ಮಂಡ್ಯ: ಕ್ಷಣಾರ್ಧದಲ್ಲಿ ನಾಗರಹಾವಿನಿಂದ ಮಗನನ್ನು ತಾಯಿಯೊಬ್ಬಳು ಕಾಪಾಡಿರುವ ವಿಡಿಯೋ ಸಿಸಿ ಕ್ಯಾಮೆರಾದಲ್ಲಿ ವೈರಲ್ ಆಗಿದ್ದು, ಸಾರ್ವಜನಿಕರು ತಾಯಿಯ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಮದ್ದೂರಿನ ಚಾಮುಂಡೇಶ್ವರಿ ನಗರದಲ್ಲಿ ಈ ಘಟನೆ ನಡೆದಿದೆ. ಸದ್ಯ ಇವರು ಪಟ್ಟಣದ ಕೆಮ್ಮಣ್ಣನಾಲೆ ಸರ್ಕಲ್ ಸಮೀಪ ವಾಸವಾಗಿದ್ದಾರೆ. ವೈದ್ಯರಾಗಿ ಕೆಲಸ ಮಾಡುತ್ತಿರುವ ವಿಷ್ಣುಪ್ರಸಾದ್ ಪುತ್ರ ನಾಗರ ಹಾವಿನ ಕಡಿತದಿಂದ ಬಚಾವಾದ ಬಾಲಕನಾಗಿದ್ದಾನೆ. ಮನೆಯಿಂದ ಹೊರ ಹೋಗಲು ತಾಯಿ ಜೊತೆ ಹೊರ ಬಂದ ಬಾಲಕ ಮನೆಯ ಬಾಗಿಲ ಬಳಿ …
Read More »Yearly Archives: 2022
ಬೆಳಗಾವಿ: ದಕ್ಷಿಣ ಭಾರತದ ಅತಿ ಎತ್ತರದ ಧ್ವಜಸ್ತಂಭದಲ್ಲಿ ಹಾರಿದ ತ್ರಿವರ್ಣಧ್ವಜ
ಬೆಳಗಾವಿ: ಇಲ್ಲಿನ ಕೋಟೆ ಕೆರೆಯ ಮೈದಾನದಲ್ಲಿರುವ ದಕ್ಷಿಣ ಭಾರತದ ಅತಿ ಎತ್ತರದ ಧ್ವಜಸ್ತಂಭದ ಮೇಲೆ ಶನಿವಾರ ಬೆಳಿಗ್ಗೆ ತ್ರಿವರ್ಣಧ್ವಜ ಹಾರಾಡಿತು. ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ ಕೇಂದ್ರ ಸರ್ಕಾರ ಆಯೋಜಿಸಿದ ಮನೆಮನೆಗೂ ತ್ರಿವರ್ಣಧ್ವಜ ಅಭಿಯಾನದ ಭಾಗವಾಗಿ ಈ ಧ್ವಜಾರೋಹಣ ನೆರವೇರಿತು. ಬಾನಿನತ್ತ ಏರಿದ ಧ್ವಜವು ಗಾಳಿಯಲ್ಲಿ ಪದರುಬಿಚ್ಚಿ ಹಾರುತ್ತಿದ್ದಂತೆಯೇ ಕೆಳಗೆ ನಿಂತವರಲ್ಲಿ ರೋಮಾಂಚನ ಉಂಟಾಯಿತು. ಭಾರತ ಮಾತಾ ಕಿ ಜೈ, ವಂದೇ ಮಾತರಂ, ಮಾತಾಮಾತಾ ಭಾರತ ಮಾತಾ, ಜೈ ಜವಾನ್ …
Read More »ಬೆಂಗಳೂರಿನ ಉದ್ಯಮಿಗೆ ಹನಿಟ್ರ್ಯಾಪ್: ಸ್ಯಾಂಡಲ್ವುಡ್ನ ಯುವ ನಟ ಬಂಧನ
ಬೆಂಗಳೂರು: ಹನಿಟ್ರ್ಯಾಪ್ ಕೇಸ್ನಲ್ಲಿ ಸ್ಯಾಂಡಲ್ವುಡ್ ನಟರೊಬ್ಬರನ್ನು ಹಲಸೂರು ಗೇಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ನಟ ಯುವರಾಜ್ ಬಂಧಿತ. ‘ಮಿಸ್ಟರ್ ಭೀಮರಾವ್’ ಸಿನಿಮಾ ನಾಯಕ ಯುವರಾಜ್, ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಮೂಲದ ಉದ್ಯಮಿಯೊಬ್ಬರಿಗೆ ಇಬ್ಬರು ಯುವತಿಯರ ಹೆಸರಲ್ಲಿ ಚಾಟ್ ಮಾಡಿ ಹಣಕ್ಕಾಗಿ ಬೇಡಿಕೆ ಇಟ್ಟು ಬೆದರಿಸಿದ್ದ ಆರೋಪ ಕೇಳಿಬಂದಿದೆ. ಉದ್ಯಮಿ ಕೊಟ್ಟ ದೂರಿನ ಮೇರೆಗೆ ನಟನನ್ನು ಬಂಧಿಸಲಾಗಿದೆ. ಉದ್ಯಮಿಯೊಬ್ಬರಿಗೆ ಇತ್ತೀಚೆಗೆ ಇಬ್ಬರು ಯುವತಿಯರು ಪರಿಚಯ ಆಗಿದ್ದರು. ಅವರ ಹೆಸರನ್ನು ಬಳಸಿಕೊಂಡು ಉದ್ಯಮಿಗೆ ಯುವರಾಜ್ …
Read More »ಕಾಂಗ್ರೆಸ್ ನಾಯಕರ ರಾತ್ರಿ ಬದುಕಿನ ರಂಗ್-ಬಿರಂಗಿ ಬಗ್ಗೆ ದಂತಕತೆಗಳು ಮಾತ್ರವಲ್ಲ, ಗುಪ್ತ ಸಿಡಿಗಳೂ ಇವೆ!
