ಬೆಳಗಾವಿ ಮಹಾನಗರ ಪಾಲಿಕೆ ಮಹಾಪೌರ ಉಪಮಹಾಪೌರ ಚುನಾವಣೆ ಜನೆವರಿ ತಿಂಗಳ ಮೊದಲ ಅಥವಾ ಎರಡನೆಯ ವಾರದಲ್ಲಿ ನಡೆಯಲಿವೆ ಎಂದು ಬೆಳಗಾವಿ ದಕ್ಷಿಣ ವಿಧಾನಸಭಾ ಮತಕ್ಷೇತ್ರದ ಶಾಸಕ ಅಭಯ ಪಾಟೀಲ್ ಹೇಳಿದರು. ಶುಕ್ರವಾರ ಮಹಾನಗರ ಪಾಲಿಕೆಯ ಸಭಾಗೃಹದಲ್ಲಿ ಕರೆಯಲಾಗಿದ್ದ ಸುದ್ದಿ ಗೋಷ್ಟಿಯಲ್ಲಿ ಮಾತನಾಡಿದ ಅವರು ಬೆಳಗಾವಿ ಕಲಬುರ್ಗಿ ಹುಬ್ಬಳ್ಳಿ -ಧಾರವಾಡ ಮಹಾನಗರ ಪಾಲಿಕೆಯ ಮಹಾಪೌರ ಉಪಮಹಾಪೌರ ಚುನಾವಣೆ ಏಕ ಕಾಲಕ್ಕೆ ನಡೆದಿದ್ದರೂ ಕೂಡ ಇದುವರೆಗೂ ಬೆಳಗಾವಿಗೆ ಮಹಾಪೌರ ಉಪಮಹಾಪೌರ ಚುನಾವಣೆ ನಡೆದಿಲ್ಲ …
Read More »Yearly Archives: 2022
ಸತ್ತು ಹೋಗಿರುವ M.E.S.ಗೆ ಮರು ಜೀವ ತುಂಬಲು ಮರಾಠಿ ಪುಂಡರಿಗೆ ಪುಷ್ಟಿ ಕೊಡಲಾಗುತ್ತಿದೆ: ಲಕ್ಷ್ಮಣ ಸವದಿ
ಸತ್ತು ಹೋಗಿರುವ ಎಮ್.ಇ.ಎಸ್ ಗೆ ಮರು ಜೀವ ತುಂಬಲು ಮರಾಠಿ ಪುಂಡರಿಗೆ ಪುಷ್ಟಿ ಕೊಡಲಾಗುತ್ತಿದೆ ಎಂದು ಮಾಜಿ ಉಪ ಮುಖ್ಯ ಮಂತ್ರಿ , ವಿಧಾನ ಪರಿಷತ್ ಸದಸ್ಯ ಲಕ್ಷ್ಮಣ ಸವದಿ ಹೇಳಿದರು. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಕರ್ನಾಟಕ ಮಹಾರಾಷ್ಟ್ರ ಗಡಿ ವಿಚಾರವಾಗಿ ಪ್ರತಿಕ್ರಿಯೆ ನೀಡಿದರು. ರಾಜಕೀಯ ಲಾಭಕ್ಕಾಗಿ ಗಡಿ ವಿವಾದವನ್ನು ಬಳಸಿಕೊಳ್ಳಲಾಗುತ್ತಿದೆ ಎಂದ ಅವರು ಈಗಾಗಲೇ ಗಡಿ ವಿವಾದ ಸುಪ್ರೀಂ ಕೋರ್ಟ್ ಅಂಗಳದಲ್ಲಿದೆ. ಮರಾಠ ಸಮಾಜ ಭಾರತೀಯ ಜನತಾ ಪಕ್ಷದ …
Read More »ಬೆಳ್ಳಂಬೆಳಗ್ಗೆ ಪೊಲೀಸರ ಕಾರ್ಯಾಚರಣೆ: ಅನುಮಾನಾಸ್ಪದ ವ್ಯಕ್ತಿಗಳ ಮನೆಗಳ ಮೇಲೆ ಪೊಲೀಸರ ದಾಳಿ: ಮಾರಕಾಸ್ತ್ರಗಳ ಪರಿಶೀಲನೆ
ಗದಗ: ಡಿವೈಎಸ್ಪಿ ಶಿವಾನಂದ ಪವಾಡಶೆಟ್ಟರ ನೇತೃತ್ವದಲ್ಲಿ ಪೊಲೀಸರು ಶುಕ್ರವಾರ(ಡಿ.9) ನಗರದ ವಿವಿಧೆಡೆ ಅನುಮಾನಾಸ್ಪದ ವ್ಯಕ್ತಿಗಳ ಮನೆಗಳ ಮೇಲೆ ದಾಳಿ ನಡೆಸಿ ಮಾರಕಾಸ್ತ್ರಗಳ ಪರಿಶೀಲನೆ ನಡೆಸಿದರು. ಗದಗ-ಬೆಟಗೇರಿ ಅವಳಿ ನಗರದ ವಿವಿಧೆಡೆ ಚಾಕು ಇರಿತ ಪ್ರಕರಣ ಸೇರಿ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ಪ್ರಕರಣಗಳು