ಬೆಳಗಾವಿ ಜಿಲ್ಲೆಯಲ್ಲಿ ಖಾಸಗಿ ಸಂಚಾರ ಸಾರಿಗೆ ವಾಹನಗಳಲ್ಲಿ ಪ್ರಯಾಣಿಕರನ್ನು ಕುರಿ ಮಂದೆಯಂತೆ ತುಂಬುವುದರ ವಿರುದ್ಧ ಪೆÇಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಕೆಲ ಖಾಸಗಿ ವಾಹನದವರು ಅನುಮತಿಗಿಂತ ದುಪ್ಪಟ್ಟು ಪ್ರಯಾಣಿಕರನ್ನು ತುಂಬುತ್ತಾರೆ. ಇದರಿಂದ ಅಪಘಾತಗಳು ಸಂಭವಿಸಿ ಜೀವ ಹಾನಿಯಾಗಿರುವ ಸಾಕಷ್ಟು ಉದಾಹರಣೆಗಳು ನಮ್ಮ ಕಣ್ಣ ಮುಂದೆಯೇ ಇವೆ. ಹೀಗಾಗಿ ಮಂಗಳವಾರ ಪೆÇಲೀಸರು ಅನುಮತಿಗಿಂತ ಹೆಚ್ಚು ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ 45 ವಾಹನಗಳನ್ನು ಹಿಡಿದು 9000 ರೂ. ದಂಡ ವಿಧಿಸಿದ್ದಾರೆ. ಅಲ್ಲದೇ ಅನುಮತಿಗಿಂತ ಹೆಚ್ಚು …
Read More »Yearly Archives: 2022
ಅಕ್ರಮ ಸಂಬಂಧಕ್ಕೆ ಬೇಸತ್ತು ತವರು ಸೇರಿದರೂ ಬಿಡದ ಅಥಣಿ ಪತಿ! ಎರಡು ಸುತ್ತು ಗುಂಡು ಹಾರಿಸಿದ ಭೂಪ.
ಚಿಕ್ಕೋಡಿ: ಗಂಡನ ಅನೈತಿಕ ಸಂಬಂಧದಿಂದ ಬೇಸತ್ತು ತವರು ಸೇರಿದ ಪತ್ನಿಯ ಮೇಲೆ ಆತ ಗುಂಡು ಹಾರಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ನಡೆದಿದೆ. ತವರು ಮನೆಯಿಂದ ವಾಪಸ್ ಬರುವಂತೆ ಪತ್ನಿಯ ಮೇಲೆ ಹಲ್ಲೆ ಮಾಡಿ ಅವರ ಮೇಲೆ ಗುಂಡು ಹಾರಿಸಿರುವ ಆರೋಪವನ್ನು ಶಿವಾನಂದ ಕಾಗಲೆ (4೦) ಎದುರಿಸುತ್ತಿದ್ದಾನೆ. ಪತ್ನಿ ಪ್ರೀತಿ ಗಂಡನ ಅನೈತಿಕ ಸಂಬಂಧದಿಂದ ಬೇಸತ್ತು ತವರು ಮನೆ ಸೇರಿದ್ದರು. ಅವರ ಮನೆಗೆ ಹೋಗಿದ್ದ ಶಿವಾನಂದ ಕಾಗಲೆ, ವಾಪಸಾಗುವಂತೆ ಪತ್ನಿಯ …
Read More »ಮತ್ತೆ ಮುನ್ನೆಲೆಗೆ ಬಂದ ಸಿದ್ದು ದುಬಾರಿ ವಾಚ್ ವಿವಾದ
ಬೆಂಗಳೂರು,ಸೆ.13- ಪಿಎಸ್‍ಐ ನೇಮಕಾತಿ ಅಕ್ರಮ ಹಾಗೂ 40% ಕಮೀಷನ್ ಆರೋಪ ಮಾಡುತ್ತಿರುವ ಪ್ರತಿಪಕ್ಷಗಳ ಆರೋಪಕ್ಕೆ ತಿರುಗೇಟು ನೀಡಲು ಮುಂದಾಗಿರುವ ಬಿಜೆಪಿ ಮತ್ತೆ ಹೊಬ್ಲೆಟ್ ವಾಚ್ ವಿವಾದವನ್ನು ಮುಂದಿಡಲು ತೀರ್ಮಾನಿಸಿದೆ. ಪ್ರವಾಹ ಭ್ರಷ್ಟಾಚಾರ ಇನ್ನಿತರೆ ವಿಷಗಳನ್ನು ಮುಂದಿಟ್ಟುಕೊಂಡು ಸರ್ಕಾರವನ್ನು ಹಣಿಯಲು ಯತ್ನಿಸುತ್ತಿರುವ ವಿಪಕ್ಷ ಕಾಂಗ್ರೆಸ್‍ಗೆ ಮಾಜಿ ಸಿಎಂ ಸಿದ್ದರಾಮಯ್ಯ ಅವರ ದುಬಾರಿ ಹೊಬ್ಲೊಟ್ ಪ್ರಕರಣವನ್ನು ಲೋಕಾಯುಕ್ತ ತನಿಖೆಗೆ ವಹಿಸುವಂತೆ ಪಟ್ಟುಹಿಡಿದು ಒತ್ತಾಯಿಸಲಿದೆ. 2016ರಲ್ಲಿ ಸಿದ್ದರಾಮಯ್ಯ ಸಿಎಂ ಆಗಿದ್ದ ಸಂದರ್ಭದಲ್ಲಿ ರಾಜಕೀಯ …
