ಬೆಳಗಾವಿ:ಬೆಳಗಾವಿಯಲ್ಲಿ ಭೀಕರ ಮಳೆ ಯಿಂದಾಗಿ ಸುಮಾರು ಕಡೆ ಹಾನಿ ಗಳಾಗಿವೆ ಅದೇರೀತಿ ಕೆ ಕೆ ಕೊಪ್ಪ ಗ್ರಾಮದ ತುಕಾರಾಮ ಸಿದ್ದಪ್ಪ ಗೊಡಲ ಕುಂದರಗಿ ಅವರ್ ಮನೆ ಕೂಡ ಬಿದ್ದು ಹೋಗಿದೆ. ಮನೆ ಸಂಪೂರ್ಣ ಬಿದ್ದಿದ್ದು ಮನೆಯ ಎಲ್ಲ ಸಾಮಾನುಗಳು ಜಖಂ ಆಗಿವೆ ಅದೃಷ್ಟವತಾ ಯಾವುದೇ ಪ್ರಾಣ ಹಾನಿ ಆಗಿಲ್ಲ. ಮನೆ ಬಿದ್ದು ಎರಡು ದಿನ ಕಳೆದರೂ ಯಾವುದೇ ಸಂಭಂದ ಪಟ್ಟ ಅಧಿಕಾರಿಗಳು ಇದರ ಬಗ್ಗೆ ಕೊಂಚಿತ್ತು ಕಾಳಜಿ ಮಾಡಿಲ್ಲ. ಸಂಬಂಧ …
Read More »Yearly Archives: 2022
ಪುರುಷರು ಹೆಚ್ಚಾಗಿದ್ದರೂ ಮಹಿಳೆಯರಿಗೆ ವಾರ್ಡ್ ಮೀಸಲಾತಿ: ಸರ್ಕಾರದ ನಿಲುವು ಕೇಳಿದ ಹೈಕೋರ್ಟ್
ಬೆಂಗಳೂರು: ಬಿಬಿಎಂಪಿಯ 243 ವಾರ್ಡ್‌ಗಳಿಗೆ ನಿಗದಿ ಪಡಿಸಿರುವ ಮೀಸಲಾತಿ ಮರು ಪರಿಶೀಲನೆ ನಡೆಸುವ ಕುರಿತು ಸರ್ಕಾರದ ನಿಲುವು ತಿಳಿಸುವಂತೆ ಹೈಕೋರ್ಟ್ ಸರ್ಕಾರಕ್ಕೆ ಕೇಳಿದೆ. ಈಜಿಪುರದ ಕೆ.ಮಹದೇವ ಮತ್ತಿತರರು ಸಲ್ಲಿಸಿರುವ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್ ಚಂದನಗೌಡರ್ ಅವರಿದ್ದ ಏಕಸದಸ್ಯ ಪೀಠದ ಮುಂದೆ ಈ ಸೂಚನೆ ನೀಡಿತು. ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಕೆಲವು ವಿಧಾನಸಭಾ ಕ್ಷೇತ್ರದ ವಾರ್ಡ್‌ಗಳಲ್ಲಿ ಮಹಿಳೆಯರಿಗೆ ಮಾತ್ರ ಮೀಸಲಿರಿಸಲಾಗಿದೆ. ಪುರುಷರು ಹೆಚ್ಚಾಗಿದ್ದರೂ ಮಹಿಳೆಯರಿಗೇ ಮೀಸಲಿರಿಸಲಾಗಿದೆ. ಆ …
Read More »ಎಲ್ಲ ವಿ.ವಿ.ಗಳಲ್ಲಿ ಏಕರೂಪದ ಪಠ್ಯಕ್ರಮ: ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕುಲಪತಿ
ಬೆಳಗಾವಿ : ‘ರಾಜ್ಯದಲ್ಲಿ ಮೊದಲ ಬಾರಿ ರಾಷ್ಟ್ರೀಯ ಶಿಕ್ಷಣ ನೀತಿ(ಎನ್‌ಇಪಿ)ಯನ್ನು ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಅನುಷ್ಠಾನಕ್ಕೆ ತರಲಾಗಿದೆ. ಈಗ ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳಲ್ಲೂ ಏಕರೂಪದ ಪಠ್ಯಕ್ರಮವಿದೆ’ ಎಂದು ಕುಲಪತಿ ಪ್ರೊ.ಎಂ.