Breaking News

Yearly Archives: 2022

ಬೆಳಗಾವಿ: ನಗರದಲ್ಲಿ ಬುಧವಾರ ಸಂಜೆ ಎರಡು ತಾಸಿಗೂ ಹೆಚ್ಚು ಸುರಿದ ಮಳೆಯಿಂದಾಗಿ ಇಲ್ಲಿನ ಹಳೇ ಪಿ.ಬಿ. ರಸ್ತೆಯಲ್ಲಿ ಹಲವು ಅಂಗಡಿಗಳು, ಮನೆಗಳಿಗೆ ನೀರು ನುಗ್ಗಿತು. ಅದನ್ನು ಹೊರಹಾಕಲು ವ್ಯಾಪಾರಸ್ಥರು ಹಾಗೂ ನಿವಾಸಿಗಳು ಹರಸಾಹಸಪಟ್ಟರು. ಬೆಳಿಗ್ಗೆಯಿಂದ ಮೋಡ ಕವಿದ ವಾತಾವರಣವಿತ್ತು. ಸಂಜೆ ಹೊತ್ತಿಗೆ ವರುಣ ಅಬ್ಬರಿಸಿದ್ದರಿಂದ ಹಳೇ ಪಿ.ಬಿ. ರಸ್ತೆ ಕಾಲುವೆಯಂತಾಯಿತು. ಮೊಣಕಾಲುದ್ದ ನಿಂತಿದ್ದ ನೀರಲ್ಲೇ ಶಾಲಾ- ಕಾಲೇಜು ವಿದ್ಯಾರ್ಥಿಗಳು, ನೌಕರರು ಹಾಗೂ ಸಾರ್ವಜನಿಕರು ಸಾಗಿದರು. ವಾಹನ ಸವಾರರು ಸರ್ಕಸ್‌ ಮಾಡುತ್ತ ಸಂಚರಿಸುತ್ತಿರುವುದು ಕಂಡುಬಂತು. ಹಳೇ ಪಿ.ಬಿ. ರಸ್ತೆ ಮೇಲ್ಸೇತುವೆ ಪಕ್ಕದ ಸರ್ವೀಸ್‌ ರಸ್ತೆ, ಹಿಂದವಾಡಿಯ ಕೆಲ ಅಪಾರ್ಟ್‌ಮೆಂಟ್‌ಗಳ ನೆಲ ಮಹಡಿಗೂ ಮಳೆ ನೀರು ‌ನುಗ್ಗಿದ್ದರಿಂದ ಜನರು ತೊಂದರೆ ಅನುಭವಿಸಿದರು. ಶಿವಬಸವ ನಗರದಲ್ಲಿ ಸ್ಮಾರ್ಟ್‌ಸಿಟಿ ಯೋಜನೆಯಡಿ ನಿರ್ಮಿಸಿದ ರಸ್ತೆಯಲ್ಲೂ ಮಳೆ ನೀರು ನಿಂತಿದ್ದರಿಂದ ವಾಹನ ಸಂಚಾರಕ್ಕೆ ಸಮಸ್ಯೆಯಾಯಿತು. ಮಳೆಯಿಂದಾಗಿ ಕೇಂದ್ರ ಬಸ್‌ ನಿಲ್ದಾಣ, ರೈಲ್ವೆ ನಿಲ್ದಾಣದಲ್ಲೂ ಹಲವು ಪ್ರಯಾಣಿಕರು ತೊಂದರೆ ಅನುಭವಿಸಿದರು. ಖಡೇಬಜಾರ್‌, ಗಣಪತ ಗಲ್ಲಿ, ಮಾರುತಿ ಗಲ್ಲಿ ಸೇರಿ ಮಾರುಕಟ್ಟೆ ಪ್ರದೇಶಗಳಲ್ಲಿ ವ್ಯಾಪಾರ-ವಹಿವಾಟಿಗೆ ತೊಡಕಾ ಯಿತು. ಜನರು ರಸ್ತೆಯ ಇಕ್ಕೆಲ ಗಳಲ್ಲಿ ಆಶ್ರಯ ಪಡೆದರು. ರಾತ್ರಿಯ ವರೆಗೂ ಮಳೆ ಮುಂದುವರಿದಿತ್ತು. ಪೊಲೀಸ್‌ ಉಪಠಾಣೆ ಮುಳುಗಡೆ: ರಾಮದುರ್ಗ ತಾಲ್ಲೂಕಿನ ಸುರೇಬಾನ – ಮನಿಹಾಳ ಗ್ರಾಮದಲ್ಲಿನ ರಸ್ತೆ ಗಳು ಕೆರೆಯಂತಾದವು. ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದ್ದರಿಂದ ಸುರೇಬಾನ ಪೊಲೀಸ್ ಉಪಠಾಣೆ ಮುಳುಗಡೆಯಾಗಿತ್ತು. ಗ್ರಾಮದ ಫಲಹಾರ ಶಿವಯೋಗೀಶ್ವರ ಸಂಯುಕ್ತ ಪದವಿಪೂರ್ವ ಮಹಾ ವಿದ್ಯಾಲಯದ ಆಟದ ಮೈದಾನ‌ವೂ ಜಲಾವೃತವಾಗಿತ್ತು. ರಸ್ತೆ ಮೇಲೆ ಅಪಾರ ಪ್ರಮಾಣ ನೀರು ಹರಿದಿದ್ದರಿಂದ ವಾಹನ ಸಂಚಾರರು ಪರದಾಡಿದರು. ವಿದ್ಯಾರ್ಥಿಗಳು ಸೈಕಲ್ ಮೇಲೆ ಸಾಗಿದರು.

