ಯಮಕನಮರಡಿ: ಆರೋಗ್ಯವೇ ಭಾಗ್ಯವಾಗಿದ್ದು, ಯುವಕರು ಆರೋಗ್ಯದ ಕಡೆ ಗಮನ ಹರಿಸಬೇಕು. ನಿಮಗೆ ಬೇಕಾದ ಎಲ್ಲಾ ರೀತಿಯ ವ್ಯಾಯಾಮ ಸಾಮಗ್ರಿ ನೀಡಲು ಬದ್ಧರಿದ್ದು, ಓದಿಗೂ ಆಸಕ್ತಿ ತೊರಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು. ಅಲದಾಳ ಗ್ರಾಮದಲ್ಲಿ ನಡೆದ ವ್ಯಾಯಾಮ ಶಾಲಾ ಉಪಕರಣಗಳ ವಿತರಣಾ ಸಮಾರಂಭದಲ್ಲಿ ಮಾತನಾಡಿದ ಅವರು, ಮತ ಕ್ಷೇತ್ರದಲ್ಲಿ ಶಾಲಾ ಕಟ್ಟಡಗಳನ್ನು ಅಚ್ಚುಕಟ್ಟಾಗಿ ನಿರ್ಮಿಸಿದ್ದು, ಅವುಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕೆಂದರು. ಶಾಸಕರ ಸ್ಥಳೀಯ ಪ್ರದೇಶಾಭಿವೃದ್ದಿ ಯೋಜನೆಯಡಿ ಮತಕ್ಷೇತ್ರದ ಎಲ್ಲಾ …
Read More »Yearly Archives: 2022
ನನ್ನ ಮಗನನ್ನು ಹುಡುಕಿಕೊಡಿ ಪೊಲೀಸ್ ವರಿಷ್ಠಾಧಿಕಾರಿಗಳ ಮುಂದೆ ವೃದ್ಧೆಯ ಗೋಳು..!
ಪೊಲೀಸ್ ಠಾಣೆ ಅಂದ ಮೇಲೆ ಅಲ್ಲಿ ಹಲವಾರು ರೀತಿಯ ಕೇಸ್‍ಗಳು ಬರುವುದು ಸಾಮಾನ್ಯ. ಕಳ್ಳತನ,ದರೋಡೆ, ಮಿಸ್ಸಿಂಗ್, ಕೊಲೆ ಹೀಗೆ ಅನೇಕ ರೀತಿಯ ಕೇಸ್‍ಗಳು ಸರ್ವೇ ಸಾಮಾನ್ಯ. ಆದರೆ ಇಲ್ಲೊಬ್ಬ ವಯೋವೃದ್ಧೆ ತಾನು ಕಳೆದುಕೊಂಡದನ್ನು ಹುಡುಕಿಕೊಡಿ ಎಂದು ಈಗ ಪೊಲೀಸ್ ಅಧೀಕ್ಷಕರ ಕಛೇರಿಯ ಮೆಟ್ಟಿಲೇರಿದ್ದಾಳೆ. ಅಷ್ಟಕ್ಕೂ ಅವಳು ಕಳೆದುಕೊಂಡಿದ್ದಾದರೂ ಏನು ಎಂತೀರಾ ಸ್ಟೋರಿ ನೋಡಿ… ಒಂದೆಡೆ ಕಿತ್ತು ತಿನ್ನುವ ಬಡತನ, ಇನ್ನೊಂಡೆದೆ ದುಡಿಯಲು ಶಕ್ತಿಯಿಲ್ಲದೇ ಸಮಾಜದ ಕಣ್ಣಲ್ಲಿ ಹೀನವಾಗಿ ಕಾಣುವ ಪರೀಸ್ಥಿತಿ, …
