Breaking News

Yearly Archives: 2022

ಪೊಲೀಸ್ ಎಂದು ನಂಬಿಸಿ ಮಹಿಳೆಯ ಚಿನ್ನಾಭರಣ ಎಗರಿಸಿದ್ದ ಆರೋಪಿ ಅಂದರ್

ಚಿಕ್ಕೋಡಿ: ತಾನು ಪೊಲೀಸ್ ಎಂದು ನಂಬಿಸಿ ಮಹಿಳೆಯ ಬಳಿ ಇದ್ದ ಚಿನ್ನಾಭರಣ ಎಗರಿಸಿದ್ದ ಆರೋಪಿಯನ್ನು ಸಂಕೇಶ್ವರ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಮಹಾರಾಷ್ಟ್ರದ ಸಾಂಗ್ಲಿಯ ಮಹಮ್ಮದ್ ಯೂಸುಫ್ ಇರಾನಿ ಎಂದು ಗುರುತಿಸಲಾಗಿದೆ. ಇತ್ತಿಚೆಗೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದ ವಿಜಯಲಕ್ಷ್ಮೀ ರಾಜು ಚೌಗಲೆ ಎಂಬ ಮಹಿಳೆಗೆ ತಾನು ಪೊಲೀಸ್ ಎಂದು ನಂಬಿಸಿ, ಬೇರೆ ಕಡೆ ಗಮನ ಸೆಳೆದು 1.5 ಲಕ್ಷ ರೂ. ಬೆಲೆಯ ಚಿನ್ನಾಭರಣ ಕದ್ದು ಪರಾರಿಯಾಗಿದ್ದ. ಪ್ರಕರಣ ದಾಖಲಿಸಿಕೊಂಡ …

Read More »

ಲೋಕಕಲ್ಯಾಣಕ್ಕಾಗಿ 220 ಕಿ.ಮೀ. ಉರುಳು ಸೇವೆ ಮಾಡಿದ ಪಂಡರಪುರದ ವಿಠ್ಠಲನ ಭಕ್ತ

ಚಿಕ್ಕೋಡಿ: ಇಷ್ಟಾರ್ಥ ಸಿದ್ಧಿಗಾಗಿ ಭಕ್ತರು ದೇವಸ್ಥಾನಗಳಲ್ಲಿ ಉರುಳು ಸೇವೆ ಮಾಡೋದನ್ನ ಕೇಳಿದ್ದೀವಿ, ನೋಡಿದ್ದೀವಿ‌. ಅಷ್ಟೆ ಯಾಕೆ ಪಾದಯಾತ್ರೆ ಮೂಲಕ ತಮ್ಮ ಮನೆದೇವರ ಹರಕೆ ತೀರಿಸಿದವರನ್ನೂ ಸಹ ನೋಡಿರ್ತೀವಿ. ಆದರೆ ಇಲ್ಲೊಬ್ಬ ವಿಠ್ಠಲನ ಭಕ್ತ ಲೋಕಕಲ್ಯಾಣಕ್ಕಾಗಿ ಸುಮಾರು 220 ಕಿ.ಮೀ. ಉರುಳು ಸೇವೆ ಮಾಡಿ ಪಂಡರಪುರದ ವಿಠ್ಠಲನ ಕೃಪೆಗೆ ಪಾತ್ರನಾಗಿದ್ದಾ‌ನೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಬೇವನೂರು ಗ್ರಾಮದ ನಿವಾಸಿ ಶಹಾಜೀ ಜಾಧವ್ ಉರುಳು ಸೇವೆ ಸಲ್ಲಿಸಿದ ಭಕ್ತ. ಶಹಾಜೀ ಅಥಣಿ ತಾಲೂಕಿನ …

Read More »

