ಬೆಂಗಳೂರು: ಸಿಎಂಗೆ ಸ್ವಾಭಿಮಾನ ಇದ್ದಿದ್ದರೆ ಈ ಬಚ್ಚಲು ಬಾಯಿಯ ಈಶ್ವರಪ್ಪರನ್ನು ವಜಾ ಮಾಡಬೇಕಿತ್ತು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕಿಡಿಕಾರಿದರು. ಯಾವ ಪಕ್ಷದವರು ಯಾವ ರೀತಿ ಮಾತನಾಡುತ್ತಿದ್ದಾರೆ ಎಂದು ಜನರು ಗಮನಿಸುತ್ತಿದ್ದಾರೆ. ನಿನ್ನೆ ಖರ್ಗೆಯವರು ಬಂದು ಬೆಂಬಲ ಕೊಟ್ಟರು. ಬೇರೆ ರಾಜ್ಯಗಳಿಂದಲೂ ಕರೆ ಬರುತ್ತಿವೆ. ಕರ್ನಾಟಕದ ಕಾಂಗ್ರೆಸ್ ಶಾಸಕರು ಒಳ್ಳೇ ಕೆಲಸ ಮಾಡ್ತಿದ್ದಾರೆ. ಧರಣಿ ಮಾಡುತ್ತಿರುವುದು ಒಳ್ಳೆಯದು ಎಂದು ಬೇರೆ ರಾಜ್ಯಗಳ ರಾಜಕಾರಣಿಗಳು ಹೇಳುತ್ತಿದ್ದಾರೆ ಎಂದು ಖರ್ಗೆ ಹೇಳಿದರು. ಈಶ್ವರಪ್ಪ …
Read More »Yearly Archives: 2022
ಕಿಸಾನ್ ಡ್ರೋನ್ ವ್ಯವಸ್ಥೆಯಿಂದ ಕೃಷಿ ಕ್ಷೇತ್ರದಲ್ಲಿ ಹೊಸ ಕ್ರಾಂತಿ: ಸಂಸದ ಈರಣ್ಣ ಕಡಾಡಿ
ಬೆಂಗಳೂರು: ಕಿಸಾನ್ ಡ್ರೋನ್‍ಗಳು ಕೃಷಿ ಕ್ಷೇತ್ರದಲ್ಲಿ ಹೊಸ ಕ್ರಾಂತಿಯ ಮೊದಲ ಹೆಜ್ಜೆಯಾಗಿದೆ. ಹೊಸ ಉದ್ಯೋಗ ಸೃಷ್ಠಿಸುವ ಜೊತೆಗೆ ವಿದ್ಯಾವಂತ ಯುವ ಕೃಷಿಕರಿಗೆ ಹೊಸ ಅವಕಾಶಗಳನ್ನು ನಿರ್ಮಿಸುತ್ತದೆ. ಇದರಿಂದಾಗಿ ರೈತರಿಗೆ ಸಾಕಷ್ಟು ಸಮಯ ಉಳಿತಾಯವಾಗಲಿದೆ. ಕಾರ್ಮಿಕರ ಸಮಸ್ಯೆ ಎದುರಿಸುತ್ತಿರುವ ಕೃಷಿ ಕ್ಷೇತ್ರಕ್ಕೆ ಇದು ವರದಾನವಾಗಲಿದೆ ಎಂದು ರಾಜ್ಯಸಭಾ ಸಂಸದ ಹಾಗೂ ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಅವರು ಕೇಂದ್ರ ಸರ್ಕಾರದ ಕ್ರಮವನ್ನು ಸ್ವಾಗತಿಸಿದ್ದಾರೆ. ಫೆಬ್ರುವರಿ 1 ರಂದು ಕೇಂದ್ರ …
Read More »ಬೊಮ್ಮಾಯಿ ಏನು ವೇದಾಂತಿಯಾ? ಸಿದ್ದರಾಮಯ್ಯ ಕಿಡಿ
ಬೆಂಗಳೂರು: ಬೊಮ್ಮಾಯಿ ಏನು ವೇದಾಂತಿಯಾ? ಬೊಮ್ಮಾಯಿ ಹೇಳುವುದನ್ನು ಕೇಳಬೇಕಾ, ನಾನು? ಬೊಮ್ಮಾಯಿಗಿಂತ ಹಿರಿಯವ ನಾನು, ಬಿಜೆಪಿಯವರ ಮನಸ್ಥಿತಿ ಸಂವಿಧಾನಕ್ಕೆ ವಿರುದ್ಧವಾಗಿದೆ ಎಂದು ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ವಿಪಕ್ಷವಾಗಿರಲು