Breaking News

Yearly Archives: 2022

ನಾಳೆಯಿಂದ ಎರಡು ದಿನ ಜಮ್ಮು ಪ್ರವಾಸದಲ್ಲಿ ಅಮಿತ್ ಶಾ

ಶ್ರೀನಗರ(ಜಮ್ಮು): ಕೇಂದ್ರ ಗೃಹ ಸಚಿವ ಅಮಿತ್ ಶಾ ನಾಳೆಯಿಂದ ಎರಡು ದಿನಗಳ ಕಾಲ ಜಮ್ಮು ಪ್ರವಾಸ ಕೈಗೊಳ್ಳಲಿದ್ದು, ಭದ್ರತೆ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಲೆಫ್ಟಿನೆಂಟ್​ ಗವರ್ನರ್​ ಮನೋಜ್ ಸಿನ್ಹಾ, ಕೇಂದ್ರ ಸಶಸ್ತ್ರ ಪಡೆ, ಕಾಶ್ಮೀರ ಪೊಲೀಸ್​, ಗುಪ್ತಚರ ಸಂಸ್ಥೆಗಳ ಅಧಿಕಾರಿಗಳೊಂದಿಗೆ ಅಲ್ಲಿನ ಭದ್ರತಾ ಪರಿಸ್ಥಿತಿ ಬಗ್ಗೆ ಉನ್ನತ ಮಟ್ಟದ ಸಭೆ ನಡೆಸಲಿರುವ ಅಮಿತ್ ಶಾ, ಮಾರ್ಚ್​ 19ರಂದು ಜಮ್ಮುವಿನಲ್ಲಿ ಆಯೋಜನೆಗೊಂಡಿರುವ ಸಿಆರ್​ಪಿಎಫ್​​ನ ರೈಸಿಂಗ್ ಡೇ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ …

Read More »

ಗಂಡ ನೀಡುತ್ತಿದ್ದ ವರದಕ್ಷಿಣೆ ಕಿರುಕುಳವನ್ನು ತಾಳಲಾರದೆ ವೈದ್ಯೆಯಾಗಿರುವ ಹೆಂಡತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.

  ಹೈದರಾಬಾದ್​(ತೆಲಂಗಾಣ): ಗಂಡನ ವರದಕ್ಷಿಣೆ ಕಿರುಕುಳ ತಾಳಲಾರದೆ ವೈದ್ಯೆಯಾಗಿದ್ದ ಪತ್ನಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಹೈದರಾಬಾದ್‌ನ ಮಲಕಪೇಟೆಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಪತಿ-ಪತ್ನಿ ಇಬ್ಬರೂ ವೈದ್ಯಕೀಯ ವೃತ್ತಿಯಲ್ಲಿದ್ದರು. ಇಬ್ಬರಿಗೂ ಇದು ಎರಡನೇ ಮದುವೆಯಾಗಿತ್ತು. ಆದರೆ, ಗಂಡ ವರದಕ್ಷಿಣೆಗಾಗಿ ವಿಪರೀತ ಕಿರುಕುಳ ನೀಡುತ್ತಿದ್ದನಂತೆ. ಹೀಗಾಗಿ ನೊಂದ ಪತ್ನಿ ಆತ್ಮಹತ್ಯೆಯ ಹಾದಿ ತುಳಿದಿದ್ದಾಳೆ ಎಂದು ತಿಳಿದುಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪತಿಯನ್ನು ಪೊಲೀಸರು ಬಂಧಿಸಿದ್ದು ವಿಚಾರಣೆ ನಡೆಸುತ್ತಿದ್ದಾರೆ. ಪೊಲೀಸರು ನೀಡಿರುವ …

Read More »

ಪೊಲೀಸ್​​ ಕಾನ್ಸ್​ಟೇಬಲ್​ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಪ್ರಕರಣ ಸಂಬಂಧ ಇಬ್ಬರು ಪತ್ರಕರ್ತರು, ಐವರು ಪೊಲೀಸರು ಸೇರಿದಂತೆ 9 ಜನರ ವಿರುದ್ಧ ಪ್ರಕರಣ​ ದಾಖಲಾಗಿದೆ.

