ಧಾರವಾಡ, ಆಗಸ್ಟ್, 12: ಮಹಾಮಾರಿ ಕೊರೊನಾ ಸಂದರ್ಭದಲ್ಲಿ ಹಿನ್ನಡೆ ಅನುಭವಿಸಿದ ಧಾರವಾಡ ರಂಗಾಯಣ ಮತ್ತೆ ಕಾರ್ಯಪ್ರವೃತ್ತವಾಗಿದೆ. 18ನೇ ಶತಮಾನದ ರಾಣಿಯರ ಚಿತ್ರಣವನ್ನು ರಂಗಭೂಮಿ ಮೇಲೆ ತರುವ ಪ್ರಯತ್ನಕ್ಕೆ ಮುಂದಾಗಿದೆ. ಕಿತ್ತೂರು ರಾಣಿ ಚೆನ್ನಮ್ಮ ಕನ್ನಡ ನಾಟಕವನ್ನು ಪ್ರದರ್ಶಿಸುವ ಬೃಹತ್ ಯೋಜನೆಯಲ್ಲಿ ರಂಗಾಯಣ ತಂಡ ಕೆಲಸ ಮಾಡುತ್ತಿದೆ. ನಾಟಕವು ಸ್ವಾತಂತ್ರ್ಯ ಹೋರಾಟ ಮತ್ತು ಚೆನ್ನಮ್ಮನ ಆಡಳಿತದ ದೃಶ್ಯಗಳನ್ನು ಮರುಸೃಷ್ಟಿಸುತ್ತದೆ. ನಿಜವಾದ ಕುದುರೆ, ಆನೆಗಳು ಹಾಗೂ ಸೈನಿಕರನ್ನು ವೀಕ್ಷಕರ ಕಣ್ಣೆದುರು …
Read More »Yearly Archives: 2022
ರೈತರ ಜೀವನಾಡಿ ಮಲಪ್ರಭಾ ಜಲಾಶಯ ಭರ್ತಿಗೆ ಇನ್ನು 5 ಟಿಎಂಸಿ ಬಾಕಿ
ನರಗುಂದ(ಆ.17): ಮಲಪ್ರಭಾ ಅಚ್ಚುಕಟ್ಟು ಪ್ರದೇಶದ ರೈತರ ಜೀವನಾಡಿ ಮಲಪ್ರಭಾ ಜಲಾಶಯ ಭರ್ತಿಯಾಗುತ್ತಿದ್ದು, ಈ ಭಾಗದ ರೈತರಿಗೆ ಹರ್ಷ ತಂದಿದೆ. ಗದಗ ಜಿಲ್ಲೆಯ ನರಗುಂದ, ರೋಣ, ಧಾರವಾಡ ಜಿಲ್ಲೆಯ ನವಲಗುಂದ, ಬೆಳಗಾವಿ ಜಿಲ್ಲೆಯ ಸವದತ್ತಿ, ರಾಮದುರ್ಗ, ಬಾಗಲಕೋಟೆ ಜಿಲ್ಲೆಯ ಬಾದಾಮಿ, ಸೇರಿದಂತೆ ವಿವಿಧ ತಾಲೂಕುಗಳಲ್ಲಿ ಈ ಜಲಾಶಯದ ಕಾಲುವೆ ನೀರಿನ ಮೂಲಕ ಈ ಭಾಗದ ರೈತರು ಜಮೀನುಗಳನ್ನು ನೀರಾವರಿ ಮಾಡಿ ಬದುಕು ಕಟ್ಟಿಕೊಳ್ಳುತ್ತಾರೆ. ಜಲಾಶಯ ಒಟ್ಟು 37.73 ಟಿಎಂಸಿ ನೀರಿನ …
Read More »ಪರಿಶ್ರಮದಿಂದ ಓದಿ ಜ್ಞಾನ ಮಟ್ಟ ಹೆಚ್ಚಿಸಿಕೊಳ್ಳಬೇಕು ಎಂದು ಮಾಳಮಾರುತಿ ಠಾಣೆ ಇನ್ಸಪೆಕ್ಟರ್ ಸುನೀಲ ಪಾಟೀಲ
