ಹಾವೇರಿ : ಪಂಚಮಸಾಲಿ ಮೀಸಲಾತಿ ಕುರಿತಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೊಟ್ಟ ಮಾತು ತಪ್ಪಿದ್ದಾರೆ. ಮೀಸಲಾತಿ ಘೋಷಣೆಯ ವಿಳಂಬ ನೀತಿ ಖಂಡಿಸಿ ಸೆಪ್ಟೆಂಬರ್ 20ರಂದು ಜಿಲ್ಲೆಯ ಶಿಗ್ಗಾಂವಿ ಪಟ್ಟಣದಲ್ಲಿರುವ ಸಿಎಂ ಬೊಮ್ಮಾಯಿಯವರ ನಿವಾಸದ ಎದುರು ಒಂದು ದಿನದ ಸತ್ಯಾಗ್ರಹ ನಡೆಸಲಾಗುವುದು ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಶ್ರೀಗಳು ತಿಳಿಸಿದರು. ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಂಚಮಸಾಲಿ ಸಮುದಾಯಕ್ಕೆ ಮುಖ್ಯಮಂತ್ರಿಗಳು ಆಗಸ್ಟ್ 22ರ ಒಳಗೆ ಸಿಹಿ ಸುದ್ದಿ ಕೊಡುವುದಾಗಿ ಹೇಳಿದ್ದರು. …
Read More »Yearly Archives: 2022
ಭ್ರಷ್ಟಾಚಾರ ಪ್ರಕರಣದಲ್ಲಿ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಬಿಎಸ್ವೈ
ಬೆಂಗಳೂರು: ಭ್ರಷ್ಟಾಚಾರ ಪ್ರಕರಣದಲ್ಲಿ ಎಫ್ಐಆರ್ ದಾಖಲಿಸಿ ವಿಚಾರಣೆ ನಡೆಸುವಂತೆ ಹೈಕೋರ್ಟ್ ನೀಡಿದ ಸೂಚನೆ ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ. ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ ಮತ್ತು ನ್ಯಾ. ಹಿಮಾ ಕೊಹ್ಲಿ ಅವರ ಪೀಠ ಸೋಮವಾರ ಪ್ರಕರಣದ ವಿಚಾರಣೆ ನಡೆಸಿದೆ. ಪ್ರಕರಣದ ಹಿನ್ನೆಲೆ: ಯಡಿಯೂರಪ್ಪ ಸಿಎಂ ಆಗಿದ್ದ ವೇಳೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಸಂಬಂಧಿಸಿದ ಗುತ್ತಿಗೆ ನೀಡುವಾಗ ಭ್ರಷ್ಟಾಚಾರ ಆಗಿದೆ ಎಂದು ಸಾಮಾಜಿಕ ಕಾರ್ಯಕರ್ತ …
Read More »ನಾನು, ಅಧ್ಯಕ್ಷರು ಬಹಳ ಪ್ರೀತಿ ವಿಶ್ವಾಸದಿಂದಿದ್ದೇವೆ: ದೇಶಪಾಂಡೆ
ಬೆಂಗಳೂರು : ನಾನು ಅಧ್ಯಕ್ಷರು ಬಹಳ, ಪ್ರೀತಿ ವಿಶ್ವಾಸದಿಂದಿದ್ದೇವೆ. ಎಲ್ಲರ ಸಹಕಾರದಿಂದ ಅವರು ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಆರ್ ವಿ ದೇಶಪಾಂಡೆ ತಿಳಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷರ ಅಸಮಾಧಾನ ವಿಚಾರದ ಕುರಿತು ಪ್ರತಿಕ್ರಿಯಿಸಿದ ಅವರು, ಇಂತಹ ಯಾವುದೇ ಊಹಾಪೋಹಗಳಿಲ್ಲ. ಅವರ ಉದ್ದೇಶ ಭಾರತ್ ಜೋಡೋ ಕಾರ್ಯಕ್ರಮ ಯಶಸ್ವಿಯಾಗಬೇಕೆಂಬುದಾಗಿದೆ. ಎಲ್ಲ ಕಡೆಯಿಂದ ನಮ್ಮ ಮುಖಂಡರು, ಕಾರ್ಯಕರ್ತರು ಕಾರ್ಯಕ್ರಮಕ್ಕೆ ಬರಬೇಕು. ಇದನ್ನು ಯಶಸ್ವಿಗೊಳಿಸಬೇಕೆಂದು ಹೇಳಿದ್ದಾರೆ ಎಂದರು. ಕೆಪಿಸಿಸಿ ಅಧ್ಯಕ್ಷರ ಹೇಳಿಕೆಗಳಿಗೆ ಬೇರೆ ಅರ್ಥ …
Read More »ಡಾ.ಪ್ರಭಾಕರ ಕೋರೆಯವರಿಗೆ ಸ್ಪರ್ಧಾತ್ಮಕ ಪುಸ್ತಕಗಳ ತುಲಾಭಾರ
ಬೆಳಗಾವಿ: 75ನೇ ಜನ್ಮದಿನದ ಅಂಗವಾಗಿ ಕೆಎಲ್ಇ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ ಅವರಿಗೆ ಮಹಾರಾಷ್ಟ್ರದ ಬಾರ್ಸಿಯಲ್ಲಿರುವ ಕೆಎಲ್‍ಇ ಸಿಲ್ವರ್ ಜ್ಯೂಬ್ಲಿ ಹೈಸ್ಕೂಲಿನಲ್ಲಿ ಸ್ಪರ್ಧಾತ್ಮಕ ಪುಸ್ತಕಗಳ ತುಲಾಭಾರ ನೆರವೇರಿಸಲಾಯಿತು. ಸಮಾರಂಭದಲ್ಲಿ ತುಲಾಭಾರ ಸ್ವೀಕರಿಸಿ ಮಾತನಾಡಿದ ಡಾ.ಪ್ರಭಾಕರ ಕೋರೆ, ಹಿತೈಷಿಗಳು ಹಾಗೂ ವಿದ್ಯಾರ್ಥಿಗಳ ಪ್ರೀತಿಗೆ ಬೆಲೆ ಕಟ್ಟಲಾಗದು. ಹಿರಿಯರ ಪುಣ್ಯದ ಫಲವಾಗಿ ನಾನು ಜೀವನದಲ್ಲಿ ಅಪ್ರತಿಮ ಸಾಧನೆ ಮಾಡಲು ಸಾಧ್ಯವಾಯಿತು. ಕೆಎಲ್‍ಇ ಸಪ್ತರ್ಷಿಗಳ ಕನಸುಗಳಿಗೆ ಪಥವಾಗಿ ಮುನ್ನಡೆಯಲು ನನಗೆ ಎಲ್ಲರೂ ಜೊತೆಯಾಗಿದ್ದಾರೆ. ಒಬ್ಬ ವ್ಯಕ್ತಿ ಸಾಧನೆಯನ್ನು …
Read More »75 ಯೂನಿಟ್ ಉಚಿತ ವಿದ್ಯುತ್ ವಿತರಣೆಯ ಯೋಜನೆಯನ್ನು ಹಿಂಪಡೆದಿಲ್ಲ: ಸಿಎಂ
ಬೆಂಗಳೂರು: ಬಡ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ 75 ಯೂನಿಟ್ ಉಚಿತ ವಿದ್ಯುತ್ ವಿತರಣೆಯ ಯೋಜನೆಯನ್ನು ಹಿಂಪಡೆದಿಲ್ಲ. ಇನ್ನಷ್ಟು ಸರಳೀಕರಣ ಮಾಡಿ, ಇದೇ ತಿಂಗಳಿನಿಂದ ಹಣ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಪರಿಶ್ರಮದಿಂದ ದುಡಿಯುವ ವರ್ಗ: ಇಂದು ಕರ್ನಾಟಕ ಭೋವಿ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಜಸ್ಮಾ ದೇವಿ ಮಂದಿರದ ಕಲ್ಯಾಣ ಮಂಟಪದಲ್ಲಿ ಆಯೋಜಿಸಿದ್ದ ಸುವರ್ಣ ಮಹೋತ್ಸವ ಉದ್ಘಾಟನೆ ಹಾಗೂ 43ನೇ ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಸಿಎಂ ಪಾಲ್ಗೊಂಡರು. ಬಳಿಕ …
