Breaking News

Yearly Archives: 2022

ಅಯ್ಯಪ್ಪ ಮಾಲಾಧಾರಿಗಳಿಗೆ ಅನ್ನ ಪ್ರಸಾದ ವಿತರಿಸಿದ ಮುಸ್ಲಿಂ ಯುವಕರು

ಅಲ್ಲಿ ಜಾತಿ, ಧರ್ಮದ ಬೇಧವಿರಲಿಲ್ಲ. ತಿನ್ನುವ ಅನ್ನ, ಕುಡಿಯುವ ನೀರು ಒಂದೇ ಎಂಬ ಭಾವನೆಯಲ್ಲಿ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಮುಸ್ಲಿಂ ಯುವಕರು, ಅಯ್ಯಪ್ಪ ಮಾಲಾಧಾರಿಗಳಿಗೆ ಊಟ ಬಡಿಸಿ, ಕೋಮು ಸೌಹಾರ್ದತೆ ಮೆರೆದರು. ತಮಿಳುನಾಡಿನ ಕೃಷ್ಣಗಿರಿ ಪಜಯಪಟ್ಟೈ ಮಿಲಾಡುನಾಬಿ ಇಸ್ಲಾಮಿಕ್ ಯುವಕರ ತಂಡ, ಪ್ರತಿವರ್ಷ ಗಣೇಶ ಚತುರ್ಥಿ ಸಮಯದಲ್ಲಿ ಭಕ್ತರಿಗೆ ಅನ್ನ ಪ್ರಸಾದ ಹಂಚುವುದು ಹಾಗೂ ಅಯ್ಯಪ್ಪ ಮಾಲಾಧಾರಿಗಳಿಗೆ ಪೂಜಾ ಸಾಮಗ್ರಿ ಮತ್ತು ಆಹಾರವನ್ನ ಒದಗಿಸುವ ಮೂಲಕ ಎರಡು ಧರ್ಮಗಳ ನಡುವಿನ …

Read More »

ಬೆಳಗಾವಿ ಅಧಿವೇಶನದಲ್ಲಿ ಪೂರ್ಣ ಹಾಜರಾತಿ ಕಡ್ಡಾಯ: ವಿಶ್ವೇಶ್ವರ ಹೆಗಡೆ ಕಾಗೇರಿ

ಬೆಳಗಾವಿ: ‘ಇದೇ 19ರಿಂದ 30ರವರೆಗೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನ ಅತ್ಯಂತ ಮಹತ್ವ ಪಡೆದಿದೆ. ಇದರಲ್ಲಿ ಪೂರ್ಣ ಹಾಜರಾತಿ ಇರಬೇಕೆಂದು ಎಲ್ಲ ಶಾಸಕರಿಗೂ ಸೂಚಿಸಲಾಗಿದೆ’ ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.   ಅಧಿವೇಶನದ ಪೂರ್ವಸಿದ್ಧತೆಗಳನ್ನು ಸೋಮವಾರ ಪರಿಶೀಲಿಸಿದ ನಂತರ ಮಾತನಾಡಿದ ಅವರು, ‘ಕೆಲ ಸಚಿವರು, ಶಾಸಕರು ಅಧಿವೇಶನದ ವೇಳೆ ಗೋವಾ, ಮಹಾರಾಷ್ಟ್ರ ಕಡೆಗೆ ಪ್ರವಾಸಕ್ಕೆ ಹೋಗುತ್ತಾರೆ. ಗಂಭೀರ ವಿಷಯಗಳ ಚರ್ಚೆಯಲ್ಲಿ ಗೈರಾಗುತ್ತಾರೆ ಎಂದು ಹಲವರು ದೂರಿದ್ದಾರೆ. …

Read More »