ಬೆಳಗಾವಿ:ವಿದ್ಯಾರ್ಥಿಗಳ ಉಜ್ವಲ ಬದುಕು ಮತ್ತು ಭವಿಷ್ಯವನ್ನು ರೂಪಿಸುವ ಎಸ್ಸೆಸ್ಸೆಲ್ಸಿ ಎಂಬ ಪ್ರಮುಖ ಘಟ್ಟ ದಾಟಬೇಕಾದರೆ ಪರಿಶ್ರಮದಿಂದ ಓದಿ ಜ್ಞಾನ ಮಟ್ಟ ಹೆಚ್ಚಿಸಿಕೊಳ್ಳಬೇಕು ಎಂದು ಮಾಳಮಾರುತಿ ಠಾಣೆ ಇನ್ಸಪೆಕ್ಟರ್ ಸುನೀಲ ಪಾಟೀಲ ಅಭಿಪ್ರಾಯಪಟ್ಟರು. ನಗರದ ವಂಟಮೂರಿ ಕಾಲೋನಿ ಸರ್ಕಾರಿ ಪ್ರೌಢಶಾಲೆಯ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಮಂಗಳವಾರ ಉದಯವಾಣಿ ಶಿಕ್ಷಣ ಮಾರ್ಗದರ್ಶಿ ವಿತರಿಸಿ ಅವರು ಮಾತನಾಡಿದರು. ನಿಮ್ಮ ಜೀವನದಲ್ಲಿ ಎಸ್ಸೆಸ್ಸೆಲ್ಸಿ ಎಂಬ ತಳಪಾಯವನ್ನು ಗಟ್ಟಿಗೊಳಿಸಿಕೊಳ್ಳಬೇಕು. ಆಗ ಮುಂದಿನ ಎಲ್ಲ ಸ್ಪರ್ಧೆ, ಸವಾಲುಗಳನ್ನು ಸಮರ್ಥವಾಗಿ ಎದುರಿಸಿ …
Read More »ರೈಲು ಅಪಘಾತ 53 ಮಂದಿ ಗಾಯ
ಮಹಾರಾಷ್ಟ್ರ: ರಾಯ್‌ಪುರದಿಂದ ನಾಗ್ಪುರ ಮಾರ್ಗವಾಗಿ ಹೋಗುತ್ತಿದ್ದ ಭಗತ್ ಕಿ ಕೋಠಿ ರೈಲು ಗೊಂದಿಯಾ ನಗರದ ಬಳಿ ಅಪಘಾತಕ್ಕೀಡಾಗಿದ್ದು, 53 ಮಂದಿ ಗಾಯಗೊಂಡಿದ್ದಾರೆ. ಭಗತ್ ಕಿ ಕೋಠಿ ರೈಲು ಮುಂಭಾಗದ ಗೂಡ್ಸ್ ರೈಲಿಗೆ ಡಿಕ್ಕಿ ಹೊಡೆದಿದ್ದು, ಕೆಲವು ಕೋಚ್‌ಗಳು ಹಳಿ ತಪ್ಪಿವೆ. ಘಟನೆಯಿಂದ 53 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದು, 13 ಮಂದಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನ ಜಿಲ್ಲಾಸ್ಪತ್ರೆ ಹಾಗು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
Read More »ಬೆಳಗಾವಿ ಸಂಬಂಧಿಕರ ಮನೆಗೆ ಬಂದಿದ್ದ ಯುವತಿ ನಾಪತ್ತೆ
