ಶಿವಮೊಗ್ಗ: ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರ ಪುತ್ರಿ ಡಾ. ರಾಜನಂದಿನಿ ಅವರಿಗೆ ವ್ಯಕ್ತಿಯೋರ್ವ ಕೊಲೆ ಬೆದರಿಕೆ ಹಾಕಿರುವ ಘಟನೆ ನಡೆದಿದೆ. ಕಾಗೋಡು ತಿಮ್ಮಪ್ಪ ಫೌಂಡೇಷನ್ ವತಿಯಿಂದ ಶಿವಮೊಗ್ಗ ಜಿಲ್ಲೆ ಸಾಗರ ತಾಲೂಕಿನ ಹಲವೆಡೆಗಳಲ್ಲಿ ಆರೋಗ್ಯ ಶಿಬಿರ ನಡೆಸಲಾಗುತ್ತಿದೆ. ಈ ಆರೋಗ್ಯ ಶಿಬಿರವನ್ನು ಮಂಗಳವಾರ ಸಾಗರ ತಾಲೂಕಿನ ತ್ಯಾಗರ್ತಿ ಗ್ರಾಮದಲ್ಲಿ ಏರ್ಪಡಿಸಲಾಗಿತ್ತು. ಆರೋಗ್ಯ ಶಿಬಿರ ಮುಗಿಸಿ ಸಾಗರಕ್ಕೆ ವಾಪಸ್ ಆಗುವಾಗ ರಾಜನಂದಿನಿ ಅವರ ಕಾರನ್ನು ಮಂಜು ಎಂಬಾತ ರಸ್ತೆ ಮಧ್ಯೆದಲ್ಲಿ ಅಡ್ಡ …
Read More »Yearly Archives: 2022
ಗುರುವಾರ ಬೆಳಿಗ್ಗೆ ನಡೆಯಬೇಕಿದ್ದ ಸಂಪುಟ ಸಭೆಯನ್ನು ಮೇ 11ಕ್ಕೆ
ಬೆಂಗಳೂರು: ಗುರುವಾರ ಬೆಳಿಗ್ಗೆ ನಡೆಯಬೇಕಿದ್ದ ಸಂಪುಟ ಸಭೆಯನ್ನು ಮೇ 11ಕ್ಕೆ ಮುಂದೂಡಲಾಗಿದೆ. ವಿಧಾನಸೌಧದ ಸಚಿವ ಸಂಪುಟ ಸಭಾಂಗಣದಲ್ಲಿ ಗುರುವಾರ ಬೆಳಿಗ್ಗೆ 11.30ಕ್ಕೆ ಸಂಪುಟ ಸಭೆ ನಿಗದಿಯಾಗಿತ್ತು. ಅದನ್ನು ರದ್ದುಪಡಿಸಿ ಮೇ 11ರ ಬೆಳಿಗ್ಗೆ 11 ಗಂಟೆಗೆ ನಿಗದಿಪಡಿಸಲಾಗಿದೆ ಎಂದು ಸಚಿವ ಸಂಪುಟ ವಿಭಾಗದ ಜಂಟಿ ಕಾರ್ಯದರ್ಶಿ ಆರ್. ಚಂದ್ರಶೇಖರ್ ಬುಧವಾರ ಪರಿಷ್ಕೃತ ಸೂಚನಾ ಪತ್ರ ಹೊರಡಿಸಿದ್ದಾರೆ. ಸಂಪುಟ ವಿಸ್ತರಣೆ ಅಥವಾ ಸಂಪುಟ ಪುನರ್ ರಚನೆ ಕುರಿತು ಬಿಜೆಪಿಯಲ್ಲಿ ಚರ್ಚೆ ನಡೆಯುತ್ತಿದೆ. ಮೇ …
Read More »ಬಜೆಟ್ ಅನುಷ್ಠಾನಕ್ಕೆ ಎಲ್ಲ ಇಲಾಖೆಗಳಿಗೂ ವೇಳಾಪಟ್ಟಿ: ಸಿಎಂ ಬೊಮ್ಮಾಯಿ
ಬೆಂಗಳೂರು: ಬಜೆಟ್ ಅನುಷ್ಠಾನಕ್ಕೆ ಎಲ್ಲ ಇಲಾಖೆಗಳಿಗೂ ವೇಳಾಪಟ್ಟಿ ನಿಗದಿ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಪ್ರಸಕ್ತ ಸಾಲಿನ ಬಜೆಟ್ ಅನುಷ್ಠಾನಕ್ಕೆ ವೇಗ ನೀಡುವುದಕ್ಕಾಗಿ ಬುಧವಾರ ಇಲಾಖಾವಾರು ಸಭೆಗಳನ್ನು ಆರಂಭಿಸುವ ಮುನ್ನ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಬಜೆಟ್ ಘೋಷಣೆಗಳ ಅನುಷ್ಠಾನಕ್ಕಾಗಿ ಈಗಾಗಲೇ ಶೇಕಡ 80ರಷ್ಟು ಆದೇಶಗಳನ್ನು ಹೊರಡಿಸಲಾಗಿದೆ. ಉಳಿದ ಕಾರ್ಯಕ್ರಮಗಳ ಅನುಷ್ಠಾನಕ್ಕೆ ತ್ವರಿತವಾಗಿ ಆದೇಶ ಹೊರಡಿಸಲಾಗುವುದು’ ಎಂದರು. ಎಲ್ಲ ಇಲಾಖೆಗಳಿಗೂ ಬಜೆಟ್ ಘೋಷಣೆಗಳ ಅನುಷ್ಠಾನಕ್ಕೆ ವೇಳಾಪಟ್ಟಿ ನೀಡಲಾಗುವುದು. …
Read More »ಮೋದಿ ಮಾಧ್ಯಮಗಳ ಮೈಕ್ ಕಂಡರೆ ಎಕೆ-47 ಗನ್ ಕಂಡಂತೆ ಹೆದರುತ್ತಾರೆ: ಕಾಂಗ್ರೆಸ್
ಬೆಂಗಳೂರು: ‘ಪ್ರಧಾನಿ ನರೇಂದ್ರ ಮೋದಿಯವರು ಮಾಧ್ಯಮಗಳ ಮೈಕ್ ಕಂಡರೆ ಎಕೆ-47 ಗನ್ ಕಂಡಂತೆ ಹೆದರುತ್ತಾರೆ’ ಎಂದು ಕಾಂಗ್ರೆಸ್ ವ್ಯಂಗ್ಯವಾಡಿದೆ. ಈ ವಿಚಾರವಾಗಿ ಸರಣಿ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಗಂಗಾ ನದಿಯಲ್ಲಿ ಕೋವಿಡ್ ಮೃತದೇಹಗಳು ತೇಲಿದಾಗ, ಚೀನಾ ನಮ್ಮ ದೇಶದ 20 ಮಂದಿ ಯೋಧರನ್ನು ಹತ್ಯೆ ಮಾಡಿದಾಗ, ಪುಲ್ವಾಮ ದಾಳಿಯಲ್ಲಿ 40 ಯೋಧರು ಮಡಿದಾಗ ಬಾರದ ‘ಓಹ್ ಮೈ ಗಾಡ್’ ಉದ್ಘಾರ ಮಾಧ್ಯಮಗಳ ಮೈಕ್ ಎದುರಾದಾಗ ಬರುತ್ತದೆ ಎಂದರೆ ಅದೆಷ್ಟು ಗಾಬರಿಯಾಗಿರಬಹುದು’ ಎಂದು …
Read More »ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ,ಓರ್ವ ಸಾವು, ಇನ್ನೊಬ್ಬನಿಗೆ ಗಾಯ
ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಲದಲ್ಲಿಯೇ ಸಾವನ್ನಪ್ಪಿದ್ದು, ಹಿಂಬದಿ ಸವಾರನಿಗೆ ಗಂಭೀರ ಗಾಯವಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ-4ರ ಹುಕ್ಕೇರಿ ತಾಲೂಕಿನ ಸುತಗಟ್ಟಿ ಕ್ರಾಸ್ ಬಳಿ ನಡೆದಿದೆ. ಒರಿಸ್ಸಾ ಮೂಲದ ವ್ಯಕ್ತಿಗಳಿಬ್ಬರು ಬೈಕ್ ಮೇಲೆ ಬೆಳಗಾವಿ ಕಡೆಯಿಂದ ಮಹಾರಾಷ್ಟ್ರ ಕಡೆಗೆ ಹೋಗುತ್ತಿದ್ದ ವೇಳೆ ಇಂದು ಬೆಳಿಗ್ಗೆ 9 ಗಂಟೆ ಸುಮಾರಿಗೆ ಈ ಅವಘಡ ಸಂಭವಿಸಿದೆ. ಓರಿಸ್ಸಾ ರಾಜ್ಯದ ಬದ್ರಕ ಜಿಲ್ಲೆಯ ದೊಳಾಪಡ ಗ್ರಾಮದ ಬೇನುದರ ನಾಯಕ …