ಬೆಳಗಾವಿ: ನಗರದಲ್ಲಿ ಬುಧವಾರ ಸಂಜೆ ಎರಡು ತಾಸಿಗೂ ಹೆಚ್ಚು ಸುರಿದ ಮಳೆಯಿಂದಾಗಿ ಇಲ್ಲಿನ ಹಳೇ ಪಿ.ಬಿ. ರಸ್ತೆಯಲ್ಲಿ ಹಲವು ಅಂಗಡಿಗಳು, ಮನೆಗಳಿಗೆ ನೀರು ನುಗ್ಗಿತು. ಅದನ್ನು ಹೊರಹಾಕಲು ವ್ಯಾಪಾರಸ್ಥರು ಹಾಗೂ ನಿವಾಸಿಗಳು ಹರಸಾಹಸಪಟ್ಟರು.   ಬೆಳಿಗ್ಗೆಯಿಂದ ಮೋಡ ಕವಿದ ವಾತಾವರಣವಿತ್ತು. ಸಂಜೆ ಹೊತ್ತಿಗೆ ವರುಣ ಅಬ್ಬರಿಸಿದ್ದರಿಂದ ಹಳೇ ಪಿ.ಬಿ. ರಸ್ತೆ ಕಾಲುವೆಯಂತಾಯಿತು. ಮೊಣಕಾಲುದ್ದ ನಿಂತಿದ್ದ ನೀರಲ್ಲೇ ಶಾಲಾ- ಕಾಲೇಜು ವಿದ್ಯಾರ್ಥಿಗಳು, ನೌಕರರು ಹಾಗೂ ಸಾರ್ವಜನಿಕರು ಸಾಗಿದರು. ವಾಹನ ಸವಾರರು ಸರ್ಕಸ್‌ …

Read More »

