Breaking News

Yearly Archives: 2022

ಕಳೆದ ಐದು ವರ್ಷಗಳಲ್ಲಿ ವಾಯು ಅಪಘಾತಗಳಲ್ಲಿ 42 ಸೇನಾ ಸಿಬ್ಬಂದಿ ಬಲಿ

ಹೊಸದಿಲ್ಲಿ: ಕಳೆದ ಐದು ವರ್ಷಗಳಲ್ಲಿ ಮೂರು ಸೇವೆಗಳಲ್ಲಿ ಹೆಲಿಕಾಪ್ಟರ್‌ಗಳು ಸೇರಿದಂತೆ ವಿಮಾನಗಳ ಅಪಘಾತಗಳಲ್ಲಿ 42 ರಕ್ಷಣಾ ಸಿಬ್ಬಂದಿಗಳು ಸಾವನ್ನಪ್ಪಿದ್ದಾರೆ ಎಂದು ರಕ್ಷಣಾ ಸಚಿವಾಲಯ ಸೋಮವಾರ ರಾಜ್ಯಸಭೆಯಲ್ಲಿ ಮಾಹಿತಿ ಒದಗಿಸಿದೆ. ರಾಜ್ಯಸಭೆಯಲ್ಲಿ ರಕ್ಷಣಾ ಖಾತೆಯ ರಾಜ್ಯ ಸಚಿವ ಅಜಯ್ ಭಟ್ ಹಂಚಿಕೊಂಡ ವಿವರಗಳ ಪ್ರಕಾರ, ಕಳೆದ ಐದು ವರ್ಷಗಳಲ್ಲಿ ಒಟ್ಟು ವಿಮಾನ ಅಪಘಾತಗಳ ಸಂಖ್ಯೆ 45 ಆಗಿದ್ದು, ಐಎಎಫ್ ಗರಿಷ್ಠ 29 ಅವಘಡಗಳನ್ನು ವರದಿ ಮಾಡಿದೆ.   ಕಳೆದ ಐದು ವರ್ಷಗಳಲ್ಲಿ ಭಾರತೀಯ …

Read More »

ಜಲಮಂಡಳಿಯಿಂದ ಅಗೆದಿದ್ದ ರಸ್ತೆ ಗುಂಡಿಗೆ ಬಿದ್ದು ಬೈಕ್ ಸವಾರ ಸಾವು

ಬೆಂಗಳೂರು: ಜಲಮಂಡಳಿಯಿಂದ ಅಗೆದಿದ್ದ ರಸ್ತೆ ಗುಂಡಿಗೆ ಬಿದ್ದು ಬೈಕ್ ಸವಾರನೊಬ್ಬ ಸಾವನ್ನಪ್ಪಿದ ಘಟನೆ ರಾಜ್ಯರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ. ಅಶ್ವಿನ್ (27) ಮೃತ ದುರ್ದೈವಿ. ಎಂಎಸ್ ಪಾಳ್ಯದ ಮುನೇಶ್ವರ ಲೇಔಟ್ ಕಡೆ ಹೋಗುವ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಅಶ್ವಿನ್ ಅವರು ಬೆಂಗಳೂರಿನಲ್ಲಿ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಇವರು ಮೂಲತಃ ಹಾವೇರಿ ಜಿಲ್ಲೆಯವರಾಗಿದ್ದಾರೆ. ಅಶ್ವಿನ್ ತಾಯಿಗೆ ಊಟ ತರಲು ಹೊರಗಡೆ ಹೋಗಿದ್ದರು. ಎಂಎಸ್ ಪಾಳ್ಯದ ಹೋಟೆಲ್ ಒಂದರಲ್ಲಿ ಆಹಾರ ಕಟ್ಟಿಸಿಕೊಂಡು ವಾಪಸ್ …

Read More »

ಏನದು ಸಿನಿಮಾ? ನಾನು ಹೋಗಲ್ಲ: ಸ್ಪೀಕರ್‌ ಆಹ್ವಾನ ತಿರಸ್ಕರಿಸಿದ ಸಿದ್ದು

ಬೆಂಗಳೂರು: ನಾಳೆ ಸಂಜೆ 6.45ಕ್ಕೆ ಮಂತ್ರಿ ಮಾಲ್‌ನ ಸ್ಕ್ರೀನ್‌ನಲ್ಲಿ ಬಾಲಿವುಡ್‌ನ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ವೀಕ್ಷಿಸಲು ಸದನದಲ್ಲೇ ಶಾಸಕರಿಗೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಆಹ್ವಾನ ನೀಡಿದ್ದಾರೆ. ಆದರೆ ಸ್ಪೀಕರ್‌ ಆಹ್ವಾನವನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ತಿರಸ್ಕರಿಸಿದ್ದಾರೆ. ಏನದು ಸಿನಿಮಾ? ನಾನು ಸಿನಿಮಾ ನೋಡಲು ಹೋಗ್ತಾ ಇಲ್ಲ. ಆಸಕ್ತಿ ಇರುವವರು ಹೋಗುತ್ತಾರೆ ಅನಿಸುತ್ತೆ ಎಂದು ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.  ಕಾಶ್ಮೀರಿ ಪಂಡಿತರ ವಲಸೆ ಮತ್ತು ಹತ್ಯಾಕಾಂಡ ಕುರಿತ ಚಿತ್ರ ʻದಿ ಕಾಶ್ಮೀರ್ …

