೊಬ್ಬರು ರಾಜ್ಯ ಅರಣ್ಯ ಇಲಾಖೆಗೆ ಮುಜುಗರ ಉಂಟು ಮಾಡುವಂತೆ ಮಾಡಿದ್ದು, ತಾನು ಬಳ್ಳಾರಿ ಸಂಚಾರಿ ಪೋಲೀಸರಂತೆ ಪೋಸು ಕೊಟ್ಟು, ವಾಹನ ಸವಾರರಿಂದ ಹಣ ವಸೂಲಿ ಮಾಡಿದ್ದಕ್ಕೆ ಸಾರ್ವಜನಿಕರು ಹಲ್ಲೆ ನಡೆಸಿ ಪೊಲೀಸರಿಗೆ ಒಪ್ಪಿಸಿದ್ದಾರೆ.   ಪೊಲೀಸ್‌ ಅಧಿಕಾರಿಯ ಬಗ್ಗೆ ಅನುಮಾನಗೊಂಡ ಸಾರ್ವಜನಿಕರು, ಆರೋಪಿ ಉಪ ವಲಯ ಅರಣ್ಯಾಧಿಕಾರಿಯನ್ನು ಹಿಡಿದ ಥಳಿಸಿದ ಘಟನೆ ಸೋಮವಾರ ಬಳ್ಳಾರಿ ನಗರದಲ್ಲಿ ವರದಿಯಾಗಿದೆ. ಆರೋಪಿ ಅಧಿಕಾರಿ ಭಾನುವಾರ ‘ಡ್ಯೂಟಿ’ಯಲ್ಲಿದ್ದು, ಹಲವು ವಾಹನ …

Read More »

ರಾಮದುರ್ಗ: ಅನೈತಿಕ ಸಂಬಂಧ, ಪ್ರಿಯಕರನ ಜೊತೆ ಸೇರಿ ಪತಿ ಕೊಂದ ಪತ್ನಿ

ರಾಮದುರ್ಗ (ಬೆಳಗಾವಿ): ತಾಲ್ಲೂಕಿನ ಹೊಸೂರ ಗ್ರಾಮದ ಬಳಿ ಸೋಮವಾರ ವ್ಯಕ್ತಿಯೊಬ್ಬರನ್ನು ಕೊಲೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ, ಕೊಲೆಯಾದವರ ಪತ್ನಿ ಹಾಗೂ ಆಕೆಯ ಪ್ರಿಯಕರನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಹೊಸೂರ ನಿವಾಸಿ ಪಾಂಡಪ್ಪ ದುಂಡಪ್ಪ ಜಟಕನ್ನವರ (35) ಕೊಲೆಯಾದವರು. ಇವರ ಪತ್ನಿ ಲಕ್ಷ್ಮಿ ಜಟಕನ್ನವವರ (30) ಹಾಗೂ ಪ್ರಿಯಕರ ಎನ್ನಲಾದ ರಮೇಶ ಬಡಿಗೇರ (36) ಬಂಧಿತರು. ಅನೈತಿಕ ಸಂಬಂಧ ಕಾರಣ: ‘ಪಾಂಡಪ್ಪ ಹಾಗೂ ಲಕ್ಷ್ಮಿ ಕೆಲ ವರ್ಷಗಳಿಂದ ಹೊಸೂರ ಹೊರವಲಯದ ತಮ್ಮ ಜಮೀನಿನಲ್ಲಿ …

Read More »

2015- 16ರ ಶಿಕ್ಷಕರ ಅಕ್ರಮ ನೇಮಕ ಪ್ರಕರಣ ಸಿಐಡಿ ತನಿಖೆಗೆ: ಸಚಿವ ಬಿ.ಸಿ.ನಾಗೇಶ್

ವಿಧಾನಸಭೆ: 2015- 16ರಲ್ಲಿ ನಡೆದ ಶಿಕ್ಷಕರ ಅಕ್ರಮ ನೇಮಕ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ವಿಧಾನಸಭೆಗೆ ತಿಳಿಸಿದ್ದಾರೆ. ಶೂನ್ಯವೇಳೆಯಲ್ಲಿ ಬಿಜೆಪಿ ಶಾಸಕ ಪಿ.ರಾಜೀವ್ ಅವರ ಪ್ರಸ್ತಾಪಕ್ಕೆ ಉತ್ತರಿಸಿದ ಅವರು, 2015- 16ರಲ್ಲಿ ಇದಕ್ಕಿದ್ದಂತೆ ಒಂದಿಷ್ಟು ಜನರನ್ನು ಯಾವುದೇ ಪರೀಕ್ಷೆ ನಡೆಸದೇ ನೇಮಕ ಮಾಡಿಕೊಂಡಿರುವುದು ಗಮನಕ್ಕೆ ಬಂದಿದೆ. ಪತ್ರಿಕೆಯಲ್ಲಿ ವರದಿ ಬಂದ ನಂತರ ನಾವು ಪ್ರಾಥಮಿಕ ತನಿಖೆ ನಡೆಸಿದಾಗ ಬೆಂಗಳೂರು ವಿಭಾಗದಲ್ಲಿ …

