Breaking News

Yearly Archives: 2022

ನನ್ನನ್ನು ಈಗಲೂ ದೇವಸ್ಥಾನಕ್ಕೆ ಸೇರಿಸಲ್ಲ: ಡಾ.ಪರಮೇಶ್ವರ್

ಕೊರಟಗೆರೆ: ನಾನು ರಾಜ್ಯದ ಉಪಮುಖ್ಯಮಂತ್ರಿಯಾಗಿದ್ದೆ, ಹಲವು ಬಾರಿ ಶಾಸಕನಾಗಿ ಮಂತ್ರಿಯಾಗಿ ಅತ್ಯುನ್ನತ ಡಾಕ್ಟರೇಟ್ ಪದವಿಯನ್ನೂ ಪಡೆದು ಹಲವು ದೇಶ ಸುತ್ತಿ ಬಂದಿರುವೆ. ಆದರೂ ಕೂಡ ನಾನು ದಲಿತ ಎಂಬ ಕಾರಣಕ್ಕೆ ದೇವಾಲಯಗಳಲ್ಲಿ ನನ್ನನ್ನು ಒಳಗೆ ಬಿಟ್ಟುಕೊಳ್ಳುವುದಿಲ್ಲ… ಎಂದು ಶಾಸಕ ಡಾ.ಜಿ.ಪರಮೇಶ್ವರ್ ಅವರು ಬಹಿರಂಗವಾಗಿಯೇ ಬೇಸರ ಹೊರಹಾಕಿದರು.   ಕೊರಟಗೆರೆ ಪಟ್ಟಣ ಪಂಚಾಯಿತಿ ಮುಂಭಾಗ ಗುರುವಾರ ನಡೆದ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಪರಮೇಶ್ವರ್​, ಅಸ್ಪೃಶ್ಯತೆ ಇನ್ನೂ ಜೀವಂತವಾಗಿದೆ ಎಂಬುದನ್ನು ನೋವಿನಲ್ಲೇ ಬಿಚ್ಚಿಟ್ಟರು. …

Read More »

17ರಂದು ಅಧಿಕೃತವಾಗಿ ಜೆಡಿಎಸ್ ಸೇರ್ಪಡೆಯಾಗಲಿರುವ ಸಿ.ಎಂ.ಇಬ್ರಾಹಿಂಗೆ ರಾಜ್ಯಾಧ್ಯಕ್ಷ ಪಟ್ಟ

ಬೆಂಗಳೂರು,ಏ.14- ಕೇಂದ್ರದ ಮಾಜಿ ಸಚಿವ ಸಿ.ಎಂ.ಇಬ್ರಾಹಿಂ ಇದೇ 17ರಂದು ಅಧಿಕೃತವಾಗಿ ಜೆಡಿಎಸ್ ಸೇರ್ಪಡೆಯಾಗಲಿದ್ದಾರೆ. ಪಕ್ಷದ ಕೇಂದ್ರ ಕಚೇರಿ ಜೆ.ಪಿ.ಭವನದಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಸಮ್ಮುಖದಲ್ಲಿ ಜೆಡಿಎಸ್ ಸೇರಲಿದ್ದಾರೆ. ಕಾಂಗ್ರೆಸ್ ತೊರೆದಿರುವ ಇಬ್ರಾಹಿಂ ವಿಧಾನಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಜೆಡಿಎಸ್ ಹಮ್ಮಿಕೊಂಡಿದ್ದ ಕಾರ್ಯಕ್ರಮಗಳಲ್ಲಿ ಈಗಾಗಲೇ ಭಾಗವಹಿಸುತ್ತಿದ್ದಾರೆ. ಪಕ್ಷಕ್ಕೆ ಸೇರ್ಪಡೆಯಾಗುವ ಇಬ್ರಾಹಿಂ ಅವರಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನ ನೀಡಲು ತೀರ್ಮಾನಿಸಲಾಗಿದೆ. ಸೇರ್ಪಡೆಯಾಗುವ ಭಾನುವಾರದಂದೇ ಇಬ್ರಾಹಿಂ …

Read More »