ಬೆಳಗಾವಿ: ಹೊರಗೆ ಹೋಗಿ ಬರುವುದಾಗಿ ಮನೆಯಿಂದ ಹೊರಟ ಯುವತಿಯೊಬ್ಬಳು ನಾಪತ್ತೆಯಾಗಿರುವ ಘಟನೆ ಇಲ್ಲಿನ ರೈತಗಲ್ಲಿಯಲ್ಲಿ ನಡೆದಿದೆ. ಮೂಲತಃ ಬೆಂಗಳೂರಿನ ಆನೇಕಲ್ ತಾಲೂಕಿನ ಜಿಗಣಿ ಗ್ರಾಮದ ನಿವಾಸಿ ಜ್ಯೋತಿ ಹಿಕ್ಕಡಿ(20) ನಾಪತ್ತೆಯಾದ ಯುವತಿ ಎಂದು ತಿಳಿದು ಬಂದಿದೆ. ವಿಜಯಪುರ ಜಿಲ್ಲೆಯ ಮಾದಾಪಟ್ಟಣದಲ್ಲಿ ಜ್ಯೋತಿ ಅವರ ತಂದೆ ಶ್ರೀಶೈಲ ಹಿಕ್ಕಡಿ ವಾಸವಾಗಿದ್ದರು. ಕಳೆದ ಹದಿನೈದು ದಿನಗಳ ಹಿಂದೆಯಷ್ಟೇ ಬೆಳಗಾವಿ ನಗರದ ರೈತ ಗಲ್ಲಿಯಲ್ಲಿ ತಮ್ಮ ಸಂಬಂಧಿಕರ ಮನೆಗೆ ಬಂದಿದ್ದ ಯುವತಿ, ಕಳೆದ ನಾಲ್ಕು …
Read More »ಪಿಎಸ್‌ಐ ನೇಮಕಾತಿ ಹಗರಣದಲ್ಲಿ ಬಂಧಿಯಾಗಿರುವ ಐಪಿಎಸ್ ಅಧಿಕಾರಿ, ಜಾಮೀನು ನಿರಾಕರಿಸಿದ ಸೆಷನ್ಸ್ ನ್ಯಾಯಾಲಯ
ಬೆಂಗಳೂರು: ಪಿಎಸ್‌ಐ ನೇಮಕಾತಿ ಹಗರಣದಲ್ಲಿ ಬಂಧನಕ್ಕೊಳಗಾಗಿರುವ ಐಪಿಎಸ್ ಅಧಿಕಾರಿಯಾದ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಅಮೃತ್ ಪಾಲ್ ಅವರಿಗೆ ಜಾಮೀನು ನೀಡಲು ಬೆಂಗಳೂರಿನ ಸೆಷನ್ಸ್ ನ್ಯಾಯಾಲಯ ನಿರಾಕರಿಸಿದೆ. ಅಮೃತ್ ಪಾಲ್ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ 51ನೇ ಹೆಚ್ಚುವರಿ ನಗರ ಮತ್ತು ಸೆಷನ್ಸ್ ಕೋರ್ಟ್ನ ನ್ಯಾಯಾಧೀಶ ಯಶವಂತ ಕುಮಾರ್ ಅವರು ಮಂಗಳವಾರ ತೀರ್ಪು ನೀಡಿ ಜಾಮೀನು ಅರ್ಜಿ ವಜಾಗೊಳಿಸಿದರು. ಹಿರಿಯ ಪೊಲೀಸ್ ಅಧಿಕಾರಿಯಾಗಿರುವ ಅಮೃತ್ ಪಾಲ್ ಅವರು ಪಿಎಸ್‌ಐ …
Read More »ಸ್ವಾತಂತ್ರ್ಯೋತ್ಸವದ ದಿನ ಜೇಬಿನಲ್ಲಿ ಚಾಕು ಯಾಕಿತ್ತು?, ಧ್ವಜ ಇರಬೇಕಿತ್ತು: ಪ್ರಮೋದ ಮುತಾಲಿಕ್
