Breaking News

Yearly Archives: 2022

ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆಗೆ ರಕ್ಷಣಾ ಸಚಿವಾಲಯದಿಂದ ಅನುಮೋದನೆ- ಸಂಸದ ಈರಣ್ಣಾ ಕಡಾಡಿ

ಬೆಳಗಾವಿ: ಸ್ವತಂತ್ರ ಸೇನಾನಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಸ್ಮರಣೆಗಾಗಿ ಕರ್ನಾಟಕ ಸರ್ಕಾರ ಬೆಳಗಾವಿ ಜಿಲ್ಲೆಯ ಸಂಗೋಳ್ಳಿ ಗ್ರಾಮದಲ್ಲಿ ನಿರ್ಮಿಸಿರುವ ಸೈನಿಕ ಶಾಲೆಯನ್ನು ಕೇಂದ್ರ ರಕ್ಷಣಾ ಇಲಾಖೆಯ ಅಧೀನದಲ್ಲಿ ತೆಗೆದುಕೊಳ್ಳುವ ರಾಜ್ಯ ಸರ್ಕಾರದ ಪ್ರಸ್ತಾವನೆಗೆ ಕೇಂದ್ರ ರಕ್ಷಣಾ ಸಚಿವಾಲಯ ಅನುಮೋದನೆ ನೀಡಿರುವುದು ಸ್ವಾಗತಾರ್ಹ ಎಂದು ಸಂಸದ ಈರಣ್ಣ ಕಡಾಡಿ ಹರ್ಷ ವ್ಯಕ್ತಪಡಿಸಿದರು. ರವಿವಾರ ಮಾ-27 ರಂದು ಪತ್ರಿಕಾ ಹೇಳಿಕೆ ನೀಡಿರುವ ಸಂಸದ ಈರಣ್ಣ ಕಡಾಡಿ ಅವರು ದೇಶಾದ್ಯಂತ 100 ಹೊಸ ಸೈನಿಕ …

Read More »

ಖಾಸಗಿ ಮಾರುಕಟ್ಟೆಗೆ ಅವಕಾಶ ನೀಡಿರುವದನ್ನು ಖಂಡಿಸಿ ಎಪಿಎಂಸಿ ಮಾರುಕಟ್ಟೆಯ ವ್ಯಾಪಾರಿಗಳ ಪ್ರತಿಭಟಿಸಿ ಎಲ್ಲರ ಗಮನ ಸೆಳೆದಿದ್ದಾರೆ.

ಬೆಳಗಾವಿ- ಬೆಳಗಾವಿಯಲ್ಲಿ ಜೈ ಕಿಸಾನ್ ಖಾಸಗಿ ಮಾರುಕಟ್ಟೆಗೆ ಅವಕಾಶ ನೀಡಿರುವದನ್ನು ಖಂಡಿಸಿ ಎಪಿಎಂಸಿ ಮಾರುಕಟ್ಟೆಯ ವ್ಯಾಪಾರಿಗಳು ಇಂದು ಡಿಸಿ ಕಚೇರಿ ಎದುರು ಅರಬೆತ್ತಲೆಯಾಗಿ ಪ್ರತಿಭಟಿಸಿ ಎಲ್ಲರ ಗಮನ ಸೆಳೆದಿದ್ದಾರೆ. ಜೈ ಕಿಸಾನ್ ಮಾರುಕಟ್ಟೆ ಅನಧಿಕೃತ ವಾಗಿದೆ ಈ ಮಾರುಕಟ್ಟೆಯಿಂದಾಗಿ ಎಪಿಎಂಸಿ ಯಾರ್ಡ್ ನಲ್ಲಿದ್ದ ತರಕಾರಿ ಮಾರುಕಟ್ಟೆ ಸಂಪೂರ್ಣವಾಗಿ ಸ್ಣಗಿತವಾಗಿದೆ.ಲಕ್ಷಗಟ್ಟಲೆ ಹಣ ಪಾವತಿ ಮಾಡಿ ಎಪಿಎಂಸಿ ಯಾರ್ಡ್ ನಲ್ಲಿ ಮಳಿಗೆ ಪಡೆದಿದ್ದೆವು ಆದ್ರೆ ಖಾಸಗಿ ತರಕಾರಿ ಮಾರುಕಟ್ಟೆಯಿಂದ ಎಪಿಎಂಸಿ ತರಕಾರಿ ಮಾರುಕಟ್ಟೆ …