ದಾಖಲಾಗಿದ್ದವು. ಈ ಹಿನ್ನೆಲೆಯಲ್ಲಿ ನಗರದ ಕಮ್ಮಾರಸಾಲು, ರಂಗನವಾಡ, ತೆಗ್ಗಿನ ಪ್ಲಾಟ್ ಸೇರಿ ಹಲವು ಪ್ರದೇಶಗಳ ಮನೆಗಳ ಮೇಲೆ ಪೊಲೀಸರು ಮಾರಕಾಸ್ತ್ರಗಳನ್ನು ಪರಿಶೀಲಿಸಿದರು. ನಗರದಲ್ಲಿ ಕಳೆದೊಂದು ವಾರದಲ್ಲಿ ಎರಡು …
Read More »ಶಾಲಾ ಸಮಯಕ್ಕೆ ಬಸ್ ಸೌಲಭ್ಯ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ
ವಿಜಯಪುರ: ಸೂಕ್ತ ಬಸ್ ಸೌಲಭ್ಯಕ್ಕೆ ಆಗ್ರಹಿಸಿ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಜಿಲ್ಲೆಯ ಇಂಡಿ ತಾಲೂಕಿನ ಅಂಜುಟಗಿ ಗ್ರಾಮದಲ್ಲಿ ಸಾರಿಗೆ ಸಂಸ್ಥೆ ಬಸ್ ಸಂಚಾರ ತಡೆದು ಪ್ರತಿಭಟನೆ ನಡೆಸುತ್ತಿದ್ದಾರೆ. ಸರಿಯಾದ ಸಮಯಕ್ಕೆ ಬಸ್ ಬಾರದ ಕಾರಣ ಶಾಲಾ-ಕಾಲೇಜು ತರಗತಿಗಳಿಗೆ ಹಾಜರಾಗಲು ತೊಂದರೆಯಾಗುತ್ತಿದೆ. ಈ ಸಮಸ್ಯೆ ಪರಿಹಾರಕ್ಕೆ ಸಾರಿಗೆ ಸಂಸ್ಥೆಯ ಆಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರೂ ಉಪಯೋಗವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಾಲಾ ಕಾಲೇಜು ವೇಳೆಗೆ ಬಸ್ ಸೌಲಭ್ಯ ಬೇಕೆಂದು ಬೇಡಿಕೆ ಮುಂದಿಟ್ಟುಕೊಂಡು ಇಂಡಿ, ಝಳಕಿಯಲ್ಲಿರುವ …
Read More »ಗ್ರಾಮ ಪಂಚಾಯತಿಗಳಲ್ಲಿ ಖಾಲಿ ಇರುವ (ವ್ಹಿ. ಆರ್. ಡಬ್ಲ್ಯೂ.) ಹುದ್ದೆ ಆಹ್ವಾನ
ಬೆಳಗಾವಿ: ಖಾನಾಪುರ ತಾಲೂಕಿನ ವ್ಯಾಪ್ತಿಯ ಗ್ರಾಮ ಪಂಚಾಯತಿಗಳಲ್ಲಿ ಖಾಲಿ ಇರುವ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ (ವ್ಹಿ. ಆರ್. ಡಬ್ಲ್ಯೂ.) ಹುದ್ದೆಗಳನ್ನು ಇಲಾಖೆಯ ಗ್ರಾಮೀಣ ಪುನರ್ವಸತಿ ಯೋಜನೆಯಡಿ ಮಾಸಿಕ ರೂ.9,000 ಗಳ ಗೌರವ ಧನ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಆಯಾ ಗ್ರಾಮ ಪಂಚಾಯ್ತಿಗಳ ವ್ಯಾಪ್ತಿಯ ಅರ್ಹ ವಿಕಲಚೇತನ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಷರತ್ತುಗಳು: ಅರ್ಜಿದಾರರು ವಿಕಲಚೇತನರಿದ್ದು, ಕನಿಷ್ಟ 40% ಅಥವಾ 40% ಕ್ಕಿಂತ ಹೆಚ್ಚಿನ ವಿಕಲತೆ ಪ್ರಮಾಣ ಹೊಂದಿರತಕ್ಕದ್ದು, ಅರ್ಜಿದಾರರು ಆಯಾ ಗ್ರಾಮ …