ಧಾರವಾಡ: ಶಿವಮೊಗ್ಗದಲ್ಲಿ ಸೋಮವಾರ ನಡೆದ ಗಲಾಟೆ ಆಕಸ್ಮಿಕವಾದದ್ದಲ್ಲ. ಮುಂಬರುವ ಗಣೇಶ ಮೆರವಣಿಗೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಪೂರ್ವನಿಯೋಜಿತವಾಗಿ ಈ ಕೃತ್ಯ ನಡೆದಿದೆ ಎಂದು ಪ್ರಮೋದ ಮುತಾಲಿಕ್ ದೂರಿದರು. ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಮೊಗ್ಗದಲ್ಲಿ 40 ವರ್ಷದಿಂದ ಹಿಂದೂ ಮಹಾಸಭಾದ ಗಣೇಶ ಮೆರವಣಿಗೆ ಆಗುತ್ತದೆ. ಈ ಹಿಂದೆ ಗಣೇಶ ಮೆರವಣಿಗೆ ಮಸೀದಿ ಮುಂದೆ ಹೋಗಬಾರದೆಂದು ಗಲಾಟೆ ಮಾಡಿದ್ದರು. ಆಗಿನಿಂದಲೇ ಸಂಘರ್ಷ ಆರಂಭವಾಗಿದೆ ಎಂದರು. ಸಾವರ್ಕರ್ ಓರ್ವ ಪ್ರಖರ ಹಿಂದೂವಾದಿ ಮತ್ತು ರಾಷ್ಟ್ರೀಯವಾದಿ. ಅವರನ್ನು ವಿರೋಧಿಸುವುದು …
Read More »ಸಿದ್ದರಾಮಯ್ಯ ವೋಟಿಗಾಗಿ ಸಾವರ್ಕರ್ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುತ್ತಿದ್ದಾರೆ: ಆರಗ ಜ್ಞಾನೇಂದ್ರ
ಶಿವಮೊಗ್ಗ: ಪ್ರತಿಪಕ್ಷ ನಾಯಕ ಸಿದ್ದರಾಮಯ್ಯನವರು ವೋಟಿಗಾಗಿ ಓಲೈಕೆ ಮಾಡಿ ವಿ.ಡಿ. ಸಾವರ್ಕರ್ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡುತ್ತಿದ್ದಾರೆ. ಸಾವರ್ಕರ್ ಅವರು ಬ್ರಿಟಿಷರ ಬೂಟು ನೆಕ್ಕಿದ್ರು ಎಂಬ ಹೇಳಿಕೆ ಒಂದು ಸಮುದಾಯವನ್ನು ಎತ್ತಿಕಟ್ಟಿದೆ. ಚುನಾವಣಾ ವರ್ಷ ಆಗಿರುವುದರಿಂದ ಈ ರೀತಿ ಮಾತನಾಡುತ್ತಿದ್ದಾರೆ. ಸಾವರ್ಕರ್ ಓರ್ವ ಸ್ವಾತಂತ್ರ್ಯ ಹೋರಾಟಗಾರ, 13 ವರ್ಷ ಅವರು ಕರಿನೀರಿನ ಶಿಕ್ಷೆ ಅನುಭವಿಸಿದ್ದರು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ನಗರದಲ್ಲಿಂದು ವೀರ ಸಾವರ್ಕರ್ …
