ಬೆಳಗಾವಿ: ‘ಸಾರ್ವಜನಿಕ ಗಣೇಶ ಮಂಟಪಗಳಲ್ಲಿ ಯಾವುದೇ ಮಹಾಪುರುಷರು, ವ್ಯಕ್ತಿಗಳ ಪೋಸ್ಟರ್ ಹಾಕಲು ಆಯಾ ಸ್ಥಳೀಯ ಸಂಸ್ಥೆಗಳ ಅನುಮತಿ ಪಡೆಯುವುದು ಕಡ್ಡಾಯ’ ಎಂದು ಎಡಿಜಿಪಿ ಅಲೋಕ್‌ಕುಮಾರ್ ತಿಳಿಸಿದರು. ಈ ಬಾರಿ ನಗರದಲ್ಲಿ ಅದ್ಧೂರಿ ಗಣೇಶೋತ್ಸವ ಆಚರಣೆಗೆ ಸಿದ್ಧತೆ ನಡೆದ ಹಿನ್ನೆಲೆಯಲ್ಲಿ, ಮಂಗಳವಾರ ಭದ್ರತಾ ವ್ಯವಸ್ಥೆ ಪರಿಶೀಲಿಸಿದ ಅವರು, ಮಧ್ಯಮಗಳೊಂದಿಗೆ ಮಾತನಾಡಿದರು. ‘ಮಂಟಪಗಳಲ್ಲಿ ವೀರ ಸಾವರ್ಕರ್ ಭಾವಚಿತ್ರ ಹಾಕುವಂತೆ ಕೆಲವರು ಅಭಿಯಾನ ನಡೆಸಿದ್ದಾರೆ. ಸಾವರ್ಕರ್, ನೆಹರೂ, ಬಾಲಗಂಗಾಧರ ತಿಲಕ್, ಭಗತ್ ಸಿಂಗ್ …
Read More »Yearly Archives: 2022
ಮೊಬೈಲ್ ಕಳ್ಳತನ ಮಾಡುತ್ತಿದ್ದ ಅಂತರರಾಜ್ಯ ಕಳ್ಳರ ಬಂಧನ
ಅಂಕೋಲಾ : ತಾಲೂಕಿನ ಬಸ್ ನಿಲ್ದಾಣ ಮತ್ತು ಇತರ ಸ್ಥಳಗಳಲ್ಲಿ ಮೊಬೈಲ್ ಕಳ್ಳತನ ಮಾಡುತ್ತಿದ್ದ ಇಬ್ಬರು ಅಂತರ ರಾಜ್ಯ ವ್ಯಕ್ತಿಗಳನ್ನು ಅಂಕೋಲಾ ಪೊಲೀಸರು ಬಂಧಿಸಿ ಕಳ್ಳತನ ಮಾಡಿದ 7 ಮೊಬೈಲ್ ಗಳನ್ನು ವಶಪಡಿಸಿಕೊಂಡಿದ್ದಾರೆ ಗುಜರಿ ಸಂಗ್ರಹಿಸುವ ಕೆಲಸ ಮಾಡುತ್ತಿದ್ದ ಕೇರಳ ಕಾಸರಗೋಡು ನಿವಾಸಿ ಟೋನಿ ಜಾನ್ ಜೇಮ್ಸ್ (34) ಮತ್ತು ಹುಬ್ಬಳ್ಳಿಯ ಗದಗ ರಸ್ತೆ ನಿವಾಸಿ ಮಹಮ್ಮದ್ ಅಲಿ ಮೆಹಬೂಬ್ ಸಾಬ ಕುಂದಗೋಳ(38) ಬಂಧಿತ ಆರೋಪಿಗಳು. ಅಂಕೋಲಾ ಪಿ.ಎಸ್. ಐ …
Read More »ಮಂಗಳವಾರ ಏಳು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶ
ಬೆಂಗಳೂರು: ಗಣೇಶ ಹಬ್ಬದ ಹಿಂದಿನ ದಿನವಾದ ಮಂಗಳವಾರ ಏಳು ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ. ಅದರಂತೆ ಪಲ್ಲವಿ ಅಕ್ಕುರತಿ ಅವರು ಆರ್ಥಿಕ ನೀತಿ ಸಂಸ್ಥೆಯ ಜಂಟಿ ನಿರ್ದೇಶಕಿಯಾಗಿ ವರ್ಗಾವಣೆಗೊಂಡಿದ್ದಾರೆ. ಡಾ.ರಿತೇಶ್ ಕುಮಾರ್ ಸಿಂಗ್ ಅವರನ್ನು ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ವರ್ಗಾವಣೆ ಮಾಡಲಾಗಿದೆ. ಇನ್ನು ಪ್ರಿಯಾಂಕ ಮೇರಿ ಫ್ರಾನ್ಸಿಸ್ ಅವರನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ದೇಶಕಿ, ಎನ್.ಮಂಜುಶ್ರೀ ಅವರನ್ನು ಪೌರಾಡಳಿತ ನಿರ್ದೇಶಕಿಯಾಗಿ ವರ್ಗಾವಣೆ ಮಾಡಲಾಗಿದೆ. …
