Breaking News

Yearly Archives: 2022

ಶಿರಸಿ ಪ್ರತ್ಯೇಕ ಜಿಲ್ಲೆ: ರಾಜಕಾರಣಿಗಳಿಗಿಂತ ಜನರ ಅಭಿಪ್ರಾಯ ಮುಖ್ಯ -ದೇಶಪಾಂಡೆ

ಶಿರಸಿ: ಉತ್ತರ ಕನ್ನಡವನ್ನು ವಿಭಜಿಸಿ ಶಿರಸಿ ಪ್ರತ್ಯೇಕ ಜಿಲ್ಲೆ ರಚಿಸುವ ವಿಚಾರಕ್ಕೆ ಸಂಬಂಧಿಸಿ ರಾಜಕಾರಣಿಗಳಿಗಿಂತ ಜನರ ಅಭಿಪ್ರಾಯ ಮುಖ್ಯ ಎಂದು ಹಳಿಯಾಳ ಶಾಸಕ ಆರ್.ವಿ.ದೇಶಪಾಂಡೆ ಹೇಳಿದರು. ಇಲ್ಲಿನ ಅಂಬೇಡ್ಕರ್ ಭವನದಲ್ಲಿ ಭಾನುವಾರ ನಡೆದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡ ಬಳಿಕ ಮಾಧ್ಯಮದವರ ಜತೆ ಅವರು ಮಾತನಾಡಿದರು.   ‘ಜಿಲ್ಲೆ ದೊಡ್ಡದಾಗಿರುವ ಕಾರಣ ಅಭಿವೃದ್ಧಿ ಆಗಿಲ್ಲ ಎಂಬ ವಾದ ಒಪ್ಪಲಾಗದು. ಉತ್ತರ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವನಾಗಿ ಸುದೀರ್ಘ ಅವಧಿಗೆ ಆಡಳಿತ ನಡೆಸಿದ್ದೇನೆ. ಸಾಕಷ್ಟು ಅಭಿವೃದ್ಧಿಯನ್ನೂ …

Read More »

ಗೋಕಾಕ ತಹಶಿಲ್ದಾರ ಪ್ರಕಾಶ ಹೊಳೆಪ್ಪಗೋಳ ಅವರ ಮನೆಯಲ್ಲಿ ಕಳ್ಳತನ

ಬೆಳಗಾವಿ: ತಹಶೀಲ್ದಾರರೊಬ್ಬರು ಚುನಾವಣಾ ಕರ್ತವ್ಯಕ್ಕೆ ತೆರಳಿದ್ದನ್ನು ತಿಳಿದು ಮನೆಗೆ ಹೊಕ್ಕಿದ್ದ ಕಳ್ಳರು 25 ತೊಲ ಚಿನ್ನ ಮಾತ್ರವಲ್ಲದೆ ಇತರ ವಸ್ತುಗಳನ್ನು ಕಳವು ಮಾಡಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಈ ಕಳ್ಳತನ ನಡೆದಿದೆ. ಗೋಕಾಕ ತಹಶಿಲ್ದಾರ ಪ್ರಕಾಶ ಹೊಳೆಪ್ಪಗೋಳ ಅವರ ಮನೆಯಲ್ಲಿ ಈ ಕಳ್ಳತನ ನಡೆದಿದೆ. ಚುನಾವಣೆ ಕರ್ತವ್ಯ ನಿಮಿತ್ತ ಅವರು ಮನೆಗೆ ಬೀಗ ಹಾಕಿ ತೆರಳಿದ್ದನ್ನು ತಿಳಿದ ಕಳ್ಳರು ಮನೆಗೆ ಹೊಕ್ಕಿದ್ದರು. ತಡರಾತ್ರಿಯಲ್ಲಿ ಕಳ್ಳರು ಬೀಗ ಒಡೆದು ಒಳಹೊಕ್ಕಿದ್ದರು. ಗೋಕಾಕದ ಲೋಕೋಪಯೋಗಿ ಇಲಾಖೆಯ …