Read More »ಶಿವಮೊಗ್ಗದಲ್ಲಿ ಯುವಕನ ಹತ್ಯೆ ಮುಸಲ್ಮಾನರೇ ಮಾಡಿದ್ದು ಎಂದು ಈಶ್ವರಪ್ಪಗೆ ಹೇಗೆ ಗೊತ್ತು?: ಮಾಜಿ ಸಚಿವ ಇಕ್ಬಾಲ್ ಅನ್ಸಾರಿ
ಗಂಗಾವತಿ(ಕೊಪ್ಪಳ): ಶಿವಮೊಗ್ಗದಲ್ಲಿ ನಡೆದ ಯುವಕನೊಬ್ಬನ ಕೊಲೆ ಪ್ರಕರಣದ ಬಗ್ಗೆ ಇನ್ನೂ ಪೊಲೀಸ್ ತನಿಖೆ ನಡೆಯುತ್ತಿದೆ. ಆದರೆ, ಅದನ್ನು ಮುಸಲ್ಮಾನರು ಮಾಡಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ಹೇಳಿಕೆ ನೀಡಿದ್ದಾರೆ. ಅದು ಹೇಗೆ ಈಶ್ವರಪ್ಪ ಇಷ್ಟು ಬೇಗ ನಿರ್ಣಯ ಕೈಗೊಂಡರು. ಅವರಿಗೆ ಹೇಗೆ ಗೊತ್ತಾಯಿತು. ಅವರಿಗೇನಾದರೂ ಕನಸು ಬಿದ್ದಿತ್ತೆ? ಎಂದು ಮಾಜಿ ಸಚಿವ ಇಕ್ಬಾಲ್ ಅನ್ಸಾರಿ ಪ್ರಶ್ನಿಸಿದ್ದಾರೆ. ನಗರದಲ್ಲಿ ಕಾಂಗ್ರೆಸ್ ಪಕ್ಷದಿಂದ ಹಮ್ಮಿಕೊಂಡಿದ್ದ ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯದಲ್ಲಿ, …
Read More »ಬಡ್ಡೀಸ್ ಚಿತ್ರಕ್ಕೆ ಯುಎಸ್ಎ ಕ್ಯಾಮೆರಾವುಮೆನ್ : ಇವರು ಎಮ್ಮಿ ಅವಾರ್ಡ್ ನಾಮಿನೇಟರ್
ಕಿರುತೆರೆಯ ಮೂಲಕ ಅಪಾರ ಅಭಿಮಾನಿಗಳ ಹೊಂದಿರುವ ನಟ ಕಿರಣ್ ರಾಜ್ ಇದೀಗ ‘ಬಡ್ಡೀಸ್’ ಹೆಸರಿನ ಚಿತ್ರದಲ್ಲಿ ನಟಿಸುತ್ತಿದ್ದು, ಯು.ಎಸ್.ಎ ವಾಸಿ ನಿಭಾ ಶೆಟ್ಟಿ ಈ ಚಿತ್ರದ ಮೂಲಕ ಸಿನಿಮಾಟೋಗ್ರಾಫರ್ ಆಗಿ ಸ್ಯಾಂಡಲ್ ವುಡ್ ಪ್ರವೇಶ ಮಾಡುತ್ತಿದ್ದಾರೆ. ಅಲ್ಲಿನ ಸಿನಿಮಾಗಳಿಗೆ ಹಾಗೂ ಜಾಹೀರಾತು ಚಿತ್ರಗಳಿಗೆ ಈಗಾಗಲೇ ನಿಭಾ ಶೆಟ್ಟಿ ಕೆಲಸ ಮಾಡಿದ್ದು, ಇವರು ಪ್ರತಿಷ್ಠಿತ ಎಮ್ಮಿ ಅವಾರ್ಡ್ ಗೆ ನಾಮಿನೇಟರ್ ಎನ್ನುವುದು ವಿಶೇಷ. ಈಗಾಗಲೇ ಸಿನಿಮಾದ ಶೂಟಿಂಗ್ ಶುರುವಾಗಿದ್ದು ಬೆಂಗಳೂರು, ಮಂಗಳೂರು, …
