Breaking News

Yearly Archives: 2022

ಅಂತರರಾಷ್ಟ್ರೀಯ ಚಲನಚಿತ್ರೋತ್ಸವ: ‘ಡಿ ಬಾಸ್‌’ ಘೋಷಣೆಗೆ ಸಿ.ಎಂ ಪೆಚ್ಚು!

ಬೆಂಗಳೂರು: ಚಿತ್ರಾಭಿಮಾನ, ಅಭಿಮಾನಿಗಳ ಜೈಕಾರ, ರಾಜಕೀಯ ಮೇಳ, ಬೇಡಿಕೆಗಳ ಪಟ್ಟಿ ಮತ್ತು ಭರವಸೆಗಳ ಮಹಾಪೂರಗಳ ನಡುವೆ 13ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಗುರುವಾರ ಚಾಲನೆ ಸಿಕ್ಕಿತು. ಕೃಷಿ ವಿಶ್ವವಿದ್ಯಾಲಯದ ಡಾ.ಬಾಬು ರಾಜೇಂದ್ರ ಪ್ರಸಾದ್‌ ಸಮ್ಮೇಳನ ಸಭಾಂಗಣದಲ್ಲಿ ಸಂಜೆ 4.30ಕ್ಕೆ ಆರಂಭವಾಗಬೇಕಿದ್ದ ಕಾರ್ಯಕ್ರಮ ಸುಮಾರು ಒಂದು ಗಂಟೆಯಷ್ಟು ತಡವಾಗಿ ಆರಂಭವಾಯಿತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭಾಷಣ ಆರಂಭಿಸಿದ ಕೆಲ ಕ್ಷಣಗಳಲ್ಲಿ ನಟ ದರ್ಶನ್‌ ಬಂದರು   ಆ ವೇಳೆಗೆ ಸಭಾಂಗಣದಲ್ಲಿದ್ದ …

Read More »

ರಷ್ಯಾ ಯುದ್ಧ ನಿಲ್ಲಿಸಲು ಹೊಸ ದಾರಿ ಹುಡುಕಿದ ಉಕ್ರೇನ್ ಅಧ್ಯಕ್ಷ

ಕೀವ್: ಉಕ್ರೇನ್ ಮೇಲೆ ರಷ್ಯಾ ಯುದ್ಧ ಮುಂದುವರೆಸಿದ್ದು, ನಿರಂತರ ದಾಳಿಯಿಂದಾಗಿ ಉಕ್ರೇನ್ ಸಂಪೂರ್ಣ ಹಾನಿಗೀಡಾಗಿದೆ. ಯುದ್ಧ ನಿಲ್ಲಿಸುವ ಕುರಿತಂತೆ ಉಭಯ ದೇಶಗಳ ನಡುವೆ ಎರಡು ಬಾರಿ ಶಾಂತಿ ಮಾತುಕತೆ, ಸಂಧಾನ ಸಭೆ ನಡೆದರೂ ಷರತ್ತುಗಳ ಕಾರಣ ಫಲಪ್ರದವಾಗಿಲ್ಲ ಇದರ ನಡುವೆ ಪ್ರಬಲ ರಷ್ಯಾದ ನಿರಂತರ ದಾಳಿಯಿಂದಾಗಿ ಉಕ್ರೇನ್ ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ಉಕ್ರೇನಿಯನ್ನರ ಬೆಂಬಲ ಅಧ್ಯಕ್ಷ ಝೆಲೆನ್ ಸ್ಕಿ ಅವರಿಗೆ ಇರುವುದರಿಂದ ಕೊನೆವರೆಗೂ ಹೋರಾಟ ನಡೆಸುವುದಾಗಿ ಹೇಳಿದ್ದಾರೆ. ಆದರೆ, ರಷ್ಯಾ ಯುದ್ಧದಿಂದ …

Read More »