ನೈತಿಕತೆ ಇಲ್ಲ ಎಂಬ ಸಿಎಂ ಹೇಳಿಕೆಗೆ ಪ್ರತಿಕ್ರಿಯಿಸಿ, ರಾಷ್ಟ್ರಧ್ವಜಕ್ಕೆ ಅವಮಾನ ಆದರೂ ಸುಮ್ಮನೆ ಕೂರಬೇಕಾ? ಇದರ ಬಗ್ಗೆ ಕೇಳಿದರೆ ಜವಾಬ್ದಾರಿ ಇಲ್ಲ ಅಂತಾರೆ. ರಾಷ್ಟ್ರಧ್ವಜ ಕ್ಕೆ ಅಗೌರವ ಮಾಡೋದು ದೇಶ ಭಕ್ತಿನಾ? ಅಂಥವರು ಸಚಿವರಾಗಿ …
Read More »ಪಂಜಾಬ್ ವಿಧಾನಸಭಾ ಚುನಾವಣೆ : ಸೋನು ಸೂದ್ ಕಾರು ಜಪ್ತಿ, ಮನೆಗೆ ವಾಪಸ್
ಮೊಗಾ: ಬಾಲಿವುಡ್ ನಟ ಸೋನು ಸೂದ್ ಅವರು ಪಂಜಾಬ್ ನ ಮೊಗಾ ವಿಧಾನಸಭಾ ಕ್ಷೇತ್ರದ ಮತಗಟ್ಟೆ ಪ್ರವೇಶಕ್ಕೆ ಯತ್ನಿಸಿದ ಆರೋಪದ ಮೇಲೆ ಅವರ ಕಾರನ್ನು ಜಪ್ತಿ ಮಾಡಲಾಗಿದೆ ಮತ್ತು ಮನೆಗೆ ವಾಪಸ್ ಕಳುಹಿಸಿದ ಘಟನೆ ಭಾನುವಾರ ನಡೆಯುತ್ತಿದೆ. ರಾಜ್ಯದ 117 ಕ್ಷೇತ್ರಗಳಲ್ಲಿ ಇಂದು ಬೆಳಗ್ಗೆ 7 ಗಂಟೆಯಿಂದ ಮತದಾನ ನಡೆಯುತ್ತಿದ್ದು, ಮೊಗಾದಿಂದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಸಹೋದರಿ ಮಾಳವಿಕಾ ಅವರ ಪರವಾಗಿ ಕೆಲಸ ಮಾಡುತ್ತಿರುವ ಸೋನು ಸೂದ್ ಅವರು ಮತಗಟ್ಟೆಗೆ ಪ್ರವೇಶಿಸಲು …
Read More »ಬಳ್ಳಾರಿ: ಮೊಬೈಲ್ ಕೊಡಿಸದ್ದಕ್ಕೆ ತಲೆ ಮೇಲೆ ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆ
ಬಳ್ಳಾರಿ: ಮೊಬೈಲ್ ಕೊಡಿಸಲ್ಲ ಎಂದಿದ್ದಕ್ಕೆ ಮನೆಬಿಟ್ಟು ಹೋಗಿದ್ದ ವಿದ್ಯಾರ್ಥಿಯೊಬ್ಬ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದ್ದು, ಶನಿವಾರ ಬೆಳಕಿಗೆ ಬಂದಿದೆ. ವಿಜಯನಗರ ಜಿಲ್ಲೆಯ ಕೊಟ್ಟೂರು ತಾಲೂಕು ತೂಲಹಳ್ಳಿ ಗ್ರಾಮದ ವಿದ್ಯಾರ್ಥಿ ನಾಗರಾಜ್ (17) ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿ ಯುವಕ. ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿರುವ ನಾಗರಾಜ ಮೊಬೈಲ್ ಕೊಡಿಸುವಂತೆ ಪೋಷಕರನ್ನು ಕೇಳಿದ್ದಾನೆ. ಮೊಬೈಲ್ ಕೊಡಿಸದ ಹಿನ್ನೆಲೆಯಲ್ಲಿ ಪೋಷಕರ ಮೇಲೆ ಮುನಿಸಿಕೊಂಡಿರುವ ನಾಗರಾಜ್, ಫೆ.19 ರಂದು ಮನೆಬಿಟ್ಟು ಹೋಗಿ ತಲೆ …
