ನವದೆಹಲಿ: ನಗರದಲ್ಲಿ ವಿಚಿತ್ರ ಘಟನೆಯೊಂದು ನಡೆದಿದೆ. ಇಲ್ಲಿನ ಸರ್ಕಾರ ಮಹಿಳೆಯರಿಗೆ ಉಚಿತ ಬಸ್ ಸೇವೆ ಆರಂಭಿಸಿರುವುದು ಎಲ್ಲರಿಗೂ ತಿಳಿದಿರುವ ವಿಚಾರ. ಈ ಉಚಿತ ಬಸ್ ಸೇವೆ ಆನಂದಿಸಲು ಯುವಕನೊಬ್ಬ ತನ್ನ ಎಲ್ಲ ಮಿತಿಗಳನ್ನು ದಾಟಿದ್ದಾನೆ. ಹುಡುಗಿಯಂತೆ ರೆಡಿಯಾದ ಯುವಕ ಬಸ್ವೊಂದಕ್ಕೆ ಹತ್ತಿ ಪ್ರಯಾಣಿಸುತ್ತಿದ್ದನು. ಆದರೆ ಆತ ಕಂಡಕ್ಟರ್ ಕಣ್ಣುಗಳಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗಲೇ ಇಲ್ಲ. ಹೌದು, ಉಚಿತ ಬಸ್ ಸೌಲಭ್ಯ ಆನಂದಿಸಲು ಯುವಕನೊಬ್ಬ ಹುಡುಗಿಯಂತೆ ತಲೆಯನ್ನು ಬಟ್ಟೆಯಿಂದ ಮುಚ್ಚಿಕೊಂಡು, ಮುಖಕ್ಕೆ ಮಾಸ್ಕ್ ಹಾಕಿಕೊಂಡು …
Read More »Yearly Archives: 2022
ಅಕ್ರಮ ಆಸ್ತಿ ಗಳಿಕೆ: ಸಚಿವ ಸೋಮಣ್ಣ ರಾಜೀನಾಮೆಗೆ ಸಿದ್ದರಾಮಯ್ಯ ಒತ್ತಾಯ
ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಹಾಗೂ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದ ಕ್ರಿಮಿನಲ್ ಮೊಕದ್ದಮೆ ಹಿನ್ನೆಲೆಯಲ್ಲಿ ವಸತಿ ಸಚಿವ ವಿ.ಸೋಮಣ್ಣಗೆ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯ ನೋಟಿಸ್ ನೀಡಿದೆ. ಹೀಗಾಗಿ, ತಕ್ಷಣವೇ ಅವರು ರಾಜೀನಾಮೆ ನೀಡಬೇಕು. ಇಲ್ಲದಿದ್ದರೆ, ಮುಖ್ಯಮಂತ್ರಿಗಳೇ ಅವರನ್ನು ಸಂಪುಟದಿಂದ ವಜಾಗೊಳಿಸುವಂತೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ವಿಧಾನಸಭೆಯಲ್ಲಿ ಇಂದು ಶೂನ್ಯವೇಳೆಯಲ್ಲಿ ಸಿದ್ದರಾಮಯ್ಯ ವಿಷಯ ಪ್ರಸ್ತಾಪಿಸಿ, ರಾಮಕೃಷ್ಣ ಎಂಬುವರು ಸಲ್ಲಿಸಿರುವ ಖಾಸಗಿ ದೂರಿನ ಹಿನ್ನೆಲೆಯಲ್ಲಿ ಶಾಸಕರು- ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ …
Read More »ಸ್ಕೂಟಿಯಲ್ಲಿ ಬರುತ್ತಿದ್ದಾಗಲೇ ಟ್ರಾನ್ಸ್ಫಾರ್ಮರ್ ಸ್ಫೋಟ: ಚಿಕಿತ್ಸೆ ಫಲಿಸದೇ ಅಪ್ಪ, ಮಗಳು ಸಾವು
ಬೆಂಗಳೂರು: ಮಂಗನಹಳ್ಳಿಯಲ್ಲಿ ನಡೆದ ವಿದ್ಯುತ್ ಪರಿವರ್ತಕ ಸ್ಫೋಟದಲ್ಲಿ ಗಂಭೀರ ಗಾಯಗೊಂಡಿದ್ದ ಅಪ್ಪ, ಮಗಳು ಮೃತಪಟ್ಟಿದ್ದಾರೆ. ಕೆಲವೇ ದಿನಗಳಲ್ಲಿ ನಡೆಯಬೇಕಿದ್ದ ಮದುವೆಗಾಗಿ ಕಲ್ಯಾಣ ಮಂಟಪ ಬುಕ್ ಮಾಡಿಕೊಂಡು ಸ್ಕೂಟಿಯಲ್ಲಿ ವಾಪಸ್ ಮನೆಗೆ ಬರುತ್ತಿದ್ದಾಗ, ರಸ್ತೆ ಪಕ್ಕದಲ್ಲಿದ್ದ ವಿದ್ಯುತ್ ಪರಿವರ್ತಕ ಸ್ಫೋಟಗೊಂಡು ಯುವತಿ ಚೈತನ್ಯ(25), ಅವರ ತಂದೆ ಶಿವರಾಜ್(55) ಗಂಭೀರವಾಗಿ ಗಾಯಗೊಂಡಿದ್ದರು. ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯ ಮಂಗನಹಳ್ಳಿ ಬಳಿ ಬುಧವಾರ ಘಟನೆ ನಡೆದಿತ್ತು. ಟ್ರಾನ್ಸ್ಫಾರ್ಮರ್ ಸ್ಫೋಟದಿಂದ ಬೆಂಕಿ ಹೊತ್ತಿಕೊಂಡು ಸುಟ್ಟ ಗಾಯಗಳಾಗಿದ್ದ ಶಿವರಾಜ್ …
Read More »ಸರ್ಕಾರಿ ಪ್ರೌಢಶಾಲೆಯಲ್ಲಿ ಪಾಠ ಮಾಡಿದ ‘Robo Teacher’!
