ಬೆಳಗಾವಿ: ಶಾಲೆಗೆ ಹೋಗಿದ್ದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರ ಎಸಗಿದ ಆರೋಪಿಯನ್ನು ಪೊಲೀಸರು ಭಾನುವಾರ ಬಂಧಿಸಿದ್ದಾರೆ. ಗುಜರಾತ್ ಮೂಲದ ಬಿ.ಕೆ. ಕಂಗ್ರಾಳಿಯ ನಿವಾಸಿ ಆಕಾಶ ಭರತಕುಮಾರ ದೋಂಡಿಯಾ (19) ಬಂಧಿತ. ತಾಲ್ಲೂಕಿನ ಗ್ರಾಮವೊಂದರ 14 ವರ್ಷದ ಬಾಲಕಿ ನಗರದ ಖಾಸಗಿ ಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದಳು. ಬಾಲಕಿಯನ್ನು ಪುಸಲಾಯಿಸಿ ಸಲುಗೆ ಬೆಳೆಸಿದ ಆರೋಪಿ, ಗುಜರಾತಿಗೆ ಕರೆದೊಯ್ದು ಎರಡು ದಿನ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಬಾಲಕಿ ಮರಳಿ ಬೆಳಗಾವಿಗೆ ಬಂದು ತಂದೆಗೆ …
Read More »Yearly Archives: 2022
ನಂದಗಡದಲ್ಲಿ ಈಗ ಸುಧಾರಣಾ ಪರ್ವ ಆರಂಭ
ನಂದಗಡ (ಖಾನಾಪುರ ತಾಲ್ಲೂಕು): ಕ್ರಾಂತಿಯ ನೆಲ, ರಕ್ತಸಿಕ್ತ ಇತಿಹಾಸಕ್ಕೆ ಸಾಕ್ಷಿಯಾಗಿ ನಿಂತ ತಾಲ್ಲೂಕಿನ ನಂದಗಡದಲ್ಲಿ ಈಗ ಸುಧಾರಣಾ ಪರ್ವ ಆರಂಭವಾಗಿದೆ. ಈ ಸ್ಥಳಕ್ಕೆ ಜಾಗತಿಕ ಗುರುತು ತಂದುಕೊಟ್ಟ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಸಮಾಧಿ ಈಗ ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ. ಹಲವು ವರ್ಷಗಳಿಂದ ನಂದಗಡ ನಿರ್ಲಕ್ಷ್ಯಕ್ಕೆ ಒಳಗಾಗಿತ್ತು. ಚನ್ನಮ್ಮನ ಕಿತ್ತೂರು, ಬೈಲಹೊಂಗಲದಲ್ಲಿ ಆದಂಥ ಅಭಿವೃದ್ಧಿ ಕಾರ್ಯಗಳನ್ನು ಇಲ್ಲಿಯೂ ಮಾಡಬೇಕು ಎಂದು ಜನ ದಶಕದಿಂದ ಹೋರಾಟ ಮಾಡಿದ್ದರು. ಇತ್ತೀಚಿನ ವರ್ಷಗಳಲ್ಲಿ ಶುಕ್ರದೆಸೆ …
Read More »ಬೆಳಗಾವಿ | ವೈಯಕ್ತಿಕ ಕಾರಣಕ್ಕೆ ಅಣ್ಣನ ಕೊಲೆ ಮಾಡಿದ ತಮ್ಮ
ನಾಗರಮುನ್ನೋಳಿ: ಸಮೀಪದ ಉಮರಾಣಿ ಗ್ರಾಮದ ಹೊರವಲಯದಲ್ಲಿ ನಿಪ್ಪಾಣಿ- ಮುಧೋಳ ರಸ್ತೆಯಲ್ಲಿ ತಮ್ಮನೇ ಅಣ್ಣನನ್ನು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ಚಿಕ್ಕೋಡಿ ಪಟ್ಟಣದ ಡಂಬಳ ಕಾಲೊನಿ ನಿವಾಸಿ ಅಕ್ಬರ್ ಅಬ್ದುಲ್ ಶೇಖ್ (40) ಕೊಲೆಯಾದವರು. ಅಮ್ಜಾದ್ ಅಬ್ದುಲ್ ಶೇಖ್ (32) ಆರೋಪಿ. ಅಕ್ಬರ್ ಅಬ್ದುಲ್ ಶೇಖ್ ಅವರು ಕಬ್ಬೂರು ಗ್ರಾಮದಿಂದ ಚಿಕ್ಕೋಡಿಗೆ ದ್ವಿಚಕ್ರ ವಾಹನದ ಮೇಲೆ ಬರುತ್ತಿರುವ ವೇಳೆ ಕಾರಿನಿಂದ ಹಿಂಬಾಲಿಸಿಕೊಂಡು ಬಂದ ಸಹೋದರ, ಮಾರಾಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದರು. ವೈಯಕ್ತಿ ಕಾರಣವಳಿಂದ …
