ವಿಜಯಪುರ: ಚಲಿಸುತ್ತಿದ್ದ ರೈಲಿನಿಂದ ಕೆಳಗೆ ಹಾರಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯ ನಿಡಗುಂದಿ ಹಾಗೂ ಬಸವನ ಬಾಗೇವಾಡಿ ರೈಲು ಮಾರ್ಗದ ಮಧ್ಯೆ ನಡೆದಿದೆ. ಸುಮಾರು 25-30 ವರ್ಷದ ಯುವಕ ವಿಜಯಪುರದಿಂದ ಮಂಗಳೂರಿಗೆ ತೆರಳುತ್ತಿದ್ದ ಎಕ್ಸ್‌ಪ್ರೆಸ್ ರೈಲಿನಿಂದ ಕೆಳಗೆ ಹಾರಿದ್ದಾನೆ. ಗಾಯಾಳುವನ್ನು ತಕ್ಷಣ ರೈಲ್ವೆ ಪೊಲೀಸರು ಬಸವನ ಬಾಗೇವಾಡಿ ತಾಲೂಕು ಆಸ್ಪತ್ರೆಗೆ ದಾಖಲಿಸಿದ್ರೂ ಕೂಡ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಆತ್ಮಹತ್ಯೆ ಮಾಡಿಕೊಂಡ ಯುವಕನ ಹೆಸರು, ವಿಳಾಸ ಇನ್ನೂ ಪತ್ತೆಯಾಗಿಲ್ಲ. …
Read More »Yearly Archives: 2022
ದಯವಿಟ್ಟು ಸಹಕರಿಸಿ: ಉಕ್ರೇನ್ ವಿಷಯದಲ್ಲಿ ಭಾರತದ ಬೆಂಬಲ ಕೋರಿದ ಯುಎಸ್
ವಾಶಿಂಗ್ಟನ್, ಫೆಬ್ರವರಿ 25: ಉಕ್ರೇನ್‌ನಲ್ಲಿ ರಷ್ಯಾ ನಡೆಸುತ್ತಿರುವ ಸೇನಾ ಕಾರ್ಯಾಚರಣೆ ಕುರಿತು ಭಾರತದ ಜೊತೆಗೆ ಯುನೈಟೆಡ್ ಸ್ಟೇಟ್ಸ್ ಸಮಾಲೋಚನೆ ನಡೆಸುತ್ತಿದೆ ಎಂದು ಅಧ್ಯಕ್ಷ ಜೋ ಬೈಡನ್ ಹೇಳಿದ್ದಾರೆ. ಉಕ್ರೇನ್‌ನಲ್ಲಿ ಯುದ್ಧ ಘೋಷಿಸುವ ಕುರಿತು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಗುರುವಾರ ದೂರದರ್ಶನದಲ್ಲಿ ಸ್ಪಷ್ಟಪಡಿಸಿದ್ದರು. “ನಾನು ಸೇನಾ ಕಾರ್ಯಾಚರಣೆ ನಡೆಸಲು ನಿರ್ಧಾರ ತೆಗೆದುಕೊಂಡಿದ್ದೇನೆ,” ಎಂದು ಅವರು ಮಾಸ್ಕೋದಲ್ಲಿ ಬೆಳಗ್ಗೆ 6 ಗಂಟೆ ಸುಮಾರಿಗೆ ಪ್ರಕಟಣೆ ಹೊರಡಿಸಿದ್ದರು. ಇದೇ ವೇಳೆ ರಷ್ಯಾದ ಸೇನಾ …
Read More »ಕರ್ನಾಟಕ ಬಜೆಟ್; ರಾಜ್ಯ ಸರ್ಕಾರಿ ನೌಕರರ ಬೇಡಿಕೆ ಏನು?
