ಅಥಣಿ ತಾಲೂಕಿನ ಕೊಟ್ಟಲಗಿ ಗ್ರಾಮದಲ್ಲಿ ಸಮಯಕ್ಕೆ ಸರಿಯಾಗಿ ಬಸ್ಸುಗಳು ಬರುತ್ತಿಲ್ಲ ಇದರಿಂದಾಗಿ ವಿದ್ಯಾರ್ಥಿಗಳಿಗೆ ತೀವ್ರ ತೊಂದರೆ ಆಗುತ್ತಿದೆ ಎಂದು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಕೊಟ್ಟಲಗಿ ಗ್ರಾಮವು ಅಥಣಿ ತಾಲೂಕಿನ ಕೊನೆಯ ಹಳ್ಳಿಯಾಗಿದ್ದು ಬಸ್ಸುಗಳು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಾಚರಣೆ ಮಾಡುವ ಅಗತ್ಯ ಇದೆ. ಎರಡು ಮೂರು ಬಸ್ಸುಗಳು ಏಕಕಾಲಕ್ಕೆ ಬಂದರೆ ಮಾತ್ರ ಪ್ರಯಾಣಿಕರಿಗೆ ಅನುಕೂಲವಾಗುತ್ತಿದೆ. ಬಸ್ಸುಗಳು ಹೆಚ್ಚಿನ ಪ್ರಯಾಣಿಕರನ್ನು ತುಂಬಿಕೊಳ್ಳುತ್ತಿದ್ದು ವಿದ್ಯಾರ್ಥಿಗಳು ಪುಟ್ ಬೋರ್ಡನಲ್ಲಿ ನಿಂತು ಪ್ರಯಾಣ ಮಾಡುವ ಪರಿಸ್ಥಿತಿ ಇದೆ …
Read More »Yearly Archives: 2022
ಆಪರೇಷನ್ ಬಾಂಬ್ ಸಿಡಿಸಿದ ಸಚಿವ ಮುನಿರತ್ನ
ಕೋಲಾರ: ಕಂದಾಯ ಸಚಿವ ಆರ್.ಅಶೋಕ್ ಆಪರೇಷನ್ ಕಮಲದ ಸುಳಿವು ನೀಡಿದ ಬೆನ್ನಲ್ಲೇ ತೋಟಗಾರಿಕಾ ಸಚಿವ ಮುನಿರತ್ನ 10 ಕಾಂಗ್ರೆಸ್ ನಾಯಕರ ಟೀಂ ನ್ನು ಕರೆತರುತ್ತಿದ್ದೇವೆ ಎಂದು ಹೇಳಿದ್ದಾರೆ. ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಮುನಿರತ್ನ, ಸಮ್ಮಿಶ್ರ ಸರ್ಕಾರ ಇದ್ದಾಗ ನಾವು 17 ಶಾಸಕರು ಬಿಜೆಪಿಗೆ ಬಂದಿದ್ದೆವು. ಈಗ 10 ಶಾಸಕರು ಸಜ್ಜಾಗಿದ್ದಾರೆ. ಶೀಘ್ರದಲ್ಲಿಯೇ ಅವರನ್ನು ಬಿಜೆಪಿಗೆ ಕರೆತರಲಾಗುವುದು ಎಂದರು. ಒಟ್ಟು 22 ಶಾಸಕರು ರೆಡಿ ಇದ್ದಾರೆ ಅವರಲ್ಲಿ ನಾವು 10 ಜನರನ್ನು …
Read More »ಮದುವೆ ಆಗುವುದಾಗಿ ಹೇಳಿ ಲೈಂಗಿಕವಾಗಿ ಬಳಸಿಕೊಂಡ.. ಕೊನೆಗೂ ಕೈಕೊಟ್ಟು ಸಿಕ್ಕಿಬಿದ್ದ
ಹೈದರಾಬಾದ್:ಸರ್ಕಾರಿ ಅಧಿಕಾರಿಯೋರ್ವ ತನ್ನದೇ ಇಲಾಖೆ ಮಹಿಳೆ ಅಧಿಕಾರಿಯನ್ನು ಲೈಂಗಿಕವಾಗಿ ಬಳಸಿಕೊಂಡು ಮೋಸ ಮಾಡಿರೋ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಕರ್ನೂಲ್ ಜಿಲ್ಲೆಯಲ್ಲಿ ಡ್ರಗ್ ಇನ್ಸ್ಪೆಕ್ಟರ್ ಆಗಿ ಕೆಲಸ ಮಾಡುತ್ತಿರುವ ಅಬೀದ್ ಅಲಿ ಎಂಬಾತ ತನ್ನ ಸಹೋದ್ಯೋಗಿ ಮಹಿಳೆಗೆ ವಂಚಿಸಿದ ಕಿಡಿಗೇಡಿ. ಇಬ್ಬರು ಒಂದೇ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದರು. ಜತೆಗೆ ಒಂದೇ ಸಮುದಾಯಕ್ಕೆ ಸೇರಿದವರು ಕೂಡ. ಅಬೀದ್ ಅಲಿ ತನಗೆ ಮದುವೆ ಆಗಿರೋ ವಿಷಯ ಬಚ್ಚಿಟ್ಟು ತನ್ನ ಇಲಾಖೆ ಮಹಿಳಾ ಅಧಿಕಾರಿ …
Read More »ಉಡುಪಿ | ಮಲ್ಪೆಯಲ್ಲಿ ಮತ್ತೆ ತೇಲುವ ಸೇತುವೆ!