Read More »ವಚನಾನಂದ ಸ್ವಾಮೀಜಿ ಬ್ರೋಕರ್ ಆಗಿದ್ದಾರೆ; ಮಂತ್ರಿ ಸ್ಥಾನ ಕೊಡಿಸುವುದಾಗಿ ಹೇಳಿ ಹಣಕ್ಕೆ ಬೇಡಿಕೆ; ಶಾಸಕ ಯತ್ನಾಳ್ ಆರೋಪ
ವಿಜಯಪುರ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಜೋಕರ್ ಎಂದು ಟೀಕಿಸಿರುವ ವಿಚಾರವಾಗಿ ವಾಗ್ದಾಳಿ ನಡೆಸಿರುವ ಯತ್ನಾಳ್, ವಚನಾನಂದ ಸ್ವಾಮೀಜಿ ಬ್ರೋಕರ್ ಆಗಿದ್ದಾರೆ ಎಂದು ಕಿಡಿಕಾರಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಶಾಸಕ ಯತ್ನಾಳ್, ಹರಿಹರ ಪೀಠದ ವಚನಾನಂದ ಸ್ವಾಮೀಜಿ ಬ್ರೋಕರ್ ಆಗಿದ್ದಾರೆ. ಮಂತ್ರಿ ಸ್ಥಾನ ಕೊಡಿಸುವುದಾಗಿ ಹೇಳಿ ಹಣ ಕೇಳುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು. ವಚನಾನಂದ ಶ್ರೀಗಳು ಯಡಿಯೂರಪ್ಪ ಅವರಿಂದ 10 ಕೋಟಿ ರೂಪಾಯಿ ವಸೂಲಿ ಮಾಡಿದ್ದಾರೆ. ಮಠದ ಅಭಿವೃದ್ಧಿ ಕಾಮಗಾರಿ …
Read More »ರಾಜ್ಯದ 60 ವರ್ಷ ಮೇಲ್ಪಟ್ಟವರಿಗೆ ಗುಡ್ ನ್ಯೂಸ್: ಸರ್ಕಾರದಿಂದಲೇ ಉಚಿತ ಕಣ್ಣಿನ ಆಪರೇಷನ್, ಕನ್ನಡಕ ವಿತರಣೆ
ಹಾವೇರಿ: ರಾಜ್ಯದಲ್ಲಿ 60 ವರ್ಷ ಮೇಲ್ಪಟ್ಟವರಿಗೆ ಉಚಿತವಾಗಿ ಕಣ್ಣಿನ ಆಪರೇಷನ್ ( Eye Operation ) ಮಾಡಿಸಲಾಗುತ್ತದೆ. ಅಲ್ಲದೇ ಉಚಿತ ಕನ್ನಡಕವನ್ನು ಕೂಡ ನೀಡಲಾಗುತ್ತದೆ ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ಹೇಳಿದ್ದಾರೆ. ಹಾವೇರಿ ಜಿಲ್ಲೆಯ ಶಿಗ್ಗಾಂವಿಯಲ್ಲಿ ಇಂದು ತಾಲೂಕು ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವ ಕಾರ್ಯಕ್ರಮಕ್ಕೆ ಶಿಲಾನ್ಯಾಸ ನೆರವೇರಿಸಿದ ಬಳಿಕ ಮಾತನಾಡಿದ ಅವರು, 96 ಕೋಟಿ ವೆಚ್ಚದ ಆಸ್ಪತ್ರೆ ಕಾಮಗಾರಿಗೆ ಚಾಲನೆ ನೀಡಲಾಗಿದೆ. …
Read More »ಬೆಳಗಾವಿ ಜಿಲ್ಲೆಯಲ್ಲಿ ಛಲವಾದಿ ಸಮಾಜದ ಜನಸಂಖ್ಯೆ ದೊಡ್ಡ ಪ್ರಮಾಣದಲ್ಲಿ ಇದ್ದರೂ ಕೂಡ ಒಬ್ಬರೂ ಶಾಸಕರು ಇಲ್ಲಾ