ಫ್ರೀಡಂ ಪಾರ್ಕ್ ಬಿಟ್ಟು ಬೆಂಗಳೂರಿನ ಇತರೆಡೆ ಪ್ರತಿಭಟನೆ ನಿಷೇಧಿಸಿ ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು : ಫ್ರೀಡಂ ಪಾರ್ಕ್ ಹೊರತುಪಡಿಸಿ ಬೆಂಗಳೂರಿನ ಇತರೆ ಯಾವುದೇ ಭಾಗದಲ್ಲೂ ಯಾವುದೇ ರಾಜಕೀಯ ಅಥವಾ ರಾಜಕೀಯೇತರ ಸಂಘಟನೆಗಳು ಮೆರವಣಿಗೆ, ಪ್ರತಿಭಟನೆ, ಬಹಿರಂಗ ಸಭೆ ನಡೆಸದಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಪ್ರತಿಭಟನೆಗಳಿಂದ ಸಂಚಾರ ದಟ್ಟಣೆ ಉಂಟಾಗಿ ಜನತೆಗೆ ತೀವ್ರ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ಹೈಕೋರ್ಟ್ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿ ವಿಚಾರಣೆ ನಡೆಸಿದೆ. ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ತಿ, ನ್ಯಾಯಮೂರ್ತಿ ಎಸ್.ಆರ್. …

Read More »

ಸಿಎಂ ಬಸವರಾಜ ಬೊಮ್ಮಾಯಿ ಅವರಿಂದ ಇಂದು ಚೊಚ್ಚಲ ಬಜೆಟ್ ಮಂಡನೆ. 2022-23ನೇ ಸಾಲಿನ ಆಯವ್ಯಯವನ್ನು ಸಿಎಂ ಇಂದು ಮಂಡಿಸಲಿದ್ದು, ಹಲವು ನಿರೀಕ್ಷೆಗಳು ಗರಿಗೆದರಿವೆ.

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಚೊಚ್ಚಲ ಬಜೆಟ್ ಮಂಡಿಸಲಿದ್ದಾರೆ. ಮೊದಲ ಬಜೆಟ್​ನಲ್ಲಿ ಬೊಮ್ಮಾಯಿ ಯಾರಿಗೆ ಏನು ಕೊಡುತ್ತಾರೆ ಎಂಬ ಕುತೂಹಲ ಮೂಡಿದೆ. ಇಂದು ಮಧ್ಯಾಹ್ನ 12.30 ರಿಂದ ಸಿಎಂ ವಿಧಾನಸಭೆಯಲ್ಲಿ 2022-23ನೇ ಸಾಲಿನ ಆಯವ್ಯಯ ಮಂಡಿಸಲಿದ್ದಾರೆ. ಇದಕ್ಕೂ ಮುನ್ನ ಬಜೆಟ್​ಗೆ ಅನುಮೋದನೆ ನೀಡಲು 12.10ಕ್ಕೆ ಸಚಿವ ಸಂಪುಟ ವಿಶೇಷ ಸಭೆ ನಡೆಯಲಿದೆ. ಬಜೆಟ್​ಗೂ ಮುನ್ನ ಸಿಎಂ ದೇವಾಲಯಕ್ಕೆ ತೆರಳಿ, ಪೂಜೆ ಸಲ್ಲಿಸಲಿದ್ದಾರೆ. ಆ ಬಳಿಕ ಆಯವ್ಯಯ ಪ್ರತಿ ಸ್ವೀಕರಿಸಿ …

Read More »

