ಬೆಳಗಾವಿಯಲ್ಲಿ ಬಿಜೆಪಿಯಲ್ಲಿ ಲಿಂಗಾಯತ ಕಾರ್ಯಕರ್ತರಿಗೆ ಬೆಲೆ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಹೀಗಾಗಿ ಬಿಜೆಪಿ ತೊರೆದು ಆಮ್ ಆದ್ಮಿ ಪಕ್ಷವನ್ನು ಸೇರ್ಪಡೆಯಾಗುತ್ತಿದ್ದೇನೆ ಎಂದು ಆಮ್ ಆದ್ಮಿ ಉತ್ತರ ವಲಯ ಉಸ್ತುವಾರಿ ರಾಜಕುಮಾರ ಟೋಪಣ್ಣವರ ಸ್ಪಷ್ಟಪಡಿಸಿದ್ದಾರೆ. ಸೋಮವಾರ ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರಾಜಕುಮಾರ ಟೋಪಣ್ಣವರ ಬಿಜೆಪಿ ಶಿಸ್ತಿನ ಸಿಪಾಯಿಯಾಗಿದ್ದ ಪಾಲಿಕೆ ಮಾಜಿ ಸದಸ್ಯ ದೀಪಕ ಜಮಖಂಡಿ ಹಾಗೂ ಬುಡಾ ಮಾಜಿ ಅಧ್ಯಕ್ಷ ಘೂಳಪ್ಪ ಹೊಸಮನಿ ಅವರು ಲಿಂಗಾಯತ ಸಮುದಾಯದ ವ್ಯಕ್ತಿಗಳೆಂದು ಅವರನ್ನು …
Read More »Yearly Archives: 2022
ರಿಯಲ್ ಎಸ್ಟೇಟ್ ಉದ್ಯಮಿ ಹತ್ಯೆ ಕೇಸ್: ಮೂವರು ಸೇರಿ ಹಲವರ ಬಂಧನ
ಬೆಳಗಾವಿಯ ಮಂಡೋಳಿ ರಸ್ತೆಯಲ್ಲಿ ರಿಯಲ್ ಎಸ್ಟೇಟ್ ಉದ್ಯಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ಮೂವರು ಆರೋಪಿಗಳನ್ನು ಬಂಧಿಸಿದ್ದ ಗ್ರಾಮೀಣ ಪೊಲೀಸರು ಇಂದು ಮತ್ತೆ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಹೌದು ಬೆಳಗಾವಿ ತಾಲೂಕಿನ ಹಲಗಾ ಬಸ್ತವಾಡ ಗ್ರಾಮದ ಸಧ್ಯ ಭವಾನಿ ನಗರದ ಸಂಸ್ಕøತಿ ಫಾಮ್ರ್ಸನ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ರಿಯಲ್ ಎಸ್ಟೇಟ್ ಉದ್ಯಮಿ ರಾಜು ದೊಡ್ಡ ಬೊಮ್ಮನ್ನವರನನ್ನು ಮಾರ್ಚ 15ರಂದು ಬೆಳ್ಳಂ ಬೆಳಿಗ್ಗೆ ಹತ್ಯೆ ಮಾಡಲಾಗಿತ್ತು. ಆರೋಪಿಗಳಿಗೆ …
Read More »ರಮೇಶ ಜಾರಕಿಹೊಳಿ ಮತ್ತೆ ತಮ್ಮ ಕಸರತ್ತು ಮುಂದುವರಿಸಿದ್ದಾರೆ. ದಿಢೀರ್ ಅಂತಾ ದೆಹಲಿಗೆ ಪ್ರಯಾಣ
ರಾಜ್ಯದಲ್ಲಿ ಯುಗಾದಿ ನಂತರ ಸಚಿವ ಸಂಪುಟ ಪುನಾರಚನೆ ಬಗ್ಗೆ ಗುಲ್ಲು ಎದ್ದಿದೆ. ಹೀಗಾಗಿ ಸಂಪುಟ ಸೇರಲು ತುದಿಗಾಲಲ್ಲಿ ನಿಂತಿರುವ ರಮೇಶ ಜಾರಕಿಹೊಳಿ ಮತ್ತೆ ತಮ್ಮ ಕಸರತ್ತು ಮುಂದುವರಿಸಿದ್ದಾರೆ. ದಿಢೀರ್ ಅಂತಾ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಹೌದು ಬೆಳಗಾವಿಯ ಸಾಂಬ್ರಾ ಏರ್‍ಪೆÇೀರ್ಟ್‍ನಿಂದ ಇಂದು ಬೆಳಗ್ಗೆ 9.55ರ ಫ್ಲೈಟ್‍ನಲ್ಲಿ ರಮೇಶ್ ಜಾರಕಿಹೊಳಿ ದೆಹಲಿಗೆ ತೆರಳಿದ್ದಾರೆ. ರಮೇಶ್ ಜಾರಕಿಹೊಳಿ ದೆಹಲಿಯಲ್ಲಿ ಬಿಜೆಪಿ ವರಿಷ್ಠರನ್ನು ಭೇಟಿಯಾಗಲು ನಿರ್ಧರಿಸಿದ್ದಾರೆ. ಸಿಡಿ ಕೇಸ್‍ನಿಂದ ಮಂತ್ರಿ ಸ್ಥಾನ ಕಳೆದುಕೊಂಡು ಕಂಗಾಲಾಗಿರುವ …
Read More »ಬಣ್ಣ ಆಡುವ ಸಂದರ್ಭದಲ್ಲಿ ಎರಡು ಗುಂಪುಗಳ ನಡುವೆ ಗಲಾಟೆ ಜನರು ಆತಂಕದಲ್ಲಿ
ರಂಗ ಪಂಚಮಿ ಹಬ್ಬದ ಪ್ರಯುಕ್ತ ಬಣ್ಣ ಆಡುವ ಸಂದರ್ಭದಲ್ಲಿ ಎರಡು ಗುಂಪುಗಳ ನಡುವೆ ಗಲಾಟೆ ಆಗಿರುವ ಘಟನೆ ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದಲ್ಲಿ ನಡೆದಿದೆ. ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದಲ್ಲಿ ಬಣ್ಣ ಎರಚಾಟ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ಎರಡು ಗುಂಪುಗಳ ನಡುವೆ ಗಲಾಟೆ ಆಗಿದ್ದು, ಗ್ರಾಮ ಪಂಚಾಯತ ಅಧ್ಯಕ್ಷನನ್ನು ತಳ್ಳಾಡುವುದರ ಜೊತೆಗೆ ಪೊಲೀಸರ ಮೇಲೆಯೇ ಯುವಕರ ಗುಂಪೊಂದು ಹಲ್ಲೆ ಮಾಡಿದೆ.ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಚಿಕ್ಕೋಡಿ ಪಿಎಸ್‍ಐ ಹಾಗೂ …
Read More »ಪಾರ್ವತಮ್ಮ ರಾಜ್ ಕುಮಾರ್-ಪುನೀತ್ ಹೆಸರಿನಲ್ಲಿ ಮೈಸೂರು ವಿವಿಯಲ್ಲಿ 2 ಚಿನ್ನದ ಪದಕ
ಪುನೀತ್ ರಾಜ್ ಕುಮಾರ್ ಹೆಸರಿನಲ್ಲಿ ಪ್ರತಿ ವರ್ಷವೂ ಮೈಸೂರು ವಿಶ್ವವಿದ್ಯಾಲಯದಲ್ಲಿ ಓದಿದ ಪ್ರತಿಭಾವಂತರಿಗೆ 2 ಚಿನ್ನದ ಪದಕವನ್ನು ನೀಡುವುದಾಗಿ ರಾಘವೇಂದ್ರ ರಾಜ್ ಕುಮಾರ್ ಘೋಷಿಸಿದ್ದಾರೆ. ಇಂದು ಮೈಸೂರಿನ ವಿವಿಯಲ್ಲಿ ನಡೆಯುತ್ತಿರುವ 102ನೇ ವಾರ್ಷಿಕ ಘಟಿಕೋತ್ಸವದಲ್ಲಿ ಮಾತನಾಡಿದ ರಾಘವೇಂದ್ರ ರಾಜ್ ಕುಮಾರ್ ‘ಪುನೀತ್ ಮತ್ತು ಪಾರ್ವತಮ್ಮ ರಾಜ್ ಕುಮಾರ್ ಹೆಸರಿನಲ್ಲಿ ಎರಡು ಚಿನ್ನದ ಪದಕಗಳನ್ನು ನೀಡುವುದಾಗಿ ತಿಳಿಸಿದರು. ಪಾರ್ವತಮ್ಮ ರಾಜಕುಮಾರ್ ಅವರ ಹೆಸರಿನಲ್ಲಿ, ಬ್ಯೂಸಿನೇಸ್ ಮ್ಯಾನೇಜ್ಮೆಂಟ್ ವಿಭಾಗದಲ್ಲಿ ಬಂಗಾರದ ಪದಕ ಮತ್ತು …