Read More »ನಲಪಾಡ್ ಅಕಾಡೆಮಿಯ ತೆರವು ಕಾರ್ಯ ಸ್ಥಗಿತ : ಜೆಸಿಬಿ ಗೇಟ್ ಟಚ್ ಮಾಡುತ್ತಿದ್ದಂತೆ ಹೈಡ್ರಾಮ
ಬೆಂಗಳೂರು : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ರಾಜಕಾಲುವೆಗಳನ್ನು ಒತ್ತುವರಿ ಎರಡನೇ ದಿನವೂ ಬೃಹತ್ ಕಟ್ಟಡಗಳನ್ನು ತೆರವು ಕಾರ್ಯ ನಡೆಸಲಾಗುತ್ತಿದೆ. ಈ ಬೆನ್ನಲ್ಲೇ ಇದೀಗ ನಲಪಾಡ್ ಅಕಾಡೆಮಿಯ ತೆರವು ಕಾರ್ಯಕ್ಕಾಗಿ ಜೆಸಿಬಿ ಗೇಟ್ ಟಚ್ ಮಾಡುತ್ತಿದ್ದಂತೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದು, ಭಾರೀ ಹೈಡ್ರಾಮಕ್ಕೆ ಕಾರಣವಾಗಿದೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ರಾಜಕಾಲುವೆಗಳನ್ನು ಒತ್ತುವರಿ ಮಾಡಿಕೊಂಡಿರುವ ಪ್ರದೇಶಗಳನ್ನು ಗುರುತಿಸಿ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ. ಈ ಬೆನ್ನಲ್ಲೇ ಇದೀಗ …
Read More »ಗೋವಾ ಮದ್ಯ ಅಕ್ರಮ ಸಾಗಾಟ: ಕಾರು ಬಿಟ್ಟು ಪರಾರಿಯಾದ ಚಾಲಕ
ಕಾರವಾರ (ಉತ್ತರಕನ್ನಡ): ಅಕ್ರಮವಾಗಿ ಕಾರಿನಲ್ಲಿ ಗೋವಾ ಮದ್ಯ ಸಾಗಾಟ ಮಾಡುತ್ತಿದ್ದ ಆರೋಪಿಯೊಬ್ಬ, ಪೊಲೀಸರು ತಪಾಸಣೆ ಮಾಡುತ್ತಿರುವುದನ್ನು ಕಂಡು ಕಾರನ್ನು ಹೆದ್ದಾರಿಯಲ್ಲಿಯೇ ಬಿಟ್ಟು ಪರಾರಿಯಾಗಿದ್ದಾನೆ. ಈ ಘಟನೆ ತಾಲೂಕಿನ ಸದಾಶಿವಗಡದ ಬಳಿ ಸೋಮವಾರ ತಡರಾತ್ರಿ ನಡೆದಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ್ ಪೆನ್ನೇಕರ್ ಅವರಿಗೆ ಬಂದ ಮಾಹಿತಿಯಂತೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಸ್. ಬದರಿನಾಥ ಅವರ ಮಾರ್ಗದರ್ಶನದಲ್ಲಿ ಜಿಲ್ಲಾ ಪೊಲೀಸ್ ವಿಶೇಷ ವಿಭಾಗದ ಪಿಎಸ್ಐ ಪ್ರೇಮನಗೌಡ ಪಾಟೀಲ್, ಹೆಡ್ ಕಾನ್ಸ್ಟೇಬಲ್ ರಾಘವೇಂದ್ರ …
Read More »ಬೆಳಗಾವಿ ಜಿಲ್ಲೆಯಾಧ್ಯಂತ ಸಂಚಾರಿ ನಿಯಮಗಳ ಕುರಿತು ವಾಹನ ಸವಾರರಿಗೆ ಪೊಲೀಸರು ಜಾಗೃತಿ
