ಬೈಲಹೊಂಗಲ: ಶೈಕ್ಷಣಿಕ, ಆಧ್ಯಾತ್ಮಿಕ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ತನ್ನದೆಯಾದ ಕೊಡುಗೆ ನೀಡುವಲ್ಲಿ ಜಿಲ್ಲೆಯಲ್ಲಿ ಹೆಸರು ಮಾಡಿದ ಊರು ಇಂಚಲ. ಆದರೆ, ಮೂಲಸೌಕರ್ಯ ಮತ್ತು ಸ್ವಚ್ಛತೆಯಲ್ಲಿ ಇನ್ನೂ ಹಿಂದೆ ಬಿದ್ದಿದೆ. ಈ ಗ್ರಾಮದಲ್ಲಿ 10 ಸಾವಿರ ಜನಸಂಖ್ಯೆ ಇದೆ. 300ಕ್ಕೂ ಅಧಿಕ ಶಿಕ್ಷಕರು ಸರ್ಕಾರಿ, ಅನುದಾನಿತ ಶಾಲೆಗಳಲ್ಲಿ ಸೇವೆಯಲ್ಲಿದ್ದಾರೆ. ತಾಲ್ಲೂಕಿನಲ್ಲಿ ಅತಿ ಹೆಚ್ಚು ಶಿಕ್ಷಕರನ್ನು ಹೊಂದಿದ ಗ್ರಾಮ ಎಂಬ ಖ್ಯಾತಿ ದಶಕಗಳಿಂದಲೂ ಈ ಊರಿಗೆ ಇದೆ. ಶಿಕ್ಷಣ ಮಾತ್ರವಲ್ಲದೇ ಸರ್ಕಾರದ ಎಲ್ಲ …
Read More »Yearly Archives: 2022
ಯಶಸ್ಸು ಗಳಿಸಲು ಸರಳ ಶಿಸ್ತು ಸಾಕು’
ಬೆಳಗಾವಿ: ಯಶಸ್ಸು ಎನ್ನುವುದು ಕೆಲವು ಸರಳ ಶಿಸ್ತುಗಳಿಗಿಂತ ಕೂಡಿರುತ್ತದೆ. ಅದು ಹೆಚ್ಚೇನೂ ಇಲ್ಲ, ಪ್ರತಿದಿನ ಅಭ್ಯಾಸ ಹಾಗೂ ಸತತ ಪ್ರಯತ್ನದ ಫಲವಾಗಿ ಅದನ್ನು ಗಳಿಸಲು ಸಾಧ್ಯವೆಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಎಂಬಿಎ ವಿಭಾಗದ ಅಧ್ಯಕ್ಷ ಪ್ರೊ.ತ್ಯಾಗರಾಜ ಹೇಳಿದರು. ಕೆಎಲ್‍ಇ ಸಂಸ್ಥೆಯ ಬಿ.ವಿ. ಬೆಲ್ಲದ ಕಾನೂನು ಮಹಾವಿದ್ಯಾಲಯದಲ್ಲಿ 2021-2022ನೇ ಸಾಲಿನ ಅಂತಿಮ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಹಾಗೂ ಕ್ರೀಡಾ- ಸಾಂಸ್ಕೃತಿಕ ಚಟುವಟಿಕೆಗಳ ವಾರ್ಷಿಕೋತ್ಸವ ಸಮಾರಂಭದಲ್ಲಿ ಮಂಗಳವಾರ ಮುಖ್ಯ ಅತಿಥಿಯಾಗಿ ಮಾತನಾಡಿದರು. …
Read More »ಕೇಂದ್ರ ಸರ್ಕಾರದ ಒತ್ತಾಯ ಪೂರ್ವಕ ಹಿಂದಿ ದಿವಸ ವಿರೋಧಿಸಿ ಇಂದು ಕರವೇ ಪ್ರೊಟೆಸ್ಟ್ :ದೀಪಕ ಗುಡಗನಟ್ಟಿ
ಕೇಂದ್ರ ಸರ್ಕಾರ ಒತ್ತಾಯ ಪೂರ್ವಕವಾಗಿ ಹಿಂದಿ ಭಾಷೆಯನ್ನು ಹೇರಲು, ಹಿಂದಿ ದಿವಸ ಆಚರಣೆ ಮಾಡುತ್ತಿರುವದನ್ನು ವಿರೋಧಿಸಿ,ಹಿಂದಿ ದಿವಸ ಆಚರಣೆಯನ್ನು ಸ್ಥಗಿತಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ, ನಾಳೆ ಬುಧವಾರ ದಿನಾಂಕ 14-9-2022 ರಂದು ಮಧ್ಯಾಹ್ನ 12 ಗಂಟೆಗೆ ಬೆಳಗಾವಿಯ ರೇಲ್ವೆ ನಿಲ್ಧಾಣ ವೃತ್ತದಲ್ಲಿ ಪ್ರತಿಭಟನೆ ನಡೆಸಲಿದೆ. ರೇಲ್ವೆ ನಿಲ್ಧಾಣದ ವೃತ್ತದಿಂದ ರೇಲ್ವೆ ನಿಲ್ದಾಣದ ಕಚೇರಿಯವರೆಗೆ ಪ್ರತಿಭಟನಾ ರ್ಯಾಲಿ ನಡೆಯಲಿದೆ. ಮಾದ್ಯಮ ಪ್ರತಿನಿಧಿಗಳು ಆಗಮಿಸಬೇಕೆಂದು ಕೋರುತ್ತೇನೆ.