ಭಕ್ತಿ ಭಾವದ ಪ್ರತೀಕ ಬೂದಿಹಾಳ ಅಡಿವೆಪ್ಪ ಮಹಾರಾಜರು

ಹೂವಿನಹಿಪ್ಪರಗಿ: ಭಕ್ತಿಯಿಂದ ನಡೆದು ಗುರುವಿನ ದಾಸನಾಗಿ ದುಡಿದು ಗುರು ಮಿರಿಸಿ ತನ್ನ ಭಕ್ತ ಬಳಗಕ್ಕೆ ಬೇಡಿದ ವರವನ್ನು ನೀಡಿ ಭಕ್ತಿ ಭಾವದ ಪ್ರತೀಕವಾಗಿ ಇಂದು ಸಾವಿರಾರು ಜನರಿಗೆ ದಾರಿ ದೀಪವಾಗಿರುವ ಬೂದಿಹಾಳ ಕರಿಸಿದ್ದೇಶ್ವರ ಮಠದ ಸಿದ್ದಪುರುಷ ಅಡಿವೆಪ್ಪ ಮಹಾರಾಜರು ಎಂದು ಸರೂರ ರೇವಣಸಿದ್ದೇಶ್ವರ ಮಠದ ಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.   ಬಸವನಬಾಗೇವಾಡಿ ತಾಲೂಕಿನ ಬೂದಿಹಾಳ ಕರಿಸಿದ್ದೇಶ್ವರ ಮಠದ ಸಿದ್ದಪುರುಷ ಅಡಿವೆಪ್ಪ ಮಹಾರಾಜರ ಶ್ರಾವಣ ಮಾಸದ ಜಾತ್ರೆಯಲ್ಲಿ ಮಾತನಾಡಿದ ಅವರು, ಭಕ್ತರನ್ನು …

Read More »

ತ್ತೂರು ಜನತೆ ಹಾಗೂ ರಾಣಿ ಚನ್ನಮ್ಮನಿಗೆ ಸರ್ಕಾರ ಅವಮಾನ ಮಾಡಿದೆ

ಬೆಳಗಾವಿ/ಚ.ಕಿತ್ತೂರು: ಚನ್ನಮ್ಮನ ಕಿತ್ತೂರು ಕೋಟೆಯ ಪ್ರತಿರೂಪ ಅರಮನೆಯನ್ನು ಬಚ್ಚನಕೇರಿಯಲ್ಲಿ ನಿರ್ಮಿಸಲು ಮುಂದಾಗಿರುವ ಸರ್ಕಾರದ ವಿರುದ್ಧ ಸಿಡಿದೆದ್ದಿರುವ ಕಿತ್ತೂರಿನ ಜನತೆ ಅಂಗಡಿ ಮುಂಗಟ್ಟುಗಳನ್ನು ಬಂದ್‌ ಮಾಡಿ ಕಲ್ಮಠದ ಮಡಿವಾಳ ರಾಜಯೋಗೀಂದ್ರ ಸ್ವಾಮೀಜಿ ನೇತೃತ್ವದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.   ಕಿತ್ತೂರಿನಲ್ಲಿ ಚನ್ನಮ್ಮ ಪ್ರತಿಮೆಗೆ ಗೌರವ ಸಲ್ಲಿಸಿ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು, ಅಂಗಡಿ ಮುಂಗಟ್ಟು ಸೇರಿದಂತೆ ವ್ಯಾಪಾರ ವಹಿವಾಟು ಬಂದ್‌ ಮಾಡಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಕಿತ್ತೂರು ಬಂದ್‌ ಯಶಸ್ವಿಯಾಯಿತು. ನಂತರ ಬೆಳಗಾವಿ …

Read More »

: ಸಿದ್ದರಾಮಯ್ಯ ಅವರು ರಾಜಕೀಯ ನಿವೃತ್ತಿ ಘೋಷಿಸಲಿ ಎಂದ ಅಶ್ವತ್ಥ ನಾರಾಯಣ .

