ನವದೆಹಲಿ: ಮಾರ್ಚ್ 1 ರಂದು ರಷ್ಯಾ ದಾಳಿಗೆ ಬಲಿಯಾದ ಹಾವರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ವೈದ್ಯ ವಿದ್ಯಾರ್ಥಿ ನವೀನ್ ಶೇಖರಪ್ಪ ಅವರ ಮೃತದೇಹವನ್ನು ಭಾರತಕ್ಕೆ ತರಿಸಲು ಅಗತ್ಯವಿರುವ ಎಲ್ಲಾ ಪ್ರಯತ್ನಗಳನ್ನು ನಡೆಸುವಂತೆ ಪ್ರಧಾನಿ ನರೇಂದ್ರ ಮೋದಿ ಸೂಚನೆ ನೀಡಿದ್ದಾರೆ. ಭಾನುವಾರ ನಡೆದ ಸಂಪುಟ ಸಭೆಯಲ್ಲಿ ಪ್ರಧಾನಿ ಮೋದಿಯವರು ತಮ್ಮ ಅಧಿಕಾರಿಗಳಿಗೆ ಈ ಸಂಬಂಧ ಸ್ಪಷ್ಟ ನಿರ್ದೇಶನ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಆದಷ್ಟು ಬೇಗ ನವೀನ್ ಮೃತದೇಹ ತಾಯ್ನಾಡಿಗೆ ಬರುವ ನಿರೀಕ್ಷೆ ಇದೆ.
Read More »Yearly Archives: 2022
ಶಾಸಕ ಅಭಯ ಪಾಟೀಲ ಅವರ ಫೇಸ್ ಬುಕ್ ಪುಟವನ್ನು ಕೆಲವು ಕಿಡಗೇಡಿಗಳು ಹ್ಯಾಕ್ ಮಾಡಿದ್ದಾರೆ.
ಬೆಳಗಾವಿ-ಸಾಮಾಜಿಕ ಕಾರ್ಯಗಳ ಮೂಲಕ ಸಾಮಾಜಿಕ ಜಾಲತಾಣಗಳಲ್ಲೂ ಪ್ರಸಿದ್ಧಿ ಪಡೆದಿರುವ ಬೆಳಗಾವಿ ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ ಪಾಟೀಲ ಅವರ ಫೇಸ್ ಬುಕ್ ಪುಟವನ್ನು ಕೆಲವು ಕಿಡಗೇಡಿಗಳು ಹ್ಯಾಕ್ ಮಾಡಿದ್ದಾರೆ. ಅಭಯ ಪಾಟೀಲ ಎಂಬ ಹೆಸರಿನಲ್ಲಿದ್ದ ವೇರಿಫೈಡ್ ಪೇಸ್ ಬುಕ್ ಪೇಜ್ ಹ್ಯಾಕ್ ಆಗಿದ್ದು, ಈ ಕುರಿತು ಶಾಸಕ ಅಭಯ ಪಾಟೀಲ ಬೆಳಗಾವಿಯ ಸೈಬರ್ ಕ್ರೈಂ, ಸಿಇಎನ್ ಪೋಲೀಸ್ ಠಾಣೆಗೆ ದೂರು ನೀಡಿದ್ದು ಇನೆಸ್ಪೆಕ್ಟರ್ ಗಡ್ಡೇಕರ ಅವರು ದೂರು ದಾಖಲಿಸಿಕೊಂಡು ವಿಚಾರಣೆ …
Read More »ಜೆಡಿಎಸ್ ನಲ್ಲಿ ಸಿ.ಎಂ.ಇಬ್ರಾಹಿಂಗೆ ಗೌರವಯುತ ಸ್ಥಾನ..?
ಬೆಂಗಳೂರು,ಮಾ.13- ಕಾಂಗ್ರೆಸ್ ತೊರೆದು ಪಕ್ಷ ಸೇರ್ಪಡೆಯಾಗಲಿರುವ ಕೇಂದ್ರದ ಮಾಜಿ ಸಚಿವ ಸಿ.ಎಂ.ಇಬ್ರಾಹಿಂ ಅವರಿಗೆ ಗೌರವಯುತ ಸ್ಥಾನ ನೀಡಲು ಜೆಡಿಎಸ್ ಉದ್ದೇಶಿಸಿದೆ. ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿರುವುದಾಗಿ ಘೋಷಣೆ ಮಾಡಿದ ಬಳಿಕ ಇಬ್ರಾಹಿಂ ಅವರು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಜೆಡಿಎಸ್ ಜೊತೆ ಚರ್ಚೆ ನಡೆಸಿದರು. ಪಕ್ಷಕ್ಕೆ ಸೇರ್ಪಡೆಯಾದ ಮೇಲೆ ನೀಡುವ ಸ್ಥಾನಮಾನ, ಪಕ್ಷ ಸಂಘಟನೆ, ಮುಂಬರುವ ಚುನಾವಣೆ ಹಾಗೂ ತಮ್ಮ ಬೆನ್ನ …
Read More »ಬಿಜೆಪಿ ಅಭ್ಯರ್ಥಿ ಘೋಷಣೆ; ಕಾಂಗ್ರೆಸ್‌ನಿಂದ ಯಾರು?