ಬೆಳಗಾವಿ ಜಿಲ್ಲೆಯಲ್ಲಿ ಛಲವಾದಿ ಸಮಾಜದ ಜನಸಂಖ್ಯೆ ದೊಡ್ಡ ಪ್ರಮಾಣದಲ್ಲಿ ಇದ್ದರೂ ಕೂಡ ಒಬ್ಬರೂ ಶಾಸಕರು ಇರದೇ ಇರುವುದು ನಮ್ಮ ದುರ್ದೈವ. ಸಂಘಟಿತರಾಗದಿದ್ರೆ ನಮ್ಮ ಸಮಾಜಕ್ಕೆ ರಾಜಕೀಯ ಶಕ್ತಿ ಬರುವುದಿಲ್ಲ ಎಂದು ಹುಬ್ಬಳ್ಳಿ ಕಾಂಗ್ರೆಸ ಶಾಸಕ ಪ್ರಸಾದ ಅಬ್ಬಯ್ಯ ಕರೆ ನೀಡಿದರು. ರವಿವಾರ ನಗರದ ಅಂಜುಮನ್-ಎ-ಇಸ್ಲಾಂ ಸಂಸ್ಥೆಯ ಸಭಾಂಗಣದಲ್ಲಿ ಬೆಳಗಾವಿ ಜಿಲ್ಲಾ ಛಲವಾದಿ ಸಮಾಜದ ಸಮಾವೇಶ ಕುರಿತು ಪೂರ್ವಭಾವಿ ಸಭೆಯಲ್ಲಿ ಭಾಗಿಯಾಗಿ ಮಾತನಾಡಿದ ಅವರು ಕಾಂಗ್ರೆಸ್, ಬಿಜೆಪಿ ಟಿಕೆಟ್ ಸಿಕ್ಕರೂ ವ್ಯವಸ್ಥಿತವಾಗಿ …
Read More »ಕೊತ್ವಾಲ ರಾಮಚಂದ್ರನ ಶಿಷ್ಯರ ಕಡೆಯಿಂದ ನಾವು ಪಾಠ ಕಲಿಯಬೇಕಿಲ್ಲ : ಯತ್ನಾಳ
ಕೊತ್ವಾಲ ರಾಮಚಂದ್ರನ ಶಿಷ್ಯರ ಕಡೆಯಿಂದ ನಾವು ಪಾಠ ಕಲಿಯಬೇಕಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ ವಿರುದ್ಧ ವಿಜಯಪುರ ನಗರ ಶಾಸಕ ಯತ್ನಾಳ ವಾಗ್ದಾಳಿ ನಡೆಸಿದರು. ಬಿಜೆಪಿಗೆ ರೌಡಿ ಶೀಟರ್ ಗಳ ಸೇರ್ಪಡೆ ವಿಚಾರಕ್ಕೆ ಸಂಬಂಧಿಸಿದಂತೆ ವಿಜಯಪುರ ದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ಪ್ರತಿಕ್ರಿಯೆ ನೀಡಿ ಕೊತ್ವಾಲ ರಾಮಚಂದ್ರ ಬೆಂಗಳೂರಿಗೆ ದೊಡ್ಡ ರೌಡಿ, ಅವನಿಗೆ ಸಿಗರೇಟ್ ತಂದು ಕೊಡುತ್ತಿದ್ದವರು ನಮಗೆ ಪಾಠ ಮಾಡುತ್ತಿದ್ದಾರೆ. ಬ್ಲೂ ಫೀಲಂ ನಡೆಸುವವರು ಬಿಜೆಪಿ ಬಗ್ಗೆ …
Read More »ಶಿಗ್ಗಾವಿಯಲ್ಲಿ ಸಾರ್ವಜನಿಕ ಆಸ್ಪತ್ರೆಯನ್ನು ಉದ್ಘಾಟಿಸಿದC.M. ಬೊಮ್ಮಾಯಿ
ಹಾವೇರಿ ಜಿಲ್ಲೆಯ ಶಿಗ್ಗಾವಿ ಸಾರ್ವಜನಿಕ ಆಸ್ಪತ್ರೆಯನ್ನು 100 ಹಾಸಿಗೆಯಿಂದ 250 ಹಾಸಿಗೆಗಳಿಗೆ ಮೆಲ್ದರ್ಜೆಗೇರಿಸುವ ಕಟ್ಟಡ ಕಾಮಗಾರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಶಂಕುಸ್ಥಾಪನೆ ನೆರವೇರಿಸಿದರು. ಈ ಸಂದರ್ಭದಲ್ಲಿ ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್, ವಿಧಾನ ಪರಿಷತ್ ಸದಸ್ಯ ಎಸ್. ವಿ. ಸಂಕನೂರು ಹಾಗೂ ಮತ್ತಿತರರು ಹಾಜರಿದ್ದರು.