ಬೆಂಗಳೂರು: ‘ಬಿಜೆಪಿ ನೇತೃತ್ವದ ಸರ್ಕಾರದಲ್ಲಿ ಉದ್ಯೋಗ ಪಡೆಯಬೇಕು ಎಂದರೆ ಯುವತಿಯರು ಮಂಚ ಹತ್ತಬೇಕಾಗಿದೆ’ ಎಂದಿದ್ದ ಕೆಪಿಸಿಸಿ ವಕ್ತಾರ ಪ್ರಿಯಾಂಕ್ ಖರ್ಗೆ ವಿರುದ್ಧ ರಾಜ್ಯ ಕಾಂಗ್ರೆಸ್ ಕಿಡಿಕಾರಿದೆ. ಕಾಂಗ್ರೆಸ್ ಮಹಿಳಾ ವಿರೋಧಿ ಎಂದೂ ದೂರಿದೆ. ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ, ಕಾಂಗ್ರೆಸ್ ನಾಯಕರ ರಾತ್ರಿ ಬದುಕಿನ ರಂಗ್-ಬಿರಂಗಿ ಬಗ್ಗೆ ಸಾಕಷ್ಟು ದಂತಕತೆಗಳು ಮಾತ್ರವಲ್ಲ, ಗುಪ್ತಸಿಡಿಗಳೂ ಇವೆ. ಜೂನಿಯರ್ ಖರ್ಗೆ ಅವರೇ, ಸಭ್ಯಸ್ಥರ ಮುಖವಾಡ ಹಾಕಿ ಸಮಾಜದ ಕಣ್ಣಿಗೆ ಗಣ್ಯರೆಂದು ಬಿಂಬಿಸಿಕೊಂಡ …
Read More »ರಾಜ್ಯದ 6 ಪೊಲೀಸರಿಗೆ ಕೇಂದ್ರ ಗೃಹ ಸಚಿವರ ಪದಕ
ನವದೆಹಲಿ; ಅತ್ಯುತ್ತಮ ತನಿಖೆ ನಡೆಸಿದ ರಾಜ್ಯದ 6 ಪೊಲೀಸ್ ಅಧಿಕಾರಿಗಳು ಸೇರಿದಂತೆ ದೇಶದ 151 ಪೊಲೀಸ್ ಅಧಿಕಾರಿಗಳಿಗೆ ಕೇಂದ್ರ ಗೃಹ ಸಚಿವರ ಪ್ರಶಸ್ತಿ ಲಭ್ಯವಾಗಿದೆ. ಅಪರಾಧ ಪ್ರಕರಣಗಳ ಅತ್ಯುತ್ತಮ ತನಿಖೆಗಾಗಿ ರಾಜ್ಯದ ಹೆಚ್ಚುವರಿ ಪೊಲೀಸ್ ಮುಖ್ಯಾಧಿಕಾರಿ ಲಕ್ಷ್ಮಿ ಗಣೇಶ್ ಕೆ, ಡಿವೈಎಸ್ ಪಿಗಳಾದ ವೆಂಕಟಪ್ಪ ನಾಯಕ, ಮೈಸೂರು ರಾಜೇಂದ್ರ ಗೌತಮ್, ಶಂಕರ್ ಕಾಳಪ್ಪ ಮಾರಿಹಾಳ್, ಶಂಕರಗೌಡ ವೀರಣ್ಣಗೌಡ ಪಾಟೀಲ್, ಸರ್ಕಲ್ ಇನ್ಸ್ ಪೆಕ್ಟರ್ ಗುರುಬಸವರಾಜ್, ಹೆಚ್. ಹಿರೇಗೌಡರ್ ಅವರುಗಳಿಗೆ ಕೇಂದ್ರ ಗೃಹ …
Read More »₹20ಗಾಗಿ ಕೋರ್ಟ್ ಮೆಟ್ಟಿಲೇರಿದ್ದ ವಕೀಲ: 22 ವರ್ಷಗಳ ಹೋರಾಟದ ಬಳಿಕ ದೊರೆತ ಜಯ
ನವದೆಹಲಿ: ಭಾರತೀಯ ರೈಲ್ವೆಯು ₹20 ಹೆಚ್ಚುವರಿ ಶುಲ್ಕ ವಿಧಿಸಿದೆ ಎಂದು ಆರೋಪಿಸಿ ಕೋರ್ಟ್ ಮೆಟ್ಟಿಲೇರಿದ್ದ ವಕೀಲರೊಬ್ಬರು 22 ವರ್ಷಗಳ ಕಾನೂನು ಹೋರಾಟದ ಬಳಿಕ ಪ್ರಕರಣದಲ್ಲಿ ಜಯ ಸಾಧಿಸಿದ್ದಾರೆ. 