Breaking News

Yearly Archives: 2022

ನಾನು ರಾಷ್ಟ್ರ ಭಕ್ತ, ಡಿಕೆಶಿ ರಾಜಿನಾಮೆ ಕೊಡಲಿ: ಈಶ್ವರಪ್ಪ

ಬೆಂಗಳೂರು: ರಾಷ್ಟ್ರಧ್ವಜ ಇಲ್ಲದೇ ಇರುವುದನ್ನು ಇದೆ ಎಂದು ಹೇಳಿ ಸಮಸ್ಯೆ ಸೃಷ್ಟಿಸಿದವರು ಡಿ.ಕೆ ಶಿವಕುಮಾರ್, ರಾಷ್ಟ್ರ ಧ್ವಜಕ್ಕೆ ಅಪಮಾನ ಮಾಡಿದ ಡಿಕಿಶಿ ರಾಜೀನಾಮೆ ಕೊಡಲಿ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯಿತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಕಿಡಿಕಾರಿದ್ದಾರೆ.   ಸುದ್ದಿಗಾರರೊಂದಿಗೆ ಮಾತನಾಡಿ, ಯಾರು ರಾಷ್ಟ್ರದ್ರೋಹ ಮಾಡಿದ್ದಾರೋ ಅವರು ರಾಜೀನಾಮೆ ಕೊಡಲಿ. ಹೀಗಾಗಿ ಡಿಕೆಶಿಯೇ ರಾಜೀನಾಮೆ ಕೊಡಲಿ ನಾನು ರಾಷ್ಟ್ರಭಕ್ತ ಎಂದರು. ತಿರಂಗ ಯಾತ್ರೆ ಮಾಡಿದವನು ನಾನು, ತುರ್ತುಪರಿಸ್ಥಿತಿ ವೇಳೆ ಜೈಲಿಗೆ ಹೋಗಿ …

Read More »

ಅಹೋರಾತ್ರಿ ಧರಣಿ: ಸದನಕ್ಕೆ ಹಾಸಿಗೆ, ದಿಂಬು ತರಲು ಕಾಂಗ್ರೆಸ್ ಸಿದ್ಧತೆ

ಬೆಂಗಳೂರು : ಸಚಿವ ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್ ಶಾಸಕರ ರಾತ್ರಿ ವಾಸ್ತವ್ಯಕ್ಕಾಗಿ ಹಾಸಿಗೆ, ದಿಂಬುಗಳನ್ನು ತರಿಸುವುದಕ್ಕೆ ಸೂಚನೆ ನೀಡಲಾಗಿದೆ. ಸದನದಲ್ಲಿ ಇಂದಿನಿಂದ ಅಹೋರಾತ್ರಿ ಧರಣಿ ನಡೆಸುವುದಕ್ಕೆ ಕಾಂಗ್ರೆಸ್ ಸಿದ್ಧತೆ ನಡೆಸಿದೆ. ಹೀಗಾಗಿ ಪರಿಷತ್ ಹಾಗು ವಿಧಾನಸಭೆ ಸದಸ್ಯರಿಗೆ ರಾತ್ರಿ ಮಲಗುವುದಕ್ಕೆ ಅಗತ್ಯವಾದ ಹಾಸಿಗೆ- ದಿಂಬುಗಳನ್ನು ತರಿಸುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೂಚನೆ ನೀಡಿದ್ದಾರೆ. ಜತೆಗೆ ಭೋಜನ ವ್ಯವಸ್ಥೆಗೂ ಸೂಚನೆ ನೀಡಲಾಗಿದೆ. ಇಂದೇ ಅಂತ್ಯ ? ಆದರೆ ಕಾಂಗ್ರೆಸ್ …

Read More »

ಹಿಜಾಬ್ ವಿವಾದ ಭುಗಿಲೆದಿರುವ ಬಳಿಕ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಕಾಂಗ್ರೆಸ್ ಅಲ್ಪಸಂಖ್ಯಾತ ಶಾಸಕರೊಂದಿಗೆ ಸೌಹಾರ್ದಯುತ ಮಾತುಕತೆ