Read More »ವಿಘ್ನನಾಶಕನ ಹಬ್ಬ ಆರೋಗ್ಯಪೂರ್ಣವಾಗಿರಲಿ:
ಕೊರೊನಾದಂಥ ಮಹಾವಿಘ್ನದಿಂದಾಗಿ ಎರಡು ವರ್ಷಗಳಲ್ಲಿ ಗಣಪನ ಹಬ್ಬವನ್ನು ಅದ್ದೂರಿಯಾಗಿ ಆಚರಿಸಲು ಅವಕಾಶ ಆಗಲೇ ಇಲ್ಲ. ಈಗ ಸಾರ್ವಜನಿಕವಾಗಿ ಶ್ರದ್ಧಾ ಭಕ್ತಿಯಿಂದ ಆಚರಿಸಲು ಕೊನೆಯ ಹಂತದ ಸಿದ್ಧತೆಗಳು ನಡೆದಿವೆ. ಈ ಸಂಭ್ರಮದ ಕ್ಷಣದಲ್ಲೇ ನಾವು ಮೈ ಮರೆಯುವ ಹಾಗಿಲ್ಲ. ಈ ವರ್ಷವೂ ನಾವೆಲ್ಲರೂ ಎಚ್ಚರಿಕೆಯಿಂದ ಹಬ್ಬವನ್ನು ಆಚರಿಸ ಬೇಕಾಗಿದೆ. ರಾಜ್ಯ ಸರಕಾರ ಈ ನಿಟ್ಟಿನಲ್ಲಿ ಮಾರ್ಗಸೂಚಿಯನ್ನು ಪ್ರಕಟಿಸಿದೆ. ಕೊರೊನಾ ಸೋಂಕಿನ ಹಾವಳಿ ನಿಧಾನವಾಗಿ ಇಳಿಕೆಯಾಗುತ್ತಿದೆ ಮತ್ತು ಸೋಂಕಿನ ಪ್ರಭಾವದಿಂದ ಉಂಟಾಗಿರುವ ಆರ್ಥಿಕ …
Read More »ನ್ಯಾಯಾಧೀಶರ ಮುಂದೆ ಬಾಲಕಿಯರ ಹೇಳಿಕೆ
ಚಿತ್ರದುರ್ಗ: ಮುರುಘಾ ಮಠದ ಪೀಠಾಧ್ಯಕ್ಷ ಡಾ| ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಪೋಕ್ಸೋ ಕಾಯ್ದೆಯಡಿ ದಾಖಲಾಗಿರುವ ದೂರಿನ ವಿಚಾರಣೆ ಮುಂದುವರಿದಿದ್ದು, ಸಂತ್ರಸ್ತ ಬಾಲಕಿಯರನ್ನು ಮಂಗಳವಾರ ನಗರದ ನ್ಯಾಯಾಧೀಶರ ಎದುರು ಹಾಜರುಪಡಿಸಿ ಹೇಳಿಕೆ ಪಡೆಯಲಾಯಿತು. ಬಾಲಕಿಯರ ಸರಕಾರಿ ಬಾಲ ಮಂದಿರದಿಂದ ಮಧ್ಯಾಹ್ನ2 ಗಂಟೆ ಸುಮಾರಿಗೆ ಪೊಲೀಸ್ ಭದ್ರತೆಯಲ್ಲಿ ಬಾಲಕಿಯರಿಬ್ಬರನ್ನೂ ಜಿಲ್ಲಾ ನ್ಯಾಯಾಲಯದ ಆವರಣಕ್ಕೆ ಕರೆತರಲಾ ಯಿತು. ಸಿಆರ್‌ಪಿಸಿ 164ರ ಅಡಿ ನ್ಯಾಯಾಧೀಶರ ಎದುರು ಬಾಲಕಿಯರ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಯಿತು. ಜಮಾಯಿಸಿದ ಜನ, ಪ್ರತಿಭಟನೆ …
Read More »ಬೆಳಗಾವಿಯಲ್ಲಿ 18 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವಿಗೆ ಶ್ರಮಿಸಿ-ನಿರ್ಮಲಕುಮಾರ್ ಸುರಾನಾ ಕರೆ
