ಗೋಕಾಕ ತಾಲೂಕಿನ ಹಿರೇನಂದಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿನಿ ಅಪೇಕ್ಷಾ ಗುರುಪ್ರಸಾದ್ ಸಾಂಗ್ಲಿಕರ ಅವರು ರಾಜ್ಯಕ್ಕೆ ನಾಲ್ಕನೇ ಸ್ಥಾನ ಹಾಗೂ ವಲಯಕ್ಕೆ ಎರಡನೇ ಸ್ಥಾನ ಪಡೆದಿದ್ದಾರೆ. ಕನ್ನಡದಲ್ಲಿ 125 ಕ್ಕೆ 124 ಅಂಕ, ಇಂಗ್ಲಿಷ್, ಹಿಂದಿ, ಸಮಾಜ- ವಿಜ್ಞಾನದಲ್ಲಿ ತಲಾ 100 ಕ್ಕೆ ನೂರರಷ್ಟು ಅಂಕ, ಗಣಿತ ಹಾಗೂ ವಿಜ್ಞಾನದಲ್ಲಿ 99 ರಷ್ಟು ಅಂಕ , ಒಟ್ಟು 625 ಅಂಕಗಳಿಗೆ 622 ಅಂಕ ಪಡೆದು ಶೇಕಡಾ …
Read More »Yearly Archives: 2022
ಕೂಲಿ ಮಾಡಿ ಜೀವನ ಸಾಗಿಸುವ ಕುಟುಂಬದ ಶಿಲ್ಪಾ ರಾಜು ಪರ್ನಾಕರ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 614 ಅಂಕ ಪಡೆದು ಸಾಧನೆ ತೋರಿದ್ದಾರೆ.
ತೆಲಸಂಗ (ಬೆಳಗಾವಿ ಜಿಲ್ಲೆ): ಇಲ್ಲಿನ ಕೃಷಿ ಜಮೀನುಗಳಲ್ಲಿ ಕೂಲಿ ಮಾಡಿ ಜೀವನ ಸಾಗಿಸುವ ಕುಟುಂಬದ ಶಿಲ್ಪಾ ರಾಜು ಪರ್ನಾಕರ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 614 ಅಂಕ ಪಡೆದು ಸಾಧನೆ ತೋರಿದ್ದಾರೆ. ಓದು-ಬರಹ ಬಾರದ ತಂದೆ-ತಾಯಿಗೆ ಹೆಮ್ಮೆಯ ಭಾವ ನೀಡಿದ್ದಾರೆ. ಪತ್ರಾಸಿನ ಮನೆ, ಮನೆಯ ಅಂಗಳದಲ್ಲಿ ಜಾನವಾರು, ನಿತ್ಯ ಹೊಲದ ಕೆಲಸ ಮತ್ತು ಕೂಲಿ ಮಾಡಿಕೊಂಡೆ ಬದುಕಿನ ಬಂಡಿ ಜಗ್ಗುವ ಅವಿಭಕ್ತ ಕುಂಟುಂಬವಿದು. ಕೊರತೆಗಳ ನೆಪವನ್ನು ಬದಿಗಿಟ್ಟು ಸಾಧನೆ ತೋರಿದ್ದಾರೆ. ಗ್ರಾಮದ ಅಂಬೇಡ್ಕರ್ …
Read More »ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ನಗರದ ಶ್ರವಣದೋಷವುಳ್ಳ ಮಕ್ಕಳ ಸರ್ಕಾರಿ ಶಾಲೆ ಉತ್ತಮ ಫಲಿತಾಂಶ ಗಳಿಸಿದೆ.