ಬಾಗಲಕೋಟೆ: ಪದವೀಧರರು ಮತ್ತು ಶಿಕ್ಷಕರ ವಲಯದಲ್ಲಿ ಪ್ರತಿಷ್ಠೆಯ ಚುನಾವಣೆ ಮುಂಬರುವ ಮೇ ತಿಂಗಳಲ್ಲಿ ನಡೆಯಲಿದೆ. ಈ ಚುನಾವಣೆಗೆ ಆಡಳಿತಾರೂಢ ಬಿಜೆಪಿಯಿಂದ ಎರಡೂ ಕ್ಷೇತ್ರಕ್ಕೆ ಅಭ್ಯರ್ಥಿಗಳ ಘೋಷಣೆಯಾಗಿದ್ದು, ಕಾಂಗ್ರೆಸ್‌ನಿಂದ ಯಾರಿಗೆ ಕಣಕ್ಕಿಳಿಸಬೇಕೆಂಬ ಚರ್ಚೆ ಪಕ್ಷದ ವಲಯದಲ್ಲಿ ನಡೆಯುತ್ತಿದೆ. ವಾಯವ್ಯ ಪದವೀಧರರ ಮತಕ್ಷೇತ್ರಕ್ಕೆ ಈ ಕ್ಷೇತ್ರದ ಹಾಲಿ ಸದಸ್ಯ ಹನಮಂತ ಆರ್. ನಿರಾಣಿ ಹಾಗೂ ವಾಯವ್ಯ ಶಿಕ್ಷಕರ ಮತಕ್ಷೇತ್ರಕ್ಕೆ ಹಾಲಿ ಸದಸ್ಯ ಅರುಣ ಶಹಾಪುರ ಅವರನ್ನೇ ಬಿಜೆಪಿ ಅಭ್ಯರ್ಥಿಗಳನ್ನಾಗಿ ಅಧಿಕೃತವಾಗಿ ಘೋಷಣೆ ಮಾಡಿದೆ. …
Read More »ಡಿಸಿಸಿ ಬ್ಯಾಂಕ್ ಶಾಖೆಯಲ್ಲಿ ನಡೆದ ದರೋಡೆ ಪ್ರಕರಣವನ್ನು ಭೇಧಿಸುವಲ್ಲಿ ಬೆಳಗಾವಿ ಪೋಲೀಸರು ಯಶಸ್ವಿ
ಬೆಳಗಾವಿ- ಬೆಳಗಾವಿ ಜಿಲ್ಲೆಯ ಸವದತ್ತಿ ತಾಲ್ಲೂಕಿನ ಮುರುಗೋಡ ಡಿಸಿಸಿ ಬ್ಯಾಂಕ್ ಶಾಖೆಯಲ್ಲಿ ನಡೆದ ದರೋಡೆ ಪ್ರಕರಣವನ್ನು ಭೇಧಿಸುವಲ್ಲಿ ಬೆಳಗಾವಿ ಪೋಲೀಸರು ಯಶಸ್ವಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಇತ್ತೀಚೆಗೆ ಮುರುಗೋಡ ಡಿಸಿಸಿ ಬ್ಯಾಂಕಿನಲ್ಲಿ ನಕಲಿ ಕೀ ಉಪಯೋಗಿಸಿ ಸುಮಾರು ನಾಲ್ಕು ಕೋಟಿಗೂ ಅಧಿಕ ನಗರದು 4.41 ಕೋಟಿ ಮತ್ತು ಬ್ಯಾಂಕಿನಲ್ಲಿ ಅಡವಿಟ್ಟ 1.5 ಕೋಟಿ ರೂ ಮೌಲ್ಯದ ಚಿನ್ನಾಭರಣಗಳನ್ನು ದೋಚಿದ ಘಟನೆ ಮಾರ್ಚ್ 6 ರಂದು ನಡೆದಿತ್ತು. ಪ್ರಕರಣ ದಾಖಲಿಸಿಕೊಂಡ ಪೊಲೀಸರು …
Read More »ಮಂಡ್ಯದಲ್ಲಿ ನಿಖಿಲ್ ಸೋಲಿಗೆ ಅವರ ದೊಡ್ಡಪ್ಪನೇ ಕಾರಣ: ನಾರಾಯಣಗೌಡ