Read More »

ನಾನು ಕಾಶ್ಮೀರಿ ಪಂಡಿತನನ್ನು ಮದ್ವೆ ಆಗಿದ್ದು, ದೌರ್ಜನ್ಯ ಕಂಡಿದ್ದೇನೆ : ನಟಿ ಯಾಮಿ ಗೌತಮ್

ವಿವೇಕ್ ಅಗ್ನಿಹೋತ್ರಿ ನಿರ್ದೇಶನದಲ್ಲಿ ಮೂಡಿ ಬಂದ “ದಿ ಕಾಶ್ಮೀರ್ ಫೈಲ್ಸ್” ಸಿನಿಮಾ ಭಾರೀ ಚರ್ಚೆಗೆ ಕಾರಣವಾಗಿದೆ. ರಾಜಕೀಯ ಕೆಸರಾಟಕ್ಕೂ ಕಾರಣವಾಗಿದೆ. ಕಾಶ್ಮೀರದಲ್ಲಿ ನಿಜವಾಗಿಯೂ ನಡೆದದ್ದೇ ಬೇರೆ, ಸಿನಿಮಾದಲ್ಲಿ ತೋರಿಸಿದ್ದೆ ಬೇರೆ ಎನ್ನುವ ಮಾತಿನ ಮಧ್ಯ, ನಡೆದ ಘಟನೆಯನ್ನೇ ನಿರ್ದೇಶಕರು ಸಿನಿಮಾದಲ್ಲಿ ತೋರಿಸಿದ್ದಾರೆ ಎಂದು ಹಲವು ಕ್ಷೇತ್ರಗಳ ಗಣ್ಯರು ಸಿನಿಮಾ ತಂಡದ ಬೆನ್ನಿಗೆ ನಿಂತಿದ್ದಾರೆ. ಈ ಮಧ್ಯೆ ನಟಿ ಯಾಮಿ ಗೌತಮ್ ಮತ್ತೊಂದು ಹೆಜ್ಜೆ ಮುಂದೆ ಹೋಗಿದ್ದಾರೆ. ನೆನ್ನೆಯಷ್ಟೇ ರಾಷ್ಟ್ರ ಪ್ರಶಸ್ತಿ …

Read More »

ತಾಜ್ ವೆಸ್ಟೆಂಡ್‍ನಲ್ಲಿ ನಾನು ರಾಸಲೀಲೆ ಮಾಡಲು ಹೋಗುತ್ತಿರಲಿಲ್ಲ:H.D.K.

ಬೆಂಗಳೂರು: ತಾಜ್ ವೆಸ್ಟೆಂಡ್‍ನಲ್ಲಿ ನಾನು ರಾಸಲೀಲೆ ಮಾಡಲು ಹೋಗುತ್ತಿರಲಿಲ್ಲ ಎಂದು ಸಚಿವ ಸಿ.ಪಿ ಯೋಗೇಶ್ವರ್ ವಿರುದ್ಧ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಕುಮಾರಸ್ವಾಮಿಯವರು 14 ತಿಂಗಳು ತಾಜ್ ವೆಸ್ಟೆಂಡ್ ಹೊಟೆಲ್‍ನಲ್ಲಿದ್ದರು ಎಂಬ ಯೋಗೇಶ್ವರ ಹೇಳಿಕೆ ವಿಚಾರವಾಗಿ ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿದ ಅವರು, ನಾನು ಸರ್ಕಾರಿ ಬಂಗಲೆ ಇರಲಿಲ್ಲ ಎನ್ನುವ ಕಾರಣಕ್ಕೆ ವಿಶ್ರಾಂತಿ ಪಡೆಯಲು ಆ ಹೊಟೆಲ್‍ಗೆ ಹೋಗುತ್ತಿದ್ದೆ. ಈಗಲೂ ನಾನು ತಾಜ್ ವೆಸ್ಟ್ ಹೊಟೆಲ್‍ಗೆ ಹೋಗುತ್ತಿರುತ್ತೇನೆ. ನನ್ನದು ತೆರೆದ ಪುಸ್ತಕ ಎಂದು ತಿರುಗೇಟು …

Read More »

