Breaking News

Yearly Archives: 2022

ನಿನ್ನೆಯಷ್ಟೇ ಜನ್ಮದಿನ, ಇಂದು ಸಾವು!; ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ.

ಬೆಳಗಾವಿ: ಸಮೀಪದ ಹತ್ತರಗಿ ಬಳಿ ಭಾನುವಾರ ರಾತ್ರಿ ಯುವಕನನ್ನು ದುಷ್ಕರ್ಮಿಗಳ ಗುಂಪು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದೆ. ಯಮಕನಮರಡಿ ನಿವಾಸಿ ವಿನಾಯಕ ಸೋಮಶೇಖರ ಹೋರಕೇರಿ (28) ಕೊಲೆಯಾದ ಯುವಕ. ಈತ ಬೈಕ್​ನಲ್ಲಿ ಗ್ರಾಮಕ್ಕೆ ಮರಳುವಾಗ ಹಿಂಬಾಲಿಸಿ ಬಂದ ದುಷ್ಕರ್ಮಿಗಳು ಮನಬಂದಂತೆ ಕೊಚ್ಚಿದರು. ತೀವ್ರ ರಕ್ತಸ್ರಾವದಿಂದ ಯುವಕ ಸ್ಥಳದಲ್ಲೇ ಕೊನೆಯುಸಿರೆಳೆದ. ಕೊಲೆಗೆ ನಿಖರ ಕಾರಣ ಗೊತ್ತಾಗಿಲ್ಲ. ಆರೋಪಿಗಳು ಪರಾರಿಯಾಗಿದ್ದಾರೆ. ಈ ಯುವಕನ ಶನಿವಾರವಷ್ಟೇ ಹುಟ್ಟುಹಬ್ಬ ಆಚರಿಸಿಕೊಂಡಿದ್ದ. ಆದರೆ ಇಂದು ದುಷ್ಕರ್ಮಿಗಳ ಮಾರಕಾಸ್ತ್ರಗಳಿಗೆ ಬಲಿಯಾಗಿ …

Read More »

ಉದ್ಯೋಗಾಕಾಂಕ್ಷಿಗಳ ಗಮನಕ್ಕೆ: ಶೀಘ್ರವೇ ‘900 ಪಿಎಸ್‌ಐ ನೇಮಕಾತಿ’ಗೆ ಅರ್ಜಿ

ಹುಬ್ಬಳ್ಳಿ: ಈಗಾಗಲೇ 545 ಪಿಎಸ್‌ಐ ನೇಮಕಾತಿಯಲ್ಲಿನ ಅಕ್ರಮದಿಂದಾಗಿ ( PSI Recruitment Scam ) ನೇಮಕಾತಿ ರದ್ದಾಗಿದೆ. ಈ ಬೆನ್ನಲ್ಲೇ ರಾಜ್ಯದಲ್ಲಿ ಖಾಲಿ ಇರುವಂತ 900 ಪಿಎಸ್‌ಐ ಹುದ್ದೆಗಳ ನೇಮಕಕ್ಕೆ ( PSI Recruitment 2022 ) ಶೀಘ್ರವೇ ಅರ್ಜಿಯನ್ನು ಕರೆಯಲಾಗುತ್ತದೆ ಎಂಬುದಾಗಿ ಗೃಹ ಸಚಿವ ಅರಗ ಜ್ಞಾನೇಂದ್ರ ( Home Minister Araga Jnanendra ) ಘೋಷಣೆ ಮಾಡಿದ್ದಾರೆ.   ಇಂದು ಹುಬ್ಬಳ್ಳಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದಂತ ಅವರು, …

Read More »