Read More »ಬಣ್ಣ ಹಚ್ಚಿದ ಇನ್ಸ್ಪೆಕ್ಟರ್ ಕಾಲಿಮಿರ್ಚಿ; ಖಡಕ್ ಡ್ಯೂಟಿಗೂ ಸೈ, ಬಯಲಾಟಕ್ಕೂ ಜೈ
ಹುಬ್ಬಳ್ಳಿ: ಪೊಲೀಸ್ ಇಲಾಖೆ (Police Department) ಅಂದ್ರೆ ಸದಾ ಒತ್ತಡದ ಕೆಲಸ. ಒಂದಷ್ಟು ನಿದ್ದೆ ಮಾಡೋಕೆ ಟೈಮ್ ಸಿಕ್ಕರೂ ಸಾಕು ಅನ್ನೋ ಅಧಿಕಾರಿಗಳಿದ್ದಾರೆ. ಹೀಗಿರುವಾಗ ಇಲ್ಲೊಬ್ಬ ಅಧಿಕಾರಿ ಡ್ಯೂಟಿಗೂ ಸೈ, ಬಯಲಾಟಕ್ಕೂ (Bayalata) ಜೈ ಅಂತಿದಾರೆ. ಅದರಲ್ಲಿಯೂ ಹುಬ್ಬಳ್ಳಿಯ ಗೋಕುಲ್ ರೋಡ್ ಪೊಲೀಸ್ ಠಾಣೆ (Gokul Road Police Station) ಅಂದ್ರೆ ಅದರ ಕಥೆ ಹೇಳುವಂತೆಯೇ ಇಲ್ಲ. ಸದಾ ಕರ್ತವ್ಯ ನಿರತವಾಗಿರೋ ಅನಿವಾರ್ಯತೆ ಇರೋ ಈ ಠಾಣೆಯಲ್ಲಿ ಕೆಲಸ ಮಾಡುತ್ತಲೇ …
Read More »ಬಲವಂತದ ಹಿಂದಿ ದಿವಸ್ ಆಚರಣೆ ವಿರೋಧಿಸಿ ಇಂದು ಜೆಡಿಎಸ್ ಪ್ರತಿಭಟನೆ
ಹಿಂದಿ ದಿವಸ್ (Hindi Divas) ವಿರೋಧಿಸಿ ಇಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ (JDS State President CM Ibrahim) ಅವರ ನೇತೃತ್ವದಲ್ಲಿ ಪ್ರತಿಭಟನೆ (Protest) ನಡೆಯಲಿದೆ. ಬಲವಂತದ ಹಿಂದಿ ದಿವಸ್ ಆಚರಣೆ ವಿರೋಧಿಸಿ ಇಂದು ಜೆಡಿಎಸ್ ಪ್ರತಿಭಟನೆ (JDS Protest) ಮಾಡಲಿದ್ದು, ರಾಜ್ಯ ಜೆಡಿಎಸ್ ಕಚೇರಿಯ ಆವರಣದಲ್ಲಿ ಹಿಂದಿ ದಿವಸ್ ಆಚರಣೆ ವಿರೋಧಿಸಿ ಪ್ರತಿಭಟನೆ ಮಾಡಲಿದೆ. ಜೆಪಿ ಭವನದ ಮುಂಭಾಗದಲ್ಲಿ ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರಗಳ (State And …
