Breaking News

Yearly Archives: 2022

ಯತ್ನಾಳ್ ಹೇಳಿಕೆ ಹಿಂದೆ ಆರ್ ಎಸ್‌ಎಸ್ ಬೆಂಬಲವಿದೆ: ಪ್ರಕಾಶ್ ರಾಠೋಡ್

ವಿಜಯಪುರ : ಮುಖ್ಯಮಂತ್ರಿ ಆಗಲು 2500 ಕೋಟಿ ರೂ,ಮಂತ್ರಿಯಾಗಲು ನೂರು ಕೋಟಿ ರೂ. ಕೊಡಬೇಕೆಂದು ಆಡಳಿತ ಪಕ್ಷದ ಶಾಸಕ ಯತ್ನಾಳ್ ಅವರೇ ಹೇಳಿದ್ದಾರೆ. ಈ ಹಣ ಕೇಳಿದ್ದು ಯಾರಿಗೆ, ಯಾರು ಯಾರಿಗೆ ಕೊಟ್ಟದ್ದು ಎಂದು ಹೆಸರು ಬಹಿರಂಗ ಪಡಿಸಬೇಕು. ಇಲ್ಲವಾದಲ್ಲಿ ಶಾಸಕ ಯತ್ನಾಳ್ ಅವರನ್ನು ಬಂಧಿಸುವಂತೆ ಮೇಲ್ಮನೆ ಪ್ರತಿಪಕ್ಷದ ಮುಖ್ಯ ಸಚೇತಕ ಪ್ರಕಾಶ ರಾಠೋಡ್ ಆಗ್ರಹಿಸಿದರು. ಭಾನುವಾರ ನಗರದಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಈ ಆಗ್ರಹ ಮಾಡಿದ ರಾಠೋಡ, …

Read More »

ಶಿವಮೊಗ್ಗದ ಗಲಭೆ, ಡಿಜೆ ಹಳ್ಳಿ ಕೆಜಿ ಹಳ್ಳಿ ಗಲಭೆ ಹಿಂದೆ ಸಿದ್ದರಾಮಯ್ಯ ಇದ್ದಾರೆ:ನಳಿನ್ ಕುಮಾರ್ ಕಟೀಲ್

ಬೆಂಗಳೂರು: ಸಿದ್ದರಾಮಯ್ಯ ಡ್ರಗ್ಸ್ ಹಣದಲ್ಲಿ ಸರ್ಕಾರ ನಡೆಸಿದರು.ನಮ್ಮ ಸರ್ಕಾರ ಬಂದು ಡ್ರಗ್ಸ್ ಮುಕ್ತ ಕರ್ನಾಟಕ ಮಾಡಿತು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿಕೆ ನೀಡಿದ್ದಾರೆ. ಬಿಜೆಪಿ ಕಚೇರಿಯಲ್ಲಿ ಭಾನುವಾರ ಯುವ ಮೋರ್ಚಾ ಕಾರ್ಯಕಾರಿಣಿಯಲ್ಲಿ ಮಾತನಾಡಿದ ಅವರು, ಗಾಂಧಿಯವರು ಸ್ವಾತಂತ್ರ್ಯ ನಂತರ ಭಾರತ ರಾಮರಾಜ್ಯ ಆಗಬೇಕು ಅಂದರು. ಗಾಂಧಿ ಸ್ವಾತಂತ್ರ್ಯದ ನಂತರದ ಭಾರತ ಜಾತ್ಯಾತೀತ ಆಗಬೇಕು ಅನ್ನಲಿಲ್ಲ. ಭಾರತ ರಾಮರಾಜ್ಯ ಆಗಲು ಪ್ರತೀ ವ್ಯಕ್ತಿ ರಾಮ ಆಗಬೇಕು. ವ್ಯಕ್ತಿ ನಿರ್ಮಾಣದಿಂದ …

Read More »

ಹರಪನಹಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ನಾನು ಒಬ್ಬ ಪ್ರಬಲ ಆಕಾಂಕ್ಷಿ: ಐಗೋಳ ಚಿದಾನಂದ