ಮುರುಘಾ ಶ್ರೀ ಬಗ್ಗೆ ನನಗೆ ಗೌರವ ಕಡಿಮೆ ಆಗಿಲ್ಲ: ಈಶ್ವರಪ್ಪ

ಶಿವಮೊಗ್ಗ: ಮುರುಘಾ ಶ್ರೀ ಬಗ್ಗೆ ನನಗೆ ಗೌರವ ಕಡಿಮೆ ಆಗಿಲ್ಲ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾಧ್ಯಮದವರೊಂದಿಗೆ ಮುರುಘಾ ಶ್ರೀ ಬಂಧನ ವಿಚಾರವಾಗಿ ಮಾತನಾಡಿದ ಅವರು, ಮಠದ ಸ್ವಾಮಿಗಳು ಅಂದರೆ ನನಗೆ ದೇವರಿದ್ದಂತೆ. ಮುರುಘಾ ಶ್ರೀ ಬಗ್ಗೆ ನನಗೆ ಗೌರವ ಕಡಿಮೆ ಆಗಿಲ್ಲ. ತನಿಖೆ ನಡೆಯುತ್ತಿದೆ ಸತ್ಯವೋ ಸುಳ್ಳೋ ಹೊರಗೆ ಬರಲಿ. ಮಠ, ಮಂದಿರ, ಭಕ್ತಿ, ಜಾಗೃತಿ ಉಂಟು ಮಾಡುತ್ತದೆ ಎಂದಿದ್ದಾರೆ.    

Read More »

ದಲಿತ ಬಾಲಕಿಯರು ಬಡಿಸಿದ ಊಟವನ್ನು ಬಿಸಾಡಿ ಎಂದ ಅಡುಗೆಯವ – ಬಂಧನ

ಜೈಪುರ: ರಾಜಸ್ಥಾನದ ಉದಯಪುರ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಇಬ್ಬರು ದಲಿತ ಬಾಲಕಿಯರಿಗೆ ತಾರತಮ್ಯ ಮಾಡಿದ ಆರೋಪದ ಮೇಲೆ ಅಡುಗೆಯವನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಶುಕ್ರವಾರ ಬರೋಡಿ ಪ್ರದೇಶದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಲಾಲ್ ರಾಮ್ ಗುರ್ಜರ್ ಎಂಬಾತ ತಯಾರಿಸಿದ ಮಧ್ಯಾಹ್ನದ ಊಟವನ್ನು ದಲಿತ ಬಾಲಕಿಯರು ಬಡಿಸಿದ್ದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಲಾಲ್ ರಾಮ್, ದಲಿತ ಬಾಲಕಿಯರು ಬಡಿಸಿದ ಊಟವನ್ನು ಎಸೆಯುವಂತೆ ಇತರ ವಿದ್ಯಾರ್ಥಿಗಳಿಗೆ ಹೇಳಿರುವುದಾಗಿ ಪೊಲೀಸರು ತಿಳಿಸಿದ್ದಾರೆ. …

Read More »

ದಕ್ಷಿಣ ವಲಯ ಅಂತರರಾಜ್ಯ ಪರಿಷತ್ತಿನ ಸಭೆಯಲ್ಲಿ ಸಿಎಂ ಬೊಮ್ಮಾಯಿ ಭಾಗಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಕೇರಳದ ತಿರುವನಂತಪುರದಲ್ಲಿ ನಡೆದ ದಕ್ಷಿಣ ವಲಯ ಅಂತರರಾಜ್ಯ ಪರಿಷತ್ತಿನ ಸಭೆಯಲ್ಲಿ ಭಾಗವಹಿಸಿದರು, ದಕ್ಷಿಣದ ಇತರ ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ಸಚಿವರೊಂದಿಗೆ ಸಿಎಂ ಬಸವರಾಜ್ ಬೊಮ್ಮಾಯಿಯವರು ಸೌಹಾರ್ದಯುತ ಮಾತುಕತೆ ನಡೆಸಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೇರಳ ಮುಖ್ಯಮಂತ್ರಿ ಪಿನರಾಯಿ ವಿಜಯನ್ ಅವರೊಂದಿಗೆ ಔಪಚಾರಿಕ ಮಾತುಕತೆ ನಡೆಸಿದರು. ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಇನ್ನುಳಿದವರು ಈ ವೇಳೆ ಭಾಗಿಯಾಗಿದ್ಧರು.

