Breaking News

Yearly Archives: 2022

ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಆಲ್ ದಿ ಬೆಸ್ಟ್

ಬೆಂಗಳೂರು: ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟ ಎಂದೇ ಹೇಳಲಾಗುವ ಎಸ್‌ಎಸ್‌ಎಲ್ಸಿ ಪರೀಕ್ಷೆ ಇಂದಿನಿಂದ ಆರಂಭವಾಗಲಿದೆ. ಸಮವಸ್ತ್ರ ಧರಿಸಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಬೇಕು. ಹಿಜಾಬ್ ಧರಿಸಿ ಬಂದರೆ ಪರೀಕ್ಷಾ ಕೊಠಡಿಗೆ ಅವಕಾಶ ನೀಡುವುದಿಲ್ಲ. ಕನಿಷ್ಠ ಒಂದು ಗಂಟೆಗೆ ಮೊದಲೇ ಪ್ರವೇಶ ಪತ್ರದೊಂದಿಗೆ ಪರೀಕ್ಷಾ ಕೇಂದ್ರಕ್ಕೆ ತೆರಳಿ ಮೊದಲ ದಿನ ನಡೆಯಲಿರುವ ಪ್ರಥಮ ಭಾಷೆ ಪರೀಕ್ಷೆಯನ್ನು ಎದುರಿಸಿ. ಈ ಬಾರಿ 8,73,846 ಮಂದಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. 3444 ಕೇಂದ್ರಗಳನ್ನು ತೆರೆಯಲಾಗಿದೆ. ಪರೀಕ್ಷಾ ಕೇಂದ್ರಗಳ …

Read More »

ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ರಂಗಭೂಮಿ ಕಲಾವಿದರು ಸ್ಥಳದಲ್ಲೇ ಸಾವು

ಹಾವೇರಿ : ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ರಂಗಭೂಮಿ ಕಲಾವಿದರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಕಾಕೋಳ ಗ್ರಾಮದ ಬಳಿ ಸಂಭವಿಸಿದೆ. ಮೃತರನ್ನು ಗೀತಾ ದಾವಣಗೆರೆ (34) ಮತ್ತು ಮಂಜುಳಾ (36) ಎಂದು ಗುರುತಿಸಲಾಗಿದೆ. ಮೃತರು ದಾವಣಗೆರೆ ಮೂಲದವರು ಎಂದು ತಿಳಿದುಬಂದಿದೆ. ಲಾರಿಯನ್ನು ಓವರ್ ಟೇಕ್ ಮಾಡಲು ಹೋದಾಗ, ಈ ದುರ್ಘಟನೆ ಸಂಭವಿಸಿದೆ ಎನ್ನಲಾಗ್ತಿದೆ. ದಾವಣಗೆರೆಯಿಂದ ಕಾರವಾರಕ್ಕೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ …

Read More »

ಮಂಡ್ಯ ತಹಸೀಲ್ದಾರ್​ ಅಮಾನತು: ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದ ಗ್ರಾಮಸ್ಥರು

ಮಂಡ್ಯ: ಮಂಡ್ಯ ತಹಸೀಲ್ದಾರ್ ಅಮಾನತುಗೊಂಡಿದ್ದಕ್ಕೆ ಹಳೇ ಬೂದನೂರು ಗ್ರಾಮಸ್ಥರು ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿರುವ ಅಪರೂಪದ ಪ್ರಸಂಗ ವರದಿಯಾಗಿದೆ. ಕರ್ತವ್ಯ ಲೋಪ, ಲಂಚಕ್ಕೆ ಬೇಡಿಕೆ ಮತ್ತು ದುರ್ನಡತೆ ಆರೋಪದಡಿ ತಹಸೀಲ್ದಾರ್ ಚಂದ್ರಶೇಖರ್ ಶಂಭಣ್ಣ ಗಾಳಿ ಎಂಬುವರನ್ನು ಅಮಾನತು ಮಾಡಲಾಗಿದೆ. ತಹಸೀಲ್ದಾರ್ ಅಮಾನತು ಆಗಿದ್ದಕ್ಕೆ ಡಿಸಿ ಅಶ್ವಥಿಗೆ ಮಂಡ್ಯ ತಾಲೂಕಿನ ಹಳೇ ಬೂದನೂರು ಗ್ರಾಮಸ್ಥರು ಜೈಕಾರ ಕೂಗಿ, ಸಿಹಿ ಹಂಚಿ ಸಂಭ್ರಮಿಸಿದ್ದಾರೆ. ಗ್ರಾಮಸ್ಥರು ಸ್ವಂತ ಮನೆಗಾಗಿ ಹಲವು ಬಾರಿ ಹೋರಾಟ ನಡೆಸಿದ್ದಾರೆ. ಆದರೆ, …