ಹರಪನಹಳ್ಳಿ: ಹರಪನಹಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ನಾನು ಒಬ್ಬ ಪ್ರಬಲ ಆಕಾಂಕ್ಷಿಯಾಗಿದ್ದು, ಪಕ್ಷ ಅವಕಾಶ ನೀಡಿದರೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದು ಹಡಗಲಿ ತಾಲೂಕು ಇಟಿಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಐಗೋಳ ಚಿದಾನಂದರವರುತಿಳಿಸಿದರು.   ಪಟ್ಟಣದ ಪ್ರವಾಸಿಮಂದಿರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಳೆದ 25 ವರ್ಷಗಳಿಂದ ಹೂವಿನ ಹಡಗಲಿ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಕಟ್ಟಿ ಬೆಳೆಸಿದ್ದೇನೆ. ರಾಜಕೀಯ ಜೊತೆಗೆ ಸಾಮಾಜಿಕ, ಶೈಕ್ಷಣಿಕ ಹಾಗೂ ಸಹಕಾರ ಕ್ಷೇತ್ರದಲ್ಲಿ ನನ್ನನ್ನು ನಾನು …

Read More »

ಸ್ವಾವಲಂಬಿ ಭಾರತಕ್ಕೆ ಸಣ್ಣ ಕೈಗಾರಿಕೆ ಕೊಡುಗೆ ಅಪಾರ: ರಾಣೆ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಸ್ವಾವಲಂಬಿ ಭಾರತ್‌ ನಿರ್ಮಾಣದಲ್ಲಿ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ದೊಡ್ಡ ಕೊಡುಗೆ ನೀಡಲಿವೆ ಎಂದು ಕೇಂದ್ರ ಸಣ್ಣ ಮತ್ತು ಮಧ್ಯಮ ಕೈಗಾರಿಕೆ ಸಚಿವ ನಾರಾಯಣ ರಾಣೆ ಹೇಳಿದರು. ನಗರದ ಖಾಸಗಿ ಹೋಟೆಲ್‌ನಲ್ಲಿ ಐಎಎಸ್‌ ಫೌಂಡೇಶನ್‌ ಹಮ್ಮಿಕೊಂಡಿದ್ದ 5ನೇ ಆವೃತ್ತಿಯ 2022ನೇ ಸಾಲಿನ ಭಾರತ ಉತ್ಪಾದನ ಪ್ರದರ್ಶನದ ಪೂರ್ವಭಾವಿ ಸಿದ್ಧತಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಲಘು ಉದ್ಯೋಗ ಭಾರತಿ ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ. …

Read More »

ಡೀಮ್ಡ್ ಫಾರೆಸ್ಟ್‌ ಸಮಸ್ಯೆ ನಿವಾರಣೆ: ಆದೇಶ ಪ್ರತಿ ಬಿಡುಗಡೆ

ಬ್ರಹ್ಮಾವರ: ಮಲೆನಾಡು ಮತ್ತು ಕರಾವಳಿ ಭಾಗದ ರೈತರಿಗೆ, ಸಾರ್ವಜನಿಕರಿಗೆ ಮತ್ತು ಸರಕಾರಕ್ಕೆ ಹೊಸ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ತೀವ್ರ ತೊಡಕಾಗಿದ್ದ ಡೀಮ್ಡ್ ಫಾರೆಸ್ಟ್‌ ಸಮಸ್ಯೆಯನ್ನು ಸರಕಾರವು ಬಗೆಹರಿಸಿದ್ದು, 6.60 ಲಕ್ಷ ಹೆಕ್ಟೇರ್‌ ಭೂಮಿಯನ್ನು ಡೀಮ್ಡ್ ಫಾರೆಸ್ಟ್‌ ವ್ಯಾಪ್ತಿಯಿಂದ ಹೊರತುಪಡಿಸಿ ಸರಕಾರಿ ಆದೇಶ ಹೊರಡಿಸಿದೆ ಎಂದು ಅರಣ್ಯ ಸಚಿವ ಉಮೇಶ್‌ ಕತ್ತಿ ಹೇಳಿದರು. ಶನಿವಾರ ನೀಲಾವರದಲ್ಲಿ ಪೇಜಾವರ ಶ್ರೀ ವಿಶ್ವೇಶತೀರ್ಥ ಶ್ರೀಪಾದರ ಸ್ಮತಿವನ ನಿರ್ಮಾಣಕ್ಕೆ ಶಂಕುಸ್ಥಾಪನೆ ಸಂದರ್ಭ ಅವರು ಡೀಮ್ಡ್ ಫಾರೆಸ್ಟ್‌ ಕುರಿತ …

Read More »

ಇಂದು ವಿಶ್ವ ಅಮ್ಮಂದಿರ ದಿನ : ಅಮ್ಮನ ಬಾಳಲಿ ನಗು ತುಂಬಿರಲಿ.

