Breaking News

Yearly Archives: 2022

ವಿಶ್ವರಾಜ ಸಕ್ಕರೆ ಕಾರ್ಖಾನೆಯ ಆವರಣದಲ್ಲಿ ಕತ್ತಿ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ

ಬೆಳಗಾವಿ: ಜಿಲ್ಲೆಯ ಹುಕ್ಕೇರಿ ತಾಲ್ಲೂಕಿನ ಬೆಲ್ಲದ ಬಾಗೇವಾಡಿ ಹೊರವಲಯದಲ್ಲಿರುವ ವಿಶ್ವರಾಜ ಸಕ್ಕರೆ ಕಾರ್ಖಾನೆಯ ಆವರಣದಲ್ಲಿ ಉಮೇಶ ಕತ್ತಿ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಕೆಲವೇ ಕ್ಷಣಗಳಲ್ಲಿ ಪಾರ್ಥಿವ ಶರೀರ ಸ್ಥಳ ತಲುಪಲಿದೆ. ಈಗಾಗಲೇ ಅಪಾರ ಸಂಖ್ಯೆಯಲ್ಲಿ ಜನರು, ಅಭಿಮಾನಿಗಳು ಕಿಕ್ಕಿರಿದು ಸೇರಿದ್ದಾರೆ. ಹೆದ್ದಾರಿ ಆಸುಪಾಸಿನಲ್ಲಿ ಅಪಾರ ಸಂಖ್ಯೆಯ ವಾಹನಗಳು ಕಿಲೋಮೀಟರ್ ವರೆಗೆ ಸಾಲಾಗಿ ನಿಂತಿವೆ. ಹೃದಯಾಘಾತದಿಂದ ನಿಧನ ಅರಣ್ಯ, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್‌ ವಿ. …

Read More »

2023ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ 150 ಸ್ಥಾನಗಳಲ್ಲಿ ಗೆಲುವು: ಎಂ.ಬಿ ಪಾಟೀಲ್

ವಿಜಯನಗರ, ಸೆಪ್ಟೆಂಬರ್ 6: “ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ 150 ಸ್ಥಾನಗಳನ್ನು ಗೆಲ್ಲುವ ಮೂಲಕ ಅಧಿಕಾರಕ್ಕೆ ಬರುತ್ತೇವೆ” ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ. ಬಿ. ಪಾಟೀಲ್ ಹೇಳಿದರು. ಹೊಸಪೇಟೆ ನಗರದ ಕಾಂಗ್ರೆಸ್ ಕಚೇರಿಯಲ್ಲಿ ಮಂಗಳವಾರ ಮಾತನಾಡಿದ ಅವರು, “ಬಿಜೆಪಿ ದುರಾಡಳಿತಕ್ಕೆ ಬೇಸತ್ತಿರುವ ರಾಜ್ಯದ ಜನತೆ ಈ ಬಾರಿ ಕಾಂಗ್ರೆಸ್‌ಗೆ ಅಧಿಕಾರ ನೀಡಲಿದ್ದಾರೆ ಈ ಸಲ ಶೇ 50ಕ್ಕೂ ಹೆಚ್ಚು ಲಿಂಗಾಯತರ ಮತಗಳು ಕಾಂಗ್ರೆಸ್‌ಗೆ ಬೀಳಲಿವೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು. …

Read More »

‘ಈಡಿ’ಯಿಂದ ದೇಶದಾದ್ಯಂತ ೩೦ ಕಡೆಗಳಲ್ಲಿ ದಾಳಿ !