ಬೆಳಗಾವಿ ನಗರದಲ್ಲಿ ಗ್ರಾಮಾಂತರ ಜಿಲ್ಲೆಯ ಹಾಗೂ ಮಹಾನಗರ ಜಿಲ್ಲೆಗಳ ಬಿಜೆಪಿ ಪಕ್ಷದ ಪದಾಧಿಕಾರಿಗಳ ಸಭೆ ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ಶ್ರೀ ನಿರ್ಮಲಕುಮಾರ ಸುರಾನಾ ಇವರ ಮಾರ್ಗದರ್ಶನದಲ್ಲಿ ನಡೆಯಿತು. ಹೌದು ಇಂದು ಬೆಳಗಾವಿ ನಗರದ ಗೊಮಟೇಶ ಸಭಾಗೃಹದಲ್ಲಿ ಬಿಜೆಪಿ ಗ್ರಾಮಾಂತರ ಜಿಲ್ಲೆಯ ಹಾಗೂ ಮಹಾನಗರ ಜಿಲ್ಲೆಗಳ ಪದಾಧಿಕಾರಿಗಳ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಸಭೆಯಲ್ಲಿ ರಾಜ್ಯ ಉಪಾಧ್ಯಕ್ಷರಾದ ಶ್ರೀ ನಿರ್ಮಲಕುಮಾರ ಸುರಾನಾ, ಬೆಳಗಾವಿ ಸಂಸದರಾದ ಮಂಗಳಾ ಸಂಗಡಿ, ಶಾಸಕರಾದ ಅಭಯ್ ಪಾಟೀಲ್, …
Read More »ಜಮೀನಿನಲ್ಲಿ ಗಾಂಜಾ ಬೆಳೆದಿದ್ದ ಆರೋಪಿ ಬಂಧಿಸಿ೪೫ ಕೆಜಿ ಗಾಂಜಾವನ್ನು ವಶಕ್ಕೆ ಪಡೆದ ಪೊಲೀಸರು
ರಾಯಬಾಗ ತಾಲೂಕಿನ ನಿಡಗುಂದಿ ಗ್ರಾಮದಲ್ಲಿ ಜಮೀನಿನಲ್ಲಿ ಗಾಂಜಾ ಬೆಳೆದಿದ್ದ ಆರೋಪಿಯನ್ನು ಬಂಧಿಸಿ ಆತನಿಂದ ೪೫ ಕೆಜಿ ಗಾಂಜಾವನ್ನು ವಶಕ್ಕೆ ಪಡೆದುಕೊಳ್ಳುವಲ್ಲಿ ಬೆಳಗಾವಿ ಸಿಇಎನ್ ಅಪರಾಧ ವಿಭಾಗದ ಪೊಲೀಸರು ಯಶಸ್ವಿಯಾಗಿದ್ದಾರೆ. ರಾಯಬಾಗ ತಾಲೂಕಿನ ನಿಡಗುಂದಿ ಗ್ರಾಮದ ಜಮೀನಿನಲ್ಲಿ ಆರೋಪಿಯೊಬ್ಬ ತನ್ನ ಜಮೀನಿನಲ್ಲಿ ಗಾಂಜಾ ಬೆಳೆದಿದ್ದ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಸಿಇಎನ್ ಅಪರಾಧ ವಿಭಾಗದ ಪೊಲೀಸರು ಆರೋಪಿಯನ್ನು ಬಂಧಿಸಿ ಆತನ ಜಮೀನಿನಲ್ಲಿ ಬೆಳೆದಿದ್ದ ೪೫ ಕೆಜಿ ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ. …
Read More »ಮುರುಘಾ ಶರಣರನ್ನು ಶೀಘ್ರದಲ್ಲೇ ಬಂಧಿಸಬೇಕು: H.. ವಿಶ್ವನಾಥ್