ಬೆಳಗಾವಿ: ಸಿದ್ದರಾಮಯ್ಯ ಅವರು ರಾಜಕೀಯ ನಿವೃತ್ತಿ ಘೋಷಿಸಲಿ ಎಂದು ಉನ್ನತ ಶಿಕ್ಷಣ ಸಚಿವ ಡಾ| ಅಶ್ವತ್ಥ ನಾರಾಯಣ ಆಗ್ರಹಿಸಿದರು. ನಗರದಲ್ಲಿ ಬುಧವಾರ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ನೂರಕ್ಕೆ ನೂರರಷ್ಟು ರಾಜಕೀಯ ನಿವೃತ್ತಿ ಪಡೆಯಬೇಕು. ಔಟ್‌ಡೇಟೆಡ್‌ ಮಾಡಲ್‌ಗ‌ಳು ಎಲ್ಲ ಆಯ್ತು. ಐದು ವರ್ಷ ಜನ ಭಾರ ಹೊತ್ತುಕೊಂಡಿದ್ದರು. ಇನ್ನು ಯಾರು ಭಾರ ಹೊರುವವರು ಎಂದು ಟೀಕಿಸಿದರು. ಜತೆಗೆ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳನ್ನೂ ತಿಳಿಸಿದರು. ರಾಜಕೀಯ ಪಕ್ಷದ ನಾಯಕನ ಯಾವುದೇ ಕಾರ್ಯಕ್ರಮ …

Read More »

ಮತದಾರ ಪಟ್ಟಿಗೆ ಆಧಾರ್‌ ಜೋಡಣೆಗೆ ಚಾಲನೆ

ಬೆಳಗಾವಿ: ಭಾರತ ಚುನಾವಣಾ ಆಯೋಗದ ಸೂಚನೆಯಂತೆ 2023ರ ಮಾರ್ಚ್‌ ಅಂತ್ಯಕ್ಕೆ ಮತದಾರರ ಪಟ್ಟಿಗೆ ಆಧಾರ್‌ ಸಂಖ್ಯೆಯನ್ನು ಜೋಡಿಸುವ ಕಾರ್ಯ ಪ್ರತಿಶತ 100 ರಷ್ಟು ಪೂರ್ಣಗೊಳಿಸಬೇಕಿದೆ ಎಂದು ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ಅಧಿಕಾರಿಗಳಿಗೆ ಸೂಚಿಸಿದರು.   ಜಿಲ್ಲಾಡಳಿತ, ಭಾರತ ಚುನಾವಣಾ ಆಯೋಗ ಹಾಗೂ ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಸಹಯೋಗದಲ್ಲಿ ಜಿಲ್ಲಾ ಪಂಚಾಯತ ಸಭಾಭವನದಲ್ಲಿ ಸೋಮವಾರ ನಡೆದ ಮತದಾರರ ಆಧಾರ ಸಂಖ್ಯೆಗಳನ್ನು ಮತದಾರರ ಪಟ್ಟಿಗೆ ಜೋಡಣೆ ಕಾರ್ಯ ಪ್ರಾರಂಭೋತ್ಸವದ ಅಧ್ಯಕ್ಷತೆ ವಹಿಸಿ ಮಾತನಾಡಿದ …

Read More »

ಸಿದ್ದರಾಮಯ್ಯಗೆ ಶುಭ ಕೋರಿದವರ ಮೇಲೆ ಬಿತ್ತು ಕೇಸ್

ಬೆಂಗಳೂರು: ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದ ಕಾಂಗ್ರೆಸ್ ಮುಖಂಡರಿಗೆ ಬಿಬಿಎಂಪಿ ಅಧಿಕಾರಿಗಳು ಶಾಕ್ ಕೊಟ್ಟಿದ್ದಾರೆ. ಪಾಲಿಕೆಯಿಂದ ಅನುಮತಿ ಪಡೆಯದೆ ಬೃಹತ್ ಬ್ಯಾನರ್ ಅಳವಡಿಸಿದ್ದವರ ವಿರುದ್ಧ ವಿಧಾನಸೌಧ ಠಾಣೆಗೆ ದೂರು ನೀಡಿದ್ದಾರೆ.   ವಸಂತನಗರ ಉಪ ವಿಭಾಗ ಪಾಲಿಕೆ ಸಹಾಯಕ ಕಂದಾಯ ಅಧಿಕಾರಿ ಬಿ.ವಿ. ವೀಣಾ, ದೂರು ನೀಡಿದ್ದಾರೆ. ಇದರ ಮೇರೆಗೆ ಕಾಂಗ್ರೆಸ್ ಮುಖಂಡರಾದ ಟಿ.ಎಸ್. ರಮೇಶ್ ಬಾಬು ಮತ್ತು ಜಯಬಾಲ ವಿರುದ್ಧ ಎಫ್​ಐಆರ್ ದಾಖಲಿಸಲಾಗಿದೆ ಎಂದು ಅಧಿಕಾರಿಗಳು …