ದೆಹಲಿಯಲ್ಲಿನ ಆಪ ಸರಕಾರದಿಂದ ನಡೆದ ಮದ್ಯ ಧೋರೆಣೆಯ ಹಗರಣದ ಪ್ರಕರಣ ನವದೆಹಲಿ – ದೆಹಲಿಯಲ್ಲಿನ ಆಪ ಸರಕಾರದ ಮದ್ಯ ಧೋರಣೆಯಲ್ಲಿನ ಭ್ರಷ್ಟಾಚಾರದ ಪ್ರಕರಣದಲ್ಲಿ ‘ಈಡಿ’ಯು (ಜ್ಯಾರಿ ನಿರ್ದೇಶನಾಲಯವು) ‘ಎನ್‌.ಸಿ. ಆರ್‌’ನೊಂದಿಗೆ ‘ರಾಷ್ಟ್ರೀಯ ರಾಜಧಾನಿ ಕ್ಷೇತ್ರದೊಂದಿಗೆ) ದೇಶದಾದ್ಯಂತ ದಾಳಿ ಆರಂಭಿಸಿದೆ. ದೇಶದಲ್ಲಿ ೩೦ ಕಡೆಗಳಲ್ಲಿ ದಾಳಿ ನಡೆಸಲಾಗುತ್ತಿರುವ ಬಗ್ಗೆ ಪ್ರಾಥಮಿಕ ಮಾಹಿತಿ ದೊರೆತಿದೆ. ಇದರಲ್ಲಿ ದೆಹಲಿಯೊಂದಿಗೆ ಗುರುಗ್ರಾಮ, ಚಂಡೀಗಡ, ಲಕ್ಷ್ಮಣಪುರಿ, ಮುಂಬೈ, ಭಾಗ್ಯನಗರ, ಹಾಗೆಯೇ ಬೆಂಗಳೂರು ನಗರದಲ್ಲಿ ದಾಳಿ ನಡೆಯುತ್ತಿದೆ. ದೆಹಲಿಯ ಉಪಮುಖ್ಯಮಂತ್ರಿ …

Read More »

2022 ಇಂದು ನೀಟ್ ಪರೀಕ್ಷೆ ಫಲಿತಾಂಶ,

ಬೆಂಗಳೂರು: ಬುಧವಾರ(ಸೆ.7) ಬಹುನಿರೀಕ್ಷಿತ ರಾಷ್ಟ್ರೀಯ ಅರ್ಹತಾ & ಪ್ರವೇಶ ಪರೀಕ್ಷೆ(NEET UG 2022) ಫಲಿತಾಂಶ ಹೊರ ಬೀಳಲಿದೆ. ಜುಲೈ 17ರಂದು ದೇಶದ 546 ನಗರಗಳಲ್ಲಿ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಗಳಿಗೆ ನಡೆದಿದ್ದ ನೀಟ್ ಪರೀಕ್ಷೆ ಫಲಿತಾಂಶ ಇಂದು ಹೊರ ಬೀಳಲಿದೆ. NTA ಅಧಿಕೃತ ವೆಬ್‌ಸೈಟ್‌ neet.nta.nic.in ನಲ್ಲಿ ಫಲಿತಾಂಶ ಲಭ್ಯವಾಗಲಿದ್ದು, ವಿದ್ಯಾರ್ಥಿಗಳು ಇಲ್ಲಿ ಲಾಗಿನ್ ಆಗಿ ತಮ್ಮ ರಿಸಲ್ಟ್ ಪರಿಶೀಲಿಸಬಹುದು. ಈ ವರ್ಷ ಒಟ್ಟು 18 ಲಕ್ಷ ವಿದ್ಯಾರ್ಥಿಗಳು …

Read More »

ಉಮೇಶ್ ಕತ್ತಿ ಅಗಲಿಕೆಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ

ಆಹಾರ ಮತ್ತು ಅರಣ್ಯ ಖಾತೆ ಸಚಿವ ಉಮೇಶ್ ಕತ್ತಿ (61) ಅವರ ಅಗಲಿಕೆಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಡಾಲರ್ಸ್ ಕಾಲೋನಿಯ ತಮ್ಮ ನಿವಾಸದಲ್ಲಿದ್ದ 61 ವರ್ಷದ ಉಮೇಶ್ ಕತ್ತಿ ಅವರು ಮಂಗಳವಾರ (ಸೆಪ್ಟೆಂಬರ್ 6) ರಾತ್ರಿ 10.30ರ ಸುಮಾರಿಗೆ ಬಾತ್ ರೂಮ್ ಗೆ ತೆರಳಿದ್ದಾಗ ಅಲ್ಲಿಯೇ ಕುಸಿದು ಬಿದ್ದಿದ್ದಾರೆ. ಅವರ ಕುಟುಂಬದವರು ತಕ್ಷಣ ಅವರನ್ನು ಸರ್ಕಾರಿ ಕಾರಿನಲ್ಲಿಯೇ ಎಂಎಸ್ ರಾಮಯ್ಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸಚಿವ ಉಮೇಶ್ ಕತ್ತಿ …

Read More »

ಹಿಂದಿ ಹೇರಿಕೆಗೆ ಉತ್ತರ: ಕರ್ನಾಟಕದ ಕಾರ್ಯಕ್ರಮಗಳಲ್ಲಿ ಕನ್ನಡ ಕಡ್ಡಾಯ!