ಬೆಂಗಳೂರು: ಪಾಠ-ಪ್ರವಚನಗಳಲ್ಲಿ ಬೋಧಕರಿಗೂ (Teachers) ವಿದ್ಯಾರ್ಥಿಗಳಿಗೂ (Students) ಸಹಕರಿಸಿ, ಕಲಿಕೆಯನ್ನು ಸುಲಭವಾಗಿಸುವಂತಹ `ಈಗಲ್’ ರೋಬೋ (Eagle Robo) ಪರೀಕ್ಷಾರ್ಥ ಪ್ರಾತ್ಯಕ್ಷಿಕೆಯು ಬೆಂಗಳೂರಿನ (Bengaluru) ಮಲ್ಲೇಶ್ವರಂನ (Malleshwaram)13ನೇ ಅಡ್ಡರಸ್ತೆಯಲ್ಲಿರುವ ಬಾಲಕಿಯರ ಸರಕಾರಿ ಪ್ರೌಢಶಾಲೆಯಲ್ಲಿ ನಡೆಯಿತು. ಕ್ಷೇತ್ರದ ಶಾಸಕರೂ ಆಗಿರುವ ಉನ್ನತ ಶಿಕ್ಷಣ ಸಚಿವ (Higher Education Minister) ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆಯಿತು. ಶಾಲೆಯ ಶಿಕ್ಷಕರು ಮತ್ತು ವಿದ್ಯಾರ್ಥಿನಿಯರು ಇದರಲ್ಲಿ ಪಾಲ್ಗೊಂಡು, ರೋಬೋದ ಕಾರ್ಯಕ್ಷಮತೆಗೆ ಸಾಕ್ಷಿಯಾದರು. ಈ …
Read More »ST’ ಮೀಸಲಾತಿ ಹೆಚ್ಚಳದ ಕುರಿತಂತೆ ಸಿಎಂ ಬೊಮ್ಮಾಯಿ ಮಹತ್ವದ ಹೇಳಿಕೆ
ಬೆಂಗಳೂರು : ಪರಿಶಿಷ್ಟ ಪಂಗಡದವರಿಗೆ ಮೀಸಲಾತಿ ಹೆಚ್ಚಿಸುವ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಒಲವು ತೋರಿದ್ದಾರೆ. ಬುಧವಾರ ವಿಧಾನಸೌಧದಲ್ಲಿ ಗ್ರಾಮೀಣ ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಹಿಂದುಳಿದ ವರ್ಗಗಳಿಗೆಮೀಸಲಾತಿ ಹೆಚ್ಚಿಸುವ ವಿಷಯಕ್ಕೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳ ಸಚಿವರು, ಕಾನೂನು ತಜ್ಞರುಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಪರಿಶಿಷ್ಟ ಪಂಗಡದವರಿಗೆ ಮೀಸಲಾತಿ ಹೆಚ್ಚಿಸುವ ಬಗ್ಗೆಯೂ ಚರ್ಚೆಯಾಗಿದೆ. 7.5 % ಗೆ ಮೀಸಲಾತಿಯನ್ನು ಹೆಚ್ಚಿಸಬೇಕೆಂದು ಸಮುದಾಯವರ ಬೇಡಿಕೆಯಿದೆ. ಅವರ ಜನಸಂಖ್ಯೆಯೂ …
Read More »ಸುಧಾಕರ್ ಆಯೋಜಿಸಿದ್ದ ಭೋಜನಕೂಟಕ್ಕೆ ಬಿಜೆಪಿಯವರೇ ಗೈರು: ಕಮಲದಲ್ಲಿ ತಳಮಳ