Read More »

ಮುಂದಿನ 6 ತಿಂಗಳಲ್ಲಿ ಫಾಸ್ಟಾಗ್‌ ವ್ಯವಸ್ಥೆ ಕೊನೆಯಾಗಲಿದೆಯೇ?

ನವದೆಹಲಿ: ಮುಂದಿನ 6 ತಿಂಗಳಲ್ಲಿ ಫಾಸ್ಟಾಗ್‌ ವ್ಯವಸ್ಥೆ ಕೊನೆಯಾಗಲಿದೆಯೇ? ರಾಜ್ಯಸಭೆಯಲ್ಲಿ ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರು ಆಡಿರುವ ಮಾತು ಇಂಥದ್ದೊಂದು ಸುಳಿವು ನೀಡಿದೆ. ನಾವು ಫಾಸ್ಟ್ಯಾಗ್ ಬದಲು ಜಿಪಿಎಸ್‌ ವ್ಯವಸ್ಥೆ ಪರಿಚಯಿಸುವ ಕುರಿತು ಚಿಂತನೆ ನಡೆಸಿದ್ದೇವೆ. ನಮ್ಮ ಮುಂದೆ 2 ಆಯ್ಕೆಗಳಿವೆ. ಒಂದನೆಯದು, ಉಪಗ್ರಹ ಆಧಾರಿತ ಟೋಲ್‌ ವ್ಯವಸ್ಥೆ. ಇಲ್ಲಿ ಕಾರಿನಲ್ಲೇ ಜಿಪಿಎಸ್‌ ಅಳವಡಿಸಲಾಗುತ್ತದೆ. ಕಾರು ಟೋಲ್‌ ಪ್ಲಾಜಾ ದಾಟಿದ ತಕ್ಷಣ ಬ್ಯಾಂಕ್‌ ಖಾತೆಯಿಂದ ಟೋಲ್‌ ಮೊತ್ತ ಕಡಿತಗೊಳ್ಳುತ್ತದೆ. ಇನ್ನೊಂದು, …

Read More »

ರಾಜ್ಯ ರಾಜಕೀಯ ಇತಿಹಾಸದಲ್ಲಿಯೇ ಅತಿಹೆಚ್ಚು ಜನ ಸೇರಿದ ಕಾರ್ಯಕ್ರಮ ‘ಸಿದ್ದರಾಮಯ್ಯ ಅಮೃತ ಮಹೋತ್ಸ’ವ

ದಾವಣಗೆರೆಯಲ್ಲಿ ನಡೆದ ಸಿದ್ದರಾಮಯ್ಯ ಜನ್ಮ ದಿನದ ಅಮೃತ ಮಹೋತ್ಸವಕ್ಕೆ 10 ಲಕ್ಷಕ್ಕೂ ಅಧಿಕ ಮಂದಿ ಆಗಮಿಸಿದ್ದರು ಎನ್ನಲಾಗಿದೆ. ಬಹುಶ: ದೇಶದಲ್ಲಿಯೇ ಯಾವ ನಾಯಕನ ಹುಟ್ಟುಹಬ್ಬ ಇಷ್ಟೊಂದು ಅದ್ದೂರಿಯಾಗಿ ಆಚರಿಸಿರಲಿಲ್ಲ ಎಂದು ಹೇಳಲಾಗಿದೆ. ರಾಜ್ಯದ ಮೂಲೆ ಮೂಲೆಗಳಿಂದಲೂ ದಾವಣಗೆರೆಗೆ ಜನಸಾಗರ ಹರಿದು ಬಂದಿತ್ತು. ಕಿಲೋಮೀಟರುಗಟ್ಟಲೇ ಜನ ಸೇರಿದ್ದು, ಈ ಮೂಲಕ ರಾಜ್ಯದ ರಾಜಕೀಯ ಇತಿಹಾಸದಲ್ಲಿಯೇ ಅತಿ ಹೆಚ್ಚು ಜನರು ಸೇರಿದ ಕಾರ್ಯಕ್ರಮ ಇದಾಗಿದೆ ಎನ್ನುವ ಹೆಗ್ಗಳಿಕೆಗೆ ಸಿದ್ದರಾಮಯ್ಯ ಅಮೃತ ಮಹೋತ್ಸವ ಸಾಕ್ಷಿಯಾಗಿದೆ. …

