Breaking News

Yearly Archives: 2022

ಬೆಳಗಾವಿಯಲ್ಲಿ ಚಿರತೆಗಾಗಿ ಅರಣ್ಯ-ಪೊಲೀಸ್ ಇಲಾಖೆ ಬೃಹತ್ ಕಾರ್ಯಾಚರಣೆ

ಕಳೆದ 15 ದಿನಗಳಿಂದ ಬೆಳಗಾವಿ ನಗರದಲ್ಲಿ ಭೀತಿ ಹುಟ್ಟಿಸಿರುವ ಚಿರತೆ ಪತ್ತೆಗೆ ಅರಣ್ಯ ಇಲಾಖೆ ಹಾಗೂ ಪೆÇಲೀಸ್ ಇಲಾಖೆಯ ಮತ್ತಷ್ಟು ಚುರುಕುಗೊಂಡಿದ್ದು. ದೊಡ್ಡ ಮಟ್ಟದ ಕಾರ್ಯಾಚರಣೆ ಕೈಗೊಂಡಿದೆ. ಹೌದು ಆಗಸ್ಟ್ 5ರಂದು ಬೆಳಗಾವಿಯ ಗಾಲ್ಫ್ ಮೈದಾನಕ್ಕೆ ಹೊಂದಿಕೊಂಡಿರುವ ಬೆಳಗಾವಿ ಕ್ಲಬ್ ಆವರಣದಲ್ಲಿ ಜಮಾಯಿಸಿದ ಅರಣ್ಯ ಇಲಾಖೆ ಹಾಗೂ ಪೆÇಲೀಸ್ ಇಲಾಖೆ ಫೋರ್ಸ ಸಿಬ್ಬಂದಿಗಳಿಗೆ ಡಿಸಿಪಿ ರವೀಂದ್ರ ಗಡಾದಿ, ಎಸಿಪಿ ನಾರಾಯಣ ಭರಮಣಿ ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳು ಚಿರತೆ ಪತ್ತೆಯ …

Read More »

ನವದೆಹಲಿ: ಬಿಹಾರದಲ್ಲಿ ಪಕ್ಷದ ರಾಜ್ಯವ್ಯಾಪಿ ವಿಸ್ತರಣೆಗೆ ಕಾರ್ಯತಂತ್ರ ಸಿದ್ಧಪಡಿಸಿದ ಬಿಜೆಪಿ – 1

ನವದೆಹಲಿ: ಮಹಾಘಟಬಂಧನ್ ಸರ್ಕಾರ ರಚನೆಗೆ ಕಾರಣವಾದ ಬಿಹಾರ ರಾಜಕೀಯದಲ್ಲಿನ ಇತ್ತೀಚಿನ ಘಟನೆಯಿಂದ ಪಾಠ ಕಲಿತಿರುವ ಬಿಜೆಪಿ ಈಗ ಇಡೀ ರಾಜ್ಯದಲ್ಲಿ ಸಂಘಟನೆಯನ್ನು ವಿಸ್ತರಿಸಲು ವಿಸ್ತೃತ ಕಾರ್ಯತಂತ್ರವನ್ನು ಸಿದ್ಧಪಡಿಸಿದೆ. 2024 ರ ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 40 ಲೋಕಸಭಾ ಸ್ಥಾನಗಳಲ್ಲಿ 35 ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲಲು ಬಿಜೆಪಿ ಕಾರ್ಯತಂತ್ರವನ್ನು ಸಿದ್ಧಪಡಿಸಿದೆ.   ಪಕ್ಷದ ರಾಷ್ಟ್ರೀಯ ಪ್ರಧಾನ ಕಚೇರಿಯಲ್ಲಿ ಅಮಿತ್ ಶಾ ಅವರ ಉಪಸ್ಥಿತಿಯಲ್ಲಿ ಜೆ.ಪಿ.ನಡ್ಡಾ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ, …

Read More »