ಗದಗ: ಕಿರುಕುಳಕ್ಕೆ ಬೇಸತ್ತು ಪೊಲೀಸ್​​ ಕಾನ್ಸ್​ಟೇಬಲ್​ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಪ್ರಕರಣ ಸಂಬಂಧ ಇಬ್ಬರು ಪತ್ರಕರ್ತರು, ಐವರು ಪೊಲೀಸರು ಸೇರಿದಂತೆ 9 ಜನರ ಮೇಲೆ ಎಫ್​ಐಆರ್​ ದಾಖಲಾಗಿದೆ.   ಗದಗ ನಗರದ ಬೆಟಗೇರಿ ಬಡಾವಣೆ ಪೊಲೀಸ್​​ ಠಾಣೆಯ ಕಾನ್ಸ್​ಟೇಬಲ್ ಆಗಿದ್ದ ಗದಗ ತಾಲೂಕಿನ ಲಕ್ಕುಂಡಿ ಗ್ರಾಮದ ಅರ್ಜುನ್ ಪಾಟೀಲ್ ಗುರುವಾರ ಮನೆಯಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದ. ಆರೇಳು ಪುಟಗಳ ಡೆತ್​​ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದ. ದುಷ್ಕರ್ಮಿಗಳ ಕಿರುಕುಳ ಹೆಚ್ಚಾಗಿದ್ದು, …

Read More »

ಮಹಾತ್ಮ ಗಾಂಧಿ ಧರ್ಮಪತ್ನಿ ಕೂಡ ತಲೆಗೆ ಸೆರಗು ಹಾಕುತ್ತಿದ್ದರು: ಹಿಜಬ್‌ ಬೆಂಬಲಿಸಿದ H.D.K.

ಬೆಂಗಳೂರು: ಮಹಾತ್ಮ ಗಾಂಧೀಜಿ ಅವರ ಧರ್ಮಪತ್ನಿ ಕಸ್ತೂರ ಬಾ ಅವರು ಕೂಡ ತಲೆಗೆ ಸೆರಗು ಹಾಕುತ್ತಿದ್ದರು ಎಂದು ಹಿಜಬ್‌ಗೆ ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ ಬೆಂಬಲ ವ್ಯಕ್ತಪಡಿಸಿದ್ದಾರೆ. ವಿಧಾನಸೌಧದ ಎದುರು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಫೋಟೋದಲ್ಲೆಲ್ಲ ನೋಡಿದ್ದೇವೆ. ಕಸ್ತೂರ ಬಾ ಅವರು ಕೂಡ ತಲೆಗೆ ಸೆರಗು ಹಾಕುತ್ತಿದ್ದರು. ಎಷ್ಟೋ ಬಾರಿ ಬಿಸಿಲಿನ ತಾಪಕ್ಕೆ ಹಿಂದೂ, ಮುಸ್ಲಿಂ ಹೆಣ್ಣುಮಕ್ಕಳು ಶಾಲೆಗೆ ಹೋಗುವಾಗ ಸಮವಸ್ತ್ರದೊಂದಿಗೆ ತಲೆಗೆ ದುಪ್ಪಟ್ಟ ಥರ ಹಾಕುತ್ತಿದ್ದರು. ಅದಕ್ಕೆ ಸಂಬಂಧಿಸಿದ ಫೋಟೋಗಳು …

Read More »

ಮಹಾರಾಷ್ಟ್ರ ಸಚಿವರನ್ನು ಜೈಲಿನಿಂದ ಬಿಡುಗಡೆ ಮಾಡಲು 3 ಕೋಟಿಗೆ ಬೇಡಿಕೆ- ಪುತ್ರನಿಂದ ದೂರು ದಾಖಲು

