ಬೆಂಗಳೂರು : ಕಂದಾಯ ಇಲಾಖೆ ಆರಂಭಿಸಿರುವ ‘ಹಲೋ ಕಂದಾಯ ಸಚಿವರೇ’ ಸಹಾಯವಾಣಿಗೆ ವಾರಕ್ಕೆ ಸರಾಸರಿ 3,000ಕ್ಕೂ ಹೆಚ್ಚು ಕರೆಗಳ ಮೂಲಕ ಅರ್ಜಿಗಳು ಸಲ್ಲಿಕೆಯಾಗುತ್ತಿದ್ದು, ಈವರೆಗೆ ಸುಮಾರು 34,020 (ಸಾಮಾಜಿಕ ಭದ್ರತಾ ಯೋಜನೆಯ ಪಿಂಚಣಿಗಳು) ಅರ್ಜಿಗಳು ಸಲ್ಲಿಕೆಯಾಗಿವೆ. ಅರ್ಜಿ ಸಲ್ಲಿಕೆಯಾದ 72 ಗಂಟೆಗಳಲ್ಲಿ ಅರ್ಹರಿಗೆ ಪಿಂಚಣಿಯ ಒದಗಿಸುವ ಮಂಜೂರಾತಿ ಆದೇಶಗಳನ್ನು ನೀಡುವ ಯೋಜನೆ ಇದಾಗಿದೆ. ಮಧ್ಯವರ್ತಿಗಳ ಹಾವಳಿ, ಕಂದಾಯ ಅಧಿಕಾರಿಗಳು ಮತ್ತು ಗ್ರಾಮಲೆಕ್ಕಿಗರಿಂದ ಆಗುತ್ತಿದ್ದ ವಿಳಂಬ ಮತ್ತು ಭ್ರಷ್ಟಾಚಾರಕ್ಕೂ ಕಡಿ ವಾಣ …
Read More »Yearly Archives: 2022
ಭ್ರಷ್ಟರ ವಿರುದ್ಧ ಸಮರಕ್ಕೆ ಲೋಕಾಯುಕ್ತ ಅಣಿ
ಬೆಂಗಳೂರು : ಸರ್ಕಾರದಲ್ಲಿನ ಭ್ರಷ್ಟಾಚಾರ, ಸ್ವಜನಪಕ್ಷಪಾತ, ಅಧಿಕಾರ ದುರ್ಬಳಕೆ ವಿರುದ್ಧ ‘ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ’ಯ ಅಸ್ತ್ರ ಝಳಪಿಸಲು ಲೋಕಾಯುಕ್ತ ಮತ್ತೆ ಸಜ್ಜಾಗಿದೆ. ದೂರು ಬಂದರೆ ತಕ್ಷಣದಲ್ಲೇ ಪ್ರಕರಣ ದಾಖಲಿಸಲು ಲೋಕಾ ಯುಕ್ತ ಪೊಲೀಸ್ ಘಟಕವು ಸನ್ನದ್ಧವಾಗಿದೆ. ಹೈಕೋರ್ಟ್ ತೀರ್ಪಿನ ಕುರಿತು ಕಾನೂನು ತಜ್ಞರ ಜತೆ ಸಮಾಲೋಚನೆ ನಡೆಸಿರುವ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ, ಸಂಸ್ಥೆಯ ಪೊಲೀಸ್ ಘಟಕ ಹಾಗೂ ನ್ಯಾಯಾಂಗ ವಿಭಾಗದ ಅಧಿಕಾರಿಗಳ ಜತೆಗೂ ಸರಣಿ ಸಭೆಗಳನ್ನು ನಡೆಸಿದ್ದಾರೆ. ಭ್ರಷ್ಟಾಚಾರ, ಅಧಿಕಾರ …
Read More »ಮೀಸಲಾತಿ ಘೋಷಿಸದಿದ್ದರೆ ಸಿಎಂ ಮನೆ ಮುಂದೆ ಧರಣಿ: ಬಸವ ಜಯಮೃತ್ಯುಂಜಯ ಸ್ವಾಮೀಜಿ
ಶಿವಮೊಗ: ಸರ್ಕಾರ ಕೊಟ್ಟ ಮಾತಿನಂತೆ ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ ಘೋಷಿಸದಿದ್ದರೆ ಆ. 23ರ ಬೆಳಿಗ್ಗೆ 10ಕ್ಕೆ ಶಿಗ್ಗಾವಿಯ ಚೆನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ಮಾಡಿ ಬಳಿಕ ಮುಖ್ಯಮಂತ್ರಿ ಮನೆ ಮುಂದೆ ಧರಣಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವುದು ಎಂದು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಪೀಠಾಧ್ಯಕ್ಷ ಬಸವ ಜಯಮೃತ್ಯುಂಜಯ ಸ್ವಾಮೀಜಿ ಹೇಳಿದರು. ‘ಲಿಂಗಾಯತ ಪಂಚಮಸಾಲಿ, ಮಲೆಗೌಡ ಲಿಂಗಾಯತ ಸಮಾಜವನ್ನು ಪ್ರವರ್ಗ ‘2ಎ’ ಮೀಸಲಾತಿಗೆ ಸೇರಿಸಲು ರಾಜ್ಯ ಸರ್ಕಾರಕ್ಕೆ ನೀಡಿದ್ದ ಗಡುವು ಸೋಮವಾರ ಮುಕ್ತಾಯ ವಾಗಲಿದೆ. ಮೀಸಲಾತಿ …
Read More »ಬಿಜೆಪಿ ಭ್ರಷ್ಟೋತ್ಸವ ಜಾತ್ರೆಯಲ್ಲಿ ನೂರಾರು ಹಗರಣಗಳ ಮೆರವಣಿಗೆ: ಕಾಂಗ್ರೆಸ್ ಲೇವಡಿ
ಬೆಂಗಳೂರು: ಸಚಿವ ಸಂಪುಟಕ್ಕೆ ಮಾತ್ರವಲ್ಲ ಇಡೀ ಸರ್ಕಾರಕ್ಕೆ ಸೂಕ್ತ ಸರ್ಜರಿ ನಡೆಯಬೇಕಿದೆ. ಈ ಸಂಬಂಧ ಟ್ವೀಟ್ ಮಾಡಿರುವ ಕಾಂಗ್ರೆಸ್, ಬಿಜೆಪಿಗೆ ಜನಪರ ಆಡಳಿತ ನೀಡುವುದಕ್ಕಿಂತ ಚುನಾವಣೆ ದೃಷ್ಟಿಕೋನವೇ ಮುಖ್ಯ. ಸಂಪುಟಕ್ಕೆ ಮಾತ್ರವಲ್ಲ, ಐಸಿಯುನಲ್ಲಿರುವ ಇಡೀ ಸರ್ಕಾರಕ್ಕೇ ಸರ್ಜರಿ ಮಾಡಬೇಕಿದೆ. ಯಾವ ಸರ್ಜರಿ ಮಾಡಿದರೂ, ಎಷ್ಟೇ ಡಿಸಿಎಂ ಹುದ್ದೆ ಸೃಷ್ಟಿಸಿದರೂ ತಳ್ಳಿಕೊಂಡು ಹೋಗುತ್ತಿರುವ ಸರ್ಕಾರದ ಇಂಜಿನ್ ಸ್ಟಾರ್ಟ್ ಮಾಡಲಾಗದು. ಮ್ಯಾನೇಜ್ಮೆಂಟ್ ಸರ್ಕಾರ ಟೇಕಾಫ್ ಆಗಲಾರದು ಎಂದು ಕಾಂಗ್ರೆಸ್ ಲೇವಡಿ ಮಾಡಿದೆ. ಶೇ. 40ರಷ್ಟು …
Read More »ಗಣೇಶ ಹಬ್ಬ ಆಚರಣೆಗೆ ಮಾರ್ಗಸೂಚಿ ಪ್ರಕಟ : ಈ ನಿಯಮಗಳ ಪಾಲನೆ ಕಡ್ಡಾಯ
ಬೆಂಗಳೂರು : ರಾಜ್ಯದಲ್ಲಿ ಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಪರಿಸರಸ್ನೇಹಿ ಗಣೇಶ ಹಬ್ಬ ಆಚರಿಸುವ ಸಂಬಂಧ ಈ ಕೆಳಕಂಡಂತೆ ಸೂಚನೆಗಳನ್ನು ನೀಡಿದೆ. ರಾಜ್ಯದಲ್ಲಿ ಜಲಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಮಂಡಳಿಯು ಪಿಓಪಿಯಿಂದ ಮಾಡುವ ವಿಗ್ರಹಗಳನ್ನು ಯಾವುದೇ ಜಲಮೂಲಗಳಿಗೆ ವಿಸರ್ಜನೆ ಮಾಡುವುದನ್ನು ನಿರ್ಬಂಧಿಸಿ ಅಧಿಸೂಚನೆಯನ್ನು 20/072016 ರಂದು ಹೊರಡಿಸಿದೆ. ಬೇರೆ ರಾಜ್ಯದಿಂದ ಬರುವಂತಹ ಪಿಓಪಿ ವಿಗ್ರಹಗಳನ್ನು ತಡೆಗಟ್ಟಲು ಸಂಬಂಧಿಸಿದ ಚೆಕ್‍ಪೋಸ್ಟ್ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡುವಂತೆ …
Read More »ಡೂಪ್ಲಿಕೇಟ್ ಮತದಾರರ ಪತ್ತೆಗೆ ತಂತ್ರಜ್ಞಾನ; 4 ಲಕ್ಷ ಡೂಪ್ಲಿಕೇಟ್’ ಮತದಾರರ ಹೆಸರು ಡಿಲೀಟ್
ಬೆಂಗಳೂರು: ಒಂದೇ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಎರಡೆರಡು ಕಡೆ ವಿಳಾಸ ನೀಡಿ ಗುರುತಿನ ಚೀಟಿ ಪಡೆದವರ ಪತ್ತೆಗೆ ರಾಜ್ಯ ಚುನಾವಣಾ ಆಯೋಗ ಹೊಸ ತಂತ್ರಜ್ಞಾನಕ್ಕೆ ಮೊರೆ ಹೋಗಿದೆ. ಮೊದಲ ಹಂತದಲ್ಲಿ ಬೆಂಗಳೂರಿನ ಒಂದೇ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಇಂ ಥ 4 ಲಕ್ಷ ಮತದಾರರನ್ನು ಪಟ್ಟಿಯಿಂದ ತೆಗೆದಿದೆ. ಶೀಘ್ರವೇ ಇತರೆಡೆಯಲ್ಲೂ ಪರಿಶೀಲಿಸಲಿದೆ. ಎರಡೆರಡು ವಾರ್ಡ್‌ಗಳಲ್ಲಿ ಮತದಾರರ ಪಟ್ಟಿಗೆ ನೋಂದಾಯಿಸಿದ ವ್ಯಕ್ತಿಗಳನ್ನು ಫೋಟೋ ಸಿಮಿಲರ್ ಎಂಟ್ರೀಸ್ ಮತ್ತು ಡೆಮೋಗ್ರಾಫಿಕ್ ಸಿಮಿಲರ್ ಎಂಟ್ರೀಸ್ ಎಂಬ …
Read More »ಬಸ್, ಕ್ರೂಜರ್ ನಡುವೆ ಮುಖಾಮುಖಿ ಡಿಕ್ಕಿ: ಹುಬ್ಬಳ್ಳಿಗೆ ಮೃತದೇಹ ತರಲು ಹೋದ ಮೂವರ ದಾರುಣ ಸಾವು
ಹುಬ್ಬಳ್ಳಿ: ಖಾಸಗಿ ಬಸ್ ಹಾಗೂ ಕ್ರೂಜರ್ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟು, ನಾಲ್ವರಿಗೆ ಗಂಭೀರ ಗಾಯವಾಗಿರುವ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಧಾರವಾಡ ಕ್ರಾಸ್ ಬಳಿ ನಡೆದಿದೆ. ಮೃತರೆಲ್ಲರೂ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ನಂದಿಗದ್ದಿ ನಿವಾಸಿಗಳು ಎಂದು ತಿಳಿದುಬಂದಿದೆ. ಗಾಯಗೊಂಡವರನ್ನು ಹುಬ್ಬಳ್ಳಿಯ ಕಿಮ್ಸ್‌ಗೆ ದಾಖಲು ಮಾಡಲಾಗಿದೆ. ಸ್ಥಳದಲ್ಲೇ ಇಬ್ಬರು ಸಾವಿಗೀಡಾಗಿದ್ದರು. ಆಸ್ಪತ್ರೆಯಲ್ಲಿ ಕ್ರೂಜರ್ ಚಾಲಕ ಮಾರುತಿ ಮೃತಪಟ್ಟಿದ್ದಾರೆ. ಸ್ಥಳದಲ್ಲಿಯೇ ಮೃತಪಟ್ಟವರನ್ನು ಶಿವನಗೌಡ ಮತ್ತು ಅಮೃತ …
Read More »ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಸಂಪತ್‌ಗೆ ಅಭಿನಂದನೆ ಸಲ್ಲಿಸುತ್ತೇನೆ: ಯತ್ನಾಳ್
