ಬೆಂಗಳೂರು: 2013ರಲ್ಲಿ ನಡೆದ ಪಿಎಸ್‌ಐ ಮತ್ತು ಶಿಕ್ಷಕರ ನೇಮಕಾತಿಯಲ್ಲಿ ಅಕ್ರಮ ನಡೆದಿದ್ದು, ಇದರ ಬಗ್ಗೆ ಮಾಹಿತಿ ಕಲೆಹಾಕಿದ್ದು, ಅವುಗಳ ತನಿಖೆ ನಡೆಸಲಾಗುವುದು ಎಂದು ಬಿಜೆಪಿ ರಾಜ್ಯ ವಕ್ತಾರ ಹಾಗೂ ಶಾಸಕ ಪಿ.ರಾಜೀವ್ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘2013 ರಲ್ಲಿ ಶಿಕ್ಷಕರ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿತ್ತು. ಆದರೆ ಪರೀಕ್ಷೆಯನ್ನೇ ಬರೆಯದ ಹಲವರಿಗೆ ನೇಮಕಾತಿ ಆದೇಶ ನೀಡಲಾಗಿದೆ. ಅಂಥವರು ಕರ್ತವ್ಯಕ್ಕೂ ಹಾಜರಾಗಿದ್ದಾರೆ. ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಇದರ ಸುಳಿವು ಪಡೆದು ವರದಿ …
Read More »Yearly Archives: 2022
ಮಾತೇ ಇಲ್ಲ , ಕಥೆ ಇನ್ನೆಲ್ಲಿ? ಜತೆಯಾಗಿ ನಿಂತರೂ ಮಾತನಾಡದ ಮೋದಿ, ಕ್ಸಿ ಜಿನ್‌ಪಿಂಗ್
ಹೊಸದಿಲ್ಲಿ/ಸಮರಖಂಡ್: ಲಡಾಖ್ ಮತ್ತು ಗಾಲ್ವಾನ್ ಘರ್ಷಣೆ ಬಳಿಕ ಭಾರತ ಮತ್ತು ಚೀನ ನಡುವಿನ ಸಂಬಂಧ ತೀರಾ ಎನ್ನುವಷ್ಟರ ಮಟ್ಟಿಗೆ ಹಳಸಿದ್ದು, ಇದು ಉಜ್ಬೇಕಿಸ್ಥಾನದ ಸಮರಖಂಡ್‌ನಲ್ಲೂ ವ್ಯಕ್ತವಾಯಿತು. ವಿಶೇಷವೆಂದರೆ, 2 ದಿನಗಳ ಶಾಂಘೈ ಸಹಕಾರ ಸಭೆಯ ನೆನಪಿನ ಗ್ರೂಪ್ ಫೋಟೋಗಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ಚೀನ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಜತೆಯಲ್ಲೇ ನಿಂತರೂ ಒಂದೂ ಮಾತನಾಡಲಿಲ್ಲ. ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುತಿನ್, ಚೀನ …
Read More »ನನ್ನ ಮದುವೆಯನ್ನು ತಡೆಯಲು ಅವರ್ಯಾರು ? ಬಜರಂಗ ದಳದ ವಿರುದ್ದ ಯುವತಿ ಆಕ್ರೋಶ
ಅವರಿಬ್ಬರು ಕಳೆದ ಮೂರು ವರ್ಷಗಳಿಂದ ಪ್ರೀತಿ ಮಾಡುತ್ತಿದ್ದರಂತೆ. ಇನ್ನೇನು ತಾವಿಬ್ಬರು ಮದುವೆಯಾಗಬೇಕು ಎಂದುಕೊಂಡವರಿಗೆ ಅಡ್ಡಲಾಗಿದ್ದು ಬಜರಂಗದಳವರು. ಹೌದು, ಜಾಫರ್, ಚೈತ್ರಾ ಸೆ.14 ರಂದು ಚಿಕ್ಕಮಗಳೂರಿನ ರತ್ನಗಿರಿ ರಸ್ತೆಯಲ್ಲಿರುವ ಸಬ್ ರಿಜಿಸ್ಟ್ರಾರ್ ಕಚೇರಿಗೆ ವಿವಾಹವಾಗಲು ಹೋಗಿದ್ದರು. ಈ ವಿಚಾರ ತಿಳಿಯುತ್ತಿದ್ದಂತೆಯೇ ಹಿಂದೂ ಸಂಘಟನೆ ಕಾರ್ಯಕರ್ತರು ಸ್ಥಳಕ್ಕೆ ಬಂದಿದ್ದಾರೆ. ಬಂದವರೇ ಮದುವೆಯನ್ನು ತಡೆಹಿಡಿದಿದ್ದರು. ಅಷ್ಟೆ ಅಲ್ಲ ಮುಸ್ಲಿಂ ಯುವಕನ ವಿರುದ್ಧ ಲವ್ ಜಿಹಾದ್ ಆರೋಪ ಹೊರೆಸಿ, ಇಬ್ಬರನ್ನು ಪೊಲೀಸ್ ಠಾಣೆಗೆ ಕಳುಹಿಸಿದ್ದಾರೆ. ಬಳಿಕ …
Read More »ಕಲ್ಯಾಣ ಕರ್ನಾಟಕ’ ವಿಮೋಚನೆಗಿಂದು 75 ವರ್ಷ : ಅಮೃತಮಹೋತ್ಸವ ಕಾರ್ಯಕ್ರಮಗಳಿಗೆ ಸಿಎಂ ಬೊಮ್ಮಾಯಿ ಚಾಲನೆ
