Breaking News

Yearly Archives: 2022

ಅತ್ಯಾಚಾರ ಬೆದರಿಕೆ ಪ್ರಕರಣ ದಾಖಲಿಸಿದ ರಾಜಕುಮಾರ್ ವಿರುದ್ಧ 10 ಕೇಸು ಹಾಕಿದ ಯುವತಿ

ಬೆಳಗಾವಿ: ತೋಟಗಾರಿಕೆ ಇಲಾಖೆಯ ಖಾನಾಪುರದ ಸಸ್ಯಪಾಲನಾಲಯದ ಸಹಾಯಕ ನಿರ್ದೇಶಕ ರಾಜಕುಮಾರ್ ‌ಟಾಕಳೆ ಅವರ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿರುವ, ಚನ್ನಪಟ್ಟಣ ಮೂಲದ ಯುವತಿ ಸೋಮವಾರ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾದರು. ಇಲ್ಲಿನ ಎಪಿಎಂಸಿ ಪೊಲೀಸ್‌ ಠಾಣೆಗೆ ಹಾಜರಾದ ಯುವತಿಯನ್ನು ಪೊಲೀಸರು ಜಿಲ್ಲಾ ಆಸ್ಪತ್ರೆಗೆ ಕರೆದೊಯ್ದು ವೈದ್ಯಕೀಯ ತಪಾಸಣೆ ಮಾಡಿಸಿದರು.   ‘ರಾಜಕುಮಾರ ನನ್ನನ್ನು ಯಾಮಾರಿಸಿ ಮದುವೆಯಾಗಿದ್ದಾರೆ. ಆದರೆ, ಈಗ ನನ್ನ ವಿರುದ್ಧವೇ ‘ಸುಳ್ಳು ಅತ್ಯಾಚಾರದ ಬೆದರಿಕೆ ಹಾಗೂ ಹಣ ಕೇಳುತ್ತಿದ್ದೇನೆ’ …

Read More »

ಸುತಗಟ್ಟಿ ಕ್ರಾಸ್‌: ರಸ್ತೆ ತಡೆದು ಪ್ರತಿಭಟನೆ

ಸವದತ್ತಿ: ರಸ್ತೆ ಕಾಮಗಾರಿ ಕಳಪೆಯಾಗಿದೆ ಎಂದು ಆರೋಪಿಸಿ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತಾಲ್ಲೂಕಿನ ಹಿಟ್ಟಣಗಿ, ಸುತಗಟ್ಟಿ, ಗೋವನಕೊಪ್ಪ ಕೆ.ವೈ, ಭಮಗುಂಡಿಕೊಪ್ಪ ಮತ್ತು ಏಣಗಿ ಗ್ರಾಮಸ್ಥರು ಹಿಟ್ಟಣಗಿ ಗ್ರಾಮದಿಂದ ಪಾದಯಾತ್ರೆ ನಡೆಸಿ ಸುತಗಟ್ಟಿ ಕ್ರಾಸ್‌ನಲ್ಲಿ ಸುಮಾರು 5 ಗಂಟೆಗಳ ಕಾಲ ರಸ್ತೆ ತಡೆದು ಪ್ರತಿಭಟಿಸಿದರು.   ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಶಂಕರ ಮಾಡಲಗಿ ಮಾತನಾಡಿ, ಜಿಲ್ಲಾ ಪಂಚಾಯಿತಿಯಿಂದ ನಡೆದಿರುವ ₹ 60 ಲಕ್ಷ ವೆಚ್ಚದ ರಸ್ತೆ ಕಾಮಗಾರಿ …

Read More »

ಸಾರ್ವಜನಿಕರ ಟೀಕೆ, ಮಹಾನಗರ ಪಾಲಿಕೆ ಅಧಿಕಾರಿಗಳು ಆರ್‍ಪಿಡಿ ಕ್ರಾಸ್ ಬಳಿ ಲೀಕ್ ಆಗಿದ್ದ ಡ್ರೈನೇಜ್ ಪೈಪ್ ಕಾಮಗಾರಿಯನ್ನು ಕೈಗೆತ್ತಿಕೊಂಡಿದ್ದಾರೆ.