Read More »

ವಿವಾಹವಾದ 10 ದಿನದಲ್ಲೇ ಮಹಿಳಾ ಟೆಕ್ಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ!

ಬೆಂಗಳೂರು: ಅಮೃತಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಹತ್ತು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ಮಹಿಳಾ ಟೆಕ್ಕಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಕೆಂಪಾಪುರ ನಿವಾಸಿ ನಿಖೀಲಾ(37) ಮೃತ ಟೆಕಿ.ನಿಖೀಲಾ ಖಾಸಗಿ ಕಂಪನಿಯಲ್ಲಿ ಸಾಫ್ಟ್ವೇರ್‌ ಎಂಜಿನಿಯರ್‌ ಆಗಿದ್ದು, ಪತಿ ಅರ್ಜುನ್‌ ಬ್ಯಾಂಕ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದಾರೆ.   ಹತ್ತು ದಿನಗಳ ಹಿಂದಷ್ಟೇ ಮದುವೆಯಾಗಿದ್ದರು. ಬುಧವಾರ ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆಗೆ ಸೂಕ್ತ ಕಾರಣ ತಿಳಿದು ಬಂದಿಲ್ಲ. ತನಿಖೆ …

Read More »

ಮಾಜಿ ಸಿದ್ದರಾಮಯ್ಯನವರು ಚುನಾವಣೆಗೆ ಮುನ್ನವೇ ಹತಾಶರಾಗಿದ್ದಾರೆ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭೆ ಚುನಾವಣೆಗೆ ಮುನ್ನವೇ ಹತಾಶರಾಗಿ ಹೇಳಿಕೆ ನೀಡಿದ್ದಾರೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಟೀಕಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣಾ ನಂತರ ಹತಾಶರಾಗುತ್ತಾರೆ ಎಂದುಕೊಂಡಿದ್ದೆವು. ಮುಖ್ಯಮಂತ್ರಿಯಾದವರು ಸ್ವಾಮೀಜಿಗಳ ಕುರಿತು ಹೇಳಿರುವ ಹೇಳಿಕೆ ಸರಿಯಲ್ಲ. ಚುನಾವಣೆಗೂ ಮುಂಚೆಯೇ ಸೋಲು ಒಪ್ಪಿಕೊಂಡಿದ್ದಾರೆ.ಎಲ್ಲವನ್ನು ತ್ಯಾಗ ಮಾಡಿ ಸಮಾಜ ಸೇವೆ ಮಾಡುವ ಸ್ವಾಮೀಜಿಗಳ ಬಗ್ಗೆ ಅವರು ಮಾತನಾಡಿರುವುದು ಸರಿಯಲ್ಲ. ಹೀಗಾಗಿ ಸ್ವಾಮೀಜಿಗಳ ಕ್ಷಮೆಯನ್ನು ಸಿದ್ದರಾಮಯ್ಯ ಯಾಚಿಸಬೇಕು. ವೋಟ್ …

Read More »