ಗಣೇಶ್ ವಿಸರ್ಜನೆ ವೇಳೆ ಡಾಲ್ಬಿ ಗೆ ಪರ್ಮಿಷನ್ ಈ ಸಲಾ ಗಣೇಶ್ ಹಬ್ಬ ಫುಲ್ ಜೋರು

ಬೆಳಗಾವಿಯಲ್ಲಿ ಪರಂಪರಾಗತ ಗಣೇಶ ವಿಸರ್ಜನೆ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್ ನಿಯಮಗಳನ್ನು ಪಾಲಿಸಿ ಡಾಲ್ಬಿ ಬಳಕೆಗೆ ಅಧಿಕಾರಿಗಳು ಹಾಗೂ ಮಂತ್ರಿಗಳೊಂದಿಗೆ ಚರ್ಚಿಸಿ ಅನುಮತಿಯನ್ನು ನೀಡಲಾಗಿದೆ. ಹಾಗಾಗಿ ಎಲ್ಲಾ ಗಣೇಶ ಮಂಡಳದವರು ಸುಪ್ರೀಂ ಕೋರ್ಟ್ ಆದೇಶವನ್ನು ಪಾಲಿಸಿ ಡಾಲ್ಬಿ ಬಳಕೆ ಮಾಡಬೇಕೆಂದು ಶಾಸಕ ಅಭಯ್ ಪಾಟೀಲ್ ಮನವಿ ಮಾಡಿದ್ದಾರೆ. ಬೆಳಗಾವಿ ನಗರದಲ್ಲಿ ಸೆಪ್ಟೆಂಬರ್ ೯ ರಂದು ಅಂತಿಮವಾಗಿ ಗಣೇಶೋತ್ಸವ ವಿಸರ್ಜನೆ ಮಾಡುವ ಹಿನ್ನೆಲೆಯಲ್ಲಿ ಅಲ್ಲಿ ಮಾಡಿಕೊಳ್ಳಬೇಕಾದ ಅಗತ್ಯ ಸಿದ್ದತೆಗಳನ್ನು ಕುರಿತಂತೆ ಲೋಕಮಾನ್ಯ ಗಣೇಶ …

Read More »

ಬೆಳಗಾವಿಯ 22 ಶಾಲೆಗಳು ಆರಂಭ: ಡಿಡಿಪಿಐ ಬಸವರಾಜ ನಾಲತವಾಡ

ಚಿರತೆ ಕಂಡುಬಂದಿದ್ದ ಹಿನ್ನೆಲೆಯಲ್ಲಿ ಕಳೆದ ಹಲವಾರು ದಿನಗಳಿಂದ ರಜೆ ನೀಡಲಾಗಿದ್ದ 22 ಶಾಲೆಗಳು ಸೋಮವಾರದಿಂದ ಯಥಾಪ್ರಕಾರ ಆರಂಭಗೊಳ್ಳಲಿವೆ ಎಂದು ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಬಸವರಾಜ ನಾಲತವಾಡ ಅವರು ತಿಳಿಸಿದ್ದಾರೆ. ನಗರದಲ್ಲಿ ಚಿರತೆ ಕಂಡುಬಂದ ಹಿನ್ನೆಲೆಯಲ್ಲಿ ಬೆಳಗಾವಿ ನಗರ ಹಾಗೂ ಗ್ರಾಮೀಣ ವಲಯದ 22 ಶಾಲೆಗಳಿಗೆ ರಜೆ ನೀಡಲಾಗಿತ್ತು. ಇದೀಗ ಶಾಲೆಗಳನ್ನು ಪುನರ್ ಆರಂಭಿಸಲಾಗುತ್ತಿದ್ದು, ಯಥಾಪ್ರಕಾರ ಶಾಲೆಗಳು ಸೋಮವಾರದಿಂದ ಕಾರ್ಯನಿರ್ವಹಿಸಲಿವೆ. ಪಾಲಕರು ಹಾಗೂ ಶಾಲೆಗಳು ಮಕ್ಕಳ ಸುರಕ್ಷತೆಗೆ ಸಂಬಂಧಿಸಿದಂತೆ ಸೂಕ್ತ ಎಚ್ಚರಿಕೆ …

Read More »

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ: ರಾಜ್ಯದ ಪರ ವಾದ ಮಂಡಿಸಲು ನುರಿತ ವಕೀಲರ ನಿಯೋಜನೆ: ಸಿಎಂ

ಹುಬ್ಬಳ್ಳಿ: ಸುಪ್ರೀಂಕೋರ್ಟ್ ನಲ್ಲಿ ನ. 23ರಂದು ಕರ್ನಾಟಕ-ಮಹಾರಾಷ್ಟ್ರ ಗಡಿವಿವಾದ ವಿಷಯ ವಿಚಾರಣೆಗೆ ಬರಲಿದ್ದು, ರಾಜ್ಯದ ಪರವಾಗಿ ವಾದ ಮಂಡಿಸಲು ಸಮರ್ಥ ಕಾನೂನು ತಜ್ಞರ ತಂಡ ನೇಮಕ ಮಾಡಲು ಅಡ್ವೋಕೇಟ್ ಜನರಲ್ ರಿಗೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.   ರವಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಡಿವಿವಾದದ ವಿಷಯ ಕುರಿತು ಈಗಾಗಲೇ ಅಡ್ವೋಕೇಟ್ ಜನರಲ್ ಅವರನ್ನು ಸಂಪರ್ಕಿಸಿ, ಅಗತ್ಯ ಸಲಹೆ-ಸೂಚನೆ ನೀಡಲಾಗಿದೆ. ಆ ಕುರಿತು ಸಾಕಷ್ಟು ಅಧ್ಯಯನ ಸಹ …

Read More »

