Breaking News

Yearly Archives: 2022

ನರೇಗಾ ಹಣಕ್ಕೆ ಪಂಚ ನಿಯಮ ಕಡ್ಡಾಯವಾಗಿ ಪಾಲಿಸಿ: ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯ

ಹೊಸದಿಲ್ಲಿ: ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ (ಮನರೇಗಾ) ಯೋಜನೆ ಅಡಿ ಹಣ ಬಿಡುಗಡೆ ಮಾಡ ಬೇಕೇ? ಹಾಗಿದ್ದರೆ ಐದು ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿ. ಹೀಗೆಂದು ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಎಲ್ಲ ರಾಜ್ಯ ಸರಕಾರಗಳಿಗೆ ಪತ್ರ ರವಾನೆಯಾಗಿದೆ.   ಪಶ್ಚಿಮ ಬಂಗಾಲ ಸಿಎಂ ಮಮತಾ ಬ್ಯಾನರ್ಜಿ ಅವರು ಕೇಂದ್ರ ಮನರೇಗಾ ಹಣ ಬಿಡುಗಡೆ ಮಾಡುತ್ತಿಲ್ಲ ಎಂದು ಇತ್ತೀಚೆಗೆ ಆರೋಪಿಸಿದ್ದರು. ಅದರ ಬೆನ್ನಲ್ಲೇ ಈ ಬೆಳವಣಿಗೆ ಆಗಿದೆ. ಮನರೇಗಾ ಅಡಿಯಲ್ಲಿ ರಾಜ್ಯಗಳಿಗೆ …

Read More »

ಮಣ್ಣಲ್ಲಿ ಮಣ್ಣಾದ ಉಮೇಶ್ ಕತ್ತಿ

ಬೆಲ್ಲದ ಬಾಗೇವಾಡಿ (ಬೆಳಗಾವಿ): ಆಹಾರ ಮತ್ತು ಅರಣ್ಯ ಸಚಿವ ಉಮೇಶ ವಿಶ್ವನಾಥ ಕತ್ತಿ (61) ಅವರ ಪಾರ್ಥಿವ ಶರೀರವನ್ನು ಬೆಳಗಾವಿಯಿಂದ ಹುಟ್ಟೂರು ಬೆಲ್ಲದ ಬಾಗೇವಾಡಿವರೆಗೆ ಅಂತಿಮ ಯಾತ್ರೆ ನಡೆಸಿ ವೀರಶೈವ ಲಿಂಗಾ ಯತ ಸಮುದಾಯದ ವಿಧಿ ವಿಧಾನದಂತೆ ಬುಧವಾರ ರಾತ್ರಿ ಅವರ ತೋಟದಲ್ಲಿ ಅಂತ್ಯಸಂಸ್ಕಾರ ಮಾಡಲಾಯಿತು.   ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದ ತೋಟದಲ್ಲಿರುವ ತಂದೆ ವಿಶ್ವನಾಥ ಕತ್ತಿ ಅವರ ಸಮಾಧಿ  ಪಕ್ಕದಲ್ಲೇ ಸಕಲ ಸರಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಯಿತು. ಮಠಾ ಧೀಶರು …

Read More »

ಮಾನ್ಯತೆ ಪಡೆಯದ ರಾಜಕೀಯ ಪಕ್ಷಗಳ ಮೇಲೆ ಐ.ಟಿ.ದಾಳಿ

ಹೊಸದಿಲ್ಲಿ: ದೇಣಿಗೆ ನೀಡಿಕೆ ವಿಚಾರಕ್ಕೆ ಸಂಬಂಧಿಸಿದಂತೆ ನೋಂದಾಯಿತ ಮತ್ತು ಮಾನ್ಯತೆ ಪಡೆಯದ ರಾಜಕೀಯ ಪಕ್ಷಗಳ ಮೇಲೆ ಆದಾಯ ತೆರಿಗೆ ಇಲಾಖೆ ಬುಧವಾರ ದಾಳಿ ನಡೆಸಿದೆ. ದಿಲ್ಲಿ, ಗುಜರಾತ್‌, ಉ.ಪ್ರದೇಶ, ಮಹಾರಾಷ್ಟ್ರ, ಮಧ್ಯಪ್ರದೇಶ, ಛತ್ತೀಸ್‌ಗಢ‌, ಹರಿಯಾಣ ಸೇರಿ ಹಲವು ರಾಜ್ಯಗಳ ಕನಿಷ್ಠ 110 ಸ್ಥಳಗಳಲ್ಲಿ ಏಕಕಾಲ ದಲ್ಲಿ ಐಟಿ ಅಧಿಕಾರಿಗಳು ದಾಳಿ ನಡೆಸಿ, ಶೋಧ ಕಾರ್ಯ ಕೈಗೊಂಡರು.   ಆರ್‌ಯುಪಿಪಿಯಲ್ಲಿರುವ ಕನಿಷ್ಠ 198 ಪಕ್ಷಗಳನ್ನು ಪಟ್ಟಿಯಿಂದ ತೆಗೆದುಹಾಕುವ ಬಗ್ಗೆ ಇತ್ತೀಚಿಗೆ ಭಾರತೀಯ ಚುನಾವಣ …

