Breaking News

Yearly Archives: 2022

ಸಿದ್ದರಾಮಯ್ಯನವರೇ ನಿಮ್ಮ ಪಕ್ಷದಲ್ಲೇ ಕೂತಿರುವ ಆ ಮಹಾನ್ ನಾಯಕ ಮುಂದೊಂದು ದಿನ ನಿಮಗೂ ಕೂಡ ಖೆಡ್ಡಾ ತೋಡಬಹುದು.: ರೇಣುಕಾಚಾರ್ಯ

ಬೆಂಗಳೂರು,ಏ.15-ಮಾನ್ಯ ಪ್ರತಿಪಕ್ಷದ ನಾಯಕರಾದ ಸಿದ್ದರಾಮಯ್ಯನವರೇ ನಿಮ್ಮ ಪಕ್ಷದಲ್ಲೇ ಕೂತಿರುವ ಆ ಮಹಾನ್ ನಾಯಕ ಮುಂದೊಂದು ದಿನ ನಿಮಗೂ ಕೂಡ ಖೆಡ್ಡಾ ತೋಡಬಹುದು. ಬೆನ್ನಿಗೆ ಚೂರಿ ಇರಿಯುವ ಮೊದಲು ಯಾವುದಕ್ಕೂ ಹುಷಾರು ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಎಚ್ಚರಿಸಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಅವರು, ಅಧಿಕಾರದ ಹಪಾಹಪಿಗೆ ಬಿದ್ದಿರುವ ಬಂಡೆ ಈಗ ಎಲ್ಲೋ ಕುಳಿತು ಇನ್ನೆಲ್ಲೋ ಬಾಂಬ್ ಸಿಡಿಸುವ ಕಲೆಯನ್ನು ರಕ್ತಗತ ಮಾಡಿಕೊಂಡಿದೆ. ಮುಂದಿನ ದಿನಗಳಲ್ಲಿ ಇದು …

Read More »

‘ಈಶ್ವರಪ್ಪ ಒಬ್ಬ ಸುಳ್ಳಿನ ಫ್ಯಾಕ್ಟರಿ ಚೇರ್ಮನ್’ ಇದ್ದಂತೆ,: ಡಿ.ಕೆ ಶಿವಕುಮಾರ್

ಬೆಂಗಳೂರು : ರಾಜ್ಯ ಬಿಜೆಪಿ ಸರ್ಕಾರ ಹಾಗೂ ನಾಯಕರ ವಿರುದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಮತ್ತೊಮ್ಮೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. ವಿಧಾನಸೌಧದ ಆವರಣದಲ್ಲಿ ಅಹೋರಾತ್ರಿ ಪ್ರತಿಭಟನೆ ನಿರತರಾಗಿರುವ ಕಾಂಗ್ರೆಸ್ ನಾಯಕರು, ಇಂದು ಬೆಳಗ್ಗೆ ದೈನಂದಿನ ಚಟುವಟಿಕೆ ಆರಂಭಿಸಿದರು. ಈ ಸಂದರ್ಭ ಸುದ್ದಿಗಾರರ ಜತೆ ಮಾತನಾಡಿದ ಡಿಕೆಶಿ, ವಿಧಾನಸೌಧದ ಗೋಡೆಗೆ ಹೊಡೆದರೆ ಕಾಸು ಕಾಸು ಕಾಸು ಎನ್ನುತ್ತದೆ ಎಂದು ವ್ಯಂಗ್ಯವಾಡಿದರು. ಸಂತೋಷ ಪಾಟೀಲ್ ಸಹೋದರ ಏನ್ ಬೇಡಿಕೆ ಇಟ್ಟಿದ್ದಾರೆ ಮೊದಲು ಆ …

Read More »

ಗುತ್ತಿಗೆದಾರನ ಸಾವಿನ ಬಗ್ಗೆ ದಾಖಲೆಗಳಿದ್ದರೆ ಇಂದೇ ಬಿಡುಗಡೆ ಮಾಡಲಿ :