Read More »

ಕರ್ನಾಟಕದ ದುಃಸ್ಥಿತಿಗೆ ಸಿದ್ದರಾಮಯ್ಯ ಕಾರಣ; ಕುಮಾರಸ್ವಾಮಿ

ಕೋಲಾರ, ಮಾರ್ಚ್”ರಾಜ್ಯದಲ್ಲಿ ಉಂಟಾಗಿರುವ ಅಶಾಂತಿಯ ವಾತಾವರಣ ಮತ್ತು ಎಲ್ಲ ಅಹಿತಕರ ಘಟನೆಗಳಿಗೆ ಪ್ರತಿಪಕ್ಷ ನಾಯಕಸಿದ್ದರಾಮಯ್ಯಅವರೇ ಮೂಲ ಕಾರಣ” ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಆರೋಪಿಸಿದರು. ಭಾನುವಾರ ಕೋಲಾರದಲ್ಲಿ ಮಾತನಾಡಿದ ಅವರು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು. “ಧಾರ್ಮಿಕ ಸ್ಥಳಗಳಲ್ಲಿ, ಜಾತ್ರೆಗಳಲ್ಲಿ ಒಂದು ಧರ್ಮದ ಜನರಿಗೆ ವ್ಯಾಪಾರ ಮಾಡಲು ಬಿಡುತ್ತಿಲ್ಲ, ಹಿಜಾಬ್, ಕೇಸರಿ ಶಾಲು ಅಂತ ಹೇಳಿ ಶಾಲೆ ಕಾಲೇಜುಗಳಲ್ಲಿ ಸಂಘರ್ಷ ಉಂಟು ಮಾಡಲಾಯಿತು. ಇದೆಲ್ಲಕ್ಕೂ …

Read More »

ರಸ್ತೆ ದಾಟುತ್ತಿದ್ದ ಬಾಲಕನ ದೇಹ ರಸ್ತೆಯಲ್ಲೇ ಛಿದ್ರ; ಉದ್ರಿಕ್ತ ಜನರಿಂದ ಟಿಪ್ಪರ್​​ಗೆ ಬೆಂಕಿ..

ಕಲಬುರಗಿ: ರಸ್ತೆ ದಾಟುತ್ತಿದ್ದ ಬಾಲಕನಿಗೆ ವೇಗವಾಗಿ ಬಂದ ಟಿಪ್ಪರ್ ಡಿಕ್ಕಿ ಹೊಡೆದು ಆತನ ದೇಹ ರಸ್ತೆಯಲ್ಲೇ ಛಿದ್ರಗೊಂಡಿದ್ದು, ಉದ್ರಿಕ್ತ ಜನರು ಟಿಪ್ಪರ್​ಗೆ ಬೆಂಕಿ ಇಟ್ಟು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಲಬುರಗಿ ನಗರದ ಹೀರಾಪುರ ಬಡಾವಣೆಯ ಫ್ಲೈಓವರ್ ಬಳಿ ಈ ಅವಘಡ ಸಂಭವಿಸಿದೆ.   ಮನೀಷ್ ಮಲ್ಲಿಕಾರ್ಜುನ (10) ಸಾವಿಗೀಡಾದ ಬಾಲಕ. ಈತ ಇಂದು ಪಾಲಕರ ಜತೆ ರಸ್ತೆ ದಾಟುತ್ತಿದ್ದಾಗ ಮುಂದೆ ಓಡಿದ್ದ. ಅದೇ ಸಮಯಕ್ಕೆ ಮೇಲ್ಸೇತುವೆಯಿಂದ ವೇಗವಾಗಿ ಬರುತ್ತಿದ್ದು ಟಿಪ್ಪರ್ ಡಿಕ್ಕಿ ಹೊಡೆದಿದ್ದು, …

Read More »

ರಾಜ್ಯಕ್ಕೆ ರಾಜಕೀಯ ಚಾಣಕ್ಯ ಅಮಿತ್ ಶಾ ಎಂಟ್ರಿ.. ಏಕೆ?