Read More »

ಬೈಲಹೊಂಗಲ: ಉಪವಿಭಾಗಾಧಿಕಾರಿ ಕಚೇರಿ ಎದುರು ಪ್ರತಿಭಟನೆ

ಬೈಲಹೊಂಗಲ: ಮಲಪ್ರಭಾ ಏತ ನೀರಾವರಿಗಾಗಿ ಭೂ ಸ್ವಾಧೀನಗೊಂಡ ಪ್ರದೇಶವನ್ನು 50 ವರ್ಷಗಳ ನಂತರ 2022 ರಲ್ಲಿ ದಾಖಲಿಸಿರುವ ತಹಶೀಲ್ದಾರ್ ಕ್ರಮವನ್ನು ರದ್ದುಪಡಿಸುವಂತೆ ಆಗ್ರಹಿಸಿ ಉಪವಿಭಾಗಾಧಿಕಾರಿ ಕಚೇರಿ ಎದುರು ರೈತರು ಸೋಮವಾರ ಪ್ರತಿಭಟನೆ ನಡೆಸಿದರು.   ಹೊಸೂರು ಮಡಿವಾಳೇಶ್ವರ ಮಠದ ಗಂಗಾಧರ ಮಹಾಸ್ವಾಮೀಜಿ, ವೇದಮೂರ್ತಿ ಮಾಹಾಂತಯ್ಯ ಆರಾದ್ರಿಮಠ ಶಾಸ್ತ್ರಿಗಳು, ಪಟ್ಟಣದ ಬೆಳಗಾವಿ ರಸ್ತೆಯಲ್ಲಿರುವ ಕಿತ್ತೂರು ರಾಣಿ ಚೆನ್ನಮ್ಮ ಪುತ್ಥಳಿಗೆ ಮಾಲಾರ್ಪಣೆ ಮಾಡುವುದರ ಮೂಲಕ ಪ್ರತಿಭಟನೆಗೆ ಚಾಲನೆ ನೀಡಿದರು. ಚನ್ನಮ್ಮ ವೃತ್ತದಿಂದ ಇಂಚಲ …

Read More »

ಚಿಕ್ಕೋಡಿ: ಅಕ್ರಮ ಮದ್ಯ ಮಾರಾಟ ಮಾಡಿದ ವ್ಯಕ್ತಿಗೆ 3 ವರ್ಷ ಕಠಿಣ ಶಿಕ್ಷೆ; 20 ಸಾವಿರ ದಂಡ

ಚಿಕ್ಕೋಡಿ: ಅಕ್ರಮ ಸಾರಾಯಿ ಮಾರಾಟ ಮಾಡಿದ ವ್ಯಕ್ತಿಗೆ ಚಿಕ್ಕೋಡಿ ಜೆಎಂಎಫ್‌ಸಿ ನ್ಯಾಯಾಲಯ 3 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು 20 ಸಾವಿರ ರೂ ದಂಡ ವಿಧಿಸಿ ತೀರ್ಪು ನೀಡಿದೆ. ಚಿಕ್ಕೋಡಿ ತಾಲೂಕಿನ ಜೈನಾಪೂರ ಗ್ರಾಮದ ಆನಂದ ಮಹಾದೇವ ಗರಬುಡೆ ಎಂಬಾತನೆ ಶಿಕ್ಷೆಗೆ ಗುರಿಯಾದ ವ್ಯಕ್ತಿಯಾಗಿದ್ದಾನೆ. ಕಳೆದ 24-09- 2015 ರಂದು ಜೈನಾಪೂರ ಕ್ರಾಸ್ ಹತ್ತಿರ ಅಕ್ರಮ ಸಾರಾಯಿ ಮಾರಾಟ ಮಾಡುವ ಕುರಿತು ಆರೋಪಿ ಮೇಲೆ ಅಬಕಾರಿ ಉಪ ನಿರೀಕ್ಷಕ ವಿ.ಎ.ಕಳ್ಳಿಕದ್ದಿ …

Read More »

