ದೇಶದಲ್ಲಿ ಭಾರೀ ಸದ್ದು ಮಾಡಿದ್ದ ಗುಜರಾತ್ ವಿಧಾನಸಭೆ ಚುನಾವಣೆಯ ಬಹಿರಂಗ ಪ್ರಚಾರ ಅಂತ್ಯವಾಗಿದೆ. ಒಂದು ತಿಂಗಳಿನಿಂದ ಬಿಜೆಪಿ, ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷಗಳು ಜನಮನ್ನಣೆ ಗಳಿಸಿಕೊಳ್ಳುವುದಕ್ಕಾಗಿ ಇನ್ನಿಲ್ಲದ ಶ್ರಮ ಪಟ್ಟಿವೆ. ಬಿಜೆಪಿ ಪ್ರಚಾರಕ್ಕೆ ಪ್ರಧಾನಿ ಮೋದಿಯವರೇ ನೇತೃತ್ವ ವಹಿಸಿಕೊಂಡಿದ್ದರೆ, ಎಎಪಿಗೆ ದಿಲ್ಲಿ ಸಿಎಂ ಅರವಿಂದ ಕೇಜ್ರಿವಾಲ್ ಮುಂದಾಳತ್ವ ವಹಿಸಿದ್ದರು. ಕಾಂಗ್ರೆಸ್ ಮಾತ್ರ ದಿಲ್ಲಿ ನಾಯಕರನ್ನು ನಂಬಿಕೊಳ್ಳದೆ ಸಾಮೂಹಿಕ ನಾಯಕತ್ವದಡಿ ಪ್ರಚಾರ ನಡೆಸಿದೆ. ಹಿಂದಿನ ಸಂಖ್ಯೆ ಹೆಚ್ಚು ಮಾಡಿಕೊಂಡೀತೇ ಬಿಜೆಪಿ? …
Read More »Yearly Archives: 2022
ರೌಡಿಗಳು, ಅಪರಾಧ ಹಿನ್ನೆಲೆ ಉಳ್ಳವರಿಗೆ ಪಕ್ಷ ಸೇರಲು ಅವಕಾಶ ಇಲ್ಲ: ಅರುಣ್ ಸಿಂಗ್
ಬೆಂಗಳೂರು, ಡಿಸೆಂಬರ್ 3: ರೌಡಿಗಳು ಹಾಗೂ ಅಪರಾಧ ಹಿನ್ನೆಲೆ ಉಳ್ಳವರಿಗೆ ಯಾವುದೇ ಕಾರಣಕ್ಕೂ ಪಕ್ಷ ಸೇರಲು ಅವಕಾಶ ಇಲ್ಲ ಎಂದು ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಹೇಳಿದರು. ಈ ಕುರಿತು ಬಿಜೆಪಿ ಕಚೇರಿಯಲ್ಲಿ ಶನಿವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಕಾಂಗ್ರೆಸ್ ಗೆ ಮಾತನಾಡಲು ಬೇರೆ ವಿಷಯಗಳಿಲ್ಲ. ಹೀಗಾಗಿ ರೌಡಿ ರಾಜಕೀಯ ಪ್ರಸ್ತಾಪಿಸಿ ಬಿಜೆಪಿ ಮೇಲೆ ಕೆಸರೆರಚಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪ್ರತಿಪಕ್ಷ ಕಾಂಗ್ರೆಸ್ ಗೆ ಮಾತನಾಡಲು, ಚರ್ಚಿಸಲು …
Read More »ಸರ್ಕಾರಿ ಕೆಲಸ ಅಂತ ಸುಮ್ಮನೆ ಬೇಕಾಬಿಟ್ಟಿ ಕೆಲಸ ಮಾಡುವವರಿಗೆ ಕೇಂದ್ರ ಬಿಗ್ ಶಾಕ್
