ಬೆಳಗಾವಿ: ರಾಜ್ಯದಲ್ಲಿ ಕೈಗಾರಿಕೋದ್ಯಮಿಗಳು ಮತ್ತು ಹೂಡಿಕೆದಾರರಿಗೆ ಹಾದಿ ಸುಗಮ ಮಾಡಿಕೊಡಲು ಹಾಗೂ ಕೈಗಾರಿಕಾ ಸ್ಥಾಪನೆಗೆ ಎದುರಾಗುವ ತಾಂತ್ರಿಕ, ಕಾನೂನಾತ್ಮಕ ಅಡೆತಡೆಗಳಿಗೆ ಪರಿಹಾರ ಕಂಡುಕೊಳ್ಳಲು ಪ್ರತ್ಯೇಕವಾಗಿ ಕರ್ನಾಟಕ ರಾಜ್ಯ ಹೂಡಿಕೆದಾರರ ಪ್ರಾಧಿಕಾರ ರಚಿಸುವ ಕರ್ನಾಟಕ ವಿಶೇಷ ಹೂಡಿಕೆ ಪ್ರದೇಶ ಮಸೂದೆ-2022ಕ್ಕೆ ವಿಧಾನಸಭೆಯಲ್ಲಿ ಅಂಗೀಕಾರ ದೊರಕಿತು. ವಿಧಾನಸಭೆಯಲ್ಲಿ ಕೈಗಾರಿಕಾ ಸಚಿವ ಮುರುಗೇಶ ನಿರಾಣಿ ಮಸೂದೆ ಮಂಡಿಸಿ, ರಾಜ್ಯದಲ್ಲಿ ದೊಡ್ಡ-ಅತಿದೊಡ್ಡ ಅಥವಾ ಬೃಹತ್ ಗಾತ್ರದ ಅಂದರೆ 1,250 ಎಕರೆಗೂ ಮೀರಿದ ಹೂಡಿಕೆ ಪ್ರದೇಶ, ಕೈಗಾರಿಕಾ …
Read More »Yearly Archives: 2022
ದೇಶದಲ್ಲೇ ರಾಜ್ಯದ ಪೊಲೀಸರು ಉತ್ತಮ ಎನಿಸಿದ್ದಾರೆ: ಸಿಎಂ ಬೊಮ್ಮಾಯಿ
ಬೆಳಗಾವಿ: ರಾಜ್ಯದಲ್ಲಿ ವಿಧ್ವಂಸಕ ಕೃತ್ಯ ನಡೆಯದಂತೆ ಮುಂಜಾಗ್ರತೆ ವಹಿಸಬೇಕು. ಕೃತ್ಯಗಳು ನಡೆದ ಸಂದರ್ಭದಲ್ಲಿ ಕ್ಷಿಪ್ರ ಗತಿಯಲ್ಲಿ ಕಾರ್ಯಾಚರಣೆ ನಡೆಸಿ ಅಪರಾಧಿಗಳನ್ನು ಬಂಧಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪೊಲೀಸ್ ಇಲಾಖೆಗೆ ಸೂಚನೆ ನೀಡಿದರು. ಬೆಳಗಾವಿ ನಗರ ಪೊಲೀಸ್ ಆಯುಕ್ತರ ನೂತನ ಕಚೇರಿಯ ಕಟ್ಟಡವನ್ನು ಬುಧವಾರ ಉದ್ಘಾಟಸಿ ಮಾತನಾಡಿದ ಅವರು,ಬೆಳಗಾವಿ ಸೇರಿದಂತೆ ಎಲ್ಲಾ ಜಿಲ್ಲೆಗಳ ಪೊಲೀಸರು ಜನರೊಂದಿಗೆ ನಿಕಟ ಸಂಪರ್ಕ ಇಟ್ಟುಕೊಳ್ಳಬೇಕು. ಪೊಲೀಸ್ ಇಲಾಖೆ ಜನರ ಸಹಕಾರದಿಂದ ಶಾಂತಿ ಸುವ್ಯವಸ್ಥಿತ ಕಾಪಾಡಬೇಕು. …
Read More »K.S.R.T.C.ಚೆಲ್ಲಾಟ ; ಬಸ್ ವ್ಯವಸ್ಥೆ ಇಲ್ಲದೇ ವಿದ್ಯಾರ್ಥಿಗಳ ಪರದಾಟ!