H.D.K. ಅವನೊಬ್ಬ ನಯವಂಚಕ, ಪ್ರಬುದ್ಧ ರಾಜಕಾರಣಿ ಅಲ್ಲ: ಸಿ.ಪಿ.ಯೋಗೇಶ್ವರ್

ರಾಮನಗರ: ಕುಮಾರಸ್ವಾಮಿ ವಿಚಾರ ಇಡೀ ಕರ್ನಾಟಕದ ಜನರಿಗೆ ಗೊತ್ತಿದೆ. ಈ ವಿಚಾರವನ್ನು ನನ್ನ ಬಾಯಿಯಿಂದ ಕೇಳಬೇಡಿ. ಅವನೊಬ್ಬ ನಯವಂಚಕ, ಪ್ರಬುದ್ಧ ರಾಜಕಾರಣಿ ಅಲ್ಲ ಎಂದು ವೈಯಕ್ತಿಕವಾಗಿ ಏಕವಚನದಲ್ಲಿಯೇ  ಸಚಿವ ಸಿ.ಪಿ.ಯೋಗೇಶ್ವರ್ ವಾಗ್ದಾಳಿ ನಡೆಸಿದ್ದಾರೆ. ಚನ್ನಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಚನ್ನಪಟ್ಟಣಕ್ಕೆ ಆಕಸ್ಮಿಕವಾಗಿ ಅತಿಥಿಯಾಗಿ ಬಂದರು. ಚುನಾವಣೆಯಲ್ಲಿ ಗೆದ್ದರು ನಂತರ ಹೋದರು. ನಾನು ತಾಲೂಕಿನಲ್ಲಿ ಯಾರ ಜಮೀನನ್ನು ಹೊಡೆದಿಲ್ಲ, ಆ ರೀತಿಯ ಆಪಾದನೆ ನನ್ನ ಮೇಲಿಲ್ಲ. ಆದರೆ ಕುಮಾರಸ್ವಾಮಿ ಮೇಲೆ ಬಿಡದಿಯಲ್ಲಿ …

Read More »

ಬೈಕ್, ಟ್ರ್ಯಾಕ್ಟರ್ ಡಿಕ್ಕಿ- ಜಾತ್ರೆಯಿಂದ ವಾಪಸ್ ಬರುತ್ತಿದ್ದ ಇಬ್ಬರು ಸಾವು

ಹಾವೇರಿ: ಬೈಕ್ ಮತ್ತು ಟ್ರ್ಯಾಕ್ಟರ್ ನಡುವೆ ಡಿಕ್ಕಿ ಹೊಡೆದ ಪರಿಣಾಮವಾಗಿ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದ ಘಟನೆ ಹಾವೇರಿ ಸಮೀಪದ ಹೊಸಳ್ಳಿ ಗ್ರಾಮದ ಬಳಿ ನಡೆದಿದೆ. ಮೃತರನ್ನು ಹಾವೇರಿಯ ಬಸವೇಶ್ವನಗರ ನಿವಾಸಿ ಬೆಲ್ಲದ ವ್ಯಾಪಾರಿ ವಿಜಯ ಕವಲಗುಡ್ಡ (38), ಯಾಲಕ್ಕಿ ಓಣಿಯ ನಿವಾಸಿ ಕಬ್ಬಿಣದ ಕೃಷಿ ಉಪಕರಣಗಳ ವ್ಯಾಪಾರಿಯಾಗಿದ್ದ ಗಣೇಶ ರಟಗಲ್ (38) ಗುರುತಿಸಲಾಗಿದೆ.ಮೃತರು ತೊಗರ್ಸಿ ಜಾತ್ರೆಗೆ ಹೋಗಿದ್ದರು. ಅಲ್ಲಿಂದ ಮರಳಿ ವಾಪಸ್ಸು ಹಾವೇರಿಗೆ ಬರುತ್ತಿದ್ದ ವೇಳೆ ಹಾನಗಲ್-ಹಾವೇರಿ ರಾಜ್ಯ ಹೆದ್ದಾರಿಯಲ್ಲಿ ಬೈಕ್‍ನಲ್ಲಿ …

Read More »