ಸರ್ಕಾರಿ ಕೆಲಸ ( Government Job) ಅಂತ ಸುಮ್ಮನೆ ಬೇಕಾಬಿಟ್ಟಿ ಕೆಲಸ ಮಾಡುವವರಿಗೆ ಕೇಂದ್ರ ಬಿಗ್ ಶಾಕ್ ನೀಡಿದೆ. ನಿರ್ಲಕ್ಷ್ಯ ತೋರಿ ಸರಿಯಾಗಿ ಕೆಲಸ ಮಾಡದಿದ್ದರೆ ನಿಮ್ಮ ನಿವೃತ್ತಿಯ ನಂತರದ ಪಿಂಚಣಿ ಮತ್ತು ಗ್ರಾಚ್ಯುಟಿಗೆ ಕತ್ತರಿ ಹಾಕುವ ನಿಯಮವೊಂದರ ಬಗ್ಗೆ ಕೇಂದ್ರ ಅಧಿಸೂಚನೆ ಹೊರಡಿಸಿದೆ. ಕೇಂದ್ರ ನೌಕರರಿಗೆ ಡಿಎ ಮತ್ತು ಬೋನಸ್ ಗಿಫ್ಟ್ ನೀಡಿದ ಬೆನ್ನಲ್ಲೇ ಸರ್ಕಾರವು ನೌಕರರಿಗೆ ಕಟ್ಟುನಿಟ್ಟಿನ ಎಚ್ಚರಿಕೆಯೊಂದನ್ನು ನೀಡಿದೆ. ನೌಕರರು ಈ ಎಚ್ಚರಿಕೆಯನ್ನು ನಿರ್ಲಕ್ಷ್ಯಿಸಿದರೆ …
Read More »ಮುರುಘಾ ಮಠಕ್ಕೆ ನೂತನ ಪೀಠಾಧ್ಯಕ್ಷ ನೇಮಕ ವಿಚಾರ: ಕೋರ್ಟ್ ಮೊರೆಗೆ ತೀರ್ಮಾನ
ಚಿತ್ರದುರ್ಗ: ಮುರುಘಾ ಮಠಕ್ಕೆ ನೂತನ ಪೀಠಾಧ್ಯಕ್ಷ ಅಥವಾ ಆಡಳಿತಾಧಿಕಾರಿ ನೇಮಕ ಮಾಡುವಲ್ಲಿ ಸರ್ಕಾರ ವಿಳಂಬ ನೀತಿ ಮುಂದುವರಿಸಿದರೆ ನ್ಯಾಯಾಲಯದ ಮೆಟ್ಟಿಲೇರಲು ವೀರಶೈವ ಲಿಂಗಾಯತ ಸಮಾಜದ ಸಭೆ ಶನಿವಾರ ಒಮ್ಮತದ ನಿರ್ಣಯ ಕೈಗೊಂಡಿತು. ತಾಲ್ಲೂಕಿನ ಸೀಬಾರದಲ್ಲಿರುವ ಎಸ್. ನಿಜಲಿಂಗಪ್ಪ ಸ್ಮಾರಕದಲ್ಲಿಮಾಜಿ ಸಚಿವ ಎಚ್. ಏಕಾಂತಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯು ಮೂರು ನಿರ್ಣಯಗಳನ್ನು ಅನುಮೋದಿಸಿತು. ಸಭೆಯ ತೀರ್ಮಾನದ ಕುರಿತು ಮುಖ್ಯಮಂತ್ರಿಗೆ ಪತ್ರ ಬರೆಯಲು ನಿರ್ಧರಿಸಲಾಯಿತು. ‘ಶಿವಮೂರ್ತಿ ಶರಣರ ಬಂಧನದ ಬಳಿಕ ಮುರುಘಾ ಮಠ ಹಾಗೂ …
Read More »ವಿಜಯಪುರ: ಅತ್ಯಾಚಾರ ಆರೋಪಿಗೆ 20 ವರ್ಷ ಜೈಲು ಶಿಕ್ಷೆ
ವಿಜಯಪುರ : ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಆರೋಪಿಗೆ 20 ವರ್ಷ ಕಠಿಣ ಶಿಕ್ಷೆ ಹಾಗೂ 20 ಸಾವಿರ ದಂಡ ವಿಧಿಸಿ, ವಿಜಯಪುರ ಜಿಲ್ಲಾ ವಿಶೇಷ ಪೋಕ್ಸೋ ನ್ಯಾಯಾಲಯ ಶನಿವಾರ ತೀರ್ಪು ನೀಡಿದೆ. ಇಲ್ಲಿನ ಗಾಂಧಿನಗರ ನಿವಾಸಿ ಸಂತೋಷ ಥಾವರು ರಾಠೋಡ್ (22) ಶಿಕ್ಷೆಗೊಳಗಾದ ಆರೋಪಿ. 2021ರ ಏಪ್ರಿಲ್ 2ರಂದು ಜಿಲ್ಲೆಯ ಗಾಂಧಿನಗರದ ಬಳಿ ದನ ಮೇಯಿಸುವಾಗ ಅಪ್ರಾಪ್ತೆ ಮೇಲೆ ಆರೋಪಿ ಅತ್ಯಾಚಾರ ಎಸಗಿದ್ದನು. ಈ ಕುರಿತು ವಿಜಯಪುರ ಮಹಿಳಾ ಠಾಣೆಯಲ್ಲಿ …
