ಬೆಳಗಾವಿ: ಎಲ್ಲೆಂದರಲ್ಲಿ ತ್ಯಾಜ್ಯ ಎಸೆದು ಪರಿಸರ ಹಾಳಾಗುತ್ತಿರುವುದನ್ನು ತಡೆಯಲು ಶಾಸಕ ಅಭಯ ಪಾಟೀಲ್ ಅವರು ದೇಶದಲ್ಲೇ ಮೊದಲ ಸೆನ್ಸಾರ್ ತಂತ್ರಜ್ಞಾನ ಆಧಾರಿತ ಭೂಗತ ಕಸದ ತೊಟ್ಟಿಗಳನ್ನು ಬೆಳಗಾವಿಯ ತಮ್ಮ ಕ್ಷೇತ್ರದಲ್ಲಿ ಅಳವಡಿಸಿದ್ದಾರೆ. ಬೆಳಗಾವಿ ಮಹಾನಗರ ಪಾಲಿಕೆಯ ದಕ್ಷಿಣ ಮತ ಕ್ಷೇತ್ರದ ಎಲ್ಲ ವಾರ್ಡ್‌ಗಳಲ್ಲಿ ಅಂಡರ್ ಗ್ರೌಂಡ್ ಡಸ್ಟ್‌ಬಿನ್ (ಭೂಗತ ಕಸದ ತೊಟ್ಟಿ)ಯನ್ನು ಅಳವಡಿಸಿದ್ದಾರೆ. ಒಟ್ಟು 24 ಕಸದ ತೊಟ್ಟಿಗಳಿಗೆ ಆರ್ಡರ್ ಮಾಡಲಾಗಿದ್ದು, 18 ತೊಟ್ಟಿ ಗಳು ಕಾರ್ಯ ನಿರ್ವಹಿಸುತ್ತಿವೆ. ಸಂಪೂರ್ಣ …
Read More »Yearly Archives: 2022
ಮತ್ತೆ ಗೂಡಿಗೆ ಮರಳಿದ ಹಳ್ಳಿ ಹಕ್ಕಿ
ಬೆಂಗಳೂರು: ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ವೇದಿಕೆ ಸಿದ್ದವಾಗುತ್ತಿರುವ ಬೆನ್ನಲ್ಲೇ ಈಗ ಎಚ್.ವಿಶ್ವನಾಥ್ ಕಾಂಗ್ರೆಸ್ ಪಕ್ಷ ಸೇರಲು ಒಲವು ತೋರಿದ್ದಾರೆ. ಇದಕ್ಕೆ ಪೂರಕವಾಗಿ ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ಅವರನ್ನು ಭೇಟಿ ಮಾಡಿ ರಾಜ್ಯದ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚಿಸಿದ್ದಾರೆ. ಸದಾಶಿವನಗರದಲ್ಲಿಡಿ.ಕೆ.ಶಿವಕುಮಾರ್ಅವರನ್ನು ಅವರು ಭೇಟಿ ಮಾಡಿದರು.ಇತ್ತೀಚಿಗಷ್ಟೇ ಅವರು ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಭೇಟಿ ಮಾಡಿ ಪಕ್ಷದ ಸೇರ್ಪಡೆ ವಿಚಾರವನ್ನು ಪ್ರಸ್ತಾಪಿಸಿದ್ದರು.ಈ ಸಂದರ್ಭದಲ್ಲಿ ಅವರು ರಾಜ್ಯ ನಾಯಕರನ್ನು …
Read More »ಬೆಟ್ಟ ಕುರುಬರಿಗೆ ಎಸ್‌ಟಿ ಸ್ಥಾನ; ಲೋಕಸಭೆಯಲ್ಲಿ ಮಸೂದೆ ಮಂಡನೆ
ಹೊಸದಿಲ್ಲಿ: ಕರ್ನಾಟಕದ ಮೈಸೂರು, ಚಾಮರಾಜನಗರ, ಕೊಡಗು ಸುತ್ತಲಿನ ಪ್ರದೇಶಗಳಲ್ಲಿ ವಾಸವಿರುವ ಬೆಟ್ಟ ಕುರುಬ ಸಮುದಾಯಕ್ಕೆ ಪರಿಶಿಷ್ಟ ಪಂಗಡ ಸ್ಥಾನಮಾನ ನೀಡುವ ಪರಿಷ್ಕೃತ ಎಸ್‌ಟಿ ಪಟ್ಟಿಯನ್ನು ಲೋಕಸಭೆಯಲ್ಲಿ ಕೇಂದ್ರ ಸರಕಾರ ಶುಕ್ರವಾರ ಮಂಡಿಸಿದೆ. ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವ ಅರ್ಜುನ್ ಮುಂಡಾ ಸಂವಿಧಾನ (ಪರಿಶಿಷ್ಟ ಪಂಗಡ) ಆದೇಶ, 1950ಕ್ಕೆ ತಿದ್ದುಪಡಿ ತರುವ ಮಸೂದೆ ಯನ್ನು ಮಂಡಿಸಿದ್ದಾರೆ. ಇದರಲ್ಲಿ ಈಗಾಗಲೇ ಎಸ್‌ಟಿ ಪಟ್ಟಿಯಲ್ಲಿರುವ ಕರ್ನಾಟಕದ ಕಾಡು ಕುರುಬರೇ ಬೆಟ್ಟ ಕುರುಬರು ಎಂಬುದನ್ನು ಸೇರಿಸಲಾಗಿದೆ. …
Read More »ಕಾಂತಾರ 2’ಗೆ ಪಂಜುರ್ಲಿಯ ಅನುಮತಿ ಕೇಳಿದ ಚಿತ್ರತಂಡ: ರಿಷಬ್‌ಗೆ ಎಚ್ಚರಿಕೆ ಕೊಟ್ಟ ದೈವ!