ಬೆಳಗಾವಿ: ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ನಗರದ ಶ್ರವಣದೋಷವುಳ್ಳ ಮಕ್ಕಳ ಸರ್ಕಾರಿ ಶಾಲೆ ಉತ್ತಮ ಫಲಿತಾಂಶ ಗಳಿಸಿದೆ. 11 ವಿದ್ಯಾರ್ಥಿನಿಯರಲ್ಲಿ 8 ಮಂದಿ ‘ಎ’ ಗ್ರೇಡ್, ಇಬ್ಬರು ‘ಬಿ’ ಗ್ರೇಡ್ ಮತ್ತು ಒಬ್ಬರು ‘ಸಿ’ ಗ್ರೇಡ್ ಪಡೆದು ಉತ್ತೀರ್ಣರಾಗಿದ್ದಾರೆ. ಪ್ರತಿಭಾ ಹಣಮಂತ ಹೊನ್ನಾಪುರ ಶೇ 87ರಷ್ಟು, ಪವಿತ್ರಾ ಪರಪ್ಪ ಕಾಪ್ಸೆ ಶೇ 86ರಷ್ಟು ಹಾಗೂ ರುದ್ರಾಕ್ಷಿ ಸಂಗೊಳ್ಳಿ ಶೇ 85ರಷ್ಟು ಅಂಕಗಳನ್ನು ಪಡೆದು ಕ್ರಮವಾಗಿ ಮೊದಲ, ದ್ವಿತೀಯ ಹಾಗೂ ತೃತೀಯ …
Read More »ಉಂಡ ಮನೆಗೆ ದ್ರೋಹ ಬಗೆಯುವುದಕ್ಕೆ ಸೂಕ್ತ ಉದಾಹರಣೆ ಎಂದರೆ ಅದು ಸಿದ್ದರಾಮಯ್ಯ’ ಎಂದ ಬಿಜೆಪಿ
ಬೆಂಗಳೂರು: ‘ಉಂಡ ಮನೆಗೆ ದ್ರೋಹ ಬಗೆಯುವುದಕ್ಕೆ ಸೂಕ್ತ ಉದಾಹರಣೆ ಎಂದರೆ ಅದು ಸಿದ್ದರಾಮಯ್ಯ’ ಎಂದು ಬಿಜೆಪಿ ಟೀಕಿಸಿದೆ. ಮುಂಬರುವ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕ ಜಿ. ಪರಮೇಶ್ವರ ವಿರುದ್ಧ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಬೆಂಬಲಿಗರು ಕೆಲಸ ಮಾಡುತ್ತಿದ್ದಾರೆ ಎಂಬ ವರದಿಯೊಂದನ್ನು ಉಲ್ಲೇಖಿಸಿ ಬಿಜೆಪಿಯ ರಾಜ್ಯ ಘಟಕವು ಸರಣಿ ಟ್ವೀಟ್ ಮಾಡಿದ್ದು, ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದೆ. ‘ರಾಜಕಾರಣದಲ್ಲಿ ನಂಬಿಕೆದ್ರೋಹಿಗಳು ಹಾಗೂ ಬೆನ್ನಿಗೆ ಚೂರಿ ಹಾಕುವ ವ್ಯಕ್ತಿತ್ವವನ್ನು ಪ್ರತಿಬಿಂಬಿಸುವ ಕೆಲವು …
Read More »ಭ್ರಷ್ಟ ಬಿಜೆಪಿ ನಾಯಕರ ಆಸ್ತಿ ಹರಾಜು ಹಾಕಿ, ಆ ಹಣದಿಂದ ಮಳೆಹಾನಿ ಸಂತ್ರಸ್ತರಿಗೆ ಪರಿಹಾರ ಕೊಡಬೇಕು’ : A.A.P. ಮೋಹನ್ ದಾಸರಿ
ಬೆಂಗಳೂರು: ‘ಭ್ರಷ್ಟ ಬಿಜೆಪಿ ನಾಯಕರ ಆಸ್ತಿ ಹರಾಜು ಹಾಕಿ, ಆ ಹಣದಿಂದ ಮಳೆಹಾನಿ ಸಂತ್ರಸ್ತರಿಗೆ ಪರಿಹಾರ ಕೊಡಬೇಕು’ ಎಂದು ಆಮ್ ಆದ್ಮಿ ಪಕ್ಷದ (ಎಎಪಿ) ಬೆಂಗಳೂರು ಘಟಕದ ಅಧ್ಯಕ್ಷ ಮೋಹನ್ ದಾಸರಿ ಹೇಳಿದರು. ಮಾಧ್ಯಮಗಳ ಜತೆ ಬುಧವಾರ ಮಾತನಾಡಿದ ಅವರು,’ಬೆಂಗಳೂರಿನ ಜನ ಮಳೆಗೆ ತತ್ತರಿಸಿ, ಇಬ್ಬರು ಪ್ರಾಣ ಕಳೆದುಕೊಂಡಿರುವುದಕ್ಕೆ ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಹಾಗೂ ಬೇಜವಾಬ್ದಾರಿಯೇ ಕಾರಣ’ ಎಂದು ದೂರಿದರು. ‘ಬಿಜೆಪಿ ಸರ್ಕಾರ ರಾಜಕಾಲುವೆ ಹೆಸರಿನಲ್ಲಿ ಸಾವಿರಾರು ಕೋಟಿ …
Read More »KGF2 ಸಿನಿಮಾ ವೀಕ್ಷಣೆ ವೇಳೆ ಶೂಟೌಟ್ ಮಾಡಿ ಪರಾರಿಯಾಗಿದ್ದವನನ್ನು ಹಾವೇರಿ ಜಿಲ್ಲಾ ಪೊಲೀಸರು ಹೆಡೆಮುರಿಕಟ್ಟಿದ್ದಾರೆ.
