ಆರು ದಿನಗಳ ಪರಿಯಂತ ಮಳೆಯನ್ನ ಲೆಕ್ಕಿಸದೆ ಸೈಕಲ್ ಜಾತಾದಲ್ಲಿ ಪಾಲಗೋಂಡ ಕಾಂಗ್ರೆಸ್ ಪಕ್ಷದ ಕಾರ್ಯಕರ್ತ ಸೈಕಲ್ ಸವಾರರಿಗೆ ಪಕ್ಷದ ಮುಖಂಡ ಮಹೇಂದ್ರ ತಮ್ಮಣ್ಣವರ ಇವರಿಂದ ಸತ್ಕಾರ ರಾಯಬಾಗ ತಾಲೂಕಿನಲ್ಲಿ ಇದೆ 11–7-2022 ರಿಂದ 16-7-2022 ರ ವರೆಗೆ ಕುಡಚಿ ಮತ ಕ್ಷೇತ್ರದ ಮುಖಂಡ ಮಹೇಂದ್ರ ತಮ್ಮಣ್ಣವರ ಕ್ಷೇತ್ರದ 32 ಹಳ್ಳಿಗಳಲ್ಲಿ ಸೈಕಲ್ ಜಾತಾ ಮಾಡುವ ಮೂಲಕ ಆಡಳಿತ ಪಕ್ಷದವಾದ ಬಿಜೆಪಿ ಸರಕಾರದ ಕಾರ್ಯ ವೈಪಲ್ಯ ಹಾಗೂ ಬೆಲೆ ಏರಿಕೆ ಖಂಡಿಸಿ …
Read More »Yearly Archives: 2022
ಶಾಲೆಯಲ್ಲಿ ಬಿಸಿಯೂಟ ತಿಂದು 50 ಮಕ್ಕಳಿಗೆ ವಾಂತಿ, ಭೇದಿ, ಮಕ್ಕಳು ಅಸ್ವಸ್ಥ
ಶಾಲೆಯಲ್ಲಿ ಮಧ್ಯಾಹ್ನ ಊಟಕ್ಕೆ ಅನ್ನ ಹಾಗೂ ತರಕಾರಿ ಸಾಂಬಾರ್ ಮಾಡಿದ್ರು. ಎಲ್ಲಾ ಮಕ್ಕಳು ಅದೇ ಊಟ ಮಾಡಿದ್ದಾರೆ. ಊಟ ತಿಂದ ಬಳಿಕ 50 ಮಕ್ಕಳಿಗೆ ವಾಂತಿ, ಭೇದಿ ಶುರುವಾಗಿ ಅಸ್ವಸ್ಥಗೊಂಡಿದ್ದಾರೆ. ಚಿತ್ರದುರ್ಗ (ಜು 21): ಬಿಸಿಯೂಟ ಸೇವಿಸಿದ್ದ 50ಕ್ಕೂ ಹೆಚ್ಚು ವಿದ್ಯಾರ್ಥಿಗಳುಅಸ್ವಸ್ಥಗೊಂಡಿದ್ದಾರೆ. ಚಿತ್ರದುರ್ಗದ ಇಸಾಮುದ್ರ ಗೊಲ್ಲರಹಟ್ಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈ ಘಟನೆ ನಡೆದಿದೆ. ವಾಂತಿ, ಭೇದಿಯಿಂದ ಅಸ್ವಸ್ಥಗೊಂಡವರನ್ನ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ವಿದ್ಯಾರ್ಥಿಗಳಿಗೆ ಭರಮಸಾಗರ ಪ್ರಾಥಮಿಕ …
Read More »ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಬಿಡುವುದಿಲ್ಲ ಎಂದ B.S.Y.