ರಾಮಚಂದ್ರಗೌಡ ಹೇಳಿದರು. ಇಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಾನು 2019ರಲ್ಲಿ ಕುಲಪತಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಪಠ್ಯಕ್ರಮ ಪರಿಷ್ಕರಿಸಿದ್ದೆ. ಆಗ ಮೂರು ವರ್ಷಗಳಿಗೊಮ್ಮೆ ಸ್ನಾತಕೋತ್ತರ ಕೋರ್ಸ್‌ಗಳ ಪಠ್ಯಕ್ರಮ ಹಾಗೂ ಐದು ವರ್ಷಗಳಿಗೊಮ್ಮೆ ಸ್ನಾತಕ ಕೋರ್ಸ್‌ಗಳ ಪಠ್ಯಕ್ರಮ ಪರಿಷ್ಕರಣೆಗೆ ಅವಕಾಶವಿತ್ತು. ಎನ್‌ಇಪಿ …
Read More »ನಟ ರಮೇಶ್ ಅರವಿಂದ್ ಗೆ ಗೌರವ ಡಾಕ್ಟರೇಟ್ ಗೆ ಆಯ್ಕೆ
ರಮೇಶ್ ಅರವಿಂದ್ ಅಲ್ಲದೇ ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿರುವ ವಿ.ರವಿಚಂದರ್, ಧಾರ್ಮಿಕ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ಅಕ್ಕ ಅನ್ನಪೂರ್ಣ ತಾಯಿಗೆ ಗೌರವ ಡಾಕ್ಟರೇಟ್ ಪ್ರಶಸ್ತಿ ಘೋಷಿಸಲಾಗಿದ್ದು, ಸೆಪ್ಟೆಂಬರ್ 14ರಂದು ಬೆಂಗಳೂರಿನ ಸುವರ್ಣ ಸೌಧದಲ್ಲಿ ನಡೆಯಲಿರುವ ಘಟಿಕೋತ್ಸವದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ತಿಳಿಸಿದೆ. ಕನ್ನಡ ಚಿತ್ರರಂಗಕ್ಕೆ ಸಲ್ಲಿಸಿದ ಸೇವೆಯನ್ನು ಗುರುತಿಸಿ ಗೌರವ ಡಾಕ್ಟರೇಟ್ ಗೆ ಆಯ್ಕೆ ಮಾಡಲಾಗಿದೆ ಎಂದು ವಿವಿ ತಿಳಿಸಿದೆ. ವಿಶೇಷ ಅಂದರೆ ಮೊನ್ನೆಯಷ್ಟೇ ರಮೇಶ್ …
Read More »ಚಿತ್ತಾಪುರದ ಯುವಕ ಧಾರವಾಡದಲ್ಲಿ ನಿಗೂಢ ಕಣ್ಮರೆ: 40 ದಿನ ಕಳೆದರೂ ಸುಳಿವಿಲ್ಲ
ವಾಡಿ (ಚಿತ್ತಾಪುರ): ಪೊಲೀಸ್ ಹುದ್ದೆಗೇರುವ ಕನಸು ಕಟ್ಟಿಕೊಂಡು ಧಾರವಾಡ ನಗರದ ಕೋಚಿಂಗ್ ಸೆಂಟರ್ ಸೇರಿಕೊಂಡಿದ್ದ ಚಿತ್ತಾಪುರ ತಾಲೂಕಿನ ಇಂಗಳಗಿ ಗ್ರಾಮದ ಯುವಕನೋರ್ವ ನಿಗೂಢ ನಾಪತ್ತೆಯಾಗಿದ್ದು, ಕಳೆದ 40 ದಿನಗಳಿಂದ ಪೊಲೀಸರು ಹುಡುಕಾಟ ನಡೆಸಿದ್ದರೂ ಆತನ ಸುಳಿವು ಪತ್ತೆಯಾಗಿಲ್ಲ. ಕಾಗಿಣಾ ನದಿ ತೀರದ ಇಂಗಳಗಿ ಗ್ರಾಮದ ನಿವಾಸಿ ಸಾಬಣ್ಣ ಭಜಂತ್ರಿ (25) ಪೊಲೀಸ್ ಹುದ್ದೆಯ ಪರೀಕ್ಷೆ ಬರೆಯಲು ನಾಲ್ಕು ತಿಂಗಳ ಹಿಂದೆ ಧಾರವಾಡ ನಗರದ ಗುರುದೇವ ಕೋಚಿಂಗ್ ಕೇಂದ್ರ ಸೇರಿಕೊಂಡಿದ್ದ ಎನ್ನಲಾಗಿದ್ದು, …
