ರಮಾನಾಥ ರೈ, ಪ್ರಕಾಶ್ ಶೆಟ್ಟಿ, ಎಮ್ಮೆಕೆರೆ ಸಲಾಂ ಇವರೆಲ್ಲಾ ಸೇರಿ ಉದ್ದೇಶಪೂರ್ವಕವಾಗಿ ಶರತ್ ಹತ್ಯೆ (sharath madiwala) ಮಾಡಿದರು ಎಂದು ಬಂಟ್ವಾಳದ ಆರ್ಎಸ್ಎಸ್ ಕಾರ್ಯಕರ್ತ ಶರತ್ ಮಡಿವಾಳ ತಂದೆ ತನಿಯಪ್ಪ ಮಡಿವಾಳ ಆರೋಪ ಮಾಡಿದ್ದಾರೆ.ಮಂಗಳೂರು: ನನ್ನ ಮಗ ಶರತ್ ಮಡಿವಾಳನನ್ನು ಕೊಲೆ ಮಾಡಿಸಿದ್ದು ಮಾಜಿ ಸಚಿವ ರಮಾನಾಥ ರೈ (Former minister ramanatha rai). ರಮಾನಾಥ ರೈ, ಪ್ರಕಾಶ್ ಶೆಟ್ಟಿ, ಎಮ್ಮೆಕೆರೆ ಸಲಾಂ ಇವರೆಲ್ಲಾ ಸೇರಿ ಉದ್ದೇಶಪೂರ್ವಕವಾಗಿ ಶರತ್ ಹತ್ಯೆ …
Read More »Yearly Archives: 2022
ಮಂಡ್ಯದಲ್ಲಿ ಸ್ಟಾರ್ ಗ್ರೂಪ್ಸ್ ಮಾಲೀಕರಿಗೆ ಬೆಳ್ಳಂಬೆಳಗ್ಗೆ ಐಟಿ ಶಾಕ್
ಮಂಡ್ಯ: ಸಕ್ಕರೆ ನಾಡಿನಲ್ಲಿ ಬೆಳಗಿನ ಜಾವ 4 ಗಂಟೆಗೆ ಸ್ಟಾರ್ ಗ್ರೂಪ್ಸ್ ಮಾಲೀಕ ಮತ್ತು ಅವರ ಸಹೋದರರ ಮನೆ ಹಾಗೂ ಕಚೇರಿಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಉದ್ಯಮಿ ಅಮಿರುಲ್ ಮುರ್ತುಜಾ ಸೇರಿದಂತೆ ಅಮ್ಜಾ, ಶಹಬಾಜ್, ಶಿರೋಜ್ ನಿವಾಸಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಮಿರುಲ್ ಅವರ ಸಹೋದರರು ನಾಗಮಂಗಲದ ಪ್ರಖ್ಯಾತ ಉದ್ಯಮಿಗಳಾಗಿದ್ದಾರೆ. ಸ್ಟಾರ್ ಗ್ರೂಪ್ಸ್ ಹೆಸರಿನಲ್ಲಿ ಪೌಲ್ಟ್ರಿ ಫಾರ್‍ಂ, ಹೋಟೆಲ್, ಪೆಟ್ರೋಲ್ ಉದ್ಯಮ ಸೇರಿದಂತೆ ಹಲವಾರು ಉದ್ಯಮ …
Read More »ಪೋಷಕರ ವಿರೋಧದ ನಡುವೆಯೂ ಪ್ರೇಮ ವಿವಾಹ – ನವದಂಪತಿ ಆತ್ಮಹತ್ಯೆ
ಮೈಸೂರು: ಪೋಷಕರ ವಿರೋಧದ ನಡೆವೆಯೂ ಪ್ರೇಮ ವಿವಾಹವಾದ ನವದಂಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನ ಹುಣಸೂರಿನಲ್ಲಿ ನಡೆದಿದೆ. ಇಬ್ಬರೂ ಅನ್ಯ ಜಾತಿಗೆ ಸೇರಿದ ಹಿನ್ನೆಲೆ ಪೋಷಕರ ಈ ಜೋಡಿ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರು. ಆದರೂ ಈ 4 ತಿಂಗಳ ಹಿಂದೆ ಮನೆ ಬಿಟ್ಟು ಓಡಿ ಹೋಗಿ ವಿವಾಹವಾಗಿದ್ದರು. ಮದುವೆಯಾಗಿ ಕೇವಲ ನಾಲ್ಕು ತಿಂಗಳಿಗೆ ಈ ನವಜೋಡಿ ಆತ್ಯಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆ ಹುಣಸೂರು ತಾಲೂಕಿನ ಸಿಂಗರಮಾರನಹಳ್ಳಿಯಲ್ಲಿ ನಡೆದಿದೆ. ಮದ ರಾಕೇಶ್(25), ಅರ್ಚನಾ(20)ಮೃತ …
Read More »‘ನಾನು ರಾಧಿಕಾ ಕುಮಾರಸ್ವಾಮಿ’.. ನಿಮ್ಮೊಂದಿಗೆ..