ಬೆಂಗಳೂರು, ಮಾರ್ಚ್ 22: ಮೂಲ ಬಿಜೆಪಿಗರು ಮತ್ತು ವಲಸಿಗರು ಎನ್ನುವ ಚರ್ಚೆ ಪಕ್ಷದಲ್ಲಿ ಇದೇನು ಮೊದಲಲ್ಲ. ಹಿರಿಯ ಸಚಿವ ಕೆ.ಎಸ್.ಈಶ್ವರಪ್ಪ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹಲವು ಬಾರಿ ಬಹಿರಂಗವಾಗಿಯೇ ಈ ಬಗ್ಗೆ ಮಾತನಾಡಿದ್ದರು. ನಾವು ಬಂದಿದ್ದರಿಂದಲೇ ನೀವು ಸಚಿವರಾಗಿರುವುದು ಎಂದು ಬಾಂಬೆ ಫ್ರೆಂಡ್ಸ್ ಅದಕ್ಕೆ ಕೌಂಟರ್ ಅನ್ನೂ ಕೊಡುತ್ತಿದ್ದರು. ಈ ವಿಚಾರ ಇತ್ತೀಚಿನ ದಿನಗಳಲ್ಲಿ ಪಕ್ಷದೊಳಗೆ ಅಷ್ಟೇನೂ ಚರ್ಚೆಯಾಗುತ್ತಿರಲಿಲ್ಲ. ಕಾರಣ, ದೊಡ್ಡವರ ಖಡಕ್ ಎಚ್ಚರಿಕೆ. ಯಡಿಯೂರಪ್ಪನವರ ಸರಕಾರ ಅಧಿಕಾರಕ್ಕೆ …
Read More »ಬಿಎಸ್‌ವೈ ಮನೆಯಲ್ಲೇ ಭ್ರಷ್ಟಾಚಾರ , ನಾ ಖಾವೂಂಗ, ನಾ ಖಾನೆದೂಂಗ ಎಂದರೆ ಇದೇನಾ: ಸಿದ್ದರಾಮಯ್ಯ
ಬೆಂಗಳೂರು: ‘ಬಿಜೆಪಿಯವರು ಭ್ರಷ್ಟರು, ಭಂಡರು. ತಮ್ಮ ಹುಳುಕು ಗೊತ್ತಾಗುತ್ತದೆ ಎಂದು ಚರ್ಚೆಗೆ ಅವಕಾಶ ಕೊಡಲಿಲ್ಲ. ಪೊಲೀಸ್, ಸಾರಿಗೆ ಮತ್ತು ಆರೋಗ್ಯ ಇಲಾಖೆಗಳಲ್ಲಿನ ವ್ಯಾಪಕ ಭ್ರಷ್ಟಾಚಾರ ವರದಿಗಳು ಪ್ರಕಟ ಆಗಿವೆ. ಇಷ್ಟೆಲ್ಲಾ ನಡೆಯುತ್ತಿದ್ದರೂ ವಿರೋಧ ಪಕ್ಷಗಳು ಸುಮ್ಮನಿರಬೇಕಾ’ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ವಿಧಾನಸಭೆಯ ಮೊಗಸಾಲೆಯಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಬಿಬಿಎಂಪಿ, ಗ್ರಾಮೀಣಾಭಿವೃದ್ಧಿ, ನೀರಾವರಿ ಇಲಾಖೆ ಮತ್ತು ಲೋಕೋಪಯೋಗಿ ಇಲಾಖೆಯಲ್ಲೂ ಭ್ರಷ್ಟಾಚಾರ ನಡೆಯುತ್ತಿದೆ. ಇದನ್ನು ಪ್ರಸ್ತಾಪಿಸುವುದು ಬಿಜೆಪಿಯವರಿಗೆ …
Read More »ತಂದೆ-ತಾಯಿಯನ್ನು ಬೀದಿಪಾಲು ಮಾಡಿದ ಮಕ್ಕಳಿಗೆ ಕಂದಾಯ ಇಲಾಖೆ ಅಧಿಕಾರಿಗಳು ತಕ್ಕ ಪಾಠ ಕಲಿಸಿದ್ದಾರೆ.