ಸಿದ್ದರಾಮಯ್ಯ – ಡಿಕೆ ಶಿವಕುಮಾರ್‌ ಸೇರಿದಂತೆ ಹಲವರು ಪೊಲೀಸ್‌ ವಶಕ್ಕೆ

ಬೆಳಗಾವಿ ಮೂಲದ ಗುತ್ತಿಗೆದಾರ ಸಂತೋಷ್‌ ಪಾಟೀಲ್‌ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಈಶ್ವರಪ್ಪ ಅವರನ್ನು ಸಂಪುಟದಿಂದ ವಜಾ ಮಾಡಬೇಕು ಹಾಗೂ ಈಶ್ವರಪ್ಪರನ್ನು ಬಂಧಿಸಬೇಕೆಂದು ಆಗ್ರಹಿಸಿ ಕಾಂಗ್ರೆಸ್‌ ನಾಯಕರು, ಕಾರ್ಯಕರ್ತರು ಇಂದು ಪ್ರತಿಭಟನೆ ನಡೆಸುತ್ತಿದ್ದಾರೆ.   ಬೆಂಗಳೂರಿನ ರೇಸ್‌ ಕೋರ್ಸ್‌ ರಸ್ತೆಯಲ್ಲಿರುವ ಕಾಂಗ್ರೆಸ್‌ ಭವನದಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ನಿವಾಸದವರೆಗೂ ಮೆರವಣಿಗೆ ಹಮ್ಮಿಕೊಂಡಿದ್ದು, ಈ ವೇಳೆ ಪೊಲೀಸರು ಮಾರ್ಗಮಧ್ಯದಲ್ಲೇ ಮೆರವಣಿಗೆ ತಡೆದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. …

Read More »

ಸಿಬಿಐ ತನಿಖೆಯಾಗಲಿ. ‘ಮಹಾನ್ ನಾಯಕನೇ’ ಇದರಲ್ಲೂ ಭಾಗಿ

ಬೆಳಗಾವಿ: ನನ್ನ ಸಿಡಿ ತಯಾರಿಸಿದ್ದ ‘ಮಹಾನ್ ನಾಯಕನೇ’ ಇದರಲ್ಲೂ ಭಾಗಿ ಆಗಿದ್ದಾರೆ. ನನ್ನ ಸಿಡಿ ತಯಾರಿಸಿದ ಟೀಂನವರೇ ಇದರಲ್ಲೂ ಷಡ್ಯಂತ್ರ ಮಾಡಿದ್ದಾರೆ. ಹೀಗಾಗಿ ಸಂತೋಷ್ ಪ್ರಕರಣದ ಬಗ್ಗೆ ಸಿಬಿಐ ತನಿಖೆಯಾಗಲಿ. ಯಾವುದೇ ಕಾರಣಕ್ಕೂ ಈಶ್ವರಪ್ಪ ರಾಜೀನಾಮೆ ನೀಡಬಾರದು. ತನಿಖೆಯಲ್ಲಿ ತಪ್ಪಿತಸ್ಥನೆಂದು ಸಾಬೀತಾದ್ರೆ ರಾಜೀನಾಮೆ ನೀಡಲಿ. ಅಲ್ಲಿಯವರೆಗೂ ಸಚಿವ ಈಶ್ವರಪ್ಪ ರಾಜೀನಾಮೆ ನೀಡಬಾರದು ಎಂದು ಸಂತೋಷ್ ಪ್ರಕರಣದ ಬಗ್ಗೆ ಶಾಸಕ ಹಾಗೂ ಮಾಜಿ ಸಚಿವ ರಮೇಶ್‌ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದಾರೆ. …

Read More »

ಪಕ್ಷದ ಚಟುವಟಿಕೆಯಿಂದ ದೂರವಿದ್ದ ಜಮೀರ್.. ಖಾಸಗಿ ಹೋಟೆಲ್ ನಲ್ಲಿ ಸುರ್ಜೆವಾಲಾ ಭೇಟಿ, ಚರ್ಚೆ

ಬೆಂಗಳೂರು: ರಾಜ್ಯ ಕಾಂಗ್ರೆಸ್ ಚಟುವಟಿಕೆಯಿಂದ ದೂರವೇ ಉಳಿದಿರುವ ಮಾಜಿ ಸಚಿವ ಜಮೀರ್ ಅಹಮದ್ ಖಾನ್​ ಅವರು ಬುಧವಾರ ರಾತ್ರಿ ದಿಢೀರ್ ಆಗಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾರನ್ನು ಭೇಟಿಯಾಗಿ ಅಚ್ಚರಿ ಮೂಡಿಸಿದ್ದಾರೆ. ಕಾಂಗ್ರೆಸ್​ನಲ್ಲಿ ಮುಂದುವರೆದ ಜಮೀರ್ ಅಹ್ಮದ್ ಖಾನ್ ಅಸಮಾಧಾನ ಈ ಭೇಟಿ ಮೂಲಕ ಇನ್ನೊಂದು ಹಂತವನ್ನು ತಲುಪಿದೆ ಎಂಬ ಮಾಹಿತಿ ಇದ್ದು, ತಮ್ಮ ಬೇಸರ, ಅಸಮಾಧಾನ ಹಾಗೂ ಕೋಪವನ್ನು ಸುರ್ಜೇವಾಲಾ ಅವರಿಗೆ ವಿವರಿಸಿದ್ದಾರೆ ಎಂಬ ಮಾಹಿತಿ ಇದೆ. …