ಬೆಂಗಳೂರು, ಫೆಬ್ರವರಿ 24; ಹಣಕಾಸು ಸಚಿವರು ಆಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾರ್ಚ್ 4ರಂದು 2022-23ನೇ ಸಾಲಿನ ಬಜೆಟ್ ಮಂಡನೆ ಮಾಡಲಿದ್ದಾರೆ. ತಮ್ಮ ಚೊಚ್ಚಲ ಬಜೆಟ್‌ನಲ್ಲಿ ಯಾವ ಘೋಷಣೆ ಮಾಡಲಿದ್ದಾರೆ? ಎಂಬುದು ಕುತೂಹಲಕ್ಕೆ ಕಾರಣವಾಗಿದೆ. ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟ ಬಜೆಟ್‌ನಲ್ಲಿ ಕೆಲವು ಘೋಷಣೆಗಳನ್ನು ಮಾಡಬೇಕು ಎಂದು ಸರ್ಕಾರವನ್ನು ಆಗ್ರಹಿಸಿದೆ. ಸರ್ಕಾರಿ ನೌಕರರಿಗೆ ಯಾವ ಕೊಡಗೆ ಸಿಗಲಿದೆ? ಎಂದು ಕಾದು ನೋಡಬೇಕಿದೆ. ರಾಜ್ಯ ಬಜೆಟ್ ವಿಶೇಷ; ಮೈಸೂರಿನ …
Read More »ಮೃತ ಹರ್ಷ ಮೊಬೈಲ್ ಫೋನ್ ಪತ್ತೆಯಾಗಿಲ್ಲ, 10 ಆರೋಪಿಗಳ ಬಂಧನ; ಶಿವಮೊಗದಲ್ಲಿ ಎಸ್ಪಿ ಮಾಹಿತಿ
ಶಿವಮೊಗ್ಗ: ಜಿಲ್ಲೆಯಲ್ಲಿ ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ (Harsha Murder) ಪ್ರಕರಣಕ್ಕೆ ಸಂಬಂಧಿಸಿ ಈವರೆಗೆ ಒಟ್ಟು 10 ಆರೋಪಿಗಳನ್ನ ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿದ ಎಸ್ಪಿ ಬಿಎಂ ಲಕ್ಷ್ಮೀಪ್ರಸಾದ್, ಹರ್ಷ ಮೊಬೈಲ್ ಫೋನ್ (Mobile Phone) ಇನ್ನೂ ಪತ್ತೆಯಾಗಿಲ್ಲ ಎಂದು ತಿಳಿಸಿದ್ದಾರೆ. ಹರ್ಷ ಮೊಬೈಲ್ಗೆ ಯುವತಿಯರು ವಿಡಿಯೋ ಕಾಲ್ ಮಾಡಿರುವ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿರುವ ಎಸ್ಪಿ, ಹತ್ಯೆಯಾದ ಹರ್ಷನ ಸ್ನೇಹಿತನ ಹೇಳಿಕೆಯನ್ನು ಪಡೆಯಲಾಗಿದೆ. ಯುವತಿಯರು ಯಾರು …
Read More »ವಾಹನಗಳ ಮುಂದೆ ಬೋರ್ಡ ಹಾಕಿದ್ರೆ ಮುಟ್ಟುಗೋಲು ಗ್ಯಾರಂಟಿ: ಸಾರಿಗೆ ಅಧಿಕಾರಿ ಶಿವಾನಂದ ಮಗದುಮ್ಮ ಎಚ್ಚರಿಕೆ
ವಾಹನಗಳ ನೋಂದಣಿ ನಾಮಫಲಕಗಳ ಮೇಲೆ ನಿಯಮ ಬಾಹಿರವಾಗಿ ಸಂಘ ಸಂಸ್ಥೆಗಳು ಅದರ ಚಿಹ್ನೆ ಮತ್ತು ಲಾಂಛನ ಇತರೆ ಹೆಸರುಗಳನ್ನು ಅಳವಡಿಸಿದ್ರೆ ತಕ್ಷಣವೇ ಅವುಗಳನ್ನು ತೆರವುಗೊಳಿಸಬೇಕು. ಇಲ್ಲದಿದ್ರೆ ಅಂತಹ ವಾಹನಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗುವುದು ಎಂದು ಬೆಳಗಾವಿ ಸಾರಿಗೆ ಅಧಿಕಾರಿ ಶಿವಾನಂದ ಮಗದುಮ್ಮ ಅವರು ಎಚ್ಚರಿಕೆ ನೀಡಿದ್ದಾರೆ. ಶುಕ್ರವಾರ ಬೆಳಗಾವಿಯ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಾರಿಗೆ ಅಧಿಕಾರಿ ಶಿವಾನಂದ ಮಗದುಮ್ಮ ಅವರು ನೋಂದಣಿ ನಾಮಫಲಕಗಳ ಮೇಲೆ ನಿಯಮ ಬಾಹಿರವಾಗಿ ಪ್ರದರ್ಶನ …
Read More »137 ನಾಗರಿಕರು ಸಾವು.. ‘ರಷ್ಯಾ ವಿರುದ್ಧ ಉಕ್ರೇನ್ ಒಬ್ಬಂಟಿಯಾಗಿ ಹೋರಾಡ್ತಿದೆ’ -NATO ವಿರುದ್ಧ ಉಕ್ರೇನ್ ಪರೋಕ್ಷ ಅಸಮಾಧಾನ
ರಷ್ಯಾ ನಡೆಸಿದ ದಾಳಿಯಿಂದ 10 ಸೇನಾ ಅಧಿಕಾರಿಗಳು ಸೇರಿ ಒಟ್ಟು 137 ಮಂದಿ ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಮಾಹಿತಿ ನೀಡಿದ್ದಾರೆ. ಒಡೆಸಾ ಪ್ರದೇಶದ ಝಿಮಿನಿ ದ್ವೀಪದಲ್ಲಿದ್ದವರು ಸಾವನ್ನಪ್ಪಿದ್ದಾರೆ. ಝಿಮಿನಿ ದ್ವೀಪವನ್ನ ರಷ್ಯಾ ವಶಪಡಿಸಿಕೊಂಡಿದೆ. ಮಾಸ್ಕೋ ವಿರುದ್ಧ ಹೋರಾಟಲು ಉಕ್ರೇನ್ ಏಕಾಂಗಿಯಾಗಿದೆ ಎಂದು ಝೆಲೆನ್ಸ್ಕಿ ಹೇಳಿದ್ದಾರೆ.