ಕರ್ನಾಟಕದ ಚುನಾವಣೆ ಎಚ್ಚರಿಕೆಯ ಹೆಜ್ಜೆ: ಸಿ.ಟಿ.ರವಿ

ಬೆಂಗಳೂರು: ಗುಜರಾತ್‌ ಗೆಲುವು ಮತ್ತು ಹಿಮಾಚಲ ಪ್ರದೇಶದ ಸೋಲಿನ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಎಚ್ಚರಿಕೆಯ ಹೆಜ್ಜೆ ಇಡಬೇಕಾಗಿದೆ. ಇಲ್ಲವಾದರೆ, ಹಿಮಾಚಲಪ್ರದೇಶದ ರೀತಿಯಲ್ಲಿ ಸಂಕಷ್ಟಕ್ಕೆ ಸಿಲುಕಬೇಕಾಗುತ್ತದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ.   ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಮೈಮರೆಯದೇ ಕೆಲಸ ಮಾಡಿದರೆ ಗುಜರಾತ್‌ನಂತೆ ಫಲಿತಾಂಶ ಸಿಗುತ್ತದೆ. ಮೈಮರೆತರೆ ಹಿಮಾಚಲ ಪ್ರದೇಶದಂತೆ ಆಗುತ್ತದೆ. ಗುಜರಾತ್‌ ಗೆಲುವಿನ ಪ್ರೇರಣೆ ಪಡೆದು ನಾವು ಮುನ್ನಡೆಯಬೇಕಾಗುತ್ತದೆ’ ಎಂದರು. ಈ ಬಾರಿ ಟಿಕೆಟ್‌ ಹಂಚಿಕೆಯಲ್ಲಿ ಉತ್ತಮ …

Read More »

ಧಾರವಾಡ ರಂಗಾಯಣದಿಂದ ಕಿತ್ತೂರು ಚನ್ನಮ್ಮ ನಾಟಕ: ವೇದಿಕೆ ಮೇಲೆ ಆನೆ, ಒಂಟೆ, ಕುದುರೆ

ಧಾರವಾಡ: ಬ್ರಿಟಿಷರ ವಿರುದ್ಧ ರಣಕಹಳೆ ಮೊಳಗಿಸಿದ ವೀರ ರಾಣಿ ಕಿತ್ತೂರು ಚನ್ನಮ್ಮ ಅವರ ಜೀವನ ಆಧಾರಿತ ನಾಟಕವನ್ನು ಧಾರವಾಡ ರಂಗಾಯಣ ಸಿದ್ಧಪಡಿಸಿದ್ದು, ಡಿ.24ರಿಂದ ಪ್ರದರ್ಶನಗೊಳ್ಳುತ್ತಿದೆ. ಸುಮಾರು ಮೂರೂವರೆ ತಾಸು ಸುದೀರ್ಘ ನಾಟಕದಲ್ಲಿ ಸುಮಾರು 150 ಕಲಾವಿದರು ನಟಿಸುತ್ತಿರುವುದು ಹಾಗೂ ಆನೆ, ಒಂಟೆ, ಕುದುರೆ, ಹಸುಗಳ ಬಳಕೆ ಮೂಲಕ ಬೃಹತ್ ರಂಗ ಸಜ್ಜಿಕೆಯ ನಾಟಕ ಈಗಾಗಲೇ ಸಾಕಷ್ಟು ಚರ್ಚೆಯಲ್ಲಿದೆ. ರಂಗ ತಾಲೀಮು ಭರದಿಂದ ನಡೆಯುತ್ತಿದ್ದು 250ಕ್ಕೂ ಹೆಚ್ಚು ಜನ ಇದರಲ್ಲಿ ಭಾಗಿಯಾಗಿದ್ದಾರೆ. …

Read More »

ಕಬ್ಬು ತೂಕದಲ್ಲಿ ವ್ಯತ್ಯಾಸ ಕಂಡುಬಂದಿಲ್ಲ: ಕಲಕೇರಿ

ಬೆಳಗಾವಿ: ಜಿಲ್ಲೆಯ ಎಂಟು ಸಕ್ಕರೆ ಕಾರ್ಖಾನೆಗಳ ಮೇಲೆ ಬುಧವಾರ ದಾಳಿ ನಡೆಸಲಾಗಿದ್ದು, ಯಾವುದೇ ಕಾರ್ಖಾನೆಯಲ್ಲಿ ತೂಕದಲ್ಲಿ ವ್ಯತ್ಯಾಸ ಕಂಡುಬಂದಿಲ್ಲ ಎಂದು ಕಬ್ಬು ಅಭಿವೃದ್ಧಿ ಹಾಗೂ ಸಕ್ಕರೆ ನಿರ್ದೇಶನಾಲಯದ ಆಯುಕ್ತ ಶಿವಾನಂದ ಕಲಕೇರಿ ತಿಳಿಸಿದ್ದಾರೆ.   ‘ತೂಕದಲ್ಲಿ ಮೋಸ ಮಾಡಲಾಗುತ್ತಿದೆ ಎಂದು ರೈತರು ನೀಡಿದ ದೂರಿನ ಹಿನ್ನೆಲೆಯಲ್ಲಿ ಬುಧವಾರ ದಾಳಿ ಮಾಡಲಾಗಿದೆ. ಬೀದರ್‌ನಿಂದ ಕಾರವಾರವರೆಗೆ ಒಟ್ಟು 21 ಸಕ್ಕರೆ ಕಾರ್ಖಾನೆಗಳ ಮೇಲೆ ದಾಳಿ ನಡೆದಿದೆ. ಇದರಲ್ಲಿ ಬೆಳಗಾವಿ ಜಿಲ್ಲೆಯ ಎಂಟು ಕಾರ್ಖಾನೆಗಳಲ್ಲಿ ಯಾವುದೇ …