ಖಾಸಗಿ ಶಾಲಾ ವಾಹನಗಳಿಗೆ 45 ಸಾವಿರ ರೂ. ದಂಡ

ಬೆಳಗಾವಿ: ಜಿಲ್ಲೆಯ ವಿವಿಧ ಭಾಗಗಳಲ್ಲಿ ಸಂಚಾರ ನಿಯಮ ಉಲ್ಲಂಘಿಸಿ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗುತ್ತಿದ್ದ ಖಾಸಗಿ ಶಿಕ್ಷಣ ಸಂಸ್ಥೆಗಳ 85 ವಾಹನಗಳ ವಿರುದ್ಧ ಜಿಲ್ಲಾ ಪೊಲೀಸರು 129 ಕೇಸ್ ದಾಖಲಿಸಿದ್ದಾರೆ. ಬೆಳಗಾವಿ ಜಿಲ್ಲೆಯ ನಿಪ್ಪಾಣಿ, ಮೂಡಲಗಿ ತಾಲೂಕು ಸೇರಿದ್ದಂತೆ ಇತರ ಕಡೆ ಕಾರ್ಯಾಚರಣೆ ನಡೆಸಿದ ಜಿಲ್ಲಾ ಪೊಲೀಸರು ಖಾಸಗಿ ವಾಹನಗಳಲ್ಲಿ ಹೆಚ್ಚುವರಿ ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋಗುತ್ತಿದ್ದ 85 ವಾಹನಗಳ ವಿರುದ್ಧ 129 ಕೇಸ್ ದಾಖಲಿಸಿ 45,800 ರೂ.ದಂಡ ವಿಧಿಸಿದ್ದಾರೆ.  ಶಾಲಾ ವಾಹನಗಳ ಚಾಲಕರು …

Read More »

ಗಣೇಶನ ಜೊತೆಗೆ ಗಾಲ್ಫ್ ಮೈದಾನದ ಚಿರತೆಗೂ ನಿತ್ಯ ಪೂಜೆ

ಬೆಳಗಾವಿ: ಕಳೆದ 1 ತಿಂಗಳಿನಿಂದ ಬೆಳಗಾವಿಯ ಗಾಲ್ಫ್ ಮೈದಾನದಲ್ಲಿ ಅಡಗಿ ಕುಳಿತುಕೊಂಡಿರುವ ಚಾಣಾಕ್ಷ ಚಿರತೆ ಇನ್ನೂ ಸೆರೆಯಾಗಿಲ್ಲ. ಆದರೆ ಕುಂದಾ ನಗರಿ ಜನರು ಮಾತ್ರ ಗಣೇಶನ ಜೊತೆಗೆ ಚಿರತೆಗೂ ದಿನನಿತ್ಯ ಪೂಜೆ ಸಲ್ಲಿಸುತ್ತಿದ್ದಾರೆ. ಹೌದು, ಇಲ್ಲಿನ ವಿಶ್ವೇಶ್ವರಯ್ಯ ನಗರದ ಮನೆಯೊಂದರಲ್ಲಿ ಗಣೇಶನ ಮೂರ್ತಿ ಜೊತೆಗೆ ಚಿರತೆಯ ಗೊಂಬೆಯನ್ನು ಇಟ್ಟು ಪೂಜೆ ಸಲ್ಲಿಸಲಾಗುತ್ತಿದೆ. ಕಳೆದೊಂದು ತಿಂಗಳ ಹಿಂದೆ ಜಾಧವ್ ನಗರದಲ್ಲಿ ಕಟ್ಟಡ ಕಾರ್ಮಿಕನ ಮೇಲೆ ದಾಳಿ ನಡೆಸಿ ಗಾಲ್ಫ್ ಮೈದಾನ ಸೇರಿದ ಚಿರತೆ …

Read More »