Read More »ಸಿದ್ದು-ಡಿಕೆಎಸ್ ಬಣ ರಾಜಕೀಯ ಅಂತ್ಯವಾಗುತ್ತಾ?
ಸಿದ್ದು-ಡಿಕೆಎಸ್ ಬಣ ರಾಜಕೀಯ ಅಂತ್ಯವಾಗುತ್ತಾ? ಇಂಥದ್ದೊಂದು ಪ್ರಶ್ನೆ ಮೂಡಲು ಕಾರಣ ದೆಹಲಿಯಲ್ಲಿ ನಡೆದ ಪ್ಯಾಚಪ್ ಮೀಟಿಂಗ್. ರಾಹುಲ್ ಗಾಂಧಿ ನೇತೃತ್ವದ ಸಭೆಯಲ್ಲಿ ಒಗ್ಗಟ್ಟಿನ ಮಂತ್ರದ್ದೇ ಜಪ. ಮುಂದಿನ ಚುನಾವಣೆಗೆ ಹೋಗೋ ಮುನ್ನ ಎಲ್ಲಾ ಮುನಿಸು ಬದಿಗಿಡಿ ಅಂತಾ ರಾಹುಲ್ ಕಿವಿ ಮಾತು ಹೇಳಿದ್ದಾರೆ. 2023ರ ಚುನಾವಣೆಗೆ ದೆಹಲಿ ಮೀಟಿಂಗ್ನಲ್ಲಿ ‘ಕೈ’ ತಂತ್ರ 2023ರ ಚುನಾವಣೆಗೆ ಕೈ ಪಾಳಯ ಭರ್ಜರಿ ತಯಾರಿ ನಡೆಸುತ್ತಿದೆ. ಈ ನಿಟ್ಟಿನಲ್ಲಿ ತಳಮಟ್ಟದಿಂದ ಪಕ್ಷವನ್ನ ಬಲಗೊಳಿಸುವುದರ ಜೊತೆಗೆ …
Read More »ಬೆಳ್ಳಂಬೆಳಗ್ಗೆ ಟೀ ಮಾರುತ್ತಿದ್ದವ ಮಧ್ಯಾಹ್ನ ಆಗ್ತಿದ್ದಂತೆ ಪೊಲೀಸ್ ಅಂತಿದ್ದ ಚಾಲಾಕಿ ಅಂದರ್
ಬೆಂಗಳೂರು: ಸಿಟಿ ಮಾರ್ಕೆಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪೊಲೀಸ್ ಅಂತೇಳಿ ವ್ಯಾಪಾರಸ್ಥರಿಂದ ಹಣ ವಸೂಲಿ ಮಾಡುತ್ತಿದ್ದ ನಕಲಿ ಪೊಲೀಸ್ಅನ್ನು ಪೊಲೀಸರು ಬಂಧಿಸಿದ್ದಾರೆ. ಶ್ರೀರಾಮಪುರದ ವಿಘ್ನೇಶ್ (23) ಬಂಧಿತ ಆರೋಪಿಯಾಗಿದ್ದು, ಈತ ಬೆಳಗಿನ ವೇಳೆಯಲ್ಲಿ ಚಿಕ್ಕಪೇಟೆ, ಕಾಟನ್ ಪೇಟೆ, ಹಲಸೂರು ಪ್ರಧೇಶಗಳಲ್ಲಿ ಟೀ ಮಾರಾಟ ಮಾಡುತ್ತಿದ್ದ. ಆ ವೇಳೆ ಅಂಗಡಿಗಳ ಮಾಹಿತಿ ಪಡೆದುಕೊಂಡಿದ್ದ ಆರೋಪಿ ಮಧ್ಯಾಹ್ನ ಆಗುತ್ತಿದಂತೆ ಅಂಗಡಿಗಳ ಬಳಿ ಬಂದು ವ್ಯಾಪಾರಸ್ಥರನ್ನು ಬೆದರಿಸಿ, ನೀವು ಅಕ್ರಮವಾಗಿ ತಂಬಾಕು ಮಾರಾಟ ಮಾಡುತ್ತಿದ್ದೀರಿ. …
