ವಿಜಯಪುರ: ಜಿಲ್ಲೆಯಲ್ಲಿ ಶನಿವಾರ ಸಂಜೆ ಸುರಿದ ಭಾರಿ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿದೆ. ಆಲಮೇಲ ತಾಲೂಕಿನ ಬಗಲೂರು ಬಳಿ ಭೀಮಾ ನದಿಯ ಸೇತುವೆ ಮುಳುಗಡೆಯಾಗಿದ್ದು, ಗ್ರಾಮದ ಸಂಪರ್ಕ ಕಡಿತವಾಗಿದೆ. ನಗರದಲ್ಲಿ ಹಲವು ಕಡೆಗಳಲ್ಲಿ ಜನವಸತಿ ಪ್ರದೇಶಗಳಿಗೆ ಮಳೆ ನೀರು ನುಗ್ಗಿ ನಷ್ಟ ಸಂಭವಿಸಿದೆ. ಭೀಮಾ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆ ಸುರಿಯುತ್ತಿರುವ ಕಾರಣ, ವಿವಿಧ ಜಲಾಶಯ, ಬಾಂದಾರುಗಳಿಂದ ಭಾರಿ ಪ್ರಮಾಣದಲ್ಲಿ ನದಿಗೆ ನೀರು ಹೊರ ಬಿಡಲಾಗಿದೆ. ಪರಿಣಾಮ ಆಲಮೇಲ ತಾಲೂಕಿನ …
Read More »Yearly Archives: 2022
2023 ರ ವಿಧಾನಸಭೆ ಚುನಾವಣೆ ಜೆಡಿಎಸ್ ಪಾಲಿಗೆ ಕೊನೆಯ ಚುನಾವಣೆ : ನಿಖಿಲ್ ಕುಮಾರಸ್ವಾಮಿ ಅಚ್ಚರಿಯ ಹೇಳಿಕೆ
ಕುಣಿಗಲ್ : 2023 ರ ವಿಧಾನಸಭೆ ಚುನಾವಣೆ ಜೆಡಿಎಸ್ ಪಾಲಿಗೆ ಕೊನೆಯ ಚುನಾವಣೆ ಆಗಲಿದೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಕುಣಿಗಲ್ ತಾಲ್ಲೂಕಿನ ಹುತ್ರಿದುರ್ಗ ಹೋಬಳಿ ಅಂಚೆಪಾಳ್ಯ ಕ್ರಾಸ್ನಲ್ಲಿ ಸೇರಿದ್ದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ನಿಖಿಲ್ ಕುಮಾರಸ್ವಾಮಿ, ಮುಂದಿನ ವಿಧಾನಸಭೆ ಚುನಾವಣೆಯು ಜೆಡಿಎಸ್ ಪಾಲಿಗೆ ಒಂದು ರೀತಿ ಕೊನೆ ಚುನಾವಣೆ. ಇಲ್ಲಿಂದ ಹೊಸ ಅಧ್ಯಾಯ ಆರಂಭವಾಗಬೇಕಿದೆ. ಮುಂದಿನ 25 ವರ್ಷಗಳ …
Read More »ಹಾಸನಾಂಬೆಯ ದರ್ಶನಕ್ಕೆ ಮೂಹೂರ್ತ ಫಿಕ್ಸ್, ಅಕ್ಟೋಬರ್ 13ರಿಂದ ದೇವಾಲಯ ಓಪನ್
