ಮುಂಬೈ: ಮಸೀದಿಗಳಲ್ಲಿರುವ ಧ್ವನಿವರ್ಧಕಗಳನ್ನು ಮೇ 3ರೊಳಗೆ ಸರ್ಕಾರ ಕ್ರಮಕೈಗೊಂಡು ತೆಗೆದುಹಾಕಬೇಕು ಎಂದು ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್‍ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಸರ್ಕಾರಕ್ಕೆ ಗಡುವು ನೀಡಿದ್ದಾರೆ. ಮಂಗಳವಾರ ಥಾಣೆಯಲ್ಲಿ ಸಾರ್ವಜನಿಕ ರ್‍ಯಾಲಿ ನಡೆಸಿ ಮಾತನಾಡಿದ ಅವರು, ಶಿವಸೇನೆ ನೇತೃತ್ವದ ರಾಜ್ಯ ಸರ್ಕಾರವು ಮೇ 3ಕ್ಕೂ ಮುನ್ನ ಮಸೀದಿಗಳಿಂದ ಧ್ವನಿವರ್ಧಕಗಳನ್ನು ತೆಗೆದುಹಾಕದಿದ್ದರೆ, ಎಂಎನ್‍ಎಸ್ ಕಾರ್ಯಕರ್ತರು ಮಸೀದಿಗಳ ಮುಂದೆ ಹನುಮಾನ್ ಚಾಲೀಸಾವನ್ನು ಹಾಕುತ್ತಾರೆ ಎಂದಿದ್ದಾರೆ. ಭಾಷಣದ ಬಳಿಕ ಅನೇಕ ಎಂಎನ್‍ಎಸ್ ಬೆಂಬಲಿಗರು ಮಸೀದಿಗಳ ಮುಂದೆ …
Read More »Yearly Archives: 2022
ಸಂತೋಷ್ ಪಾಟೀಲ್ ಆತ್ಮಹತ್ಯೆ ಕೇಸ್ – ಈಶ್ವರಪ್ಪ ವಿರುದ್ಧ ಎಫ್‍ಐಆರ್ ದಾಖಲು
ಉಡುಪಿ: ಲಾಡ್ಜ್ ನಲ್ಲಿ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಈಶ್ವರಪ್ಪ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಉಡುಪಿ ನಗರ ಠಾಣೆಯಲ್ಲಿ ಮಧ್ಯರಾತ್ರಿ 2.20ರ ಸುಮಾರಿಗೆ ಎಫ್‍ಐಆರ್ ದಾಖಲಾಗಿದೆ. ಪ್ರಕರಣದಲ್ಲಿ ಎ-1 ಆರೋಪಿ ಸಚಿವ ಕೆ.ಎಸ್ ಈಶ್ವರಪ್ಪ, ಎ-2 ಈಶ್ವರಪ್ಪ ಆಪ್ತ ಬಸವರಾಜ್, ಎ-2 ಈಶ್ವರಪ್ಪ ಆಪ್ತ ರಮೇಶ್ ಆಗಿದ್ದು, ಇವರುಗಳ ವಿರುದ್ಧ ಐಪಿಸಿ ಸೆಕ್ಷನ್ 306 (ಆತ್ಮಹತ್ಯೆಗೆ ಪ್ರಚೋದನೆ) ರಡಿ ಎಫ್‍ಐಆರ್ ದಾಖಲು ಮಾಡಿಕೊಳ್ಳಲಾಗಿದೆ.ಸಂತೋಷ್ ಆತ್ಮಹತ್ಯೆ ವಿಚಾರ ಬೆಳಕಿಗೆ …
Read More »ಕೂಡಲೇ ಈಶ್ವರಪ್ಪ ವಿರುದ್ಧ ಕೊಲೆ ಪ್ರಕರಣ ದಾಖಲಿಸಿ ಬಂಧಿಸಿ
ಬೆಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಕಾರಣ ಯಾರು ಎಂಬುದನ್ನು ಡೆತ್ ನೋಟ್ ನಲ್ಲಿ ಸ್ಪಷ್ಟವಾಗಿ ತಿಳಿಸಿದ್ದು, ಕೂಡಲೇ ಆರೋಪ ಹೊತ್ತಿರುವ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಐಪಿಸಿ ಸೆಕ್ಷನ್ 302 ಅಡಿಯಲ್ಲಿ ಕೊಲೆ ಪ್ರಕರಣ ದಾಖಲಿಸಿ ಅವರನ್ನು ಬಂಧಿಸಬೇಕು.ಕೂಡಲೇ ಆತನನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಗ್ರಹಿಸಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಅವರು, ಆರೋಪಿ ಸಚಿವರ ವಿರುದ್ಧ ಭ್ರಷ್ಟಾಚಾರ ಪ್ರಕರಣ ದಾಖಲಿಸಬೇಕು. ಈ 40% …