ಗೋಕಾಕ: ತಾಲೂಕಿನ ಸುತ್ತಮುತ್ತಲಿನ ಗ್ರಾಮಗಳಿಂದ ಗೋಕಾಕ ಮಹಾವಿದ್ಯಾಲಯಕ್ಕೆ ಹಾಗೂ ಶಾಲೆ, ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿಗಳಿಗೆ ಸೂಕ್ತ ಬಸ್ ವ್ಯವಸ್ಥೆ ಇಲ್ಲದೆ ವಿದ್ಯಾರ್ಥಿಗಳು ನಿತ್ಯ ಪರದಾಡುವಂತಾಗಿದೆ. ಬಸ್ ಬಾರದೆ ಹೋದರೆ ಶಾಲೆ, ಕಾಲೇಜು ವಿದ್ಯಾರ್ಥಿಗಳು ತರಗತಿಗಳಿಂದ ವಂಚಿತರಾಗಬೇಕಾಗಿದೆ. ಹೆಚ್ಚಿನ ಬಸ್ ಸೌಲಭ್ಯ ಕಲ್ಪಿಸುವಂತೆ ವಿದ್ಯಾರ್ಥಿಗಳು ಸಂಬಂಧಪಟ್ಟ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಕ್ರಮ ಕೈಗೊಂಡಿಲ್ಲ. ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಂದ ಮನೆಗೆ ತೆರಳಬೇಕಾದರೂ ಬಸ್‌ಗಳಿಲ್ಲದೆ, ಪರ್ಯಾಯ ಮಾರ್ಗವಿಲ್ಲದೆ ಕಷ್ಟ ಪಡುತ್ತಿದ್ದಾರೆ. …
Read More »ಹಳೇ ಪಿಂಚಣಿ ವ್ಯವಸ್ಥೆ ಜಾರಿ ಇಲ್ಲ: ಸಿಎಂ ಬೊಮ್ಮಾಯಿ
ಬೆಳಗಾವಿ: ಹಳೆಯ ಪಿಂಚಣಿ ಯೋಜನೆಯನ್ನು ರಾಜ್ಯದಲ್ಲಿ ಮತ್ತೆ ಜಾರಿಗೆ ತರುವ ಪ್ರಸ್ತಾವ ನಮ್ಮ ಮುಂದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ಇದರಿಂದಾಗಿ ಬೆಂಗಳೂರಿನಲ್ಲಿ ಹಳೆ ಪಿಂಚಣಿ ಯೋಜನೆ ಜಾರಿಗಾಗಿ ಹೋರಾಡು ತ್ತಿರುವ ಸರಕಾರಿ ನೌಕರರಿಗೆ ಹಿನ್ನಡೆಯಾಗಿದೆ. ಮಂಗಳವಾರ ಬಿಜೆಪಿಯ ರೇಣುಕಾ ಚಾರ್ಯ ಅವರ ಪ್ರಶ್ನೆಗೆ ಲಿಖಿತ ಉತ್ತರ ನೀಡಿದ ಸಿಎಂ, ಹಳೆಯ ಪಿಂಚಣಿ ಯೋಜನೆಯ ಆರ್ಥಿಕ ಹೊರೆಯನ್ನು ನಿಭಾಯಿಸಲು ಸಾಕಷ್ಟು ನಿಧಿ ಇಲ್ಲ. ಹಾಗಾಗಿ ಮರು ಜಾರಿ ಕಷ್ಟ. ಅಲ್ಲದೇ ಆರ್‌ಬಿಐ …
Read More »ಕೋವಿಡ್: ಆರೋಗ್ಯ ಸೌಲಭ್ಯಗಳ ಪರಿಶೀಲನೆ