ಕೇಂದ್ರ ಗೃಹ ಸಚಿವ, ರಾಜಕೀಯ ಚಾಣಾಕ್ಷ ಅಮಿತ್ ಶಾ ಕರ್ನಾಟಕಕ್ಕೆ ಎಂಟ್ರಿ ಕೊಡಲಿದ್ದಾರೆ. ತುಮಕೂರಿನ ಪ್ರಸಿದ್ದ ಪುಣ್ಯ ಕ್ಷೇತ್ರ ಸಿದ್ದಗಂಗಾ ಮಠಕ್ಕೆ ಆಗಮಿಸಲಿರುವ ಅವರು ಪರಮಪೂಜ್ಯ ಡಾ.ಶ್ರೀ ಶಿವಕುಮಾರ ಸ್ವಾಮೀಜಿಗಳ ಜಯಂತೋತ್ಸವದ ಹಿನ್ನೆಲೆ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಲಿದ್ದಾರೆ. ಸಿದ್ದಗಂಗಾ ಮಠ… ತ್ರಿವಿಧ ದಾಸೋಹದಿಂದ ಪ್ರಸಿದ್ದಿ ಪಡೆದ ಕ್ಷೇತ್ರ. ಇಂತಹ ಕ್ಷೇತ್ರದ ಮಠಾಧಿಪತಿಗಳಾಗಿದ್ದ ನಡೆದಾಡುವ ದೇವರು ಡಾ. ಶ್ರೀಶಿವಕುಮಾರ ಮಹಾಸ್ವಾಮಿಗಳ 115 ನೇ ಜಯಂತಿ ಹಾಗೂ ಗುರುವಂದನಾ ಮಹೋತ್ಸವ ಏಪ್ರಿಲ್ 1 …

Read More »

BREAKING ತಿರುಪತಿ ಹೆದ್ದಾರಿಯಲ್ಲಿ ಭೀಕರ ಅಪಘಾತ; ಮದ್ವೆ ಬಸ್​ ಪಲ್ಟಿಯಾಗಿ 8 ಸಾವು.. 55 ಮಂದಿ ಗಂಭೀರ

ಮದುವೆ ಬಸ್ 50 ಅಡಿ ಆಳದ ಕಂದಕಕ್ಕೆ ಬಿದ್ದಿರುವ ದುರ್ಘಟನೆ ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯ ಚಂದ್ರಗಿರಿ ತಾಲೂಕಿನ ಬಾಕರಪೇಟೆ ರಸ್ತೆಯಲ್ಲಿ ನಡೆದಿದೆ. ಮದನಪಲ್ಲಿ-ತಿರುಪತಿ ರಾಷ್ಟ್ರೀಯ ಹೆದ್ದಾರಿಯ ಭಾಕರಪೇಟ ಪಾಸ್‌ನ ಮುಖ್ಯ ತಿರುವಿನಲ್ಲಿ ಅನಾಹುತ ಸಂಭವಿಸಿದೆ. ಅಪಘಾತದಲ್ಲಿ ಓರ್ವ ಮಹಿಳೆ, ಮಗು ಸೇರಿದಂತೆ ಒಟ್ಟು ಎಂಟು ಮಂದಿ ಸಾವನ್ನಪ್ಪಿದ್ದಾರೆ. ವಿಷಯ ಗೊತ್ತಾಗುತ್ತಿದ್ದಂತೆ ಘಟನಾ ಸ್ಥಳಕ್ಕೆ ಆಗಮಿಸಿದ್ದ ರಕ್ಷಣಾ ಸಿಬ್ಬಂದಿ ಏಳು ಜನರ ಮೃತದೇಹಗಳನ್ನು ಹೊರತೆಗೆದಿದ್ದಾರೆ. ಮಾಲಿಶೆಟ್ಟಿ ವೆಂಗಪ್ಪ, ಮಾಲಿಶೆಟ್ಟಿ ಮುರಳಿ, …

Read More »

ಮಗು ರಕ್ಷಿಸಿದ ಶ್ವಾನ-ಟಾಪ್ 10 ಸುದ್ದಿಗಳ ಕ್ವಿಕ್​ರೌಂಡಪ್

ನಾಳೆಯಿಂದ SSLC ಪರೀಕ್ಷೆ ಆರಂಭ ನಾಳೆಯಿಂದದ ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭವಾಗಲಿದೆ. ನಾಳೆಯಿಂದ ಏಪ್ರಿಲ್ 11ರವರೆಗೆ ಪರೀಕ್ಷೆ ನಡೆಯಲಿದೆ ಎಂದು ಕರ್ನಾಟಕ ಪರೀಕ್ಷಾ ಮಂಡಳಿ ಮಾಹಿತಿ ನೀಡಿದೆ. ಮಾರ್ಚ್ 28 ಕ್ಕೆ ಪ್ರಥಮ ಭಾಷೆ, ಮಾರ್ಚ್ 30ಕ್ಕೆ ದ್ವಿತೀಯ ಭಾಷೆ, ಏಪ್ರಿಲ್ 4ರಂದು ಗಣಿತ, 6ಕ್ಕೆ ಸಮಾಜ ವಿಜ್ಞಾನ, 8ಕ್ಕೆ ತೃತೀಯ ಭಾಷೆ ಮತ್ತು 11 ರಂದು ವಿಜ್ಞಾನ ಪರೀಕ್ಷೆ ನಡೆಯಲಿದೆ. ಪರೀಕ್ಷೆ ಬರೆಯುವ ಮಕ್ಕಳಿಗೆ ಮಾಸ್ಕ್​​ ಕಡ್ಡಾಯವಿಲ್ಲ …

Read More »

ಇಂದಿನಿಂದ RCB ಅಸಲಿ ಆಟ ಶುರು; ವಿರಾಟ್ ಕೊಹ್ಲಿ ಸುತ್ತ ಸುತ್ತುತ್ತಿದೆ ಹೊಸ ಚರ್ಚೆ..! 