Read More »ಪಿಎಸ್‌ಐ ನೇಮಕಾತಿ ಪರೀಕ್ಷೆ ಅಕ್ರಮಕ್ಕೆ ಸ್ಪೋಟಕ ಟ್ವಿಸ್ಟ್: ಸಿಐಡಿ ತನಿಖೆಯಲ್ಲಿ ಮತ್ತೊಂದು ಹಗರಣ ರಿವೀಲ್
ಬೆಂಗಳೂರು: 545 ಪಿಎಸ್‌ಐ ನೇಮಕಾತಿ ಪರೀಕ್ಷೆ ಅಕ್ರಮ ( PSI Recruitment Scam ) ಸಂಬಂಧ ಮತ್ತೊಂದು ಸ್ಪೋಟಕ ಟ್ವಿಸ್ಟ್ ದೊರೆತಿದೆ. ಪರೀಕ್ಷಾ ಅಕ್ರಮದ ಬಗ್ಗೆ ಪರೀಕ್ಷಾ ಉಸ್ತುವಾರಿ ಅಮೃತ್ ಪಾಲ್ ಗೆ ಪರೀಕ್ಷೆಯ ಬಳಿಕ ಅಭ್ಯರ್ಥಿಗಳು ದೂರು ನೀಡಿದ್ದರೂ, ಗೊತ್ತಿದ್ದೂ ಗೊತ್ತಿಲ್ಲದಂತೆ ವರ್ತಿಸಿರುವಂತ ಮತ್ತೊಂದು ಸ್ಪೋಟಕ ಮಾಹಿತಿಯನ್ನು ಸಿಐಡಿ ರಿವೀಲ್ ಮಾಡಿದೆ. ಪಿಎಸ್‌ಐ ನೇಮಕಾತಿ ಅಕ್ರಮವನ್ನು ಸ್ವತಹ ನೇಮಕಾತಿ ವಿಭಾಗದ ಮುಖ್ಯಸ್ಥರಾಗಿದ್ದಂತ ಅಮೃತ್ ಪಾಲ್ ಅವರೇ …
Read More »ಜಲಜೀವನ ಮಿಷನ್ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ: ಎಲ್.ಕೆ.ಅತೀಕ್
ಬೆಳಗಾವಿ: ‘ಜಲಜೀವನ ಮಿಷನ್ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ, ಎಲ್ಲ ಕಾಮಗಾರಿಗಳಿಗೆ ವೇಗ ನೀಡಬೇಕು’ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಯ ಸರ್ಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್ ಸೂಚಿಸಿದರು. ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ಸ್ವಚ್ಛ ಭಾರತ ಮಿಷನ್ ಹಾಗೂ ಜಲಜೀವನ ಮಿಷನ್ ಯೋಜನೆ ಕುರಿತು ಶುಕ್ರವಾರ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ‘ಪ್ರತಿ ಗ್ರಾಮಗಳಲ್ಲಿ ಘನ ತ್ಯಾಜ್ಯ ವಿಲೇವಾರಿ ಪ್ರಕ್ರಿಯೆ ಸಮರ್ಪಕವಾಗಿ ನಡೆಯಬೇಕು’ ಎಂದು …
Read More »ಮರಾಠಾ ಸಮುದಾಯದ ಬಹುಕಾಲದ ಬೇಡಿಕೆಯಾಗಿರುವ 2A ವರ್ಗವನ್ನು ನೀಡುವಂತೆ ಬೃಹತ್ ಪ್ರತಿಭಟನೆ