ಶಾಲಾ ಶುಲ್ಕ ಬಾಕಿ ಕಾರಣಕ್ಕೆ ಹಾಲ್ ಟಿಕೆಟ್ ನಿರಾಕರಿಸುವಂತಿಲ್ಲ:ಸಚಿವ ಬಿ.ಸಿ. ನಾಗೇಶ್

ಬೆಂಗಳೂರು: ಶಾಲಾ ಶುಲ್ಕ ಪಾವತಿಸದೆ ಬಾಕಿ ಉಳಿಸಿಕೊಂಡ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಹಾಲ್ ಟಿಕೆಟ್ ನಿರಾಕರಿಸುವಂತಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದರು. ಶಿಕ್ಷಣ ಇಲಾಖೆ ಅಧಿಕಾರಿಗಳ ಮೂಲಕ ಆಯಾ ಜಿಲ್ಲೆಗಳ ಶಿಕ್ಷಣ ಸಂಸ್ಥೆಗಳಿಗೆ ಸೂಚನೆ ನೀಡಲಾಗಿದೆ ಎಂದು ಹೇಳಿದ್ದಾರೆ.   ಸದನದಲ್ಲಿ ಶಾಸಕ ಆರ್.ರಂಗನಾಥ್ ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವರು ಖಾಸಗಿ ಅನುದಾನಿತ ಶಾಲೆಗಳಲ್ಲಿ ಶುಲ್ಕ ಬಾಕಿ ಉಳಿಸಿಕೊಂಡ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ನಿರಾಕರಿಸಬಾರದು. …

Read More »

ಚಾಮರಾಜನಗರ ಹಾಲಿ ನಗರಸಭಾ ಸದಸ್ಯನಿಗೆ ಜೈಲು ಶಿಕ್ಷೆ

ಚಾಮರಾಜನಗರ: ಸರ್ಕಾರಿ ಕಾರ್ಯಕ್ರಮಕ್ಕೆ ಅಡ್ಡಿಪಡಿಸುವುದರ ಜೊತೆಗೆ ನಗರಸಭೆ ಆಯುಕ್ತರಿಗೆ ಕೊಲೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿನ ನಗರಸಭೆಯ ಹಾಲಿ ಸದಸ್ಯ ಆರ್‌.ಪಿ.ನಂಜುಂಡಸ್ವಾಮಿಗೆ ಚಾಮರಾಜನಗರದ ನ್ಯಾಯಾಲಯ ಒಂದು ವರ್ಷ ಸಾದಾ ಕಾರಾಗೃಹ ಶಿಕ್ಷೆ ವಿಧಿಸಿದೆ.   2010ರ ನವೆಂಬರ್‌ 10ರಂದು ಈ ಪ್ರಕರಣ ನಡೆದಿತ್ತು. ಆರ್‌.ಪಿ.ನಂಜುಂಡಸ್ವಾಮಿ ಅವರು ಆಗ ನಗರಸಭೆಯ ಸದಸ್ಯರಾಗಿದ್ದರು. ಈಗಲೂ ಅವರು 15ನೇ ವಾರ್ಡ್‌ ಸದಸ್ಯರಾಗಿದ್ದಾರೆ. ಅವರ ವಿರುದ್ಧ ಅಂದಿನ ನಗರಸಭೆ ಆಯುಕ್ತ ಎಸ್‌.ಪ್ರಕಾಶ್‌ ಅವರು ‍ಪೊಲೀಸರಿಗೆ ದೂರು …

Read More »