Read More »

ಟಿವಿ ವಾಹಿನಿಗಳವರು ಕಥೆಯನ್ನು ಹೇಳಿ, ಮುಕ್ತಾಯ ಮಾಡದೇ ಬಿಡುವುದು ಸರಿಯಲ್ಲ’ -ದರ್ಶನ್‌

ಮೈಸೂರು: ‘ಇಲ್ಲಿನ ತಿ.ನರಸೀಪುರ ರಸ್ತೆಯಲ್ಲಿರುವ ನನ್ನ ತೋಟದಲ್ಲಿ 9 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಕಾರ್ಮಿಕ ಅಪರಾಧಿ ಎನ್ನುವುದು ಸಾಬೀತಾಗಿದ್ದು, ನ್ಯಾಯಾಲಯವು 43 ವರ್ಷಗಳ ಕಠಿಣ ಶಿಕ್ಷೆ ವಿಧಿಸಿದೆ. ಪೋಕ್ಸೊ ಅಡಿಯಲ್ಲಿ ದೀರ್ಘಾವಧಿ ಶಿಕ್ಷೆ ನೀಡಿದ ದೇಶದ ಮೊದಲ ಪ್ರಕರಣ ಇದಾಗಿದ್ದು, ಕಾಮುಕರಿಗೆ ಪಾಠವಾಗಬೇಕು. ಹೆಣ್ಮಕ್ಕಳನ್ನು ಮುಟ್ಟಬಾರದೆಂಬ ಸಂದೇಶ ಇಂತಹ ತೀರ್ಪುಗಳ ಮೂಲಕ ಹೋಗಬೇಕು’ ಎಂದು ಚಿತ್ರನಟ ದರ್ಶನ್‌ ಹೇಳಿದ್ದಾರೆ. ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಘಟನೆ ನಡೆದಾಗ, …

Read More »

ಚಳಿಯಿಂದ ತತ್ತರಿಸಿರುವ ಬೆಂಗಳೂರು ಜನತೆಗೆ ಮತ್ತೊಂದು ಶಾಕ್: ಇನ್ನೂ ಮೂರು ದಿನ ಮಳೆ

ಬೆಂಗಳೂರು: ಸೈಕ್ಲೋನ್ ಕಾರಣದಿಂದಾಗಿ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ( Rain in Bangalore ) ತುಂತುರು ಮಳೆಯ ( Rain ) ಜೊತೆಗೆ, ಚಳಿ ಕೂಡ ಜನರನ್ನು ನಡುಗಿಸಿದೆ. ಈ ನಡುವೆಯೂ ಇನ್ನೂ ಮೂರು ದಿನ ಬೆಂಗಳೂರಿನಲ್ಲಿ ಮಳೆ ಮುಂದುವರೆಯಲಿದೆ ಎಂಬುದಾಗಿ ಹವಾಮಾನ ಇಲಾಖೆ ( Meteorological Department ) ಮುನ್ಸೂಚನೆ ನೀಡಿದೆ.     ಬೆಂಗಳೂರಿನ ವಿಧಾನಸೌಧ, ಕಾರ್ಪೋರೇಷನ್, ಮೈಸೂರು ಬ್ಯಾಂಕ್ ಸರ್ಕಲ್, ಕೆ ಆರ್ ಮಾರ್ಕೇಟ್, ಶಾಂತಿನಗರ, …

Read More »

ತೂಕ ಇಳಿಸಿಕೊಂಡ ದುನಿಯಾ ವಿಜಯ್, ಭೀಮ ಚಿತ್ರಕ್ಕಾಗಿ ಕರಿಚಿರತೆ ಮತ್ತೆ ರೆಡಿ!