ಸಾರ್ವಜನಿಕರ ಟೀಕೆ, ಆಗ್ರಹದಿಂದ ಎಚ್ಚೆತ್ತುಕೊಂಡಿರುವ ಬೆಳಗಾವಿಯ ಮಹಾನಗರ ಪಾಲಿಕೆ ಅಧಿಕಾರಿಗಳು ಆರ್‍ಪಿಡಿ ಕ್ರಾಸ್ ಬಳಿ ಲೀಕ್ ಆಗಿದ್ದ ಡ್ರೈನೇಜ್ ಪೈಪ್ ಕಾಮಗಾರಿಯನ್ನು ಕೈಗೆತ್ತಿಕೊಂಡಿದ್ದಾರೆ. ಹೌದು ಕಳೆದ 15 ದಿನಗಳ ಹಿಂದೆ ಆರ್‍ಪಿಡಿ ಕ್ರಾಸ್ ಬಳಿಯ ಡ್ರೈನೇಜ್ ಪೈಪ್ ಲೀಕ್ ಆಗಿ ರಸ್ತೆಯ ಮೇಲೆ ಕಲುಷಿತ ನೀರು ಹರಿಯುತ್ತಿತ್ತು. ಈ ಸಂದರ್ಭದಲ್ಲಿ ಮೊದಲೇ ದೊಡ್ಡ ಪ್ರಮಾಣದಲ್ಲಿ ಮಳೆಯಾಗುತ್ತಿತ್ತು. ಇದರಿಂದ ಮಳೆ ನೀರಿನ ಜೊತೆಗೆ ಡ್ರೈನೇಜ್ ನೀರು ಕೂಡ ರಸ್ತೆಯ ಮೇಲೆ ಹರಿಯುತ್ತಿತ್ತು. …

Read More »

ಯಾವಾಗ್ಯಾವಾಗ ಉತ್ತರ ಕರ್ನಾಟಕ ಅಭಿವೃದ್ಧಿ ಆಗಲ್ವೋ ಆವಾಗ ಈ ಕೂಗು ಬರುತ್ತೆ, ನಾನು ಕೂಗು ಎತ್ತೋದು ನಿಜ.

ಸಿಎಂ ಸ್ಥಾನಕ್ಕೆ ಟವೇಲ್ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಉಮೇಶ ಕತ್ತಿ ಸಿಎಂ ಸ್ಥಾನದ ಕನಸಲ್ಲೆ ತೇಲಾಡುತ್ತಿದ್ದಾರೆ. ನಸೀಬ್‌ನಲ್ಲಿದ್ದರೆ ಸಿಎಂ ಸ್ಥಾನ ಒಂದಿನ ಬರಬಹುದು ಎಂದು ಮತ್ತೆ ಸಿಎಂ ಆಗುವ ಕನಸು ಬಿಚ್ಚಿಟ್ಟರು. ವಿಜಯಪುರ ಜಿಲ್ಲೆಯ ಆಲಮಟ್ಟಿ ಯಲ್ಲಿ‌ ಮಾದ್ಯಮಗಳ ಜೊತೆಯಲ್ಲಿ ಮಾತನಾಡಿ ನನಗಿನ್ನು 60 ವಯಸ್ಸು, 15 ವರ್ಷ ಇದೆ ಬಿಜೆಪಿ ರೂಲ್ ನಂತೆ, ಇನ್ನು 15 ವರ್ಷ ಶಾಸಕನಾಗಿ ಇರ್ತಿನಿ, ಟೈಂ ಬರಬಹುದು.   ನಾವು ದಿನ ಬೇಡಿದರೇ …

Read More »