ಜೂಜುಕೋರರಿಗೆ ಬಿಸಿ: ಬೆಳಗಾವಿಯಿಂದ ಮತ್ತೊಬ್ಬ ಮಟ್ಕಾ ಬುಕ್ಕಿ ಗಡಿಪಾರು

ಬೆಳಗಾವಿ: ನಗರದಲ್ಲಿ ಮಟ್ಕಾ, ಓಸಿ ಆಡಲು ಜನರನ್ನು ಪ್ರೇರೇಪಿಸುತ್ತಿದ್ದ ಬುಕ್ಕಿಯನ್ನು ಬೆಳಗಾವಿ ಜಿಲ್ಲೆಯಿಂದ ಗಡಿಪಾರು ಮಾಡುವ ಮೂಲಕ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ರವೀಂದ್ರ ಗಡಾದಿ ಜೂಜುಕೋರರಿಗೆ ಬಿಸಿ ಮುಟ್ಟಿಸಿದ್ದಾರೆ. ಇಲ್ಲಿಯ ಅನಗೋಳದ ಪರುಶರಾಮ ಬಾಬು ಮೇತ್ರಿ ಎಂಬಾತನನ್ನು ಒಂದು ವರ್ಷಗಳ ಕಾಲ 2023 ಸೆ. 18ರ ವರೆಗೆ ಗಡಿಪಾರು ಮಾಡಲಾಗಿದೆ. ಬೆಳಗಾವಿಯಿಂದ ಬಳ್ಳಾರಿ ಜಿಲ್ಲೆಗೆ ಗಡಿಪಾರು ಮಾಡಿ ಗಡಾದಿ ಆದೇಶ ಹೊರಡಿಸಿದ್ದಾರೆ.   ಪರುಶರಾಮ ಮೇತ್ರಿ ವಿರುದ್ಧ ಏಳು ಪ್ರಕರಣಗಳು …

Read More »

ಖಿಲಾರದಡ್ಡಿಗೆ ಕೊನೆಗೂ ಬಂತು ಬಸ್‌!

ತೆಲಸಂಗ: ಸಮೀಪದ ಖಿಲಾರದಡ್ಡಿ ಗ್ರಾಮಕ್ಕೆ ಕೊನೆಗೂ ಸೋಮವಾರ ಬಸ್‌ ಬಂದಿದ್ದು, ಬಸ್ಸೇ ಕಾಣದ ಗ್ರಾಮಸ್ಥರಲ್ಲಿ ಸಂಭ್ರಮವೋ ಸಂಭ್ರಮ. ಸ್ವಾತಂತ್ರ್ಯ ದೊರೆತು 75 ವರ್ಷವಾದರೂ ಖಿಲಾರದಡ್ಡಿ ಗ್ರಾಮಕ್ಕೆ ಬಸ್‌ ವ್ಯವಸ್ಥೆ ಇರಲಿಲ್ಲ. ಸದ್ಯ ಬಸ್‌ ಗ್ರಾಮದಲ್ಲಿ ಬರುತ್ತಿದ್ದಂತೆ ಗ್ರಾಮಸ್ಥರೆಲ್ಲ ಸೇರಿ ಚಾಲಕ, ನಿರ್ವಾಹಕ, ನಿಯಂತ್ರಣಾಧಿಕಾರಿಯನ್ನು ಸತ್ಕರಿಸಿ ಬಸ್‌ ಗೆ ಪೂಜೆ ಸಲ್ಲಿಸಿ, ಕುಣಿದು ಕುಪ್ಪಳಿಸಿದರು.   280ಕ್ಕೂ ಹೆಚ್ಚು ಶಾಲಾ ಮಕ್ಕಳು ಬಂದು ಹೋಗುವುದು ಸೇರಿ 16 ಕಿ.ಮೀ ನಿತ್ಯ ಕಾಲ್ನಡಿಗೆಯಲ್ಲಿಯೇ ಶಾಲೆಗೆ …

Read More »