ವಿಜಯಪುರ: ‘ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದ ಸಂಪತ್ ಕಾಂಗ್ರೆಸ್ ಕಾರ್ಯಕರ್ತನಾಗಿದ್ದರೂ ಧರ್ಮದ ಅಪಮಾನ ಮಾಡಿರುವುದಕ್ಕೆ ಆತನಿಗೆ ನೋವಾಗಿದೆ’ ಎಂದು ವಿಜಯಪುರ ನಗರ ಮತ ಕ್ಷೇತ್ರದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ( Basangouda Patil Yatnal) ಹೇಳಿದ್ದಾರೆ. ನಗರದಲ್ಲಿ ಬಿಡಿಎ ಕಚೇರಿಯಲ್ಲಿ ನಡೆದ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಿದ್ದರಾಮಯ್ಯ (Siddaramaiah) ಅವರ ಕಾರಿಗೆ ಮೊಟ್ಟೆ ಎಸೆದ …
Read More »ಬೊಮ್ಮಾಯಿ ಸಂಪುಟಕ್ಕೆ ಮೇಜರ್ ಸರ್ಜರಿ.? ಕೆಲವರಿಗೆ ಕೊಕ್, ಡಿಸಿಎಂ ಹುದ್ದೆ ಸೃಷ್ಟಿ ಸಾಧ್ಯತೆ
ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಬಿಜೆಪಿ ಸರ್ಕಾರದ ಕೊನೆಯ ಕಂತಿನ ಸಂಪುಟ ಸರ್ಜರಿ ಶೀಘ್ರದಲ್ಲೇ ನಡೆಯಲಿದೆ. ಖಾಲಿ ಇರುವ 5 ಸ್ಥಾನಗಳನ್ನು ಭರ್ತಿ ಮಾಡಲಿದ್ದು, ಇದೇ ವೇಳೆ ಕೆಲವರಿಗೆ ಕೊಕ್ ನೀಡಿ ಮತ್ತೆ ಕೆಲವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲು ಚಿಂತನೆ ನಡೆದಿದೆ. ಪ್ರಮುಖವಾಗಿ ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿಗೂ ಪಕ್ಷದ ವಲಯದಲ್ಲಿ ಚರ್ಚೆ ನಡೆದಿದೆ ಎಂದು ಹೇಳಲಾಗಿದೆ. ಮುಂದಿನ ವರ್ಷ ವಿಧಾನಸಭೆ ಚುನಾವಣೆ ನಡೆಯಲಿದ್ದು, ಜನಪ್ರಿಯ ಮಂತ್ರಿ ಮಂಡಲ ರಚಿಸಲು ಪಕ್ಷದ …
Read More »KPSC ಯಿಂದ 1323 SDA ಹುದ್ದೆಗಳ ನೇಮಕಾತಿ ಅರ್ಹತಾ ಪಟ್ಟಿ ಆಗಸ್ಟ್ 25 ರಂದು ಪ್ರಕಟ
ಬೆಂಗಳೂರು: ವಿವಿಧ ಇಲಾಖೆಗಳ ಕಿರಿಯ ಸಹಾಯಕರು, ದ್ವಿತೀಯ ದರ್ಜೆ ಸಹಾಯಕರ ನೇಮಕಾತಿ ಪರೀಕ್ಷೆ ಅರ್ಹತಾ ಪಟ್ಟಿಯನ್ನು ಕೆಪಿಎಸ್‌ಸಿ ಆಗಸ್ಟ್ 25 ರಂದು ಪ್ರಕಟಿಸಲಿದೆ. 1,323 ಹುದ್ದೆಗಳ ನೇಮಕಾತಿಗೆ ನಡೆದಿದ್ದ ಕಿರಿಯ ಸಹಾಯಕರು ಮತ್ತು ದ್ವಿತೀಯ ದರ್ಜೆ ಸಹಾಯಕರ ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ. 2019-20 ನೇ ಸಾಲಿನಲ್ಲಿ ಅಧಿಸೂಚನೆ ಹೊರಡಿಸಿ 2021ರ ಸೆಪ್ಟೆಂಬರ್ 18, 19 ರಂದು ಪರೀಕ್ಷೆ ನಡೆಸಲಾಗಿತ್ತು. ಆಗಸ್ಟ್ 25 ರಂದು ಅರ್ಹತಾ ಪಟ್ಟಿ ಪ್ರಕಟಿಸಲಾಗುವುದು. ಗ್ರೂಪ್ ಎ ಹುದ್ದೆ …
Read More »