ಬೆಳಗಾವಿ : ಗುತ್ತಿಗೆದಾರ ಸಂತೋಷ ಪಾಟೀಲ್​​ ಆತ್ಮಹತ್ಯೆ ಹಿಂದೆ ಮಹಾನಾಯಕನ ಕೈವಾಡ ಇದ್ದು, ಸೋಮವಾರ ದಾಖಲೆ ಬಿಡುಗಡೆ ಮಾಡುವುದಾಗಿ ಹೇಳಿದ್ದ ಮಾಜಿ ಸಚಿವ ರಮೇಶ್ ಜಾರಕಿಹೊಳಿಗೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಸವಾಲು ಹಾಕಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಮೇಶ್​​ ಜಾರಕಿಹೊಳಿ ಹೇಳಿಕೆಯನ್ನು ನಾನು ಹೃದಯ ಪೂರ್ವಕವಾಗಿ ಸ್ವಾಗತಿಸುವೆ. ದಾಖಲೆ ಬಿಡುಗಡೆಗಾಗಿ ಅವರು ಸೋಮವಾರದವರೆಗೆ ಕಾಯುವುದು ಬೇಡ. ಧಾರಾವಾಹಿಯಲ್ಲಿ ಕುತೂಹಲ ಕ್ರಿಯೇಟ್ ಮಾಡುವ ರೀತಿ ಇಲ್ಲಿ ಮಾಡುವುದು ಬೇಡ. ದಾಖಲೆಗಳಿದ್ದರೆ ಇಂದೇ, …

Read More »

ಆಹೋರಾತ್ರಿ ಧರಣಿ ಮುಗಿಸುತ್ತಿದ್ದೇವೆ, ಸರ್ಕಾರದ ವಿರುದ್ಧದ ಹೋರಾಟ ನಿಲ್ಲಲ್ಲ: ಸಿದ್ದರಾಮಯ್ಯ

ಬೆಂಗಳೂರು : ವಿಧಾನಸೌಧದಲ್ಲಿ ಹಮ್ಮಿಕೊಂಡಿದ್ದ ಧರಣಿಯನ್ನು ಮುಕ್ತಾಯಗೊಳಿಸಿದ್ದು, ಸರ್ಕಾರದ ವಿರುದ್ಧದ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ. ಸಚಿವ ಈಶ್ವರಪ್ಪ ಬಂಧನಕ್ಕೆ ಆಗ್ರಹಿಸಿ ವಿಧಾನಸೌಧದ ಮುಂಭಾಗ ಹಮ್ಮಿಕೊಂಡಿದ್ದ 24 ಗಂಟೆಗಳ ಧರಣಿ ಮುಕ್ತಾಯಕ್ಕೂ ಮುನ್ನ ಹಮ್ಮಿಕೊಂಡಿದ್ದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾವು ನಾಳೆಯಿಂದ ಐದು ದಿನಗಳ ಕಾಲ ರಾಜ್ಯಾದ್ಯಂತ ಹೋರಾಟ ನಡೆಸುತ್ತೇವೆಂದರು. ಮನವಿ ಪತ್ರವನ್ನು ಸಿದ್ಧಪಡಿಸಿ ಜಿಲ್ಲಾಧಿಕಾರಿಗೆ ನೀಡುತ್ತೇವೆ. ಸರ್ಕಾರ ನಿಯೋಜಿಸುವ ಯಾವುದೇ ವಿಧದ ಅನೇಕ …

Read More »

ಬೆಂಗಳೂರಿನತ್ತ ಈಶ್ವರಪ್ಪ ಪಯಣ: ಶಿವಮೊಗ್ಗದಲ್ಲಿ ಬಿಜೆಪಿ ಕಾರ್ಯಕರ್ತರ ಕಣ್ಣೀರು

ಶಿವಮೊಗ್ಗ: ‘ನನಗೆ ಇದು ಅಗ್ನಿ ಪರೀಕ್ಷೆ. ಈ ಅಗ್ನಿ ಪರೀಕ್ಷೆಯಲ್ಲಿ ನಾನು ಗೆದ್ದು ಬರುವೆ’ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್​.ಈಶ್ವರಪ್ಪ ಹೇಳಿದರು. ಶಿವಮೊಗ್ಗ ನಗರ ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರು ಕಣ್ಣೀರು ಹಾಕಿ, ನೀವು ರಾಜೀನಾಮೆ ನೀಡಬಾರದು ಎಂದು ಒತ್ತಾಯಿಸಿದಾಗ ಈಶ್ವರಪ್ಪ ಸಮಾಧಾನಪಡಿಸಿದರು. ನನ್ನ ಬಗ್ಗೆ ತಿಳಿದಿರುವ ಎಲ್ಲರೂ ಸಹ ನನಗೆ ವಿಶ್ವಾಸ ತುಂಬುತ್ತಿದ್ದಾರೆ. ನೀವು ಗೆದ್ದು ಬರುತ್ತೀರಿ ಎನ್ನುತ್ತಿದ್ದಾರೆ. ನಾನು ಹೀಗೆ ನನಗೆ ಅಗ್ನಿಪರೀಕ್ಷೆ ಬರುತ್ತದೆ ಎಂದು ತಿಳಿದುಕೊಂಡಿರಲಿಲ್ಲ. ಆದರೆ, ಜನರೇ …

Read More »