ಬೆಂಗಳೂರು: ಹಿಜಾಬ್ ವಿವಾದ ಭುಗಿಲೆದಿರುವ ಬಳಿಕ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಕಾಂಗ್ರೆಸ್ ಅಲ್ಪಸಂಖ್ಯಾತ ಶಾಸಕರೊಂದಿಗೆ ಸೌಹಾರ್ದಯುತ ಮಾತುಕತೆ ನಡೆಸಿ ಊಟವನ್ನೂ ಮಾಡಿದ್ದಾರೆ. ಸಚಿವ ಬಿ ಸಿ ನಾಗೇಶ್ ಅವರ ಕಚೇರಿಯಲ್ಲಿ ಗುರುವಾರ ಕಾಂಗ್ರೆಸ್ ಅಲ್ಪಸಂಖ್ಯಾತ ನಾಯಕರಾದ ಜಮೀರ್ ಅಹ್ಮದ್, ಎನ್ ಎ ಹ್ಯಾರೀಸ್, ರಿಜ್ವಾನ್ ಅರ್ಷದ್, ಸಲೀಂ ಅಹ್ಮದ್, ಸಿಎಂ ಇಬ್ರಾಹಿಂ, ರಹೀಂಖಾನ್ ಅವರು ಹಿಜಾಬ್ ಸಂಬಂಧ ಚರ್ಚೆ ನಡೆಸಿದರು.   ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ನಾಗೇಶ್, ಕೆಲವು …

Read More »

ಡೆಡ್ ಎಂಡ್ ಮಾತ್ರ ಇರುವುದು ಎಂದು ಕಾಂಗ್ರೆಸ್ ಗೆ ಹೇಳಿದ್ದೇನೆ: ಸಿಎಂ

ಬೆಂಗಳೂರು: ಕಾಂಗ್ರೆಸ್ ನವರು ಕೇಸರಿ ಧ್ವಜ ಹೇಳಿಕೆ ಕುರಿತು ಈಶ್ವರಪ್ಪ ಅವರ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದು, ಲಾಜಿಕಲ್ ಎಂಡ್ ಮಾಡುತ್ತೇವೆ ಅಂದಿದ್ದಾರೆ,ಆದರೆ ನಾನು ಇರುವುದು ಕೇವಲ ಡೆಡ್ ಎಂಡ್ ಮಾತ್ರ ಎಂದು ಹೇಳಿದ್ದೇನೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿಕೆ ನೀಡಿದ್ದಾರೆ.   ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಅವರ ಧೋರಣೆ ಅರ್ಥವಾಗ್ತಿಲ್ಲ.ಜನಪರ ವಿಚಾರ ರೈತ ವಿಚಾರ ರಾಜ್ಯದ ಹಿತದೃಷ್ಟಿಯಿಂದ ಧರಣಿ ಗಳು ಆಗಿರೋದನ್ನ ನೋಡಿದ್ದೆವು. ಆದರೆ ಈಗ ಯಾವುದೋ …

Read More »

ಮಹಾತ್ಮ ಗಾಂಧೀಜಿ ಇದ್ದಾಗ ಇದ್ದಿದ್ದು ಬೇರೆ ಕಾಂಗ್ರೆಸ್, ಈಗ ಇರೋದ್ ನಕಲಿ ಕಾಂಗ್ರೆಸ್: ಆರ್.ಅಶೋಕ್

ಬೆಂಗಳೂರು : ಕರ್ನಾಟಕ ಸ್ಟಾಂಪ್ (ತಿದ್ದುಪಡಿ) ವಿಧೇಯಕ ಹಾಗೂ ಕ್ರಿಮಿನಲ್ ಕಾನೂನು ತಿದ್ದುಪಡಿ ಆಧ್ಯಾದೇಶ, 1944 (ಕರ್ನಾಟಕ ತಿದ್ದುಪಡಿ ) ವಿಧೇಯಕಗಳನ್ನು ವಿಧಾನಸಭೆಯಲ್ಲಿ ಮಂಡಿಸಲಾಯಿತು. ಕಂದಾಯ ಸಚಿವ ಆರ್. ಅಶೋಕ್, ನೊಂದಾಯಿತ ಯಾವುದೇ ಗೃಹ ನಿರ್ಮಾಣ ಸಹಕಾರ ಸಂಘದ ನಿವೇಶನ ಮಾರಾಟ ಮಾಡಿದ ದಿನಾಂಕದಂದು ಇರುವ ಮಾರುಕಟ್ಟೆಯ ಮೌಲ್ಯದ ಮುದ್ರಾಂಕ ಶುಲ್ಕ ಪಾವತಿಸುವ ಸಂಬಂಧ ಕರ್ನಾಟಕ ಸ್ಟಾಂಪ್​ (ತಿದ್ದುಪಡಿ) ವಿಧೇಯಕವನ್ನು ಮಂಡಿಸಿದರು. ಸಹಕಾರ ಸಂಘಗಳ ಅಧಿನಿಯಮದಡಿಯಲ್ಲಿ ನೊಂದಾಯಿಸಿದ ಯಾವುದೇ ಗೃಹ ನಿರ್ಮಾಣ …