ಉಡುಪಿ: ಮಲ್ಪೆಯ ಕಡಲ ಕಿನಾರೆಯಲ್ಲಿ ಮತ್ತೆ ತೇಲುವ ಸೇತುವೆ (ಫ್ಲೋಟಿಂಗ್ ಬ್ರಿಡ್ಜ್) ನಿರ್ಮಾಣವಾಗುತ್ತಿದ್ದು ಕೆಲವೇ ದಿನಗಳಲ್ಲಿ ಪ್ರವಾಸಿಗರಿಗೆ ಮುಕ್ತವಾಗಲಿದೆ. ಕಳೆದ ಬಾರಿಯ ಅವಘಡ ಮತ್ತೊಮ್ಮೆ ಮರುಕಳಿಸಬಾರದು ಎಂಬ ದೃಷ್ಟಿಯಿಂದ ಈ ಬಾರಿ ಹೊರ ರಾಜ್ಯ ಹಾಗೂ ರಾಜ್ಯದ ಕಡಲ ತಜ್ಞರ ತಂಡಗಳು ತೇಲುವ ಸೇತುವೆಯ ಸಾಮರ್ಥ್ಯ, ಕಾರ್ಯಕ್ಷಮತೆಯನ್ನು ಪರೀಕ್ಷೆಗೊಳಪಡಿಸಿ ದೃಢೀಕರಿಸಿವೆ. ತೇಲುವ ಸೇತುವೆ ಚಂಡಮಾರುತದಂತಹ ಪ್ರತಿಕೂಲ ವಾತಾವರಣವನ್ನು ತಡೆದುಕೊಳ್ಳಬಹುದೇ? ದೈತ್ಯ ಅಲೆಗಳು ಅಪ್ಪಳಿಸಿದರೆ ತಾಳಿಕೊಳ್ಳುವುದೇ ಎಂಬುದನ್ನು ವೈಜ್ಞಾನಿಕವಾಗಿ ಪರೀಕ್ಷೆ ಗೊಳಪಡಿಸಿದೆ. …
Read More »ಇಂದು 100 ಕ್ಕೂ ಹೆಚ್ಚು `ಜೆಡಿಎಸ್’ ಅಭ್ಯರ್ಥಿಗಳ ಪಟ್ಟಿ ಪ್ರಕಟ:H.D.K.