Read More »ಹರ್ಷ ಕುಟುಂಬಕ್ಕೆ 1 ಲಕ್ಷ ರೂ ನೆರವು ಘೋಷಿಸಿದ : ಅರವಿಂದ ಲಿಂಬಾವಳಿ
ಬೆಂಗಳೂರು: ಹತ್ಯೆಯಾಗಿರುವ ಹಿಂದೂ ಕಾರ್ಯಕರ್ತ ಹರ್ಷ ಕುಟುಂಬಕ್ಕೆ ಶಾಸಕ ಅರವಿಂದ ಲಿಂಬಾವಳಿ ಒಂದು ಲಕ್ಷ ರೂ ನೆರವು ಘೋಷಿಸಿದ್ದಾರೆ. ಟ್ವೀಟ್‍ನಲ್ಲಿ ಏನಿದೆ?: ಹಿಂದೂ ಕಾರ್ಯಕರ್ತ ಹರ್ಷ ಅವರನ್ನು ಹತ್ಯೆ ಮಾಡಿರುವ ಘಟನೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಮತ್ತು ದುಷ್ಕರ್ಮಿಗಳನ್ನು ಶೀಘ್ರವಾಗಿ ಬಂಧಿಸುವಂತೆ ಸರ್ಕಾರವನ್ನು ಆಗ್ರಹಿಸುತ್ತೇನೆ. ಹರ್ಷರವರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಅವರ ಕುಟುಂಬಸ್ಥರಿಗೆ ಅವರ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ.ನಿನ್ನೆ ನಡೆದ ಆಘಾತಕಾರಿ ಘಟನೆಯಲ್ಲಿ ತಮ್ಮ ಮಗನನ್ನು …
Read More »ಅಖಿಲೇಶ್ ಯಾದವ್ ಬಾಬುವಾಗಿಯೇ ಇರ್ತಾರೆ: ಯೋಗಿ ವ್ಯಂಗ್ಯ
ಲಕ್ನೋ: ಅಖಿಲೇಶ್ ಯಾದವ್ ಅವರು ತಮ್ಮ ಜೀವನುದ್ದಕ್ಕೂ ಚಿಕ್ಕ ಹುಡುಗನಾಗಿಯೇ(ಬಾಬು) ಇರುತ್ತಾನೆ ಎಂದು ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಖಿಲೇಶ್ ಯಾದವ್ ಅವರನ್ನು ವ್ಯಂಗ್ಯವಾಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರಿಗೆ ಸರ್ಕಾರದ ಯೋಜನೆಗಳನ್ನು ಮೇಲ್ವಿಚಾರಣೆ ನಿರ್ವಹಿಸಲು ಇ-ಡ್ಯಾಶ್‍ಬೋರ್ಡ್ ಬಳಸುತ್ತಿದ್ದಾರೆ ಎನ್ನುವುದು ತಿಳಿದಿರಲಿಲ್ಲ ಎಂದು ವ್ಯಂಗ್ಯವಾಡಿದರು. ಅಖಿಲೇಶ್ ಯಾದವ್ ಅವರು ಗ್ಯಾಜೆಟ್‍ಗಳನ್ನು ಸರಿಯಾಗಿ ನಿರ್ವಹಿಸದ ಕಾರಣ ಟ್ಯಾಬ್ಲೆಟ್‍ಗಳು ಮತ್ತು ಸ್ಮಾರ್ಟ್‍ಫೋನ್ ಗಳ ವಿತರಣೆಯನ್ನು ವಿಳಂಬ ಮಾಡಿದರು …