Read More »

ಮಹಾತ್ಮ ಗಾಂಧೀಜಿ ಇದ್ದಾಗ ಇದ್ದಿದ್ದು ಬೇರೆ ಕಾಂಗ್ರೆಸ್, ಈಗ ಇರೋದ್ ನಕಲಿ ಕಾಂಗ್ರೆಸ್: ಆರ್.ಅಶೋಕ್

ಬೆಂಗಳೂರು: ಕೋಳಿನಾ ಕೇಳಿ ಖಾರ ಅರಿಯೋ ಅಭ್ಯಾಸ ಬಿಜೆಪಿಗಿಲ್ಲ. ಮಹಾತ್ಮ ಗಾಂಧೀಜಿ ಇದ್ದಾಗ ಇದ್ದಿದ್ದು ಬೇರೆ ಕಾಂಗ್ರೆಸ್. ಈಗ ಇರೋದ್ ನಕಲಿ ಕಾಂಗ್ರೆಸ್. ಸ್ವಾತಂತ್ರ್ಯ ಹೋರಾಟದಲ್ಲಿದ್ದ ಕಾಂಗ್ರೆಸ್​​ಗೂ ಈಗಿರುವ ಕಾಂಗ್ರೆಸ್​ಗೂ ಸಂಬಂಧವಿಲ್ಲ ಎಂದು ಆರ್.ಅಶೋಕ್ ಟೀಕಿಸಿದರು. ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ವಜಾ ಮಾಡುವುದಾದ್ರೆ ಕಾಂಗ್ರೆಸ್​​ನವರನ್ನು ವಜಾ ಮಾಡಬೇಕು. ಜಮ್ಮು ಕಾಶ್ಮೀರದಲ್ಲಿ ಪಾಕಿಸ್ತಾನದ ಭಯೋತ್ಪಾದಕರು ಬಾವುಟ ಹಾರಿಸಿ ಎಂದಾಗ ಎಲ್ಲಿದ್ದರು ಇವರು?, ಇದು ಕಾಂಗ್ರೆಸ್​​ನವರ ರಾಜಕೀಯ ದೊಂಬರಾಟ ಅಷ್ಟೇ. ಆರಾಮಾಗಿ …

Read More »

ಮದ್ಯ ಸೇವನೆಗೆ ಹಣ ಹೊಂದಿಸಲು ಕಳ್ಳತನ, ಕುಡುಕನ ಬಂಧನ

ಬೆಂಗಳೂರು: ಮದ್ಯ ಸೇವನೆಗಾಗಿ ಹಣ ಸಂಗ್ರಹಿಸಲು ರಾತ್ರೋರಾತ್ರಿ ವಿವಿಧ ಅಂಗಡಿಗಳಲ್ಲಿ ಕಳ್ಳತನ ಮಾಡಿ ನಗದು ದೋಚುತ್ತಿದ್ದ ವ್ಯಕ್ತಿಯನ್ನು ಸುಬ್ರಮಣ್ಯಪುರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಕಾರ್ತಿಕ್ ಎಂಬಾತ ಬಂಧಿತ ಆರೋಪಿ. ಪ್ರಕರಣದ ಮತ್ತೋರ್ವ ಆರೋಪಿ ತಲೆಮರೆಸಿಕೊಂಡಿದ್ದು, ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.ಈ ಆರೋಪಿಗಳು ಹೊಟೇಲ್​​ಗಳು, ವಿವಿಧ ಮಳಿಗೆಗಳ ಬೀಗ ಹೊಡೆದು ಒಳನುಗ್ಗಿ ಕ್ಷಣಾರ್ಧದಲ್ಲಿ ಅಲ್ಲಿದ್ದ ಹಣ ಎಗರಿಸುತ್ತಿದ್ದರು. ಕಾರ್ತಿಕ್ ಜೊತೆಗೆ ಮತ್ತೊಬ್ಬ ಆರೋಪಿ ಕುಡಿತದ ಚಟಕ್ಕೆ ಬಿದ್ದಿದ್ದ. ಇಬ್ಬರೂ ಸುಲಭವಾಗಿ ಹಣ …

Read More »