ದೇಶದಲ್ಲಿ ಕಲ್ಲಿದ್ದಲು ಕೊರತೆಯಿಲ್ಲ: ಕೇಂದ್ರ ಕಲ್ಲಿದ್ದಲು ಸಚಿವ ಪ್ರಹ್ಲಾದ್ ಜೋಶಿ

ನವದೆಹಲಿ: ದೇಶದಲ್ಲಿ ಕಲ್ಲಿದ್ದಲು ಕೊರತೆಯಿಲ್ಲ ಎಂದು ಕೇಂದ್ರ ಕಲ್ಲಿದ್ದಲು ಸಚಿವ ಪ್ರಹ್ಲಾದ್ ಜೋಶಿ ಶನಿವಾರ ಒತ್ತಿ ಹೇಳಿದರು. ಅಸ್ಸಾಂನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಕಲ್ಲಿದ್ದಲು ಕೊರತೆ ಇಲ್ಲ.ದೇಶದಲ್ಲಿ ಎಲ್ಲಿಯೂ ವಿದ್ಯುತ್ ಉತ್ಪಾದನೆ ಕಡಿಮೆಯಾಗಿಲ್ಲ ಎಂದು ಆರೋಪಗಳ ವಿರುದ್ಧ ಕಿಡಿಕಾರಿದರು.   ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಲ್ಲಿದ್ದಲು ಬೆಲೆ ಹೆಚ್ಚುತ್ತಿರುವುದನ್ನು ಉಲ್ಲೇಖಿಸಿದ ಜೋಶಿ, ಅಂತಾರಾಷ್ಟ್ರೀಯ ಕಲ್ಲಿದ್ದಲು ಬೆಲೆ ಇಳಿಕೆಯಾಗಿದೆ ಆದರೆ ಹೆಚ್ಚುತ್ತಿರುವ ದೇಶೀಯ ಉತ್ಪಾದನೆಯಿಂದ ದೇಶದಲ್ಲಿ ಕಲ್ಲಿದ್ದಲು ಕೊರತೆ ಇಲ್ಲ ಎಂದರು. ಅಂತರಾಷ್ಟ್ರೀಯ …

Read More »

ಕರ್ನಾಟಕದ ನಂತರ ಇದೀಗ ಮಧ್ಯಪ್ರದೇಶದಲ್ಲಿಯೂ ಚರ್ಚೆಗೆ ಕಾರಣವಾಗುತ್ತಿದೆ ಹಿಜಾಬ್!

ಹೊಸದಿಲ್ಲಿ: ಕರ್ನಾಟಕದ ನಂತರ ಇದೀಗ ಮಧ್ಯಪ್ರದೇಶದಲ್ಲಿಯೂ ಹಿಜಾಬ್ ಭಾರೀ ಚರ್ಚೆಗೆ ಕಾರಣವಾಗುತ್ತಿದೆ. ಮಧ್ಯಪ್ರದೇಶದ ಡಾ. ಹರಿಸಿಂಗ್ ಗೌರ್ ವಿಶ್ವವಿದ್ಯಾಲಯದಲ್ಲಿ (ಎಚ್‌ಜಿಯು) ಮುಸ್ಲಿಂ ಬಾಲಕಿಯೊಬ್ಬಳು ಹಿಜಾಬ್ ಧರಿಸಿ ತರಗತಿಯೊಳಗೆ ನಮಾಜ್ ಮಾಡುತ್ತಿರುವ ವೀಡಿಯೊ ವಿವಾದವನ್ನು ಹುಟ್ಟುಹಾಕಿದೆ.   ಹಿಂದು ಕಾರ್ಯಕರ್ತರ ಗುಂಪು ಹಿಂದು ಜಾಗರಣ ಮಂಚ್‌ನಿಂದ ದೂರನ್ನು ಸ್ವೀಕರಿಸಿದ ನಂತರ ವಿಶ್ವವಿದ್ಯಾಲಯವು ಇದೀಗ ಘಟನೆಯ ಬಗ್ಗೆ ತನಿಖೆಗೆ ಆದೇಶಿಸಿದೆ. ಮಧ್ಯಪ್ರದೇಶದ ಸಾಗರ್‌ನಲ್ಲಿರುವ ವಿಶ್ವವಿದ್ಯಾನಿಲಯಕ್ಕೆ ಕ್ರಮಕ್ಕಾಗಿ ಒತ್ತಾಯಿಸಿ ಮನವಿ ಪತ್ರ ಸಲ್ಲಿಸಲಾಯಿತು. ನಂತರ ತನಿಖೆಗೆ …

Read More »