ಬಿಜೆಪಿ ಕರ್ನಾಟಕ ರಾಜ್ಯ ಕರ್ನಾಟಕ ಮರಾಠ ಸಮಾಜದ ಅಡಿಯಲ್ಲಿ ನಮ್ಮ ಮರಾಠಾ ಸಮುದಾಯದ ಬಹುಕಾಲದ ಬೇಡಿಕೆಯಾಗಿರುವ 2A ವರ್ಗವನ್ನು ನೀಡುವಂತೆ ಬೃಹತ್ ಪ್ರತಿಭಟನೆ ಆಯೋಜಿಸಲಾಗುವುದು ಎಂದು ಕರ್ನಾಟಕ ರಾಜ್ಯ ಒಬಿಸಿ ಮೋರ್ಚಾ ರಾಜ್ಯ ಕಾರ್ಯದರ್ಶಿ ಶ್ರೀ ಕಿರಣ ಜಾಧವ್ ತಿಳಿಸಿದರು ಮರಾಠ ಸಮುದಾಯದವರೆಲ್ಲರೂ ಛತ್ರಪತಿ ಶಿವಾಜಿ ಮಹಾರಾಜ ಉದ್ಯಾನ ವನದಲ್ಲಿ ಪೂಜೆ ಸಲ್ಲಿಸುವ ಮೂಲಕ ಮತ್ತು ಈ ಪ್ರತಿಭಟನೆ ಜಾಗೃತಿ ಮತ್ತು ಮಹತ್ವವನ್ನು ತಿಳಿಸುವುದರ ಮೂಲಕ ಮತ್ತು ಮುಂಬರುವ ದಿನಗಳಲ್ಲಿ …
Read More »ಮಹಾರಾಷ್ಟ್ರದ ಕನ್ನಡಿಗರಿಗೆ ಪಡಿತರ ರದ್ದು ಬೆದರಿಕೆ: ಎಂ.ಬಿ. ಪಾಟೀಲ್
ವಿಜಯಪುರ: ಮೂಲ ಸೌಕರ್ಯಗಳಿಂದ ವಂಚಿತರಾದ ಮಹಾರಾಷ್ಟ್ರದ ಗಡಿನಾಡು ಕನ್ನಡಿಗರು ಕರ್ನಾಟಕಕ್ಕೆ ಸೇರುವ ಬಗ್ಗೆ ನಿರ್ಣಯ ಕೈಗೊಂಡಿದ್ದಕ್ಕೆ ಉರಿದು ಬೀಳುತ್ತಿರುವ ಮಹಾರಾಷ್ಟ್ರ ಸರಕಾರ, ಕನ್ನಡದ ಗ್ರಾಮಗಳಿಗೆ ಪಡಿತರ ಚೀಟಿ ರದ್ದು ಮಾಡುವ ಬೆದರಿಕೆ ಹಾಕುತ್ತಿದೆ. ಈ ಬಗ್ಗೆ ಕೇಂದ್ರ ಸರಕಾರ ಸೂಕ್ತ ಕ್ರಮ ಕೈಗೊಂಡು ಕನ್ನಡಿಗರ ರಕ್ಷಣೆಗೆ ಮುಂದಾಗಬೇಕು ಎಂದು ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್ ಆಗ್ರಹಿಸಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಅವರು, ಮೂಲ ಸೌಕರ್ಯ ಕಲ್ಪಿಸುವಲ್ಲಿ ಗಡಿನಾಡು ಕನ್ನಡಿಗರನ್ನು …
Read More »ಚಿರತೆ ದಾಳಿಯಲ್ಲಿ ಮೃತಪಟ್ಟವರ ಕುಟುಂಬದವರಿಗೆ 15 ಲಕ್ಷ
ಬೆಂಗಳೂರು: ಚಿರತೆ ದಾಳಿಯಿಂದ ಮೃತಪಟ್ಟ ಕುಟುಂಬದವರಿಗೆ 15 ಲಕ್ಷ ರೂ.ಗಳ ಪರಿಹಾರವನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು. ಆನೆ ದಾಳಿಯಿಂದ ಮೃತಪಟ್ಟ ಕುಟುಂಬದವರಿಗೆ ನೀಡಿದಂತೆ ಚಿರತೆ ದಾಳಿಯಲ್ಲಿ ಮೃತಪಟ್ಟವರ ಕುಟುಂಬಕ್ಕೂ ಪರಿಹಾರ ಒದಗಿಸಲಾಗುವುದು. ಮೊದಲು ಕಾಡು ಪಕ್ಕದಲ್ಲಿ ಆಗುತ್ತಿತ್ತು. ಈಗ ಬೆಂಗಳೂರಿನ ಆಸುಪಾಸಿನಲ್ಲಿ ಆಗುತ್ತಿರುವುದನ್ನು ಅರಣ್ಯ ಇಲಾಖೆ ಗಂಭೀರವಾಗಿ ಪರಿಗಣಿಸಿದೆ. ಕಳೆದ ಹಲವಾರು ದಿನಗಳಿಂದ ಅದರ ಬೇಟೆಯಾಡಲು …
Read More »