Read More »

ಪ್ರತಿಭಟನೆ ನಡುವೆಯೇ ಗುತ್ತಿಗೆದಾರ ಸಂತೋಷ್​ ಪಾಟೀಲ್​ ಅಂತ್ಯಕ್ರಿಯೆ

ಬೆಳಗಾವಿ: ಸಚಿವ ಕೆ.ಎಸ್. ಈಶ್ವರಪ್ಪ ಹೆಸರು ಬರೆದಿಟ್ಟು ಉಡುಪಿಯ ಖಾಸಗಿ ಲಾಡ್ಜ್‌ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದ ಗುತ್ತಿಗೆದಾರ ಸಂತೋಷ್​ ಪಾಟೀಲ್​ ಅವರ ಅಂತ್ಯಕ್ರಿಯೆ ಬೆಳಗಾವಿ ತಾಲೂಕಿನ ಬಡಸ್ ಗ್ರಾಮದಲ್ಲಿ ಇಂದು ನಡೆಯಿತು. ಕಾಂಗ್ರೆಸ್ ನಾಯಕರ ತೀವ್ರ ವಿರೋಧದ ನಡುವೆಯೂ ಗ್ರಾಮಸ್ಥರು ಹಾಗೂ ಕುಟುಂಬಸ್ಥರು ಸೇರಿ ಅಂತ್ಯಕ್ರಿಯೆ ನೆರವೇರಿಸಿದ್ದಾರೆ‌. ಸಂತೋಷ್ ಪಾಟೀಲ್​ ಅವರ ಜಮೀನಿನಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಇಂದು ಗ್ರಾಮದಲ್ಲಿ ಮೂರು ಮದುವೆ ಇದ್ದ ಕಾರಣ ಬೇಗ ಅಂತ್ಯಕ್ರಿಯೆ …

Read More »

ನಿಮಗೇನಾದರೂ ಮಾನ ಮರ್ಯಾದೆ ಇದ್ದರೆ ಕೂಡಲೇ ಈಶ್ವರಪ್ಪ ಅರೆಸ್ಟ್ ಮಾಡಿ: ಮಾಜಿ ಸಿಎಂ ಸಿದ್ಧರಾಮಯ್ಯ

ಗುತ್ತಿಗೆದಾರ ಸಂತೋಷ್ ಪಾಟೀಲ್ ನನ್ನ ಸಾವಿಗೆ, ಈಶ್ವರಪ್ಪ ನೇರ ಕಾರಣ ಅಂತ ಡೆತ್ ನೋಟ್ ನಲ್ಲಿ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪ್ರಿವೆನ್ಶನ್ ಆಫ್ ಕರಪ್ಶನ್ ಆಕ್ಟ್ ಸೆಕ್ಷನ್ 30 ಅಡಿಯಲ್ಲಿ ಈಶ್ವರಪ್ಪ ವಿರುದ್ಧ ಪ್ರಕರಣ ದಾಖಲಿಸಬೇಕು. ಕಾನೂನು ಎಲ್ಲರಿಗೂ ಒಂದೇ. ಅದು ಸಿಎಂ ಆಗಿರಲಿ, ಸಚಿವರಾಗಿರಲಿ ಎಲ್ಲರಿಗೂ ಕಾನೂನು ಒಂದೇ. ಇದು ಬಹಳ ಸೀರಿಯಸ್ ಅಫೆನ್ಸ್ ಆದ್ದರಿಂದ ಕೂಡಲೇ ಈಶ್ವರಪ್ಪನವರ ಅರೆಸ್ಟ್ ಮಾಡಿ ಎಂದು ಸಿದ್ಧರಾಮಯ್ಯ ಆಗ್ರಹಿಸಿದ್ದಾರೆ. ರಾಜಭವನದಲ್ಲಿ ರಾಜ್ಯಪಾಲರ …

Read More »