Read More »ಆಲಮಟ್ಟಿ ಜಲಾಶಯದಿಂದ ಅಪಾರ ನೀರು ಬಿಡುಗಡೆ
ಮಹಾರಾಷ್ಟ್ರದ ಕೃಷ್ಣಾ ಕಣಿವೆಯಲ್ಲಿ ಸುರಿಯುತ್ತಿರುವ ಮಳೆ ಹಾಗೂ ಘಟಪ್ರಭಾದಿಂದ ಹೆಚ್ಚು ನೀರು ಹರಿದು ಬರುತ್ತಿರುವ ಕಾರಣ ವಿಜಯಪುರ ಜಿಲ್ಲೆಯ ಆಲಮಟ್ಟಿಯ ಲಾಲ್ ಬಹದ್ದೂರ್ ಶಾಸ್ತ್ರಿ ಸಾಗರಕ್ಕೆ ಅಪಾರಪ್ರಮಾಣದ ನೀರು ಹರಿದುಬರುತ್ತಿದೆ. ಜಲಾಶಯದ 26 ಕ್ರಸ್ಟ್ ಗೇಟ್ಗಳ ಮೂಲಕ ಸೋಮವಾರ ಸಂಜೆಯಿಂದ 1,25000 ಕ್ಯುಸೆಕ್ ನೀರನ್ನು ನದಿ ತಳಪಾತ್ರಕ್ಕೆ ಹರಿಸಲಾಗುತ್ತಿದೆ. ಕಳೆದ 20 ದಿನಗಳಿಂದ ಶಾಂತವಾಗಿದ್ದ ಕೃಷ್ಣಾನದಿಯಲ್ಲಿ ಏಕಾಏಕಿ ಪ್ರವಾಹ ಉಂಟಾಗಿದ್ದು. ಇದು ತಾತ್ಕಾಲಿ ಎನ್ನಲಾಗುತ್ತಿದೆ. ನಿನ್ನೆ ಬೆಳಗ್ಗೆ 16 …
Read More »ಸಿದ್ದಾರ್ಥ ಹೆಗ್ಡೆ ಕನಸಿನ ಕಾಫಿ ಡೇ ಸಾಲ ತಗ್ಗಿಸಿದ ಗಟ್ಟಿಗಿತ್ತಿ ಮಾಳವಿಕಾ
ಕೆಫೆ ಕಾಫಿ ಡೇ ಸಂಸ್ಥಾಪಕ, ಮಾಲೀಕ ವಿಜಿ ಸಿದ್ದಾರ್ಥ ಅಕಾಲಿಕ ಮರಣದ ಬಳಿಕ ಕಾಫಿ ಡೇ ಸಂಸ್ಥೆಯ ಮಾರುಕಟ್ಟೆ ಮೌಲ್ಯ ದಿನದಿನಕ್ಕೆ ಕುಸಿಯುತ್ತಿದೆ, ಷೇರುಪೇಟೆಯಲ್ಲಿ ಕಾಫಿ ಡೇ ಷೇರುಗಳು ನೆಲಕಚ್ಚಿವೆ ಎಂಬ ಕಹಿ ಸುದ್ದಿ ನಡುವೆ, ಸಾಲದ ಹೊರೆ ತಗ್ಗಿರುವ ಸಿಹಿ ಸುದ್ದಿ ಬಂದಿದೆ. ವಿಜಿ ಸಿದ್ಧಾರ್ಥ ಅವರು ಸ್ಥಾಪಿಸಿದ್ಧ ಕಾಫಿ ಡೇ ಗ್ಲೋಬಲ್ ಲಿಮಿಟೆಡ್ ಮತ್ತು ಅಮಲ್ಗಮೇಟೆಡ್ ಬೀನ್ ಕಾಫಿ ಟ್ರೇಡಿಂಗ್ ಕೋ ಲಿಮಿಟೆಡ್‌ನ ನಾನ್ ಎಕ್ಸಿಕ್ಯೂಟಿವ್ …
Read More »ಸಹ ಶಿಕ್ಷಕರ ನೇಮಕಾತಿ ಅಕ್ರಮ ಬಗೆದಷ್ಟೂ ಆಳ. ಬೇನಾಮಿಗಳಿಗೆ ಟೀಚರ್ ಭಾಗ್ಯ!