ಬೆಳಗಾವಿ ಜಿಲ್ಲೆಯಾಧ್ಯಂತ ಸಂಚಾರಿ ನಿಯಮಗಳ ಕುರಿತು ವಾಹನ ಸವಾರರಿಗೆ ಪೊಲೀಸರು ಜಾಗೃತಿ ಮೂಡಿಸುತ್ತಿದ್ದಾರೆ. ರಸ್ತೆ ಸುರಕ್ಷತಾ ಸಪ್ತಾಹ ನಿಮಿತ್ಯ ನಿಪ್ಪಾಣಿಯ ಅಶೋಕ ನಗರದ ಎಸ್‍ಬಿಐ ಬ್ಯಾಂಕ್ ಬಳಿ, ಅಥಣಿ ಪಟ್ಟಣ, ಗೋಕಾಕ್ ಪಟ್ಟಣ ಸೇರಿ ಇನ್ನಿತರ ಕಡೆಗಳಲ್ಲಿ ಆಯಾ ಠಾಣೆಗಳ ಪೊಲೀಸರು ಸಂಚಾರಿ ನಿಯಮಗಳ ಕುರಿತು ಆಟೋ ಚಾಲಕರು, ಟ್ಯಾಕ್ಸಿ ಚಾಲಕರು, ಬೈಕ್ ಸವಾರರು ಹಾಗೂ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು. ಸಂಚಾರಿ ನಿಯಮಗಳನ್ನು ಕಡ್ಡಾಯವಾಗಿ ಎಲ್ಲರೂ ಪಾಲಿಸಬೇಕು.ಈ ನಿಯಮಗಳನ್ನು ಪಾಲನೆ …
Read More »ವಿಜಯಪುರ ನಗರದಲ್ಲಿ ಮಳೆಯಿಂದ ಆವಾಂತರ: ಹಾನಿಗೀಡಾದ ಪ್ರದೇಶಕ್ಕೆ ಶಾಸಕ ಚವ್ಹಾಣ ಭೇಟಿ
ಕಳೆದ ಎರಡು ದಿನಗಳಿಂದ ವಿಜಯಪುರ ನಗರದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ಹಲವು ಆವಾಂತರವನ್ನೇ ಸೃಷ್ಟಿ ಮಾಡಿದೆ, ಹಲವು ಮನೆಗಳಿಗೆ ನೀರು ನುಗ್ಗಿ ರಾತ್ರೀ ಇಡೀ ಜಾಗರಣೆ ಮಾಡುವಂತಹ ಪರಿಸ್ಥಿತಿ ಕೂಡ ಕೆಲವೆಡೆ ನಿರ್ಮಾಣವಾದರೆ ಹಲವು ಮನೆಗಳು ನೆಲಕ್ಕುರುಳಿವೆ. ಹೌದು ಕಳೆದಎರಡು ದಿನಗಳಿಂದ ಸುರಿಯುತ್ತಿರುವ ಮಳೆಯ ಪರಿಣಾಮ ವಿಜಯಪುರ ನಗರದಲ್ಲಿ ಹಲವು ಆವಾಂತರಕ್ಕೆ ಕಾರಣಾವಾಗಿದೆ. ನಿನ್ಮೆ ಅಂಜೆ ಸುರಿದ ಮಳೆಯಿಂದಾಗಿ ನಗರದ ಕೆ ಸಿ ಮಾರುಕಟ್ಟೆಯಲ್ಲಿ ತಳ್ಳು ಗಾಡಿ ವ್ಯಾಪಾರಸ್ಥರು ಹಾಗೂ …
Read More »ಅಭಿವೃದ್ಧಿ ಕಾಮಗಾರಿಗಳನ್ನು ವೀಕ್ಷಣೆ ಮಾಡಲು ಸಂಸದೆ ಮಂಗಳಾ ಅಂಗಡಿ ರವರು ಬೆಳಗಾವಿಯ ರೈಲು ನಿಲ್ದಾಣಕ್ಕೆ ಭೇಟಿ
ಬೆಳಗಾವಿ ನಗರದ ರೈಲು ನಿಲ್ದಾಣದಲ್ಲಿ ಆಗುತ್ತಿರುವ ವಿವಿಧ ಹಂತಗಳ ಅಭಿವೃದ್ಧಿ ಕಾಮಗಾರಿಗಳನ್ನು ವೀಕ್ಷಣೆ ಮಾಡಲು ಸಂಸದೆ ಮಂಗಳಾ ಅಂಗಡಿ ರವರು ಬೆಳಗಾವಿಯ ರೈಲು ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹೌದು ಬೆಳಗಾವಿಯ ರೈಲು ನಿಲ್ದಾಣ ಕಾಮಗಾರಿಯು ನಡೆದಿರುವ ಸ್ಥಳಕ್ಕೆ ಇಂದು ಮಂಗಳವಾರ ಭೇಟಿ ನೀಡಿದ ಸಂಸದೆ ಮಂಗಳಾ ಅಂಗಡಿರವರು ಇಂದು ಮಂಗಳವಾರ ರೈಲು ನಿಲ್ದಾಣದಲ್ಲಿ ಮಾಡಲಾಗುತ್ತಿರುವ ವಿವಿಧ ಕಾಮಗಾರಿಗಳನ್ನು ಕುರಿತಂತೆ ಪರಿಶೀಲನೆ ನಡೆಸಿದರು. ಮುಖ್ಯ ಪ್ರವೇಶ ದ್ವಾರದ ಮೂಲಕ …