ಮೆಟ್ರೋದಲ್ಲಿ ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ

ಬೆಂಗಳೂರು ಮೆಟ್ರೋ ರೈಲ್ ಕಾರ್ಪೊರೇಶನ್ ಲಿಮಿಟೆಡ್ ಸಹಾಯಕ ಎಂಜಿನಿಯರ್, ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದ ಅಡಿಯಲ್ಲಿ ಕೆಲಸ ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಂಡು ಉತ್ತಮ ಹುದ್ದೆ ನಿಮ್ಮದಾಗಿಸಿಕೊಳ್ಳಬಹುದು.   ಆಸಕ್ತ ಅಭ್ಯರ್ಥಿಗಳು ಮೇ 11ರ ಮೊದಲು ಆನ್‌ಲೈನ್ ಮತ್ತು ಆಫ್‌ಲೈನ್‌ನಲ್ಲಿ ಅರ್ಜಿ ಹಾಕಬಹುದಾಗಿದೆ. ಬೆಂಗಳೂರಿನಲ್ಲಿ ಖಾಲಿ ಇರುವ 6 ಸಹಾಯಕ ಎಂಜಿನಿಯರ್, ಸಹಾಯಕ ಕಾರ್ಯನಿರ್ವಾಹಕ …

Read More »

ಸುಮ್ಮನೆ ಆರೋಪ ಮಾಡಿದ್ರೆ ಕಾನೂನು ಕ್ರಮ :ಸಚಿವ ಸುಧಾಕರ್ ವಾರ್ನಿಂಗ್

ಸುಖಾ ಸುಮ್ಮನೆ ಆರೋಪ ಮಾಡುತ್ತಿರುವ ಕೆಂಪಣ್ಣ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುತ್ತೇನೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಅವರು ಕೆಂಪಣ್ಣಗೆ ವಾರ್ನಿಂಗ್ ನೀಡಿದ್ದಾರೆ. ಈ ಸಂಬಂಧ ವಿಧಾನಸೌಧದಲ್ಲಿ ಮಾತನಾಡಿದ ಅವರು, ಅವರು ದಾಖಲೆ ಇಲ್ಲದೆ ಸರ್ಕಾರದ ವಿರುದ್ಧ ಆರೋಪ ಮಾಡಬಾರದು.   ಇಂಥವರನ್ನು ಇಟ್ಟುಕೊಂಡು ಕಾಂಗ್ರೆಸ್ ರಾಜಕಾರಣ ಮಾಡುತ್ತಿದೆ. ಸುಳ್ಳು ಆರೋಪ ಮಾಡುವವರಿಗೆ ನಾಚಿಕೆ ಅಗಬೇಕು. ಎಲ್ಲಾ ಶಾಸಕರ ಮೇಲೂ ಭ್ರಷ್ಟಾಚಾರ ಆರೋಪ ಮಾಡಿದ್ದಾರೆ. ಹಾಗಾದ್ರೆ ಕಾಂಗ್ರೆಸ್ …

Read More »

ಎಸ್‌ಎಸ್‌ಎಲ್​ಸಿ ಪರೀಕ್ಷೆ ಪತ್ರಿಕೆ ಮೌಲ್ಯಮಾಪನ ಆರಂಭ: ಫಲಿತಾಂಶ ಪ್ರಕಟ ಯಾವಾಗ ಗೊತ್ತಾ?

ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯಿಂದ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯು ಮಾರ್ಚ್ 28ರಿಂದ ಏಪ್ರಿಲ್ 11ರವರೆಗೆ ಸುಸೂತ್ರವಾಗಿ ನಡೆದಿದೆ. ಪರೀಕ್ಷಾ ಮೌಲ್ಯಮಾಪನ ಪ್ರಕ್ರಿಯೆಯು ಏಪ್ರಿಲ್ 21ರಿಂದ ಆರಂಭವಾಗಲಿದೆ. ಈ ಬಗ್ಗೆ ಇಂದು ಬೆಂಗಳೂರಿನಲ್ಲಿ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.   ರಾಜ್ಯಾದ್ಯಂತ 31 ಜಿಲ್ಲೆಗಳಲ್ಲಿನ, 234 ಮೌಲ್ಯಮಾಪನ ಕೇಂದ್ರಗಳಲ್ಲಿ ನಡೆಯಲಿದೆ. ಮೌಲ್ಯಮಾಪನಕ್ಕಾಗಿ 60,000 ಶಿಕ್ಷಕರನ್ನು ನಿಯೋಜಿಸಲಾಗುತ್ತಿದೆ. ಇತ್ತ ಎಸ್‌ಎಸ್‌ಎಲ್​ಸಿ ಮೌಲ್ಯಮಾಪನ ಕಾರ್ಯದಲ್ಲಿ ಭಾಗವಹಿಸುವ ಮೌಲ್ಯಮಾಪಕರು, ಸಿಬ್ಬಂದಿಯ ಸಂಭಾವನೆ …

Read More »