ಶಿಮ್ಲಾ: ಹಿಮಾಚಲದಲ್ಲೂ ಜನಪರ, ಫಲಿತಾಂಶ ಆಧಾರಿತ ಸರ್ಕಾರವನ್ನು ಆಯ್ಕೆ ಮಾಡಿ ಎಂದ ಪಂಜಾಬ್ ಸಿಎಂ

ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ ಬದಲಾವಣೆಯ ಸಮಯ ಬಂದಿದೆ ಎಂದು ಪ್ರತಿಪಾದಿಸಿದ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪಂಜಾಬ್ ನ ಮಾದರಿಯನ್ನು ಅನುಸರಿಸಲು ಮತ್ತು ಜನಪರ ಮತ್ತು ಫಲಿತಾಂಶ ಆಧಾರಿತ ಸರ್ಕಾರವನ್ನು ಆಯ್ಕೆ ಮಾಡುವಂತೆ ಗುಡ್ಡಗಾಡು ರಾಜ್ಯದ ಜನರಿಗೆ ಮನವಿ ಮಾಡಿದ್ದಾರೆ.   ದೆಹಲಿಯ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರೊಂದಿಗೆ ಸಭೆಯನ್ನುದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಭಗವಂತ್ ಮಾನ್, ದೇಶವನ್ನು ಹಾಳು ಮಾಡಿದ ಸಾಂಪ್ರದಾಯಿಕ ಪಕ್ಷಗಳ ದಣಿವರಿಯದೆ ಕೆಲಸ ಮಾಡುತ್ತಿರುವ …

Read More »

ಚುನಾವಣೆ ಮುಂದೂಡಲು”ಸುಗ್ರೀವಾಜ್ಞೆ’ ನೆಪ? : ಹೆಚ್ಚಾಗಲಿದೆ ತಾ.ಪಂ,ಜಿ.ಪಂ. ಕ್ಷೇತ್ರಗಳ ಸಂಖ್ಯೆ

ಬೆಂಗಳೂರು: ರಾಜ್ಯದ ಜಿಲ್ಲಾ ಪಂಚಾಯತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆಗಳಿಗೆ ಹಾದಿ ಸುಗಮವಾಗುವ ಲಕ್ಷಣಗಳು ಸದ್ಯಕ್ಕೆ ಕಾಣುತ್ತಿಲ್ಲ. ಏಕೆಂದರೆ, ಕ್ಷೇತ್ರಗಳ ಜನಸಂಖ್ಯೆ ನಿಗದಿಗೆ ಸಂಬಂಧಿಸಿದಂತೆ “ಸುಗ್ರೀವಾಜ್ಞೆ’ ತರಲು ಸರ್ಕಾರ ನಿರ್ಧರಿಸಿದೆ.   ತಾ.ಪಂ ಹಾಗೂ ಜಿ.ಪಂ ಕ್ಷೇತ್ರಗಳ ಜನಸಂಖ್ಯೆ ಬಗ್ಗೆ “ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ರಾಜ್‌ (ತಿದ್ದುಪಡಿ) ವಿಧೇಯಕ-2022ನ್ನು ಕಳೆದ ಮಾರ್ಚ್‌ನಲ್ಲಿ ನಡೆದ ಬಜೆಟ್‌ ಅಧಿವೇಶನದಲ್ಲಿ ಅಂಗೀಕರಿಸಲಾಗಿತ್ತು. ಇದೀಗ ಈ ತಿದ್ದುಪಡಿ ಕಾಯ್ದೆಯ ಸೆಕ್ಷನ್‌ 121 ಮತ್ತು ಸೆಕ್ಷನ್‌ 160ರ …

Read More »

ಅನೈತಿಕ ಸಂಬಂಧ: ಸವದತ್ತಿಯಲ್ಲಿ ಪತಿಯಿಂದ ಪತ್ನಿಯ ಬರ್ಬರ ಹತ್ಯೆ

ಸವದತ್ತಿ: ಅನೈತಿಕ ಸಂಬಂಧದ ಶಂಕೆಯಿಂದ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನೇ ಮಾರಕಾಸ್ತ್ರದಿಂದ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಇಲ್ಲಿನ ರಾಮಾಪೂರ ಸೈಟಿನಲ್ಲಿ ಗುರುವಾರ ನಡೆದಿದೆ. ಶಬಾನಾ (28) ಕೊಲೆಗೀಡಾದ ಮಹಿಳೆ. ಆರೋಪಿ ಮೆಹಬೂಬಸಾಬ ಗರೀಬಸಾಬ ಗೊರವನಕೊಳ್ಳ (30) ತನ್ನ ಪತ್ನಿಯನ್ನು ಕೊಲೆಗೈದು ಪೊಲೀಸರಿಗೆ ಶರಣಾಗಿದ್ದಾನೆ. ದಂಪತಿಗೆ ಇಬ್ಬರು ಮಕ್ಕಳು ಇದ್ದಾರೆ. ಸ್ಥಳಕ್ಕೆ ಪಿಐ ಕರುಣೇಶಗೌಡ ಜೆ. ಭೇಟಿ ನೀಡಿ ಪರಿಶೀಲಿಸಿದ್ದಾರೆ. ಆರೋಪಿಯೊಂದಿಗೆ ಕೃತ್ಯಕ್ಕೆ ಬಳಿಸಿದ ಮಾರಕಾಸ್ತ್ರವನ್ನು ವಶ ಪಡಿಸಿಕೊಳ್ಳಲಾಗಿದೆ. ಆಗಾಗ ಪತಿ ಪತ್ನಿ …