ರಾಸಾಯನಿಕ ಗೊಬ್ಬರ, ಕ್ರಿಮಿನಾಶಕ ಬಳಕೆ ಬಿಟ್ಟು ಆರು ವರ್ಷ ಆತ್ರೀ, ಖರ್ಚು ಕಡಿಮೆಯಾಗಿ ಲಾಭ ಹೆಚ್ಚು: ರಮೇಶ ಬಸಪ್ಪ

ಮೂಡಲಗಿ (ಬೆಳಗಾವಿ ಜಿಲ್ಲೆ): ‘ರಾಸಾಯನಿಕ ಗೊಬ್ಬರ, ಕ್ರಿಮಿನಾಶಕ ಬಳಕೆ ಬಿಟ್ಟು ಆರು ವರ್ಷ ಆತ್ರೀ. ಪಕ್ಕಾ ಸಾವಯವ ಕೃಷಿ ಮಾಡ್ತಿದ್ದೀವ್ರಿ. ಖರ್ಚು ಕಡಿಮೆಯಾಗಿ ಲಾಭ ಹೆಚ್ಚು ಬರತೈತ್ರೀ’ ಎಂದು ತಾಲ್ಲೂಕಿನ ಕಲ್ಲೋಳಿಯ ಯುವ ರೈತರಾದ ರಮೇಶ ಬಸಪ್ಪ ಖಾನಗೌಡ್ರ ಮತ್ತು ಮಲ್ಲಿಕಾರ್ಜುನ ಖಾನಗೌಡ್ರ ಹೆಮ್ಮೆಯಿಂದ ಬೀಗುತ್ತಾರೆ.   ಅವರು 10 ಎಕರೆ ಭೂಮಿಯಲ್ಲಿ ಕಬ್ಬು, ಅರಿಸಿನ, ಗೋವಿನ ಜೋಳ, ವಿವಿಧ ತರಕಾರಿಗಳನ್ನು ಸಾವಯವ ಕೃಷಿ ಪದ್ಧತಿಯಲ್ಲಿ ಬೆಳೆಯುತ್ತಿದ್ದಾರೆ. ಹೈನುಗಾರಿಕೆ, ಕೋಳಿ, ಮೀನು, …

Read More »

ಸಚಿವ ಈಶ್ವರಪ್ಪ ನಿರ್ಗಮನದಲ್ಲೂ ಬೆಳಗಾವಿ ಸದ್ದು

ಬೆಳಗಾವಿ: ಗಡಿ ಜಿಲ್ಲೆ ಬೆಳಗಾವಿ ರಾಜಕೀಯ ಕ್ಷೇತ್ರದಲ್ಲಿ ಮತ್ತೆ ಎಲ್ಲರೂ ತಿರುಗಿ ನೋಡುವಂತಹ ಸುದ್ದಿ ಮಾಡಿದೆ. ಜಿಲ್ಲೆಯ ಜಿದ್ದಾಜಿದ್ದಿನ ರಾಜಕಾರಣ ಬಿಜೆಪಿ ಸರಕಾರದ ಇಬ್ಬರು ಪ್ರಭಾವಿ ರಾಜಕಾರಣಿಗಳ ತಲೆದಂಡವಾಗುವಂತೆ ಮಾಡಿರುವುದೇ ಇದಕ್ಕೆ ಸಾಕ್ಷಿ. ಈ ಎರಡೂ ತಲೆದಂಡದಲ್ಲಿ ಕಾಂಗ್ರೆಸ್‌ನ ಒಗ್ಗಟ್ಟಿನ ಹೋರಾಟಕ್ಕಿಂತ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಒಂದು ರೀತಿಯ ಶಪಥ ಹೆಚ್ಚು ಪರಿಣಾಮಕಾರಿಯಾಗಿ ಕೆಲಸ ಮಾಡಿದೆ ಎಂಬುದು ಇಲ್ಲಿ ಗಮನಿಸಬೇಕಾದ ಸಂಗತಿ. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರದಲ್ಲಿ ಗಂಭೀರ ಆರೋಪ ಹೊತ್ತ …

Read More »