Read More »

ಕಿಕ್‌ಬ್ಯಾಕ್‌ ಆರೋಪ: ಬಿಎಸ್‌ವೈ ವಿರುದ್ಧದ ಪ್ರಕರಣ ಮರು ವಿಚಾರಣೆಗೆ ಹೈಕೋರ್ಟ್‌ ಆದೇಶ

ಬೆಂಗಳೂರು: ಕೋಟ್ಯಂತರ ರೂಪಾಯಿ “ಕಿಕ್‌ಬ್ಯಾಕ್‌’ ಪಡೆದುಕೊಂಡಿದ್ದಾರೆ ಎಂಬ ಆರೋಪ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಮತ್ತವರ ಕುಟುಂಬದ ಸದಸ್ಯರು ಹಾಗೂ ಕೆಲ ಆಪ್ತರಿಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಪ್ರಕರಣದ ಮರು ವಿಚಾರಣೆ ನಡೆಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹೈಕೋರ್ಟ್‌ ಆದೇಶಿಸಿದೆ.   ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವಸತಿ ಯೋಜನೆ ಗುತ್ತಿಗೆ ನೀಡುವ ಸಲುವಾಗಿ ಮುಖ್ಯಮಂತ್ರಿಯಾಗಿದ್ದ ವೇಳೆ ಯಡಿಯೂರಪ್ಪ ಮತ್ತು ಪುತ್ರ ಬಿ.ವೈ. ವಿಜಯೇಂದ್ರ ಸಹಿತ ಅವರ ಕುಟುಂಬಸ್ಥರು ರಾಮಲಿಂಗಂ ಕನ್‌ಸ್ಟ್ರಕ್ಷನ್‌ …

Read More »

ಬಿಎಸ್​​​ವೈ ವಿರುದ್ಧದ ಭ್ರಷ್ಟಾಚಾರ ಕೇಸ್​.. ವಿಚಾರಣೆ ನಡೆಸುವಂತೆ ವಿಶೇಷ ಕೋರ್ಟ್​ಗೆ ಹೈಕೋರ್ಟ್ ನಿರ್ದೇಶನ

ಬೆಂಗಳೂರು: ಸರ್ಕಾರಿ ಗುತ್ತಿಗೆ ನೀಡಲು ಲಂಚ ಪಡೆದ ಆರೋಪದ ಮೇಲೆ ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಮತ್ತು ಅವರ ಕುಟುಂಬ ಸದಸ್ಯರ ವಿರುದ್ಧದ ಖಾಸಗಿ ದೂರಿನ ವಿಚಾರಣೆ ನಡೆಸಿದ ಹೈಕೋರ್ಟ್​, ವಿಶೇಷ ನ್ಯಾಯಾಲಯಕ್ಕೆ ಪ್ರಕರಣದ ವಿಚಾರಣೆ ನಡೆಸುವಂತೆ ಸೂಚನೆ ನೀಡಿದೆ. ಯಡಿಯೂರಪ್ಪ ವಿರುದ್ಧದ ಭ್ರಷ್ಟಾಚಾರ ಆರೋಪದ ಬಗ್ಗೆ ತನಿಖೆ ನಡೆಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗೆ ಅಂದಿನ ರಾಜ್ಯಪಾಲರು ಒಪ್ಪಿಗೆ ನೀಡಲು ನಿರಾಕರಿಸಿದ್ದರಿಂದ ಇಲ್ಲಿನ ಸೆಷನ್ಸ್ ನ್ಯಾಯಾಲಯ ಅರ್ಜಿ ವಜಾಗೊಳಿಸಿತ್ತು. …

Read More »