ಬೆಳಗಾವಿಯ ಯುವಕ ಸಿದ್ದರಾಮೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಲು ಪಾದಯಾತ್ರೆ

ದಾವಣಗೆರೆಯಲ್ಲಿ ನಡೆಯುತ್ತಿರುವ ಸಿದ್ದರಾಮೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಲು ಅವರು ಪಾದಯಾತ್ರೆ ಹೊರಟಿದ್ದಾರೆ. ಪಾದಯಾತ್ರೆಯ ಮೂರನೇ ದಿನವಾದ ಇಂದು ಬೆಳಗಾವಿಗೆ ಬಂದು ತಲುಪಿದ್ದಾರೆ. ಬೆಳಗಾವಿಯ ಸಿದ್ದರಾಮಯ್ಯ ಅಭಿಮಾನಿಗಳು ಅವರನ್ನು ನಗರದ ಕನಕದಾಸ ಸರ್ಕಲ್‍ನಲ್ಲಿ ಸ್ವಾಗತ ಮಾಡಿದರು. ಆಗಸ್ಟ್ 3 ರಂದು ದಾವಣಗೆರೆಯಲ್ಲಿ ನಡೆಯಲಿರುವ ಸಿದ್ದರಾಮಯ್ಯನವರ 75ನೇ ವರ್ಷದ ಹುಟ್ಟುಹಬ್ಬದಲ್ಲಿ ಪಾಲ್ಗೊಳ್ಳಲು ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಮೊಳೆ ಗ್ರಾಮದ ವ್ಯಕ್ತಿಯೋರ್ವ ಪಾದಯಾತ್ರೆಯನ್ನು ಕೈಗೊಂಡಿದ್ದಾನೆ. ಮೂರನೇ ದಿನವಾದ ಇಂದು ಆತ ಬೆಳಗಾವಿಗೆ ಬಂದು ತಲುಪಿದ್ದು …

Read More »

ಜನನ, ಮರಣ ನೋಂದಣಿ ಕಾಯ್ದೆತಿದ್ದುಪಡಿ ರದ್ದುಗೊಳಿಸಲು ಆಗ್ರಹ

ಬೈಲಹೊಂಗಲ: ಜನನ ಮತ್ತು ಮರಣ ನೋಂದಣಿ ಕಾಯ್ದೆ ತಿದ್ದುಪಡಿಗೆ ಸಂಬಂಧಿಸಿದ ನ್ಯಾಯಾಂಗದ ವ್ಯಾಪ್ತಿಯನ್ನು ಬದಲಾವಣೆ ಮಾಡಿರುವುದನ್ನು ರದ್ದುಗೊಳಿಸಿ ಮೊದಲಿನಂತೆ ಜೆ.ಎಂ.ಎಫ್.ಸಿ. ನ್ಯಾಯಾಲಯದಲ್ಲಿ ಮುಂದುವರಿಸಬೇಕು ಎಂದು ಒತ್ತಾಯಿಸಿ ತಾಲ್ಲೂಕು ವಕೀಲರ ಸಂಘದಿಂದ ಪ್ರತಿಭಟನೆ ನಡೆಯಿತು. ತಹಶೀಲ್ದಾರ್ ಬಸವರಾಜ ನಾಗರಾಳ ಅವರಿಗೆ ವಕೀಲರು ಸೋಮವಾರ ಮನವಿ ಸಲ್ಲಿಸಿದರು. ವಕೀಲರ ಸಂಘದ ಉಪಾಧ್ಯಕ್ಷ ಎಂ.ಆರ್. ಸೋಮಣ್ಣವರ, ವಕೀಲರ ಸಂಘದ ಕಾರ್ಯದರ್ಶಿ ಸಂತೋಷ ಭಾವಿ ಮಾತನಾಡಿ, ‘ಜನನ ಮತ್ತು ಮರಣ ನೋಂದಣಿ ಕಾಯ್ದೆಗೆ ಸಂಬಂಧಿಸಿದ ವಿಷಯಗಳು …