Read More »ಈಶ್ವರಪ್ಪ ಹೇಳಿಕೆ, ಇಡೀ ಪಕ್ಷದ ಹೇಳಿಕೆ: ಮಾಜಿ ಸಚಿವ ಯು.ಟಿ ಖಾದರ್
ಬೆಂಗಳೂರು: ಭಾರತ ದೇಶದ ಧ್ವಜಕ್ಕೆ ಮಾಡಿದ ಅವಮಾನ, ದೇಶಕ್ಕೆ ಮಾಡಿದ ಅವಮಾನ, ರಾಜೀನಾಮೆ ಬಗ್ಗೆ ಬಿಜೆಪಿ ನಾಯಕರು ಕ್ರಮ ಕೈಗೊಳ್ಳದೇ ಇದ್ದರೆ, ಅದು ಇಡೀ ದೇಶಕ್ಕೆ ಗೊತ್ತಾಗುತ್ತದೆ, ಆಗ ಈಶ್ವರಪ್ಪ ಹೇಳಿಕೆ, ಇಡೀ ಪಕ್ಷದ ಹೇಳಿಕೆ ಆಗುತ್ತದೆ ಎಂದು ಮಾಜಿ ಸಚಿವ ಯು ಟಿ ಖಾದರ್ ಕಿಡಿಕಾರಿದ್ದಾರೆ. ಕಾಂಗ್ರೆಸ್ ನಾಯಕರಿಂದ ಆಹೋರಾತ್ರಿ ಧರಣಿ ವಿಚಾರವಾಗಿ, ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಇದರ ಬಗ್ಗೆ ಇನ್ನೂ ಹೋರಾಟ ಮುಂದುವರೆಸುತ್ತೇವೆ. ಸ್ಪೀಕರ್ ಅಧಿವೇಶನ …
Read More »ಸಚಿವ ಈಶ್ವರಪ್ಪ ವಜಾಕ್ಕೆ ಪಟ್ಟು; ಮುಂದುವರಿದ ‘ಕೈ’ ಅಹೋರಾತ್ರಿ ಧರಣಿ
ಬೆಂಗಳೂರು: ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸುವಂತೆ ಆಗ್ರಹಿಸಿ ವಿಧಾನಮಂಡಲದ ಉಭಯ ಸದನಗಳಲ್ಲಿ ಅಹೋರಾತ್ರಿ ಧರಣಿ ನಡೆಸುತ್ತಿರುವ ಕಾಂಗ್ರೆಸ್, ಪಟ್ಟು ಸಡಿಲಿಸದಿರಲು ನಿರ್ಧರಿಸಿದೆ. ಅಲ್ಲದೆ, ತಾಲ್ಲೂಕು ಕೇಂದ್ರಗಳಲ್ಲಿ ಸೋಮವಾರ (ಫೆ. 21) ಪ್ರತಿಭಟನೆ ನಡೆಸುವಂತೆ ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದೆ. ಕಾಂಗ್ರೆಸ್ ಹಟ ಹಿಡಿದಿರುವುದರಿಂದ ಸೋಮವಾರವು ವಿಧಾನ ಮಂಡಲದ ಉಭಯ ಸದನಗಳಲ್ಲಿ ಗದ್ದಲ ಮುಂದುವರಿಯುವ ಸಾಧ್ಯತೆ ಇದೆ. ಈ ಮಧ್ಯೆಯೇ ಮಸೂದೆಗಳಿಗೆ ಅಂಗೀಕಾರ ಪಡೆದು ಸೋಮವಾರವೇ ಅಧಿವೇಶನ ಮುಕ್ತಾಯಗೊಳಿಸುವ …
Read More »ಉ.ಕ. ಜನರಿಗಾಗಿ ನಗರದಲ್ಲಿ 3 ಎಕರೆ ಜಮೀನು: ಸಿಎಂ ಭರವಸೆ