Read More »ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ: ಸಿಎಂ ಬೊಮ್ಮಾಯಿ ಈಶ್ವರಪ್ಪ ಕುರಿತು ಹೇಳಿದ್ದೇನು ?
ಮಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ವಿಚಾರದಲ್ಲಿ ಪಾರದರ್ಶಕವಾದ ತನಿಖೆಯನ್ನು ನಡೆಸುತ್ತೇವೆ. ತನಿಖೆಯ ಆಧಾರದಲ್ಲಿ ಮುಂದೆ ಏನು ಎಂಬುವುದನ್ನು ಚರ್ಚಿಸುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು, ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ವಿಚಾರದ ಬಗ್ಗೆ ಸಂಪೂರ್ಣ ವಿಚಾರಣೆ ಮಾಡುತ್ತೇವೆ. ಸಂತೋಷ್ ಪಾಟೀಲ್ ದೇಹ ಉಡುಪಿಯ ಲಾಡ್ಜ್ ನಲ್ಲಿ ಪತ್ತೆಯಾಗಿದೆ. ಖುದ್ದು ಎಸ್.ಪಿ ಸ್ಥಳಕ್ಕೆ ಹೋಗಿದ್ದಾರೆ ಪ್ರಾಥಮಿಕ ತನಿಖೆ ಈಗಷ್ಟೇ ನಡೆಯುತ್ತಿದೆ. ಪ್ರಾಥಮಿಕ …
Read More »ಸಂತೋಷ್ ಯಾರೆಂದೇ ನನಗೆ ಗೊತ್ತಿಲ್ಲ, : ಸಚಿವ ಈಶ್ವರಪ್ಪ
ಮೈಸೂರು: ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ 40% ಕಮಿಷನ್ ಆರೋಪ ಮಾಡಿ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದಿದ್ದ ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಇಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಶ್ವರಪ್ಪ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ಪಟ್ಟು ಹಿಡಿದಿದೆ. ಆದರೆ ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸಚಿವ ಈಶ್ವರಪ್ಪ, ‘ಸಂತೋಷ್ ಯಾರು ಎಂದೇ ನನಗೆ ಗೊತ್ತಿಲ್ಲ. ನಾನು ರಾಜೀನಾಮೆ ನೀಡುವುದಿಲ್ಲ’ ಎಂದಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ …
Read More »ಈಶ್ವರಪ್ಪ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ,: ಈಶ್ವರ್ ಖಂಡ್ರೆ