ಬೆಂಗಳೂರು: ತಮ್ಮನ್ನು ಪಕ್ಷವು ಮೂಲೆಗುಂಪು ಮಾಡುತ್ತಿದೆ ಎಂಬ ಊಹಾಪೋಹಗಳನ್ನು ತಳ್ಳಿಹಾಕಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಬಿಡುವುದಿಲ್ಲ ಎಂದು ಗುರುವಾರ ಹೇಳಿದ್ದಾರೆ. ವಿರೋಧ ಪಕ್ಷದ ನಾಯಕ ಸಿದ್ದ ರಾಮಯ್ಯ ಮತ್ತು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಹೆಸರನ್ನು ಉಲ್ಲೇಖಿಸದೆ ಮಾತನಾಡಿದ ಯಡಿಯೂರಪ್ಪ, “ಕಾಂಗ್ರೆಸ್ ನಾಯಕರು ಆತುರಾತುರವಾಗಿ ಮತ್ತು ಮುಖ್ಯಮಂತ್ರಿಯಾಗಲು ಪರಸ್ಪರ ಪೈಪೋಟಿ ನಡೆಸುತ್ತಿದ್ದಾರೆ. ನಾವು ಹಾಗೆ ಆಗಲು ಬಿಡುವುದಿಲ್ಲ. ಕರ್ನಾಟಕದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ” …
Read More »ಸಂಕೇಶ್ವರ : ಟಿಪ್ಪರ್ ಢಿಕ್ಕಿ ಹೊಡೆದು 50ಕ್ಕೂ ಹೆಚ್ಚು ಕುರಿಗಳ ಸಾವು
ಸಂಕೇಶ್ವರ : ಟಿಪ್ಪರ್ ವಾಹನವೊಂದು ಹಾಯ್ದು 50ಕ್ಕೂ ಅಧಿಕ ಕುರಿಗಳು ದಾರುಣವಾಗಿ ಮೃತಪಟ್ಟಿರುವ ಘಟನೆ ಹುಕ್ಕೇರಿ ತಾಲೂಕಿನ ಅಮ್ಮಣಗಿ ಗ್ರಾಮದ ಹೊರವಲಯದಲ್ಲಿ ನಡೆದಿದೆ. ಟಿಪ್ಪರ್ ವಾಹನ ಚಾಲಕನ ನಿಯಂತ್ರಣ ತಪ್ಪಿ ಕುರಿಗಳ ಮೇಲೆ ಹಾಯ್ದು ವಾಹನ ಪಲ್ಟಿಯಾಗಿದೆ ಘಟನೆ ನಡೆಯುತ್ತಿದ್ದಂತೆ ಟಿಪ್ಪರ್ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಅಮ್ಮಣಗಿ ಗ್ರಾಮದ ಕುರಿಗಾಯಿ ಹಾಲಪ್ಪ ಸಿದ್ದಪ್ಪ ಹೆಗಡೆ ಎಂಬುವವರಿಗೆ ಸೇರಿದ ಕುರಿಗಳು ಇದಾಗಿವೆ. ಘಟನಾ ಸ್ಥಳಕ್ಕೆ ಸಂಕೇಶ್ವದ ಪೋಲಿಸರು ಭೇಟಿ ನೀಡಿ ಪರಿಶೀಲನೆ …
Read More »ರಾಷ್ಟ್ರಪತಿ ಚುನಾವಣೆ:ಬಿಜೆಪಿ ಮಹಾನಗರ ಹಾಗೂ ಅನಿಲ ಬೆನಕೆ ನೇತೃತ್ವದಲ್ಲಿ ವಿಜಯೋತ್ಸವ ಆಚರಣೆ
ಬೆಳಗಾವಿ-: ಎನ್ ಡಿ ಎ ಮೈತ್ರಿಕೂಟದ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ರಾಷ್ಟ್ರಪತಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದು, ಬೆಳಗಾವಿ ಉತ್ತರ ಮತ ಕ್ಷೇತ್ರದ ಶಾಸಕ ಅನಿಲ ಬೆನಕೆ ನೇತೃತ್ವದಲ್ಲಿ ವಿಜಯೋತ್ಸವ ಆಚರಿಸಲಾಗಿದೆ. ಗುರುವಾರ ಬೆಳಗಾವಿ ಗ್ಯಾಂಗವಾಡಿ ಮರಗಾಯಿದೇವಿ ಮಂದಿರದ ಬಳಿ ಉತ್ತರ ಮತ ಕ್ಷೇತ್ರದ ಶಾಸಕ ಅನಿಲ ಬೆನಕೆ ಅವರು ಬಿಜೆಪಿ ಪದಾದಿಕಾರಗಳ ಜೊತೆಗೆ ವಿಜಯೋತ್ಸವ ಆಚರಿಸಿ ದ್ರೌಪದಿ ಮುರ್ಮು ಅವರಿಗೆ ಶುಭ ಹಾರೈಸಿದರು. ಈ ವೇಳೆ ಮಾತನಾಡಿ ಶಾಸಕ …