Read More »

ಬಿಜೆಪಿಯಲ್ಲಿ ಗೆಲ್ಲುವಂತವರಿದ್ದರೆ 80 ವರ್ಷದ ಮುದುಕನಿಗೂ, ಸೋನಿಯಾ ಗಾಂಧಿಗೂ ಟಿಕೆಟ್ ಕೊಡ್ತಾರೆ

ಬಾಗಲಕೋಟೆ: ಶ್ರೀರಾಮ ಸೇನೆ ಮತ್ತು ಬಿಜೆಪಿಗೆ ಏನು ಸಂಬಂಧ ಇಲ್ಲ ಎಂದು ಕಟೀಲ್​​ ಹೇಳಿದ್ದಾರೆ. ನಾನೂ ಕೂಡ ಹೇಳಿದ್ದೇನೆ. ನಾನೇನು ಬಿಜೆಪಿ ಸದಸ್ಯನಲ್ಲ. ಯಾವ ಪಕ್ಷದ ಸಂಬಂಧವೂ ನಮ್ಮ ಸಂಘಟನೆಗೆ ಇಲ್ಲ. ಅವರೇನು ನಿರ್ಧಾರ ತೆಗೆದುಕೊಳ್ಳುತ್ತಾರೋ ತೆಗೆದುಕೊಳ್ಳಲಿ ಎಂದು ಮಾಜಿ ಮುಖ್ಯಮಂತ್ರಿ ಯಡಿಯೂಪ್ಪ ಅವರು ತಮ್ಮ ಪುತ್ರನಿಗೆ ಕ್ಷೇತ್ರ ತ್ಯಾಗ ಮಾಡಿದ ವಿಚಾರವಾಗಿ ಪ್ರತಿಕ್ರಿಯಿಸಿದ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್​​ ಮುತಾಲಿಕ್ ಪ್ರತಿಕ್ರಿಯಿಸಿದರು. ​​ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನೇನು …

Read More »

ಕೂಡ್ಲಿಗಿಯಲ್ಲಿ ಯುವತಿಯ ರುಂಡ ಕಡಿದು ಠಾಣೆಗೆ ತಂದಿದ್ದ ಆರೋಪಿ ವಿರುದ್ಧ ದಾಖಲಾಯ್ತು ಮತ್ತೊಂದು ಕೇಸ್​!

ವಿಜಯನಗರ: ಕೂಡ್ಲಿಗಿ ತಾಲೂಕಿನ ಕನ್ನಬೋರಯ್ಯಹಟ್ಟಿಯಲ್ಲಿ ನಡೆದ ಯುವತಿಯ ಭೀಕರ ಕೊಲೆ ಪ್ರಕರಣದ ಆರೋಪಿ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ. ಆರೋಪಿ ಭೋಜರಾಜ್​ 15 ವರ್ಷದ ಅಪ್ರಾಪ್ತೆಯನ್ನು ಮದುವೆ ಆಗಿರುವ ಆರೋಪ ಕೇಳಿಬಂದಿದೆ. ಹೀಗಾಗಿ ಆರೋಪಿ ವಿರುದ್ಧ ಬಾಲ್ಯ ವಿವಾಹ ಕಾಯ್ದೆ ಹಾಗೂ ಪೊಕ್ಸೊ ಅಡಿ ಪ್ರಕರಣ ದಾಖಲಿಸಲಾಗಿದೆ. ಆರೋಪಿ ತಂದೆ-ತಾಯಿ ಹಾಗೂ ಹುಡುಗಿಯ ತಂದೆ-ತಾಯಿ ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ. ಖಾನಾಹೊಸಹಳ್ಳಿ ಠಾಣೆಯಲ್ಲಿ ಕೇಸು ದಾಖಳಾಗಿದೆ. ಅಪ್ರಾಪ್ತೆಯ ಹೇಳಿಕೆ ಆಧಾರದ ಮೇಲೆ ತನಿಖೆ …

