ಕೊಪ್ಪಳ: ಬಡವರು, ರೈತರು, ದೀನದಲಿತರು ಹೀಗೆ ಎಲ್ಲಾ ವರ್ಗದವರ ಏಳಿಗೆಗೆ ನಮ್ಮ ಸರ್ಕಾರ ಜಾರಿಗೆ ತಂದ ಯೋಜನೆಗಳು ಹಾಗೂ ಮಾಡಿದ ಕೆಲಸಗಳನ್ನು ಜನರ ಮುಂದಿಟ್ಟು ಮತ ಕೇಳಬೇಕು ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಹೇಳಿದರು. ಇಲ್ಲಿನ ತಾಲ್ಲೂಕು ಕ್ರೀಡಾಂಗಣದಲ್ಲಿ ಗುರುವಾರ ನಡೆದ ಸಾರ್ವಜನಿಕ ಸಮಾರಂಭದಲ್ಲಿ ಸೇರಿದ್ದ ಸಾವಿರಾರು ಜನರನ್ನು ಹುರಿದುಂಬಿಸಿ ಮಾತನಾಡಿದ ಅವರು ಮುಂಬರುವ ವಿಧಾನಸಭಾ ಚುನಾವಣೆಗೆ ಮತ ಕಹಳೆ ಊದಿದರು. ‘ಪ್ರಧಾನಿ ನರೇಂದ್ರ ಮೋದಿ, ಬಿ.ಎಸ್. ಯಡಿಯೂರಪ್ಪ …
Read More »Yearly Archives: 2022
ನಾನು ರಾಜಕೀಯಕ್ಕೆ ಖಂಡಿತವಾಗಿ ಬರುವುದಿಲ್ಲ : ನಟ ಶಿವರಾಜಕುಮಾರ್
ಹೊಸಪೇಟೆ (ವಿಜಯನಗರ): ನಾನು ರಾಜಕೀಯಕ್ಕೆ ಖಂಡಿತವಾಗಿ ಬರುವುದಿಲ್ಲ. ಸಿನಿಮಾ ರಂಗದಲ್ಲಿಯೇ ಮುಂದುವರೆಯುತ್ತೇನೆ ಎಂದು ಚಿತ್ರನಟ ಶಿವರಾಜಕುಮಾರ್ ಹೇಳಿದರು. ವೇದ ಚಿತ್ರತಂಡದೊಂದಿಗೆ ಗುರುವಾರ ನಗರದಲ್ಲಿ ಸಿನಿಮಾ ಪ್ರಚಾರ ಕೈಗೊಂಡ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ‘ವೇದ ಸಿನಿಮಾದಲ್ಲಿ ಸಾಮಾಜಿಕ ಸಂದೇಶವಿದೆ. ಆಯಕ್ಷನ್, ಹಾಡು, ಮನರಂಜನೆ ಎಲ್ಲವೂ ಇದೆ. ಜೊತೆಗೆ ‘ಮಾಸ್-ಕ್ಲಾಸ್ ಫೀಲ್’ ಕೂಡ ಇದೆ. ಸಿನಿಮಾ ನೋಡಿದವರು ಯಾರೂ ಡಿಸಪಾಯಿಂಟ್ ಆಗಲ್ಲ’ ಇದು ಚಿತ್ರನಟ ಶಿವರಾಜಕುಮಾರ್ ಅವರು ಅವರ 125ನೇ …
Read More »ಹೆಡ್ ಮಾಸ್ಟರ್ ಗೆ ಹಿಗ್ಗಾ ಮುಗ್ಗಾ ಥಳಿಸಿದ ಹಾಸ್ಟೆಲ್ ವಿದ್ಯಾರ್ಥಿನಿಯರು
ಹಾಸ್ಟೆಲ್ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ಕೊಡುತ್ತಿದ್ದ ಹೆಡ್ ಮಾಸ್ಟರ್ ಚಿನ್ಮಯಾನಂದ ವಿದ್ಯಾರ್ಥಿನಿಯರ ಕೈಗೆ ಸಿಕ್ಕಿ ಹಿಗ್ಗಾ ಮುಗ್ಗಾ ಹೊಡೆತ ತಿಂದು ಹೈರಾಣಾದ ಘಟನೆ ಮಂಡ್ಯದಲ್ಲಿ ನಡೆದಿದೆ. ಹಾಸ್ಟೆಲ್ ನ ಎಲ್ಲ ವಿದ್ಯಾರ್ಥಿನಿಯರು ಕೈಯಲ್ಲಿ ಕೋಲು ಹಿಡಿದುಕೊಂಡು ಹಿಗ್ಗಾ ಮುಗ್ಗಾ ಥಳಿಸಿದ್ದಾರೆ.