ರಾಜ್ಯದಲ್ಲಿ ಕೋವಿಡ್ ನಿರ್ಬಂಧ ಸಂಪೂರ್ಣ ತೆರವು

ಬೆಂಗಳೂರು: ಕೊರೋನಾ ಸೋಂಕು ಭಾರೀ ಪ್ರಮಾಣದಲ್ಲಿ ಇಳಿಮುಖವಾದ ಬೆನ್ನಲ್ಲೇ ರಾಜ್ಯದಲ್ಲಿ ಕೋವಿಡ್ ನಿರ್ಬಂಧಗಳನ್ನು ಸಂಪೂರ್ಣವಾಗಿ ತೆರವುಗೊಳಿಸಲಾಗಿದೆ. ರಾಜ್ಯದಲ್ಲಿ ಕೋವಿಡ್ ಸೋಂಕಿನ ಪ್ರಮಾಣ ಗಣನೀಯವಾಗಿ ಇಳಿಕೆಯಾಗಿದ್ದು, ಜನಜೀವನ ಹಾಗೂ ಆರ್ಥಿಕತೆಗೆ ಮತ್ತೆ ಚೇತರಿಕೆ ಒದಗಿಸಲು,ಶಿಕ್ಷಣ ,ಸಾಂಸ್ಕೃತಿಕ, ಸಭೆ,ಸಮಾರಂಭಗಳು,ಕ್ರೀಡೆ,ಮನರಂಜನಾ ಚಟುವಟಿಕೆಗಳು, ಜಾತ್ರೆ ,ಉತ್ಸವಗಳು ಸೇರಿದಂತೆ ವಿವಿಧ ರಂಗಗಳ ಮೇಲೆ ವಿಧಿಸಿದ್ದ ನಿರ್ಬಂಧಗಳನ್ನು ತೆರವುಗೊಳಿಸಲಾಗಿದೆ   ಮದುವೆ,ಶವ ಸಂಸ್ಕಾರಗಳಲ್ಲಿ ಭಾಗವಹಿಸುವವರ ಸಂಖ್ಯೆಗೆ ಮಿತಿಗೊಳಿಸಲಾಗಿದ್ದ ನಿರ್ಬಂಧಗಳನ್ನು ಕೂಡ ಮುಕ್ತಗೊಳಿಸಲಾಗಿದೆ.ಸಿನೆಮಾ,ನಾಟಕ ಥೇಟರುಗಳು, ಶಾಲೆ,ಕಾಲೇಜು,ಗ್ರಂಥಾಲಯ, ತರಬೇತಿ ಕೇಂದ್ರಗಳು ,ಕ್ರೀಡಾ …

Read More »

ಬೊಮ್ಮಾಯಿ ಬಜೆಟ್ ಮೇಲೆ ಬೆಟ್ಟದಷ್ಟು ನಿರೀಕ್ಷೆ: ಬಜೆಟ್ ಮಂಡನೆಗೆ ಮುಖ್ಯಮಂತ್ರಿ ಸಿದ್ಧತೆ.

ಬಜೆಟ್ ಎಂದಾಕ್ಷಣ ಜನ ಸಾಮಾನ್ಯರಿಂದ ಹಿಡಿದು ಉದ್ಯಮಿಗಳ ತನಕ ಹತ್ತು ಹಲವು ನಿರೀಕ್ಷೆಗಳು ಗರಿಗೆದ ರುವುದು ಸಹಜ. ಇಂಥದ್ದೆ ನಿರೀಕ್ಷೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಡಿಸಲಿರುವ ಬಜೆಟ್ ಮೇಲೂ ಇದೆ. ಮೊದಲಿಂದಲೂ ರೈತ ಸಮುದಾಯಕ್ಕೆ ಬಜೆಟ್​ನಲ್ಲಿ ವಿಶೇಷ ಆದ್ಯತೆ ನೀಡಲಾಗುತ್ತಿದ್ದು, ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ಬಂಗಾರಪ್ಪ, ಎಸ್.ಎಂ.ಕೃಷ್ಣ ಮತ್ತು ಸಿದ್ದರಾಮಯ್ಯ, ಜೆಡಿಎಸ್ ಅಧಿಕಾರದಲ್ಲಿದ್ದಾಗ ಎಚ್.ಡಿ.ದೇವೇಗೌಡ, ಎಚ್.ಡಿ.ಕುಮಾರಸ್ವಾಮಿ, ಬಿಜೆಪಿ ಸರ್ಕಾರದಲ್ಲಿ ಬಿ.ಎಸ್.ಯಡಿಯೂರಪ್ಪ ವಿಶೇಷ ಕಾಳಜಿ ವಹಿಸಿದ್ದಾರೆ. ಉಚಿತ ವಿದ್ಯುತ್, ಗ್ರಾಮೀಣ ಕೃಪಾಂಕ, …