Read More »

ಹೈ ಪ್ರೊಫೈಲ್ ಸೆಕ್ಸ್ ರಾಕೆಟ್: ಬೆಂಗಳೂರಿನ ಯುವತಿಯರು ಸಹಿತ 11 ಮಂದಿ ಅರೆಸ್ಟ್

ಛತ್ತೀಸಗಢದ ರಾಯ್ಪುರದ ಸ್ಟಾರ್​ ಹೋಟೆಲ್​ ಮೇಲೆ ದಾಳಿ ನಡೆಸಿದ್ದು, ಅಪರಾಧ ನಿಗ್ರಹ ಮತ್ತು ಸೈಬರ್​ ಘಟಕದ ಸಿಬ್ಬಂದಿ ಹೈ ಪ್ರೊಫೈಲ್​ ವೇಶ್ಯಾವಾಟಿಕೆ ನಡೆಸುತ್ತಿರುವುದನ್ನು ಬಯಲಿಗೆ ಎಳೆದಿದ್ದಾರೆ.   ಈ ಘಟನೆಯಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಬೆಂಗಳೂರಿನ ಯುವತಿ ಸೇರಿದಂತೆ 11 ಮಂದಿ ಯುವತಿಯರು ಹಾಗೂ ಒಬ್ಬ ಕಿಂಗ್​ಪಿನ್​ನನ್ನು ವಶಕ್ಕೆ ಪಡೆದಿದ್ದಾರೆ. ಬೆಂಗಳೂರಿನ ಯುವತಿ ಹೊರತುಪಡಿಸಿ ನೇಪಾಳ, ಮುಂಬೈ, ದೆಹಲಿ, ಗುಜರಾತ್​ ಮೂಲದವರು ಎಂದು ತಿಳಿದುಬಂದಿದೆ. ಇನ್ನು ಇವರ ಸ್ಮಾರ್ಟ್​ಫೋನ್​ಗಳನ್ನು ತನಿಖೆಗೆ ಒಳಪಡಿಸಿದಾಗ …

Read More »

ಪಂಪಸೆಟ್ ಕೇಬಲ್ ಕಳ್ಳರನ್ನು ಹಿಡಿದ ರೈತರು

ಜಮೀನಿನ ಪಂಪ್ ಸೆಟ್‍ಗಳ ಕೇಬಲ್ ಕಳ್ಳತನ ಮಾಡುತ್ತಿದ್ದ ಕಳ್ಳರನ್ನು ರೆಡ್ ಹ್ಯಾಂಡ್ ಆಗಿ ಹಿಡಿದು ರೈತರು ಧರ್ಮದೇಟು ನೀಡಿರುವ ಘಟನೆ ಗೋಕಾಕ್‍ನ ಭಗೀರಥ ಕಾಲೋನಿಯಲ್ಲಿ ನಡೆದಿದೆ. ಜಮೀನಿನ ಪಂಪ್ ಸೆಟ್‍ನಲ್ಲಿ ಇರೋ ಕೇಬಲ್ ಕಳ್ಳತನ ಮಾಡಿ ಮಾರಾಟ ಮಾಡುತ್ತಿದ್ದರು. ತಾಮ್ರದ ತಂತಿಯನ್ನು ಹೆಚ್ಚಿನ ಹಣಕ್ಕೆ ಈ ಖದೀಮರು ಮಾರಾಟ ಮಾಡುತ್ತಿದ್ದರು. ಕಳೆದ ಅನೇಕ ದಿನಗಳಿಂದ ಈ ರೀತಿ ಕೇಬಲ್ ಕಳ್ಳತನ ನಡೆದಿತ್ತು. ಇದರಿಂದ ಕಂಗೆಟ್ಟಿದ್ದ ರೈತರು ಇಂದು ಇಬ್ಬರು ಕಳ್ಳರನ್ನು …

Read More »