ಕೆಎಸ್‌ಆರ್‌ಟಿಸಿ ಬಸ್- ದ್ವಿಚಕ್ರ ವಾಹನ ಮುಖಾಮುಖಿ ಡಿಕ್ಕಿ ದಂಪತಿ ಸಾವು

ತುಮಕೂರು: ಮಧುಗಿರಿ ತಾಲ್ಲೂಕಿನ ಕಸಬಾ ವ್ಯಾಪ್ತಿಯ ಕವಾಡಿಗರ ಪಾಳ್ಯದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಹಾಗೂ ದ್ವಿಚಕ್ರ ವಾಹನ ಮುಖಾಮುಖಿ ಡಿಕ್ಕಿಯಾಗಿ, ಸ್ಥಳದಲ್ಲಿಯೇ ದಂಪತಿ ಮೃತಪಟ್ಟಿರುವ ಘಟನೆ ಭಾನುವಾರ ಬೆಳಿಗ್ಗೆ ನಡೆದಿದೆ. ಬೈಕ್‌ನಲ್ಲಿ ಸಾಗುತ್ತಿದ್ದ ತಾಲ್ಲೂಕಿನ ಗೊಂದಿಹಳ್ಳಿಯ ಶಾಂಭಶಿವಯ್ಯ( 73) ಹಾಗೂ ಶಂಕರಮ್ಮ (67) ಅಪಘಾತದಲ್ಲಿ ಮೃತಪಟ್ಟಿದ್ದಾರೆ.   ತುಮಕೂರಿನಿಂದ ಬರುತ್ತಿದ್ದ ಬೈಕ್‌ಗೆ ಮಧುಗಿರಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಕವಾಡಿಗರ ಪಾಳ್ಯದ ಸಮೀಪ ಡಿಕ್ಕಿ ಹೊಡೆದಿದೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಬಸ್‌ ವಶಕ್ಕೆ …

Read More »

ಇಂದು, ನಾಳೆ ಭಾರತ್ ಬಂದ್ ಗೆ ಕರೆ: ದೇಶಾದ್ಯಂತ ಮುಷ್ಕರ: ಬ್ಯಾಂಕ್ ಸೇರಿ ಹಲವು ಸೇವೆ ವ್ಯತ್ಯಯ

ನವದೆಹಲಿ: ಕೇಂದ್ರ ಸರ್ಕಾರದ ನೀತಿಗಳನ್ನು ವಿರೋಧಿಸಿ ಕೇಂದ್ರ ಕಾರ್ಮಿಕ ಸಂಘಟನೆಗಳ ಜಂಟಿ ವೇದಿಕೆ ಸೋಮವಾರ ಮತ್ತು ಮಂಗಳವಾರ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿದೆ. ಕಾರ್ಮಿಕ, ರೈತ ವಿರೋಧಿ, ಜನವಿರೋಧಿ ಮತ್ತು ರಾಷ್ಟ್ರವಿರೋಧಿ ನೀತಿಗಳ ವಿರುದ್ಧ ಒಕ್ಕೂಟಗಳು ಎರಡು ದಿನಗಳ ಅಖಿಲ ಭಾರತ ಮುಷ್ಕರವನ್ನು ಘೋಷಿಸಿವೆ. ಸಾರ್ವಜನಿಕ ವಲಯದ ಬ್ಯಾಂಕುಗಳನ್ನು ಖಾಸಗೀಕರಣಗೊಳಿಸುವ ಸರ್ಕಾರದ ಯೋಜನೆ ಮತ್ತು ಬ್ಯಾಂಕಿಂಗ್ ಕಾನೂನುಗಳ ತಿದ್ದುಪಡಿ ಮಸೂದೆ 2021 ಅನ್ನು ವಿರೋಧಿಸಿ ಬ್ಯಾಂಕ್ ಒಕ್ಕೂಟಗಳು ಮುಷ್ಕರದಲ್ಲಿ ಭಾಗವಹಿಸುತ್ತಿವೆ. ಇಂದು …

Read More »