Read More »ಫಲಕದಲ್ಲಿ ಕಾಮಗಾರಿ ಸಿಸಿ ರಸ್ತೆ ಮಾಯ ಕಳಪೆ ಚರಂಡಿ ಕಾಮಗಾರಿ ಪಂಚಾಯತರಾಜ ಇಂಜಿನಿಯರಿಂಗನ ಬ್ರಹ್ಮಾಂಡ ಭ್ರಷ್ಟಾಚಾರ
ಬೆಳಗಾವಿ: ಫಲಕದಲ್ಲಿ ಕಾಮಗಾರಿ ಸಿಸಿ ರಸ್ತೆ ಮಾಯ ಕಳಪೆ ಚರಂಡಿ ಕಾಮಗಾರಿ ಪಂಚಾಯತರಾಜ ಇಂಜಿನಿಯರಿಂಗನ ಬ್ರಹ್ಮಾಂಡ ಭ್ರಷ್ಟಾಚಾರ ಬೆಳಗಾವಿ ನಗರದ ಕಂಗ್ರಾಳಿ ಕೆ ಎಚ್ ಗ್ರಾಮ ಪಂಚಾಯತ ವ್ಯಾಪ್ತಿಯ ವಾರ್ಡ ನಂಬರ್ 12 ರ ಆಶ್ರಯ ಕಾಲೋನಿ ಸಾರಥಿ ನಗರದಲ್ಲಿ ಕಳಪೆ ಚರಂಡಿ ಕಾಮಗಾರಿ ಮಾಡಿದ್ದು ಬಿಟ್ಟರೆ ಬೇರೆ ಯಾವೂದೇ ಸಿಸಿ ರಸ್ತೆ ಮಾಡದೆ ಕಾಮಗಾರಿ ನಡೆಯದೆ ನಿನ್ನೇ ತಡರಾತ್ರಿ ರಾತ್ರೊ ರಾತ್ರಿ ಈ ಬೋರ್ಡು ಹಾಕಿ ಬಿಲ್ ತೆಗೆದುಕೊಳ್ಳಲು …
Read More »ವಿಜಯ್ ಸಂಕೇಶ್ವರರ ಛಲದ ಕತೆ ‘ವಿಜಯಾನಂದ’
ಕನ್ನಡದಲ್ಲಿ ಬಯೋಪಿಕ್ ಸಿನಿಮಾಗಳ ಕೊರತೆಯಿದೆ ಎಂಬ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲಿಯೇ ಉದ್ಯಮಿ, ರಾಜಕಾರಣಿ, ಪದ್ಮಶ್ರೀ ವಿಜಯ್ ಸಂಕೇಶ್ವರ್ ಅವರ ಜೀವನ ಆಧರಿಸಿದ ಸಿನಿಮಾ ‘ವಿಜಯಾನಂದ’ ತೆರೆಗೆ ಬಂದಿದೆ. ಸಿನಿಮಾಕ್ಕೆ ಅವರ ಪುತ್ರ ಆನಂದ್ ಸಂಕೇಶ್ವರ್ ಅವರದ್ದೇ ಬಂಡವಾಳ. ಥಳ ಮಟ್ಟದಿಂದ ಆರಂಭಸಿ ದೊಡ್ಡ ಉದ್ಯಮ ಕಟ್ಟಿದ ಕೆಲವೇ ಕರ್ನಾಟಕದ ಯಶಸ್ವಿ ಉದ್ಯಮಿಗಳಲ್ಲೊಬ್ಬರು ವಿಜಯ್ ಸಂಕೇಶ್ವರ್. ಈ ಹಿಂದೆ ರಮೇಶ್ ಅರವಿಂದ್‌ರ ‘ವೀಕೆಂಡ್ ವಿತ್ ರಮೇಶ್’ ಕಾರ್ಯಕ್ರಮದಲ್ಲಿ ತಮ್ಮ ಜೀವನದ …
Read More »ಅಖಿಲ್ ಶವ ಹೊರಕ್ಕೆ; ಬಂಧಿತರ ಸಂಖ್ಯೆ 7ಕ್ಕೆ
ಹುಬ್ಬಳ್ಳಿ: ತಂದೆಯೇ ಸುಪಾರಿ ಕೊಟ್ಟು ಮಗನನ್ನು ಕೊಲೆ ಮಾಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಕೊಲೆಯಾದ ಅಖಿಲ್ ಮಹಾಜನ ಶೇಠ್ (26) ಶವವು ಕಲಘಟಗಿ ತಾಲ್ಲೂಕಿನ ದೇವಿಕೊಪ್ಪ ಅರಣ್ಯ ಪ್ರದೇಶದ ಪಕ್ಕದ ಜಮೀನಿನಲ್ಲಿ ಬುಧವಾರ ಪತ್ತೆಯಾಗಿದೆ. ಹಂತಕರು ನೀಡಿದ ಮಾಹಿತಿ ಮೇರೆಗೆ, ಧಾರವಾಡದ ಉಪ ವಿಭಾಗಾಧಿಕಾರಿ ಉಪಸ್ಥಿತಿಯಲ್ಲಿ ಬೆಳಿಗ್ಗೆ ಶವ ಹೊರಕ್ಕೆ ತೆಗೆಯಲಾಗಿದೆ. ಕಿಮ್ಸ್ ವೈದ್ಯರು ಹಾಗೂ ವಿಧಿ ವಿಜ್ಞಾನ ಪ್ರಯೋಗಾಲಯದ ಅಧಿಕಾರಿಗಳ ಸಮ್ಮುಖದಲ್ಲಿ ಪಂಚನಾಮೆ ಹಾಗೂ ಮರಣೋತ್ತರ ಪರೀಕ್ಷೆ ನಡೆಸಿ, ಕುಟುಂಬದವರಿಗೆ …
Read More »ದೇವದಾಸಿಯರ ಮಕ್ಕಳಿಗೆ ತಂದೆ ಹೆಸರು ಕಡ್ಡಾಯವಲ್ಲ ಎಂದು ಆದೇಶ ಹೊರಡಿಸಲು ಸರ್ಕಾರ ನಿರ್ಧಾರ
ಬೆಂಗಳೂರು: ‘ದೇವದಾಸಿಯರ ಮಕ್ಕಳು ಸರ್ಕಾರಿ ಸೌಲಭ್ಯ ಪಡೆಯಲು ತಂದೆಯ ಹೆಸರನ್ನು ದಾಖಲಿಸುವುದು ಕಡ್ಡಾಯವಲ್ಲ, ಅದು ಐಚ್ಚಿಕವಾಗಿರುತ್ತದೆ.’ ಹೀಗೆಂದು ಆದೇಶ ಹೊರಡಿಸಲು ಸರ್ಕಾರ ನಿರ್ಧರಿಸಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಹಾಲಪ್ಪ ಆಚಾರ್, ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಧ್ಯಕ್ಷತೆಯಲ್ಲಿ ದೇವದಾಸಿ ಮಹಿಳೆಯರ ಮತ್ತು ಮಕ್ಕಳ ಕುಂದು ಕೊರತೆ ಪರಿಹಾರ ಸಂಬಂಧ ನಡೆದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಶಾಲಾ-ಕಾಲೇಜುಗಳಿಗೆ ಪ್ರವೇಶ ಪಡೆಯುವಾಗ, ಜಾತಿ ಆದಾಯ ಪ್ರಮಾಣ …
Read More »ಕೇಂದ್ರದಿಂದ ಸಿಹಿ ಸುದ್ದಿ: 50 ಸಾವಿರ ರೂ. ಸಾಲ ಸೌಲಭ್ಯದ ಪಿಎಂ ಸ್ವನಿಧಿ ಯೋಜನೆ 2 ವರ್ಷ ವಿಸ್ತರಣೆ
ನವದೆಹಲಿ: ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಸ್ವನಿಧಿ ಯೋಜನೆಯನ್ನು 2024ರ ಡಿಸೆಂಬರ್ ವರೆಗೆ ವಿಸ್ತರಿಸಲಾಗಿದೆ ಎಂದು ಕೇಂದ್ರ ವಸತಿ ಹಾಗೂ ನಗರಾಭಿವೃದ್ಧಿ ಸಚಿವ ಹರ್ ದೀಪ್ ಸಿಂಗ್ ಪುರಿ ತಿಳಿಸಿದ್ದಾರೆ. ಲೋಕಸಭೆಯಲ್ಲಿ ಸಂಸದರೊಬ್ಬರ ಪ್ರಶ್ನೆಗೆ ನೀಡಿದ ಲಿಖಿತ ಉತ್ತರದಲ್ಲಿ ಈ ಮಾಹಿತಿ ನೀಡಿದ ಸಚಿವರು, ಬೀದಿ ಬದಿ ವ್ಯಾಪಾರಿಗಳ ಅನುಕೂಲಕ್ಕಾಗಿ ಕೇಂದ್ರ ಸರ್ಕಾರ ರೂಪಿಸಿದ ಪ್ರಧಾನಮಂತ್ರಿ ಸ್ವನಿಧಿ ಯೋಜನೆ ಎರಡು ವರ್ಷ ವಿಸ್ತರಿಸಲಾಗಿದೆ ಎಂದರು. ಬೀದಿ ಬದಿ ವ್ಯಾಪಾರಿಗಳನ್ನು ಸ್ವಾವಲಂಬಿಗೊಳಿಸುವ …
Read More »