ಹೊಸ ಹೊಸ ಡಾನ್ಸ್ ವಿಡಿಯೋಗಳನ್ನು ಸೋಷಿಯಲ್ ಮೀಡಿಯಾಗಳಲ್ಲಿ ಹಾಕುತ್ತಾ ಅಭಿಮಾನಿಗಳನ್ನು ಸದಾ ರಂಜಿಸುತ್ತಿರುವ ರಾಧಿಕಾ, ಹೊಸದೊಂದು ವಿಡಿಯೋ ಹಾಕಿ ಮತ್ತೆ ಸಂಚಲನ ಸೃಷ್ಟಿಸಿದ್ದಾರೆ. ಈ ಬಾರಿ ಅವರು ಯಾವುದೇ ಡಾನ್ಸ್ ವಿಡಿಯೋ ಹಾಕಿಲ್ಲ. ಬ್ಯುಟಿ ಟಿಪ್ಸ್ ಕೂಡ ಕೊಟ್ಟಿಲ್ಲ. “ನಾನು ರಾಧಿಕಾ ಕುಮಾರಸ್ವಾಮಿ’… ಎಂದು ಆರಂಭಿಸಿ, ಅಧಿಕೃತ ಫೇಸ್ ಬುಕ್ ಪೇಜ್ ತೆರೆಯುವುದಾಗಿ ಹೇಳಿಕೊಂಡಿದ್ದಾರೆ. ಈವರೆಗೂ ರಾಧಿಕಾ ಅವರ ಹೆಸರಿನಲ್ಲಿ ಹತ್ತಾರು ಫೇಸ್ ಬುಕ್ ಪೇಜ್ ಗಳನ್ನು ಅಭಿಮಾನಿಗಳು ಕ್ರಿಯೇಟ್ …
Read More »ಅತಿ ಹಿಂದುಳಿದ ವರ್ಗಗಳಿಗೂ ರಾಜಕೀಯ ಮೀಸಲಾತಿ ನೀಡಲು ಆಯೋಗ ರಚಿಸಬೇಕು – ರಾಜ್ಯಪಾಲರಿಗೆ ಮನವಿ
ಬೆಂಗಳೂರು: ಸ್ಥಳೀಯ ಸಂಸ್ಥೆಗಳ ಆಡಳಿತದಲ್ಲಿ ಅತಿ ಹಿಂದುಳಿದ ವರ್ಗಗಳಿಗೆ ರಾಜಕೀಯ ಮೀಸಲಾತಿ ಕಲ್ಪಿಸಿಕೊಡಬೇಕು ಮತ್ತು ಕಾಂತರಾಜು ವರದಿಯನ್ನು ತಕ್ಷಣ ಸರ್ಕಾರ ಜಾರಿಗೊಳಿಸಬೇಕು ಎಂದು ಕರ್ನಾಟಕ ರಾಜ್ಯ ಅತಿ ಹಿಂದುಳಿದ ವರ್ಗಗಳ ಜಾಗೃತಿ ವೇದಿಕೆ ಅಧ್ಯಕ್ಷರಾದ ಎಮ್.ಸಿ.ವೇಣುಗೋಪಾಲ್ ನೇತೃತ್ವದ ನಿಯೋಗ ನಿನ್ನೆ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗಿದೆ. ಮನವಿ ಸಲ್ಲಿಸಿದ ನಂತರ ಈ ಕುರಿತು ಎಮ್.ಸಿ.ವೇಣುಗೋಪಾಲ್ ಅವರು ಮಾಧ್ಯಮಗಳೊಂದಿಗೆ ಮಾತನಾಡಿದ್ದು, ರಾಜ್ಯಪಾಲರು ನಮ್ಮ ಮನವಿಗೆ ಧನಾತ್ಮಕವಾಗಿ …
Read More »ಮೇಲಾಧಿಕಾರಿಗಳ ಕಿರುಕುಳ – ಡೆತ್‍ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿ
ಕಲಬುರಗಿ: ತನ್ನ ಮೇಲಾಧಿಕಾರಿಗಳ ವರ್ತನೆಯಿಂದ ಮನನೊಂದು ಸಿಬ್ಬಂದಿಯೊಬ್ಬ ಡೆತ್ ನೋಟ್ ಬರೆದಿಟ್ಟು, ಲೈವ್ ವೀಡಿಯೋ ಮಾಡಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. ಕಿನಾರಾ ಕ್ಯಾಪಿಟಲ್‍ನ ಕಲಬುರಗಿ ಶಾಖೆಯಲ್ಲಿ ಅಸಿಸ್ಟೆಂಟ್ ಮ್ಯಾನೇಜರ್ ಕೃಷ್ಣಕಾಂತ್ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸದ್ಯ ಅವರ ಸ್ಥಿತಿ ಗಂಭೀರವಾಗಿದ್ದು, ನಗರದ ಕೆಬಿಎನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಏನಿದು ಘಟನೆ? ಕೃಷ್ಣಕಾಂತ್ ಆತ್ಮಹತ್ಯೆ ಯತ್ನಕ್ಕೂ ಮುನ್ನ ಕಚೇರಿಯಲ್ಲಿಯೇ ಡೆತ್ ನೋಟ್ ಬರೆದಿಟ್ಟು ಬಳಿಕ ಲೈವ್ ವೀಡಿಯೋ …
Read More »ಹರ್ಷನ ಮೇಲೆ 2016ರಿಂದಲೇ ಕಣ್ಣಿಟ್ಟಿದ್ದರು – ಹರ್ಷನ ಹತ್ಯೆಗೆ ಕಾರಣವೇನು?
ಶಿವಮೊಗ್ಗ: ಹರ್ಷ ಹಾಗೂ ಖಾಸಿಫ್ ನಡುವೆ ಈ ಹಿಂದೆಯೂ ಹಲವು ಬಾರಿ ತಿಕ್ಕಾಟ ನಡೆದಿತ್ತು. ಈ ಹಿನ್ನೆಲೆಯಲ್ಲಿ ಹಿಂದೂ ಕಾರ್ಯಕರ್ತ ಹರ್ಷನ ಮೇಲೆ 2016 ಮತ್ತು 2017ರಿಂದಲೇ ಕಣ್ಣಿಟ್ಟಿದ್ದರು ಎಂಬುದು ಪೊಲೀಸ್ ತನಿಖೆಯಲ್ಲಿ ತಿಳಿದುಬಂದಿದೆ. ಧಾರ್ಮಿಕ ಭಾವನೆಗೆ ಧಕ್ಕೆ ತಂದು ಕೋಮು ಸೌಹಾರ್ದವನ್ನು ಹಾಳು ಮಾಡಲಾಗುತ್ತಿದೆ ಎಂಬ ಕೇಸ್ ಆದಾಗಿಂದ ಹರ್ಷ ವಿರುದ್ಧ ಖಾಸಿಫ್ ದ್ವೇಷ ಸಾಧಿಸುತ್ತಿದ್ದರು. ಆಗ ಹರ್ಷ ವಿರುದ್ಧ ಎರಡು ಕೇಸ್‍ಗಳನ್ನು ಸಹ ಪೊಲೀಸರು ಹಾಕಿದ್ದರು. ಈ ನಡುವೆ …
Read More »ಹಿಜಾಬ್ ವಿವಾದ : ಮತ್ತೆ ಅರ್ಜಿಯ ವಿಚಾರಣೆಯನ್ನು ನಾಳೆ ಮಧ್ಯಾಹ್ನ 2.30ಕ್ಕೆ ಮುಂದೂಡಿಕೆ
ಹಿಜಾಬ್ ವಿವಾದ ಕುರಿತು 8ನೇ ದಿನವಾದ ಇಂದು ವಿಚಾರಣೆ ನಡೆಸಿದ ಹೈಕೋರ್ಟ್ ತ್ರಿಸದಸ್ಯ ಪೀಠ , ಮತ್ತೆ ಅರ್ಜಿಯ ವಿಚಾರಣೆಯನ್ನು ನಾಳೆ ಮಧ್ಯಾಹ್ನ 2.30ಕ್ಕೆ ಮುಂದೂಡಿಕೆ ಮಾಡಿದೆ. ತ್ರಿಸದಸ್ಯ ಪೂರ್ಣ ಪೀಠದ ಮುಂದೆ ಇಂದು ಕೂಡ ಅಡ್ವಕೇಟ್ ಜನರಲ್ ಸರ್ಕಾರದ ಪರ ವಾದವನ್ನು ಮಂಡಿಸಿದರು. ಈ ಬಳಿಕ ಮಧ್ಯಂತರ ಆದೇಶದ ಸ್ಪಷ್ಟೀಕರಣಗಳನ್ನು ಕೋರುವ ಅರ್ಜಿಗಳನ್ನು ನಾಳೆ ತೆಗೆದುಕೊಳ್ಳುವುದಾಗಿ ಪೀಠ ಹೇಳಿತು. ಈ ಮೂಲಕ ನಾಳೆ ಮಧ್ಯಾಹ್ನ 2.30ಕ್ಕೆ ಮುಂದೂಡಿಕೆ ಮಾಡಿದೆ.
