Breaking News

Yearly Archives: 2022

ಕುಂದು ಕೊರತೆ ಆಲಿಸಿದ ಶಾಸಕ

ಸಾಂಬ್ರಾ: ಸಮೀಪದ ಬಸವಣಕುಡಚಿಯ ದೇವರಾಜ ಅರಸು ಕಾಲೊನಿಯಲ್ಲಿ ಈಚೆಗೆ ಶಾಸಕ ಅನಿಲ ಬೆನಕೆ ಅವರು ಸಾರ್ವಜನಿಕರ ಕುಂದು ಕೊರತೆ ಆಲಿಸಿದರು. ಕಾಲೊನಿಯ ಅನುಭವ ಮಂಟಪ ದುರಸ್ತಿ, ನಿರ್ವಹಣೆ ಮಾಡಲು ನಗರ ಸೇವಕರು ಹಾಗೂ ಸ್ಥಳೀಯ ಮುಖಂಡರ ಸಮಿತಿ ಮಾಡುವುದು, ಅಷ್ಠವಿನಾಯಕ ಮಂದಿರದ ಪಕ್ಕದಲ್ಲಿ ಇರುವ ಮಹಾನಗರ ಪಾಲಿಕೆಯ ಉದ್ಯಾನವನದಲ್ಲಿ ನೀರು ಶುದ್ಧೀಕರಣ ಘಟಕ ಅಳವಡಿಸುವುದು, ಒಂದು ಬೋರ್‌ವೆಲ್ ಕೊರೆಯಿಸಿ ಪೈಪ್‌ಲೈನ್ ಅಳವಡಿಸಿ ನೀರು ಪೂರೈಸಲಾಗುವುದು ಎಂದು ಶಾಸಕ ತಿಳಿಸಿದರು.   …

Read More »

ಬೆಳಗಾವಿ: ಜಿಲ್ಲೆಯಲ್ಲಿ ನಾಲ್ಕೇ ತಿಂಗಳಲ್ಲಿ 4,665 ಜಾನುವಾರು ಮೃತಪಟ್ಟಿವೆ

ಬೆಳಗಾವಿ: ಜಿಲ್ಲೆಯಲ್ಲಿ ಚರ್ಮಗಂಟು (ಲಂಪಿಸ್ಕಿನ್‌) ರೋಗ ವ್ಯಾಪಕವಾಗಿ ಹರಡುತ್ತಿದ್ದು, ನಾಲ್ಕೇ ತಿಂಗಳಲ್ಲಿ 4,665 ಜಾನುವಾರು ಮೃತಪಟ್ಟಿವೆ. ಆದರೆ, ಬಹುಪಾಲು ರೈತರಿಗೆ ಇನ್ನೂ ಪರಿಹಾರ ಸಿಕ್ಕಿಲ್ಲ. ಕೆಲವರಿಗೆ ಮಾತ್ರ ಅಲ್ಪಮೊತ್ತದ ಹಣ ನೀಡಿದ್ದು ಅಸಮಾಧಾನಕ್ಕೆ ಕಾರಣವಾಗಿದೆ.   ‘ಚರ್ಮಗಂಟು ರೋಗ ಶಾಪವಾಗಿ ಪರಿಣಮಿಸಿದೆ. ಈ ಸೋಂಕಿನಿಂದ ಮೃತಪಟ್ಟಿರುವ 1 ವರ್ಷದೊಳಗಿನ ಕರುವಿಗೆ ತಲಾ ₹5 ಸಾವಿರ, ಆಕಳಿಗೆ ₹20 ಸಾವಿರ ಮತ್ತು ಎತ್ತಿಗೆ ₹30 ಸಾವಿರ ಪರಿಹಾರ ನಿಗದಿಪಡಿಸಲಾಗಿದೆ. ಇದು ಏತಕ್ಕೂ …

Read More »