ಗಂಗೊಳ್ಳಿಗೆ ಒಂದು ದಿನ ಮೊದಲೇ ಆಗಮಿಸಿದ ಮುತಾಲಿಕ್‌

ಕುಂದಾಪುರ: ಕಾನೂನು ಸುವ್ಯವಸ್ಥೆ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಡಳಿತದ ನಿರ್ಬಂಧದ ನಡುವೆಯೂ ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್‌ ಮುತಾಲಿಕ್‌ ಅವರು ಗಂಗೊಳ್ಳಿಗೆ ಒಂದು ದಿನ ಮೊದಲೇ ಅಂದರೆ ಗುರುವಾರ ರಾತ್ರಿ ಆಗಮಿಸಿರುವುದು ಕುತೂಹಲಕ್ಕೆ ಕಾರಣವಾಗಿದೆ.   ಗಂಗೊಳ್ಳಿಯ ವೀರೇಶ್ವರ ದೇವಸ್ಥಾನದಲ್ಲಿ ಎ. 15ರಂದು ನಡೆಯಲಿರುವ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಸಂಜೆ ನಡೆಯುವ ಧಾರ್ಮಿಕ ಸಭೆಯಲ್ಲಿ ಪ್ರಮೋದ್‌ ಮುತಾಲಿಕ್‌ ಅವರು ಭಾಗಿಯಾಗದಂತೆ ಬುಧವಾರ ಉಡುಪಿ ಜಿಲ್ಲಾಡಳಿತ ನಿರ್ಬಂಧ ಹೇರಿ ಆದೇಶಿಸಿತ್ತು. ಕಾರ್ಯಕ್ರಮದ ಮುನ್ನಾದಿನವಾದ …

Read More »

ಸಂತೋಷ್ ಪಾಟೀಲ್ ಕೇಸ್ ನಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ಹೆಸರು ತಳಕು!

40% ಕಮಿಷನ್ ಆರೋಪ ಮಾಡಿ ಆತ್ಮಹತ್ಯೆ ಮಾಡಿಕೊಂಡ ಸಂತೋಷ್ ಪಾಟೀಲ್ ಮಾಡಿದ್ದ ಕಾಮಗಾರಿಗಳ ಬಗ್ಗೆ ಸಾಕಷ್ಟು ಊಹಾಪೋಹಗಳು ಹುಟ್ಟುಕೊಂಡಿವೆ. ಬೆಳಗಾವಿಯಲ್ಲಿ ಆತ ವರ್ಕ್ ಆರ್ಡರ್ ಇಲ್ಲದೆ ಕೆಲಸ ಮಾಡಿದ್ದ ಎಂಬ ಆರೋಪದ ಜೊತೆಗೆ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಕ್ಷೇತ್ರದಲ್ಲಿ ಆ ಕಾಮಗಾರಿ ನಡೆದಿದ್ದು ಇದು ಶಾಸಕಿ ಗಮನಕ್ಕೆ ಬರಲಿಲ್ಲವೇ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ ಆರೋಪಿಸಿದ್ದಾರೆ.   ಕಾಮಗಾರಿ ಕೈಗೆತ್ತಿಕೊಳ್ಳುವುದಕ್ಕೆ ಅನುಮತಿ ನೀಡಿದ್ದು ಯಾರು? 4 ಕೋಟಿ …

Read More »

ಬಿಎಸ್‌ವೈ, ಈಶ್ವರಪ್ಪ, ಡಿಎಚ್‌ಎಸ್‌ ರಾಜಕೀಯ ಇತಿಶ್ರೀ?

ಶಿವಮೊಗ್ಗ: ಕೆ.ಎಸ್‌. ಈಶ್ವರಪ್ಪ ಅವರ ರಾಜೀನಾಮೆಯಿಂದಾಗಿ ರಾಜ್ಯದಲ್ಲಿ ಬಿಜೆಪಿ ಕಟ್ಟಿ ಬೆಳೆಸಿದ್ದ ತ್ರಿಮೂರ್ತಿಗಳ ಅಧಿಕಾರ ರಾಜಕಾರಣದ ಶಕೆ ಮುಗಿಯಿತೇ ಎಂಬ ಪ್ರಶ್ನೆ ಮೂಡಲಾರಂಭಿಸಿದೆ. 75ರ ಹೊಸ್ತಿಲಲ್ಲಿರುವ ಬಿ.ಎಸ್‌. ಯಡಿಯೂರಪ್ಪ, ಕೆ.ಎಸ್‌. ಈಶ್ವರಪ್ಪ ಹಾಗೂ ಡಿ.ಎಚ್‌. ಶಂಕರಮೂರ್ತಿ ಅವರಿಗೆ ಇನ್ನು ರಾಜಕೀಯದಲ್ಲಿ ಯಾವುದೇ ಪ್ರಮುಖ ಅಧಿಕಾರ ಸಿಗುವ ಸಾಧ್ಯತೆ ಕಡಿಮೆ ಎನ್ನಲಾಗುತ್ತಿದೆ. ಬಿಜೆಪಿಯಲ್ಲಿ 75 ವರ್ಷ ಮೇಲ್ಪಟ್ಟವರಿಗೆ ಯಾವುದೇ ಸ್ಥಾನಮಾನ ನೀಡಬಾರದು ಎಂಬ ನಿಯಮವಿದೆ. ಈಗಾಗಲೇ ಯಡಿಯೂರಪ್ಪ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ …

Read More »