ಮುಂಬೈ: ಮಹಾರಾಷ್ಟ್ರ ಸಚಿವ ನವಾಬ್‌ ಮಲಿಕ್‌ ಅವರನ್ನು ಜೈಲಿನಿಂದ ಬಿಡುಗಡೆಗೊಳಿಸಲು 3 ಕೋಟಿ ರೂ.ಗೆ ಬೇಡಿಕೆ ಬಂದಿತ್ತು ಎಂದು ಸಚಿವರ ಪುತ್ರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಅಕ್ರಮ ಹಣ ವರ್ಗಾವಣೆ ಆರೋಪದಡಿ ಜಾರಿ ನಿರ್ದೇಶನಾಲಯವು ಎನ್‌ಸಿಪಿ ನಾಯಕ ನವಾಬ್‌ ಮಲಿಕ್‌ ಅವರನ್ನು ಫೆ.23ರಂದು ಬಂಧಿಸಿದೆ. ಸಚಿವರ ಪುತ್ರ ಅಮೀರ್ ಮಲಿಕ್ ನೀಡಿದ ದೂರಿನ ಮೇರೆಗೆ ವಿಬಿ ನಗರ ಪೊಲೀಸರು ಬುಧವಾರ ತಡರಾತ್ರಿ ಅಪರಿಚಿತ ವ್ಯಕ್ತಿಯ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. …

Read More »

ಹಿಜಬ್ ತೀರ್ಪು: ವಿಧಾನ ಪರಿಷತ್‍ನಲ್ಲಿ ಬಿಜೆಪಿ-ಕಾಂಗ್ರೆಸ್ ಜಟಾಪಟಿ

ಬೆಂಗಳೂರು: ಹಿಜಬ್ ವಿವಾದದ ಕುರಿತು ಹೈಕೋರ್ಟ್ ನೀಡಿದ ತೀರ್ಪಿನ ವಿಷಯ ವಿಧಾನ ಪರಿಷತ್‍ನಲ್ಲಿ ಬಿಜೆಪಿ-ಕಾಂಗ್ರೆಸ್ ನಡುವೆ ಗದ್ದಲ ಗಲಾಟೆಗೆ ಕಾರಣವಾಯಿತು. ಬಜೆಟ್ ಚರ್ಚೆ ವೇಳೆ ಕಾಂಗ್ರೆಸ್‍ನ ಸದಸ್ಯ ಸಲೀಂ ಅಹಮದ್, ತೀರ್ಪು ಯಾಕೆ ಈ ರೀತಿ ಬಂದಿತು ಎನ್ನುವ ಕುರಿತು ಚರ್ಚೆ ನಡೆಯಬೇಕು ಎಂದರು. ಈ ವಿಚಾರಕ್ಕೆ ಸದನದಲ್ಲಿ ಗಲಾಟೆ ಪ್ರಾರಂಭ ಆಯಿತು. ಸಲೀಂ ಅಹಮದ್ ಮಾತನಾಡಿ, ಇಷ್ಟು ವರ್ಷ ಇಲ್ಲದ ಸಮಸ್ಯೆ ಈಗ ಏಕೆ ಬಂತು. ಹಿಜಬ್ ವಿಚಾರದಲ್ಲಿ ಕೋರ್ಟ್ …

Read More »