ಹಾನಗಲ್ಕುಟುಂಬದ ಆಸ್ತಿಯನ್ನೆಲ್ಲ ತಮ್ಮ ಹೆಸರಿಗೆ ವರ್ಗಾಯಿಸಿಕೊಂಡು ಬೇರೆಯಾಗಿ ಉಳಿದು, ಜೀವನದ ಮುಸ್ಸಂಜೆಯಲ್ಲಿರುವ ತಂದೆ-ತಾಯಿಯನ್ನು ಬೀದಿಪಾಲು ಮಾಡಿದ ಮಕ್ಕಳಿಗೆ ಕಂದಾಯ ಇಲಾಖೆ ಅಧಿಕಾರಿಗಳು ತಕ್ಕ ಪಾಠ ಕಲಿಸಿದ್ದಾರೆ. ಹಾನಗಲ್ ತಾಲೂಕಿನ ಹಿರೇಬಾಸೂರ ಗ್ರಾಮದ 80 ವರ್ಷದ ವೃದ್ಧ ರುದ್ರಗೌಡ ಬಸನಗೌಡ ಪಾಟೀಲ ಹಾಗೂ ನೀಲಮ್ಮ ಪಾಟೀಲ ದಂಪತಿ ಹೆಸರಿನಲ್ಲಿದ್ದ ಎಲ್ಲ ಆಸ್ತಿಯನ್ನೂ ಮಕ್ಕಳು ತಮ್ಮ ಹೆಸರಿಗೆ ವರ್ಗಾಯಿಸಿಕೊಂಡಿದ್ದರು. ನಂತರ, ತಂದೆ ತಾಯಿಯನ್ನು ನೋಡಿಕೊಳ್ಳದೆ ಬೇರೆಯಾಗಿ ಉಳಿದಿದ್ದರು. ಅವರ ಈ ಧೋರಣೆಯಿಂದ …
Read More »ಗೋಕಾಕ ಫಾಲ್ಸ್ | Gokak Falls : ‘ನಾನೊಬ್ಬ ದೇವದಾಸಿಯ ಮಗಳು.
Gokak Falls: ಮಾನ್ಯ ಉನ್ನತ ಶಿಕ್ಷಣ ಸಚಿವರೇ, ತೀರ್ಮಾನಕ್ಕೆ ಮೊದಲು ಇನ್ನೂ ಒಮ್ಮೆ ಯೋಚಿಸಿ ಬಡತನ, ಅವಮಾನ, ಸಂಕಟಗಳೆಲ್ಲ ನಮ್ಮ ಜೊತೆಗಾರರನ್ನಾಗಿಸಿಕೊಂಡು ಬೆಳೆದವಳು. ಚಿಕ್ಕಂದಿನಿಂದಲೂ ತುಂಬಾ ಓದಬೇಕು ಎಂಬ ಮಹದಾಸೆ ಇತ್ತು. ಡಿಗ್ರಿ ಮುಗಿದ ಮೇಲೆ ಉನ್ನತ ಶಿಕ್ಷಣಕ್ಕೆ ಹೋಗುವ ಅವಕಾಶವಿರದೆ ಅಲ್ಲಿಗೇ ಓದು ನಿಲ್ಲಿಸಿದ್ದೆ. ನಂತರ ಆರಂಭವಾದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ ನನ್ನ ಪಾಲಿನ ದಾರಿದೀಪವಾಯಿತು. ಸ್ನಾತಕೋತ್ತರ ಪದವಿ ಮುಗಿಸಿ, ಸಂಶೋಧನೆ ಮುಗಿಸಿ ಇದೀಗ ಉನ್ನತ ಹುದ್ದೆಯಲ್ಲಿ ಇದ್ದೇನೆ. …
Read More »ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ನಿಯೋಜಿಸುವ ಅಧಿಕಾರಿಗಳು ಸಮಯಕ್ಕೆ ಸರಿಯಾಗಿ ಆಗಮಿಸಬೇಕು.: ಜಿಲ್ಲಾಧಿಕಾರಿ ಮಹಾಂತೇಶ ಹಿರೇಮಠ
ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ನಿಯೋಜಿಸುವ ಅಧಿಕಾರಿಗಳು ಸಮಯಕ್ಕೆ ಸರಿಯಾಗಿ ಆಗಮಿಸಬೇಕು. ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಸಂಬಂಧಿಸಿ ಬೆಳಗಾವಿ ಜಿಲ್ಲೆಗೆ ರಾಜ್ಯದಲ್ಲೇ ಅತ್ಯುತ್ತಮ ಹೆಸರಿದ್ದು ಈ ಬಾರಿಯೂ ಉತ್ತಮ ಪರೀಕ್ಷೆ ನಡೆಯುವಂತಾಗಲು ಎಲ್ಲರೂ ಪ್ರಯತ್ನಿಸಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ ಹಿರೇಮಠ ಸೂಚನೆ ನೀಡಿದರು. ಮಾರ್ಚ 28ರಂದು ಎಸ್ಸೆಸ್ಸೆಲ್ಸಿ ಪರೀಕ್ಷೆ ಹಿನ್ನೆಲೆ ಬುಧವಾರ ಬೆಳಗಾವಿಯ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಮಹಾಂತೇಶ ಹಿರೇಮಠ ಅವರ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ ನಡೆಯಿತು. ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ಸಂಬಂಧಿಸಿದಂತೆ ಬೆಳಗಾವಿ …
Read More »