ಮಂಡ್ಯ: ಸಕ್ಕರೆನಾಡು ಮಂಡ್ಯದಲ್ಲಿ ನಿಖಿಲ್ ಸೋಲುವುದಕ್ಕೆ ಅವರ ದೊಡ್ಡಪ್ಪ ರೇವಣ್ಣನೇ ಕಾರಣ ಎಂದು ಸಚಿವ ಕೆ.ಸಿ. ನಾರಾಯಣ ಹೇಳಿದ್ದಾರೆ. ನಗರದ ಕೆ.ಆರ್.ಪೇಟೆಯ ಸಿಂಧಘಟ್ಟದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಂಡ್ಯದಲ್ಲಿ ನಿಖಿಲ್ ಸೋಲಿಗೆ ಅವರ ದೊಡ್ಡಪ್ಪನೇ ಕಾರಣ. ನಿಖಿಲ್ ಕುಮಾರಸ್ವಾಮಿ ಬಗ್ಗೆ ನನಗೆ ಗೌರವ ಇದೆ. ಅವರು ಸುಮ್ಮನೆ ಮಾತನಾಡುವುದು ತಪ್ಪು. ಕುಮಾರಸ್ವಾಮಿ ಸುಪುತ್ರ ನಿಖಿಲ್ ಇನ್ನೂ ಚಿಕ್ಕ ರಾಜಕಾರಣಿ. ಪ್ರತಿಯೊಂದರ ಬಗ್ಗೆ ಮಾಹಿತಿ ತಿಳಿದಕೊಂಡು ನಿಖಿಲ್ ಮಾತನಾಡಬೇಕು. ಒಂದೂವರೆ ವರ್ಷ ಸರ್ಕಾರ …
Read More »ನಾನು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನಿಲ್ಲಲ್ಲ: ಸಿದ್ದರಾಮಯ್ಯ
ಮಂಡ್ಯ: ನಾನು ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಾನು ಚಾಮುಂಡೇಶ್ವರಿಯಲ್ಲಿ ಸ್ಪರ್ಧೆ ಮಾಡಲ್ಲ. ನನಗೆ ನಾಲ್ಕೈದು ಕ್ಷೇತ್ರಗಳಿಂದ ಸ್ಪರ್ಧಿಸಲು ಆಹ್ವಾನ ಬಂದಿದೆ. ನಾನು ಇನ್ನೂ ಎಲ್ಲಿ ನಿಲ್ಲಬೇಕೆಂದು ನಿರ್ಧಾರ ಮಾಡಿಲ್ಲ. ನಾನು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನಿಲ್ಲಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ನನ್ನ ಪ್ರಕಾರ ಅವಧಿಗೂ ಮುನ್ನ ಚುನಾವಣೆ ಬರಲ್ಲ. ಈ ಬಗ್ಗೆ ಬಸವರಾಜ ಬೊಮ್ಮಾಯಿ, ಯಡಿಯೂರಪ್ಪ, …
Read More »ಅವಳಿ ಹೆಣ್ಣುಮಕ್ಕಳಿಗೆ ಜನ್ಮ ನೀಡಿದ ಮಹಿಳೆಯೊಬ್ಬರು ಹೃದಯಾಘಾತ ಸಂಭವಿಸಿ ಸಾವನ್ನಪ್ಪಿದ ಘಟನೆ ಖಾನಾಪೂರ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ.