ಬೆಳಗಾವಿ: ಕೋವಿಡ್-19 ಪರಿಸ್ಥಿತಿ ಎದುರಿಸಲು ಆರೋಗ್ಯ ಸೌಲಭ್ಯಗಳ ಸನ್ನದ್ಧತೆ ಖಾತ್ರಿಗಾಗಿ ಕೇಂದ್ರ ಸರ್ಕಾರದ ಸಲಹೆ ಮೇರೆಗೆ ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ಮಂಗಳವಾರ ಅಣಕು ಪರೀಕ್ಷೆ ನಡೆಯಿತು. ಕೊರೊನಾ 4ನೇ ಅಲೆಯಲ್ಲಿ ಸೋಂಕಿತರು ಚಿಕಿತ್ಸೆಗೆ ದಾಖಲಾದರೆ, ಯಾವುದೇ ತೊಂದರೆಯಾಗದಿರುವುದನ್ನು ಖಚಿತಪಡಿಸಿಕೊಳ್ಳಲು ದ್ರವೀಕೃತ ವೈದ್ಯಕೀಯ ಆಮ್ಲಜನಕ ಉತ್ಪಾದನಾ ಘಟಕಗಳು, ಸರಬರಾಜು ವ್ಯವಸ್ಥೆ, ತೀವ್ರ ನಿಗಾ ಘಟಕಗಳು ಮತ್ತು ಇತರೆ ಸೌಲಭ್ಯ ಪರೀಕ್ಷಿಸಲಾಯಿತು. ಜಿಲ್ಲಾಸ್ಪತ್ರೆಯಲ್ಲಿ ನಿತ್ಯ 30 ಕೆ.ಎಲ್ ಸಾಮರ್ಥ್ಯದ ದ್ರವೀಕೃತ ವೈದ್ಯಕೀಯ ಆಮ್ಲಜನಕ …
Read More »ಕಳಪೆ ಕಾಮಗಾರಿ 15 ದಿನಗಳಲ್ಲಿ ಹದಗೆಟ್ಟರಸ್ತೆ
ಖಾನಾಪುರ: ಪಟ್ಟಣದಿಂದ ಕೇವಲ ನಾಲ್ಕು ಕಿ.ಮೀ ಅಂತರದಲ್ಲಿರುವ ರಾಮಗುರವಾಡಿ ಗ್ರಾಮ ಹಲವು ಮೂಲಸೌಕರ್ಯಗಳ ಕೊರತೆಯಿಂದ ಬಡವಾಗಿದೆ. ಜಾಂಬೋಟಿ- ಜತ್ತ ರಾಜ್ಯ ಹೆದ್ದಾರಿಯಿಂದ ಉತ್ತರ ದಿಕ್ಕಿಗೆ 1 ಕಿ.ಮೀ ಅಂತರದಲ್ಲಿರುವ ಈ ಗ್ರಾಮಕ್ಕೆ ಸರಿಯಾದ ಸಂಪರ್ಕ ರಸ್ತೆಯೇ ಇಲ್ಲ. ಇದು ಇಲ್ಲಿನ ಬಹುಮುಖ್ಯ ಸಮಸ್ಯೆ. ರಸ್ತೆ ಸುಸ್ಥಿತಿಯಲ್ಲಿ ಇಲ್ಲದ ಕಾರಣ ಬಸ್‌ಗಳು ಗ್ರಾಮದೊಳಗೆ ಬರುತ್ತಿಲ್ಲ. ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ತೊಂದರೆ ಅನುಭವಿಸುವುದು ತಪ್ಪಿಲ್ಲ. 2,000 ಜನಸಂಖ್ಯೆ ಹೊಂದಿರುವ ರಾಮಗುರವಾಡಿ ಗ್ರಾಮದಲ್ಲಿ ಸ್ಥಳೀಯ …
Read More »ಹಳೆಯ ವಿದ್ಯಾರ್ಥಿಗಳು ತಮ್ಮ ಶಿಕ್ಷಣ, ವೃತ್ತಿ ಅನುಭವಗಳನ್ನು ಹೊಸ ವಿದ್ಯಾರ್ಥಿಗಳಿಗೆ ಧಾರೆ ಎರೆಯಬೇಕು