Read More »ರಾಷ್ಟ್ರೀಯ ಹೆದ್ದಾರಿ ತಡೆದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕರ್ನಾಟಕ ಪ್ರತಿಭಟನೆ
ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಷ್ಟ್ರೀಯ ಹೆದ್ದಾರಿ 50 ನ್ನು ತಡೆದು ಪ್ರತಿಭಟನೆ ನಡೆಸಲಾಯಿತು. ಕರ್ನಾಟಕ ರಾಜ್ಯ ರೈತ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ರಾಷ್ಟ್ರೀಯ ಹೆದ್ದಾರಿ 50 ತಡೆದು ಹೋರಾಟ ನಡೆಸಿರುವ ಘಟನೆ ವಿಜಯಪುರ ಜಿಲ್ಲೆ ನಿಡಗುಂದಿ ಪಟ್ಟಣದಲ್ಲಿ ನಡೆಯಿತು. ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾಧ್ಯಕ್ಷ ವಿಜಯ ಪೂಜಾರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. …
Read More »ವಾಹನ ಡಿಕ್ಕಿಯಾಗಿ ಇಬ್ಬರ ಸಾವು
ಕಾರಿಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ ದುರ್ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಹಂಚಿನಾಳ ಕ್ರಾಸ್ ಬಳಿ ನಡೆದಿದೆ. ಗೋಕಾಕ ಮೂಲದ ಸಂಜುಹಿತಾರಗೌಡರ(33) ಹಾಗೂ ನಾಗರಾಜ ಯಡವಣ್ಣವರ (34) ಮೃತ ದುರ್ದೈವಿಗಳು. ಆಶಿಫ್ ಮುಲ್ಲಾ(24) ಗಾಯಗೊಂಡಿದ್ದಾನೆ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸಿಂದಗಿ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದು ಪ್ರಕರಣ ದಾಖಲಾಗಿದೆ.
Read More »ಎಸಿಸಿ ಸಿಮೆಂಟ್ ಘಟಕ ಬಂದ್. ಸಾವಿರಾರು ಉದ್ಯೋಗಿಗಳಿಗೆ ಬರಸಿಡಿಲ