ಐಪಿಎಲ್​ ಇತಿಹಾಸದ 15ನೇ ಅಧ್ಯಾಯ ಆರಂಭವಾಗಿಬಿಟ್ಟಿದೆ. ಇಂದು ಅಭಿಮಾನಿಗಳಿಗೆ ಡಬಲ್​ ಧಮಾಕಾ ಯಾಕಂದ್ರೆ, ಡಬಲ್ ಹೆಡರ್ ಪಂದ್ಯಗಳು ನಡೆಯಲಿದೆ. ಅದರಲ್ಲೂ ಪ್ರಮುಖವಾಗಿ ಇವತ್ತು ಆರ್​​ಸಿಬಿ ಅಸಲಿ ಆಟ ಇಂದಿನಿಂದ ಶುರುವಾಗಲಿದೆ. ಬೆಂಗಳೂರು ತಂಡದ ಅಭಿಮಾನಿಗಳ ರಸದೌತಣಕ್ಕೆ ಕಾದುಕುಳಿತಿದ್ದಾರೆ. ಈಗಲೂ ಕೊಹ್ಲಿ ಕ್ರಮಾಂಕವೇ ಯಕ್ಷಪ್ರಶ್ನೆಯಾಗಿದೆ. ಆರ್​​ಸಿಬಿ.. ಆರ್​​ಸಿಬಿ.. ಈ ಕೂಗು ಇವತ್ತು ಇಂಡಿಯನ್ ಪ್ರೀಮಿಯರ್ ಲೀಗ್ ಅಖಾಡದಲ್ಲಿ ಇವತ್ತು ಮೊಳಗಲಿದೆ. ಅದಕ್ಕೆ ಕಾರಣ ರಾಯಲ್​ ಚಾಲೆಂಜರ್ಸ್​ ಬೆಂಗಳೂರು, ನೂತನ ಕ್ಯಾಪ್ಟನ್​ ನೇತೃತ್ವದಲ್ಲಿ …

Read More »

RRR ಸಿನಿಮಾದಲ್ಲಿ ತಾಂತ್ರಿಕ ದೋಷ – ಚಿತ್ರಮಂದಿರದ ಗಾಜು ಪುಡಿ ಪುಡಿ

ದಾವಣಗೆರೆ: ತ್ರಿಬಲ್ ಆರ್ ಸಿನಿಮಾ ಭಾರತದಾತ್ಯಂತ ಯಶಸ್ವಿಯಾಗಿ ಪ್ರದರ್ಶನಗೊಳ್ಳುತ್ತಿದೆ. ಆದರೆ ದಾವಣಗೆರೆಯಲ್ಲಿ ಸಿನಿಮಾ ಪ್ರದರ್ಶನದ ವೇಳೆ ತಾಂತ್ರಿಕ ದೋಷ ಕಂಡುಬಂದು ಅಭಿಮಾನಿಗಳು ಗಲಾಟೆ ಮಾಡಿದ್ದಾರೆ. ಈ ಹಿನ್ನೆಲೆ ಇಡೀ ಚಿತ್ರಮಂದಿರದ ಗಾಜನ್ನು ಪುಡಿ-ಪುಡಿ ಮಾಡಿರುವ ಘಟನೆ ಶುಕ್ರವಾರ(ನಿನ್ನೆ) ರಾತ್ರಿ ಜಗಳೂರಿನ ಭಾರತ ಚಿತ್ರಮಂದಿರದಲ್ಲಿ ನಡೆದಿದೆ. ಜಗಳೂರು ತಾಲೂಕಿನ ಭಾರತ ಚಿತ್ರಮಂದಿರದಲ್ಲಿ ಕಳೆದ ದಿನ ಬೆಳಗ್ಗೆಯಿಂದ ಮೂರ್ನಾಲ್ಕು ಶೋ ತ್ರಿಬಲ್ ಆರ್ ಸಿನಿಮಾ ಉತ್ತಮವಾಗಿ ಪ್ರದರ್ಶನ ಕಂಡಿತ್ತು. ಕಳೆದ ದಿನ ಮೂರನೇ ಶೋ …

Read More »