ಹಾಸನ, ಸೆಪ್ಟೆಂಬರ್, 11: ವರ್ಷಕ್ಕೊಮ್ಮೆ ದರ್ಶನ ಭಾಗ್ಯ ಕಲ್ಪಿಸುವ ಹಾಸನಾಂಬೆ ದೇವಾಲಯದ ಗರ್ಭಗುಡಿಯ ಬಾಗಿಲು ಅಕ್ಟೋಬರ್ 13ಕ್ಕೆ ತೆರೆಯಲಿದೆ. ಆದ್ದರಿಂದ ಜಿಲ್ಲಾಡಳಿತ 15 ದಿನದ ಜಾತ್ರಾ ಮಹೋತ್ಸವಕ್ಕೆ ಎಲ್ಲಾ ರೀತಿಯ ತಯಾರಿಯನ್ನು ಮಾಡಿಕೊಳ್ಳುತ್ತಿದೆ. ಮಹಾಮಾರಿ ಕೊರೊನಾ ನಂತರ ಇದೀಗ ಅದ್ಧೂರಿಯಾಗಿ ಜಾತ್ರಾ ಮಹೋತ್ಸವವನ್ನು ಆಚರಣೆ ಮಾಡುವುದಕ್ಕೆ ಜಿಲ್ಲಾಡಳಿತ ಯೋಜನೆ ರೂಪಿಸಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವ ನಿರೀಕ್ಷೆಯಿದೆ. ಆದ್ದರಿಂದ ಈಗಾಗಲೇ ಶಾಸಕರ ನೇತೃತ್ವದಲ್ಲಿ ಸಭೆ ನಡೆದಿದ್ದು, ಸಿಎಂ ಸೇರಿದಂತೆ ರಾಜ್ಯದ …
Read More »ಕೊಚ್ಚಿ ಹೋಗಿದ್ದ ಯುವಕನ ಶವ 3 ದಿನ ಆದ್ಮೇಲೆ ಪತ್ತೆ
ಭಾರಿ ಮಳೆಗೆ ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಗೋಕಾಕ ತಾಲೂಕಿನ ಕೊಳವಿ ಗ್ರಾಮದ ಯುವಕನ ಮೃತದೇಹ ಪತ್ತೆಯಾಗಿದೆ. ಹೌದು ಸೆ.9ರಂದು ಹೊಲಕ್ಕೆ ಹೋಗುವಾಗ ನೀರಿನಲ್ಲಿ ಕೊಳವಿ ಗ್ರಾಮದ ದುಂಡಪ್ಪ ಮಾಲದಿನ್ನಿ(25) ಎಂಬ ಯುವಕ ಕೊಚ್ಚಿಕೊಂಡು ಹೋಗಿದ್ದ. ಬಳಿಕ ಅಗ್ನಿಶಾಮಕ ಸಿಬ್ಬಂದಿಗಳಿಂದ ಸತತವಾಗಿ ಮೂರು ದಿನಗಳ ಕಾರ್ಯಾಚರಣೆ ಬಳಿಕ ಇಂದು ಬೆನಚಿನಮರಡಿ ಕೊಳವಿ ಮಾರ್ಗದ ಮಧ್ಯೆ ಶವ ಪತ್ತೆಯಾಗಿದೆ. ಗೋಕಾಕ ಗ್ರಾಮೀಣ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Read More »ಹಿಡಕಲ್ ಜಲಾಶಯದಿಂದ 20 ಸಾವಿರ ಕ್ಯೂಸೆಕ್ ನೀರು ಹೊರಕ್ಕೆ
ಹುಕ್ಕೇರಿ ತಾಲೂಕಿನ ಹಿಡಕಲ್ ಜಲಾಶಯದಿಂದ 20 ಸಾವಿರ ಕ್ಯೂಸೆಕ್ ನೀರು ಹೊರಕ್ಕೆ ಬಿಡಲಾಗಿದೆ ಎಂದು ತಹಶೀಲ್ದಾರ ಡಾ.ಡಿ.ಎಚ್.ಹೂಗಾರ್ ಅವರು ಮಾಹಿತಿ ನೀಡಿದ್ದಾರೆ. ರವಿವಾರ ದಿನ ಹುಕ್ಕೇರಿ ತಾಲೂಕಿನ ರಾಜಾ ಲಖಮಗೌಡಾ ಜಲಾಶಯದಿಂದ 20 ಸಾವಿರ ಕ್ಯೂಸೆಕ್ ನೀರು ಹೊರ ಬಿಡಲಾಗಿದೆ ಕಾರಣ ಘಟಪ್ರಭಾ ನದಿ ಪಾತ್ರದ ಜನರು ತಮ್ಮ ಜಾನುವಾರುಗಳ ಸಮೇತ ಸುರಕ್ಷಿತ ಸ್ಥಳಕ್ಕೆ ಹೋಗಬೇಕು ಎಂದು ಹುಕ್ಕೇರಿ ತಹಶೀಲ್ದಾರ ಡಾ.ದೊಡ್ಡಪ್ಪಾ ಹೂಗಾರ ಪ್ರಕಟಣೆ ಮೂಲಕ ತಿಳಿಸಿದ್ದಾರೆ. ಈಗಾಗಲೆ ಪ್ರತಿ …