ಬೆಂಗಳೂರು:ಗುತ್ತಿಗೆದಾರ ಸಂತೋಷ ಪಾಟೀಲ ಬಿಜೆಪಿ ಸರ್ಕಾರದ ಬ್ರಹ್ಮಾಂಡ ಭ್ರಷ್ಟಾಚಾರಕ್ಕೆ ಬಲಿಪಶು ಆಗಿದ್ದಾರೆ. ಆತ್ಮಹತ್ಯೆ ಮಾಡಿಕೊಂಡಿರುವ ಸಂತೋಷ ಸಚಿವ ಕೆ ಎಸ್ ಈಶ್ವರಪ್ಪ ಅವರ ಮೇಲೆ ನೇರ ಆರೋಪ ಮಾಡಿದ್ದಾರೆ. ಆದ್ದರಿಂದ ಸರ್ಕಾರ ಕೂಡಲೇ ಈಶ್ವರಪ್ಪ ಅವರನ್ನು ಸಂಪುಟದಿಂದ ವಜಾಮಾಡಬೇಕು ಮತ್ತು ಭ್ರಷ್ಟಾಚಾರದ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಕೆಪಿಸಿಸಿ ಕಾರ್ಯಧ್ಯಕ್ಷ ಈಶ್ವರ್ ಖಂಡ್ರೆ ಆಗ್ರಹಿಸಿದ್ದಾರೆ. ಈ ಕುರಿತು ಪ್ರತಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಬಿಜೆಪಿ ಸರ್ಕಾರ …
Read More »ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ : ಉಡುಪಿಗೆ ಆಗಮಿಸಿದ ಕುಟುಂಬಿಕರು
ಉಡುಪಿ: ಕೆ.ಎಸ್. ಈಶ್ವರಪ್ಪ ವಿರುದ್ಧ ಶೇ 40ರಷ್ಟು ಕಮಿಷನ್ ಆರೋಪ ಮಾಡಿ ಉಡುಪಿಯ ಖಾಸಗಿ ಲಾಡ್ಜ್ ನಲ್ಲಿ ಆತ್ಮಹತ್ಯೆದ ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರ ಕುಟುಂಬಿಕರು ಮಂಗಳವಾರ ತಡರಾತ್ರಿ ಉಡುಪಿಗೆ ಆಗಮಿಸಿದರು. ಬೆಂಗಳೂರಿಂದ ಮತ್ತು ಬೆಳಗಾವಿಯಿಂದ ಬಂದಿರುವ ಸಹೋದರರು ಸೇರಿದಂತೆ ಎಂಟು ಮಂದಿ ಕುಟುಂಬಿಕರು ಘಟನೆ ನಡೆದ ಖಾಸಗಿ ಲಾಡ್ಜ್ ಗೆ ಆಗಮಿಸಿ ನೇರವಾಗಿ ಆತ್ಮಹತ್ಯೆ ಮಾಡಿಕೊಂಡ ರೂಮ್ ನಂಬರ್ 207 ತೆರಳಿದರು. ನಾವು ಬಾರದೆ ಯಾವುದೇ ತನಿಖೆ ಮುಂದುವರೆಸಬೇಡಿ …
Read More »ಇ-ಸ್ವತ್ತು ತಂತ್ರಾಂಶ ದುರುಪಯೋಗಪಡಿಸಿಕೊಂಡಿದ್ದ ಗ್ರಾಮ ಪಂಚಾಯಿತಿ ಪಿಡಿಒ ರವಿಕುಮಾರ್‌ನನ್ನು ಅಮಾನತು
ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆಯ ಇ-ಸ್ವತ್ತು ತಂತ್ರಾಂಶ ದುರುಪಯೋಗಪಡಿಸಿಕೊಂಡಿದ್ದ ಬೈರಮಂಗಲ ಗ್ರಾಮ ಪಂಚಾಯಿತಿ ಪಿಡಿಒ ರವಿಕುಮಾರ್‌ನನ್ನು ಅಮಾನತು ಮಾಡಿ ಸರ್ಕಾರ ಆದೇಶಿಸಿದೆ. 2021ರ ಸೆ.17ರಿಂದ 21ವರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನ ಚನ್ನಹಳ್ಳಿ ಗ್ರಾಮ ಪಂಚಾಯಿತಿ ಪಿಡಿಒ ಮತ್ತು ಇಒ ಅವರ ಇ-ಸ್ವತ್ತು ಲಾಗಿನ್ ಐಡಿಯನ್ನು ಹ್ಯಾಕ್ ಮಾಡಿ 36 ಕಂದಾಯ ಸೈಟುಗಳಿಗೆ ಇ-ಖಾತಾ ವಿತರಿಸಲಾಗಿತ್ತು.