ಕನ್ನಡದ ದುನಿಯಾ ವಿಜಯ್ (Duniya Vijay) ಯಾವಾಗಲೂ ಸಾಹಸಗಳನ್ನ ಮಾಡ್ತಾನೇ ಇರ್ತಾರೆ. ಸಾಹಿತ್ಯದ ಬಗ್ಗೆನೂ ವಿಶೇಷ ಆಸಕ್ತಿ ಇದೆ. ಕಥೆಗಳನ್ನೂ ಕೇಳೋದು ಇದೆ. ಕಥೆಗಳನ್ನ ಸಿನಿಮಾಕ್ಕಾಗಿಯೇ ಹೇಳೋದು ಇದೆ. ದುನಿಯಾ ವಿಜಯ್​ ಅವರಿಗೆ (Direction) ನಿರ್ದೇಶನದ ಆಸಕ್ತಿನೂ ಇದೆ. ಆ ಆಸಕ್ತಿಯಲ್ಲಿ ಈಗಾಗಲೇ ಸಲಗ ಸಿನಿಮಾ ಬಂದಿದೆ. ಹಿಟ್ ಕೂಡ ಆಗಿದೆ. ಇದೇ ವಿಜಯ್ ಈಗ ಮತ್ತೊಂದು (Cinema) ಸಿನಿಮಾ ಶುರು ಮಾಡಿದ್ದಾರೆ. ಅದುವೇ ಭೀಮ. ಈ ಚಿತ್ರದ ಪಾತ್ರಗಳು …

Read More »

ಯತ್ನಾಳ ಮಾತ್ರವಲ್ಲ ಯಾರಾದರೂ ದಾಖಲೆ ಬಿಡುಗಡೆ ಮಾಡಲಿ: ವಚನಾನಂದಶ್ರೀ

ವಿಜಯಪುರ: ಪಂಚಮಸಾಲಿ ಸಮಾಜದ 2ಎ ಮೀಸಲಾತಿ ಪಾದಯಾತ್ರೆ ಹೋರಾಟಕ್ಕೆ ಮುನ್ನವೇ ಸರ್ಕಾರ ಹರಿಹರ ಪಂಚಮಸಾಲಿ ಪೀಠದ ಅಭಿವೃದ್ಧಿ, ವಿದ್ಯಾರ್ಥಿ ವಸತಿ ನಿಲಗಳಿಗೆ 10 ಕೋಟಿ ರೂ. ನೀಡಿದೆ. ನೀಡಿದ ಅನುದಾನ ಪಾರದರ್ಶಕವಾಗಿ ಬಳಕೆಯಾಗಿದೆ. ಹೀಗಾಗಿ ಯತ್ನಾಳ ಮಾತ್ರವಲ್ಲ ಯಾರು ಬೇಕಾದರೂ ದಾಖಲೆ ಬಿಡುಗಡೆ ಮಾಡಲಿ ಎಂದು ಹರಿಹರ ವೀರಶೈವ ಪಂಚಮಸಾಲಿ ಜಗದ್ಗುರು ಪೀಠದ ವಚನಾನಂದ ಶ್ರೀಗಳು ಹೇಳಿದರು.   ಭಾನುವಾರ ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹರಿಹರದ ನಮ್ಮ ಪೀಠಕ್ಕೂ, …

Read More »

ಬೆಳಗಾವಿಗೆ ಭೇಟಿ ನೀಡಬೇಕಿದ್ದ `ಮಹಾ’ ಸಚಿವ `ಚಂದ್ರಕಾಂತ್ ಪಾಟೀಲ್’ ಮುಖಕ್ಕೆ ಮಸಿ!