Read More »ವಿನಯ್ ಕುಲಕರ್ಣಿ ಧಾರವಾಡಕ್ಕೆ ಭೇಟಿ ನೀಡಲು ಕೋರ್ಟ್ ಅನುಮತಿ
ಬೆಂಗಳೂರು, ಡಿಸೆಂಬರ್ 04; ನ್ಯಾಯಾಲಯ ವಿಧಿಸಿದ್ದ ಷರತ್ತಿನಿಂದಾಗಿಬೆಳಗಾವಿಜೈಲಿನಿಂದ ಬಿಡುಗಡೆಯಾಗಿದ್ದರೂ ಧಾರವಾಡಕ್ಕೆ ಭೇಟಿ ನೀಡಲು ಸಾಧ್ಯವಾಗಿರದ ಮಾಜಿ ಸಚಿವ ವಿನಯ್ ಕುಲಕರ್ಣಿ ಕೊನೆಗೂ ಧಾರವಾಡಕ್ಕೆ ಭೇಟಿ ನೀಡಲಿದ್ದಾರೆ. ಆದು ಮಾಮೂಲಿಯಾಗಲ್ಲ, ಅನಾರೋಗ್ಯಕ್ಕೆ ತುತ್ತಾಗಿ ತುರ್ತು ನಿಗಾ ಘಟಕ (ಐಸಿಯು)ನಲ್ಲಿರುವ ಸಹೋದರಿ ಭೇಟಿ ಮಾಡಲು ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ ಅನುಮತಿ ನೀಡಿದೆ. ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ …
Read More »ಬೆಂಗಳೂರು, ಮೈಸೂರು ಬಳಿಕ ಬಳ್ಳಾರಿಯಲ್ಲಿಯೂ ಚಿರತೆ ಪ್ರತ್ಯಕ್ಷ; ಭಯಭೀತರಾದ ಪಿಜಿ ವಿದ್ಯಾರ್ಥಿಗಳು
ಬಳ್ಳಾರಿ: ಬೆಳಗಾವಿ, ಮೈಸೂರು, ಬೆಂಗಳೂರು ಬಳಿಕ ಇದೀಗ ಬಳ್ಳಾರಿಯಲ್ಲಿಯೂ ಚಿರತೆ ಪ್ರತ್ಯಕ್ಷವಾಗಿದೆ. ಬಳ್ಳಾರಿಯ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಪಿಜಿ ಸೆಂಟರ್ ನಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ವಿದ್ಯಾರ್ಥಿಗಳು ಆತಂಕಕ್ಕೀಡಾಗಿದ್ದಾರೆ. ಸಂಡೂರು ತಾಲೂಕಿನ ನಂದಿಹಳ್ಳಿ ಸ್ನಾತಕೋತ್ತರ ಕೆಂದ್ರದ ಪಿಜಿ ಸೆಂಟರ್ ನಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಕಳೆದ ಎರಡು ದಿನಗಳಿಂದ ಇದೇ ಭಾಗದಲ್ಲಿ ಓಡಾಟ ನಡೆಸಿದೆ. ಪಿಜಿ ಸೆಂಟರ್ ನ ಮೆಟ್ಟಿಲುಗಳ ಮೇಲೆ, ಸ್ನಾತಕೋತ್ತರ ಕೇಂದ್ರದ ಆವರಣದಲ್ಲಿಯೇ ಚಿರತೆ ಓಡಾಡುತ್ತಿದ್ದು, ಈ ದೃಶ್ಯಗಳು ಸಿಸಿಟಿವಿ ಕ್ಯಾಮರಾದಲ್ಲಿ …
Read More »