ಬೆಂಗಳೂರು :ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದ ಅವಧಿಯಲ್ಲಿ ನಡೆದಿರುವ ಶಿಕ್ಷಕರ ನೇಮಕಾತಿ ಹಗರಣದ ಸಿಐಡಿ ತನಿಖೆಯಲ್ಲಿ ಮತ್ತಷ್ಟು ರೋಚಕ ಸಂಗತಿಗಳು ಬಯಲಾಗಿವೆ. ಮುಖ್ಯ ಆಯ್ಕೆ ಪಟ್ಟಿಯಲ್ಲಿ ಸ್ಥಾನ ಪಡೆದು ಕರ್ತವ್ಯಕ್ಕೆ ಹಾಜರಾಗದ ಅಭ್ಯರ್ಥಿಗಳ ಬದಲಿಗೆ ಅದೇ ಹೆಸರಿನ, ಪರೀಕ್ಷೆಯನ್ನೇ ಬರೆಯದ, ಅರ್ಹತೆಯೂ ಇಲ್ಲದ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ಪ್ರತಿ ಕೊಟ್ಟಿರುವುದು ತನಿಖೆಯಲ್ಲಿ ದೃಢಪಟ್ಟಿದೆ. 2012-13 ಹಾಗೂ 2014-15ನೇ ಸಾಲಿನಲ್ಲಿ ಸರ್ಕಾರಿ ಪ್ರೌಢಶಾಲೆಗಳ ಗ್ರೇಡ್-2 ಸಹಶಿಕ್ಷಕರು ಹಾಗೂ ಗ್ರೇಡ್-1 ದೈಹಿಕ ಶಿಕ್ಷಣ …
Read More »ಅಕ್ಟೋಬರ್ 9 ರಂದು ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ: ಅಶೋಕ ದುಡಗುಂಟಿ ಸಭೆ
ಅಕ್ಟೋಬರ್ 9 ರಂದು ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅದ್ಧೂರಿಯಾಗಿ ಆಚರಣೆ ಮಾಡಲು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಸಭೆಯಲ್ಲಿ ತೀರ್ಮನಿಸಲಾಯಿತು. ಬೆಳಗಾವಿ ಜಿಲ್ಲೆಯಲ್ಲಿ ಪ್ರತೀವರ್ಷ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಅತ್ಯಂತ ಅದ್ಧೂರಿಯಾಗಿ ಆಚರಣೆ ಮಾಡುತ್ತಾ ಬಂದಿದ್ದಾರೆ. ಆದರೆ ಕಳೆದ ಮೂರು ವರ್ಷಗಳಿಂದ ಈ ಆಚರಣೆಗೆ ಕೋವಿಡ್‍ನಿಂದಾಗಿ ಬ್ರೇಕ್ ಹಾಕಲಾಗಿತ್ತು. ಆದರೆ ಈ ಬಾರಿ ಎಲ್ಲಾ ಸಮುದಾಯಗಳ ಮುಖಂಡರು ಅದ್ಧೂರಿಯಾಗಿ ಆಚರಣೆ ಮಾಡಲು ನಿರ್ಧಾರ ಮಾಡಿದ್ದಾರೆ. ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅಪರ ಜಿಲ್ಲಾಧಿಕಾರಿ …
Read More »ಗಣೇಶ ಹುಕ್ಕೇರಿ, ಪ್ರಕಾಶ ಹುಕ್ಕೇರಿ ನೇತೃತ್ವದಲ್ಲಿ ಸರಳವಾಗಿ ಜರುಗಿದ ಗಣಹೋಮ
ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಪಟ್ಟಣದಲ್ಲಿ ಪ್ರತಿ ವರ್ಷ ಅದ್ದೂರಿಯಾಗಿ ಜರುಗುತ್ತಿದ್ದ ಗಣಹೋಮವು ಈ ವರ್ಷ ಎಂಎಲ್ಸಿ ಪ್ರಕಾಶ ಹುಕ್ಕೇರಿಯವರ ಸಹೋದರ ಕೇದಾರಿ ಹುಕ್ಕೇರಿ ನಿಧನ ಹೊಂದಿದ ಹಿನ್ನಲೆಯಲ್ಲಿ ಈ ಬಾರಿ ಸರಳವಾಗಿ ಗಣಹೋಮ ಜರುಗಿತು. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಪಟ್ಟಣದಲ್ಲಿ ಹನುಮಾನ ಗಣೇಶ ಮಂಡಳ ವತಿಯಿಂದ ಶಾಸಕ ಗಣೇಶ ಹುಕ್ಕೇರಿ ಹಾಗೂ ಎಂಎಲ್ಸಿ ಪ್ರಕಾಶ ಹುಕ್ಕೇರಿ ನೇತೃತ್ವದಲ್ಲಿ ಪ್ರತಿವರ್ಷ ಗಣಹೋಮ ಅದ್ದೂರಿಯಾಗಿ ಜರಗುತಿತ್ತ. ಆದರೆ ಈ ಬಾರಿ …
Read More »