ಬೆಳಗಾವಿ : ಮಹಾರಾಷ್ಟ್ರ-ಕರ್ನಾಟಕ ಗಡಿ ವಿವಾದ ಸಂಬಂಧ ಕಳೆದ ವಾರ ಬೆಳಗಾವಿಗೆ ಭೇಟಿ ನೀಡಬೇಕಿದ್ದ ಮಹಾರಾಷ್ಟ್ರ ಸಚಿವ ಚಂದ್ರಕಾಂತ ಪಾಟೀಲ್ ಮುಖಕ್ಕೆ ವ್ಯಕ್ತಿಯೊಬ್ಬ ಮಸಿ ಬಳಿದಿರುವ ಘಟನೆ ನಡೆದಿದೆ.   ಬಾಬಾ ಸಾಹೇಬ್ ಅಂಬೇಡ್ಕರ್ ಮತ್ತು ಮಹಾತ್ಮ ಜ್ಯೋತಿಬಾ ಫುಲೆ ಅವರ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಕ್ಕಾಗಿ ಪುಣೆಯ ಪಿಂಪ್ರಿ-ಚಿಂಚ್ವಾಡ್ನಲ್ಲಿ ಶನಿವಾರ ಅಪರಿಚಿತ ವ್ಯಕ್ತಿಯೊಬ್ಬ ಮಹಾರಾಷ್ಟ್ರ ಸಚಿವ ಚಂದ್ರಕಾಂತ್ ಪಾಟೀಲ್ ಅವರ ಮೇಲೆ ಮಸಿ ಎರಚಿದ್ದಾನೆ. ಪಿಂಪ್ರಿ-ಚಿಂಚ್ವಾಡ್ನಲ್ಲಿ ಸಂಜೆ ಕಾರ್ಯಕ್ರಮವೊಂದರಲ್ಲಿ …

Read More »

BJP, JDSಗೂ ಮೊದಲೇ ಪಟ್ಟಿ ರಿಲೀಸ್ ಮಾಡಿದ ಕಾಂಗ್ರೆಸ್

ಬೆಂಗಳೂರು: ರಾಜ್ಯ ಚುನಾವಣೆಗೆ ಆಗಲೇ ವೇದಿಕೆ ಸಿದ್ದವಾಗುತ್ತಿದ್ದು, ಎಲ್ಲಾ ಪಕ್ಷಗಳಿಗಿಂತಲೂ ಮೊದಲೇ ಕಾಂಗ್ರೆಸ್ ಪಕ್ಷವು ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ದಪಡಿಸಿದೆ ಎನ್ನಲಾಗುತ್ತಿದೆ. ಈ ಪಟ್ಟಿಯಲ್ಲಿ ಮೂರ್ನಾಲ್ಕು ಹಾಲಿ ಶಾಸಕರನ್ನು ಹೊರತುಪಡಿಸಿ ಉಳಿದ ಎಲ್ಲಾ ಹಾಲಿ ಶಾಸಕರಿಗೆ ಬಹುತೇಕ ಟಿಕೆಟ್ ಸಿಗುವುದು ಖಚಿತವಾಗಿದೆ.ಕೆಲವೊಂದು ಕ್ಷೇತ್ರಗಳಲ್ಲಿ ನಾಲ್ಕೈದು ರಿಂದ ಹಿಡಿದು ೧೦,೧೫ ಆಕಾಂಕ್ಷಿಗಳು ಅರ್ಜಿಗಳನ್ನು ಸಲ್ಲಿಸಿದ್ದಾರೆ ಎನ್ನಲಾಗಿದೆ ಬೆಂಗಳೂರು ನಗರ ಕ್ಷೇತ್ರಗಳಲ್ಲಿ ಯಾರಿಗೆಲ್ಲಾ ಸಿಗಲಿದೆ ಟಿಕೆಟ್? ಗಾಂಧಿನಗರ- ದಿನೇಶ್ ಗುಂಡೂರಾವ್ ಬ್ಯಾಟರಾಯನಪುರ- ಕೃಷ್ಣಬೈರೇಗೌಡ ಸರ್ವಜ್ಙನಗರ- …

Read More »

ಶಾಲಾ ಪ್ರವಾಸದ ವೇಳೆ ಕಾಲು ಜಾರಿ ಬಿದ್ದು ವಿದ್ಯಾರ್ಥಿನಿ ಸಾವು

ಬಳ್ಳಾರಿ: ಜಿಲ್ಲೆಯ ಸಿರುಗುಪ್ಪ ತಾಲ್ಲೂಕಿನ ಕೆ ಬೆಳಗಲ್ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ವತಿಯಿಂದ ಕೈಗೊಳ್ಳಲಾಗಿದ್ದ ಪ್ರವಾಸ ಸಮಯದಲ್ಲಿ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟಿದ್ದಾಳೆ. 10ನೇ ತರಗತಿಯಲ್ಲಿ ಓದುತ್ತಿದ್ದ ನಾಗಲಕ್ಷ್ಮಿ(16) ಮೃತ ವಿದ್ಯಾರ್ಥಿನಿ. ಶ್ರವಣಬೆಳಗೊಳದಲ್ಲಿ ಮೆಟ್ಟಿಲು ಹತ್ತುವಾಗ ಕಾಲು ಜಾರಿ ಬಿದ್ದು ತಲೆಗೆ ಪೆಟ್ಟಾಗಿದ್ದರಿಂದ ಹಾಸನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ವಿದ್ಯಾರ್ಥಿನಿ ಮೃತಪಟ್ಟಿರುವುದಾಗಿ ಬಿ.ಇ.ಒ ಗುರಪ್ಪ ತಿಳಿಸಿದ್ದಾರೆ. ಶಿಕ್ಷಣ ಇಲಾಖೆಯ ಅಧಿಕಾರಿಗಳು ಕೆ.ಬೆಳಗಲ್ ಗ್ರಾಮಕ್ಕೆ ತೆರಳಿ ಘಟನೆ ಕುರಿತು ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಂದ …

Read More »

ಅದ್ಧೂರಿಯಾಗಿ ಜರುಗಿದ ಅಭಿ-ಅವಿವಾ ನಿಶ್ಚಿತಾರ್ಥ

ಸ್ಯಾಂಡಲ್‌ವುಡ್‌ನಲ್ಲಿ ಈಗ ಸಾಲು ಸಾಲು ಮದುವೆ ಸಂಭ್ರಮಗಳು ನಡೆಯುತ್ತಿವೆ. ಇತ್ತೀಚೆಗಷ್ಟೇ ಅದಿತಿ ಪ್ರಭುದೇವ ಅವರು ಮದುವೆ ಅದ್ಧೂರಿಯಾಗಿ ಜರುಗಿತ್ತು. ಕಳೆದ ಕೆಲ ದಿನಗಳ ಹಿಂದೆ ಹರಿಪ್ರಿಯಾ ವಸಿಷ್ಠ ಸಿಂಹ ಅವರ ನಿಶ್ಚಿತಾರ್ಥ ಮಾಡಿಕೊಂಡರು. ಇದೀಗ ರೆಬೆಲ್ ಸ್ಟಾರ್ ಅಂಬರೀಶ್‌ ಮತ್ತು ಸಂಸದೆ ಸುಮಲತಾ ಅವರ ಪುತ್ರ ಅಭಿಷೇಕ್ ಅಂಬರೀಶ್ ಅವರ ನಿಶ್ಚಿತಾರ್ಥ ಅವಿವಾ ಬಿದ್ದಪ್ಪ ಜೊತೆ ಅದ್ಧೂರಿಯಾಗಿ ನೆರವೇರಿತು. ಬೆಂಗಳೂರಿನ ಐಷಾರಾಮಿ ಹೋಟೆಲ್‌ನಲ್ಲಿಅಭಿಷೇಕ್‌ ಮತ್ತು ಅವಿವಾ ಎಂಗೇಜ್ಮೆಂಟ್‌ಅದ್ಧೂರಿಯಾಗಿ ನಡೆಯುತ್ತಿದೆ. ಕುಟುಂಬಸ್ಥರ …

Read More »