Read More »ಖ್ಯಾತ ನಟ, ನಿರ್ಮಾಪಕ ಕೃಷ್ಣಂ ರಾಜು ವಿಧಿವಶ
ಹೈದರಾಬಾದ್: ತೆಲುಗು ಚಿತ್ರರಂಗದ ಖ್ಯಾತ ನಟ ಮತ್ತು ನಿರ್ಮಾಪಕ ಉಪ್ಪಲಪತಿ ವೆಂಕಟ ಕೃಷ್ಣಂ ರಾಜು ಅವರು ಇಂದು ಮುಂಜಾನೆ ಹೈದರಾಬಾದ್‌ನಲ್ಲಿ ನಿಧನರಾದರು. ನಟ ಪ್ರಭಾಸ್ ಅವರ ಚಿಕ್ಕಪ್ಪ ಕೃಷ್ಣಂ ರಾಜು ಅವರಿಗೆ 82 ವರ್ಷ ವಯಸ್ಸಾಗಿತ್ತು. ಅವರು ತೆಲುಗು ಚಿತ್ರರಂಗದಲ್ಲಿ ಬಂಡಾಯದ ನಟನಾ ಶೈಲಿಗಾಗಿ “ರೆಬೆಲ್ ಸ್ಟಾರ್” ಎಂದು ಪ್ರಸಿದ್ಧರಾಗಿದ್ದರು. ಅತ್ಯುತ್ತಮ ನಟನಿಗಾಗಿರುವ ಪ್ರಥಮ ನಂದಿ ಪ್ರಶಸ್ತಿಯ ವಿಜೇತರೂ ಆಗಿದ್ದರು. ಕೃಷ್ಣಂ ರಾಜು ಅವರು ತಮ್ಮ ವೃತ್ತಿಜೀವನದಲ್ಲಿ 183 ಕ್ಕೂ ಹೆಚ್ಚು …
Read More »ಬೊಮ್ಮಾಯಿ ಧಮ್ ಎಂದರೆ ‘ಧಮ್ ಬಿರಿಯಾನಿ’ ಎಂದು ತಿಳಿದುಕೊಂಡ ಹಾಗಿದೆ: ಸಿದ್ದರಾಮಯ್ಯ ವ್ಯಂಗ್ಯ
ಬೆಂಗಳೂರು, ಸೆ.11: ‘ದಮ್ ಇದ್ದರೆ ಬಿಜೆಪಿ ಯಾತ್ರೆ ಹಿಮ್ಮೆಟ್ಟಿಸಿ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸವಾಲು ಹಾಕಿದ್ದಾರೆ. ನಾವು ಯಾಕೆ ಹಿಮ್ಮೆಟ್ಟಿಸಲು ಹೋಗ್ಬೇಕು? ಸಮಾವೇಶದಲ್ಲಿಯ ಖಾಲಿ ಕುರ್ಚಿಗಳನ್ನು ನೋಡಿದರೆ ನಿಮ್ಮ ‘ಜಾತ್ರೆ’ಯನ್ನು ನಮ್ಮ ಜನರೇ ಹಿಮ್ಮೆಟ್ಟಿಸಿದ್ದಾರೆ ಎಂದು ನಿಮಗೆ ಅನಿಸಲ್ವಾ? ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಬೊಮ್ಮಾಯಿವರನ್ನು ಛೇಡಿಸಿದ್ದಾರೆ. ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಧಮ್ ಎಂದರೆ ಧಮ್ ಬಿರಿಯಾನಿ ಎಂದು ಬೊಮ್ಮಾಯಿ ತಿಳಿದುಕೊಂಡ ಹಾಗಿದೆ. ನಮಗೆ …
Read More »ಸೈಮಾ 2022: ಕನ್ನಡದ ಅತ್ಯುತ್ತಮ ನಟ, ಚಿತ್ರ, ನಿರ್ದೇಶಕ, ನಟಿ ಪ್ರಶಸ್ತಿ ಯಾರ ಪಾಲು? ಗೆದ್ದವರ ಸಂಪೂರ್ಣ ಪಟ್ಟಿ ಇಲ್ಲಿದೆ