Read More »ಎಸಿಬಿ ದಾಳಿ ಕಣ್ಣೊರೆಸುವ ತಂತ್ರ, ಭ್ರಷ್ಟರಿಗೆ ಶಿಕ್ಷೆ ಆಗುತ್ತಿಲ್ಲ: ಹೆಚ್‍ಡಿಕೆ
ಬೆಂಗಳೂರು: ಜನ ಬೆಲೆ ಏರಿಕೆ ಬಗ್ಗೆ ತಲೆ ಕೆಡಿಸಿಕೊಂಡಿಲ್ಲ ಅವರು ಸಮೃದ್ಧವಾಗಿದ್ದಾರೆ. ಜನರಿಗೆ ಬೆಲೆ ಏರಿಕೆಗಿಂತ ಭಾವನಾತ್ಮಕ ವಿಷಯಗಳೇ ಹೆಚ್ಚು ಖುಷಿ ನೀಡುತ್ತೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ವ್ಯಂಗ್ಯವಾಡಿದರು. ವಿಧಾನಸೌಧದಲ್ಲಿ ಪಂಚರಾಜ್ಯ ಚುನಾವಣೆಯ ನಂತರ ಬೆಲೆ ಏರಿಕೆ ಆದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಬಂದ ಬೆನ್ನಲ್ಲೇ ಗ್ಯಾಸ್ ಮತ್ತಿತರ ಬೆಲೆ ಏರಿಕೆ ಆಗಿದೆ. ಜನ ಇಂದು ಹಣವಂತರಾಗಿದ್ದಾರೆ. ಮೌನವಾಗಿ ಬೆಂಬಲಿಸಿದ್ದಾರೆ. ಜನರಿಗೆ ಈಗ ಧರ್ಮದ …
Read More »ಗೋಮಾಂಸ ಸಾಗಿಸುತ್ತಿದ್ದಾನೆಂದು ಶಂಕಿಸಿ ಹಿಗ್ಗಾಮುಗ್ಗಾ ಥಳಿಸಿದ್ರು
ಲಕ್ನೋ: ದನದ ಮಾಂಸ ಸಾಗಿಸುತ್ತಿದ್ದಾನೆ ಎನ್ನುವ ಶಂಕೆಯಿಂದ ವಾಹನ ಚಾಲಕನಿಗೆ ಉತ್ತರ ಪ್ರದೇಶದ ಮಥುರಾ ಗ್ರಾಮಸ್ಥರು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಮೊಹಮ್ಮದ್ ಅಮೀರ್ (35) ಥಳಿತಕ್ಕೊಳಗಾದವರಾಗಿದ್ದಾರೆ. ಈ ಘಟನೆ ಉತ್ತರ ಪ್ರದೇಶದ ಮಥುರಾದ ರಾಲ್ ಗ್ರಾಮದಲ್ಲಿ ನಡೆದಿದೆ. ಪಿಕ್-ಅಪ್ ವ್ಯಾನ್‌ನಲ್ಲಿ ಗೋಮಾಂಸ ಮತ್ತು ದನಗಳನ್ನು ಕಳ್ಳಸಾಗಣೆ ಮಾಡುತ್ತಿದ್ದಾನೆ ಎಂದು ಶಂಕಿಸಿ ಥಳಿಸಿದ್ದಾರೆ.ಮೊಹಮ್ಮದ್ ಅಮೀರ್ ವಾಹನ ಚಲಾಯಿಸಿಕೊಂಡು ಮಥುರಾದ ಗೋವರ್ಧನದಿಂದ ಹತ್ರಾಸ್‍ನಲ್ಲಿರುವ ಸಿಕಂದರಾವ್ ಕಡೆಗೆ ಹೋಗುತ್ತಿದ್ದನು. ಕೆಲವು ಸ್ಥಳೀಯರು ಗುಂಪು ವ್ಯಾನ್‍ನನ್ನು ತಡೆದರು. ಗೋ …
Read More »ರಾಷ್ಟ್ರಧ್ವಜಕ್ಕೆ ಅವಮಾನ ಎಸಗಿದ ದೇಶದ್ರೋಹಿ ಕಲ್ಲಡ್ಕ ಪ್ರಭಾಕರ ಭಟ್ ಬಂಧನ ಯಾವಾಗ? : ಕಾಂಗ್ರೆಸ್ ಟ್ವೀಟ್