ಚಿತ್ರದುರ್ಗ : ಮುರುಘಾ ಮಠದ ಡಾ.ಶಿವಮೂರ್ತಿ ಮುರುಘಾ ಶರಣರ ( Murugha Matt Swamiji ) ವಿರುದ್ಧ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಬಗ್ಗೆ ವಿಧಾನ ಪರಿಷತ್ ಸದಸ್ಯ ಎಚ್ ವಿಶ್ವನಾಥ್ ಮಾತನಾಡಿ ಮುರುಘಾ ಶ್ರೀಗಳನ್ನು ಶೀಘ್ರವಾಗಿ ಬಂಧಿಸಬೇಕು’ ಎಂದು ಆಗ್ರಹಿಸಿದ್ದಾರೆ ತಾತ್ಕಾಲಿಕವಾಗಿ ಶ್ರೀಗಳ ಪೀಠ ತ್ಯಾಗ ಮಾಡಬೇಕು. 144 ಸೆಕ್ಷನ್ ಅಡಿಯಲ್ಲಿ ಹೇಳಿಕೆಯನ್ನು ಪಡೆಯಬೇಕು. ʻ ಮುರುಘಾ ಶ್ರೀಗಳನ್ನು ಶೀಘ್ರವಾಗಿ ಬಂಧಿಸಬೇಕು. ಇಂದೇ ನಾನು ಕೇಂದ್ರಕ್ಕೆ …
Read More »ಅರವಿಂದ್ ಕೇಜ್ರಿವಾಲ್‌ಗೆ ಅಧಿಕಾರದ ಅಮಲು ಹತ್ತಿದೆ ಎಂದ ಅಣ್ಣ ಹಜಾರೆ
ನವದೆಹಲಿ, ಆಗಸ್ಟ್ 30: ಹಿರಿಯ ಗಾಂಧಿವಾದಿ ಮತ್ತು ಭ್ರಷ್ಟಾಚಾರ ವಿರೋಧಿ ಹೋರಾಟಗಾರ ಅಣ್ಣಾ ಹಜಾರೆ ಅವರು ಮಂಗಳವಾರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಪತ್ರ ಬರೆದು ದೆಹಲಿಯ ಮದ್ಯ ನೀತಿಯನ್ನು ಟೀಕಿಸಿ ನಿಮಗೆ ಅಧಿಕಾರದ ಅಮಲು ಹತ್ತಿದೆ ಎಂದು ತೀವ್ರ ತರಾಟೆ ತೆಗೆದುಕೊಂಡಿದ್ದಾರೆ. ಹಜಾರೆ ತಮ್ಮ ಪತ್ರದಲ್ಲಿ ಹಳ್ಳಿಗಳಲ್ಲಿನ ಮದ್ಯದ ವ್ಯಸನದ ಸಮಸ್ಯೆ ಮತ್ತು ಅದರ ಪರಿಹಾರಗಳ ಬಗ್ಗೆ ವ್ಯವಹರಿಸುವ ಕೇಜ್ರಿವಾಲ್ ಅವರದೇ ಸ್ವರಾಜ್ ಪುಸ್ತಕದ ಸಾಲುಗಳನ್ನು …
Read More »ಸಾವಿನಲ್ಲೂ ಒಂದಾದ ದಂಪತಿ: ಮೂರು ಗಂಟೆ ಅಂತರದಲ್ಲಿ ಗಂಡ-ಹೆಂಡತಿ ಸಾವು
ರಬಕವಿ-ಬನಹಟ್ಟಿ : ಸಾವಿನಲ್ಲಿಯೂ ಒಂದಾಗುವ ಬಹಳಷ್ಟು ಘಟನೆ ನಡೆಯುತ್ತಲೇ ಇರುತ್ತವೆ. ವಿವಾಹವಾಗಿ ಬಾಳಿ, ಮಕ್ಕಳು, ಮೊಮ್ಮಕ್ಕಳನ್ನು ಕಂಡು ಸಿಹಿ, ಕಹಿ, ನೋವು, ಕಷ್ಟಗಳ ಸವಾಲುಗಳನ್ನು ಒಟ್ಟಿಗೆ ಎದುರಿಸಿ, ಒಟ್ಟಿಗೇ ಸ್ವರ್ಗಸ್ಥರಾಗುವುದೆಂದರೆ ಸುಮ್ಮನೆಯಾ? ಎಲ್ಲೋ ಒಂದಷ್ಟು ಜೋಡಿಗಳಷ್ಟೇ ಈ ಪುಣ್ಯ ಮಾಡಿರುತ್ತಾರೆ. ಸಾವಿನಲ್ಲೂ ಸಂಗಾತಿ ಜೊತೆಗೆ ಅನ್ನೋದು ಇದೇನಾ. ಹೌದು, ವಿವಾಹವಾಗಿ 55 ವರ್ಷಗಳ ಕಾಲ ಜತೆಯಾಗಿ ಬದುಕಿದ ದಂಪತಿ ಸಾವಿನಲ್ಲೂ ಒಂದಾದ ಅಪರೂಪದ ಘಟನೆ ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ಬನಹಟ್ಟಿಯಲ್ಲಿ …
Read More »