1984ರಲ್ಲಿ ಇಲ್ಲಿ ಎಸಿಸಿ ಗಗ್ಗಲ್ ಘಟಕವನ್ನು ಸ್ಥಾಪಿಸಲಾಯಿತು. ಕೆಲವು ವರ್ಷಗಳ ಹಿಂದೆ ವಿದೇಶಿ ಕಂಪನಿ ಹೊಲ್ಸಿಮ್ ವಲಫರ್ಜ್ ಇದರ ನಿರ್ವಹಣೆ ಮಾಡುತ್ತಿದ್ದು, ಇದೀಗ ಇದು ಅದಾನಿ ಗ್ರೂಪ್ಗೆ ಸೇರಿದೆ. ಬಿಲಾಸ್ಪುರ್ (ಹಿಮಾಚಲ ಪ್ರದೇಶ): ನಷ್ಟದ ಹಿನ್ನೆಲೆ ಇಲ್ಲಿರುವ ಎಸಿಸಿ ಸಿಮೆಂಟ್ ಘಟಕಕ್ಕೆ ಬೀಗ ಹಾಕಲಾಗಿದ್ದು, ತಕ್ಷಣದಿಂದಲೇ ಎಲ್ಲಾ ಕಾರ್ಯಚಟುವಟಿಕೆಗಳನ್ನು ನಿಲ್ಲಿಸಲಾಗಿದೆ. ಎಲ್ಲಾ ನೌಕರರು ಕರ್ತವ್ಯಕ್ಕೆ ಬರದಂತೆ, ಇಲ್ಲಿ ಕೆಲಸ ಸ್ಥಗಿತಗೊಳಿಸುತ್ತಿರುವ ಕುರಿತು ನೋಟಿಸ್ ಜಾರಿ ಮಾಡಲಾಗಿದೆ. ಘಟಕ ಬಂದ್ ಮಾಡುತ್ತಿರುವ …
Read More »ಮಹಿಳೆಯರು ಇನ್ನೂ 6 ತಿಂಗಳು ಗರ್ಭ ಧರಿಸ ಬಾರದಂತೆ; ಇದು ಜಿಕಾ ಎಫೆಕ್ಟ್..!
ರಾಯಚೂರು: ರಾಜ್ಯದ ರಾಯಚೂರು ಜಿಲ್ಲೆಯಲ್ಲಿ ಮೊದಲ ಜಿಕಾ ವೈರಸ್ ಪ್ರಕರಣ ನಿನ್ನೆ ವರದಿಯಾಗಿದ್ದು, ಎಲ್ಲರಲ್ಲೂ ಆಂತಕ ಸೃಷ್ಟಿಸಿದೆ. ಮಕ್ಕಳ ಆರೋಗ್ಯದ ಬಗ್ಗೆ ಹೆಚ್ಚು ನಿಗಾ ವಹಿಸಬೇಕು ಎನ್ನುತ್ತಾರೆ ಮಕ್ಕಳ ತಜ್ಞರು. ಈ ನಡುವೆ ಆರೋಗ್ಯ ಇಲಾಖೆ, ಮುಂದಿನ ಆರು ತಿಂಗಳ ಕಾಲ ಯಾರೂ ಗರ್ಭ ಧರಿಸದಂತೆ, ಸೂಚನೆ ಪ್ರಕಟಿಸಿದೆ. ಜಿಕಾ ವೈರಸ್ ಒಂದೇ ಮಾದರಿಯ ಆರ್‌ಎನ್‌ಎ ವೈರಸ್ ಗುಂಪಿಗೆ (ಫ್ಲೇಮಿ ವೈರಸ್ ಗುಂಪು) ಸೇರಿದ್ದಾಗಿದೆ. ಈಡಿಸ್ ಜಾತಿಯ ಸೊಳ್ಳೆ ಕಚ್ಚುವುದರಿಂದ …
Read More »ನಮ್ಮ ಸರ್ವೇ ಕ್ಲಿಯರ್, ನಾವು 136 ಸೀಟ್ ಗೆಲ್ಲುತ್ತೇವೆ, :ಡಿ.ಕೆ ಶಿ
ಬೆಂಗಳೂರು: ನಾವು ನಡೆಸಿದಂತ ಸರ್ವೇಯಲ್ಲಿ ಕ್ಲಿಯರ್ ಆಗಿದೆ. ನಾವು 136 ಸೀಟ್ ಗೆಲ್ಲುತ್ತೇವೆ. ಬಿಜೆಪಿ ಕೇವಲ 60 ರಿಂದ 65 ಸ್ಥಾನವನ್ನು ಗೆಲ್ಲಲಿದೆ ಎಂಬುದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ( KPCC President DK Shivakumar ) ಭವಿಷ್ಯ ನುಡಿದಿದ್ದಾರೆ. ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಾವು ಮುಂಬರುವಂತ ಚುನಾವಣೆಯಲ್ಲಿ 136 ಸ್ಥಾನ ಗೆಲ್ಲಲಿದ್ದೇವೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿ 60 ರಿಂದ 65 ಸ್ಥಾನ ಗೆಲ್ಲಲಿದೆ. …