Read More »

ಬೆಳಗಾವಿ: ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ 21ರಿಂದ

ಬೆಳಗಾವಿ: ‘ಚಿಕ್ಕೋಡಿಯ ಸಿಎಲ್‌ಇ ಸಂಸ್ಥೆಯಲ್ಲಿ ಡಿ.21, 22ರಂದು ಜಿಲ್ಲಾಮಟ್ಟದ 15ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಚಿಂಚಣಿಯ ಸಿದ್ಧಸಂಸ್ಥಾನ ಮಠದ ಅಲ್ಲಮಪ್ರಭು ಸ್ವಾಮೀಜಿ ಅವರನ್ನು ಸರ್ವಾಧ್ಯಕ್ಷರಾಗಿ ಆಯ್ಕೆ ಮಾಡಲಾಗಿದೆ’ ಎಂದು ಕನ್ನಡ ಸಾಹಿತ್ಯ ಪರಿಷತ್‌ ಜಿಲ್ಲಾ ಘಟಕದ ಅಧ್ಯಕ್ಷೆ ಮಂಗಲಾ ಮೆಟಗುಡ್ಡ ಹೇಳಿದರು.   ಇಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ’21ರಂದು ಬೆಳಿಗ್ಗೆ 11ಕ್ಕೆ ಕ.ಸಾ.ಪ ಅಧ್ಯಕ್ಷ ಡಾ.ಮಹೇಶ ಜೋಶಿ ಸಮ್ಮೇಳನ ಉದ್ಘಾಟಿಸುವರು. ಮಧ್ಯಾಹ್ನ 2ಕ್ಕೆ ಕನ್ನಡ ಚಿಂತನೆ …

Read More »

ರೋಹಿತ್‌ ಪವಾರ್‌ ಗೋಪ್ಯ ಸಭೆ

ಬೆಳಗಾವಿ: ಎನ್‌ಸಿಪಿ ಮುಖಂಡ ಶರದ್‌ ಪವಾರ್‌ ಅವರ ಸಹೋದರ ಸಂಬಂಧಿ, ಮಹಾರಾಷ್ಟ್ರದ ಶಾಸಕ ರೋಹಿತ್‌ ಪವಾರ್‌ ಅವರು ಮಂಗಳವಾರ ಬೆಳಗಾವಿಯ ಎಂಇಎಸ್‌ ಮುಖಂಡರ ಜತೆ ಗೋಪ್ಯ ಸಭೆ ನಡೆಸಿದರು. ‘ಗಡಿ ವಿಚಾರವಾಗಿ ನಡೆದ ಬೆಳವಣಿಗೆಗಳ ಮಾಹಿತಿ ಪಡೆಯಲು, ಮಹಾ ವಿಕಾಸ ಅಘಾಡಿ ನಾಯಕರ ಸೂಚನೆ ಮೇರೆಗೆ ರೋಹಿತ್ ಅವರು ಸೋಮವಾರ ಸಂಜೆ ಬೆಳೆಗಾವಿಗೆ ಬಂದರು. ಇಲ್ಲಿನ ಮರಾಠಿಗರ ಸ್ಥಿತಿಗತಿಗಳ ಮಾಹಿತಿ ಪಡೆದರು’ ಎಂದು ಎಂಇಎಸ್‌ನ ಮುಖಂಡರು ತಿಳಿಸಿದ್ದಾರೆ. ಮಂಗಳವಾರ ಸಮೀಪದ ಹಿಂಡಲಗಾ …

Read More »