ಯಕ್ಷಗಾನಕ್ಕೆ ಅಡ್ಡಿಯಾದೀತೆಂದು ಆಜಾನ್‌ ಕಿರಿಕಿರಿ ಸಹಿಸಲಾಗದು-ಪ್ರಮೋದ್‌ ಮುತಾಲಿಕ್

ಮಂಗಳೂರು: ‘ಸಾರ್ವಜನಿಕ ಸ್ಥಳಗಳಲ್ಲಿ ಧ್ವನಿವರ್ಧಕ ಬಳಕೆ ಮೇಲೆ ನಿಷೇಧ ಹೇರಿರುವುದು ಸುಪ್ರೀಂ ಕೋರ್ಟ್‌. ಈ ಆದೇಶದಿಂದ ಯಕ್ಷಗಾನಕ್ಕೆ ತೊಂದರೆ ಆಗುತ್ತದೆ ಎಂಬ ಕಾರಣಕ್ಕೆ ಮುಸ್ಲೀಮರ ಆಜಾನ್‌ನಿಂದ ನಿತ್ಯವೂ ಆಗುವ ಕಿರಿಕಿರಿಯನ್ನು ಸಹಿಸಲಾಗದು’ ಎಂದು ಶ್ರೀರಾಮಸೇನೆಯ ಮುಖ್ಯಸ್ಥ ಪ್ರಮೋದ್‌ ಮುತಾಲಿಕ್‌ ಹೇಳಿದರು.   ಇಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಯಕ್ಷಗಾನ ಪ್ರತಿನಿತ್ಯ ನಡೆಯುವುದಿಲ್ಲ. ಅದಕ್ಕೆ ಧ್ವನಿವರ್ಧಕ ಬಳಸುವುದರಿಂದ ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುವುದನ್ನು ಎಂದಾದರೆ, ಅದನ್ನು ತಡೆಯಲು ಕ್ರಮವಹಿಸಬೇಕು’ ಎಂದರು. ‘ಮಸೀದಿಗಳಲ್ಲಿ …

Read More »

ಹಾಫ್ ಹೆಲ್ಮೆಟ್ ಧರಿಸುವ ಪೊಲೀಸರಿಗೆ ದಂಡ: ಮುಂದಿನ ದಿನಗಳಲ್ಲಿ ವಾಹನ ಸವಾರರಿಗೂ ಬಿಸಿ

ಬೆಂಗಳೂರು: ಹಾಫ್ ಹೆಲ್ಮೆಟ್ ಧರಿಸದಂತೆ ನಗರದ ಗಲ್ಲಿ-ಗಲ್ಲಿಗಳಲ್ಲಿಯೂ ಸಂಚಾರಿ ಪೊಲೀಸರು ನಿರಂತರವಾಗಿ ಜಾಗೃತಿ ಮೂಡಿಸುತ್ತಿದ್ದಾರೆ. ಸಿಗ್ನಲ್, ಜಂಕ್ಷನ್, ಇನ್ನಿತರ ಆಯಕಟ್ಟಿನ ಸ್ಥಳಗಳಲ್ಲಿ ಐಎಸ್‌ಐ ಮಾರ್ಕ್ ಇರುವ ಹೆಲ್ಮೆಟ್ ಧರಿಸುವಂತೆ ಬೈಕ್ ಸವಾರರಿಗೆ ತಿಳಿ ಹೇಳುತ್ತಿದ್ದಾರೆ. ಆದರೆ ಸುರಕ್ಷತೆಗಾಗಿ ಹೆಲ್ಮೆಟ್ ಧರಿಸುವಂತೆ ಹೇಳುವ ಪೊಲೀಸರು ಅರ್ಧ ಹೆಲ್ಮೆಟ್ ಧರಿಸಿ ವಾಹನ ಚಲಾಯಿಸಿ ನಿಯಮ ಉಲ್ಲಂಘಿಸುತ್ತಿದ್ದಾರೆ.‌ ಇದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಈ ವಿರೋಧ ಅಳಿಸಿ ಹಾಕಲು ಪೊಲೀಸ್ ಇಲಾಖೆ ಲಾ ಅಂಡ್ …

Read More »

ಬೆಳಗಾವಿ ತಾಲೂಕಿನ ಕೂಲಿ ಕಾರ್ಮಿಕರ ಸಂಘಟನೆ ವತಿಯಿಂದ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ

ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ, ಬೆಳಗಾವಿ ತಾಲೂಕಿನ ಕೂಲಿ ಕಾರ್ಮಿಕರ ಸಂಘಟನೆ ವತಿಯಿಂದ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಬೆಳಗಾವಿ ನಗರದಲ್ಲಿ ಇಂದು ಮಂಗಳವಾರ ಕೂಲಿ ಕಾರ್ಮಿಕರ ಸಂಘಟನೆ ವತಿಯಿಂದ ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಬೆಳಗಾವಿ ಜಿಲ್ಲೆಯ ವಿವಿಧ ತಾಲೂಕಿನ ಕೂಲಿ ಕಾರ್ಮಿಕರು ಪ್ರತಿಭಟನಾ ಮೆರವಣಿಗೆಯಲ್ಲಿ ಭಾಗಿಯಾಗಿದ್ದರು. ತಲೆಯ ಮೇಲೆ ಬುಟ್ಟಿ, ಕೂಲಿ ಕೆಲಸದ ಸಾಮಗ್ರಿ ಹಿಡಿದು ಪ್ಲೇಟ್ …

Read More »