Read More »ಕೇಸರಿ ಚಪ್ಪಲಿ ಬೇಕಾದರೂ ಧರಿಸಲಿ, ನಮ್ಗೆ ಹಿಜಬ್‍ಗೆ ಅನುಮತಿ ನೀಡಿ – ಗೋಕಾಕ್ ವಿದ್ಯಾರ್ಥಿನಿಯರು
ಚಿಕ್ಕೋಡಿ: ಕೇಸರಿ ಚಪ್ಪಲಿ ಬೇಕಾದರೂ ಧರಿಸಿ ಬರಲಿ ನಮಗೆನೂ ಅಭ್ಯಂತರವಿಲ್ಲ, ಹಿಜಬ್ ಧರಿಸಲು ಅವಕಾಶ ನೀಡಿ ಎಂದು ಗೋಕಾಕ್ ಪಟ್ಟಣದಲ್ಲಿ ಪಿಯು ವಿದ್ಯಾರ್ಥಿನಿಯರು ಪಟ್ಟು ಹಿಡಿದು ತರಗತಿಗಳನ್ನ ಬಹಿಷ್ಕರಿಸಿದ್ದಾರೆ. ಕಾಲೇಜುಗಳಲ್ಲಿ ಬೇರೆ ಕೋಮಿನ ವಿದ್ಯಾರ್ಥಿಗಳು ಕೇಸರಿ ಚಪ್ಪಲಿ ಬೇಕಾದರೂ ಧರಿಸಿ ಬರಲಿ ನಮಗೆನೂ ಅಭ್ಯಂತರವಿಲ್ಲ. ನಮಗೆ ಹಿಜಬ್ ಧರಿಸಲು ಅವಕಾಶ ನೀಡಿ ಎಂದು ಹಿಜಬ್ ಬೆಂಬಲಿತ ವಿದ್ಯಾರ್ಥನಿಯರು ಒತ್ತಾಯಿಸಿದ್ದಾರೆ. ಬೆಳಗಾವಿ ಜಿಲ್ಲೆ ಗೋಕಾಕ್ ಪಟ್ಟಣದಲ್ಲಿ ಹಿಜಬ್ ವಿವಾದ ಮುಂದುವರೆದಿದ್ದು, ತರಗತಿಗಳಿಗೆ ತೆರಳದೆ …
Read More »ವಿಶ್ವದ ನಂ.1 ಚೆಸ್ ಆಟಗಾರನಿಗೆ ಶಾಕ್ ಕೊಟ್ಟ 16ರ ಭಾರತೀಯ ಬಾಲಕ
ನವದೆಹಲಿ: ಭಾರತದ ಯುವ ಗ್ರ್ಯಾಂಡ್‍ಮಾಸ್ಟರ್ 16 ವರ್ಷದ ಆರ್ ಪ್ರಗ್ನಾನಂದ ಅವರು ಆನ್‍ಲೈನ್ ರ್ಯಾಪಿಡ್ ಚೆಸ್ ಪಂದ್ಯಾವಳಿಯಾದ ಏರ್‍ಥಿಂಗ್ಸ್ ಮಾಸ್ಟರ್ಸ್‍ನ ಎಂಟನೇ ಸುತ್ತಿನಲ್ಲಿ ವಿಶ್ವದ ನಂ 1 ಆಟಗಾರ ಮ್ಯಾಗ್ನಸ್ ಕಾರ್ಲ್‍ಸೆನ್ ಅವರನ್ನು ದಂಗುಬಡಿಸಿದ್ದಾರೆ. ಕಾರ್ಲ್‍ಸೆನ್‍ರ ಸತತ ಮೂರು ಗೆಲುವಿನ ಓಟವನ್ನು ನಿಲ್ಲಿಸಲು ಸೋಮವಾರದ ಆರಂಭದಲ್ಲಿ ನಡೆದ ಟಾರ್ರಾಸ್ಚ್ ವಿಭಾಗದ ೮ನೇ ಸುತ್ತಿನ ಆಟದಲ್ಲಿ ಪ್ರಗ್ನಾನಂದ ಅವರು 39 ನಡೆಗಳಲ್ಲಿ ಕಪ್ಪು ಕಾಯಿಗಳೊಂದಿಗೆ ಗೆದ್ದಿದ್ದಾರೆ. ಭಾರತೀಯ ಗ್ರ್ಯಾಂಡ್ ಮಾಸ್ಟರ್ ಪ್ರಗ್ನಾನಂದ ಅವರು, …