ಇಡೀ ವಿಶ್ವಕ್ಕೆ ನೀವು ಒಬ್ಬ ವ್ಯಕ್ತಿ ಮಾತ್ರ. ಆದರೆ ಒಬ್ಬರು ವ್ಯಕ್ತಿಗೆ ಮಾತ್ರ ನೀವೇ ಇಡೀ ವಿಶ್ವ… ಅದೇ ತಾಯಿ…’ ಇದೊಂದು ಉಕ್ತಿ ಸಾಕು ಅಮ್ಮನ ಮಹತ್ವವನ್ನು ಅರಿಯಲು. ಮಗು ಹುಟ್ಟುವ ಸಂದರ್ಭ ಅಮೃತಘಳಿಗೆ ಎಂದು ಹೇಳುತ್ತಾರೆ. ತಾಯಿಗೆ ಅದು ಅವಿಸ್ಮರಣೀಯ ಕ್ಷಣ. ಜನ್ಮ ನೀಡಿ ಮರುಜನ್ಮ ಪಡೆಯುವ ನಿಸ್ವಾರ್ಥ ಹೃದಯಕ್ಕೆ ಅಮ್ಮಂದಿರ ದಿನದ ಶುಭಾಶಯ. ನಮ್ಮನ್ನೆಲ್ಲ ಕಣ್ಣ ರೆಪ್ಪೆಯಂತೆ ಸಲಹಿ, ಹೃದಯದಲ್ಲಿ ಬೆಚ್ಚಗೆ ಕಾಪಿಟ್ಟು ತಮ್ಮ ಉಸಿರು ಇರುವರೆಗೂ …

Read More »

ಮಸೀದಿಗಳ ಮೈಕ್ ತೆರವಿಗೆ ನಾಳೆಯೇ ಡೆಡ್‍ಲೈನ್ – ದೇಗುಲಗಳಲ್ಲಿ 3 ಬಾರಿ ಮಂತ್ರ ಘೋಷ

ಬೆಂಗಳೂರು: ಹಿಜಬ್, ಹಲಾಲ್, ವ್ಯಾಪಾರ ಬ್ಯಾನ್ ಬಳಿಕ ರಾಜ್ಯದಲ್ಲಿ ಆಜಾನ್ ಗಲಾಟೆ ತಾರಕಕ್ಕೇರಿದೆ. ಆಜಾನ್ ಕೂಗಿಗೆ ಟಾಂಗ್ ನೀಡುವ ನಿಟ್ಟಿನಲ್ಲಿ ನಾಳೆಯಿಂದ ಬೆಳಗ್ಗೆ 5 ಹಿಂದೂ ದೇವಾಲಯಗಳಲ್ಲಿ, ಮಠಗಳಲ್ಲಿ ಹನುಮಾನ್ ಚಾಲೀಸಾ, ಭಜನೆ ಹಾಗೂ ಸುಪ್ರಭಾತವನ್ನು, ಮೈಕ್ ಮೂಲಕ ಪಠಿಸುವ ಆಂದೋಲನಕ್ಕೆ ಶ್ರೀರಾಮ ಸೇನೆ ಮುಂದಾಗಿದೆ. ಈ ಅಭಿಯಾನಕ್ಕೆ ಕೈಜೋಡಿಸುವಂತೆ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡಿ ಮನವಿ ಮಾಡುತ್ತಿದ್ದಾರೆ. ಹುಬ್ಬಳ್ಳಿ-ಧಾರವಾಡ ವ್ಯಾಪ್ತಿಯ ಪ್ರಮುಖ ದೇವಸ್ಥಾನ ಮತ್ತು ಮಠಗಳಿಗೆ ಭೇಟಿ ನೀಡಿದ ಶ್ರೀರಾಮಸೇನೆ …

Read More »