ಬೆಳಗಾವಿ: ಅವಳಿ ಹೆಣ್ಣುಮಕ್ಕಳಿಗೆ ಜನ್ಮ ನೀಡಿದ ಮಹಿಳೆಯೊಬ್ಬರು ಹೃದಯಾಘಾತ ಸಂಭವಿಸಿ ಸಾವನ್ನಪ್ಪಿದ ಘಟನೆ ಖಾನಾಪೂರ ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ. ಖಾನಾಪುರ ತಾಲೂಕಿನ ಗಂಗವಾಳಿ ಗ್ರಾಮದ ನಿವಾಸಿ ಉಜ್ವಲಾ ಅರುಣ ಶಿಂಧೆ(24) ಮೃತ ಮಹಿಳೆ. ಉಜ್ವಲಾ ನಿನ್ನೆ ತೀವ್ರ ಹೆರಿಗೆ ನೋವಿನಿಂದಾಗಿ ಖಾನಾಪೂರದ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಆರೋಗ್ಯ ಪರೀಕ್ಷಿಸಿದ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿ ಹೊಟ್ಟೆಯಲ್ಲಿ ಅವಳಿ ಮಕ್ಕಳಿರುವುದನ್ನು ಗಮನಿಸಿ ಕೂಡಲೇ ಹೆರಿಗೆ ಮಾಡಿಸಿದ್ದಾರೆ. ಹೆರಿಗೆ ಸಮಯದಲ್ಲಿ …
Read More »ಗೂಂಡಾಗಿರಿ ಮಾಡಲು ಡಿಕೆಶಿ ಗೋವಾ ಹೋಗಿದ್ರಾ: ಪ್ರಹ್ಲಾದ್ ಜೋಶಿ ವ್ಯಂಗ್ಯ
ಹುಬ್ಬಳ್ಳಿ: ಡಿ.ಕೆ. ಶಿವಕುಮಾರ್ ಯಾಕೆ ಗೋವಾಕ್ಕೆ ಹೋಗಿದ್ದರೂ ಎನ್ನುವುದು ಇನ್ನೂ ಅರ್ಥವಾಗಿಲ್ಲ, ತೋಳಬಳ ತೋರಿಸಲು, ಗೂಂಡಾಗಿರಿ ಮಾಡಲು ಹೋಗಿದ್ರಾ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ವ್ಯಂಗ್ಯ ಮಾಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೂಸು ಹುಟ್ಟುವ ಮುನ್ನ ಕುಲಾವಿ ಹೊಲಿಸಿದ್ರು ಎಂಬಂತೆ ಕಾಂಗ್ರೆಸ್ ನಡೆಯಾಗಿದೆ. ಫಲಿತಾಂಶ ಬರುವ ಮುನ್ನವೇ ಗೋವಾಕ್ಕೆ ಹೋಗಿ ಗೂಂಡಾಗಿರಿ ಮಾಡಲು ತಯಾರಿ ಮಾಡಿದ್ದರು ಎಂದು ಟೀಕಿಸಿದರು. ಸ್ವಾತಂತ್ರ್ಯ ನಂತರದ ಕಾಂಗ್ರೆಸ್ ವಿಸರ್ಜಿಸಿ ಅಂತ ಗಾಂಧಿ ಹೇಳಿದ್ದರು. ಅದನ್ನು …
Read More »ಚಲಿಸುವ ರೈಲಿನಿಂದ ಬಿದ್ದು ಅಪರಿಚಿತ ಯುವಕ- ಯುವತಿ ಸಾವನ್ನಪ್ಪಿರುವ ಘಟನೆ
ವಿಜಯನಗರ; ಚಲಿಸುವ ರೈಲಿನಿಂದ ಬಿದ್ದು ಅಪರಿಚಿತ ಯುವಕ- ಯುವತಿ ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಕೊಟಗಿನಾಳ್ ಗ್ರಾಮದ ಬಳಿ ನಡೆದಿದೆ. ಬಳ್ಳಾರಿಯಿಂದ ಹುಬ್ಬಳ್ಳಿ ಕಡೆ ಹೊರಟಿದ್ದ ರೈಲಿನಿಂದ ಯುವಕ-ಯುವತಿ ಬಿದ್ದಿರೋ ಶಂಕೆ ಕಂಡು ಬಂದಿದೆ. ರೈಲ್ವೆ ಹಳಿಯಿಂದ 50 ಅಡಿ ದೂರದಲ್ಲಿ ಯುವತಿ ಮತ್ತು ಯುವಕನ ಮೃತದೇಹ ಪತ್ತೆಯಾಗಿದೆ. ಮೃತರ ಹೆಸರು, ವಿಳಾಸದ ಬಗ್ಗೆ ಇನ್ನೂ ಮಾಹಿತಿ ಲಭ್ಯವಾಗಿಲ್ಲ. ಸದ್ಯ ಇಬ್ಬರ ಮೊಬೈಲ್ಗಳು ಆಫ್ ಆಗಿದ್ದು, ಸ್ಥಳಕ್ಕೆ …
Read More »