Read More »

2022ನೇ ಸಾಲಿನ ಜಾನಪದ ಅಕಾಡೆಮಿ ವಾರ್ಷಿಕ ಗೌರವ ಪ್ರಶಸ್ತಿ ಪ್ರಕಟ

ಬೆಂಗಳೂರು: ಕರ್ನಾಟಕ ಜಾನಪದ ಅಕಾಡೆಮಿಯ 2022ನೇ ಸಾಲಿನ ವಾರ್ಷಿಕ ಗೌರವ ಪ್ರಶಸ್ತಿ ಪ್ರಕಟಿಸಲಾಗಿದ್ದು, 30 ಮಂದಿ ಜಾನಪದ ಕಲಾವಿದರು ವಾರ್ಷಿಕ ಗೌರವ ಪ್ರಶಸ್ತಿ ಹಾಗೂ ಇಬ್ಬರು ಜಾನಪದ ತಜ್ಞರು ವಿಶೇಷ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷರಾದ ಬಿ. ಮಂಜಮ್ಮ ಜೋಗತಿ ಅವರು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಪಟ್ಟಿ ಬಿಡುಗಡೆಗೊಳಿಸಿದರು. 2022ನೇ ಸಾಲಿನಲ್ಲಿ 30 ಜಿಲ್ಲೆಗಳಿಂದ 30 ಹಿರಿಯ ಜಾನಪದ ಕಲಾವಿದರು ಹಾಗೂ ಇಬ್ಬರು ಜಾನಪದ ತಜ್ಞರಿಗೆ ಡಾ. ಜೀ.ಶಂ.ಪ …

Read More »

ಮತ್ತಮ್ಮೆ ಶಕ್ತಿ ಕೇಂದ್ರವಾದ B.S.Y. ನಿವಾಸ

ಬೆಂಗಳೂರು – ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿದ ಬಳಿಕ ಮುಂದೇನು ಎನ್ನುವ ಪ್ರಶ್ನೆಯೊಂದಿಗೆ, ಮೂಲೆಗುಂಪಾಗಿಬಿಡುತ್ತಾರಾ ಯಡಿಯೂರಪ್ಪ ಎನ್ನುವ ಅನುಮಾನಕ್ಕೆ  ಉತ್ತರವಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಸ್ಥಾನ ನೀಡಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಪ್ರಧಾನಮಂತ್ರಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ ಸಿಂಗ್, ಗೃಹ ಸಚಿವ ಅಮಿತ್ ಶಾ ನಂತರದ ಸ್ಥಾನದಲ್ಲಿ ಯಡಿಯೂರಪ್ಪ ಅವರು ಸೇರಿಸಲ್ಪಟ್ಟಿದ್ದಾರೆ. 2023ರ ವಿಧಾನ ಸಭೆ ಚುನಾವಣೆ ಮತ್ತು 2024ರ ಲೋಕಸಭಾ ಚುನಾವಣೆಗೆ …

Read More »

ಮಗನಿಂದಲೇ ತಂದೆಯ ಬರ್ಬರ ಹತ್ಯೆ

ಗದಗ: ಕೌಟುಂಬಿಕ ಕಲಹ ಹಿನ್ನೆಲೆ ಮಗನಿಂದಲೇ ತಂದೆಯ ಬರ್ಬರ ಹತ್ಯೆ ನಡೆದಿರುವ ಘಟನೆ ತಾಲೂಕಿನ ಹುಲಕೋಟಿ ಗ್ರಾಮದಲ್ಲಿ ಬುಧವಾರ ನಡೆದಿದೆ. ಹುಲಕೊಟಿ ಗ್ರಾಮದ 58 ವರ್ಷದ ಗಣೇಶ ಅಡಿವೆಪ್ಪ ಚಿಕ್ಕನಟ್ಟಿ ಕೊಲೆಯಾದವರು. ವಿಜಯ ಗಣೇಶ ಚಿಕ್ಕನಟ್ಟಿ ಕೊಲೆ ಮಾಡಿದ ಮಗ. ಕಳೆದ ಕೆಲ ವರ್ಷಗಳಿಂದ ಗಣೇಶ ಚಿಕ್ಕನಟ್ಟಿ, ಹೆಂಡತಿ ಹಾಗೂ ಮಗನಿಗೆ ನಿತ್ಯ ಕಿರುಕುಳ ನೀಡಿ, ಮನೆಯಲ್ಲಿ ಜಗಳವಾಡುತ್ತಿದ್ದ ಎಂದು ತಿಳಿದು ಬಂದಿದೆ. ಎಂದಿನಂತೆ ತಂದೆ ಗಣೇಶ ಮನೆಯಲ್ಲಿ ತಾಯಿಗೆ ಕಿರುಕುಳ …