Read More »

ಅಮರಾವತಿʼಯೇ ಆಂಧ್ರಪ್ರದೇಶದ ರಾಜಧಾನಿ!. ಹೈಕೋರ್ಟ್‌ನ ಅಂತಿಮ ತೀರ್ಪು ಪ್ರಕಟ

ಅಮರಾವತಿ(ಆಂಧ್ರಪ್ರದೇಶ): ಆಂಧ್ರಪ್ರದೇಶ ರಾಜಧಾನಿ ವಿಚಾರದಲ್ಲಿ 3 ರಾಜಧಾನಿಗಳು, ಸಿಆರ್‌ಡಿಎ ರದ್ದು ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳ ಕುರಿತು ರಾಜ್ಯ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ರಾಜ್ಯ ಸರ್ಕಾರ ಸಿಆರ್‌ಡಿಎ ಕಾಯ್ದೆ ಪ್ರಕಾರವೇ ನಡೆದುಕೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ.   ʻಅಮರಾವತಿʼಯನ್ನು ರಾಜಧಾನಿಯನ್ನಾಗಿ ಅಭಿವೃದ್ಧಿಪಡಿಸಬೇಕು ಎಂದು ಆದೇಶಿಸಲಾಗಿದೆ. ರೈತರೊಂದಿಗೆ ಮಾಡಿಕೊಂಡಿರುವ ಒಪ್ಪಂದದ ಪ್ರಕಾರ 6 ತಿಂಗಳೊಳಗೆ ಮಾಸ್ಟರ್ ಪ್ಲಾನ್ ಪೂರ್ಣಗೊಳಿಸಬೇಕು. ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಕಾಲಕಾಲಕ್ಕೆ ನ್ಯಾಯಾಲಯಕ್ಕೆ ವರದಿ ಸಲ್ಲಿಸುವಂತೆಯೂ ಸೂಚಿಸಿದೆ. …

Read More »

ಕಾಂಗ್ರೆಸ್ ಪಾದಯಾತ್ರೆಗೆ ಹೈಕೋರ್ಟ್​ ಅಸಮಾಧಾನ: ಬೆಂಗಳೂರು ನಗರದಲ್ಲಿ ಪ್ರತಿಭಟನೆ ನಡೆಸದಂತೆ ತಾಕೀತು

ಬೆಂಗಳೂರು: ಮೇಕೆದಾಟು ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಪಾದಯಾತ್ರೆಗೆ ಹೈಕೋರ್ಟ್​ ಅಸಮಾಧಾನ ವ್ಯಕ್ತಪಡಿಸಿದ್ದು, ಬೆಂಗಳೂರು ನಗರದಲ್ಲಿ ಇನ್ಮುಂದೆ ಯಾವುದೇ ಪ್ರತಿಭಟನೆಗಳನ್ನು ಕೈಗೊಳ್ಳದಂತೆ ಆದೇಶ ಹೊರಡಿಸಿದೆ. ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಹಾಗೂ ನ್ಯಾಯಮೂರ್ತಿ ಎಸ್.ಆರ್ ಕೃಷ್ಣಕುಮಾರ್ ಅವರಿದ್ದ ವಿಭಾಗೀಯ ಪೀಠದಿಂದ ಆದೇಶ ಹೊರಡಿಸಲಾಗಿದೆ. ಫ್ರೀಡಂಪಾರ್ಕ್​​ನಲ್ಲಿ ಪ್ರತಿಭಟನೆ ನಡೆಸುವ ವೇಳೆಯೂ ನಗರದ ಸಾರಿಗೆ-ಸಂಚಾರ ಹಾಗೂ ಜನರ ದಿನನಿತ್ಯದ ಚಟುವಟಿಕೆಗಳಿಗೆ ತೊಂದರೆಯಾಗದಂತೆ ನೋಡಿಕೊಳ್ಳುವಂತೆ ಸರ್ಕಾರಕ್ಕೆ ತಾಕೀತು ಮಾಡಿತು. ಇಂದು ಹೈಕೋರ್ಟ್ ತಲುಪಲು ನಮಗೇ ಒಂದು ಗಂಟೆ …