Read More »ಎಲೆಕ್ಷನ್ ಕಮಿಟಿ ಟಿಕೆಟ್ ನೀಡುವ ನಿರ್ಧಾರ ಮಾಡುತ್ತದೆ. ಇಲ್ಲಿ ಒಬ್ಬರ ನಿರ್ಧಾರ ಅಂತಿಮವಲ್ಲ: ಬಸವರಾಜ ರಾಯರೆಡ್ಡಿ
ರಾಯಚೂರು: ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿದ್ದು, ಕೆಲಸ ಮಾಡದವರಿಗೆ ಟಿಕೆಟ್ ಕೊಡುವುದಿಲ್ಲ ಎನ್ನಲು ಅವರಿಗೆ ಅಧಿಕಾರವಿದೆ ಎಂದು ಮಾಜಿ ಸಚಿವ ಬಸವರಾಜ ರಾಯರೆಡ್ಡಿ ಅಭಿಪ್ರಾಯ ಪಟ್ಟರು. ನಗರದಲ್ಲಿ ರವಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮುಂದಿನ ಸಾರ್ವತ್ರಿಕ ಚುವಾವಣೆಗೆ ಟಿಕೆಟ್ ನೀಡುವ ವಿಚಾರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ನಡುವೆ ಯಾವುದೇ ಭಿನ್ನಾಭಿಪ್ರಾಯವಲ್ಲ. ಅಧ್ಯಕ್ಷರಾಗಿ ಡಿಕೆಶಿವಕುಮಾರ್ ಗೆ ಅಧಿಕಾರವಿದ್ದು, ಅವರ ಹೇಳಿಕೆ ತಪ್ಪೇನಿಲ್ಲ. ಸಿಎಲ್ ಪಿ ನಾಯಕರಿದ್ದಾರೆ, ಎಲೆಕ್ಷನ್ ಕಮಿಟಿ …
Read More »ಭಜನೆ , ಪೂಜೆ, ಮಾಡೋದು ಬಿಟ್ಟು ಬೇರೆ ಏನೂ ಗೊತ್ತಿಲ್ಲ ಬಿಜೆಪಿ ಅವರಿಗೆ: ಸತೀಶ ಜಾರಕಿಹೊಳಿ ಲೇವಡಿ
ಪೂಜೆ, ಭಜನೆ ಮಾಡುವುದು ಬಿಟ್ಟು ಬೇರೆ ಹೆಚ್ಚಿಗೆ ಏನೂ ಬಿಜೆಪಿ ಅವರಿಗೆ ಗೊತ್ತಿಲ್ಲ. ದೇಶದ ಇತಿಹಾಸವನ್ನು ಮೊದಲು ಇವರು ತಿಳಿದುಕೊಳ್ಳಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಲೇವಡಿ ಮಾಡಿದ್ದಾರೆ. ಇಂಡಿಯಾ ಪಾಕಿಸ್ತಾನ ಇಬ್ಬಾಗ ಮಾಡಿದ್ದ ಕಾಂಗ್ರೆಸ್‍ನವರು ಇದೀಗ ಭಾರತ್ ಜೋಡೋ ಮಾಡ್ತಿದ್ದಾರೆ ಎಂಬ ಬಿಜೆಪಿ ಟೀಕೆಗೆ ಬೆಳಗಾವಿಯ ಕಾಂಗ್ರೆಸ್ ಭವನದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಯಿಸಿದ ಸತೀಶ ಜಾರಕಿಹೊಳಿ ಅದು ಕಾಂಗ್ರೆಸ್ ಮಾಡಿದ್ದಲ್ಲ, ಬ್ರಿಟಿಷರೇ ಮಾಡಿದ್ದು. ಈ ಇತಿಹಾಸ ಅವರಿಗೆ ಗೊತ್ತಿಲ್ಲ. …
Read More »ಬಿಎಸ್ವೈ ವಿರುದ್ದ FIR ಗುಮ್ಮ: ಒಂದು ಕಲ್ಲಿಗೆ ಅಮಿತ್ ಶಾ ಹೊಡೆದ 2 ಏಟು?
ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ವಿರುದ್ದ ಲೋಕಾಯುಕ್ತದಲ್ಲಿ FIR ದಾಖಲಾಗಿದೆ. ಇದರ ಜೊತೆಗೆ, ಅವರ ಪುತ್ರ ವಿಜಯೇಂದ್ರ ಮತ್ತು ತಾನೇ ಆಪರೇಶನ್ ಕಮಲದ ಮೂಲಕ ಕರೆದುಕೊಂಡು ಬಂದಿದ್ದ ಸಹಕಾರ ಸಚಿವ ಎಸ್. ಟಿ. ಸೋಮಶೇಖರ್ ವಿರುದ್ದ ಕೂಡಾ. ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸುತ್ತಿರುವ ಈ ವಿದ್ಯಮಾನದ ಹಿಂದೆ ರಾಜಕೀಯ ಸಮೀಕರಣ ಏನಿರಬಹುದು ಎನ್ನುವುದು ಕುತೂಹಲಕ್ಕೆ ಕಾರಣವಾಗಿದೆ. ಬಿಜೆಪಿ ವರಿಷ್ಠರು ಒಂದೇ ಕಲ್ಲಿನಲ್ಲಿ ಎರಡು ಹಕ್ಕಿಯನ್ನು ಹೊಡೆಯಲು ಏನಾದರೂ ಹೊರಟಿದ್ದಾರಾ? ಬಿಎಸ್ವೈ …
Read More »’40 ಪರ್ಸೆಂಟ್ ಕಮಿಷನ್ ಸಿಎಂಗೆ ಸುಸ್ವಾಗತ’: ಬ್ಯಾನರ್ ಹಾಕಿ ಕರ್ನಾಟಕ ಮುಖ್ಯಮಂತ್ರಿ ಗುರಿಯಾಗಿಸಿದ ಟಿಆರ್ ಎಸ್
ಹೈದರಾಬಾದ್: ಸಿಕಂದರಾಬಾದ್ ನ ಪರೇಡ್ ಮೈದಾನದ ಬಳಿ ‘40% ಕಮಿಷನ್ ಸಿಎಂಗೆ ಸುಸ್ವಾಗತ’ ಎಂಬ ಬ್ಯಾನರ್ ಹಾಕುವ ಮೂಲಕ ಆಡಳಿತಾರೂಢ ತೆಲಂಗಾಣ ರಾಷ್ಟ್ರೀಯ ಸಮಿತಿ(ಟಿಆರ್ ಎಸ್) ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಗುರಿಯಾಗಿಸಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ತೆಲಂಗಾಣಕ್ಕೆ ಭೇಟಿ ನೀಡಿದ್ದು, ಇಂದು ಪರೇಡ್ ಮೈದಾನದಲ್ಲಿ ಹೈದರಾಬಾದ್ ಲಿಬರೇಶನ್ ಡೇ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದಾರೆ. ಈ ಸಮಯದಲ್ಲಿ ಈ ಬ್ಯಾನರ್ ಹಾಕಲಾಗಿದೆ ಎಂದು ತಿಳಿದು …
Read More »ಶಾಲೆಗಳಿಗೆ ದಸರಾ ರಜೆ ಅವಧಿ ಬದಲಾವಣೆ : ಮಹತ್ವದ ಆದೇಶ
ಬೆಂಗಳೂರು : ನಾಡಹಬ್ಬ ದಸರಾ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆಯ ಶಾಲೆಗಳಿಗೆ ರಜೆ ಅವಧಿಯಲ್ಲಿ (Dussehra School Holiday change) ಮಾರ್ಪಾಡು ಮಾಡಲಾಗಿದೆ. ಸಪ್ಟೆಂಬರ್ 26ರಿಂದ ಅಕ್ಟೋಬರ್ 9 ವರೆಗೆ ದಸರಾ ರಜೆ ಘೋಷಣೆ ಮಾಡಿ ಶಿಕ್ಷಣ ಇಲಾಖೆ ಮಹತ್ವದ ಆದೇಶವನ್ನು ಹೊರಡಿಸಿದೆ. ರಾಜ್ಯದಲ್ಲಿ ಅಕ್ಟೋಬರ್ 3ರಿಂದ ದಸರಾ ರಜೆ ನೀಡುವಂತೆ ಶಿಕ್ಷಣ ಇಲಾಖೆ ಆದೇಶವನ್ನು ಹೊರಡಿಸಿತ್ತು. ಆದ್ರೆ ಈ ಬಾರಿ ಸಪ್ಟೆಂಬರ್ 26 ರಿಂದ ನಾಡಹಬ್ಬ ದಸರಾ ಆರಂಭವಾಗಲಿದೆ. ಈ …
Read More »