ಮೀಸಲಾತಿಗಾಗಿ ತೀವ್ರ ಹೋರಾಟ: ಪಂಚಮಸಾಲಿ ಶ್ರೀ

ಅಥಣಿ: ‘ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ ಹಿಂದುಳಿದ ವರ್ಗ 2ಎ ಮೀಸಲಾತಿಗೆ ಆಗ್ರಹಿಸಿ ಹೋರರಾಟವನ್ನು ತೀವ್ರಗೊಳಿಸಲಾಗುವುದು’ ಎಂದು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ ನೀಡಿದರು.   ಮೀಸಲಾತಿಗೆ ಆಗ್ರಹಿಸಿ ಇಲ್ಲಿ ಶನಿವಾರ ನಡೆದ ಧರಣಿ ಸತ್ಯಾಗ್ರಹ ಹಾಗೂ ಬೈಕ್ ರ‍್ಯಾಲಿಯಲ್ಲಿ ಅವರು ಮಾತನಾಡಿದರು. ‘ಬಜೆಟ್ ಅಧಿವೇಶನ ಸಂದರ್ಭದಲ್ಲಿ ಮೀಸಲಾತಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದರು. ಆದರೆ, ಇದುವರೆಗೂ ನಮ್ಮ ಬೇಡಿಕೆ …

Read More »

ನಿಷೇಧಿತ ಪ್ಲಾಸ್ಟಿಕ್ ಬಳಕೆಗೆ ಕಡಿವಾಣ ಹಾಕಿ

ಬೆಳಗಾವಿ: ‘ಜಿಲ್ಲೆಯಲ್ಲಿ ನಿಷೇಧಿತ ಪ್ಲಾಸ್ಟಿಕ್ ಬಳಕೆಗೆ ಮತ್ತು ಮಾರಾಟಕ್ಕೆ ಕಡಿವಾಣ ಹಾಕಬೇಕು’ ಎಂದು ರಾಷ್ಟೀಯ ಹಸಿರು ನ್ಯಾಯಮಂಡಳಿಯ ರಾಜ್ಯಮಟ್ಟದ ಸಮಿತಿಯ ಅಧ್ಯಕ್ಷ ಸುಭಾಷ ಬಿ.ಅಡಿ ಸೂಚಿಸಿದರು. ಇಲ್ಲಿನ ಪ್ರವಾಸಿ ಮಂದಿರದಲ್ಲಿ ಶನಿವಾರ ನಡೆದ ‘ಮಾಲಿನ್ಯ ನಿಯಂತ್ರಣ ಜಿಲ್ಲಾ ಮಟ್ಟದ ಕಾರ್ಯಪಡೆ’ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.   ‘ಅಂಗಡಿ, ಮಳಿಗೆಗಳು ಹಾಗೂ ಮಾಲ್‌ಗಳಿಗೆ ತೆರಳಿ ನಿಷೇಧಿತ ಪ್ಲಾಸ್ಟಿಕ್ ಬಳಕೆ ಮಾಡದಂತೆ ಸೂಚಿಸಬೇಕು. ಮಾರುವುದು ಕಂಡುಬಂದಲ್ಲಿ, ವ್ಯಾಪಾರಸ್ಥರಿಗೆ ದಂಡ ವಿಧಿಸಬೇಕು’ …

Read More »

ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ವಿರುದ್ಧ ಪಕ್ಷ ಶೀಘ್ರವೇ ಕ್ರಮ ಜರುಗಿಸಲಿದೆ: ವಿಜಯೇಂದ್ರ

ಶಿವಮೊಗ್ಗ: ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ವಿರುದ್ಧ ಪಕ್ಷ ಶೀಘ್ರವೇ ಕ್ರಮ ಜರುಗಿಸಲಿದೆ ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು. ನಗರದಲ್ಲಿ ಶನಿವಾರ ಸುದ್ದಿಗಾರರ ಜತೆ ಅವರು ಮಾತನಾಡಿದರು.   ‘ಮುಖ್ಯಮಂತ್ರಿ ಸ್ಥಾನಕ್ಕೆ ₹ 2,500 ಕೋಟಿ ನೀಡುವಂತೆ ಕೇಂದ್ರದ ನಾಯಕರೇ ಕೇಳಿದ್ದರು ಎಂದು ಯತ್ನಾಳ್‌ ಹೇಳಿದ್ದಾರೆ. ಅವರಿಗೆ ಈ ರೀತಿ ಒತ್ತಡ ಹಾಕಿದವರು ಯಾರು ಎಂಬುದನ್ನು ಬಹಿರಂಗಪಡಿಸಲಿ. ಅವರ ಈ ರೀತಿಯ ಹೇಳಿಕೆಗಳು ಪಕ್ಷಕ್ಕೆ …

Read More »