ಪಂಚಮಸಾಲಿ 2A ಮೀಸಲಾತಿ ಹೋರಾಟಕ್ಕೆ ಸಚಿವ ಉಮೇಶ್‌ ಕತ್ತಿ ಬೆಂಬಲ

ಚಿಕ್ಕೋಡಿ: ಪಂಚಮಸಾಲಿ 2A ಮೀಸಲಾತಿ ಹೋರಾಟಕ್ಕೆ ಸಚಿವ ಉಮೇಶ್‌ ಕತ್ತಿ ಬೆಂಬಲ ಸೂಚಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಅರ್ಜುನವಾಡ ಗ್ರಾಮದಲ್ಲಿ ನಡೆದ ಪಂಚಮಸಾಲಿ ಹೋರಾಟದ ಪಾದಯಾತ್ರೆಯಲ್ಲಿ ಭಾಗವಹಿಸಿದ ಸಚಿವರು ಪಂಚಮಸಾಲಿ ಹೋರಾಟಕ್ಕೆ ನನ್ನ ಬೆಂಬಲ ಇರುವುದಾಗಿ ಘೋಷಿಸಿದ್ದಾರೆ ಉಮೇಶ್ ಕತ್ತಿ ಬಣಜಿಗ ಸಮುದಾಯಕ್ಕೆ ಸೇರಿದವರಾದರೂ ಪಂಚಮಸಾಲಿ 2ಎ ಮೀಸಲಾತಿ ಹೋರಾಟದಲ್ಲಿ ಭಾಗವಹಿಸಿದ್ದಕ್ಕೆ ಹೋರಾಟಗಾರರು ಸಂತಸ ವ್ಯಕ್ತಪಡಿಸಿದ್ದಾರೆ. ಮೀಸಲಾತಿ ಹೋರಾಟವನ್ನುದ್ದೇಶಿಸಿ ಮಾತನಾಡಿದ ಸಚಿವ ಉಮೇಶ್ ಕತ್ತಿ, ಪಂಚಮಸಾಲಿ ಸಮುದಾಯಕ್ಕೆ ನ್ಯಾಯ ಕೊಡಿಸುವ …

Read More »

ಸರ್ಕಾರಿ ಇಲಾಖೆಯಲ್ಲಿ ಲಂಚ ಇಲ್ಲದೇ ಕೆಲಸ ನಡೆಯಲ್ಲ; ಭ್ರಷ್ಟಾಚಾರಕ್ಕೆ ಮೋದಿ ಬೆಂಬಲ – ಸಿದ್ದು ಆರೋಪ

ಹಾಸನ: ಇಂದು ಯಾವುದೇ ಸರ್ಕಾರಿ ಇಲಾಖೆಯ ಕಚೇರಿಗಳಿಗೆ ಹೋದರೂ ಲಂಚವಿಲ್ಲದೇ ಕೆಲಸ ನಡೆಯೋದಿಲ್ಲ. ಹೀಗಿದ್ದೂ ಪ್ರಧಾನಿ ನರೇಂದ್ರ ಮೋದಿ ಅವರೇ ಭ್ರಷ್ಟಾಚಾರ ಬೆಂಬಲಿಸುತ್ತಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಅರಸೀಕೆರೆ ತಾಲ್ಲೂಕಿನಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪ್ರಧಾನಿಯವರೇ ಭ್ರಷ್ಟಾಚಾರ ಬೆಂಬಲಿಸುತ್ತಿದ್ದಾರೆ. ಕೆಂಪಣ್ಣ ಅವರು ಪತ್ರ ಬರೆದು ಒಂದು ವರ್ಷ ಆಯ್ತು. ಇವತ್ತಿನವರೆಗೂ ಪ್ರಧಾನಿ ಕ್ರಮ ತೆಗೆದುಕೊಂಡಿಲ್ಲ. ಈ ಹಿಂದೆಯೂ ನಾ ಕಾವೂಂಗ್, ನಾ ಕಾನೇದೊಂಗಾ ಅಂತ ಪ್ರಧಾನಮಂತ್ರಿ ಹೇಳಿದ್ರು. …

Read More »

ಸಂಕೇಶ್ವರ ಹೊರ ವಲಯದ ಹೈವೇ ಬಳಿ ಬಾವಿಯಲ್ಲಿ ಶವ ಪತ್ತೆ

ಸಂಕೇಶ್ವರ ನಗರದ ಹೊರ ವಲಯದ ರಾಷ್ಟ್ರೀಯ ಹೆದ್ದಾರಿ ಬೈ ಪಾಸ್ ರಸ್ತೆಯ ಬಳಿ ಇರುವ ಬಾವಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆಯಾಗಿರುವ ಘಟನೆ ರವಿವಾರ ಬೆಳಿಗ್ಗೆ ವರದಿಯಾಗಿದೆ. ಸಂಕೇಶ್ವರ ನಗರದ ಹೊರ ವಲಯದಲ್ಲಿ ಹಾಯ್ದು ಹೋಗಿರುವ ಪುನಾ ಬೆಂಗಳೂರು ರಾಷ್ಟ್ರೀಯ ಬೈಪಾಸ್ ರಸ್ತೆಯಲ್ಲಿ ಇರುವ ಡಾ. ಸಚೀನ ಪಾಟೀಲ ಅವರ ಜಮೀನಿನಲ್ಲಿರುವ ಬಾವಿಯಲ್ಲಿ ವ್ಯಕ್ತಿಯೊರ್ವರ ಮೃತದೇಹವು ಇಂದು ಬೆಳಿಗ್ಗೆ ಪತ್ತೆಯಾಗಿದೆ. ಈ ವ್ಯಕ್ತಿಯು ಮೂಲತಃ ನಿಪ್ಪಾಣಿ ಪಟ್ಟಣದವನು ಎಂದು ತಿಳಿದು ಬಂದಿದೆ. …

Read More »