Read More »

ತಡರಾತ್ರಿ ಬೆಂಗಳೂರಿಗೆ ಆಗಮಿಸಿದ ಅಮಿತ್ ಶಾ

ಬೆಂಗಳೂರು : ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅಧಿಕೃತ ಕಾರ್ಯಕ್ರಮದ ನಿಮಿತ್ತ ಬುಧವಾರ ತಡರಾತ್ರಿ ಬೆಂಗಳೂರಿಗೆ ಆಗಮಿಸಿದ್ದಾರೆ. ದೆಹಲಿಯಿಂದ ವಿಶೇಷ ವಿಮಾನದಲ್ಲಿ ಆಗಮಿಸಿದ ಅಮಿತ್ ಶಾ ಅವರನ್ನು ಹೆಚ್ ಎ ಎಲ್ ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಬರಮಾಡಿಕೊಂಡಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ಅಮಿತ್ ಶಾ ಅವರು ತಾಜ್ ವೆಸ್ಟ್ ಎಂಡ್ ಹೋಟೆಲ್ ನಲ್ಲಿ ಕೇಂದ್ರ ಸಂಸ್ಕೃತಿ …

Read More »

ಸಾಲಗಾರರಿಗೆ ಮತ್ತೆ ಬಿಗ್ ಶಾಕ್: ರೆಪೊ ದರ ಹೆಚ್ಚಳದೊಂದಿಗೆ ಲೋನ್ ದುಬಾರಿ

ಮುಂಬೈ: ಹಣದುಬ್ಬರ ನಿಯಂತ್ರಣಕ್ಕೆ ಆರ್‌.ಬಿ.ಐ. ಮತ್ತೊಮ್ಮೆ ರೆಪೊ ದರ ಹೆಚ್ಚಳ ಮಾಡುವ ಸಾಧ್ಯತೆ ಇದೆ. ಬುಧವಾರದಿಂದ ಆರ್.ಬಿ.ಐ. ದ್ವೈಮಾಸಿಕ ಆರ್ಥಿಕ ಪರಾಮರ್ಶೆ ಸಭೆ ಆರಂಭವಾಗಿದ್ದು, ಮೂರು ದಿನಗಳ ಕಾಲ ನಡೆಯಲಿದೆ. ಸಭೆಯಲ್ಲಿ ರೆಪೊ ದರವನ್ನು ಶೇಕಡ 0.35 ರಷ್ಟು ಹೆಚ್ಚಳ ಮಾಡಲು ನಿರ್ಧಾರ ಕೈಗೊಳ್ಳಬಹುದು ಎಂದು ಹೇಳಲಾಗಿದೆ. ಆಗಸ್ಟ್ 5 ರಂದು ರೆಪೊ ದರ ಹೆಚ್ಚಳದ ಘೋಷಣೆ ಮಾಡುವ ಸಾಧ್ಯತೆ ಇದೆ. ಇದರೊಂದಿಗೆ ಸಾಲ ಮತ್ತೆ ದುಬಾರಿಯಾಗಲಿದೆ. ಎಲ್ಲಾ ಸಾಲಗಳ ಮೇಲಿನ …

Read More »