ಬೆಳಗಾವಿ: ‘ಹಳೆಯ ವಿದ್ಯಾರ್ಥಿಗಳು ತಮ್ಮ ಶಿಕ್ಷಣ, ವೃತ್ತಿ ಅನುಭವಗಳನ್ನು ಹೊಸ ವಿದ್ಯಾರ್ಥಿಗಳಿಗೆ ಧಾರೆ ಎರೆಯಬೇಕು. ಸುಸ್ಥಿರ ಸಮಾಜ ನಿರ್ಮಾಣಕ್ಕೆ ಇದೇ ಮೊದಲ ಹೆಜ್ಜೆ’ ಎಂದು ನಿವೃತ್ತ ಮುಖ್ಯಶಿಕ್ಷಕ ವೈ.ಎಂ.ಕಾಮಕರ ಕಿವಿಮಾತು ಹೇಳಿದರು. ಇಲ್ಲಿನ ಫುಲಬಾಗ್ ಗಲ್ಲಿಯಲ್ಲಿರುವ ಸರ್ಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ-ನಂಬರ್ 7ರಲ್ಲಿ ಭಾನುವಾರ ನಡೆದ, 1994ರಿಂದ 2000ರವರೆಗಿನ ವಿದ್ಯಾರ್ಥಿಗಳ ಒಕ್ಕೂಟದಿಂದ ಆಯೋಜಿಸಿದ್ದ ಸ್ನೇಹ ಸಮ್ಮಿಲನ ಹಾಗೂ ಗುರುವಂದನೆ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು. ‘ಹಳೆಯ …
Read More »ಹೊರನಾಡ ಕನ್ನಡಿಗರಿಗೆ ಮೀಸಲಾತಿ: ಸೂಕ್ತ ಚರ್ಚೆ
ಬೆಳಗಾವಿ: ‘ಮಹಾರಾಷ್ಟ್ರವೂ ಸೇರಿದಂತೆ ಹೊರನಾಡ ಕನ್ನಡಿಗರಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಮೀಸಲಾತಿ ಕಲ್ಪಿಸಲು ಸೂಕ್ತ ಚರ್ಚೆ ನಡೆಸಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು. ನಗರದಲ್ಲಿ ಮಂಗಳವಾರ ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಮತ್ತು ಜತ್ತ ಕನ್ನಡಿಗರ ನಿಯೋಗದೊಂದಿಗೆ ಮಾತನಾಡಿದ ಅವರು, ‘ಹೊರನಾಡ ಕನ್ನಡಿಗರ ಮೀಸಲಾತಿ ಸಂಬಂಧ ಚರ್ಚಿಸಲು ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನು ಬೆಳಗಾವಿಗೆ ಕಳಿಸಲಾಗುವುದು. ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ …
Read More »ಮಕ್ಕಳಿಂದ ಕಲಾಪ ವೀಕ್ಷಣೆ