ಹಾವೇರಿ: ಕಳೆದ ಏಪ್ರಿಲ್ 19 ರಂದು ಹಾವೇರಿ ಜಿಲ್ಲೆಯ ಶಿಗ್ಗಾವಿ ಪಟ್ಟಣದ ರಾಜಶ್ರೀ ಚಿತ್ರಮಂದಿರದಲ್ಲಿ ಯುವಕನೊಬ್ಬನ ಮೇಲೆ ಶೂಟೌಟ್ ಮಾಡಿ ಪರಾರಿಯಾಗಿದ್ದವನನ್ನು ಹಾವೇರಿ ಜಿಲ್ಲಾ ಪೊಲೀಸರು ಅಂತೂ ಹೆಡೆಮುರಿಕಟ್ಟಿದ್ದಾರೆ. ಬಂಧಿತನನ್ನು ಶಿಗ್ಗಾವಿ ಧಖನಿ ಓಣಿಯ ಮಂಜುನಾಥ್ ಶಾಂತಪ್ಪ ಪಾಟೀಲ ಎಂದು ಗುರುತಿಸಲಾಗಿದೆ. ಗುರುವಾರ ನಡೆದ ಸುದ್ದಿಗೋಷ್ಟಿಯಲ್ಲಿ ಎಸ್‌ಪಿ ಹನುಮಂತರಾಯ ಈ ಮಾಹಿತಿ ತಿಳಿಸಿದರು. ಶಿಗ್ಗಾವಿ ತಾಲೂಕಿನ ಮುಗಳಿ ಗ್ರಾಮದ ವಸಂತಕುಮಾರ ಶಿವಪುರ ಹಾಗೂ ಆತನ ನಾಲ್ವರು ಸ್ನೇಹಿತರು ಏ.19 ರಂದು …
Read More »ರಾಘವೇಂದ್ರ ಚನ್ನಣ್ಣನವರ ವಿರುದ್ಧ ಎಫ್‌ಐಆರ್
ಬೆಂಗಳೂರು : ವರದಕ್ಷಿಣೆ ತರುವಂತೆ ಪೀಡಿಸಿ ಪತ್ನಿಗೆ ಮಾನಸಿಕ ಹಾಗೂ ದೈಹಿಕವಾಗಿ ಕಿರುಕುಳ ನೀಡುತ್ತಿದ್ದ ಆರೋಪದಡಿ ರಾಘವೇಂದ್ರ ಚನ್ನಣ್ಣನವರ ಹಾಗೂ ಇತರರ ವಿರುದ್ಧ ಚಂದ್ರಾಲೇಔಟ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ‘ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ನಿವಾಸಿ ರೋಜಾ (26) ಇತ್ತೀಚೆಗೆ ದೂರು ನೀಡಿದ್ದಾರೆ. ಆರೋಪಿಗಳಾದ ರಾಘವೇಂದ್ರ ಚನ್ನಣ್ಣನವರ ಹಾಗೂ ಅವರ ಸಂಬಂಧಿ ಹನುಮಂತ ತಿಮ್ಮಾಪುರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸ್ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದರು. ವರದಕ್ಷಿಣೆ ಕಿರುಕುಳ (ಐಪಿಸಿ …
Read More »ಪಿಎಸ್‌ಐ ನೇಮಕಾತಿ ಅಕ್ರಮ ಸೂಪರಿಂಟೆಂಡೆಂಟ್ ಮಂಜುನಾಥ್ ರನ್ನ ಬಂಧಿಸಿದ C.I.D.