ನನಗೆ ಬಯ್ಯಲಾದರೂ ದೊಡ್ಡಪ್ಪ ಬರಲಿ ಎಂದು ಕಾಯುತ್ತಿದ್ದೇನೆ: ಉಮೇಶ್ ಕತ್ತಿ ಸಹೋದರ ಪುತ್ರ ಪೃಥ್ವಿ ಕಣ್ಣೀರು

ಆಹಾರ ಸಚಿವ ಉಮೇಶ್ ಕತ್ತಿ ಕಳೆದ ರಾತ್ರಿ ವಿಧಿವಶರಾಗಿದ್ದು, ಅವರ ಈ ಸಾವು ಕುಟುಂಬಸ್ಥರನ್ನು ಮಾತ್ರವಲ್ಲದೆ ರಾಜ್ಯದ ಜನತೆಯನ್ನು ದಿಗ್ಬ್ರಾಂತರನ್ನಾಗಿಸಿದೆ. ರಾತ್ರಿಯವರೆಗೆ ಲವಲವಿಕೆಯಿಂದ ಇದ್ದ ಉಮೇಶ್ ಕತ್ತಿ ಮರುಕ್ಷಣವೇ ಇಲ್ಲ ಎಂಬ ಸತ್ಯವನ್ನು ಅರಗಿಸಿಕೊಳ್ಳಲು ಯಾರಿಗೂ ಸಾಧ್ಯವಾಗುತ್ತಿಲ್ಲ.   ಉಮೇಶ್ ಕತ್ತಿ ಅವರ ಹುಟ್ಟೂರು ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿಯಲ್ಲಿ ನೀರವ ಮೌನ ಆವರಿಸಿದ್ದು, ಊರಿನ ಜನತೆ ತಮ್ಮ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಸ್ವಯಂ ಬಂದ್ ಆಚರಿಸುತ್ತಿದ್ದಾರೆ. …

Read More »

ಉಮೇಶ್ ಕತ್ತಿ ನಿಧನ : ಹುಕ್ಕೇರಿ ಕ್ಷೇತ್ರಕ್ಕೆ ಉಪಚುನಾವಣೆ ನಡೆಯೋದು ಡೌಟ್..?

ಬೆಂಗಳೂರು,ಸೆ.7-ಸಚಿವ ಉಮೇಶ್ ಕತ್ತಿ ನಿಧನದಿಂದಾಗಿ ತೆರವಾಗಿರುವ ಹುಕ್ಕೇರಿ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುವುದು ಅನುಮಾನ ಎನ್ನಲಾಗುತ್ತಿದೆ. ಸಾಮಾನ್ಯವಾಗಿ ತೆರವಾಗಿರುವ ಲೋಕಸಭೆ, ವಿಧಾನಸಭೆ ಸೇರಿದಂತೆ ಯಾವುದೇ ಕ್ಷೇತ್ರಗಳಿಗೆ ನಿಯಮಾವಳಿ ಪ್ರಕಾರ ಆರು ತಿಂಗಳೊಳಗೆ ಮರು ಚುನಾವಣೆ ನಡೆಯಬೇಕು. ಆದರೆ ಕರ್ನಾಟಕದ ವಿಧಾನಸಭೆ ಚುನಾವಣೆ 2023ರ ಮೇ ತಿಂಗಳ ಮಧ್ಯ ಭಾಗದಲ್ಲಿ ನಡೆಯುವ ಸಾಧ್ಯತೆ ಇರುವುದರಿಂದ ಹುಕ್ಕೇರಿ ವಿಧಾನಸಭಾ ಕ್ಷೇತ್ರಕ್ಕೆ ಕೇಂದ್ರ ಚುನಾವಣಾ ಆಯೋಗ ಉಪಚುನಾವಣೆ ದಿನಾಂಕ ಘೋಷಣೆ ಮಾಡುವ ಸಾಧ್ಯತೆಗಳು ಇಲ್ಲ …

Read More »

ಹಿರಿಯ ಸಚಿವ ಉಮೇಶ ಕತ್ತಿ ಅಗಲಿಕೆಯಿಂದ ಇಡೀ ರಾಜ್ಯಕ್ಕೆ ದೊಡ್ಡ ನಷ್ಠ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ

ಹಿರಿಯ ಸಚಿವ ಉಮೇಶ ಕತ್ತಿ ಅಗಲಿಕೆಯಿಂದ ಇಡೀ ರಾಜ್ಯಕ್ಕೆ ದೊಡ್ಡ ನಷ್ಠ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಮ್ಮ ಗೃಹ ಕಛೇರಿಯಲ್ಲಿ ಉಮೇಶ ಕತ್ತಿಗೆ ಶೃದ್ಧಾಂಜಲಿ ಸಲ್ಲಿಸಿದ ಬಾಲಚಂದ್ರ ಜಾರಕಿಹೊಳಿ ಗೋಕಾಕ: ಸದಾ ಅಭಿವೃದ್ಧಿಯ ಬಗ್ಗೆ ಚಿಂತಿಸುತ್ತಿದ್ದ ನಾಡಿನ ಹಿರಿಯ ರಾಜಕಾರಣಿ, ಸಚಿವ ಉಮೇಶ ಕತ್ತಿ ಅವರ ನಿಧನದಿಂದ ಇಡೀ ರಾಜ್ಯಕ್ಕೆ ಅಪಾರ ಹಾನಿಯಾಗಿದೆ ಎಂದು ಕೆಎಂಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸಂತಾಪ ಸೂಚಿಸಿದರು. ಇಲ್ಲಿಯ …

Read More »

ಉಮೇಶ ಕತ್ತಿ ನಿಧನ: ಸ್ವಯಂ ಪ್ರೇರಿತ ಬಂದ್‌, ಮೃತದೇಹ ಒಯ್ಯಲು ಅಲಂಕೃತ ಸೇನಾ ವಾಹನ

ಬೆಳಗಾವಿ: ಉಮೇಶ ಕತ್ತಿ ಅವರ ಮೃತದೇಹವನ್ನು ಇಲ್ಲಿನ ಸಾಂಬ್ರಾ ವಿಮಾನ ನಿಲ್ದಾಣದಿಂದ ಅವರ ಹುಟ್ಟೂರಾದ, ಹುಕ್ಕೇರಿ ತಾಲ್ಲೂಕಿನ ಬೆಲ್ಲದ ಬಾಗೇವಾಡಿಗೆ ತೆಗೆದುಕೊಂಡು ಹೋಗಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಅಲಂಕೃತ ಸೇನಾ ವಾಹನದಲ್ಲಿ ಮೆರವಣಿಗೆ ಮೂಲಕ ತೆಗೆದುಕೊಂಡು ಹೋಗಲು ತಯಾರಿ ನಡೆದಿದೆ.   ಮೈನಸ್‌ 4 (-4) ಸೆಂಟಿಗ್ರೇಡ್‌ ಉಷ್ಣಾಂಶದ ಪೆಟ್ಟಿಗೆಯನ್ನು ಈ ಸೇನಾ ವಾಹನದಲ್ಲಿ ಈಗಾಗಲೇ ಇಡಲಾಗಿದೆ. ಮೂರು ಕ್ವಿಂಟಲ್‌ ಹೂವುಗಳಿಂದ ವಾಹನವನ್ನು ಅಲಂಕಾರ ಮಾಡಲಾಗಿದೆ. ಸಂಚರಿಸುವ ಮಾರ್ಗ: ಸಾಂಬ್ರಾ …

Read More »

ರಾಜ್ಯದಲ್ಲಿ 3 ದಿನ ಶೋಕಾಚರಣೆ: ಸಿ.ಎಂ ಬೊಮ್ಮಾಯಿ

ಬೆಳಗಾವಿ: ‘ಅರಣ್ಯ ಸಚಿವ ಸಚಿವ ಉಮೇಶ ಕತ್ತಿ ಅವರ ಅಗಲಿಕೆಯಿಂದ ರಾಜ್ಯಕ್ಕೆ ತುಂಬಲಾರದ ನಷ್ಟವಾಗಿದೆ. ರಾಜ್ಯದಲ್ಲಿ ಬುಧವಾರದಿಂದ ಮೂರು ದಿನ ಶೋಕಾಚಾರಣೆ ಮಾಡಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ತಾಲ್ಲೂಕಿನ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಸಲಾಗವುದು’ ಎಂದರು. ‘ರಾಜ್ಯದಲ್ಲಿ ಪ್ರವಾಹ ನಿರ್ವಹಣೆ ಕಾರ್ಯಾಚರಣೆ ಮುಂದುವರಿಸಲಾಗುತ್ತಿದೆ. ಶೋಕಾಚರಣೆ ಕಾರಣ ಉಳಿದ ಚಟುವಟಿಕೆಗಳು ನಡೆಯುವುದಿಲ್ಲ’ ಎಂದು ತಿಳಿಸಿದರು. ‘ದೊಡ್ಡಬಳ್ಳಾಪುರದಲ್ಲಿ ಸೆ.8ರಂದು …

Read More »