Read More »ಹಿಜಾಬ್ ವಿವಾದ ಕಾರಣಕ್ಕೆ ವಿದ್ಯಾರ್ಥಿಗಳು ಪರೀಕ್ಷೆಗಳಿಗೆ ಗೈರಾದರೆ ಮರುಪರೀಕ್ಷೆ ಇಲ್ಲ: ಸಚಿವ ಬಿ.ಸಿ. ನಾಗೇಶ್
ಬೆಂಗಳೂರು: “ಹಿಜಾಬ್ ವಿವಾದದ ಕಾರಣಕ್ಕೆ ವಿದ್ಯಾರ್ಥಿಗಳು ಪಿಯು ಪರೀಕ್ಷೆಗಳಿಗೆ ಗೈರುಹಾಜರಾದರೆ ಅವರಿಗೆ ಮರುಪರೀಕ್ಷೆ ಇರುವುದಿಲ್ಲ. ಯಾರೂ ಕೂಡ ಹಠ ಮಾಡಿ ಶೈಕ್ಷಣಿಕ ಜೀವನ ಹಾಳು ಮಾಡಿಕೊಳ್ಳಬಾರದು,” ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮನವಿ ಮಾಡಿದ್ದಾರೆ. ಮಂಗಳವಾರ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಜಾಬ್ ತೆಗೆದು ಪರೀಕ್ಷಾ ಕೇಂದ್ರಕ್ಕೆ ಬರಬೇಕು. “ಹಿಜಾಬ್ ವಿಚಾರದಲ್ಲಿ ಹೈಕೋರ್ಟ್ ನೀಡಿರುವ ಆದೇಶವನ್ನು ಕೆಲವರು ವಿರೋಧಿಸಿದ್ದಾರೆ. ಅಂತಹವರ ಪರವಾಗಿ ಕಾಂಗ್ರೆಸ್‌ನವರು ಮಾತನಾಡುವುದು ಸರಿಯಲ್ಲ. …
Read More »ಮಾ.4 ರಂದು ಬೊಮ್ಮಾಯಿ ಸರ್ಕಾರದ ಚೊಚ್ಚಲ ಬಜೆಟ್
ಬೆಂಗಳೂರು: ಮಾರ್ಚ್ 4ರಂದು ತಮ್ಮ ಸರಕಾರದ ಚೊಚ್ಚಲ ಬಜೆಟ್ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಡಿಸಲಿದ್ದಾರೆ. ಬಸವರಾಜ ಬೊಮ್ಮಾಯಿ ಅವರೇ ಮಾಧ್ಯಮ ಪ್ರತಿನಿಧಿಗಳಿಗೆ ಈ ವಿಷಯ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮಾರ್ಚ್ 4ರಂದು ತಾವು ಬಜೆಟ್ ಮಂಡನೆ ಮಾಡುವುದಾಗಿ ಹೇಳಿದರು.ಬಸವರಾಜ ಬೊಮ್ಮಾಯಿ ಅವರು ಹಣಕಾಸು ಖಾತೆಯನ್ನೂ ಸಹ ಹೊಂದಿದ್ದು, ಹೀಗಾಗಿ ಅವರೇ ಬಜೆಟ್ ಮಂಡನೆ ಮಾಡಲಿದ್ದಾರೆ. ಇದರ ಮಧ್ಯೆ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ವಿಧಾನಮಂಡಲ …
Read More »