Read More »ಉಕ್ರೇನ್‍ನಲ್ಲಿ ಸಿಲುಕಿಕೊಂಡಿರೋ ಬೀದರ್ ಮೂಲದ ವಿದ್ಯಾರ್ಥಿ
ಬೀದರ್: ಉಕ್ರೇನ್‍ನ ಮೆಟ್ರೋದಲ್ಲಿ ಸಿಲುಕಿಕೊಂಡಿರುವ ಬೀದರ್ ಮೂಲದ ವೈದ್ಯಕೀಯ ವಿದ್ಯಾರ್ಥಿ ಅಮಿತ್ ಸೆಲ್ಫಿ ವೀಡಿಯೋ ಮಾಡಿ ಉಕ್ರೇನ್ ಸದ್ಯದ ಪರಿಸ್ಥಿತಿಯನ್ನು ವಿವರಿಸಿದ್ದಾರೆ. ಬೀದರ್‌ನ ಮಂಗಲಪೇಟೆ ನಿವಾಸಿ ಅಮಿತ್ ಚಂದ್ರಕಾಂತ್ ಸಿರೆಂಜ್ ಸೆಲ್ಫಿ ವೀಡಿಯೋ ಮಾಡಿ ಮೆಟ್ರೋದಲ್ಲಿ ಸೇಫಾಗಿರುವ ಕನ್ನಡಗರನ್ನು ತೋರಿಸಿದ್ದಾರೆ. ನಾವೆಲ್ಲ ಮೆಟ್ರೋದಲ್ಲಿ ಸೇಫಾಗಿ ಇದ್ದು ಪೋಷಕರು, ಸ್ನೇಹಿತರು, ಸಂಬಂಧಿಕರು ಹಾಗೂ ವಿದ್ಯಾರ್ಥಿಗಳು ಆತಂಕ ಪಡಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ. ಎಂಬ್ಯೇಸಿ ಮತ್ತು ಉಕ್ರೇನ್ ಸರ್ಕಾರ ನಮ್ಮ ಜೊತೆಗೆ ಇದೆ. ನಿಮ್ಮ …
Read More »ಯುಪಿಯಲ್ಲಿ ಬಿಜೆಪಿ ಆಡಳಿತದಲ್ಲಿ 5 ಲಕ್ಷ ಸರ್ಕಾರಿ ಉದ್ಯೋಗ ನೀಡಲಾಗಿದೆ: ಮೋದಿ
ಲಕ್ನೋ: ಉತ್ತರ ಪ್ರದೇಶದ ಜನರಿಗೆ ಸರ್ಕಾರಿ ಉದ್ಯೋಗ ನೀಡುವ ಭರವಸೆ ನೀಡಿದ ಸಮಾಜವಾದಿ ಪಕ್ಷ ಮತ್ತು ಬಹುಜನ ಸಮಾಜ ಪಕ್ಷದ ಸರ್ಕಾರಗಳು 10 ವರ್ಷಗಳಲ್ಲಿ ಕೇವಲ ಎರಡು ಲಕ್ಷ ಜನರಿಗೆ ಸರ್ಕಾರಿ ಉದ್ಯೋಗಗಳನ್ನು ನೀಡಿದೆ. ಆದರೆ ಯೋಗಿ ಆದಿತ್ಯನಾಥ್ ಸರ್ಕಾರ ಐದು ವರ್ಷಗಳಲ್ಲಿ ಐದು ಲಕ್ಷ ಮಂದಿಗೆ ಉದ್ಯೋಗ ನೀಡಿದೆ ಎಂದು ವಿರೋಧ ಪಕ್ಷದ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಅವರು ವಾಗ್ದಾಳಿ ನಡೆಸಿದ್ದಾರೆ. ಪ್ರಯಾಗ್‍ರಾಜ್ ರ್‍ಯಾಲಿಯನ್ನುದ್ದೇಶಿ ಮಾತನಾಡಿದ ಅವರು, ವಿರೋಧ …
Read More »