Read More »ಮೂವರನ್ನು ಅರೆಸ್ಟ್ ಮಾಡಿದ್ದು, ಶಿವಮೊಗ್ಗದಿಂದ ಸ್ಪ್ರೆಡ್ ಆಗಲು ಬಿಡಲ್ಲ:ಗೃಹ ಸಚಿವ ಆರಗ ಜ್ಞಾನೇಂದ್ರ
ಬೆಂಗಳೂರು: ಹಿಂದೂ ಕಾರ್ಯಕರ್ತನ ಹತ್ಯೆ ಪ್ರಕರಣ ಸಂಬಂಧ ಈಗಾಗಲೇ ಮೂವರನ್ನು ಬಂಧಿಸಲಾಗಿದ್ದು, ಪ್ರಕರಣವನ್ನು ಶಿವಮೊಗ್ಗದಿಂದ ಸ್ಪ್ರೆಡ್ ಆಗೋಕೆ ಬಿಡಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ಹರ್ಷ ಕೊಲೆ ಪ್ರಕರಣ ನಡೆದಿದೆ. ಹರ್ಷನ ಅಂತಿಮ ವಿದಿವಿಧಾನ ನೆರವೇರುತ್ತಿದೆ. ಮೆರವಣಿಗೆ ವೇಳೆ ಸ್ವಲ್ಪ ಗಲಾಟೆ ನಡೆದಿದೆ. ಮುರುಗನ್ ಹಿರಿಯ ಅಧಿಕಾರಿ ಸ್ಥಳದಲ್ಲಿ ಇದ್ದಾರೆ. ಅರೆಸ್ಟ್ ಮಾಡಿರೋದನ್ನು ಇನ್ನು ಮಾಹಿತಿ ಸದ್ಯ ಕಸ್ಟಡಿ ತೆಗೆದುಕೊಂಡಿದ್ದಾರೆ ಎಂದರು.
Read More »ಈಶ್ವರಪ್ಪ ಹೇಳಿಕೆಗೆ ಸತೀಶ್ ಜಾರಕಿಹೊಳಿ ಕಿಡಿ
ಚಿಕ್ಕೋಡಿ: ಶಿವಮೊಗ್ಗದಲ್ಲಿ ಮುಸ್ಲಿಂ ಗೂಂಡಾಗಳಿಂದ ಹತ್ಯೆ ಆಗಿದೆ ಎಂಬ ಸಚಿವ ಈಶ್ವರಪ್ಪ ಹೇಳಿಕೆಯನ್ನು ಕೆಪಿಸಿಸಿ ಕಾರ್ಯಾಧ್ಯಕ್ಷ ಖಂಡಿಸಿದ್ದಾರೆ. ಬೆಳಗಾವಿ ಜಿಲ್ಲೆ ಹುಕ್ಕೇರಿ ಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಘಟನೆ ಇವರೇ ಮಾಡಿದ್ದಾರೆ ಎಂದು ಹೇಳಲು ಸಾಧ್ಯವಿಲ್ಲ. ಈ ಬಗ್ಗೆ ತನಿಖೆ ನಡೆಸಲೆಂದೇ ಪೊಲೀಸ್ ಇಲಾಖೆ ಇದೆ. ಪೊಲೀಸರು ತನಿಖೆ ಮಾಡಲಿ ಎಂದರು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಯಾವ ರೀತಿ ಇದೆ ಎಂದು ನೀವೇ ನೋಡುತ್ತಿದ್ದೀರಾ. ಮುಂದಿನ ದಿನಗಳಲ್ಲಿ ಇದಕ್ಕೆಲ್ಲ ಜನ …
Read More »