ಬೆಂಗಳೂರು : ಮುಂದಿನ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವ ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಇಂದು ಬಿಡುಗಡೆ ಮಾಡಲಾಗುವುದು ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಘೋಷಿಸಿದ್ದಾರೆ. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ನನ್ನ ಅಭಿಪ್ರಾಯದಲ್ಲಿ ರಥಯಾತ್ರೆ ಆರಂಭ ಆದ ನಂತರ ಬಿಜೆಪಿ, ಕಾಂಗ್ರೆಸ್ ಪಕ್ಷಗಳಲ್ಲಿ ಗಲಿಬಿಲಿ ಪ್ರಾರಂಭ ಆಗಿದೆ. ಈಗ ಬರುತ್ತಿರುವ ಸಮೀಕ್ಷೆಗಳಲ್ಲಿ ಇವೆರಡೂ ಪಕ್ಷಗಳಿಗಿಂತ ಹೆಚ್ಚು ಸ್ಥಾನಗಳನ್ನು ಜೆಡಿಎಸ್ ಗೆಲ್ಲಲಿದೆ ಎಂದು …
Read More »ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ
ಚಿತ್ರದುರ್ಗ : ಮುರುಘಾ ಶ್ರೀ ವಿರುದ್ಧ ಪೋಕ್ಸೋ ಪ್ರಕರಣದಲ್ಲಿ ಪಿತೂರಿ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಚಿತ್ರದುರ್ಗ ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ, ಮಾಜಿ ಶಾಸಕ ಎಸ್.ಕೆ. ಬಸವರಾಜನ್ ಪತ್ನಿ ಸೌಭಾಗ್ಯ ಬಸವರಾಜನ್ ಅವರನ್ನು ಚಿತ್ರದುರ್ಗ ಗ್ರಾಮಾಂತರ ಠಾನೆ ಪೊಲೀಸರು ಬಂಧಿಸಿದ್ದಾರೆ. ಮುರುಘಾ ಶ್ರೀ ವಿರುದ್ಧ ಪೋಕ್ಸೋ ಪ್ರಕರಣದಲ್ಲಿ ಪಿತೂರಿ ಆರೋಪದ ಹಿನ್ನೆಲೆಯಲ್ಲಿ ನವೆಂಬರ್ 9 ರಂದು ಬಸವರಾಜನ್, ಸೌಭಗ್ಯ ವಿರುದ್ಧ ದೂರು ದಾಖಲಾಗಿತ್ತು. ನವೆಂಬರ್ 10 ರಂದು …
Read More »ಖಾತೆಗೆ 5 ಸಾವಿರ ರೂ. ವರ್ಗಾವಣೆಗೆ ಇಂದು ಸಿಎಂ ಚಾಲನೆ; ನೇಕಾರ ಸಮ್ಮಾನ್ ಯೋಜನೆಯಡಿ ನೆರವು
ಬೆಂಗಳೂರು: ಕೈಮಗ್ಗ ನೇಕಾರರಿಗೆ ತಲಾ 5000 ರೂ. ಖಾತೆಗೆ ಜಮಾ ಮಾಡಲಾಗುವುದು. ನೇಕಾರ ಸಮ್ಮಾನ್ ಯೋಜನೆಯಡಿ ಈ ವರ್ಷದ ಹಣ ವರ್ಗಾವಣೆಗೆ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ. ಬೆಳಗ್ಗೆ 10 ಗಂಟೆಗೆ ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳು, ನೇರ ನಗದು ವರ್ಗಾವಣೆಯ ಮೂಲಕ ಕೈಮಗ್ಗ ನೇಕಾರರಿಗೆ ವಾರ್ಷಿಕ ಆರ್ಥಿಕ ನೆರವು ತಲಾ 5000 ರೂ. ನಂತೆ 23.43 ಕೋಟಿ ರೂ. ಮೊತ್ತವನ್ನು ಬ್ಯಾಂಕ್ ಖಾತೆಗಳಿಗೆ …
Read More »ಪ್ರತಿಷ್ಠಿತ ಬ್ಯಾಂಕ್ನಲ್ಲಿಟ್ಟಿದ್ದ ಚಿನ್ನ ಮಾಯ