ರಿಷಬ್ ಶೆಟ್ಟಿ ಹಾಗೂ ಹೊಂಬಾಳೆ ಫಿಲಮ್ಸ್ ‘ಕಾಂತಾರ’ ಸಿನಿಮಾದ ಯಶಸ್ಸಿನಿಂದ ಥ್ರಿಲ್ ಆಗಿದ್ದಾರೆ. ಕೇವಲ ಸುಮಾರು ಹದಿನೈದು ಕೋಟಿಯಲ್ಲಿ ನಿರ್ಮಿಸಿದ ಸಿನಿಮಾ 400 ಕೋಟಿಗೂ ಹೆಚ್ಚು ಹಣವನ್ನು ಚಿತ್ರಮಂದಿರಗಳಿಂದಲೇ ಕಲೆಕ್ಷನ್ ಮಾಡಿದೆ! ಕರ್ನಾಟಕ ಮಾತ್ರವೇ ಅಲ್ಲದೆ ಹೊರ ರಾಜ್ಯಗಳಲ್ಲಿಯೂ ‘ಕಾಂತಾರ’ ಸಿನಿಮಾ ಸೂಪರ್ ಡೂಪರ್ ಹಿಟ್ ಆಗಿದೆ. ನಿರೀಕ್ಷೆಗಿಂತಲೂ ಬಹುದೊಡ್ಡಮಟ್ಟದ ಗೆಲುವನ್ನು ಸಿನಿಮಾ ಕಂಡಿದೆ. ಇದಕ್ಕೆ ಚಿತ್ರತಂಡದ ಶ್ರಮದ ಜೊತೆಗೆ ದೈವದ ಆಶೀರ್ವಾದವೂ ಕಾರಣ ಎನ್ನಲಾಗುತ್ತಿದೆ. ದೈವವನ್ನು ನಂಬುವ …
Read More »ಬಿಜೆಪಿ ಶಾಸಕರಿಬ್ಬರೇ ಮೇಯರ್, ಉಪಮೇಯರ್:
ಜನಕಾಂಗ್ರೆಸ್ ಕಡೆ ಮುಖ ಮಾಡಲಿದ್ದಾರೆ : ಬೆಳಗಾವಿ ಮತ್ತು ಇಡೀ ರಾಜ್ಯಕ್ಕೆ ಬದಲಾವಣೆ ಮಾಡಬೇಕು ಅಂತಾ ನನ್ನ ಅನಿಸಿಕೆ. ಇದರಿಂದ 20 ಸೀಟ್ ಹೆಚ್ಚು ಗೆಲ್ಲಬಹುದು. ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಬೇಕು ಅಂತಾ ಜನ ನೋಡ್ತಿದ್ದಾರೆ. ಸಿದ್ದರಾಮಯ್ಯ ಕಾಲದ ಸಾಕಷ್ಟು ಯೋಜನೆ ಸ್ಥಗಿತ ಮಾಡಿದ್ದು ಜನರಿಗೆ ಗೊತ್ತಿದೆ. ಕುಟುಂಬಸ್ಥರಿಗೆ ಟಿಕೆಟ್ ನೀಡುವಂತೆ ಹಲವು ನಾಯಕರ ಅರ್ಜಿ ವಿಚಾರವಾಗಿ ಅವರು ಪ್ರತಿಕ್ರಿಯೆ ನೀಡಿದ್ದು, ಕುಟುಂಬ ರಾಜಕಾರಣದಲ್ಲಿ ಗೆಲ್ಲುವ ಕೆಪ್ಯಾಸಿಟಿ ಇದ್ರೇ ಕೊಡಬಹುದು. …
Read More »ಬೆಳಗಾವಿಯಲ್ಲಿ ಚಳಿಗಾಲ ಅಧಿವೇಶನದಲ್ಲಿ ಭಾಗವಹಿಸಲ್ಲ:H.D.K.
ಮುಂದಿನ ರಾಜ್ಯದ ಸಾರ್ವತ್ರಿಕ ಚುನಾವಣೆಯಲ್ಲಿ ಯಾವುದೇ ಪಕ್ಷದ ಜೊತೆಯಲ್ಲಿ ಹೊಂದಾಣಿಕೆ ಮಾಡಿಕೊಳ್ಳಲ್ಲ ಸ್ವತಂತ್ರವಾಗಿ ಸ್ಪರ್ಧೆ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದರು. ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಮಾತನಾಡಿದ ಕುಮಾರಸ್ವಾಮಿ ಈಗಾಗಲೇ ಜಾತ್ಯಾತೀತ ಜನತಾದಳ ವತಿಯಿಂದ ಸಾಕಷ್ಟು ಚುನಾವಣೆ ತಯಾರಿ ನಡೆಸಲಾಗುತ್ತಿದೆ. ಪಕ್ಷದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪಂಚರತ್ನ ಸಮಾವೇಶವನ್ನು ನಡೆಸಲಾಗುತ್ತಿದ್ದು ಉತ್ತಮ ಪ್ರತಿಕ್ರಿಯೆ ಜನರಿಂದ ಬಂದಿದೆ . ಈಗಾಗಲೇ ಹಳೆ ಮೈಸೂರು ಭಾಗದಲ್ಲಿ ನಡೆಸಲಾಗುತ್ತದೆ. ಕೇಲವೇ ದಿನಗಳಲ್ಲಿ ಹೈದರಾಬಾದ್ …
Read More »ಹುಬ್ಬಳ್ಳಿಯ PVRನಲ್ಲಿ ವಿಜಯಾನಂದ ಸಿನಿಮಾ ವೀಕ್ಷಿಸಿದ ಗಣ್ಯರು: ವಿಜಯ ಸಂಕೇಶ್ವರರಿಗೆ ಸನ್ಮಾನ
ಹುಬ್ಬಳ್ಳಿ: ವಿಆರ್ಎಲ್ ಸಮೂಹ ಸಂಸ್ಥೆಗಳ ಚೇರ್ಮನ್ ಡಾ. ವಿಜಯ ಸಂಕೇಶ್ವರ ಅವರ ಜೀವನಾಧಾರಿತ ‘ವಿಜಯಾನಂದ’ ಸಿನಿಮಾ ಇಂದಿನಿಂದ ಬಿಡುಗಡೆಯಾಗಿದೆ. ವಾಣಿಜ್ಯ ನಗರಿ ಹುಬ್ಬಳ್ಳಿಯ ಪಿವಿಆರ್, ಅಪ್ಸರಾ ಹಾಗೂ ಸಿನಿಪೊಲೀಸ್ ಚಿತ್ರಮಂದಿರದಲ್ಲಿ ವಿಜಯಾನಂದ ಅದ್ಧೂರಿಯಾಗಿ ತೆರೆಕಂಡಿದೆ. ಪಿವಿಆರ್ ಸಿನಿಮಾದಲ್ಲಿ ಡಾ. ವಿಜಯ ಸಂಕೇಶ್ವರ ಅವರ ಅಭಿಮಾನಿಗಳು ಹಾಗೂ ಉದ್ಯಮಿಗಳಿಂದ ಶುಕ್ರವಾರ ಬೆಳಗ್ಗೆ ವಿಶೇಷ ಪ್ರದರ್ಶನ ಆಯೋಜಿಸಲಾಗಿತ್ತು. ಚಲನಚಿತ್ರ ಪ್ರದರ್ಶನದ ಮುಂಚೆ ಮಾಜಿ ಸಿಎಂ ಜಗದೀಶ ಶೆಟ್ಟರ್, ಮಾಜಿ ವಿಧಾನ ಪರಿಷತ್ ಸದಸ್ಯ ಬಸವರಾಜ …
Read More »ಕರ್ನಾಟಕ-ಮಹಾರಾಷ್ಟ್ರ ಬಸ್ ಸಂಚಾರ ಪುನರಾರಂಭ
ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಹಿನ್ನೆಲೆಯಲ್ಲಿ ಎರಡೂ ರಾಜ್ಯಗಳ ನಡುವೆ ಬಂದ್ ಆಗಿದ್ದ ಸಾರಿಗೆ ಬಸ್ ಸಂಚಾರ ಇಂದಿನಿಂದ ಪುನರಾರಂಭವಾಗಿದೆ. ಕರ್ನಾಟಕದ ಬೆಳಗಾವಿ ಗಡಿ ಹಾಗೂ ಪುಣೆಯಲ್ಲಿ ಮಹಾರಾಷ್ಟ್ರ ಹಾಗೂ ಕನ್ನಡ ಪರ ಸಂಘಟನೆಗಳ ಆಕ್ರೋಶ, ಎರಡೂ ರಾಜ್ಯಗಳ ಬಸ್, ಕಾರು ಸೇರಿದಂತೆ ವಾಹನಗಳ ಮೇಲೆ ಕಲ್ಲು ತೂರಾಟ, ಮಸಿ ಬಳಿದ ಪ್ರಕರಣಗಳ ಬೆನ್ನಲ್ಲೇ ಮುಂಜಾಗೃತಾ ಕ್ರಮವಾಗಿ ಮಹಾರಾಷ್ಟ್ರ ಹಾಗೂ ಬೆಳಗಾವಿ ನಡುವಿನ ಬಸ್ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು. ಬಸ್ ಗಳಿಲ್ಲದೇ …
Read More »86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ವೈರಲ್
ಹಾವೇರಿ: 86ನೇ ಅಖಿಲಾ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಆಹ್ವಾನ ಪ್ರತಿಕೆ ಇದೀಗ ಎಲ್ಲೆಡೆ ವೈರಲ್ ಆಗಿದೆ. ಜನವರಿ 6, 7, 8ರಂದು ಹಾವೇರಿಯಲ್ಲಿ ನಡೆಯಲಿರುವ ಸಮ್ಮೇಳನದ ಆಮಂತ್ರಣ ಪತ್ರಿಕೆಯು ಅಧಿಕೃತ ಬಿಡುಗಡೆ ಮುನ್ನವೇ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕನ್ನಡದ ಅತಿ ದೊಡ್ಡ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಸೋರಿಕೆ ಆಗಿದ್ದರು ಕನ್ನಡ ಸಾಹಿತ್ಯ ಪರಿಷತ್ತು ಸುಮ್ಮನೆ ಇದ್ದಾರೆ. ಈಗಾಗಲೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಭರ್ಜರಿ …
Read More »ಯಾವದೇ ಬೆದರಿಕೆಗೆ ಬಗ್ಗದೆ ಪ್ರಾಣ ಹೋದರು ಸರಿ ತಮ್ಮ ನಿಲುವಿಗೆ ಬದ್ಧರಾಗಿದದೇವೆ ಎಂದ ಅಕ್ಕಲಕೋಟ ಕನ್ನಡಿಗರು
ನಮ್ಮನ್ನೂ ಕರ್ನಾಟಕಕ್ಕೆ ಸೇರಿಸಿಕೊಳ್ಳಿ ಎಂದು ಮಹಾರಾಷ್ಟçಕ್ಕೆ ಮನವಿ ಸಲ್ಲಿಸಿ ಮಹಾರಾಷ್ಟçದ ಕೆಂಗಣ್ಣಿಗೆ ಗುರಿಯಾಗಿರುವ ಅಕ್ಕಲಕೋಟ ತಾಲೂಕಿನ ಕನ್ನಡಿಗರು ಯಾವದೇ ಬೆದರಿಕೆಗೆ ಬಗ್ಗದೆ ಪ್ರಾಣ ಹೋದರು ಸರಿ ತಮ್ಮ ನಿಲುವಿಗೆ ಬದ್ಧರಾಗಿದದೇವೆ ಎಂದು ಸ್ಪಷ್ಟಪಡಿಸಿದ್ದಾರೆ. ಅಭಿವೃದ್ಧಿ ವಂಚಿತ ಗ್ರಾಮಗಳ ಕನ್ನಡಿಗರು ಮಾಜಿ ಶಾಸಕರ ಸಮ್ಮುಖದಲ್ಲಿ ಅಕ್ಕಲಕೋಟ ತಾಲೂಕಿನ ತಡವಳ ಗ್ರಾಮದಲ್ಲಿ ಸಭೆ ಸೇರಿ ತಮ್ಮ ಹೋರಾಟವನ್ನು ತೀವ್ರಗೊಳಿಸಿದ್ದಾರೆ. ಕರ್ನಾಟಕಕ್ಕೆ ಸೇರಿಸಿ ಎಂದು ೧೧ ಗ್ರಾಮ ಪಂಚಾಯತಿಗಳು ಠರಾವು ಮಂಡಿಸಿದ ಬೆನ್ನಲ್ಲೇ ಚುನಾಯಿತ …
Read More »