ಡೊಳ್ಳು ಕುಣಿತದವರೊಂದಿಗೆ ಸ್ಪೀಕರ್ ಕಾಗೇರಿ ಗಿಲಿಗಚ್ಚಿ ಹಿಡಿದು ಸ್ಟೆಪ್

ಶಿರಸಿ ತಾಲೂಕಿನ ಬರೂರಿನ ಶ್ರೀ ಲಕ್ಷ್ಮೀ ನರಸಿಂಹ ದೇವರ ನೂತನ ವಿಗ್ರಹ ಪ್ರತಿಷ್ಠಾಪನೆ ಕಾರ್ಯಕ್ರಮದ ವೇಳೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಡೊಳ್ಳು ಕುಣಿತದ ತಂಡದವರೊಂದಿಗೆ ಹೆಜ್ಜೆ ಹಾಕಿ ಗಿಲಿಗಚ್ಚಿಯನ್ನು ಬಾರಿಸಿದ್ದು, ಎಲ್ಲರ ಗಮನ ಸೆಳೆಯಿತು. ಕಳೆದ 9 ತಿಂಗಳಲ್ಲಿ ನಿರ್ಮಾಣವಾಗಿರುವ ನೂತನ ದೇವಾಲಯದಲ್ಲಿ ಲಕ್ಷ್ಮೀ ನರಸಿಂಹ ದೇವರ ನೂತನ ವಿಗ್ರಹವನ್ನು ವೈದಿಕ ಪ್ರಮುಖರ ನೇತೃತ್ವದಲ್ಲಿ ನೂರಾರು ಭಕ್ತರ ಸಮ್ಮುಖದಲ್ಲಿ ವಿಗ್ರಹ ಪ್ರತಿಷ್ಠಾಪನೆ ಮಾಡಲಾಯಿತು. ನೂತನ ವಿಗ್ರಹವನ್ನು ಅಲಂಕರಿಸಿ, ಆರತಿಯೊಂದಿಗೆ …

Read More »

ಇಂದು ರಾತ್ರಿಯಿಂದಲೇ ಅಹೋರಾತ್ರಿ ಧರಣಿ: ಸಿದ್ದರಾಮಯ್ಯ ಘೋಷಣೆ

ಬೆಂಗಳೂರು: ಸಚಿವ ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಇಂದಿನಿಂದಲೇ ಉಭಯ ಸದನಗಳಲ್ಲಿ ಅಹೋರಾತ್ರಿ ಧರಣಿ ನಡೆಸುತ್ತೇವೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ನಾವು ಧರಣಿ ಮುಂದುವರಿಸಿದ್ದೇವೆ. ಈಶ್ವರಪ್ಪರನ್ನು ಅಮಾನತು ಮಾಡುವಂತೆ ಒತ್ತಾಯಿಸಿದ್ದೇವೆ. ಅವರು ನಮ್ಮ ಸಂವಿಧಾನಕ್ಕೆ ಅಗೌರವ ತೋರಿದ್ದಾರೆ. ರಾಜ್ಯಪಾಲರು ಡಿಸ್ಮಿಸ್ ಮಾಡೋಕೆ ಹೇಳಬೇಕಿತ್ತು. ಸಿಎಂ ಕೂಡ ಮಾಡಬೇಕಿತ್ತು. ಇದರ ಅರ್ಥ ಆರ್​ಎಸ್​ಎಸ್ ಮೂಲಕ ಮಾಡಿಸಿದ್ದಾರೆ. ಈಶ್ವರಪ್ಪ ಮೂಲಕ ಹೇಳಿಸಿದ್ದಾರೆ. ರಾಷ್ಟ್ರಧ್ವಜ ನಮ್ಮ …

Read More »

ಪದವಿ ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯ ಅಲ್ಲ: ಸಿಎಂ

ಬೆಂಗಳೂರು: ‘ರಾಜ್ಯದ ಪದವಿ ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯ ಮಾಡಿಲ್ಲ. ಈ ವಿಷಯದಲ್ಲಿ ಹೈಕೋರ್ಟ್‌ ಆದೇಶವನ್ನು ಪಾಲನೆ ಮಾಡುತ್ತಿದ್ದೇವೆ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದರು. ವಿಧಾನಸಭೆಯಲ್ಲಿ ಬುಧವಾರ ಶೂನ್ಯ ವೇಳೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ‘ಪದವಿ ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯ ಅಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್‌.ಅಶ್ವತ್ಥನಾರಾಯಣ ಚಾಮರಾಜನಗರದಲ್ಲಿ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿ ಸ್ಪಷ್ಟನೆ ನೀಡಬೇಕು’ ಎಂದು ಒತ್ತಾಯಿಸಿದರು. ಬಸವರಾಜ ಬೊಮ್ಮಾಯಿ ಉತ್ತರಿಸಿ, ‘ಉನ್ನತ ಶಿಕ್ಷಣ …

Read More »