1999ರಲ್ಲಿ ತಾರಾನಾಥ ಚತುರ್ವೇದಿ ಅವರು ಮಥುರಾದಿಂದ ಮೊರಾದಾಬಾದ್‌ಗೆ ಎರಡು ಟಿಕೆಟ್ ಪಡೆದಿದ್ದರು. ₹70 ಬದಲಾಗಿ ₹90 ಶುಲ್ಕ ಪಡೆಯಲಾಗಿತ್ತು. ರಸೀದಿ ನೀಡಿದರೂ ಅಧಿಕಾರಿಗಳು ಹೆಚ್ಚುವರಿ ಶುಲ್ಕ ವಾಪಸ್ ನೀಡಿರಲಿಲ್ಲ. ಹೀಗಾಗಿ ತಾರಾನಾಥ್ ಕೋರ್ಟ್ ಮೆಟ್ಟಿಲೇರಿದ್ದರು. ಪ್ರಕರಣವನ್ನು ಮಥುರಾ ಗ್ರಾಹಕ ನ್ಯಾಯಾಲಯವು ಎರಡು …
Read More »ಬಳ್ಳಾರಿಯಲ್ಲಿ ವ್ಯಕ್ತಿ ಮೇಲೆ ಹಲ್ಲೆ, ಪಿಎಸ್ ಐ ಅಮಾನತು, ಇಲಾಖಾ ತನಿಖೆಗೆ ಆದೇಶ
ಹುಬ್ಬಳ್ಳಿ: ವ್ಯಕ್ತಿಯೊಬ್ಬರ ಮೇಲೆ ಸಾರ್ವಜನಿಕವಾಗಿ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಳ್ಳಾರಿ ಜಿಲ್ಲೆ ಕುರುಗೋಡು ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ ಪೆಕ್ಟರ್ ನನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. ಪೊಲೀಸ್ ಅಧಿಕಾರಿ ಮಣಿಕಂಠ ವ್ಯಕ್ತಿಯೊಬ್ಬರನ್ನು ಥಳಿಸುವ ವಿಡಿಯೋ ವೈರಲ್ ಆಗಿತ್ತು. ಇದರಿಂದಾಗಿ ಹಿರಿಯ ಅಧಿಕಾರಿಗಳು ಆತನನ್ನು ಅಮಾನತು ಮಾಡಿದ್ದಾರೆ.ಯಾವುದೇ ಕಾರಣವಿಲ್ಲದೆ ಗಂಗಾಧರ ಎಂಬ ವ್ಯಕ್ತಿಯ ಮೇಲೆ ಪೊಲೀಸ್ ಅಧಿಕಾರಿಗಳು ಹಲ್ಲೆ ನಡೆಸಿದ ನಂತರ ಅಲ್ಲಿನ ನಿವಾಸಿಗಳು ಅಧಿಕಾರಿಯ ವಿರುದ್ಧ ದೂರು ದಾಖಲಿಸಿದ್ದಾರೆ. ಪಿಎಸ್ …
Read More »ಮಂಗಳೂರು; ಇಂಜಿನಿಯರಿಂಗ್ ವಿದ್ಯಾರ್ಥಿ ಬಲಿಪಡೆದ ಹೆದ್ದಾರಿಯ ಗುಂಡಿ
ಮಂಗಳೂರು, ಆಗಸ್ಟ್ 12: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡಿಗೆ ಇಂಜಿನಿಯರ್ ವಿದ್ಯಾರ್ಥಿ ಬಲಿಯಾದ ಘಟನೆ ನಗರದ ನಂತೂರು ಬಳಿಯ ಬಿಕರ್ಣಕಟ್ಟೆಯಲ್ಲಿ ನಡೆದಿದೆ. ಹೆದ್ದಾರಿ ಪ್ರಾಧಿಕಾರದ ವಿರುದ್ಧ ವಿದ್ಯಾರ್ಥಿಯ ಸ್ನೇಹಿತ ಏಕಾಂಗಿ ಪ್ರತಿಭಟನೆ ನಡೆಸಿದ್ದಾರೆ. ಜೊತೆಗೆ ಸಾಮಾಜಿಕ ಜಾಲಾತಾಣದಲ್ಲೂ ಆಕ್ರೋಶ ವ್ಯಕ್ತವಾಗುತ್ತಿದೆ. ರಸ್ತೆಯಲ್ಲಿರುವ ಗುಂಡಿಯಿಂದ ತನ್ನ ದ್ವಿಚಕ್ರ ವಾಹನವನ್ನು ತಪ್ಪಿಸಲು ಹೋಗಿ ರಸ್ತೆಯ ರಿಫ್ಲೆಕ್ಟರ್ ಡಿವೈಡರ್‌ಗೆ ಡಿಕ್ಕಿ ಹೊಡೆದ ಪರಿಣಾಮ ತಲೆಗೆ ಗಂಭೀರ ಸ್ವರೂಪದ ಪೆಟ್ಟಾಗಿ ಆತೀಷ್ (20) ಎಂಬ ಯುವಕ …