Read More »ಪಿಎಸ್‌ಐ ಅಕ್ರಮ – ಮಾಜಿ ಸಿಎಂ ಪುತ್ರನ ವಿರುದ್ಧ ದೂರು
ಬೆಂಗಳೂರು: ಪಿಎಸ್‌ಐ(ಪೊಲೀಸ್ ಸಬ್ ಇನ್ಸ್‌ಪೆಕ್ಟರ್) ಪರೀಕ್ಷೆಯಲ್ಲಿ ಅಕ್ರಮ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗ ಮಾಜಿ ಮುಖ್ಯಮಂತ್ರಿ ಮಗನ ಮೇಲೆ ದೂರು ದಾಖಲಾಗಿದೆ. ಭ್ರಷ್ಟಾಚಾರದ ವಿರುದ್ಧ ನಾವು ಸಂಘಟನೆಯ ಪರವಾಗಿ ವಕೀಲರು ಸಿಐಡಿಗೆ ದೂರು ನೀಡಿದ್ದಾರೆ. ಹೆಸರನ್ನು ಸೂಚಿಸದೇ, ಮಾಜಿ ಮುಖ್ಯಮಂತ್ರಿ ಮಗ ಎಂದು ಆರೋಪ ಮಾಡಲಾಗಿದೆ. ಪಿಎಸ್‌ಐ ಪರೀಕ್ಷೆ ಅಕ್ರಮದಲ್ಲಿ ಮಾಜಿ ಮುಖ್ಯಮಂತ್ರಿಯ ಪುತ್ರನ ಕೈವಾಡವಿದೆ ಎಂದು ಅಭ್ಯರ್ಥಿಗಳು ಆರೋಪಿಸುತ್ತಿದ್ದಾರೆ. ಮಗ ಕೂಡ ಈ ಹಗರಣದಲ್ಲಿ ತೊಡಗಿರುವ ಬಗ್ಗೆ ರಾಜ್ಯಾದ್ಯಂತ …
Read More »ಅರ್ಧ ದಾರಿಯಲ್ಲಿ ರೈಲು ನಿಲ್ಲಿಸಿ ಎಣ್ಣೆ ಹೊಡೆಯಲು ಹೋದ ಚಾಲಕ : ಗಂಟೆಗಟ್ಟಲೆ ಕಾದ ಪ್ರಯಾಣಿಕರು
ಬಿಹಾರ: ರೈಲಿನ ಲೊಕೊ ಪೈಲಟ್ ( ಚಾಲಕ) ಅರ್ಧ ದಾರಿಯಲ್ಲಿ ರೈಲು ನಿಲ್ಲಿಸಿ ಟೀ ಕುಡಿಯಲು ತೆರಳಿದ ಸುದ್ದಿ ಇತ್ತೀಚಿಗೆ ವರದಿಯಾಗಿತ್ತು. ಇದೀಗ ಅಂತಹದ್ದೇ ಮತ್ತೊಂದು ಪ್ರಕರಣ ನಡೆದಿದೆ. ಇಲ್ಲಿ ಬೇಜವಾಬ್ದಾರಿ ಲೊಕೊ ಪೈಲಟ್ ಅರ್ಧ ದಾರಿಯಲ್ಲಿ ರಾಜಧಾನಿ ಎಕ್ಸ್ ಪ್ರೆಸ್ ರೈಲನ್ನು ನಿಲ್ಲಿಸಿ ಮದ್ಯ ಸೇವಿಸಲು ತೆರಳಿದ್ದಾನೆ. ಬಿಹಾರದ ಸಮಸ್ತಿಪುರ್-ಖಗಾರಿಯಾ ನಡುವಿನ ರೈಲು ಮಾರ್ಗದ ಹಸನ್‌ಪುರ ನಿಲ್ದಾಣದಲ್ಲಿ ಈ ಘಟನೆ ನಡೆದಿದೆ. ನಿಲ್ದಾಣದಲ್ಲಿ ನಿಂತ ರೈಲು ಎಷ್ಟೇ ಹೊತ್ತಾದರೂ …
Read More »ಮಸೀದಿ ಬಳಿ ಮೊಳಗಿತು ಹನುಮಾನ್ ಚಾಲೀಸಾ! ಹೇಳಿದ್ದು ಕೇಳದಿದ್ದಕ್ಕೆ ಪಾಠವಂತೆ.