ಬೆಂಗಳೂರು, ಸೆಪ್ಟೆಂಬರ್ 6: ಕರ್ನಾಟಕದಲ್ಲಿ ನಡೆಯುವ ಎಲ್ಲಾ ಸರ್ಕಾರಿ ಕಾರ್ಯಕ್ರಮಗಳಲ್ಲಿ ಕನ್ನಡವೇ ಕಡ್ಡಾಯ ಭಾಷೆ ಆಗಿರಬೇಕು ಎಂದು ರಾಜ್ಯ ಸರ್ಕಾರದಿಂದ ಸುತ್ತೋಲೆ ಹೊರಡಿಸಲಾಗಿದೆ. ಕನ್ನಡವನ್ನು ಕರ್ನಾಟಕದಲ್ಲಿ ಆಡಳಿತ ಭಾಷೆಯಾಗಿ ಅನುಷ್ಠಾನಗೊಳಿಸುವ ಉದ್ದೇಶದಿಂದ ಹಾಗೂ ಕನ್ನಡಿಗರ ಹಿತಾಸಕ್ತಿಯನ್ನು ಕಾನೂನಿನ ಅನ್ವಯ ಸಂರಕ್ಷಿಸುವ ಸಲುವಾಗಿ ಕನ್ನಡ ಅಭಿವೃದ್ಧಿ ಪ್ರಾಧಿಕಾರವನ್ನು ರಚನೆ ಮಾಡಲಾಗಿರುತ್ತದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.     ಕರ್ನಾಟಕದ ಆಡಳಿತ ಭಾಷೆಯಾಗಿ ಕನ್ನಡವೇ ಇರಬೇಕು ಎಂದು ಕರ್ನಾಟಕ ರಾಜ್ಯ ಭಾಷಾ ಅಧಿನಿಯಮ …

Read More »

ಹೊಸ ಸಾಹಸಕ್ಕೆ ಕೈ ಹಾಕಿದ ಕಲಾ ಸಾಮ್ರಾಟ್ ಎಸ್ ನಾರಾಯಣ್ ಪುತ್ರ!

ಸ್ಯಾಂಡಲ್‌ವುಡ್‌ನ ಶಿಸ್ತಿನ ನಿರ್ದೇಶಕ ಎಂದೇ ಖ್ಯಾತಿ ಪಡೆದಿರೋ ಎಸ್‌ ನಾರಾಯಣ್ ಹಾಗೂ ಅವರ ಪುತ್ರ ಹೊಸ ಸಾಹಸಕ್ಕೆ ಕೈ ಹಾಕಿದ್ದಾರೆ. ಪುತ್ರ ಪವನ್ ಎಸ್ ನಾರಾಯಣ್ ನೇತೃತ್ವದಲ್ಲಿ ‘ಕಲಾ ಸಾಮ್ರಾಟ್ ಫಿಲ್ಮ್ ಅಕಾಡೆಮಿ’ಯನ್ನು ಆರಂಭಿಸಿದ್ದಾರೆ. ಶಿಕ್ಷಕರ ದಿನದಂದು ಕನ್ನಡ ಚಿತ್ರರಂಗದ ಗಣ್ಯರ ಸಮ್ಮುಖದಲ್ಲಿ ‘ಕಲಾ ಸಾಮ್ರಾಟ್ ಫಿಲ್ಮ್ ಅಕಾಡೆಮಿ’ಯನ್ನು ಉದ್ಘಾಟನೆ ಮಾಡಿದ್ದಾರೆ. ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಭಾರ್ಗವ ಈ ನೂತನ ಫಿಲ್ಮ್ ಅಕಾಡೆಮಿಯನ್ನು ಉದ್ಘಾಟಿಸಿದ್ರೆ, ಹಿರಿಯ ನಟರಾದ ಮುಖ್ಯಮಂತ್ರಿ …

Read More »