ಬೆಳಗಾವಿ: ಒಂದೆಡೆ ಪ್ರೇಕ್ಷಣೀಯ ಸ್ಥಳಗಳು, ದೇವಾಲಯಗಳಿಗೆ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು ಶೈಕ್ಷಣಿಕ ಪ್ರವಾಸಕ್ಕೆ ತೆರಳುತ್ತಿದ್ದರೆ, ಮತ್ತೊಂದೆಡೆ ಇಲ್ಲಿನ ಸುವರ್ಣ ವಿಧಾನಸೌಧಕ್ಕೆ ಭೇಟಿ ನೀಡುವ ವಿದ್ಯಾರ್ಥಿಗಳ ಸಂಖ್ಯೆಯೂ ಹೆಚ್ಚಿದೆ. ಇಲ್ಲಿ ಡಿ.19ರಿಂದ ಆರಂಭಗೊಂಡ ವಿಧಾನಮಂಡಲ ಚಳಿಗಾಲದ ಅಧಿವೇಶನ ಕಣ್ತುಂಬಿಕೊಳ್ಳಲು ರಾಜ್ಯದ ವಿವಿಧೆಡೆಯಿಂದ ಜನರು ಆಗಮಿಸುತ್ತಿದ್ದಾರೆ. ಈ ಮಧ್ಯೆ, ಸಾವಿರಾರು ವಿದ್ಯಾರ್ಥಿಗಳೂ ಹೆಜ್ಜೆ ಹಾಕುತ್ತಿರುವುದರಿಂದ ಭವ್ಯ ಸೌಧವೀಗ ‘ಶೈಕ್ಷಣಿಕ ಪ್ರವಾಸ’ದ ಕೇಂದ್ರವಾಗಿ ಬದಲಾಗಿದೆ. ಸೌಧದ ಅಂಗಳದಲ್ಲಿ ಮಕ್ಕಳ ಕಲರವ ಕಂಡುಬರುತ್ತಿದೆ. 10 ಸಾವಿರ …
Read More »ಸುವರ್ಣ ವಿಧಾನಸೌಧ ಹತ್ತಿರ ಪ್ರತಿಭಟನ ಸ್ಥಳದಲ್ಲಿ ಎಸೆದಿದ್ದ ಆಹಾರ ತಿಂದು 10 ಕುರಿಗಳು ಮೃತಪಟ್ಟಿವೆ.
ಬೆಳಗಾವಿ: ಇಲ್ಲಿನ ಸುವರ್ಣ ವಿಧಾನಸೌಧ ಹತ್ತಿರ ಪ್ರತಿಭಟನ ಸ್ಥಳದಲ್ಲಿ ಎಸೆದಿದ್ದ ಆಹಾರ ತಿಂದು 10 ಕುರಿಗಳು ಮೃತಪಟ್ಟಿವೆ. 40ಕ್ಕೂ ಹೆಚ್ಚು ಕುರಿಗಳು ಅಸ್ವಸ್ಥಗೊಂಡಿವೆ. ‘ಡಿ.22ರಂದು ಇಲ್ಲಿ ನಡೆದಿದ್ದ ವಿರಾಟ್ ಪಂಚಶಕ್ತಿ ಸಮಾವೇಶದ ಸ್ಥಳದಲ್ಲಿಯೇ ಉಳಿದಿದ್ದ ಆಹಾರ ಎಸೆಯಲಾಗಿತ್ತು. ಭಾನುವಾರ ಸಂಜೆ ಇದನ್ನೇ ಕುರಿಗಳು ತಿಂದಿದ್ದವು. ಸೋಮವಾರ ಬೆಳಗಿನವರೆಗೆ ನರಳಾಡಿ ಸತ್ತಿವೆ’ ಎಂದು ಕುರಿಗಾಹಿಗಳು ದೂರಿದ್ದಾರೆ. ‘ಆಹಾರವನ್ನು ಮೂರು ದಿನದ ಬಳಿಕ ಕುರಿಗಳು ತಿಂದಿದ್ದು, ಜೀರ್ಣವಾಗದೆ ಮೃತಪಟ್ಟಿವೆ. ಇದಕ್ಕೆ ‘ರುಮಿನಲ್ ಅಸಿಡೋಸಿಸ್’ …
Read More »