Read More »

ದೇಶದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಮತ್ತಷ್ಟು ಇಳಿಮುಖ

ದೆಹಲಿ: ದೇಶದಲ್ಲಿ ಕೋವಿಡ್ ಸೋಂಕಿನ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಮುಖವಾಗುತ್ತಿದೆ. ಸತತವಾಗಿ ಕಳೆದ 25 ದಿನಗಳಿಂದ ಒಂದು ಲಕ್ಷಕ್ಕಿಂತ ಕಡಿಮೆ ಪ್ರಕರಣಗಳು ಪತ್ತೆಯಾಗುತ್ತಿವೆ. ಕೇಂದ್ರ ಆರೋಗ್ಯ ಸಚಿವಾಲಯವು ಗುರುವಾರ ನೀಡಿರುವ ಅಂಕಿ-ಅಂಶಗಳ ಪ್ರಕಾರ ಹೊಸದಾಗಿ 6,561 ಜನರಿಗೆ ಮಾತ್ರವೇ ಸೋಂಕು ಪತ್ತೆಯಾಗಿದೆ. ಇದರಲ್ಲಿ 142 ಮಂದಿ ಮೃತಪಟ್ಟಿದ್ದಾರೆ. ಹೊಸ ಪ್ರಕರಣಗಳೊಂದಿಗೆ ಸಕ್ರಿಯ ರೋಗಿಗಳು 77,152 ಇದ್ದಾರೆ. ಇದರಿಂದ ಸಕ್ರಿಯ ಪ್ರಕರಣಗಳ ಪ್ರಮಾಣ ಕೇವಲ ಶೇ.0.18 ಮಾತ್ರವೇ ಇದ್ದು, ಶೇ.98.62 ಚೇತರಿಕೆ ಪ್ರಮಾಣ ಇದೆ. …

Read More »

ಕಾಮಗಾರಿ ಹಿನ್ನಲೆ ‘ಆಗುಂಬೆ ಘಾಟ್’ ರಸ್ತೆ 10 ದಿನ ಬಂದ್

ಶಿವಮೊಗ್ಗ: ಈಗಾಗಲೇ ರಸ್ತೆ ಕಾಮಗಾರಿ ಹಿನ್ನಲೆಯಲ್ಲಿ ಹಲವು ಬಾರಿ ಬಂದ್ ಆಗಿದ್ದಂತ ಆಗುಂಬೆ ರಸ್ತೆ , ಈಗ ಮತ್ತೆ ಬಂದ್ 10 ದಿನ ಬಂದ್ ಆಗಲಿದೆ. ಈ ಕುರಿತಂತೆ ಶಿವಮೊಗ್ಗ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ರಾಷ್ಟ್ರೀಯ ಹೆದ್ದಾರಿ 169ಎ ಆಗುಂಬೆ-ಹೆಬ್ರಿವರೆಗೆ ರಸ್ತೆ ದುರಸ್ತಿ ಕಾಮಗಾರಿ ಹಿನ್ನಲೆಯಲ್ಲಿ ಮಾರ್ಚ್ 5 ರಿಂದ 15ರವರೆಗೆ ಹತ್ತು ದಿನ ಬೆಳಿಗ್ಗೆ 7 ರಿಂದ ಸಂಜೆ 7ರವೆರೆಗೆ ಆಗುಂಬೆ ಘಾಟ್ ಸಂಚಾರ ನಿಷೇಧಿಸಲಾಗಿದೆ …

Read More »