Read More »

ಕೆಪಿಟಿಸಿಎಲ್ ಪರೀಕ್ಷಾ ಅಕ್ರಮ: ಹುಬ್ಬಳ್ಳಿಯಲ್ಲಿ ಕಿಂಗ್‌ಪಿನ್‌ ಅರೆಸ್ಟ್

ಬೆಳಗಾವಿ : ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಕೆಪಿಟಿಸಿಎಲ್ ಕಿರಿಯ ಅಭಿಯಂತರ(ಜೆಇ)ಗೆ ನಡೆಸಲಾದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ನಡೆದ ಅಕ್ರಮಕ್ಕೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲಾ ಪೊಲೀಸರು ಪ್ರಮುಖ ಆರೋಪಿಯನ್ನು ಬಂಧಿಸಿದ್ದು ಬಂಧಿತರ ಸಂಖ್ಯೆ 13ಕ್ಕೇರಿದೆ. ಈ ಪರೀಕ್ಷೆಯ ಅಕ್ರಮದ ಕಿಂಗ್​ ಪಿನ್​ ಎಂದೇ ಕರೆಯಲಾಗುತ್ತಿದ್ದ ಜಿಲ್ಲೆಯ ಗೋಕಾಕ್​ ತಾಲೂಕಿನ ಸಂಜೀವ ಲಕ್ಷ್ಮಣ ಭಂಡಾರಿ ಬಂಧಿತ. ಬಂಧಿತ ಆರೋಪಿಯನ್ನು ಪೊಲೀಸರು ಗೋಕಾಕ್​ನ ಪ್ರಿನ್ಸಿಪಲ್ ಜೆಎಂಎಫ್‌ಸಿಗೆ ಹಾಜರುಪಡಿಸಿದ್ದರು. ಈ ವೇಳೆ ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಯನ್ನು 7ದಿನಗಳ ವರೆಗೆ …

Read More »

ಮಳೆ ಹಾನಿ ಪ್ರದೇಶದ ವೀಕ್ಷಣೆ ವೇಳೆ ಮಹಿಳೆಗೆ ಗದರಿದ ಶಾಸಕ ಲಿಂಬಾವಳಿ.

ಬೆಂಗಳೂರು: ಬೆಂಗಳೂರಿನ ವಿವಿಧ ಪ್ರದೇಶಗಳ ಮಳೆ ಹಾನಿ ವೀಕ್ಷಣೆಗೆ ತೆರಳಿದ್ದ ಸಂದರ್ಭದಲ್ಲಿ ಶಾಸಕ ಅರವಿಂದ್ ಲಿಂಬಾವಳಿ ಮಹಿಳೆಗೆ ಅವಾಜ್ ಹಾಕಿದ್ದಾರೆಂಬ ಆರೋಪ ಕೇಳಿ ಬಂದಿದೆ. ಅದಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್​ ಆಗಿದೆ. ಮಳೆ ಹಾನಿ ಪ್ರದೇಶದ ವೀಕ್ಷಣೆ ವೇಳೆ ಮಹಿಳೆಗೆ ಗದರಿದ ಶಾಸಕ ಲಿಂಬಾವಳಿ… ವರ್ತೂರಿನಲ್ಲಿ ಈ ಘಟನೆ ನಡೆದಿದೆ ಎನ್ನಲಾಗ್ತಿದೆ. ಸುರಿದ ಭಾರೀ ಮಳೆಯಿಂದಾಗಿ ಮಹದೇವಪುರ ಕ್ಷೇತ್ರದ ಹಲವೆಡೆ ಪ್ರವಾಹ ಉಂಟಾಗಿತ್ತು. ಪ್ರವಾಹ ಪೀಡಿತ ಪ್ರದೇಶ ಪರಿವೀಕ್ಷಣೆಗೆ …

Read More »

ಮುರುಘಾ ಶರಣರ ವಿರುದ್ಧ ಪೋಕ್ಸೋ ಪ್ರಕರಣ: ಪತ್ರಕರ್ತ ಪಿ ಸಾಯಿನಾಥ್ ರಿಂದ ‘ಬಸವ ಶ್ರೀ’ ಪ್ರಶಸ್ತಿ ವಾಪಸ್‌!

ಬೆಂಗಳೂರು: ಆಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇರೆಗೆ ಪೋಕ್ಸೋ ಪ್ರಕರಣದಡಿ ಬಂಧನಕ್ಕೀಡಾಗಿರುವ ಮುರುಘಾ ಶರಣರ ಪ್ರಕರಣದ ಹಿನ್ನಲೆಯಲ್ಲಿ ಖ್ಯಾತ ಹಿರಿಯ ಪತ್ರಕರ್ತ ಪಿ ಸಾಯಿನಾಥ್ ಅವರು ಮುರುಘಾ ಮಠದಿಂದ ಪಡೆದಿದ್ದ ಬಸವ ಶ್ರೀ ಪ್ರಶಸ್ತಿಯನ್ನು ವಾಪಸ್ ಮಾಡಲು ನಿರ್ಧರಿಸಿದ್ದಾರೆ.   ಈ ಕುರಿತು ಸ್ವತಃ ಸಾಯಿನಾಥ್ ಅವರೇ ಮಾಹಿತಿ ನೀಡಿದ್ದು, ಚಿತ್ರದುರ್ಗದ ಮುರುಘಾಮಠವು ನೀಡಿದ್ದ ಬಸವ ಶ್ರೀ ಪ್ರಶಸ್ತಿಯನ್ನು ವಾಪಸ್‌ ನೀಡುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ …

Read More »

ಪೋಕ್ಸೋ ಕೇಸಿನಡಿ ಜೈಲುಪಾಲಾಗಿರುವ ಮುರುಘಾ ಶರಣರಿಗೆ ಮತ್ತಷ್ಟು ಸಂಕಷ್ಟ: ವಂಚನೆ ಕೇಸಿನಲ್ಲಿ ಜಾಮೀನುರಹಿತ ವಾರಂಟ್

ಬೆಂಗಳೂರು: ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣದಡಿ ಪೋಕ್ಸೋ ಕಾಯ್ದೆಯಡಿ ಕೇಸು ದಾಖಲಾಗಿ ಜೈಲುಪಾಲಾಗಿರುವ ಚಿತ್ರದುರ್ಗದ ಮುರುಘಾ ಶರಣರಿಗೆ ಮತ್ತಷ್ಟು ಸಂಕಷ್ಟು ಎದುರಾಗಿದೆ. 2010ರಲ್ಲಿ ಅವರ ವಿರುದ್ಧ ದಾಖಲಾದ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುರುಘಾ ಶರಣರ ವಿರುದ್ಧ ಬೆಂಗಳೂರು ನಗರ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ.   ಮಠದ ಭಕ್ತರಾದ ಪಿಎಸ್ ಪ್ರಕಾಶ್ ಅಲಿಯಾಸ್ ಪಂಚಿ ಎಂಬವರು ನೀಡಿದ ದೂರಿನ ಆಧಾರದ ಮೇಲೆ ಕೆಂಗೇರಿ ಪೊಲೀಸರು ಮುರುಘಾ …

Read More »

ಮುರುಘಾ ಶ್ರೀ ಬಂಧನ: ಇಕ್ಕಟ್ಟಿಗೆ ಸಿಲುಕಿದ ಕಾಂಗ್ರೆಸ್

ಬೆಂಗಳೂರು: ಅಪ್ರಾಪ್ತೆಯರ ಮೇಲೆ ಅತ್ಯಾಚಾರ ನಡೆಸಿದ ಆರೋಪ ಹಿನ್ನೆಲೆಯಲ್ಲಿ ಚಿತ್ರದುರ್ಗದ ಬೃಹನ್ ಮಠದ ಮುರುಘಾ ಶರಣರು ಬಂಧನಕ್ಕೆ ಒಳಗಾಗಿರುವುದು ರಾಜಕೀಯವಾಗಿ ಕಾಂಗ್ರೆಸ್ ಪಕ್ಷವನ್ನು ಇಕ್ಕಟ್ಟಿಗೆ ಸಿಲುಕಿಸಿದೆ.   ರಾಜ್ಯ ರಾಜಕೀಯದ ಮೇಲೆ ತಲತಲಾಂತರದಿಂದ ಮುರುಘಾ ಮಠ ತನ್ನದೇ ಆದ ಪ್ರಭಾವ ಹೊಂದಿದೆ. ಬಹುಸಂಖ್ಯಾತ ವೀರಶೈವ- ಲಿಂಗಾಯತರ ಶ್ರದ್ಧಾಕೇಂದ್ರವಾಗಿರುವುದರಿಂದ ಈ ಪ್ರಕರಣ ಮುಂದಿನ ಚುನಾವಣಾ ದೃಷ್ಟಿಯಿಂದಲೂ ಮಹತ್ವ ಪಡೆದಿದೆ. ಹೀಗಾಗಿ ಕಾಂಗ್ರೆಸ್ ಈ ವಿಚಾರದಲ್ಲಿ ಎಚ್ಚರಿಕೆಯ ಹೆಜ್ಜೆ ಇಡಲು ನಿರ್ಧರಿಸಿದೆ. ವಿಪಕ್ಷ …

Read More »