Read More »ಘಟಪ್ರಭಾ, ಮಾರ್ಕಂಡೇಯ ಹಾಗೂ ಹಿರಣ್ಯಕೇಶಿ ನದಿಗಳ ನೀರು ಉಕ್ಕೇರಿದ ಪರಿಣಾಮ, 200ಕ್ಕೂ ಹೆಚ್ಚು ಮನೆಗಳ ಮುಂದೆ ಎರಡು ಅಡಿಯಷ್ಟು ನೀರು
ಗೋಕಾಕ (ಬೆಳಗಾವಿ ಜಿಲ್ಲೆ): ಘಟಪ್ರಭಾ, ಮಾರ್ಕಂಡೇಯ ಹಾಗೂ ಹಿರಣ್ಯಕೇಶಿ ನದಿಗಳ ನೀರು ಉಕ್ಕೇರಿದ ಪರಿಣಾಮ, ಗೋಕಾಕ ನಗರದ ಕೆಲವು ರಸ್ತೆಗಳಿಗೆ ನೀರು ನುಗ್ಗಿದೆ. 200ಕ್ಕೂ ಹೆಚ್ಚು ಮನೆಗಳ ಮುಂದೆ ಎರಡು ಅಡಿಯಷ್ಟು ನೀರು ಸಂಗ್ರಹಗೊಂಡಿದ್ದು, ಪ್ರವಾಹ ಪರಿಸ್ಥಿತಿ ತಲೆದೋರಿದೆ. ಎರಡು ದಿನಗಳಿಂದ ಘಟಪ್ರಭಾ ನದಿಗಳ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ರಾಜಾ ಲಖಮಗೌಡ ಜಲಾಶಯ (ಹಿಡಕಲ್) ದಿಂದ ಘಟಪ್ರಭಾ ನದಿಗೆ 28 ಸಾವಿರ ಕ್ಯುಸೆಕ್ ನೀರು ಬಿಡಲಾಗುತ್ತಿದೆ. ಈ …
Read More »2.70 ಕೋಟಿ ರೂ.ಲೂಟಿ ಮಾಡಿದ ಬ್ಯಾಂಕ್ ಸಹಾಯಕ ಮ್ಯಾನೇಜರ್ ನಾಪತ್ತೆ
ಕಾರವಾರ: ಜಿಲ್ಲೆಯ ಯಲ್ಲಾಪುರ ತಾಲೂಕಿನ ಯಲ್ಲಾಪುರದಲ್ಲಿನ ಬ್ಯಾಂಕ್ ಆಫ್ ಬರೋಡಾ ಶಾಖೆಯಲ್ಲಿನ ಸಹಾಯಕ ಮ್ಯಾನೇಜರ್ ಅಕ್ರಮವಾಗಿ 2.70 ಕೋಟಿ ರೂ.ಗಳನ್ನು ಲಪಟಾಯಿಸಿ ತನ್ನ ಪತ್ನಿ ಖಾತೆಗೆ ಜಮಾ ಮಾಡಿದ್ದ ಹಗರಣ ಸಂಬಂಧ ಪ್ರಕರಣ ದಾಖಲಾಗಿದೆ. ಸುಮನ್ ಪನ್ನೇಕರ್ ಹೇಳಿದ್ದಾರೆ. ನಗರದ ಎಸ್‌ಪಿ ಕಚೇರಿಯಲ್ಲಿ ಸೋಮವಾರ ಸುದ್ದಿಗಾರರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಅವರು ಯಲ್ಲಾಪುರದ ಬ್ಯಾಂಕ್ ಆಫ್ ಬರೋಡಾದಲ್ಲಿ ಅಸಿಸ್ಟೆಂಟ್ ಮ್ಯಾನೇಜರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಕುಮಾರ ಬೋನಲ್ ಬ್ಯಾಂಕ್ ನ ಕ್ಲರ್ಕ್ ಮತ್ತು …
Read More »ಸರ್ಕಾರಿ ಪ್ರೌಢಶಾಲೆಗಳಲ್ಲಿನ 2500 ಶಿಕ್ಷಕರ ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ
ಬೆಂಗಳೂರು: 2500 ಶಿಕ್ಷಕರ ಹುದ್ದೆಗಳ ಭರ್ತಿಗೆ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಹೊರಡಿಸಿದೆ. ಈ ಬಗ್ಗೆ ಶಿಕ್ಷಣ ಸಚಿವ ಬಿಸಿ ನಾಗೇಶ್ ಅವರು ತಮ್ಮ ಟ್ವಿಟರ್‌ನಲ್ಲಿ ಮಾಹಿತಿ ನೀಡಿದ್ದಾರೆ. ಸರ್ಕಾರಿ ಪ್ರೌಢಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸಲು 2,500 ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ ಅವರು ಟ್ವಿಟರ್‌ನಲ್ಲಿ ಮಾಹಿತಿ ನೀಡಿದ್ದಾರೆ. ಸಹ ಶಿಕ್ಷಕರು – 2,200 ಹುದ್ದೆಗಳು. ದೈಹಿಕ ಶಿಕ್ಷಣ ಶಿಕ್ಷಕರು – 200 ಹುದ್ದೆಗಳು. ವಿಶೇಷ ಶಿಕ್ಷಕರು – 100 …
Read More »ಹೆಸ್ಕಾಂ ಕಚೇರಿಯಲ್ಲಿ ಮೇಲಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಓರ್ವ ಕಾರ್ಮಿಕ ನೇಣಿಗೆ
ಅಥಣಿ ಪಟ್ಟಣದ ಹೆಸ್ಕಾಂ ಕಚೇರಿಯಲ್ಲಿ ಮೇಲಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಓರ್ವ ಕಾರ್ಮಿಕ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ. ಹೌದು 29 ವರ್ಷದ ಮಂಜುನಾಥ ಗಂಗಾಧರ ಮುತ್ತಗಿ ಆತ್ಮಹತ್ಯೆ ಮಾಡಿಕೊಂಡಿರುವ ಹೆಸ್ಕಾಂ ಗುತ್ತಿಗೆ ಕಾರ್ಮಿಕ. ಮೂಲತಃ ಬೀಳಗಿ ತಾಲೂಕಿನ ಗಿರಿಸಾಗರ ಗ್ರಾಮದ ನಿವಾಸಿಯಾಗಿದ್ದು. ಸಧ್ಯ ಅಥಣಿ ಹೆಸ್ಕಾಂ ಕಚೇರಿಯಲ್ಲಿ ಗುತ್ತಿಗೆ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ. ವಿದ್ಯುತ್ ಕಂಬಗಳನ್ನು ನೆಡುವ ಟ್ರ್ಯಾಕ್ಟರ್‍ಗೆ ಬೈಕ್ ಸಹಾಯದಿಂದ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾನೆ. ಸ್ಥಳಕ್ಕೆ ಅಥಣಿ ಪೆÇಲೀಸರು …
Read More »ಪಶು ವೈದ್ಯಕೀಯ ಸಂಸ್ಥೆಯಿಂದ ಶ್ವಾನಗಳಿಗೆ ಉಚಿತ ರೇಬೀಸ್ ಲಸಿಕಾ ಕಾರ್ಯಕ್ರಮ. ಡಾ :ಮೋಹನ ಕಮತ
ಗೋಕಾಕ ತಾಲೂಕಿನಲ್ಲಿ ಮಿಷನ್ ರೇಬೀಸ್ ಕಾರ್ಯಕ್ರಮವನ್ನು 15-09-2022 ರಿಂದ 30-09-2022 ರ ವರೆಗೆ ಗೋಕಾಕ ತಾಲೂಕಿನ ಎಲ್ಲ ಪಶು ವೈದ್ಯಕೀಯ ಸಂಸ್ಥೆಗಳಲ್ಲಿ ಉಚಿತವಾಗಿ ಶ್ವಾನಗಳಿಗೆ ರೇಬೀಸ್ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು ಆದ್ದರಿಂದ ಶ್ವಾನ ಮಾಲೀಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಡಾ:ಮೋಹನ.ವಿ.ಕಮತ ಸಹಾಯಕ ನಿರ್ದೇಶಕರು ಪಶು ಆಸ್ಪತ್ರೆ ಗೋಕಾಕ ಇವರು ತಿಳಿಸಿರುತ್ತಾರೆ.
Read More »