ಕಲಬುರಗಿ : ನಿಜಾಮರ ಆಡಳಿತದಿಂದ ಕಲ್ಯಾಣ ಕರ್ನಾಟಕದ ಜಿಲ್ಲೆಗಳು ವಿಮೋಚನೆ ಆಗಿ ಇಂದಿಗೆ 74 ವರ್ಷಗಳು ಪೂರ್ಣಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಒಂದು ವರ್ಷ ನಡೆಯಲಿರುವ ಅಮೃತಮಹೋತ್ಸವದ ಕಾರ್ಯಕ್ರಮಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಕಲಬುರಗಿಯಲ್ಲಿ ಚಾಲನೆ ನೀಡಲಿದ್ದಾರೆ. ರಾಜ್ಯಸಭೆಯ ವಿರೋಧ ಪಕ್ಷದ ನಾಯಕರು ಹಾಗೂ ರಾಜ್ಯಸಭಾ ಸದಸ್ಯ ಡಾ. ಮಲ್ಲಿಕಾರ್ಜುನ ಖರ್ಗೆ, ನವೀಕರಿಸಬಹುದಾದ ಇಂಧನ ಮೂಲ, ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ಕೇಂದ್ರ ಸರ್ಕಾರದ ರಾಜ್ಯ ಸಚಿವರು ಹಾಗೂ …
Read More »ಸತೀಶ್ ಜಾರಕಿಹೊಳಿ ಹೆಸರಿನಲ್ಲಿ ವಿವಾದಾತ್ಮಕ ಪೋಸ್ಟ್ವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಈ ಕುರಿತು ಕರ್ನಾಟಕ ವಾಲ್ಮೀಕಿ ಯುವ ವೇದಿಕೆ ರಾಜ್ಯಾಧ್ಯಕ್ಷ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಬೆಳಗಾವಿ: ಕೆಪಿಸಿಸಿ ಕಾರ್ಯಾಧ್ಯಕ್ಷ, ಯಮಕನಮರಡಿ ಕ್ಷೇತ್ರದ ಶಾಸಕ ಸತೀಶ ಜಾರಕಿಹೊಳಿ ಅವರ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ವಿವಾದಾತ್ಮಕ ಪೋಸ್ಟ್ ಹಾಕಿದ್ದವರ ವಿರುದ್ಧ ಬೆಳಗಾವಿ ಸೈಬರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೆಸರಿನಲ್ಲಿ ಸಾಮಾಜಿಕ ಜಾಲತಾಣದಲ್ಲಿ ‘ಬ್ರಾಹ್ಮಣವಾದ’ ರಾಮ ಮಂದಿರ ಹೋರಾಟದಲ್ಲಿ ಸತ್ತ ಹೆಚ್ಚಿನವರು ಒಬಿಸಿಗಳು, ಒಬ್ಬನೇ ಒಬ್ಬ ಬ್ರಾಹ್ಮಣ ಸಾಯಲಿಲ್ಲ. ಆದರೆ, ಈಗ ಮಂದಿರದ ಟ್ರಸ್ಟ್‌ನ ಪದಾಧಿಕಾರಿಗಳೆಲ್ಲ ಬ್ರಾಹ್ಮಣರು, ಒಬ್ಬನು ಒಬಿಸಿ ಇಲ್ಲ ಎಂದು ಸಾಮಾಜಿಕ …
Read More »ಆನಂದ ಮಾಮನಿ ಅನಾರೋಗ್ಯದ ಹಿನ್ನೆಲೆ ಬೆಳಗಾವಿಯಲ್ಲಿ ಶ್ರೀರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಅವರ ಅಭಿಮಾನಿಗಳು ಮೃತ್ಯುಂಜಯ ಯಾಗ ಹೋಮಾ, ಉರುಳು ಸೇವೆ,
ಬೆಳಗಾವಿ: ಸವದತ್ತಿ ವಿಧಾನಸಭಾ ಕ್ಷೇತ್ರದ ಶಾಸಕ, ವಿಧಾನಸಭೆ ಉಪಸಭಾಪತಿ ಆನಂದ ಮಾಮನಿ ಆರೋಗ್ಯದಲ್ಲಿ ಏರುಪೇರು ಹಿನ್ನೆಲೆ ಸವದತ್ತಿಯ ಶ್ರೀರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಅವರ ಅಭಿಮಾನಿಗಳು ಉರುಳು ಸೇವೆ, ಮೃತ್ಯುಂಜಯ ಯಾಗ ಹೋಮ ಮಾಡಿದ್ದಾರೆ. ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಶ್ರೀರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಶಾಸಕ ಆನಂದ ಮಾಮನಿ ಗುಣಮುಖರಾಗಲಿ, ಆರೋಗ್ಯವಂತರಾಗಿ ಬರಲಿ ಎಂದು ಸವದತ್ತಿ ಕ್ಷೇತ್ರದ ಅವರ ಅಭಿಮಾನಿಗಳು ವಿಶೇಷ ಪೂಜೆ, ಉರುಳು ಸೇವೆ, ಮೃತ್ಯುಂಜಯ ಯಾಗ ಹೋಮ ಮಾಡಿದ್ದಾರೆ.
Read More »ಮಹಡಿಯಿಂದ ಬಿದ್ದು ಬಾಲಕಿ ಸಾವು: ಅಂತ್ಯಸಂಸ್ಕಾರಕ್ಕೆ ನೆರವಾದ ಮುಸ್ಲಿಂ ಮುಖಂಡರು
ಬೆಳಗಾವಿ: ಇಲ್ಲಿನ ವೀರಭದ್ರೇಶ್ವರ ನಗರದಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದು ಗಾಯಗೊಂಡಿದ್ದ ಬಾಲಕಿ ಗುರುವಾರ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಳು. ಉಡುಪಿ ಮೂಲದವರಾದ, ಕೆಲ ವರ್ಷಗಳಿಂದ ಇಲ್ಲಿನ ವೀರಭದ್ರೇಶ್ವರ ನಗರದಲ್ಲಿ ವಾಸವಾಗಿದ್ದ ವಿದ್ಯಾಶ್ರೀ ಹೆಗಡೆ (10) ಮೃತಪಟ್ಟ ಬಾಲಕಿ. ಗುರುವಾರ ಬೆಳಿಗ್ಗೆ ಮಹಡಿ ಮೇಲೆ ಹತ್ತಿ ಹೂವು ಕೀಳಲು ಹೋದ ಸಂದರ್ಭದಲ್ಲಿ ಆಯತಪ್ಪಿ ಕೆಳಗೆ ಬಿದ್ದಳು. ತೀವ್ರ ಗಾಯಗೊಂಡಿದ್ದ ಬಾಲಕಿಯನ್ನು ಇಲ್ಲಿನ ಮುಸ್ಲಿಂ ಸಮುದಾಯದ ಕೆಲವರು ಕೆಎಲ್‌ಇ ಸಂಸ್ಥೆಯ ಡಾ.ಪ್ರಭಾಕರ ಕೋರೆ ಆಸ್ಪತ್ರೆಗೆ ಸೇರಿದ್ದರು. …
Read More »ಪ್ರಧಾನಿ ಮೋದಿʼ ಹುಟ್ಟುಹಬ್ಬ: ನಾಳೆ ಜನಿಸಿದ ಪ್ರತಿ ಮಗುವಿಗೆ ʻಚಿನ್ನದ ಉಂಗುರ & 720 ಕೆಜಿ ಮೀನುʼ ಗಿಫ್ಟ್!. ಎಲ್ಲಿ ಗೊತ್ತಾ?
