Breaking News

Yearly Archives: 2022

ಚೌಕಿದಾರ್ ಚೋರ್ ಹೇ ಘೋಷಣೆ ಮೊಳಗಿಸಿ ಸೇನೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಜನ

ಪಾಕಿಸ್ತಾನದ ಪ್ರಧಾನಿಯಾಗಿದ್ದ ಇಮ್ರಾನ್ ಖಾನ್ ಅಧಿಕಾರ ಕಳೆದುಕೊಳ್ಳಲು ಸೇನೆಯೇ ಮುಖ್ಯ ಕಾರಣ ಎಂದು ಅಲ್ಲಿನ ಜನರು ನಂಬಿದ್ದಾರೆ.ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಭಾನುವಾರ ತೆಹ್ರೀಕ್-ಎ-ಇನ್​ಸಾಫ್ (ಪಿಟಿಐ) ಪಕ್ಷ ನಡೆದ ಪ್ರತಿಭಟನಾ ಸಮಾವೇಶದಲ್ಲಿ ಪಾಲ್ಗೊಂಡಿದ್ದ ಜನರು ‘ಚೌಕಿದಾರ್ ಚೋರ್ ಹೇ’ ಘೋಷಣೆ ಮೊಳಗಿಸಿ ಸೇನೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಈ ಘೋಷಣೆಯನ್ನು ಮೊದಲ ಬಾರಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಬಳಕೆ ಮಾಡಿದ್ದರು. ಪಾಕಿಸ್ತಾನದ ಪ್ರಧಾನಿಯಾಗಿದ್ದ ಇಮ್ರಾನ್ ಖಾನ್ …

Read More »

Hijab ಧರಿಸಿ​ ಬಂದ್ರೆ ದ್ವಿತೀಯ ಪಿಯು ಪರೀಕ್ಷೆ ನೋ ಎಂಟ್ರಿ

ಏಪ್ರಿಲ್ 22 ರಿಂದ 18ರವರೆಗೆ ನಡೆಯಲಿರುವ ದ್ವಿತೀಯ ಪಿಯೂಸಿ ಪರೀಕ್ಷೆಗೆ (2nd PU Exam) ಹಿಜಾಬ್ ಧರಿಸಿ ಬಂದರೆ ಪರೀಕ್ಷೆ ಬರೆಯಲು ಅವಕಾಶ ಒದಗಿಸುವುದಿಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಸ್ಪಷ್ಟನೆ ನೀಡಿದೆ. ಈಕುರಿತು ಅಧಿಕೃತ ಪ್ರಕಟಣೆ ಹೊರಡಿಸಿರುವ ಸಾರ್ವಜನಿಕ ಶಿಕ್ಷಣ ಇಲಾಖೆ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ (Hijab Ban) ಬಂದ್ರೆ ದ್ವಿತೀಯ ಪಿಯುಸಿ ಪರೀಕ್ಷೆಗೆ ನೋ ಎಂಟ್ರಿ ಎಂದು ಖಚಿತಪಡಿಸಿದೆ. ಈಮೂಲಕ SSLC ಪರೀಕ್ಷೆ ಮಾದರಿಯಲ್ಲೇ ದ್ವಿತೀಯ ಪಿಯು …

Read More »

ಜಿಲ್ಲೆಗೊಂದು ಇಎಸ್‌ಐ ಆಸ್ಪತ್ರೆ; ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಿದ ಸಚಿವ ಹೆಬ್ಬಾರ್