ಬೆಂಗಳೂರು: ನಗರದಲ್ಲಿ ನೆಲೆಸಿರುವ ಉತ್ತರ ಕರ್ನಾಟಕ ಭಾಗದ ಜನರ ಅನುಕೂಲಕ್ಕಾಗಿ ಮೂರು ಎಕರೆ ಜಮೀನು ಮಂಜೂರು ಮಾಡುವುದಾಗಿಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು. ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾಸಂಸ್ಥೆಯ ಅಧ್ಯಕ್ಷ ಶಿವಕುಮಾರ ಮೇಟಿ ನೇತೃತ್ವದ ನಿಯೋಗ ಮುಖ್ಯಮಂತ್ರಿ ಅವರನ್ನು ಶನಿವಾರ ಭೇಟಿ ಮಾಡಿ, ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಸಲ್ಲಿಸಿತು. ಆಗ ಪ್ರತಿಕ್ರಿಯಿಸಿದ ಬೊಮ್ಮಾಯಿ, ಉತ್ತರ ಕರ್ನಾಟಕದ ಜನರ ಅನುಕೂಲಕ್ಕಾಗಿ ಬೆಂಗಳೂರಿನಲ್ಲಿ ಮೂರು ಎಕರೆ ಜಮೀನು ಒದಗಿಸುವುದಾಗಿ ತಿಳಿಸಿದರು. …
Read More »ಕಾಂಗ್ರೆಸ್, ಜೆಡಿಎಸ್ ತೊರೆದ ಮುಖಂಡರು ಬಿಜೆಪಿ ಸೇರ್ಪಡೆ
ಶಿವಮೊಗ್ಗ: ಕಾಂಗ್ರೆಸ್, ಜೆಡಿಎಸ್ ತೊರೆದ ಭದ್ರಾವತಿ ತಾಲ್ಲೂಕು ಮುಖಂಡರು ಶನಿವಾರ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ, ಜಿಲ್ಲಾ ಉಸ್ತುವಾರಿ ಸಚಿವ ನಾರಾಯಣಗೌಡ, ಸಂಸದ ಬಿ.ವೈ.ರಾಘವೇಂದ್ರ ನೇತೃತ್ವದಲ್ಲಿ ಬಿಜೆಪಿ ಸೇರ್ಪಡೆಗೊಂಡರು. ಭದ್ರಾವತಿ ತಾಲ್ಲೂಕಿನ ಪ್ರಭಾವಿ ಜೆಡಿಎಸ್ ಮುಖಂಡ ಎಸ್.ಕುಮಾರ್, ಪತ್ನಿ ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷೆ ಜ್ಯೋತಿ ಎಸ್. ಕುಮಾರ್, ಪ್ರದೀಪ್, ಕಾಂಗ್ರೆಸ್ ಮುಖಂಡ ಸತೀಶ್ ಗೌಡ ಹಾಗೂ ಅವರ ಪತ್ನಿ ಜಿಲ್ಲಾ ಪಂಚಾಯಿಯಿ ಮಾಜಿ ಸದಸ್ಯೆ ಉಷಾ ಸತೀಶ್ ಗೌಡ, ನಾರಾಯಣ …
Read More »ನ್ಯಾಯ ಪಂಚಾಯ್ತಿ ನೆಪದಲ್ಲಿ ಮುಖಂಡನ ಕೊಲೆ
ಕೋಲಾರ: ಗ್ರಾಮದ ಮುಖಂಡ ಊರಿನಲ್ಲಿ ಯಾವುದೇ ಸಮಸ್ಯೆಗಳಾದರೂ ಮುಂದೆ ನಿಂತು ಕೈಲಾದ ಸಹಾಯ ಮಾಡುತ್ತಾರೆ. ಅದೇ ರೀತಿ ಇಲ್ಲೊಬ್ಬ ಮುಖಂಡ ಯಾವುದೇ ಸಮಸ್ಯೆ ಬಂದ್ರೂ ಮುಂದೆ ನಿಂತು ರಾಜಿ ಪಂಚಾಯ್ತಿ ಮಾಡಿಸುತ್ತಿದ್ದರು. ಆದರೆ ಅವರ ಒಳ್ಳೆಯ ಕೆಲಸಗಳೇ ಅವನಿಗೆ ಮುಳುವಾಗಿ ಬಿಟ್ಟಿತ್ತು. ಯಾರದೋ ಸಮಸ್ಯೆ ಬಗೆಹರಿಸಲು ಹೋಗಿ ತಾನೇ ಬಲಿಯಾಗಿದ್ದಾರೆ. ಶವದ ಮುಂದೆ ಗೋಳಿಡುತ್ತಿರುವ ಸಂಬಂಧಿಕರು. ಸಾವಿನ ಮನೆಯ ಸುತ್ತಲೂ ಸೇರಿರುವ ಸಾವಿರಾರು ಜನ, ಪೊಲೀಸರಿಂದ ಬಿಗಿ ಬಂದೋಬಸ್ತ್. ಮೃತರ ಅಂತಿಮ …
Read More »