Read More »ದರ್ಪ ತೋರಿದ್ದ ಕುರುಗೋಡು ಪಿಎಸ್ ಐ ಮಣಿಕಂಠ ಅಮಾನತು
ಕುರುಗೋಡು : ಕುರುಗೋಡು ಪಿ ಎಸ್ ಐ ಆಗಿದ್ದ ಮಣಿಕಂಠ ಅವರನ್ನು ಬಳ್ಳಾರಿ ಎಸ್ ಪಿ ಸೈದುಲು ಅಡಾವತ್ ಅವರು ಅಮಾನತುಗೊಳಿಸಿ ಶುಕ್ರವಾರ ಆದೇಶ ಹೊರಡಿಸಿದ್ದಾರೆ. ಮೂರು ದಿನಗಳ ಹಿಂದೆ ಬ್ಯಾನರ್ ಹರಿದ ಪ್ರಕರಣಕ್ಕೆ ಸಂಬಂಧಿಸಿ ನಡೆದ ಸಾರ್ವಜನಿಕ ಸಭೆ ವೇಳೆ ಕಾನೂನು ಸುವ್ಯವಸ್ಥೆ ವಿಚಾರವಾಗಿ ಹೋದಾಗ ಸಾರ್ವಜನಿಕರ ಎದುರಲ್ಲೇ ವ್ಯಕ್ತಿಯೊಬ್ಬರ ಮೇಲೆ ಪಿ ಎಸ್ ಐ ಮಣಿಕಂಠ ಹಲ್ಲೆ ಮಾಡಿ ಅವಾಚ್ಯ ಶಬ್ದ ಗಳಿಂದ ನಿಂದಿಸಿದ್ದರು. ಇದಕ್ಕೆ ಸಂಬಂಧಿಸಿದ ವಿಡಿಯೋ …
Read More »ಜಿಪಂ, ತಾಪಂ, ಬಿಬಿಎಂಪಿ ಚುನಾವಣೆ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ
ಬೆಂಗಳೂರು: ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯಿತಿ ಮತ್ತು ಬಿಬಿಎಂಪಿ ಚುನಾವಣೆ ನಿರೀಕ್ಷೆಯಲ್ಲಿದ್ದವರಿಗೆ ಮುಖ್ಯ ಮಾಹಿತಿ ಇಲ್ಲಿದೆ. ಸ್ಥಳೀಯ ಸಂಸ್ಥೆಗಳ ಮೀಸಲು ವರದಿಗೆ ಸಂಪುಟ ಸಭೆ ಅಸ್ತು ಎಂದಿದೆ. ನ್ಯಾ. ಭಕ್ತವತ್ಸಲ ಸಮಿತಿ ವರದಿಗೆ ಸರ್ಕಾರ ಒಪ್ಪಿಗೆ ನೀಡಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ನ್ಯಾ. ಭಕ್ತವತ್ಸಲ ಸಮಿತಿಯ ಶಿಫಾರಸಿಗೆ ಒಪ್ಪಿಗೆ ನೀಡಿ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದ್ದು, ಸ್ಥಳೀಯ ಸಂಸ್ಥೆಗಳ ಚುನಾವಣೆಯ ಹಾದಿ ಸುಗಮವಾಗಿದೆ. ಜಿಲ್ಲಾ ಪಂಚಾಯಿತಿ, ತಾಲೂಕು …
Read More »