ಬೆಂಗಳೂರು: ರಾಜ್ಯದ ಕಾರ್ಮಿಕರಿಗೆ ಹೆಚ್ಚಿನ ಅನುಕೂಲ ಆಗುವಂತೆ ಕೇಂದ್ರದ ಸಹಕಾರ ಕೋರಿರುವ ಸಚಿವ ಶಿವರಾಂ ಹೆಬ್ಬಾರ್, ಇಎಸ್‌ಐ ಆಸ್ಪತ್ರೆಗಳಲ್ಲಿ ಅಸಂಘಟಿತ ಕಾರ್ಮಿಕರಿಗೂ ವೈದ್ಯಕೀಯ ಸೌಲಭ್ಯ, ಜಿಲ್ಲೆಗೊಂದು ಇಎಸ್‌ಐ ಆಸ್ಪತ್ರೆ ತೆರೆಯಲು ಅನುಮತಿ, ಕಾರ್ಮಿಕ ಕಲ್ಯಾಣ ಮಂಡಳಿಗೆ ಸೆಸ್‌ ರಿಯಾಯಿತಿ ಸೇರಿದಂತೆ ಹಲವು ಅಂಶಗಳ ಪ್ರಸ್ತಾವನೆಯನ್ನು ಕೇಂದ್ರಕ್ಕೆ ಸಲ್ಲಿಸಿದರು. ಇದಕ್ಕೆ ಕೇಂದ್ರದ ಸಚಿವರುಗಳಿಂದ ಸಕಾರಾತ್ಮಕ ಸ್ಪಂದನೆ ಕೂಡ ಸಿಕ್ಕಿದೆ. ಕೇಂದ್ರ ಕಾರ್ಮಿಕ ಸಚಿವ ಭೂಪೇಂದ್ರ ಸಿಂಗ್‌ ಯಾದವ್‌ ಅವರನ್ನು ಭೇಟಿ ಮಾಡಿ ಮಾತುಕತೆ …

Read More »

ಜನತೆಗೆ ಮತ್ತೊಂದು ಶಾಕ್: ಶೀಘ್ರವೇ ಗೃಹ ಸಾಲ ಬಡ್ಡಿದರ ಏರಿಕೆ

ನವದೆಹಲಿ: ಈಗಾಗಲೇ ಅಗತ್ಯವಸ್ತುಗಳ ಬೆಲೆ, ತೈಲಬೆಲೆಯಿಂದ ತತ್ತರಿಸಿರೋ ದೇಶದ ಜನತೆಗೆ ಶೀಘ್ರವೇ ಗೃಹ ಸಾಲ ಬಡ್ಡಿ ದರ ಏರಿಕೆಯ ಶಾಕ್ ಸಿಗಲಿದೆ ಎಂದು ಹೇಳಲಾಗುತ್ತಿದೆ. ಬ್ಯಾಂಕ್ ಠೇವಣಿಗಳ ದರ ಏರಿಕೆಯಾಗುವ ರೀತಿಯಲ್ಲೇ ಗೃಹ ಸಾಲದ ಬಡ್ಡಿದರ ಕೂಡ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಈ ಗೃಹ ಸಾಲವನ್ನು ಆರಂಭಿಕ ಹಂತದಲ್ಲಿ 5 ಮೂಲಾಂಶಗಳಷ್ಟು ಹೆಚ್ಚಳ ಮಾಡೋ ನಿರೀಕ್ಷೆಯಿದೆ ಎಂಬುದಾಗಿ ಬ್ಯಾಂಕ್ ನ ಉನ್ನತ ಮೂಲಗಳಿಂದ ತಿಳಿದು ಬಂದಿದೆ. ಅಂದಹಾಗೇ …

Read More »

ರಾಜ್ಯ ಸರ್ಕಾರದಿಂದ ಬಿಪಿಎಲ್ ಕಾರ್ಡ್ ದಾರರಿಗೆ ಸಿಹಿ ಸುದ್ದಿ!

ರಾಜ್ಯ ಸರಕಾರದಿಂದ ನಿವೇಶನ ಇಲ್ಲದ ಬಡ ಜನರಿಗೆ 3 ಲಕ್ಷ ಮನೆಗಳನ್ನು ನಿರ್ಮಿಸಲಾಗುವುದು ಎಂದು ವಸತಿ ಸಚಿವ ವಿ. ಸೋಮಣ್ಣ ಹೇಳಿದ್ದಾರೆ. ಬೆಂಗಳೂರಿನ ವಿವಿ ಪುರಂನಲ್ಲಿ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೊಳಚೆ ಪ್ರದೇಶ ಅಭಿವೃದ್ದಿ ಮಂಡಳಿಯಿಂದ 1.8 ಲಕ್ಷ ಮನೆಗಳು ಮತ್ತು ರಾಜೀವ್‌ ಗಾಂಧೀ ಆವಾಸ್‌ ವಸತಿ ಯೋಜನೆಯಡಿ 1.20 ಲಕ್ಷ ಮನೆಗಳು ಸೇರಿದಂತೆ ಒಟ್ಟು 3 ಲಕ್ಷ ಮನೆ ನಿರ್ಮಿಸಿ ವಸತಿ …