Read More »ಬೆಳಗಾವಿ ಮೂಲದ ಯುವತಿ ಪುತ್ತೂರಿನ ಪೊಲೀಸರಿಗೆ ಅತಿತಿ
ಪುತ್ತೂರು : ಬೆಳಗಾವಿ ಮೂಲದ ಯುವತಿ ಪುತ್ತೂರಿನ ಸಂಸ್ಥೆಯೊಂದಕ್ಕೆ ಕೆಲಸ ಅರಸಿಕೊಂಡು ಬಂದ ವೇಳೆ ಅನ್ಯ ಧರ್ಮದ ವ್ಯಕ್ತಿಯ ಜತೆಗಿರುವುದನ್ನು ಗಮನಿಸಿದ ಹಿಂದೂ ಸಂಘಟನೆಯ ಕಾರ್ಯಕರ್ತರು ಆತನನ್ನು ಪೊಲೀಸರಿಗೆ ಒಪ್ಪಿಸಿದ ಘಟನೆ ಜು.21 ರಂದು ಮಂಜಲ್ಪಡ್ಪು ಬಳಿ ಸಂಭವಿಸಿದೆ. ಬೆಳಗಾವಿಯ ಗಾನಪುರ ಮೂಲದ ಹಿಂದೂ ಯುವತಿ ಮಂಗಳೂರು ಫಿಶ್ ಕಂಪೆನಿಯಲ್ಲಿ ಕೆಲಸಕ್ಕಿದ್ದು ಅಲ್ಲಿಂದ ಪುತ್ತೂರು ಮಂಜಲ್ಪಡ್ಪುವಿನಲ್ಲಿರುವ ಸಂಸ್ಥೆಯಲ್ಲಿ ಕೆಲಸಕ್ಕೆಂದು ಬಂದಿದ್ದರು. ಈ ವೇಳೆ ಮುಕ್ವೆಯ ಅನ್ಯ ಧರ್ಮದ ವ್ಯಕ್ತಿ ಆಕೆಗೆ …
Read More »ದೇಶದ 15ನೇ ರಾಷ್ಟ್ರಪತಿಯಾಗಿ ಎನ್ ಡಿಎ ಅಭ್ಯರ್ಥಿ ದ್ರೌಪದಿ ಶ್ಯಾಮಚರಣ ಮುರ್ಮು ಆಯ್ಕೆ
ಹೊಸದಿಲ್ಲಿ: ದೇಶದ 15ನೇ ರಾಷ್ಟ್ರಪತಿಯಾಗಿ ಎನ್ ಡಿಎ ಅಭ್ಯರ್ಥಿ ದ್ರೌಪದಿ ಶ್ಯಾಮಚರಣ ಮುರ್ಮು ಆಯ್ಕೆಯಾಗಿದ್ದು ಅಧಿಕೃತ ಘೋಷಣೆ ಬಾಕಿಯಿದೆ. ಈ ಮೂಲಕ ಅವರು ಪ್ರತಿಭಾ ಪಾಟೀಲ್ ಅವರ ನಂತರ ದೇಶದ ಎರಡನೇ ಹಾಗೂ ಬುಡಕಟ್ಟು ಸಮುದಾಯದ ಮೊದಲ ಮಹಿಳಾ ರಾಷ್ಟ್ರಪತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ನೂತನ ರಾಷ್ಟ್ರಪತಿಯಾಗಿ ಅವರು ಜು.25ರಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಗುರುವಾರ ಸಂಸತ್ ಭವನದಲ್ಲಿ ನಡೆದ ಮತ ಎಣಿಕೆ ಪ್ರಕ್ರಿಯೆಯಲ್ಲಿ ದ್ರೌಪದಿ ಮುರ್ಮು ಅವರು 3.78 ಲಕ್ಷ …
Read More »ಸ್ನಾನ ಮಾಡುವ ವಿಡಿಯೋ ತೆಗೆದು ಯುವಕನ ಬ್ಲ್ಯಾಕ ಮೇಲ್