ಬೆಂಗಳೂರು: ರಾಷ್ಟ್ರಧ್ವಜಕ್ಕೆ ಅವಮಾನ ಎಸಗಿದ ದೇಶದ್ರೋಹಿ ಕಲ್ಲಡ್ಕ ಪ್ರಭಾಕರ ಭಟ್ ಬಂಧನ ಯಾವಾಗ ಎಂದು ಬಿಜೆಪಿ ಸರ್ಕಾರವನ್ನು ಕಾಂಗ್ರೆಸ್ ಟ್ವೀಟ್ ಮೂಲಕ ಪ್ರಶ್ನಿಸಿದೆ. ಟ್ವೀಟ್‍ನಲ್ಲಿ ಏನಿದೆ: ಮಾನ್ಯ ಬೊಮ್ಮಾಯಿ ಅವರೇ, ದೇಶ ವಿರೋಧಿಗಳನ್ನು ಸಹಿಸುವುದಿಲ್ಲ ಎಂದು ಹೇಳಿಕೆ ಕೊಟ್ಟು ವೀರಾವೇಶ ಮೆರೆದಿದ್ದೀರಿ, ಸಂತೋಷ. ರಾಷ್ಟ್ರಧ್ವಜಕ್ಕೆ ಅವಮಾನ ಎಸಗಿದ ದೇಶದ್ರೋಹಿ ಕಲ್ಲಡ್ಕ ಪ್ರಭಾಕರ ಭಟ್ಟನನ್ನು ಯಾವಾಗ ಬಂಧಿಸುತ್ತೀರಿ? ಆತನನ್ನು ಜೈಲಿಗಟ್ಟಿ ನಿಮ್ಮ ಹೇಳಿಕೆಗೆ ಬದ್ಧತೆ ತೋರಿಸಿ. ಹಾಗೆಯೇ ಈಶ್ವರಪ್ಪರ ರಾಜೀನಾಮೆ ಯಾವಾಗ ಪಡೆಯುವಿರಿ?. …
Read More »ಅಪ್ರಾಪ್ತ ಬಾಲಕಿಯೋರ್ವಳು ನೇಣು ಬಿಗಿದು ಆತ್ಮಹತ್ಯೆ
ಕಾಸರಗೋಡು : ಅಪ್ರಾಪ್ತ ಬಾಲಕಿಯೋರ್ವಳು ನೇಣು ಬಿಗಿದು ಮೃತ ಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಮೇಲ್ಪರಂಬ ದಲ್ಲಿ ಆದಿತ್ಯವಾರ ನಡೆದಿದೆ. ಮೇಲ್ಪರಂಬ ಕಡೆಂಗೋಡಿ ನ ಅಬ್ದುಲ್ ರಹಮಾನ್ ರವರ ಪುತ್ರಿ ಶಾಹಿನಾ (11) ಮೃತ ಪಟ್ಟವಳು ಬಾಲಕಿ ಮೊಬೈಲ್ ಗೇಮ್ ಆಡುತ್ತಿದ್ದುದನ್ನು ಗಮನಿಸಿದ್ದ ತಾಯಿ ಮೊಬೈಲ್ ಕಿತ್ತು ಕೊಂಡಿದ್ದರು ಎನ್ನಲಾಗಿದೆ. ಇದಾದ ಬಳಿಕ ರಾತ್ರಿ ಕಿಟಿಕಿಗೆ ಚೂಡಿ ದಾರ್ ಶಾಲಿ ನಿಂದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿ ದ್ದಾಳೆ. ಇದನ್ನು …
Read More »ಉಕ್ರೇನ್ನಿಂದ ಮರಳಿದ ವೈದ್ಯಕೀಯ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ: ಡಾ.ಕೆ.ಸುಧಾಕರ್
ಉಕ್ರೇನ್ನಿಂದ ರಾಜ್ಯಕ್ಕೆ ಮರಳಿದ ವೈದ್ಯಕೀಯ ವಿದ್ಯಾರ್ಥಿಗಳಿಗೆ ಶಿಕ್ಷಣ ಮುಂದುವರಿಯುವ ವೈದ್ಯಕೀಯ ಕಾಲೇಜುಗಳಲ್ಲಿ ಅವಕಾಶ ಮಾಡಿಕೊಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಬೆಂಗಳೂರಿನ ವಿಧಾನಸೌಧದಲ್ಲಿ ಉಕ್ರೇನ್ನಿಂದ ವಾಪಸ್ಸಾದ ವೈದ್ಯಕೀಯ ವಿದ್ಯಾರ್ಥಿಗಳ ಜತೆ ಮಾತುಕತೆ ನಡೆಸಿದ ಅವರು, ವಿದ್ಯಾರ್ಥಿಗಳಿಂದ ಸಲಹೆ, ಅಭಿಪ್ರಾಯಗಳನ್ನು ಪಡೆದರು. ವಿದ್ಯಾರ್ಥಿಗಳ ಶೈಕ್ಷಣಿಕ ವಿಚಾರವಾಗಿ ಚರ್ಚೆ ನಡೆದಿದೆ. ಸಿಎಂ ಸೂಚನೆ ಮೇರೆಗೆ ಸಭೆ ನಡೆಸಲಾಗಿದ್ದು, ವಿದ್ಯಾರ್ಥಿಗಳ ಕಲಿಕೆ ಮುಂದುವರಿಕೆಗೆ ನಮ್ಮ ಸರ್ಕಾರದ ಮೊದಲ ಆದ್ಯತೆ ಎಂದರು. …
Read More »