ಯಾರೇ ಲಂಚ ಕೇಳಿದರೂ ಆಡಿಯೋ – ವೀಡಿಯೋ ನನಗೇ ಕಳುಹಿಸಿ: ಪಂಜಾಬ್ ಸಿಎಂ

ಚಂಡೀಗಡ: ಪಂಜಾಬ್‍ನ ಸರ್ಕಾರದ ನೂತನ ಮುಖ್ಯಮಂತ್ರಿಯಾಗಿರುವ ಭಗವಂತ್ ಮಾನ್ `ಭ್ರಷ್ಟಾಚಾರ ಮುಕ್ತ’ ಸಹಾಯವಾಣಿ ಪ್ರಾರಂಭಿಸುತ್ತಿದ್ದು, ಮಾರ್ಚ್ 23ರಂದು ಅನಾವರಣಗೊಳ್ಳಲಿದೆ. ಸ್ವಾತಂತ್ರ್ಯ ಹೋರಾಟಗಾರ ಭಗತ್‍ಸಿಂಗ್ ಅವರ ಹುಟ್ಟುಹಬ್ಬದ ಪ್ರಯುಕ್ತ ಮಾರ್ಚ್ 23ರಂದು ಸಹಾಯವಾಣಿ ಪ್ರಾರಂಭಿಸಲಾಗುತ್ತದೆ ಎಂದೂ ಅವರು ಭರವಸೆ ನೀಡಿದ್ದಾರೆ.  ಸಹಾಯವಾಣಿ ಸಂಖ್ಯೆಯು ನನ್ನ ವೈಯಕ್ತಿಕ ಸಂಪರ್ಕ ಸಂಖ್ಯೆಯಾಗಿದ್ದು, ಯಾರೇ ಲಂಚ ಕೇಳಿದರೂ ಅದರ ಆಡಿಯೋ, ವಿಡಿಯೋ ಅನ್ನು ಈ ಸಂಖ್ಯೆಗೆ ಕಳುಹಿಸಿ’ ಎಂದು ಅವರು ಟ್ವೀಟ್ ಮೂಲಕ ತಿಳಿಸಿದ್ದಾರೆ. ಯಾವುದೇ ಸರ್ಕಾರಿ …

Read More »

ಇಬ್ರಾಹಿಂ ನಿವಾಸಕ್ಕೆ ಜಮೀರ್ ದಿಢೀರ್ ಭೇಟಿ

ಬೆಂಗಳೂರು: ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ಇವತ್ತು ಸಿ.ಎಂ.ಇಬ್ರಾಹಿಂ ನಿವಾಸಕ್ಕೆ ಚಾಮರಾಜಪೇಟೆಯ ಕಾಂಗ್ರೆಸ್‌ ಶಾಸಕ ಜಮೀರ್ ಅಹಮದ್ ಭೇಟಿ ಕೊಟ್ಟಿದ್ದರು. ಬೆಂಗಳೂರಿನಲ್ಲಿರುವ ಜಯಮಹಲ್ ನಿವಾಸದಲ್ಲಿ ಭೇಟಿಯಾಗಿ ಕಾಂಗ್ರೆಸ್‌ಗೆ ರಾಜೀನಾಮೆ ನೀಡಿರುವ ಇಬ್ರಾಹಿಂ ಜೊತೆ ಮಹತ್ವದ ಮಾತುಕತೆ ನಡೆಸಿದರು. ಸುಮಾರು 20 ನಿಮಿಷಗಳ ಕಾಲ ಮಹತ್ವದ ಮಾತುಕತೆ ನಡೆಸಿದ್ದು, ಇಬ್ಬರ ಮಾತುಕತೆ ಕುತೂಹಲ ಮೂಡಿಸಿದೆ. ಈಗಾಗಲೇ ಕಾಂಗ್ರೆಸ್‌ಗೆ ಸಿ.ಎಂ.ಇಬ್ರಾಹಿಂ ರಾಜೀನಾಮೆ ನೀಡಿರುವುದಾಗಿ ಘೋಷಣೆ ಮಾಡಿದ್ದರೂ ಕಾಂಗ್ರೆಸ್ ತೊರೆಯದಂತೆ ಜಮೀರ್ ಮನವೊಲಿಸಿದ್ದಾರೆ ಎನ್ನಲಾಗಿದೆ. ಈ ನಡುವೆ …

Read More »

ಹೊಸ ಟಿಬಿ ಲಸಿಕೆಗಾಗಿ ಬಯೋಫ್ಯಾಬ್ರಿ ಜೊತೆ ಕೈ ಜೋಡಿಸಿದ ಭಾರತ್​​ ಬಯೋಟೆಕ್

ನವದೆಹಲಿ : ಕೋವಿಡ್ ವಿರುದ್ಧ ಕೋವಾಕ್ಸಿನ್ ಲಸಿಕೆ ತಯಾರಕ ಸಂಸ್ಥೆ ಭಾರತ್ ಬಯೋಟೆಕ್ ಕ್ಷಯರೋಗದ ವಿರುದ್ಧ ಲಸಿಕೆಯನ್ನು ಹೊರತರುವ ಚಿಂತನೆ ನಡೆಸಿದೆ. ಈ ಹಿನ್ನೆಲೆ ಶೀಘ್ರದಲ್ಲೇ ಸಂಸ್ಥೆಯು ತಂತ್ರಜ್ಞಾನಕ್ಕಾಗಿ ಮತ್ತೊಂದು ಸಂಸ್ಥೆಯೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದೆ. ಬುಧವಾರದಂದು ಭಾರತ್ ಬಯೋಟೆಕ್ ಸಂಸ್ಥೆ ಕ್ಷಯರೋಗ ಲಸಿಕೆ ಅಭಿವೃದ್ಧಿ, ಉತ್ಪಾದನೆ ಮತ್ತು ಮಾರುಕಟ್ಟೆಗಾಗಿ ಸ್ಪ್ಯಾನಿಷ್ ಜೈವಿಕ ಔಷಧೀಯ ಸಂಸ್ಥೆಯಾದ ಬಯೋಫ್ಯಾಬ್ರಿ ಜೊತೆ ಪಾಲುದಾರಿಕೆಯ ಒಪ್ಪಂದ ಮಾಡಿಕೊಂಡಿದೆ. ಈ ಪಾಲುದಾರಿಕೆಯು 70 ಕ್ಕೂ ಹೆಚ್ಚು ದೇಶಗಳಲ್ಲಿ …

Read More »

ಮುಸ್ಲಿಂ ಯುವತಿ, ಹಿಂದೂ ಯುವಕನ ಪ್ರೇಮ್ ಕಹಾನಿ; ತಂಗಿ ಗಂಡನ ಹತ್ಯೆಗೆ ಸುಪಾರಿ ಕೊಟ್ಟ ರೌಡಿಶೀಟರ್!

ದೇಶ ಅಭಿವೃದ್ಧಿ ಪಥದತ್ತ ಸಾಗಿದೆ ಆದ್ರೆ ನಮ್ಮಲ್ಲಿ ಜಾತಿ (Caste), ಧರ್ಮದ (Religion)) ಪಿಡುಗು ಮಾತ್ರ ಕಡಿಮೆಯಾಗಿಲ್ಲ. ಹೌದು ಇಲ್ಲೊಬ್ಬ ಬೇರೆ ಧರ್ಮದ ಹುಡುಗನನ್ನು ಪ್ರೀತಿಸಿ ವಿವಾಹವಾಗಿದ್ದಕ್ಕೆ (Love Marriage) ತಂಗಿ ಗಂಡನ ಹತ್ಯೆಗೆ ಸುಪಾರಿ ಕೊಟ್ಟಿದ್ದಾನೆ. ಜಾತಿ, ಧರ್ಮದ ಪಿಡುಗು ಜನರನ್ನ ಎಷ್ಟರ ಮಟ್ಟಿಗೆ ಆವರಿಸಿದೆ ಅಂದ್ರೆ ಕರುಳ ಸಂಬಂಧ, ರಕ್ತ ಸಂಬಂಧಗಳಿಗೂ ಜನ ಬೆಲೆ ಕೊಡದೆ ಜಾತಿ, ಧರ್ಮ ಹಾಗೂ ಮಾನ-ಮಾರ್ಯಾದೆ ಅಂತ ಮಚ್ಚು-ಕೊಡಲಿ ಹಿಡಿದು ಕೊಲೆ …

Read More »