ನಿನ್ನೆ ( ಸೆಪ್ಟೆಂಬರ್ 10 ) ಈ ಬಾರಿಯ ಸೌತ್ ಇಂಡಿಯನ್ ಇಂಟರ್ ನ್ಯಾಷನಲ್ ಮೂವಿ ಅವಾರ್ಡ್ಸ್ ( ಸೈಮಾ ) ಮೊದಲ ದಿನದ ಕಾರ್ಯಕ್ರಮ ಜರುಗಿತು. ದಕ್ಷಿಣ ಭಾರತ ಚಿತ್ರರಂಗದ ನಾಲ್ಕೂ ಭಾಷೆಯ ಚಿತ್ರಗಳಿಗೆ ಪ್ರತ್ಯೇಕವಾಗಿ ಈ ಸೈಮಾ ಪ್ರಶಸ್ತಿಯನ್ನು ನೀಡಲಾಗುತ್ತದೆ. ಒಟ್ಟು 19 ವಿಭಾಗಗಳಲ್ಲಿ ಈ ಬಾರಿ ಕಲಾವಿದರ ನಾಮಿನೇಷನ್ ನಡೆದಿತ್ತು ಹಾಗೂ ಸೈಮಾ ವೆಬ್ ತಾಣದಲ್ಲಿ ಸಿನಿ ರಸಿಕರಿಗೆ ಬೆಸ್ಟ್ ಯಾರು ಎಂದು ವೋಟ್ ಮಾಡುವ …
Read More »S.R..ಪಾಟೀಲ್ ಮನವೊಲಿಕೆಗೆ ಮುಂದಾದ ಕಾಂಗ್ರೆಸ್ ಮುಖಂಡರು
ಬೆಂಗಳೂರು, ಸೆ. 10: ‘ಪರಿಷತ್ ಟಿಕೆಟ್ ಕೈತಪ್ಪಿದ್ದರಿಂದ ಅಸಮಾಧಾನಗೊಂಡ ಸಕ್ರಿಯ ಚಟುವಟಿಕೆಗಳಿಂದ ದೂರವೇ ಉಳಿದಿದ್ದ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಎಸ್.ಆರ್.ಪಾಟೀಲ್ ಅವರ ಮನವೊಲಿಕೆಗೆ ಕಾಂಗ್ರೆಸ್ ಮುಖಂಡರು ಮುಂದಾಗಿದ್ದಾರೆ. ಶನಿವಾರ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಎಸ್.ಆರ್.ಪಾಟೀಲ್ ಅವರನ್ನು ಶುಕ್ರವಾರ ಬೆಂಗಳೂರಿನ ಖಾಸಗಿ ಹೊಟೇಲ್‍ನಲ್ಲಿ ಖುದ್ದು ಭೇಟಿ ಮಾಡಿ ಸಮಾಲೋಚನೆ ನಡೆಸಿ ಮನವೊಲಿಕೆ …
Read More »ವಿಕ್ರಮ ವಿಸಾಜಿ ಕೃತಿಗೆ ‘ಡಾ. ಗಿರಡ್ಡಿ ಪ್ರತಿಷ್ಠಾನ’ದ ಪ್ರಶಸ್ತಿ
ಧಾರವಾಡ: ಡಾ.ಗಿರಡ್ಡಿ ಗೋವಿಂದರಾಜ ಅವರ ಹೆಸರಿನಲ್ಲಿ, ನಗರದ ಗಿರಡ್ಡಿ ಗೋವಿಂದರಾಜ ಫೌಂಡೇಷನ್ ಪ್ರಸಕ್ತ ಸಾಲಿನಿಂದ ನೀಡುತ್ತಿರುವ ರಾಜ್ಯ ಮಟ್ಟದ ‘ಅತ್ಯುತ್ತಮ ವಿಮರ್ಶಾ ಕೃತಿ’ ಪ್ರಶಸ್ತಿಗೆ ಬೆಂಗ ಳೂರಿನ ಅಭಿನವ ಪ್ರಕಾಶನ ಪ್ರಕಟಿಸಿರುವ, ಕಲಬುರಗಿಯ ಡಾ.ವಿಕ್ರಮ ವಿಸಾಜಿ ಅವರ ‘ಪಠ್ಯದ ಭವಾವಳಿ’ ಕೃತಿ ಆಯ್ಕೆಯಾಗಿದೆ. ಈ ಪ್ರಶಸ್ತಿಯು ₹25 ಸಾವಿರ ನಗದು ಹಾಗೂ ಸ್ಮರಣಿಕೆ ಒಳಗೊಂಡಿದೆ. ಇದು ಗಿರಡ್ಡಿ ಗೋವಿಂದರಾಜ ಫೌಂಡೇಷನ್ ವಿಮರ್ಶಾ ಕೃತಿಗೆ ನೀಡುತ್ತಿರುವ ಮೊದಲ ಪ್ರಶಸ್ತಿಯಾಗಿದೆ. ‘ಪ್ರಶಸ್ತಿಗಾಗಿ ರಾಜ್ಯದ …
Read More »