ಕಳ್ಳಕಾಕರ ಭಯದಿಂದ ಜನಸಾಮಾನ್ಯರು ತಮ್ಮ ಹಣ ಹಾಗೂ ಚಿನ್ನ ಸುರಕ್ಷಿತವಾಗಿರುತ್ತೆ ಅಂತ ಬ್ಯಾಂಕ್ನಲ್ಲಿಡುತ್ತಾರೆ. ಆದ್ರೆ ಆ ಬ್ಯಾಂಕ್ನಲ್ಲಿಟ್ಟ ಹಣವೇ ಮಂಗಮಾಯವಾದ್ರೆ.. ಇಂಥ ಶಾಕಿಂಗ್ ಸುದ್ದಿಯಿಂದ ಕುಟುಂಬವೊಂದು ಕಂಗಾಲಾಗಿದೆ. ಬ್ಯಾಂಕ್ ಅಂದ್ರೆ ಜನಸಾಮಾನ್ಯರ ದುಡ್ಡಿನ ಹಾಗೂ ಚಿನ್ನದ ಸೆಕ್ಯೂರಿಟಿ ಗಾರ್ಡ್. ಕಷ್ಟ ಪಟ್ಟು ದುಡಿದು ಸಂಪಾದಿಸಿದ ಹಣ ಅಥವಾ ಕೊಂಡುಕೊಂಡ ಚಿನ್ನವನ್ನ ಮನೆಯಲ್ಲಿಟ್ರೆ ಯಾವಾಗ ಅದ್ಯಾವ ಖದೀಮರು ಮನೆಗೆ ನುಗ್ಗಿ ಎಸ್ಕೇಪ್ ಮಾಡಿಬಿಡ್ತಾರೋ ಅನ್ನೋ ಭಯಕ್ಕೆ ಜನ ಬ್ಯಾಂಕ್ಗಳಲ್ಲಿ ಠೇವಣಿ ಇಡ್ತಾರೆ. …
Read More »ಕಳ್ಳರು ಕದ್ದ ಬಂಗಾರವನ್ನು ಖರೀದಿ ಮಾಡುತ್ತಿರುವ ಆರೋಪ ಟ್ಟಿಕಾ ಗೋಲ್ಡ್ ಕಂಪನಿ ಮಾಲೀಕ ಅರೆಸ್ಟ್
ಬೆಂಗಳೂರು: ಅಟ್ಟಿಕಾ ಗೋಲ್ಡ್ ಕಂಪನಿ ಮಾಲೀಕ ಬಾಬು ಅವರನ್ನು ಆಂಧ್ರ ಪ್ರದೇಶ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಕಳ್ಳರು ಕದ್ದ ಬಂಗಾರವನ್ನು ಖರೀದಿ ಮಾಡುತ್ತಿರುವ ಆರೋಪಕ್ಕೆ ಸಂಬಂಧಿಸಿದಂತೆ ಅಟ್ಟಿಕಾ ಬಾಬು ಅವರನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಹೈಗ್ರೌಂಡ್ ಠಾಣಾ ವ್ಯಾಪಿಯಲ್ಲಿರುವ ಅಟ್ಟಿಕಾ ಗೋಲ್ಡ್ ಬಾಬು ನಿವಾಸದಲ್ಲಿ ಸಿಸಿಬಿ ಪೊಲೀಸರ ಸಹಾಯದೊಂದಿಗೆ ಆಂಧ್ರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಯನ್ನು ವಿಚಾರಣೆಗಾಗಿ ಬಂಧಿಸಿ ಆಂಧ್ರಪ್ರದೇಶಕ್ಕೆ ಕರೆದೊಯ್ದಿದ್ದಾರೆ ಎಂದು ತಿಳಿದುಬಂದಿದೆ.
Read More »ಕುಷ್ಟಗಿ: ಶಾಸಕ ಬಯ್ಯಾಪುರ ಹುಟ್ಟುಹಬ್ಬಕ್ಕೆ ಸಿದ್ದು, ಡಿಕೆಶಿ ಒಂದೇ ಹೆಲಿಕಾಪ್ಟರ್ ನಲ್ಲಿ ಆಗಮನ
ಕುಷ್ಟಗಿ: ಕುಷ್ಟಗಿ ಶಾಸಕ ಅಮರೇಗೌಡ ಪಾಟೀಲ ಬಯ್ಯಾಪುರ ಅವರ 69ನೇ ಹುಟ್ಟುಹಬ್ಬದ ಪ್ರಯುಕ್ತ ಶುಕ್ರವಾರ ಕಾಂಗ್ರೆಸ್ ಬಲ ಪ್ರದರ್ಶನಕ್ಕೆ ಸಜ್ಜಾಗಿದೆ. ಮುಂದಿನ ಚುನಾವಣೆ ಗಮನದಲ್ಲಿಟ್ಟುಕೊಂಡು ಶಾಸಕ ಬಯ್ಯಾಪುರ ಅವರ ಹುಟ್ಟುಹಬ್ಬದ ಆಚರಣೆ ಹಾಗೂ ಕೈ ಕಾರ್ಯಕರ್ತರ ಸಮಾವೇಶ ಹಮ್ಮಿಕೊಂಡಿದೆ. ಈ ಕಾರ್ಯಕ್ರಮದ ಮುಖ್ಯ ಆಕರ್ಷಣೆಯ ಕೇಂದ್ರ ಬಿಂದು ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅದ್ಯಕ್ಷ ಡಿ.ಕೆ.ಶಿವಕುಮಾರ ಆಗಿದ್ದಾರೆ. ಇವರಿಬ್ಬರೂ ಬೆಂಗಳೂರಿನ ಜಕ್ಕೂರುನಿಂದ ಹೆಲಿಕಾಪ್ಟರ್ ಮೂಲಕ ಕುಷ್ಟಗಿ ಸಮೀಪದ ಬೀರಲದಿನ್ನಿ …
Read More »