Read More »ಪ್ರವಾಹ ಪರಿಸ್ಥಿತಿ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಕಾರಜೋಳ ನಿರ್ಲಕ್ಷ್ಯ: ಸತೀಶ ಜಾರಕಿಹೊಳಿ
ಬೆಳಗಾವಿ ಜಿಲ್ಲೆಯ ಪ್ರವಾಹ ಪರಿಸ್ಥಿತಿಯ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರು ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಅಪಾರ ಮಳೆಯಿಂದ ಜನತೆಗೆ ತೊಂದರೆ ಉಂಟಾಗುತ್ತಿದ್ದರೂ ಸರಿಯಾದ ಸ್ಪಂದನೆ ಸಿಗುತ್ತಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಸಚಿವ ಗೋವಿಂದ ಕಾರಜೋಳ ವಿರುದ್ಧ ತೀವ್ರ ಅಸಮಾಧಾನ ಹೊರ ಹಾಕಿದ್ದಾರೆ. ಗೋಕಾಕ್‍ನ ಹಿಲ್ ಗಾರ್ಡನ್ ಕಚೇರಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಸತೀಶ ಜಾರಕಿಗಹೊಳಿ ಅವರು ಕಳೆದ ಭಾರೀ ಕೂಡ ಪ್ರವಾಹಕ್ಕೆ ಸರ್ಕಾರವಾಗಲಿ, ಸಚಿವರಾಗಲಿ ಜನತೆಗೆ ಸ್ಪಂದನೆ ನೀಡಲಿಲ್ಲ. …
Read More »ರಾಜ ಕಾಲುವೆ ಒತ್ತುವರಿ ತೆರವಿನಲ್ಲಿ ಯಾವುದೇ ತಾರತಮ್ಯವಿಲ್ಲ; ಸಚಿವ ಆರ್. ಅಶೋಕ್ ಖಡಕ್ ನುಡಿ
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ರಾಜ ಕಾಲುವೆ ಒತ್ತುವರಿ ಮಾಡಿಕೊಂಡು ಕಟ್ಟಿಕೊಂಡಿರುವ ಕಟ್ಟಡಗಳನ್ನು ತೆರವುಗೊಳಿಸಲಾಗುತ್ತಿದೆ. ಸೋಮವಾರದಿಂದಲೇ ಬುಲ್ಡೋಜರ್, ಜೆಸಿಬಿ ಅಬ್ಬರಿಸುತ್ತಿದ್ದು ಇಂದೂ ಕೂಡ ಕಾರ್ಯಾಚರಣೆ ಮುಂದುವರೆದಿದೆ. ನೂರಾರು ಕಟ್ಟಡಗಳು ರಾಜಕಾಲುವೆ ಒತ್ತುವರಿ ಮಾಡಿಕೊಂಡು ನಿರ್ಮಾಣವಾಗಿವೆ ಎನ್ನಲಾಗಿದ್ದು, ಇವುಗಳಲ್ಲಿ ಬಹಳಷ್ಟು ಕಟ್ಟಡಗಳು ಪ್ರಭಾವಿ ವ್ಯಕ್ತಿಗಳಿಗೆ ಸೇರಿವೆ ಎನ್ನಲಾಗಿದೆ. ಹೀಗಾಗಿ ಜನಸಾಮಾನ್ಯರಿಗೆ ಮಾತ್ರ ಈ ತೆರವು ಕಾರ್ಯಾಚರಣೆ ಅನ್ವಯ ಎಂಬ ಆರೋಪ ಕೇಳಿ ಬರುತ್ತಿದ್ದರ ಮಧ್ಯೆ ಸಚಿವ ಅಶೋಕ್ ಮಹತ್ವದ ಹೇಳಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ …
Read More »