ಬೆಂಗಳೂರು: ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪದಡಿ ರಾಜ್ಯ ಪೊಲೀಸ್ ಮಹಾನಿರ್ದೇಶಕ (ಡಿಜಿ-ಐಜಿಪಿ) ಕಚೇರಿ ಸೂಪರಿಂಟೆಂಡೆಂಟ್ ಮಂಜುನಾಥ್ ಅವರನ್ನು ಸಿಐಡಿ ಪೊಲೀಸರು ಇತ್ತೀಚೆಗೆ ಬಂಧಿಸಿದ್ದು, ಹೆಚ್ಚಿನ ವಿಚಾರಣೆಗಾಗಿ ಮೇ 23ರವರೆಗೆ ಕಸ್ಟಡಿಗೆ ಪಡೆದುಕೊಂಡಿದ್ದಾರೆ. ‘ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿರುವ ಪೊಲೀಸ್ ಪ್ರಧಾನ ಕಚೇರಿಯ ವಿಭಾಗವೊಂದರಲ್ಲಿ ಮಂಜುನಾಥ್ ಕೆಲಸ ಮಾಡುತ್ತಿದ್ದ. ಪೊಲೀಸ್ ನೇಮಕಾತಿ ವಿಭಾಗದ ನೌಕರರ ಜೊತೆ ಒಡನಾವಿಟ್ಟುಕೊಂಡು ಅಕ್ರಮದಲ್ಲಿ ಭಾಗಿಯಾಗಿದ್ದ’ ಎಂದು ಸಿಐಡಿ ಮೂಲಗಳು ಹೇಳಿವೆ. ‘ಪಿಎಸ್‌ಐ ಹುದ್ದೆಗೆ ಅಕ್ರಮವಾಗಿ …
Read More »ರಾಜ್ಯದ ಹಲವೆಡೆ ಧಾರಾಕಾರ ಮಳೆ: ಮೂರು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ
ಬೆಂಗಳೂರು/ ಮೈಸೂರು: ರಾಜ್ಯದ ಹಲವೆಡೆ ಗುರುವಾರವೂ ಧಾರಾಕಾರ ಮಳೆ ಮುಂದುವರಿದಿದ್ದು, ವಿವಿಧೆಡೆ ಜನ ಜೀವನ ಅಸ್ತವ್ಯಸ್ತವಾಗಿದೆ. ಕೆಲವೆಡೆ ಕೆರೆ ಏರಿಗಳು ಒಡೆದಿದ್ದು, ರಸ್ತೆ ಸಂಪರ್ಕ ಕಡಿತಗೊಂಡಿವೆ. ಕೃಷಿ ಜಮೀನಿನಲ್ಲಿ ನೀರು ನಿಂತು ಬೆಳೆಗಳು ಕೊಳೆಯಲಾರಂಭಿಸಿವೆ. ಮಡಿಕೇರಿ- ಚಟ್ಟಳ್ಳಿ ರಸ್ತೆ ಬದಿಯ ನಾಲ್ಕು ಸ್ಥಳದಲ್ಲಿ ಮಣ್ಣು ಕುಸಿದು ಅಪಾಯದ ಮುನ್ಸೂಚನೆ ನೀಡುತ್ತಿದೆ. ಸಿಡಿಲು ಬಡಿದು ಬೀದರ್ ತಾಲ್ಲೂಕಿನ ಚಿಮಕೋಡ ಗ್ರಾಮದ ರೈತ ಮಹಿಳೆ ವಿದ್ಯಾವತಿ ನರಸಪ್ಪ ಟೊಳ್ಳೆ (52) ಮತ್ತು ಯಾದಗಿರಿ ಜಿಲ್ಲೆಯ …
Read More »ಸಹಾಯಕ ಪ್ರಾಧ್ಯಾಪಕರ ನೇಮಕ ‘ಒಎಂಆರ್’ ತಿದ್ದಿ ಅಕ್ರಮ ?
ಬೆಂಗಳೂರು: ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಖಾಲಿ ಇರುವ 1,242 ಸಹಾಯಕ ಪ್ರಾಧ್ಯಾಪಕರ ನೇಮಕಾತಿಯಲ್ಲೂ ‘ಒಎಂಆರ್’ ತಿದ್ದಿ ಅಕ್ರಮ ಎಸಗಿರುವ ಸಂಶಯ ವ್ಯಕ್ತವಾಗಿದ್ದು, ಈ ಬಗ್ಗೆ ಕೆಲವು ಮಾಹಿತಿ ಕೋರಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ (ಕೆಇಎ) ಸಿಸಿಬಿ ಪೊಲೀಸರು ಪತ್ರ ಬರೆದಿದ್ದಾರೆ. ಇಬ್ಬರ ಮೇಲೆ ಅನುಮಾನ: ‘ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆ ಬರೆದಿದ್ದ ಇಬ್ಬರು ಅಭ್ಯರ್ಥಿಗಳ ಒಎಂಆರ್ ಪ್ರತಿಯಲ್ಲಿ ವ್ಯತ್ಯಾಸ ಇರುವ ಮಾಹಿತಿ ಇದೆ. ಆ ಅಭ್ಯರ್ಥಿಗಳ ಒಎಂಆರ್ ಪ್ರತಿಗಳನ್ನು ನೀಡುವಂತೆ …
Read More »
Laxmi News 24×7