ರಾಜ್ಯದಲ್ಲಿ BJP ಸರ್ಕಾರ ಬಂದ್ರೆ ಎಲ್ಲಾ ಮಹಿಳೆಯರಿಗೆ ಉಚಿತ ಬಸ್ ಪಾಸ್: ಬಿ.ಶ್ರೀರಾಮುಲು

ಗದಗ: ದೇವರ ದಯದಿಂದ 2023ರಲ್ಲಿ ರಾಜ್ಯದಲ್ಲಿ ಮತ್ತೆ ಬಿಜೆಪಿ ಸರ್ಕಾರ ಬಂದರೆ ರಾಜ್ಯದ ಎಲ್ಲಾ ಮಹಿಳೆಯರಿಗೆ ಉಚಿತ ಬಸ್ ಪಾಸ್ ನೀಡುವುದಾಗಿ ಸಾರಿಗೆ ಸಚಿವ ಬಿ.ಶ್ರೀರಾಮುಲು ಭರವಸೆ ನೀಡಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಾರಿಗೆ ಇಲಾಖೆ ಅಡವಿಟ್ಟ ವಿಚಾರವಾಗಿ ಮಾತನಾಡಿದರು. ಇಲಾಖೆ ಆಸ್ತಿ ಅಡವಿಟ್ಟಿರುವುದು ನಿಜ. ಅಡವಿಟ್ಟ ಉದ್ದೇಶ ಸಿಬ್ಬಂದಿ ಭವಿಷ್ಯದ ನಿಧಿಗಾಗಿ. ಹೆಚ್ಚು ಬಡ್ಡಿ ಬರಿಸಬೇಕಾಗಿತ್ತು. ಅದನ್ನು ತಪ್ಪಿಸಲು ಕಡಿಮೆ ಬಡ್ಡಿದರ ದೊರೆಯುವ ಹಿನ್ನಲೆ, ಅಡಮಾನ ಇಡಲಾಗಿದೆ. ವೈಯಕ್ತಿಕವಾಗಿ ಇಲ್ಲಿ …

Read More »

ಜಮ್ಮು, ಕಾಶ್ಮೀರ ಬಜೆಟ್ ಮಂಡಿಸಲಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ನವದೆಹಲಿ: ಸಂಸತ್ತಿನಲ್ಲಿ ಎರಡನೇ ಹಂತದ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2022-23ನೇ ಸಾಲಿನ ಜಮ್ಮು ಮತ್ತು ಕಾಶ್ಮೀರದ ಬಜೆಟ್ ಮಂಡಿಸಲಿದ್ದಾರೆ. 2022-23 ನೇ ಸಾಲಿನ ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶದ ಅಂದಾಜು ಸ್ವೀಕೃತಿಗಳು ಮತ್ತು ವೆಚ್ಚಗಳನ್ನು ನಿರ್ಮಲಾ ಸೀತಾರಾಮನ್ ಅವರು ಅಧಿಕೃತವಾಗಿ ಪ್ರಸ್ತುತಪಡಿಸಲಿದ್ದಾರೆ. ಅಲ್ಲದೇ ಸದನದಲ್ಲಿ ಪ್ರತಿಪಕ್ಷಗಳು ಹೆಚ್ಚುತ್ತಿರುವ ನಿರುದ್ಯೋಗ, ಉದ್ಯೋಗಿಗಳ ಭವಿಷ್ಯ ನಿಧಿ ಮೇಲಿನ ಬಡ್ಡಿದರದಲ್ಲಿ ಕಡಿತ ಮತ್ತು ಯುದ್ಧ ಪೀಡಿತ …

Read More »

ಬಿಜೆಪಿಯ ಚುನಾವಣಾ ಪ್ರಚಾರದ ಹಾಡುಗಳಿಗೆ ನೃತ್ಯ ಮಾಡುತ್ತಿದ್ದ ಗ್ರಾಮಸ್ಥರ ಮೇಲೆ ಜನರ ಗುಂಪೊಂದು ದಾಳಿ

ಲಕ್ನೋ: ಬಿಜೆಪಿಯ ಚುನಾವಣಾ ಪ್ರಚಾರದ ಹಾಡುಗಳಿಗೆ ನೃತ್ಯ ಮಾಡುತ್ತಿದ್ದ ಗ್ರಾಮಸ್ಥರ ಮೇಲೆ ಜನರ ಗುಂಪೊಂದು ದಾಳಿ ಮಾಡಿ ಹಲ್ಲೆ ಮಾಡಿರುವ ಘಟನೆ ನಡೆದಿದೆ. ಕಾನ್ಪುರ ದೇಹತ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ಈ ಸಂಬಂಧ ಜಿಲ್ಲೆಯ ರಸೂಲಾಬಾದ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲುವಿನ ಸಂಭ್ರಮಾಚರಣೆಗಾಗಿ ತಮ್ಮ ಮನೆಯಲ್ಲಿ ಡಿಜೆ ಹಾಕಿ ಕುಟುಂಬಸ್ಥರು, ಸಂಬಂಧಿಕರು ಹಾಗೂ ಸ್ಥಳೀಯರು ಬಿಜೆಪಿ ಚುನಾವಣಾ ಥೀಮ್ ಸಾಂಗ್‍ಗಳಿಗೆ ಕುಣಿಯುತ್ತಿದ್ದರು. ಸ್ಥಳಕ್ಕೆ …

Read More »