ಸಕ್ಕರೆ ಲಾಬಿಗೆ ಮಣಿದ ಸರ್ಕಾರ: ಕೆಪಿಸಿಸಿ ವಕ್ತಾರ ಪಿ.ಎಚ್. ನೀರಲಕೇರಿ ಆರೋಪ

ಚನ್ನಮ್ಮನ ಕಿತ್ತೂರು: ‘ಸಕ್ಕರೆ ಲಾಬಿಗೆ ಮಣಿದ ಸರ್ಕಾರ ಕಬ್ಬು ಬೆಳೆಗಾರರನ್ನು ಸಂಕಷ್ಟಕ್ಕೆ ದೂಡಿದೆ. ಸರ್ಕಾರದ ನಿರ್ಲಕ್ಷ್ಯದಿಂದಾಗಿ ಎರಡೂವರೆ ತಿಂಗಳು ವಿಳಂಬವಾಗಿ ಕಾರ್ಖಾನೆ ಪ್ರಾರಂಭವಾಗಿವೆ’ ಎಂದು ಕೆಪಿಸಿಸಿ ವಕ್ತಾರ ಪಿ.ಎಚ್. ನೀರಲಕೇರಿ ದೂರಿದರು. ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಗುಜರಾತ್ ಮಾದರಿಯಲ್ಲಿ ಕರ್ನಾಟಕದ ವಿಧಾನಸಭೆ ಚುನಾವಣೆ ನಡೆಸಲಾಗುವುದು ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ. ಮೋದಿ ಅಲೆ ಎಲ್ಲಿಯೂ ಇಲ್ಲ. ಮುಕ್ತವಾಗಿ ಚುನಾವಣೆ ನಡೆಸದೆ ವಾಮ ಮಾರ್ಗದಿಂದ ಅಧಿಕಾರ ಹಿಡಿಯಲು ಬಿಜೆಪಿ …

Read More »

“ಗೋಲಿ ಮಾರ್ ದೂಂಗಾ..”: ಎನ್ ಸಿಪಿ ಅಧ್ಯಕ್ಷ ಶರದ್ ಪವಾರ್ ಗೆ ಜೀವ ಬೆದರಿಕೆ

ಮುಂಬೈ: ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್ ಸಿಪಿ) ಅಧ್ಯಕ್ಷ ಶರದ್ ಪವಾರ್ ಅವರ ನಿವಾಸಕ್ಕೆ ಅಪರಿಚಿತ ವ್ಯಕ್ತಿಯಿಂದ ಕರೆ ಬಂದಿದ್ದು, ಕೊಲೆ ಬೆದರಿಕೆ ಹಾಕಲಾಗಿದೆ. ಪವಾರ್ ಅವರ ಸಿಲ್ವರ್ ಓಕ್ಸ್ ಮನೆಗೆ ಕರೆ ಮಾಡಿದ ವ್ಯಕ್ತಿ, ಮುಂಬೈಗೆ ಬಂದು ಕಂಟ್ರಿಮೇಡ್ ಪಿಸ್ತೂಲ್ ನಿಂದ ಶೂಟ್ ಮಾಡುವುದಾಗಿ ಹಿಂದಿಯಲ್ಲಿ ಬೆದರಿಕೆ ಹಾಕಿದ್ದಾನೆ.   “ಮುಂಬೈ ಆಯುಂಗಾ ಔರ್ ದೇಸಿ ಪಿಸ್ತೂಲ್ ಸೆ ಗೋಲಿ ಮಾರ್ ದೂಂಗಾ” ಎಂದು ಅಪರಿಚಿತ ವ್ಯಕ್ತಿಯೊಬ್ಬ ದೂರವಾಣಿ ಕರೆಯಲ್ಲಿ …

Read More »

ಬಿಜೆಪಿಯವರಿಗೆ ಧಮ್ ತಾಕತ್ತಿದ್ದರೆ ಅಧಿವೇಶನದಲ್ಲಿ ಮಹಿಳಾ ಮೀಸಲಾತಿ ಮಸೂದೆ ಮಂಡಿಸಿ: ಡಾ.ಪುಷ್ಪಾ ಅಮರನಾಥ

ಹುಬ್ಬಳ್ಳಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೋದಲ್ಲಿ ಬಂದಲ್ಲಿ ತಾಕತ್ತಿದ್ದರೆ, ಧಮ್ ಇದ್ದರೆ ಎನ್ನುತ್ತಾರೆ. ಬಿಜೆಪಿಯವರಿಗೆ ಧಮ್ -ತಾಕತ್ತಿದ್ದರೆ ಸಂಸತ್ತು ಚಳಿಗಾಲ ಅಧಿವೇಶನದಲ್ಲಿ ಮಹಿಳಾ ಮೀಸಲಾತಿ ಮಸೂದೆ ಮಂಡಿಸಿ ಅಂಗೀಕಾರಗೊಳ್ಳುವಂತೆ ಮಾಡಲಿ ಎಂದು ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಡಾ.ಪುಷ್ಪಾ ಅಮರನಾಥ ಸವಾಲು ಹಾಕಿದರು.   ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. 2014ರಲ್ಲಿ ಲೋಕಸಭೆ, ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33 ರಷ್ಟು ಮೀಸಲಾತಿ ನೀಡುವುದಾಗಿ ಬಿಜೆಪಿ ಪ್ರಣಾಳಿಕೆಯಲ್ಲಿ ತಿಳಿಸಿತ್ತು. ಇದುವರೆಗೂ ಆಗಿಲ್ಲ ಎಂದರು. ವಿಧಾನಸಭೆ ಚುನಾವಣೆಗೆ …