ಬೆಳಗಾವಿ ಅಧಿವೇಶನದಲ್ಲಿ ಹಲಾಲ್‌ ನಿಷೇಧ ಮಸೂದೆ ಮಂಡನೆಗೆ ಸಿದ್ಧತೆ

ಬೆಂಗಳೂರು: ರಾಜ್ಯದಲ್ಲಿ ‘ಹಲಾಲ್‌’ ಲೇಬಲ್‌ ಹಾಕಿದ ಆಹಾರ ಪದಾರ್ಥಗಳ ಮಾರಾಟ ನಿಷೇಧಕ್ಕಾಗಿ ವಿಧಾನಪರಿಷತ್‌ ಸದಸ್ಯ ಎನ್‌.ರವಿಕುಮಾರ್‌ ಅವರು ಬೆಳಗಾವಿಯಲ್ಲಿ ನಡೆಯುವ ವಿಧಾನಮಂಡಲ ಅಧಿವೇಶನದಲ್ಲಿ ಖಾಸಗಿ ಮಸೂದೆ ಮಂಡಿಸಲಿದ್ದಾರೆ.   ಈ ಸಂಬಂಧ ಖಾಸಗಿ ಮಸೂದೆಯನ್ನು ಮಂಡಿಸಲು ಅವರು ವಿಧಾನಪರಿಷತ್‌ ಸಭಾಪತಿಯವರಿಗೆ ಬುಧವಾರ ನೋಟಿಸ್‌ ನೀಡಿದ್ದಾರೆ. ಆಹಾರ ಪದಾರ್ಥಗಳ ಮೇಲೆ ‘ಹಲಾಲ್‌’ ಲೇಬಲ್‌ ಹಾಕಿ ಮಾರುವುದನ್ನು ನಿಷೇಧಿಸಬೇಕು. ಇದಕ್ಕಾಗಿ ‘ಆಹಾರ ಸುರಕ್ಷೆ ಮತ್ತು ಗುಣಮಟ್ಟ ಕಾಯ್ದೆ’ಗೆ ಸೂಕ್ತ ತಿದ್ದುಪಡಿ ಅಗತ್ಯವಿದೆ. ಇದರಿಂದ ಸರ್ಕಾರದ …

Read More »

ಕೆಪಿಟಿಸಿಎಲ್ ಪರೀಕ್ಷೆ ಮತ್ತೊಬ್ಬ ಪರಾರಿಯಾದ ಆರೋಪಿ ಅಂದರ್

ಗೋಕಾಕ ಶಹರ ಪೊಲೀಸ್ ಠಾಣೆ  ಪ್ರಕರಣದಲ್ಲಿ ತನಿಖಾಧಿಕಾರಿ ಶ್ರೀ ವೀರೇಶ್ ತಿ ದೊಡಮನಿ DYSP DCRB ಇವರು ತನಿಖೆ ಮುಂದುವರೆಸಿ  ದಿನಾಂಕ 14-12-2022 ರಂದು ಈ ಕೇಸಿನಲ್ಲಿಯ ಪರಾರಿ ಇದ್ದ ಇನ್ನೊಬ್ಬ ಪ್ರಮುಖ ಆರೋಪಿ ಸೋಮನಗೌಡ ಶಂಕರಗೌಡ ಪಾಟೀಲ ಬಂಧಿಸಿದ್ದಾರೆ ವಯಸ್ಸು 36 ವರ್ಷ ರಾಯಭಾಗ ಇವನಿಗೆ ದಸ್ತಗೀರ ಮಾಡಿದ್ದು ಈತನು ದಿನಾಂಕ 07-08-2022 ರಂದು ನಡೆದ ಕೆಪಿಟಿಸಿಎಲ್ ಜ್ಯೂನಿಯರ್ ಅಸಿಸ್ಟಂಟ್ ಹುದ್ದೆಗೆ ನೇಮಕಾತಿ ನಡೆದ ಪರೀಕ್ಷೆಯ ಕಾಲಕ್ಕೆ ಗದಗ …

Read More »

ಸಂಕ್ರಾಂತಿ ವೇಳೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಫೈನಲ್: ಸಿದ್ದರಾಮಯ್ಯ

ಬಾಗಲಕೋಟೆ : ಜನವರಿ 15 ರಂದು ಕಾಂಗ್ರೆಸ್ ಪಕ್ಷ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿಳಿಸಿದ್ದಾರೆ. ಅವರು ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಬೆಳಗಲ್ಲ ಗ್ರಾಮದಲ್ಲಿ ಬಳಿ ಎಸ್ ಆರ್ ಕೆ ಶುಗರ್ ಕಾರ್ಖಾನೆ ಯ ಅಡಿಗಲ್ಲು ಸಮಾರಂಭ ಕ್ಕೆ ಆಗಮಿಸಿದ ಸಂದರ್ಭದಲ್ಲಿ ಮಾತನಾಡುತ್ತಾ, ಜನವರಿ ಡಿಕೆ ಶಿವಕುಮಾರ್ ಹಾಗೂ ನನ್ನ ನೇತೃತ್ವದಲ್ಲಿ ಎರಡು ತಂಡಗಳನ್ನು ರಚನೆ ಮಾಡಿ,ಉತ್ತರ ಕರ್ನಾಟಕ ಹಾಗೂ ದಕ್ಷಿಣ ಕರ್ನಾಟಕ ದಲ್ಲಿ ಪ್ರವಾಸ …

Read More »