Read More »ರಕ್ತದಲ್ಲಿ ನಾನು ಪತ್ರ ಬರೆದಿದ್ದಕ್ಕೇ ಮಹದಾಯಿ ಪ್ರಾರಂಭ: ಸಿಎಂ ಬೊಮ್ಮಾಯಿ
ಹುಬ್ಬಳ್ಳಿ: ‘ಮಹದಾಯಿ ಬಗ್ಗೆ ಮಾತನಾಡಲು ಕಾಂಗ್ರೆಸ್‌ಗೆ ನೈತಿಕ ಹಕ್ಕಿಲ್ಲ. ಮಹದಾಯಿ ನೀರನ್ನು ಕರ್ನಾಟಕಕ್ಕೆ ತರುವ ಕಾಲುವೆಗೆ ಗೋಡೆ ಕಟ್ಟಿರುವುದೇ ಕಾಂಗ್ರೆಸ್‌ನ ದೊಡ್ಡ ಸಾಧನೆ. ರಕ್ತದಲ್ಲಿ ನಾನು ಪತ್ರ ಬರೆದಿದ್ದಕ್ಕೇ ಮಹದಾಯಿ ಕಾಮಗಾರಿ ಪ್ರಾರಂಭವಾಗಿದ್ದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಾಂಗ್ರೆಸ್ ವಿರುದ್ಧ ಹರಿಹಾಯ್ದರು. ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿ, ‘ನಾನು ನೀರಾವರಿ ಸಚಿವನಾಗಿದ್ದಾಗ 5.5 ಮೀಟರ್‌ಗಳಷ್ಟು ಕಾಲುವೆ ನಿರ್ಮಾಣವಾಯಿತು. ಆದರೆ, ಕಾಂಗ್ರೆಸ್ ಪುಣ್ಯಾತ್ಮರು ಏನು ಮಾಡಿದರು? ಸೋನಿಯಾ ಗಾಂಧಿ ಅವರು ಗೋವಾದಲ್ಲಿ …
Read More »ಗದಗ ಶಿರಹಟ್ಟಿ ಕ್ಷೇತ್ರದ ಕಾಂಗ್ರೆಸ್ ನ ಮಾಜಿ ಶಾಸಕ ಎಸ್.ಎನ್ ಪಾಟೀಲ ಇನ್ನಿಲ್ಲ
ಗದಗ: ಜಿಲ್ಲೆಯ ಶಿರಹಟ್ಟಿ ಕ್ಷೇತ್ರದ ಮಾಜಿ ಶಾಸಕ ಎಸ್.ಎನ್ ಪಾಟೀಲ ಇಂದು ನಿಧನ ಹೊಂದಿದ್ದಾರೆ. ಎಸ್.ಎನ್.ಪಾಟೀಲ ಅವರಿಗೆ 81 ವಯಸ್ಸಾಗಿತ್ತು. ಅನಾರೋಗ್ಯ ಕಾರಣದಿಂದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಇಂದು ಸಂಜೆ 4 ಗಂಟೆಗೆ ಸ್ವಗ್ರಾಮ ಪುಟಗಾಂವ್ ಬಡ್ನಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ. ಎಸ್. ಎನ್ ಪಾಟೀಲ ಸರಳ, ಸಜ್ಜನಿಕೆ, ನೇರ-ನಿಷ್ಠುರ ವ್ಯಕ್ತಿತ್ವ ಹೊಂದಿದ್ದಾರೆ. 1989-1994 ರ ಅವಧಿಯಲ್ಲಿ ಕಾಂಗ್ರೆಸ್‌ನಿಂದ ಪಾಟೀಲ ಅವರು ಶಾಸಕರಾಗಿದ್ದರು. …
Read More »