Read More »

ಮುಂಬರುವ ಚುನಾವಣೆಗಾಗಿ ಕಾಂಗ್ರೆಸ್ ಭರ್ಜರಿ ತಯಾರಿ

ಬೆಂಗಳೂರು: ಮುಂಬರುವ ಚುನಾವಣೆಗಾಗಿ ಕಾಂಗ್ರೆಸ್ ಭರ್ಜರಿ ತಯಾರಿ ನಡೆಸುತ್ತಿದೆ. ಮತದಾರರನ್ನು ಸೆಳೆಯಲು ಬಸ್ ಯಾತ್ರೆಯನ್ನು ಸಿದ್ಧರಾಮಯ್ಯ, ಡಿಕೆ ಶಿವಕುಮಾರ್ ಪ್ರತ್ಯೇಕವಾಗಿ ಕೈಗೊಳ್ಳಲು ಯೋಜನೆ ರೂಪಿಸಿದ್ದರು. ಆದ್ರೇ ಇದಕ್ಕೆ ಹೈಕಮಾಂಡ್ ಬ್ರೇಕ್ ಹಾಕಿತ್ತು. ಹೀಗಾಗಿ ನಾಳೆ ಇಬ್ಬರು ನಾಯಕರು ಒಟ್ಟಾಗಿ ಒಗ್ಗಟ್ಟು ಪ್ರದರ್ಶನಕ್ಕಾಗಿ ಹುಬ್ಬಳ್ಳಿಗೆ ಒಟ್ಟಾಗಿಯೇ ಪ್ರಯಾಣ ಬೆಳೆಸುತ್ತಿದ್ದಾರೆ.   ಇಂದು ನಾಳಿನ ಹುಬ್ಬಳ್ಳಿಯ ಬಸ್ ಯಾತ್ರೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ವಿಪಕ್ಷ ನಾಯಕ ಸಿದ್ಧರಾಮಯ್ಯ ಅವರಿಗೆ ಕರೆ ಮಾಡಿ …

Read More »

ಕಾಲುವೆಗೆ ಹಾರಿ ಎರಡು ಹೆಣ್ಣುಮಕ್ಕಳ ಜೊತೆ ಆತ್ಮಹತ್ಯೆ ಮಾಡಿಕೊಂಡ ತಾಯಿ

ಕೌಟುಂಬಿಕ ಕಲಹ ಹಿನ್ನಲೆಯಲ್ಲಿ ಇಬ್ಬರು ಹೆಣ್ಣು ಮಕ್ಕಳೊಂದಿಗೆ ಕಾಲುವೆಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಉಕ್ಕಲಿ ಗ್ರಾಮದಲ್ಲಿ ನಡೆದಿದೆ‌. ಗ್ರಾಮದ ಹೊರ ಭಾಗದಲ್ಲಿರೋ ಮುಳವಾಡ ಏತ ನೀರಾವರಿ ಯೋಜನೆಯ ಕಾಲುವೆಗೆ ಹಾರಿ ಸಾವನ್ನಪ್ಪಿದ್ದಾಳೆ‌. ತುಂಬಿ ಹರಿಯುತ್ತಿದ್ದ ಕಾಲುವೆಯಲ್ಲಿ ಇಬ್ಬರು ಹೆಣ್ಣು ಮಕ್ಕಳೊಂದಿಗೆ ಹಾರಿದ್ದಾಳೆ. ರೇಣುಕಾ ಅಮೀನಪ್ಪ ಕೋನಿನ್ (26 ), ಯಲ್ಲವ್ವ (2) ಅಮೃತಾ (1) ಮೃತರಾದ ದುರ್ದೈಗಳು. ಕಳೆದ ಎರಡು ದಿನಗಳ …

Read More »

ಇನ್ಮುಂದೆ ಮನೆಯಲ್ಲೇ ಕುಳಿತು `ರೇಷನ್ ಕಾರ್ಡ್’ ಗೆ ಅರ್ಜಿ ಸಲ್ಲಿಸಬಹುದು

ಬೆಂಗಳೂರು : ರಾಜ್ಯದ ನಾಗರೀಕರು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ahara.kar.nic.in ಜಾಲತಾಣದ ಮೂಲಕ, ಹೊಸ ಪಡಿತರ ಚೀಟಿಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಕರ್ನಾಟಕ ಪಡಿತರ ಚೀಟಿ ( New Ration Card ) ಪಟ್ಟಿ 2022 ರಲ್ಲಿ ಹೆಸರು ಇಲ್ಲದ ಎಲ್ಲಾ ಜನರು ಈಗ ಅಗತ್ಯವಿರುವ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬಹುದು, ಜೊತೆಗೆ ಅರ್ಜಿಯ ಸ್ಥಿತಿಗತಿಯನ್ನು ಪರಿಶೀಲಿಸಬಹುದು. ಕರ್ನಾಟಕದಲ್ಲಿ ಹೊಸ ಎಪಿಎಲ್ / ಬಿಪಿಎಲ್ ಪಡಿತರ ಚೀಟಿಗೆ ( BPL, …