Read More »ಪುಟ್ಟ ರಾಜ್ಯದ ರಕ್ಷಣೆಗೆ ದೊಡ್ಡ ಸೈನ್ಯದ ವಿರುದ್ಧ ಸೆಟೆದು ನಿಂತವರು ರಾಣಿ ಕಿತ್ತೂರು ಚೆನ್ನಮ್ಮ
ಬೆಳಗಾವಿ: ನಿಮಗೆ ಏಕೆ ಕೊಡಬೇಕು ಕಪ್ಪ ಎಂದು ಗಟ್ಟಿ ಧ್ವನಿಯಲ್ಲಿ ಹೇಳುತ್ತ, ಬ್ರಿಟಿಷರೇ ದೇಶ ಬಿಟ್ಟು ತೊಲಗಿ ಎಂದು ಗುಡುಗು ಹಾಕಿದ ಕನ್ನಡನಾಡಿನ ಸಾಹಸಿ ಮಹಿಳೆಯರಲ್ಲಿ ಅಗ್ರಪಂಕ್ತಿಗೆ ಸೇರಿದವರು, ಸ್ವಾತಂತ್ರ್ಯ ಸ್ವಾಭಿಮಾನದ ಸಾಕಾರಮೂರ್ತಿ ಕಿತ್ತೂರಿನ ರಾಣಿ ಚೆನ್ನಮ್ಮ. ಕಿತ್ತೂರಿನ ದೇಸಾಯಿಗಳಲ್ಲಿ ಪ್ರಸಿದ್ಧನಾದ ಮಲ್ಲಸರ್ಜನ ಅವರ ಹೆಂಡತಿ ರಾಣಿ ಚೆನ್ನಮ್ಮ. ತಮ್ಮ ಪುಟ್ಟ ರಾಜ್ಯದ ರಕ್ಷಣೆಗಾಗಿ ಬ್ರಿಟಿಷರ ದೊಡ್ಡ ಸೈನ್ಯದ ವಿರುದ್ಧ ಸೆಟೆದು ನಿಂತು ನಡೆಸಿದ ಹೋರಾಟ, ಅಲ್ಲಿ ತೋರಿದ ಧೈರ್ಯ, ಸಾಹಸ …
Read More »ರೈತರಿಂದ ಸಾವಿರಾರು ಎಕರೆ ಭೂಮಿಯನ್ನು ವಶಪಡಿಸಿಕೊಂಡಿತ್ತು.
ಬಳ್ಳಾರಿ: ಕೈಗಾರಿಕೆಗಳನ್ನು ನಿರ್ಮಾಣ ಮಾಡುವ ಉದ್ದೇಶದಿಂದ ಸರ್ಕಾರ ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ರೈತರ ಸಾವಿರಾರು ಎಕರೆ ಭೂಮಿ ವಶಪಡಿಸಿಕೊಂಡಿತ್ತು. ಕೆಐಎಡಿಬಿ ಮೂಲಕ ವಶಪಡಿಸಿಕೊಂಡ ಭೂಮಿಯಲ್ಲಿ ಇದುವರೆಗೆ ಕೈಗಾರಿಕೆಗಳು ಸ್ಥಾಪನೆಯಾಗಿಲ್ಲ. ಹೀಗಾಗಿ ಇತ್ತ ಉದ್ಯೋಗವಿಲ್ಲದೇ ಅತ್ತ ಭೂಮಿಯೂ ಇಲ್ಲದೆ ರೈತರು ಪರದಾಡುತ್ತಿದ್ದಾರೆ. ಬಳ್ಳಾರಿ ತಾಲೂಕಿನ ಕುಡುತಿನಿ, ವೇಣಿವೀರಾಪುರ, ಕೊಳಗಲ್ಲು ಗ್ರಾಮಗಳಲ್ಲಿ ಬ್ರಹ್ಮಿಣಿ ಸ್ಟಿಲ್ ಹಾಗೂ ಮಿತ್ತಲ್ ಕಂಪನಿಗಾಗಿ ರೈತರಿಂದ ಸುಮಾರು 10 ಸಾವಿರ ಎಕರೆ ಭೂಮಿಯನ್ನು ಕೆಐಎಡಿಬಿ ಸ್ವಾಧೀನಪಡಿಸಿಕೊಂಡಿತ್ತು. ಇತ್ತ ರೈತರು ತಮ್ಮ …
Read More »