ತಮಿಳುನಾಡು : ತಮಿಳುನಾಡಿನ ಭಾರತೀಯ ಜನತಾ ಪಕ್ಷ(ಬಿಜೆಪಿ)ದ ಘಟಕವು ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನವಾದ ಸೆಪ್ಟೆಂಬರ್ 17 (ನಾಳೆ)ರಂದು ಜನಿಸಿದ ಪ್ರತಿ ಮಗುವಿಗೆ ಚಿನ್ನದ ಉಂಗುರವನ್ನು ನೀಡುವುದಾಗಿ ಘೋಷಿಸಿದೆ. ಅಷ್ಟೇ ಅಲ್ಲದೇ, 720 ಕೆಜಿ ಮೀನುಗಳನ್ನು ಸಹ ವಿತರಿಸಲಾಗುತ್ತದೆ. ಈ ಯೋಜನೆಗಾಗಿ ಪಕ್ಷವು ಆರ್‌ಎಸ್‌ಆರ್‌ಎಂ ಆಸ್ಪತ್ರೆಯನ್ನು ಆಯ್ಕೆ ಮಾಡಿದೆ ಎಂದು ರಾಜ್ಯದ ಸಚಿವ ಎಲ್ ಮುರುಗನ್ ಮಾಹಿತಿ ನೀಡಿದ್ದಾರೆ. ಅವರ ಪ್ರಕಾರ, ಪ್ರತಿ ಉಂಗುರವು 2 ಗ್ರಾಂ …
Read More »ವಾಹನ ಸವಾರರೇ ಎಚ್ಚರ.! ಮತ್ತೆ ಶುರುವಾಗಲಿದೆ ʼಟೋಯಿಂಗ್ʼ
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಎಲ್ಲೆಂದರಲ್ಲಿ ವಾಹನ ನಿಲ್ಲಿಸುವ ಸವಾರರು ಸ್ವಲ್ಪ ಎಚ್ಚರದಿಂದ ಇರಬೇಕಾದ ಅಗತ್ಯವಿದೆ. ಸಿಲಿಕಾನ್ ಸಿಟಿಯಲ್ಲಿ ಮತ್ತೆ ಟೋಯಿಂಗ್ ಆರಂಭವಾಗುವ ಬಗ್ಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಸುಳಿವು ನೀಡಿದ್ದಾರೆ. ಬೆಂಗಳೂರಿನಲ್ಲಿ ವೆಹಿಕಲ್ ಟೋಯಿಂಗ್ ಅಗತ್ಯವಿದೆ. ಯಾವ ರೀತಿಯಲ್ಲಿ ಟೋಯಿಂಗ್ ಮಾಡಬೇಕು ಎಂಬ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ. ಈ ಬಗ್ಗೆ ಶೀಘ್ರದಲ್ಲಿ ನಿರ್ಧಾರ ಕೈಗೊಳ್ಳಲಾಗುತ್ತದೆ. ಹೈಕೋರ್ಟ್ ಕೂಡ ಕಾಲಾವಕಾಶ ನೀಡಿತ್ತು ಎಂದು ತಿಳಿಸಿದ್ದಾರೆ. ಟೋಯಿಂಗ್ …
Read More »ಸಿದ್ದರಾಮೋತ್ಸವದಲ್ಲಿ ಮಿಸ್ಸಿಂಗ್ ಆಗಿದ್ದ ಜಮಖಂಡಿ ವ್ಯಕ್ತಿ ಹುಬ್ಬಳ್ಳಿಯಲ್ಲಿ ಕೊನೆಗೂ ಪತ್ತೆ! ನಿಜವಾಯ್ತು ಸಿದ್ದು ‘ಭವಿಷ್ಯ’
ಬಾಗಲಕೋಟೆ: ಸಿದ್ದರಾಮೋತ್ಸವಕ್ಕೆ ತೆರಳಿ ನಾಪತ್ತೆಯಾಗಿದ್ದ ಬಾಗಲಕೋಟೆಯ ಗಿರಿಮಲ್ಲ ಖಂಡೇಕರ್ ಎಂಬುವವರು ಕೊನೆಗೂ ಒಂದೂವರೆ ತಿಂಗಳ ಬಳಿಕ ಕೊನೆಗೂ ಪತ್ತೆಯಾಗಿದ್ದಾರೆ. ಜಮಖಂಡಿ ತಾಲೂಕಿನ ಅಡಿಹುಡಿ ಗ್ರಾಮದ ನಿವಾಸಿ ಗಿರಿಮಲ್ಲ ಖಂಡೇಕರ್ ಹುಬ್ಬಳ್ಳಿಯಲ್ಲಿ ಪತ್ತೆಯಾಗಿದ್ದಾರೆ. ಕಳೆದ ಅಗಸ್ಟ್ 2 ರಂದು ಗ್ರಾಮಸ್ಥರ ಜತೆಗೆ ಇವರು ದಾವಣಗೆರೆಯಲ್ಲಿ ನಡೆದ ಸಿದ್ದರಾಮೋತ್ಸವ ಕಾರ್ಯಕ್ರಮಕ್ಕೆ ತೆರಳಿದ್ದರು. ಆದರೆ ಮನೆಗೆ ವಾಪಸಾಗಿರಲಿಲ್ಲ. ಅಡಿಹುಡಿ ಗ್ರಾಮದಿಂದ ಬಸ್ ಮೂಲಕ 50 ಜನ ತೆರಳಿದ್ದ ಇವರು ವಾಪಸಾಗದೇ ಮನೆಯವರೆಲ್ಲರೂ ಚಿಂತೆಗೀಡಾಗಿದ್ದರು. ‘ದುಡ್ಡಿನ ಆಮಿಷ …
Read More »