Read More »ಬಿಜೆಪಿಯೇ ನನ್ನ ಗಂಡನನ್ನು ಸಮಾಧಿ ಮಾಡಿಬಿಡ್ತು; ಸಂತೋಷ್ ಪತ್ನಿ ಜಯಶ್ರೀ
ಬೆಳಗಾವಿ: ಬಿಜೆಪಿಯೇ ನನ್ನ ಗಂಡನನ್ನು ಸಮಾಧಿ ಮಾಡಿಬಿಡ್ತು ಎಂದು ಸಂತೋಷ್ ಪತ್ನಿ ಜಯಶ್ರೀ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಧ್ಯಮವೊಂದರ ಜೊತೆ ಮಾತನಾಡಿರುವ ಅವರು, ರಾತ್ರಿ ನನ್ನ ಪತಿ ಸಂತೋಷ್ ನನ್ನ ಜೊತೆ ಮಾತನಾಡಿದ್ದರು. ಬೆಳಗ್ಗೆ ವೇಳೆಗೆ ಅವರ ಆತ್ಮಹತ್ಯೆ ಸುದ್ದಿ ಬಂದಿದೆ. ಮದುವೆಯಾಗಿ ಇನ್ನೂ ಮೂರು ವರ್ಷ ಆಗಿದೆ. ನಾನೇನು ಮಾಡಲಿ ಈಗ ಎಂದು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ. ನನ್ನ ಬಳೆ, ಸರ ಹೀಗೆ ಎಲ್ಲಾ ಒಡವೆಗಳನ್ನು ಅಡ ಇಟ್ಟು ಕಾಮಗಾರಿಗಳನ್ನು ಮಾಡಿಸಿದ್ದರು. ಆದ್ರೆ, …
Read More »ತ್ರಿಕೋನ ಪ್ರೇಮ ಕಥೆ ದುರಂತದಲ್ಲಿ ಅಂತ್ಯ; ಮೂವರೂ ಆತ್ಮಹತ್ಯೆಗೆ ಶರಣು!
ರಾಯಚೂರು: ತ್ರಿಕೋನ ಪ್ರೇಮಕಥೆಯೊಂದು ದುರಂತ್ಯ ಅಂತ್ಯಕಂಡಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. ಹೌದು, ಅವನಿಗೆ ಮದುವೆ ಆಗಿದೆ. ಆದರೂ ಮತ್ತೊಂದು ಯುವತಿಯೊಂದಿಗೆ ಪ್ರೀತಿ ಪ್ರೇಮ ಮುಂದುವರೆಸಿದ್ದನು. ಆದರೆ ಇದೀಗ ಮೂವರು ಸಾವಿನ ದಾರಿ ಹಿಡಿದಿದ್ದಾರೆ. ಇದೀಗ ಆತ್ಮಹತ್ಯೆಗೆ ಶರಣಾದ ಯುವತಿಯ ಹೆಸರು ಪಾರ್ವತಿ (34). ಈಕೆ ರಾಯಚೂರಿನ ಆರ್ ಟಿಪಿಎಸ್ ನಲ್ಲಿ ಮಹಿಳಾ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದಳು. ಕೈ ತುಂಬಾ ಸಂಬಳ ಬರುವ, ಇರೊಕ್ಕೊಂದು ಕ್ವಾಟ್ರಸ್ ಇದ್ದ ಈಕೆ ಬಿದ್ದಿದ್ದು …
Read More »