Read More »

ಬಾ ನಲ್ಲೆ ಮಧುಚಂದ್ರಕ್ಕೆ ಸಿನಿಮಾ ಮಾದರಿ ಪತ್ನಿ ಕೊಂದ!

ಬೆಂಗಳೂರು: ಸಿನಿಮೀಯ ರೀತಿಯಲ್ಲಿ ಪತ್ನಿಯನ್ನು ಕೊಲೆಗೈದಿರುವ ಪತಿಯನ್ನು ಬಂಧಿಸಿರುವ ಘಟನೆ ಮಡಿವಾಳ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬಿಹಾರ ಮೂಲದ ಜ್ಯೋತಿ ಕುಮಾರಿ (38) ಕೊಲೆಯಾದ ಮಹಿಳೆ. ಪತಿ ಪೃಥ್ವಿರಾಜ್‌(30) ಬಂಧಿತ ಆರೋಪಿ. ಕೃತ್ಯಕ್ಕೆ ಸಹಕರಿಸಿದ ಸಮೀರ್‌ ಕುಮಾರ್‌ ತಲೆಮರೆಸಿಕೊಂಡಿದ್ದಾನೆ. 12 ವರ್ಷಗಳ ಹಿಂದೆ ನಗರಕ್ಕೆ ಬಂದಿದ್ದ ಪೃಥ್ವಿರಾಜ್‌, ಎಲೆಕ್ಟ್ರಾನಿಕ್ಸ್‌ ವಸ್ತುಗಳ ಮಾರಾಟಗಾರನಾಗಿ ಕೆಲಸ ಮಾಡುತ್ತಿದ್ದ. ಈ ಮಧ್ಯೆ ಬಿಹಾರ ಮೂಲದ ಜ್ಯೋತಿ ಕುಮಾರಿಯನ್ನು 2021ರ ನವೆಂಬರ್‌ನಲ್ಲಿ ಮದುವೆಯಾಗಿದ್ದನು. ಆದರೆ, ಇಬ್ಬರ ನಡುವೆ …

Read More »

ನಾವು ಹೋರಾಟ ಮಾಡಿದ್ರೆ ಬಿಜೆಪಿಯವರು ಓಡಾಡಲು ಆಗಲ್ಲ : ಸಿದ್ದರಾಮಯ್ಯ

ಮಡಿಕೇರಿ: ಕಾರಿನ ಮೇಲೆ ಮೊಟ್ಟೆ ಎಸೆದು ಬಿಜೆಪಿ ಕಾರ್ಯಕರ್ತರ ಆಕ್ರೋಶ ವಿಚಾರಕ್ಕೆ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ನಮಗೂ ಮೊಟ್ಟೆ ಎಸೆಯಲು ಬರುತ್ತೆ. ಕಾಂಗ್ರೆಸ್ ಕಾರ್ಯಕರ್ತರು ಬೀದಿಗಿಳಿದು ಹೋರಾಡಲು ಆರಂಭಿಸಿದರೆ ಸಿಎಂ ಓಡಾದಲು ಆಗಲ್ಲ ಎಂದು ಎಚ್ಚರಿಸಿದ್ದಾರೆ. ಮಡಿಕೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಬಿಜೆಪಿ ಕಾರ್ಯಕರ್ತರ ಪ್ರತಿಭಟನೆಗೆ ಅರ್ಥವಿಲ್ಲ. ದುಡ್ಡುಕೊಟ್ಟು ಜನರನ್ನು ಕರೆತಂದು ಬಿಜೆಪಿ ಕಾರ್ಯಕರ್ತರು ಎಂದು ಪ್ರತಿಭಟನೆ ಮಾಡಿಸಿದ್ದಾರೆ. ಇದು ಹೇಡಿಗಳು ಮಾಡುವ ಕೆಲಸ ಎಂದು ಕಿಡಿಕಾರಿದರು. …

Read More »