Read More »

ಕೇಂದ್ರ ಸಚಿವ ಅಮೀತ್ ಷಾ ಅವರಿಂದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರಿಗೆ ಪ್ರಶಸ್ತಿ ಪ್ರದಾನ

    *ಗುಜರಾತ್ ಗಾಂಧೀ ನಗರದಲ್ಲಿ ಭಾನುವಾರದಂದು ನಡೆದ ಎನ್ ಸಿ ಡಿ ಎಫ್ ಐ ಸಂಸ್ಥೆಯ ಸುವರ್ಣ ಮಹೋತ್ಸವ ಕಾರ್ಯಕ್ರಮ ದಲ್ಲಿ ಕೆಎಂಎಫ್ ಗೆ ಪ್ರಶಸ್ತಿ ನೀಡಿ ಗೌರವಿಸಿದ ಸಚಿವ ಅಮೀತ್ ಷಾ.*   👉Breaking News👉👉👉 2023ರಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದು ಖಚಿತ: ಯುವ ನಾಯಕ ರಾಹುಲ್‌ ಜಾರಕಿಹೊಳಿ.     ಬೆಂಗಳೂರು- ದೇಶದ ಪ್ರತಿಷ್ಠಿತ ಸಹಕಾರಿ ಸಂಸ್ಥೆಯಾಗಿರುವ ರಾಷ್ಟ್ರೀಯ ಸಹಕಾರಿ ಹೈನುಗಾರಿಕೆ ಮಹಾ ಮಂಡಲ ( …

Read More »

ಭೀಕರ ಅಪಘಾತ: ಸ್ಥಳದಲ್ಲೇ ಮೂವರ ಸಾವು, ಮಗುವಿನ ಸ್ಥಿತಿ ಗಂಭೀರ

ತುಮಕೂರು: ನಿಂತಿದ್ದ ಲಾರಿಗೆ ಹಿಂಬದಿಯಿಂದ ಇನೋವಾ ಕಾರು ಡಿಕ್ಕಿ ಹೊಡೆದಿದ್ದು, ಅಪಘಾತದ ರಭಸಕ್ಕೆ ಸ್ಥಳದಲ್ಲೇ ಮೂವರು ಮೃತಪಟ್ಟಿದ್ದಾರೆ. ಒಂದು ಮಗುವಿನ ಸ್ಥಿತಿ ಗಂಭೀರವಾಗಿದೆ. ಇಂತಹ ಭೀಕರ ಅಪಘಾತ ಭಾನುವಾರ ಬೆಳಗ್ಗೆ ತುಮಕೂರು ತಾಲೂಕಿನ ಕಟ್ಟಿಗೇನಗಹಳ್ಳಿ ಗೇಟ್ ಬಳಿಯ ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಸಂಭವಿಸಿದೆ. ಕಾರಿನಲ್ಲಿ 7 ಮಂದಿ ಪ್ರಯಾಣಿಸುತ್ತಿದ್ದರು. ಕಟ್ಟಿಗೇನಗಹಳ್ಳಿ ಗೇಟ್ ಬಳಿ ರಸ್ತೆಬದಿ ಲಾರಿಯೊಂದು ನಿಂತಿತ್ತು. ತುಮಕೂರು ಕಡೆಯಿಂದ ಶಿರಾದತ್ತ ತೆರಳುತ್ತಿದ್ದ ಕಾರು ಲಾರಿಗೆ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಕಾರು …

Read More »