ಮೈಸೂರು: ತಾನು ಸ್ನಾನ ಮಾಡುವ ವಿಡಿಯೋ ತೆಗೆದು ಯುವಕನೋರ್ವ ಬ್ಲ್ಯಾಕ್ಮೇಲ್ ಮಾಡುತ್ತಿದ್ದು, ಈ ಯುವಕನನ್ನು ಬಂಧಿಸುವಂತೆ ನೊಂದ ಮಹಿಳೆ ಒತ್ತಾಯಿಸಿದ್ದಾರೆ. ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದರೂ, ಇದುವರೆಗೆ ಯಾವುದೇ ಕ್ರಮ ತೆಗೆದುಕೊಂಡಿಲ್ಲ ನಗರದ ನಿವಾಸಿಯಾದ ಈ ಮಹಿಳೆಯು MEDIA ಜೊತೆ ಮಾತನಾಡಿ, ನಾನು ಸ್ನಾನ ಮಾಡುವ ವಿಡಿಯೋವನ್ನು ಪ್ರಮೋದ್ ಎಂಬ ಯುವಕ ತೆಗೆದಿದ್ದಾನೆ. ಕಳೆದ ಒಂದೂವರೆ ವರ್ಷದಿಂದ ನನ್ನನ್ನು ಎಲ್ಲ ರೀತಿಯಲ್ಲೂ ಬ್ಲ್ಯಾಕ್ಮೇಲ್ ಮಾಡಿದ್ದ. ಈ ವಿಚಾರ ನನ್ನ ಗಂಡನಿಗೆ …
Read More »ಪಂಜಾಬ್ ಮಾದರಿಯಲ್ಲಿ ಕರ್ನಾಟಕದಲ್ಲೂ ಆಪ್ ಗೆ ಅಧಿಕಾರ: ಭಾಸ್ಕರ ರಾವ್
ಹುಬ್ಬಳ್ಳಿ: ಹೊಂದಾಣಿಕೆ ರಾಜಕೀಯಕ್ಕೆ ಅವಕಾಶ ನೀಡದೆ, ವಿಷಯಾಧಾರಿತ ಚುನಾವಣೆಗೆ ಹೋಗುತ್ತೇವೆ. ಪಂಜಾಬ್ ಮಾದರಿಯಲ್ಲಿ ಅಧಿಕಾರಕ್ಕೆ ಬರುವ ವಿಶ್ವಾಸವಿದೆ ಎಂದು ಆಪ್ ರಾಜ್ಯ ಉಪಾಧ್ಯಕ್ಷ ಭಾಸ್ಕರ ರಾವ್ ತಿಳಿಸಿದರು. ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಅಧಿಕಾರಕ್ಕೆ ಕಿತ್ತಾಟ, ಹೊಂದಾಣಿಕೆ ರಾಜಕೀಯ ನಡೆಯುತ್ತಿದೆ. ಇರುವ ಪ್ರಮುಖ ಮೂರು ಪಕ್ಷಗಳು ಪರಸ್ಪರ ಆರೋಪ, ಹಗರಣಗಳ ಪ್ರಸ್ತಾಪಗಳ ಮೂಲಕ ಜನರ ಸಮಸ್ಯೆ, ನೈಜ ವಿಷಯಗಳನ್ನು ಮರೆಮಾಚಿಸಲಾಗುತ್ತಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ಈಗಲೇ ಕಿತ್ತಾಟ ಶುರುವಾಗಿದೆ. ಮತದಾರರ ತೀರ್ಪು …
Read More »ಧಾರವಾಡ : ಟಂಟಂ ವಾಹನ ತೊಳೆಯಲು ಹೋದ ತಂದೆ-ಮಗ ನೀರುಪಾಲು
ಧಾರವಾಡ: ಟಂಟಂ ವಾಹನವನ್ನು ತೊಳೆಯಲೆಂದು ಕೆರೆಗೆ ಇಳಿದಿದ್ದ ತಂದೆ-ಮಗ ಇಬ್ಬರು ಕೆರೆಯಲ್ಲಿ ಮುಳುಗಿ ಮೃತಪಟ್ಟ ಘಟನೆ ಗುರುವಾರ ಬೆಳಿಗ್ಗೆ ಧಾರವಾಡ ತಾಲೂಕಿನ ಕ್ಯಾರಕೊಪ್ಪ ಗ್ರಾಮದಲ್ಲಿ ನಡೆದಿದೆ. ಕ್ಯಾರಕೊಪ್ಪ ಗ್ರಾಮದ ಗದಿಗೆಪ್ಪ ಅಂಗಡಿ (ತಂದೆ) ಹಾಗೂ ರವಿ ಅಂಗಡಿ (ಮಗ) ಸಾವಿಗೀಡಾದ ದುರ್ದೈವಿಗಳು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಇವರಿಬ್ಬರೂ ಇಂದು ಬೆಳಿಗ್ಗೆ ಟಂಟಂ ವಾಹನ ತೊಳೆಯಲೆಂದು ಗ್ರಾಮದ ಹೊರವಲಯ ನವೋದಯ ಶಾಲೆಯ ಪಕ್ಕದ ಕರೆಗೆ ಇಳಿದಾಗ ಕಾಲು ಜಾರಿ ಕರೆಯಲ್ಲಿ …
Read More »