ಮುಂಬೈ: ಮಹಾರಾಷ್ಟ್ರದಲ್ಲಿ ಆಜಾನ್ ಮತ್ತು ಹನುಮಾನ್ ಚಾಲೀಸಾ ವಿವಾದ ತಾರಕಕ್ಕೇರಿದೆ. ಧ್ವನಿವರ್ಧಕಗಳನ್ನು ಬಳಸುವ ಕುರಿತು ಸುಪ್ರೀಂಕೋರ್ಟ್ ಏನು ಆದೇಶ ಹೊರಡಿಸಿದೆಯೋ ಅದನ್ನು ಪಾಲನೆ ಮಾಡದಿದ್ದರೆ ಆಜಾನ್ ಕೇಳಿಸುವ ಸ್ಥಳಗಳಲ್ಲಿ ಹನುಮಾನ್ ಚಾಲೀಸಾ ಮೊಳಗಿಸುವಂತೆ ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಅಧ್ಯಕ್ಷ ರಾಜ್ ಠಾಕ್ರೆ ನಿನ್ನೆ (ಮೇ 3) ಕರೆ ನೀಡಿದ್ದರು. ಇದಕ್ಕೆ ಸಂಬಂಧಿಸಿದಂತೆ ಸಾರ್ವಜನಿಕವಾಗಿ ಬಹಿರಂಗ ಪತ್ರ ಬರೆದಿದ್ದ ಅವರು, ಸುಪ್ರೀಂ ಕೋರ್ಟ್ ಆದೇಶದಂತೆ ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 …
Read More »ಗೋವಾದಲ್ಲಿ ಯಶ್: ರಾಜಕೀಯಕ್ಕೆ ಎಂಟ್ರಿ ಕೊಡ್ತಾರಾ ರಾಕಿಂಗ್ ಸ್ಟಾರ್?
ಬೆಂಗಳೂರು: ಕೆಜಿಎಫ್-2 ಚಿತ್ರದ ಭರ್ಜರಿ ಯಶಸ್ಸಿನ ನಂತರ ರಾಕಿಂಗ್ ಸ್ಟಾರ್ ಯಶ್ ಮತ್ತೆ ಸುದ್ದಿಯಲ್ಲಿದ್ದಾರೆ. ಹಲವಾರು ಹಿಟ್ ಚಿತ್ರಗಳನ್ನು ನೀಡಿರುವ ಈ ನಟ, ರಾಜಕೀಯಕ್ಕೆ ಎಂಟ್ರಿ ಕೊಡಲಿದ್ದಾರೆ ಎಂಬ ಗುಸುಗುಸು ಸುದ್ದಿ ಹರಿದಾಡುತ್ತಿದೆ. ಇದಕ್ಕೆ ಕಾರಣ ಯಶ್ ದಂಪತಿ ಗೋವಾಕ್ಕೆ ಭೇಟಿ ಕೊಟ್ಟ ಬಳಿಕ ಆಗಿರುವ ಬೆಳವಣಿಗೆ ಹಾಗೂ ಈಚೆಗೆ ಜ್ಯೋತಿಷಿ ನುಡಿದಿರುವ ಭವಿಷ್ಯ! ಯಶ್ ಮತ್ತು ರಾಧಿಕಾ ಗೋವಾಕ್ಕೆ ಭೇಟಿ ಕೊಟ್ಟಾಗ ಅಲ್ಲಿ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ …
Read More »ಪ್ರಿಯಕರ ಸೇರಿ 9 ಜನರಿಂದ ಪ್ರೇಯಸಿಯ ಪತಿ ಹತ್ಯೆ
ಬೆಂಗಳೂರು: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪ್ರಿಯತಮೆಯ ಪತಿಯನ್ನು ಕೊಲೆಗೈದಿದ್ದ ಇಬ್ಬರು ಕಾನೂನು ಸಂಘರ್ಷಕ್ಕೊಳಗಾದವರು ಸೇರಿ 9 ಮಂದಿಯನ್ನು ಚಂದ್ರಾಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಚಂದ್ರಾಲೇಔಟ್ ನಿವಾಸಿಗಳಾದ ನದೀಂ ಅಹಮದ್ (23), ಶಬ್ಬೀರ್ ಹುಸೇನ್ (23), ಮೊಹಮ್ಮದ್ ಶಫೀ (23), ತಬ್ರೇಜ್ ಪಾಷಾ (23), ತನ್ವೀರ್ ಪಾಷಾ (21), ಹನನ್ ಪಾಷಾ (20), ಮೊಹಮ್ಮದ್ ಮುಬಾರಕ್ (21) ಹಾಗೂ ಇಬ್ಬರು ಕಾನೂನು ಸಂಘರ್ಷಕ್ಕೊಳಗಾದವರನ್ನು ಬಂಧಿಸಲಾಗಿದೆ. ಆರೋಪಿಗಳು ಮೇ 2ರಂದು ಜೋಹೆಬ್ ಅಬ್ರಾಹಂ …
Read More »