ಮೊಟ್ಟೆ ದರದಲ್ಲಿ ಭಾರಿ ಇಳಿಕೆ

ಬೇಸಿಗೆಯಿಂದಾಗಿ ಮೊಟ್ಟೆ ದರದಲ್ಲಿ ಭಾರಿ ಇಳಿಕೆಯಾಗಿದೆ. ಈ ಹಿಂದೆ 5.30-6.30 ರೂ. ತಲುಪಿದ್ದ ಮೊಟ್ಟೆ ಬೆಲೆ ಈಗ 3.70-4.50 ರೂ. ತಲುಪಿದೆ. ಹೌದು ಬೆಂಗಳೂರು, ಮೈಸೂರಿನಲ್ಲಿ ಮೊಟ್ಟೆ ಬೆಲೆ 4.30 ರೂ.ನಷ್ಟಿದ್ದರೆ ಹೈದರಾಬಾದ್ ನಲ್ಲಿ 3.70 ರೂ. ನಷ್ಟಿದೆ. ಹೊಸಪೇಟೆಯಲ್ಲಿ 3.90 ರೂ.ನಷ್ಟಿದೆ.   ಇದು ಸಗಟು ಬೆಲೆಯಾಗಿದ್ದು ಚಿಲ್ಲರೆ ಬೆಲೆಯಲ್ಲಿ 20-30 ಪೈಸೆಯಷ್ಟು ಹೆಚ್ಚಳವಾಗಲಿದೆ. ಬೇಸಿಗೆಯಲ್ಲಿ ಮೊಟ್ಟೆ ಬೇಡಿಕೆ ಇಳಿಕೆಯಾದ ಹಿನ್ನೆಲೆಯಲ್ಲಿ ಬೆಲೆ ಕೂಡ ಕುಸಿತಕಂಡಿದೆ.

Read More »

ರಾಯಚೂರು: ಬಾವಿಗೆ ಬಿದ್ದು ಯುವಕ ಸಾವು

ರಾಯಚೂರು: ಸಮೀಪದ ಯರಮರಸ್ ನಲ್ಲಿ ಬಾವಿಗೆ ಯುವಕನೋರ್ವ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಮೃತ ಯುವಕನನ್ನು ಡಿ.ಪಾಂಡು ( 27) ಎಂದು ಗುರುತಿಸಲಾಗಿದೆ. ಬಾವಿಯಲ್ಲಿದ್ದ ಜಲಚರಗಳಿಗೆ ಆಹಾರ ನೀಡುವ ಹವ್ಯಾಸ ಹೊಂದಿದ್ದ ಪಾಂಡು ಶನಿವಾರ ಕಾಲು ಜಾರಿ ಬಾವಿಗೆ ಬಿದ್ದಿರಬಹುದು ಎಂದು ಶಂಕಿಸಲಾಗಿದೆ. ಈಜು ಬಾರದ ಕಾರಣ ಬಾವಿಯಲ್ಲಿ ಬಿದ್ದು ಮೃತಪಟ್ಟಿದ್ದಾನೆ ಎನ್ನಲಾಗಿದೆ. ರವಿವಾರ ಬೆಳಗ್ಗೆ ಶವ ಮೇಲೆ ಬಂದಿದ್ದು, ಘಟನೆ ಬೆಳಕಿಗೆ ಬಂದಿದೆ. ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ …

Read More »

ಹಿಂದೂ-ಮುಸ್ಲೀಂ ಸೇರಿ ಕೇಸರಿ ಶಾಲು ಧರಿಸಿ, ಪಾನಕ-ಪಲಾರ ಹಂಚಿ ರಾಮನವಮಿ ಆಚರಣೆ :

ತುಮಕೂರು: ರಾಜ್ಯದಲ್ಲಿ ಹಿಜಾಬ್, ಹಲಾಲ್ ಕಟ್, ಮುಸ್ಲೀಂ ವ್ಯಾಪಾರ ಬ್ಯಾನ್ ನಡುವೆಯೂ, ಇಂದು ರಾಮನವಮಿಯಂದು ( Rama Navami ), ಸಂಭ್ರಮದಿಂದ ಹಿಂದೂ-ಮುಸ್ಲೀಂ ಮುಖಂಡರು ಆಚರಿಸಿರೋ ಘಟನೆ, ತುಮಕೂರಿನಲ್ಲಿ ನಡೆದಿದೆ.ಇಂದು ತುಮಕೂರಿನ ಭದ್ರಮ್ಮ ಸರ್ಕಲ್ ನಲ್ಲಿ ಇಂದು ರಾಮನವಮಿಯ ಸಂದರ್ಭದಲ್ಲಿ, ಯುವ ಕಾಂಗ್ರೆಸ್ ಕಾರ್ಯಕರ್ತರು ಸೇರಿ ಕೇಸರಿ ಶಾಲು ತೊಟ್ಟು, ಜೈ ಶ್ರೀರಾಮ್ ಘೋಷಣೆ ಕೂಗಿ, ಸಾರ್ವಜನಿಕರಿಗೆ ಪಾನಕ-ಪಲಾರ, ಮಜ್ಜಿಗೆ ಹಂಚಿ ಗಮನ ಸೆಳೆದರು.

Read More »