Read More »

ಮರ ಎಂದು ಭ್ರಮಿಸಿ ಟ್ರಾನ್ಸ್‌ಫಾರ್ಮರ್‌ ಮೇಲೆ ಹತ್ತಿದ ಚಿರತೆ ವಿದ್ಯುತ್‌ ಆಘಾತಕ್ಕೆ ಸಾವು!

ತುಮಕೂರು: ರಾಜ್ಯದೆಲ್ಲೆಡ ಚಿರತೆ ದಾಳಿಯದ್ದೇ ಸುದ್ದಿ. ಹಳ್ಳಿ ಹಳ್ಳಿಗಳು ಮಾತ್ರವಲ್ಲ ನಗರ ಪ್ರದೇಶಗಳೂ ಚಿರತೆ ದಾಳಿಯಿಂದ ನಲುಗಿವೆ. ಕುರುಚಲು ಕಾಡುಗಳಲ್ಲಿ ವಾಸಿರುವ ಈ ಪ್ರಾಣಿಗಳು ಈಗ ನಾನಾ ಕಾರಣಕ್ಕೆ ಜನವಸತಿ ಪ್ರದೇಶವನ್ನೇ ತಮ್ಮ ಅಡ್ಡೆಯನ್ನಾಗಿ ಮಾಡಿಕೊಂಡಿವೆ. ಹೀಗಾಗಿ ದನ, ನಾಯಿಗಳನ್ನು ಹೊತ್ತೊಯ್ಯುವ, ಮನುಷ್ಯರ ಪ್ರಾಣವನ್ನೇ ತೆಗೆಯುವ (Leopard death) ಸುದ್ದಿಗಳು ಜೋರಾಗಿ ಕೇಳಿಬರುತ್ತಿವೆ. ಟ್ರಾನ್ಸ್‌ಫಾರ್ಮರ್‌ನಲ್ಲಿ ಸಿಲುಕಿದ ಚಿರತೆಇದರ ನಡುವೆ ಇಲ್ಲೊಂದು ಚಿರತೆ ಬೇರೆ ಕಾರಣಕ್ಕಾಗಿ ಸುದ್ದಿಯಾಗಿದೆ. ಅಂದ ಹಾಗೆ ಇದು ಒಂದು …

Read More »

ಸಿಎಂ ಆಗಮನ ವೇಳೆ ತರಾತುರಿಯಲ್ಲಿ ಮೆಟ್ಟಿಲಿಂಗ್ ರಸ್ತೆ ನಿರ್ಮಾಣ

ಹನೂರು: ಪಟ್ಟಣದ ಶ್ರೀ ಮಹದೇಶ್ವರ ಕ್ರೀಡಾಂಗಣದಲ್ಲಿ ಕೆಸರಿನಿಂದ ಕೂಡಿದ ರಸ್ತೆಯನ್ನು ಪಿಡಬ್ಯುಡಿ ಇಲಾಖೆಯ ಅಧಿಕಾರಿಗಳು ಸಿಎಂ ಆಗಮಿಸುವ ಒಂದೂವರೆ ಗಂಟೆ ಮುಂಚಿತವಷ್ಟೇ ತರಾತುರಿಯಲ್ಲಿ ಮೆಟ್ಲಿಂಗ್ ರಸ್ತೆಯನ್ನು ನಿರ್ಮಿಸಲಾಯಿತು. ಮಲೆ ಮಹದೇಶ್ವರ ಕ್ರೀಡಾಂಗಣದಲ್ಲಿ ಮುಖ್ಯದ್ವಾರದಿಂದ ವೇದಿಕೆಗೆ ತೆರಳುವ ರಸ್ತೆಯು ಕೆಸರಿನಿಂದ ಕೂಡಿತ್ತು. ಈ ಹಿನ್ನಲೆ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಸಮತಟ್ಟು ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು. ಈ ದಿಸೆಯಲ್ಲಿ ಜೇಡಿಮಣ್ಣು ಸುರಿದು ಸಮತಟ್ಟು ಮಾಡಲಾಗಿತ್ತು. ಆದರೂ ಕೆಸರುಗದ್ದೆಯಂತಾಗಿತ್ತು. ಇದರಿಂದ ಸಿಎಂ …

Read More »