ಆಪ್ತ ಸ್ನೇಹಿತನ ಅಗಲಿಕೆಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಕಂಬನಿ*

  ಗೋಕಾಕ್- ರಾಜ್ಯದ ಹಿರಿಯ ಶಾಸಕ, ಆಹಾರ ಮತ್ತು ಅರಣ್ಯ ಸಚಿವ ಉಮೇಶ್ ಕತ್ತಿ ಅವರ ಅಕಾಲಿಕ ನಿಧನಕ್ಕೆ ಅರಭಾವಿ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ಕತ್ತಿ ಅವರ ನಿಧನದಿಂದ ಮುತ್ಸದ್ದಿ, ಕ್ರಿಯಾಶೀಲ ವ್ಯಕ್ತಿತ್ವದ ಆಪ್ತ ಸ್ನೇಹಿತನೊಬ್ಬನನ್ನು ಕಳೆದುಕೊಂಡಿದ್ದೇನೆ. ನನ್ನ ಮತ್ತು ಕತ್ತಿ ಅವರ ಮಧ್ಯೆ ಸುಮಾರು ೨ ದಶಕದ ಒಡನಾಟವೂ ಎಂದೂ ಮರೆಯದ ಘಟನೆ ಎಂದೂ ಅವರು ತಿಳಿಸಿದ್ದಾರೆ. ಉತ್ತಮ ಹೃದಯವಂತಿಕೆಯ …

Read More »

ಹೃದಯಾಘಾತದಿಂದ ಬಿಜೆಪಿ ಶಾಸಕ ಅರವಿಂದ್ ಗಿರಿ ನಿಧನ..!

ಲಕ್ನೋ: ಉತ್ತರ ಪ್ರದೇಶದ ಬಿಜೆಪಿ ಶಾಸಕ ಅರವಿಂದ್ ಗಿರಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅರವಿಂದ್ ಗಿರಿ ಅವರು ಲಖೀಂಪುರ ಖೇರಿ ಜಿಲ್ಲೆಯ ಗೋಲ ಗೋಕ್ರನಾಥ ವಿಧಾನಸಭಾ ಕ್ಷೇತ್ರದಿಂದ ಐದು ಬಾರಿ ಶಾಸಕರಾಗಿದ್ದರು. ಈ ಕುರಿತಂತೆ ಮಾಹಿತಿ ನೀಡಿರುವ ಲಖೀಂಪುರ ಖೇರಿ ಬಿಜೆಪಿ ಘಟಕ, ಹೃದಯಾಘಾತದ ಬಳಿಕ ಕೂಡಲೇ ಅರವಿಂದ್ ಗಿರಿ ಅವರನ್ನು ಚಿಕಿತ್ಸೆಗಾಗಿ ಲಕ್ನೋಗೆ ಕರೆದೊಯ್ಯುವಾಗ ಸೀತಾಪುರ ಬಳಿ ಮಾರ್ಗ ಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ ಅರವಿಂದ್ ಗಿರಿ ಅವರ ಸಾವಿಗೆ ಮುಖ್ಯಮಂತ್ರಿ ಯೋಗಿ …

Read More »

ಪ್ರೌಢಶಾಲಾ ಸಹ ಶಿಕ್ಷಕರ ಅಕ್ರಮ ನೇಮಕ: 11 ಶಿಕ್ಷಕರ ಬಂಧನ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರದ ಅವಧಿಯಲ್ಲಿ ಸರ್ಕಾರಿ ಪ್ರೌಢ ಶಾಲೆಗಳ ಗ್ರೇಡ್‌ 2 ಸಹ ಶಿಕ್ಷಕರು ಮತ್ತು ಗ್ರೇಡ್‌-1ರ ದೈಹಿಕ ಶಿಕ್ಷಕರ ಅಕ್ರಮ ನೇಮಕಾತಿಗೆ ಸಂಬಂಧಿಸಿದ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ತುಮಕೂರು ಮತ್ತು ವಿಜಯಪುರ ಜಿಲ್ಲೆಯಲ್ಲಿ ಪ್ರಸ್ತುತ ಕರ್ತವ್ಯ ನಿರ್ವಹಿಸುತ್ತಿರುವ 11 ಮಂದಿ ಶಾಲಾ ಶಿಕ್ಷಕರನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ.   ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಬೋರನ ಕಣಿವೆ ಗ್ರಾಮದ ಶಾಲೆಯ ಶಮೀನಾಜ್‌ ಬಾನು (34), ಕುಣಿಗಲ್‌ ತಾಲೂಕಿನ ಕೊಡವತ್ತಿ ಗ್ರಾಮದ …

Read More »